< ١ كورنثوس 15 >

وَأُعَرِّفُكُمْ أَيُّهَا ٱلْإِخْوَةُ بِٱلْإِنْجِيلِ ٱلَّذِي بَشَّرْتُكُمْ بِهِ، وَقَبِلْتُمُوهُ، وَتَقُومُونَ فِيهِ، ١ 1
ಪ್ರಿಯರೇ, ನಾನು ನಿಮಗೆ ಸಾರಿದ ಸುವಾರ್ತೆಯನ್ನೂ, ನೀವು ಅದನ್ನು ಸ್ವೀಕರಿಸಿದ್ದನ್ನೂ, ಅದರಲ್ಲಿ ನಿಂತಿರುವುದನ್ನೂ, ಈಗ ನಿಮಗೆ ನೆನಪಿಸುತ್ತೇನೆ.
وَبِهِ أَيْضًا تَخْلُصُونَ، إِنْ كُنْتُمْ تَذْكُرُونَ أَيُّ كَلَامٍ بَشَّرْتُكُمْ بِهِ. إِلَّا إِذَا كُنْتُمْ قَدْ آمَنْتُمْ عَبَثًا! ٢ 2
ನಾನು ಸಾರಿದ ಈ ಸುವಾರ್ತೆಯ ವಾಕ್ಯವನ್ನು ನೀವು ಬಿಗಿಯಾಗಿ ಹಿಡಿದುಕೊಂಡರೆ, ನಿಮಗೆ ರಕ್ಷಣೆಯಾಗುತ್ತದೆ. ಇಲ್ಲದಿದ್ದರೆ, ನಿಮ್ಮ ನಂಬಿಕೆ ವ್ಯರ್ಥವಾಗಿ ಹೋಗುತ್ತದೆ.
فَإِنَّنِي سَلَّمْتُ إِلَيْكُمْ فِي ٱلْأَوَّلِ مَا قَبِلْتُهُ أَنَا أَيْضًا: أَنَّ ٱلْمَسِيحَ مَاتَ مِنْ أَجْلِ خَطَايَانَا حَسَبَ ٱلْكُتُبِ، ٣ 3
ಏಕೆಂದರೆ ನಾನು ಪಡೆದುಕೊಂಡಿದ್ದರಲ್ಲಿ ಬಹು ಪ್ರಾಮುಖ್ಯವಾದದ್ದನ್ನೇ ನಿಮಗೆ ಕೊಟ್ಟಿದ್ದೇನೆ. ಅದೇನೆಂದರೆ, ಪವಿತ್ರ ವೇದದ ಪ್ರಕಾರ ಕ್ರಿಸ್ತನು ನಮ್ಮ ಪಾಪಗಳಿಗಾಗಿ ಸತ್ತರು,
وَأَنَّهُ دُفِنَ، وَأَنَّهُ قَامَ فِي ٱلْيَوْمِ ٱلثَّالِثِ حَسَبَ ٱلْكُتُبِ، ٤ 4
ಹೂಣಿಡಲಾದರು, ಪವಿತ್ರ ವೇದದ ಪ್ರಕಾರವೇ ಮೂರನೆಯ ದಿನದಲ್ಲಿ ಎದ್ದು ಬಂದರು.
وَأَنَّهُ ظَهَرَ لِصَفَا ثُمَّ لِلِٱثْنَيْ عَشَرَ. ٥ 5
ಕೇಫನಿಗೂ ಆಮೇಲೆ ಹನ್ನೆರಡು ಮಂದಿಗೂ ಕಾಣಿಸಿಕೊಂಡರು.
وَبَعْدَ ذَلِكَ ظَهَرَ دَفْعَةً وَاحِدَةً لِأَكْثَرَ مِنْ خَمْسِمِئَةِ أَخٍ، أَكْثَرُهُمْ بَاقٍ إِلَى ٱلْآنَ. وَلَكِنَّ بَعْضَهُمْ قَدْ رَقَدُوا. ٦ 6
ತರುವಾಯ ಒಂದೇ ಸಮಯದಲ್ಲಿ ಐನೂರಕ್ಕೂ ಹೆಚ್ಚು ಮಂದಿ ಹಿಂಬಾಲಕರಿಗೆ ಕ್ರಿಸ್ತ ಯೇಸು ಕಾಣಿಸಿಕೊಂಡರು. ಅವರಲ್ಲಿ ಕೆಲವರು ಸತ್ತು ಹೋಗಿದ್ದರೂ ಬಹುಜನರು ಇಂದಿಗೂ ಬದುಕಿದ್ದಾರೆ.
وَبَعْدَ ذَلِكَ ظَهَرَ لِيَعْقُوبَ، ثُمَّ لِلرُّسُلِ أَجْمَعِينَ. ٧ 7
ತರುವಾಯ ಕ್ರಿಸ್ತ ಯೇಸು ಯಾಕೋಬನಿಗೂ ಆಮೇಲೆ ಅಪೊಸ್ತಲರೆಲ್ಲರಿಗೂ ಕಾಣಿಸಿಕೊಂಡರು.
