< Ukolosiya 4 >

1 An cinilari naan acin mine ile mon na idin dert nin gegeme anung yiru tutun idinin cikilari kitene kan.
ಯಜಮಾನರೇ, ಪರಲೋಕದಲ್ಲಿ ನಿಮಗೂ ಯಜಮಾನನೊಬ್ಬನಿದ್ದಾನೆಂದು ತಿಳಿದು ನಿಮ್ಮ ದಾಸರೊಂದಿಗೆ ನೀತಿಯಿಂದಲೂ ನ್ಯಾಯದಿಂದಲೂ ವರ್ತಿಸಿರಿ.
2 Tunan nanyan nliran ko kuyeme kubi, son nin yiru nanya nlira nin godiya.
ಪ್ರಾರ್ಥನೆಯನ್ನು ತಪ್ಪದೆ ಮಾಡುವವರಾಗಿ, ಎಚ್ಚರವಾಗಿದ್ದು ದೇವರಿಗೆ ಕೃತಜ್ಞತಾಸ್ತುತಿಮಾಡಿರಿ.
3 Suun nlira ligowe bara arike tutun, nworo Kutelle nan puno libau tibelle ligbulang imon Kristi na inyesin, bara nanere ndi licin bara inung.
ಕ್ರಿಸ್ತನ ಮರ್ಮವನ್ನು ಅಂದರೆ ಸುರ್ವಾತೆಯನ್ನು ನಾವು ಸಾರುವುದಕ್ಕೆ ದೇವರು ನಮಗೆ ಬಾಗಿಲನ್ನು ತೆರೆದು ಕೊಡುವುದಕ್ಕಾಗಿ ನಮಗೋಸ್ಕರವಾಗಿ ಪ್ರಾರ್ಥಿಸಿರಿ. ಈ ಸುರ್ವಾತೆಯ ನಿಮಿತ್ತವೇ ನಾನು ಸೆರೆಯಲ್ಲಿದ್ದೇನಲ್ಲಾ.
4 Suun nlira inan belle nafo na inati ku nbelli.
ನಾನು ಆ ಸತ್ಯಾರ್ಥವನ್ನು ಹೇಳಬೇಕಾದ ರೀತಿಯಲ್ಲಿ ಸ್ಪಷ್ಟವಾಗಿ ಹೇಳುವಂತೆ ಪ್ರಾರ್ಥಿಸಿರಿ.
5 Cinan nanya jinjin kupopo nale na ucin nda, suun katw nin kubi mine jinjin.
ಸಮಯವನ್ನು ಸದುಪಯೋಗಿಸಿಕೊಂಡು ಹೊರಗಿನವರೊಂದಿಗೆ ಜ್ಞಾನವುಳ್ಳವರಾಗಿ ನಡೆದುಕೊಳ್ಳಿರಿ.
6 Na ulai mine so shau ko kome kubi unin mang nin ntoh, yinno inda na iba kawu ko ghak.
ನಿಮ್ಮ ಸಂಭಾಷಣೆಯು ಯಾವಾಗಲೂ ಕೃಪೆಯುಳ್ಳದ್ದಾಗಿಯೂ, ಉಪ್ಪಿನಂತೆ ರುಚಿಕರವಾಗಿಯೂ ಇರಲಿ. ಹೀಗೆ ನೀವು ಪ್ರತಿಯೊಬ್ಬರಿಗೂ ಯಾವಾವ ರೀತಿಯಲ್ಲಿ ಉತ್ತರಹೇಳಬೇಕು ಎಂಬುದನ್ನು ತಿಳಿದುಕೊಳ್ಳುವಿರಿ.
7 Tikikus ba bellu minu ko iyang litinin, ame gwanari kin su kucin kugi, nanya katwa, udon licin nanya Ncikilari.
ಪ್ರಿಯ ಸಹೋದರನೂ, ನಂಬಿಗಸ್ತನಾದ ಸೇವಕನೂ ಮತ್ತು ಕರ್ತನಲ್ಲಿ ಜೊತೆಯ ದಾಸನೂ ಆಗಿರುವ ತುಖಿಕನು ನನ್ನ ವಿಷಯಗಳನ್ನೆಲ್ಲಾ ನಿಮಗೆ ತಿಳಿಸುವನು.