وَآخِرَ ٱلْكُلِّ - كَأَنَّهُ لِلسِّقْطِ - ظَهَرَ لِي أَنَا. ٨ 8
ಕಟ್ಟಕಡೆಗೆ, ದಿನತುಂಬುವ ಮೊದಲೇ ಹುಟ್ಟಿದವನಂತಿರುವ ನನಗೂ ಕಾಣಿಸಿಕೊಂಡರು.
لِأَنِّي أَصْغَرُ ٱلرُّسُلِ، أَنَا ٱلَّذِي لَسْتُ أَهْلًا لِأَنْ أُدْعَى رَسُولًا، لِأَنِّي ٱضْطَهَدْتُ كَنِيسَةَ ٱللهِ. ٩ 9
ನಾನಾದರೋ ಅಪೊಸ್ತಲರಲ್ಲಿ ಕನಿಷ್ಠನು, ಅಪೊಸ್ತಲನೆನಿಸಿಕೊಳ್ಳುವುದಕ್ಕೆ ನಾನು ಯೋಗ್ಯನಲ್ಲ, ಏಕೆಂದರೆ ನಾನು ದೇವರ ಸಭೆಯನ್ನು ಹಿಂಸೆಪಡಿಸಿದೆನು.
وَلَكِنْ بِنِعْمَةِ ٱللهِ أَنَا مَا أَنَا، وَنِعْمَتُهُ ٱلْمُعْطَاةُ لِي لَمْ تَكُنْ بَاطِلَةً، بَلْ أَنَا تَعِبْتُ أَكْثَرَ مِنْهُمْ جَمِيعِهِمْ. وَلَكِنْ لَا أَنَا، بَلْ نِعْمَةُ ٱللهِ ٱلَّتِي مَعِي. ١٠ 10
ಆದರೆ ನಾನು ಎಂಥವನಾಗಿದ್ದೇನೋ, ಅದು ದೇವರ ಕೃಪೆಯಿಂದಲೇ ಆಗಿರುತ್ತದೆ. ನನಗುಂಟಾದ ದೇವರ ಕೃಪೆಯು ನಿಷ್ಫಲವಾಗಲಿಲ್ಲ. ನಾನು ಅವರೆಲ್ಲರಿಗಿಂತಲೂ ಎಷ್ಟೋ ಹೆಚ್ಚಾಗಿ ಪ್ರಯಾಸಪಟ್ಟೆನು. ಆದರೆ ಪ್ರಯಾಸಪಟ್ಟವನು ನಾನಲ್ಲ, ನನ್ನೊಂದಿಗಿದ್ದ ದೇವರ ಕೃಪೆಯೇ.
فَسَوَاءٌ أَنَا أَمْ أُولَئِكَ، هَكَذَا نَكْرِزُ وَهَكَذَا آمَنْتُمْ. ١١ 11
ಆದ್ದರಿಂದ ನಾನಾದರೇನು, ಅವರಾದರೇನು ಇದನ್ನೇ ನಾವು ಸಾರುವುದು, ಇದನ್ನೇ ನೀವು ನಂಬಿದ್ದೀರಿ.
وَلَكِنْ إِنْ كَانَ ٱلْمَسِيحُ يُكْرَزُ بِهِ أَنَّهُ قَامَ مِنَ ٱلْأَمْوَاتِ، فَكَيْفَ يَقُولُ قَوْمٌ بَيْنَكُمْ: «إِنْ لَيْسَ قِيَامَةُ أَمْوَاتٍ»؟ ١٢ 12
ಆದರೆ ಕ್ರಿಸ್ತ ಯೇಸು ಸತ್ತವರೊಳಗಿಂದ ಎದ್ದು ಬಂದಿರುತ್ತಾರೆಂದು ಸಾರುತ್ತಿರುವಲ್ಲಿ ನಿಮ್ಮೊಳಗೆ ಕೆಲವರು ಸತ್ತವರಿಗೆ ಪುನರುತ್ಥಾನ ಇಲ್ಲ ಎಂದು ಹೇಳುವುದು ಹೇಗೆ?
فَإِنْ لَمْ تَكُنْ قِيَامَةُ أَمْوَاتٍ فَلَا يَكُونُ ٱلْمَسِيحُ قَدْ قَامَ! ١٣ 13
ಈಗ ಸತ್ತವರಿಗೆ ಪುನರುತ್ಥಾನವಿಲ್ಲವಾದರೆ, ಕ್ರಿಸ್ತಯೇಸುವಾದರೂ ಎದ್ದು ಬರಲಿಲ್ಲ.