8 Mere nin liti nighe ina tighe kiti mine, inane, inan yinno nari inan taa lkari kibinai.
ನೀವು ನಮ್ಮ ಕುರಿತು ತಿಳಿದುಕೊಳ್ಳುವಂತೆ, ಅವನು ನಿಮ್ಮ ಹೃದಯಗಳನ್ನು ಉರಿದುಂಬಿಸುವಂತೆ,
9 Ligowe nin Onismus, gwa na kigip unan su, uba ti munu iyinin vat imon ile na idin su kikane.
ಅವನನ್ನು ನಂಬಿಗಸ್ತನು ಮತ್ತು ಪ್ರಿಯ ಸಹೋದರನಾಗಿರುವ ನಿಮ್ಮ ಊರಿನವನೇ ಆದ ಓನೇಸಿಮನ ಜೊತೆಯಲ್ಲಿ ಕಳುಹಿಸಿದ್ದೇನೆ. ಅವರು ಇಲ್ಲಿ ನಡೆಯುತ್ತಿರುವ ವಿಷಯಗಳನ್ನೆಲ್ಲಾ ನಿಮಗೆ ತಿಳಿಸುವರು.
10 Aristikus din nlisu minu -udondon licin nighe nin Markus usau gwana Barnabas, kiti mere idin sesu kadura likara, asa adah sereghe''
೧೦ನನ್ನ ಜೊತೆ ಸೆರೆಯವನಾದ ಅರಿಸ್ತಾರ್ಕನೂ ಮತ್ತು ಬಾರ್ನಬನ ಸೋದರಸಂಬಂಧಿಯಾಗಿರುವ ಮಾರ್ಕನೂ ನಿಮಗೆ ವಂದನೆ ಹೇಳುತ್ತಾರೆ. ಅವನು ನಿಮ್ಮ ಬಳಿಗೆ ಬಂದರೆ ಅವನನ್ನು ಸೇರಿಸಿಕೊಳ್ಳಿರಿ. ಅವನ ವಿಷಯದಲ್ಲಿ ಅಪ್ಪಣೆಗಳನ್ನು ಹೊಂದಿದ್ದೀರಲ್ಲಾ.
11 Yesu ulena idin yicughe ustus, alele cas anan kalu kucuru inughere adon katwa nighe udu kipin tigo Kutelle. Ina suo anan tizie likara kibinai
೧೧ಯುಸ್ತನೆನಿಸಿಕೊಳ್ಳುವ ಯೇಸು ಸಹ ನಿಮಗೆ ವಂದನೆ ಹೇಳುತ್ತಾನೆ. ಸುನ್ನತಿಯವರೊಳಗೆ ಇವರು ಮಾತ್ರವೇ ದೇವರ ರಾಜ್ಯಕ್ಕಾಗಿ ನನ್ನ ಜೊತೆಸೇವಕರಾಗಿದ್ದಾರೆ, ಇವರಿಂದ ನನಗೆ ಆದರಣೆ ಉಂಟಾಯಿತು.
12 Abafaras di nlisu minu, ame umonghari nanya mine kucin Yesu Kristi adin nnonno bara anung nanya nliran, inan yisina nin likara nnufi Kutelle vat.
೧೨ಕ್ರಿಸ್ತಯೇಸುವಿನ ದಾಸನಾಗಿರುವ ನಿಮ್ಮ ಊರಿನವನಾದ ಎಪಫ್ರನು ನಿಮಗೆ ವಂದನೆ ಹೇಳುತ್ತಾನೆ, ನೀವು ಪ್ರವೀಣರಾಗಿಯೂ ದೇವರ ಎಲ್ಲಾ ಚಿತ್ತದಲ್ಲಿ ಪೂರ್ಣ ನಿಶ್ಚಯವುಳ್ಳವರಾಗಿರಬೇಕೆಂದು ನಿಮಗೋಸ್ಕರ ಯಾವಾಗಲೂ ಪ್ರಾರ್ಥನೆಯಲ್ಲಿ ಹೋರಾಡುತ್ತಾನೆ.