وَإِنْ لَمْ يَكُنِ ٱلْمَسِيحُ قَدْ قَامَ، فَبَاطِلَةٌ كِرَازَتُنَا وَبَاطِلٌ أَيْضًا إِيمَانُكُمْ، ١٤ 14
ಕ್ರಿಸ್ತ ಯೇಸು ಎದ್ದು ಬರಲಿಲ್ಲವಾದರೆ, ನಮ್ಮ ಪ್ರಸಂಗವೂ ನಿಮ್ಮ ವಿಶ್ವಾಸವೂ ನಿಷ್ಪ್ರಯೋಜನವಾದದ್ದು.
وَنُوجَدُ نَحْنُ أَيْضًا شُهُودَ زُورٍ لِلهِ، لِأَنَّنَا شَهِدْنَا مِنْ جِهَةِ ٱللهِ أَنَّهُ أَقَامَ ٱلْمَسِيحَ وَهُوَ لَمْ يُقِمْهُ، إِنْ كَانَ ٱلْمَوْتَى لَا يَقُومُونَ. ١٥ 15
ಅದು ಮಾತ್ರವಲ್ಲ, ದೇವರು ಕ್ರಿಸ್ತ ಯೇಸುವನ್ನು ಸತ್ತವರೊಳಗಿಂದ ಎಬ್ಬಿಸಿದರೆಂದು ದೇವರ ಬಗ್ಗೆ ಸಾಕ್ಷಿಕೊಟ್ಟ ನಾವೂ ಸುಳ್ಳುಸಾಕ್ಷಿಗಳಾಗಿ ಕಂಡುಬರುವೆವು. ದೇವರು ಕ್ರಿಸ್ತನನ್ನು ಎಬ್ಬಿಸದಿದ್ದರೆ ಸತ್ತವರನ್ನೂ ದೇವರು ಎಬ್ಬಿಸುವುದಿಲ್ಲ.
لِأَنَّهُ إِنْ كَانَ ٱلْمَوْتَى لَا يَقُومُونَ، فَلَا يَكُونُ ٱلْمَسِيحُ قَدْ قَامَ. ١٦ 16
ಸತ್ತವರು ಎದ್ದುಬರುವುದಿಲ್ಲವಾದರೆ, ಕ್ರಿಸ್ತ ಯೇಸುವೂ ಎದ್ದುಬಂದಿಲ್ಲ.
وَإِنْ لَمْ يَكُنِ ٱلْمَسِيحُ قَدْ قَامَ، فَبَاطِلٌ إِيمَانُكُمْ. أَنْتُمْ بَعْدُ فِي خَطَايَاكُمْ! ١٧ 17
ಕ್ರಿಸ್ತ ಯೇಸುವು ಎದ್ದುಬಂದಿಲ್ಲವಾದರೆ, ನಿಮ್ಮ ವಿಶ್ವಾಸವೂ ವ್ಯರ್ಥವಾಗಿದೆ, ನೀವು ಇನ್ನೂ ನಿಮ್ಮ ಪಾಪಗಳಲ್ಲಿಯೇ ಇದ್ದೀರಿ.
إِذًا ٱلَّذِينَ رَقَدُوا فِي ٱلْمَسِيحِ أَيْضًا هَلَكُوا! ١٨ 18
ಅಲ್ಲದೆ, ಕ್ರಿಸ್ತ ಯೇಸುವಿನಲ್ಲಿ ವಿಶ್ವಾಸವಿಟ್ಟು ನಿದ್ರೆ ಹೋದವರು ಸಹ ನಾಶವಾದರು.
إِنْ كَانَ لَنَا فِي هَذِهِ ٱلْحَيَاةِ فَقَطْ رَجَاءٌ فِي ٱلْمَسِيحِ، فَإِنَّنَا أَشْقَى جَمِيعِ ٱلنَّاسِ. ١٩ 19
ನಾವು ಈ ಜೀವನದಲ್ಲಿ ಮಾತ್ರ ಕ್ರಿಸ್ತ ಯೇಸುವಿನಲ್ಲಿ ನಿರೀಕ್ಷೆಯಿಟ್ಟು ಕೊಂಡಿರುವವರಾಗಿದ್ದರೆ, ನಾವು ಎಲ್ಲಾ ಮನುಷ್ಯರಲ್ಲಿಯೂ ಕನಿಕರಪಡತಕ್ಕವರೇ ಆಗುತ್ತೇವೆ.
وَلَكِنِ ٱلْآنَ قَدْ قَامَ ٱلْمَسِيحُ مِنَ ٱلْأَمْوَاتِ وَصَارَ بَاكُورَةَ ٱلرَّاقِدِينَ. ٢٠ 20
ಆದರೆ ಈಗ ಕ್ರಿಸ್ತ ಯೇಸು ಸತ್ತವರೊಳಗಿಂದ ಎದ್ದು ಬಂದೇ ಇದ್ದಾರೆ. ನಿದ್ರೆ ಹೋದವರಲ್ಲಿ ಪ್ರಥಮಫಲವಾಗಿದ್ದಾರೆ.
فَإِنَّهُ إِذِ ٱلْمَوْتُ بِإِنْسَانٍ، بِإِنْسَانٍ أَيْضًا قِيَامَةُ ٱلْأَمْوَاتِ. ٢١ 21
ಏಕೆಂದರೆ ಒಬ್ಬ ಮನುಷ್ಯನ ಮೂಲಕ ಮರಣವು ಬಂದಂತೆಯೇ, ಒಬ್ಬ ಮನುಷ್ಯನ ಮೂಲಕ ಸತ್ತವರಿಗೆ ಪುನರುತ್ಥಾನವು ಸಹ ಬರುವುದು.
لِأَنَّهُ كَمَا فِي آدَمَ يَمُوتُ ٱلْجَمِيعُ، هَكَذَا فِي ٱلْمَسِيحِ سَيُحْيَا ٱلْجَمِيعُ. ٢٢ 22
ಏಕೆಂದರೆ, ಆದಾಮನಲ್ಲಿ ಎಲ್ಲರೂ ಸತ್ತಂತೆಯೇ, ಕ್ರಿಸ್ತನಲ್ಲಿ ಎಲ್ಲರೂ ಜೀವಂತರಾಗುವರು.
وَلَكِنَّ كُلَّ وَاحِدٍ فِي رُتْبَتِهِ: ٱلْمَسِيحُ بَاكُورَةٌ، ثُمَّ ٱلَّذِينَ لِلْمَسِيحِ فِي مَجِيئِهِ. ٢٣ 23
ಆದರೆ ಒಬ್ಬೊಬ್ಬರು ತಮ್ಮ ತಮ್ಮ ಕ್ರಮದ ಅನುಸಾರವಾಗಿ ಎದ್ದು ಬರುವರು. ಪ್ರಥಮಫಲವಾಗಿ ಕ್ರಿಸ್ತನು, ತರುವಾಯ ಕ್ರಿಸ್ತನ ಪುನರಾಗಮನದಲ್ಲಿ ಕ್ರಿಸ್ತನಿಗೆ ಸೇರಿದವರು ಎದ್ದು ಬರುವರು.
وَبَعْدَ ذَلِكَ ٱلنِّهَايَةُ، مَتَى سَلَّمَ ٱلْمُلْكَ لِلهِ ٱلْآبِ، مَتَى أَبْطَلَ كُلَّ رِيَاسَةٍ وَكُلَّ سُلْطَانٍ وَكُلَّ قُوَّةٍ. ٢٤ 24
ಆಮೇಲೆ ಕ್ರಿಸ್ತನು ಎಲ್ಲಾ ಆಧಿಪತ್ಯವನ್ನೂ ಎಲ್ಲಾ ಅಧಿಕಾರವನ್ನೂ ಎಲ್ಲಾ ಶಕ್ತಿಯನ್ನೂ ತೆಗೆದುಹಾಕಿ, ರಾಜ್ಯವನ್ನು ತಂದೆ ದೇವರಿಗೆ ಒಪ್ಪಿಸಿಕೊಡುವಾಗ ಸಮಾಪ್ತಿಯಾಗುವುದು.
لِأَنَّهُ يَجِبُ أَنْ يَمْلِكَ حَتَّى «يَضَعَ جَمِيعَ ٱلْأَعْدَاءِ تَحْتَ قَدَمَيْهِ». ٢٥ 25
ಏಕೆಂದರೆ, ಕ್ರಿಸ್ತನು ಎಲ್ಲಾ ಶತ್ರುಗಳನ್ನು ತನ್ನ ಪಾದಗಳ ಕೆಳಗೆ ಹಾಕಿಕೊಳ್ಳುವ ತನಕ ಆಳುವುದು ಅವಶ್ಯ.
آخِرُ عَدُوٍّ يُبْطَلُ هُوَ ٱلْمَوْتُ. ٢٦ 26
ಕೊನೆಯದಾಗಿ, ನಿರ್ಮೂಲವಾಗುವ ವೈರಿ ಮರಣವೇ.
لِأَنَّهُ أَخْضَعَ كُلَّ شَيْءٍ تَحْتَ قَدَمَيْهِ. وَلَكِنْ حِينَمَا يَقُولُ: «إِنَّ كُلَّ شَيْءٍ قَدْ أُخْضِعَ» فَوَاضِحٌ أَنَّهُ غَيْرُ ٱلَّذِي أَخْضَعَ لَهُ ٱلْكُلَّ. ٢٧ 27
ದೇವರು ಸಮಸ್ತವನ್ನೂ ಕ್ರಿಸ್ತನ ಪಾದಗಳ ಕೆಳಗೆ ಹಾಕಿ ಅವರಿಗೆ ಅಧೀನಮಾಡಿದ್ದಾರೆ. “ಸಮಸ್ತವೂ ಅವರಿಗೆ ಅಧೀನ ಮಾಡಲಾಗಿದೆ” ಎಂದು ಹೇಳುವಾಗ, ಸಮಸ್ತವನ್ನೂ ಕ್ರಿಸ್ತನಿಗೆ ಅಧೀನಮಾಡಿಕೊಟ್ಟ ದೇವರು ಇದರಲ್ಲಿ ಒಳಪಡಲಿಲ್ಲ ಎಂಬುದು ಸ್ಪಷ್ಟವಾಗಿದೆ.