13 Bara meng nso iyizi inba mye, adi katwa kaang bara anughe, baraalenge na idi Nlaudikiya ni nanya Hiyarapolis
೧೩ಇವನು ನಿಮಗಾಗಿಯೂ, ಲವೊದಿಕೀಯದವರಿಗಾಗಿಯೂ ಮತ್ತು ಹಿರಿಯಾಪೋಲಿಯದವರಿಗಾಗಿಯೂ ಬಹಳ ಪ್ರಯಾಸ ಪಡುತ್ತಾನೆಂದು ನಾನು ಸಾಕ್ಷಿಹೇಳುತ್ತೇನೆ.
14 Luka, gwa na nayi nigh unan nizu tikankan, nin Dimas din lisu min.
೧೪ಪ್ರಿಯ ವೈದ್ಯನಾಗಿರುವ ಲೂಕನು ಮತ್ತು ದೇಮನು ನಿಮಗೆ ವಂದನೆ ಹೇಳುತ್ತಾರೆ.
15 Lisson linwana Laudikiya, a Ninfas, nin kutii nlira naku di nanya kilari mye.
೧೫ಲವೊದಿಕೀಯದಲ್ಲಿರುವ ಸಹೋದರರಿಗೂ ಮತ್ತು ನುಂಫಳಿಗೂ ಹಾಗೂ ಆಕೆಯ ಮನೆಯಲ್ಲಿ ಸೇರಿಬರುವ ಸಭೆಯವರಿಗೂ ವಂದನೆ ಹೇಳಿರಿ.
16 Iwa belu minu ile ma nyerte ubelu ma nyerta unin nanya na nan dortu Kutelle Nlaudikiya, anung wang Belen manyerte un nanan Nlaudikiya
೧೬ನಿಮ್ಮಲ್ಲಿ ಈ ಪತ್ರವನ್ನು ಓದಿದ ತರುವಾಯ ಲವೊದಿಕೀಯದವರ ಸಭೆಯಲ್ಲಿಯೂ ಇದನ್ನು ಓದಿಸಿರಿ ಮತ್ತು ನಾನು ಬರೆದ ಪತ್ರವನ್ನು ಲವೊದಿಕೀಯದಿಂದ ತರಿಸಿ ನೀವೂ ಓದಿಕೊಳ್ಳಿರಿ.
17 Woro Akiribus ku, ''yene katwa Kutelle na una seru nanya Ncikilari ukulun kanin.''
೧೭ಅರ್ಖಿಪ್ಪನಿಗೆ, “ನೀನು ಕರ್ತನಿಂದ ಹೊಂದಿರುವ ಸೇವೆಯನ್ನು ಎಚ್ಚರವಾಗಿದ್ದು ನೆರವೇರಿಸಬೇಕೆಂದು” ಹೇಳಿರಿ.
18 Ile ilipe idi nanya nacara nighghari Bulus, lizinon nin ninyeg nighe. Ubolu Kutelle suo nan ghinu.
೧೮ಇದು ಪೌಲನೆಂಬ ನಾನು ಸ್ವಂತ ಕೈಯಿಂದಲೇ ಬರೆದ ವಂದನೆ. ನಾನು ಸೆರೆಯಲ್ಲಿದ್ದೇನೆಂಬುದನ್ನು ಜ್ಞಾಪಕ ಮಾಡಿಕೊಳ್ಳಿರಿ. ಕೃಪೆಯು ನಿಮ್ಮೊಂದಿಗಿರಲಿ.

< Ukolosiya 4 >