وَمَتَى أُخْضِعَ لَهُ ٱلْكُلُّ، فَحِينَئِذٍ ٱلِٱبْنُ نَفْسُهُ أَيْضًا سَيَخْضَعُ لِلَّذِي أَخْضَعَ لَهُ ٱلْكُلَّ، كَيْ يَكُونَ ٱللهُ ٱلْكُلَّ فِي ٱلْكُلِّ. ٢٨ 28
ಸಮಸ್ತವೂ ಅವರಿಗೆ ಅಧೀನವಾದ ಮೇಲೆ, ಮಗನೂ ಸಹ ಸಮಸ್ತವನ್ನೂ ತನಗೆ ಅಧೀನಮಾಡಿಕೊಟ್ಟ ದೇವರಿಗೆ ತಾವೇ ಅಧೀನರಾಗುವರು. ಹೀಗೆ ದೇವರು ಸಮಸ್ತರಲ್ಲಿಯೂ ಸಮಸ್ತವೂ ಆಗಿದ್ದಾರೆ.
وَإِلَّا فَمَاذَا يَصْنَعُ ٱلَّذِينَ يَعْتَمِدُونَ مِنْ أَجْلِ ٱلْأَمْوَاتِ؟ إِنْ كَانَ ٱلْأَمْوَاتُ لَا يَقُومُونَ ٱلْبَتَّةَ، فَلِمَاذَا يَعْتَمِدُونَ مِنْ أَجْلِ ٱلْأَمْوَاتِ؟ ٢٩ 29
ಸತ್ತವರಿಗೆ ಪುನರುತ್ಥಾನವಿಲ್ಲದಿದ್ದರೆ, ಸತ್ತವರಿಗೋಸ್ಕರ ದೀಕ್ಷಾಸ್ನಾನ ಮಾಡಿಸಿಕೊಳ್ಳುವವರು ಏನು ಮಾಡುವರು? ಸತ್ತವರು ನಿಜವಾಗಿಯೂ ಎದ್ದುಬರುವುದಿಲ್ಲವಾದರೆ, ಅವರಿಗೋಸ್ಕರ ದೀಕ್ಷಾಸ್ನಾನ ಮಾಡಿಸಿಕೊಳ್ಳುವುದು ಏಕೆ?
وَلِمَاذَا نُخَاطِرُ نَحْنُ كُلَّ سَاعَةٍ؟ ٣٠ 30
ನಾವು ಸಹ ಪ್ರತಿ ಗಳಿಗೆಯಲ್ಲಿಯೂ ಅಪಾಯದಲ್ಲಿರುವುದೇಕೆ?
إِنِّي بِٱفْتِخَارِكُمُ ٱلَّذِي لِي فِي يَسُوعَ ٱلْمَسِيحِ رَبِّنَا، أَمُوتُ كُلَّ يَوْمٍ. ٣١ 31
ಸಹೋದರರೇ ನಮ್ಮ ಕರ್ತ ಆಗಿರುವ ಕ್ರಿಸ್ತ ಯೇಸುವಿನಲ್ಲಿ ನನಗೆ ನಿಮ್ಮ ಬಗ್ಗೆ ನಿಶ್ಚಯವಾಗಿರುವ ಹೆಮ್ಮೆಯಿಂದ ನಾನು ದಿನದಿನವು ಸಾಯುತ್ತಲಿದ್ದೇನೆ.
إِنْ كُنْتُ كَإِنْسَانٍ قَدْ حَارَبْتُ وُحُوشًا فِي أَفَسُسَ، فَمَا ٱلْمَنْفَعَةُ لِي؟ إِنْ كَانَ ٱلْأَمْوَاتُ لَا يَقُومُونَ، «فَلْنَأْكُلْ وَنَشْرَبْ لِأَنَّنَا غَدًا نَمُوتُ!». ٣٢ 32
ನಾನು ಎಫೆಸದಲ್ಲಿ ಕಾಡು ಮೃಗಗಳೊಂದಿಗೆ ಹೋರಾಟ ಮಾಡಿದ್ದು ಕೇವಲ ಮಾನವ ಕಾರಣಗಳಿಂದ ಮಾತ್ರವಾಗಿದ್ದರೆ, ಅದರಿಂದ ನನಗೇನು ಪ್ರಯೋಜನ? ಸತ್ತವರು ಎದ್ದುಬರುವುದಿಲ್ಲವಾದರೆ, “ತಿನ್ನೋಣ, ಕುಡಿಯೋಣ, ನಾಳೆ ಮರಣ ಹೊಂದೋಣ.”
لَا تَضِلُّوا: «فَإِنَّ ٱلْمُعَاشَرَاتِ ٱلرَّدِيَّةَ تُفْسِدُ ٱلْأَخْلَاقَ ٱلْجَيِّدَةَ». ٣٣ 33
ಮೋಸಹೋಗಬೇಡಿರಿ. ಏಕೆಂದರೆ, “ದುಸ್ಸಹವಾಸವು ಸದಾಚಾರವನ್ನು ಕೆಡಿಸುತ್ತದೆ.”
اُصْحُوا لِلْبِرِّ وَلَا تُخْطِئُوا، لِأَنَّ قَوْمًا لَيْسَتْ لَهُمْ مَعْرِفَةٌ بِٱللهِ. أَقُولُ ذَلِكَ لِتَخْجِيلِكُمْ! ٣٤ 34
ಸ್ವಸ್ಥಚಿತ್ತರಾಗಿರಿ, ಪಾಪಮಾಡುವುದನ್ನು ನಿಲ್ಲಿಸಿರಿ. ಕೆಲವರಂತೂ ದೇವರನ್ನೇ ಅಲಕ್ಷ್ಯಮಾಡುವವರಾಗಿದ್ದಾರೆ. ನಿಮಗೆ ನಾಚಿಕೆಯಾಗಬೇಕೆಂದು ನಾನು ಇದನ್ನು ಹೇಳುತ್ತೇನೆ.
لَكِنْ يَقُولُ قَائِلٌ: «كَيْفَ يُقَامُ ٱلْأَمْوَاتُ؟ وَبِأَيِّ جِسْمٍ يَأْتُونَ؟». ٣٥ 35
“ಸತ್ತವರು ಎದ್ದೇಳುವುದು ಹೇಗೆ? ಎಂಥ ದೇಹದಿಂದ ಎದ್ದು ಬರುತ್ತಾರೆ?” ಎಂದು ಯಾರಾದರೂ ಕೇಳಬಹುದು.
يَاغَبِيُّ! ٱلَّذِي تَزْرَعُهُ لَا يُحْيَا إِنْ لَمْ يَمُتْ. ٣٦ 36
ಮತಿಹೀನ ಮನುಷ್ಯನೇ! ನೀನು ಬಿತ್ತುವ ಬೀಜವು ಸಾಯದಿದ್ದರೆ, ಅದು ಜೀವಂತವಾಗುವುದಿಲ್ಲ.
وَٱلَّذِي تَزْرَعُهُ، لَسْتَ تَزْرَعُ ٱلْجِسْمَ ٱلَّذِي سَوْفَ يَصِيرُ، بَلْ حَبَّةً مُجَرَّدَةً، رُبَّمَا مِنْ حِنْطَةٍ أَوْ أَحَدِ ٱلْبَوَاقِي. ٣٧ 37
ನೀನು ಒಂದು ವೇಳೆ ಗೋಧಿಯನ್ನಾಗಲಿ, ಬೇರೆ ಯಾವುದೇ ಬೀಜವನ್ನಾಗಲಿ ಬಿತ್ತುವಾಗ, ಬರೀ ಕಾಳನ್ನೇ ಹೊರತು ಮುಂದೆ ಆಗಬೇಕಾದ ದೇಹವನ್ನು ಬಿತ್ತುವುದಿಲ್ಲ.
وَلَكِنَّ ٱللهَ يُعْطِيهَا جِسْمًا كَمَا أَرَادَ. وَلِكُلِّ وَاحِدٍ مِنَ ٱلْبُزُورِ جِسْمَهُ. ٣٨ 38
ಆದರೆ ದೇವರು ತಾನು ನಿರ್ಣಯಿಸಿದಂತೆ ಅದಕ್ಕೆ ದೇಹವನ್ನು ಕೊಡುತ್ತಾರೆ ಮತ್ತು ಒಂದೊಂದು ಬೀಜಕ್ಕೂ ಅದರದರ ದೇಹವನ್ನು ಕೊಡುತ್ತಾರೆ.
لَيْسَ كُلُّ جَسَدٍ جَسَدًا وَاحِدًا، بَلْ لِلنَّاسِ جَسَدٌ وَاحِدٌ، وَلِلْبَهَائِمِ جَسَدٌ آخَرُ، وَلِلسَّمَكِ آخَرُ، وَلِلطَّيْرِ آخَرُ. ٣٩ 39
ಎಲ್ಲಾ ದೇಹಗಳು ಒಂದೇ ವಿಧವಾಗಿಲ್ಲ. ಮನುಷ್ಯನ ದೇಹ ಬೇರೆ, ಪಶುಗಳ ದೇಹ ಬೇರೆ, ಪಕ್ಷಿಗಳ ದೇಹ ಬೇರೆ, ಮೀನುಗಳದೇ ಬೇರೆ.
وَأَجْسَامٌ سَمَاوِيَّةٌ، وَأَجْسَامٌ أَرْضِيَّةٌ. لَكِنَّ مَجْدَ ٱلسَّمَاوِيَّاتِ شَيْءٌ، وَمَجْدَ ٱلْأَرْضِيَّاتِ آخَرُ. ٤٠ 40
ಪರಲೋಕದ ದೇಹಗಳಿವೆ, ಭೂಲೋಕದ ದೇಹಗಳಿವೆ. ಆದರೆ ಪರಲೋಕದ ದೇಹಗಳ ಮಹಿಮೆಯೇ ಬೇರೆ, ಭೂಲೋಕದ ದೇಹಗಳ ಮಹಿಮೆಯೇ ಬೇರೆ.
مَجْدُ ٱلشَّمْسِ شَيْءٌ، وَمَجْدُ ٱلْقَمَرِ آخَرُ، وَمَجْدُ ٱلنُّجُومِ آخَرُ. لِأَنَّ نَجْمًا يَمْتَازُ عَنْ نَجْمٍ فِي ٱلْمَجْدِ. ٤١ 41
ಸೂರ್ಯನ ಮಹಿಮೆ ಬೇರೆ, ಚಂದ್ರನ ಮಹಿಮೆಯೇ ಬೇರೆ ವಿಧ, ನಕ್ಷತ್ರಗಳ ಮಹಿಮೆ ಇನ್ನೊಂದು ವಿಧ. ಏಕೆಂದರೆ, ನಕ್ಷತ್ರ ನಕ್ಷತ್ರಕ್ಕೆ ಮಹಿಮೆಯಲ್ಲಿ ವ್ಯತ್ಯಾಸವಾಗಿರುವುದು.
هَكَذَا أَيْضًا قِيَامَةُ ٱلْأَمْوَاتِ: يُزْرَعُ فِي فَسَادٍ وَيُقَامُ فِي عَدَمِ فَسَادٍ. ٤٢ 42
ಸತ್ತವರಿಗಾಗುವ ಪುನರುತ್ಥಾನವು ಸಹ ಹಾಗೆಯೇ ಇರುವುದು. ದೇಹವು ಅಳಿಯುವ ಅವಸ್ಥೆಯಲ್ಲಿ ಬಿತ್ತಲಾಗುತ್ತದೆ. ಅಮರತ್ವ ಅವಸ್ಥೆಯಲ್ಲಿ ಎದ್ದು ಬರುವುದು.
يُزْرَعُ فِي هَوَانٍ وَيُقَامُ فِي مَجْدٍ. يُزْرَعُ فِي ضَعْفٍ وَيُقَامُ فِي قُوَّةٍ. ٤٣ 43
ದೇಹವು ಹೀನಾವಸ್ಥೆಯಲ್ಲಿ ಬಿತ್ತಲಾಗುತ್ತದೆ. ಮಹಿಮೆಯಲ್ಲಿ ಎದ್ದು ಬರುವುದು. ಬಲಹೀನತೆಯಲ್ಲಿ ಬಿತ್ತಲಾಗುತ್ತದೆ, ಶಕ್ತಿಯಲ್ಲಿ ಎದ್ದು ಬರುವುದು.
يُزْرَعُ جِسْمًا حَيَوَانِيًّا وَيُقَامُ جِسْمًا رُوحَانِيًّا. يُوجَدُ جِسْمٌ حَيَوَانِيٌّ وَيُوجَدُ جِسْمٌ رُوحَانِيٌّ. ٤٤ 44
ಪ್ರಾಕೃತ ದೇಹವಾಗಿ ಬಿತ್ತಲಾಗುತ್ತದೆ, ಆತ್ಮಿಕ ದೇಹವಾಗಿ ಎದ್ದು ಬರುವುದು. ಪ್ರಾಕೃತ ದೇಹವಿರುವುದಾದರೆ, ಆತ್ಮಿಕ ದೇಹವೂ ಇರುವುದು.
هَكَذَا مَكْتُوبٌ أَيْضًا: «صَارَ آدَمُ، ٱلْإِنْسَانُ ٱلْأَوَّلُ، نَفْسًا حَيَّةً»، وَآدَمُ ٱلْأَخِيرُ رُوحًا مُحْيِيًا. ٤٥ 45
“ಮೊದಲನೆಯ ಮನುಷ್ಯನಾದ ಆದಾಮನು ಜೀವಿಸುವ ವ್ಯಕ್ತಿಯಾದನು,” ಎಂದು ಬರೆದಿದೆಯಲ್ಲವೇ? ಕಡೇ ಆದಾಮನು ಜೀವಕೊಡುವ ಆತ್ಮನಾದನು.
لَكِنْ لَيْسَ ٱلرُّوحَانِيُّ أَوَّلًا بَلِ ٱلْحَيَوَانِيُّ، وَبَعْدَ ذَلِكَ ٱلرُّوحَانِيُّ. ٤٦ 46
ಆತ್ಮಿಕವಾದದ್ದು ಮೊದಲು ಬರಲಿಲ್ಲ, ಪ್ರಾಕೃತವಾದದ್ದೇ ಮೊದಲನೆಯದು, ಅನಂತರ ಆತ್ಮಿಕವಾದದ್ದು.
ٱلْإِنْسَانُ ٱلْأَوَّلُ مِنَ ٱلْأَرْضِ تُرَابِيٌّ. ٱلْإِنْسَانُ ٱلثَّانِي ٱلرَّبُّ مِنَ ٱلسَّمَاءِ. ٤٧ 47
ಮೊದಲನೆಯ ಮನುಷ್ಯ, ಭೂಮಿಯ ಮಣ್ಣಿನವನಾಗಿದ್ದಾನೆ, ಎರಡನೆಯ ಮನುಷ್ಯನು ಪರಲೋಕದಿಂದ ಬಂದವನು.
كَمَا هُوَ ٱلتُّرَابِيُّ هَكَذَا ٱلتُّرَابِيُّونَ أَيْضًا، وَكَمَا هُوَ ٱلسَّمَاوِيُّ هَكَذَا ٱلسَّمَاوِيُّونَ أَيْضًا. ٤٨ 48
ಮಣ್ಣಿನ ಮನುಷ್ಯನು ಎಂಥವನೋ, ಮಣ್ಣಿಗೆ ಸೇರಿದವರೂ ಅಂಥವರೇ. ಪರಲೋಕದ ಮನುಷ್ಯನು ಎಂಥವನೋ, ಪರಲೋಕಕ್ಕೆ ಸಂಬಂಧಿಸಿದವರೂ ಅಂಥವರಾಗಿರುವರು.
وَكَمَا لَبِسْنَا صُورَةَ ٱلتُّرَابِيِّ، سَنَلْبَسُ أَيْضًا صُورَةَ ٱلسَّمَاوِيِّ. ٤٩ 49
ನಾವು ಮಣ್ಣಿನ ಮನುಷ್ಯನ ಸಾರೂಪ್ಯವನ್ನು ಧರಿಸಿಕೊಂಡಿರುವ ಪ್ರಕಾರ, ಪರಲೋಕದ ಮನುಷ್ಯನ ಸಾರೂಪ್ಯವನ್ನೂ ಧರಿಸಿಕೊಳ್ಳುವೆವು.
فَأَقُولُ هَذَا أَيُّهَا ٱلْإِخْوَةُ: إِنَّ لَحْمًا وَدَمًا لَا يَقْدِرَانِ أَنْ يَرِثَا مَلَكُوتَ ٱللهِ، وَلَا يَرِثُ ٱلْفَسَادُ عَدَمَ ٱلْفَسَادِ. ٥٠ 50
ಪ್ರಿಯರೇ, ನಾನು ಹೇಳುವುದೇನೆಂದರೆ, ರಕ್ತಮಾಂಸವು ದೇವರ ರಾಜ್ಯಕ್ಕೆ ಬಾಧ್ಯವಾಗಲಾರವು. ಅಳಿಯುವಂಥದ್ದು ಅಮರತ್ವಕ್ಕೆ ಬಾಧ್ಯವಾಗಲಾರದು.
هُوَذَا سِرٌّ أَقُولُهُ لَكُمْ: لَا نَرْقُدُ كُلُّنَا، وَلَكِنَّنَا كُلَّنَا نَتَغَيَّرُ، ٥١ 51
ನಾನು ರಹಸ್ಯವಾಗಿದ್ದ ಸಂಗತಿಯನ್ನು ನಿಮಗೆ ಹೇಳುತ್ತೇನೆ ಕೇಳಿರಿ: ನಾವೆಲ್ಲರೂ ನಿದ್ರೆ ಹೋಗುವುದಿಲ್ಲ, ನಾವೆಲ್ಲರೂ ರೂಪಾಂತರವಾಗುವೆವು.
فِي لَحْظَةٍ فِي طَرْفَةِ عَيْنٍ، عِنْدَ ٱلْبُوقِ ٱلْأَخِيرِ. فَإِنَّهُ سَيُبَوَّقُ، فَيُقَامُ ٱلْأَمْوَاتُ عَدِيمِي فَسَادٍ، وَنَحْنُ نَتَغَيَّرُ. ٥٢ 52
ಆದರೆ ಒಂದು ಕ್ಷಣದಲ್ಲೇ, ರೆಪ್ಪೆ ಬಡಿಯುವಷ್ಟರಲ್ಲಿ, ಕಡೇ ತುತೂರಿಯು ಊದಲಾಗುವುದು. ತುತೂರಿ ಧ್ವನಿಯಾಗುವಾಗ, ಸತ್ತವರು ಅಮರತ್ವಪಡೆದು ಎಬ್ಬಿಸಲಾಗುವರು, ನಾವು ರೂಪಾಂತರವಾಗುವೆವು.
لِأَنَّ هَذَا ٱلْفَاسِدَ لَابُدَّ أَنْ يَلْبَسَ عَدَمَ فَسَادٍ، وَهَذَا ٱلْمَائِتَ يَلْبَسُ عَدَمَ مَوْتٍ. ٥٣ 53
ಅಳಿಯುವ ಈ ದೇಹವು ಅಮರತ್ವವನ್ನು ಧರಿಸಿಕೊಳ್ಳುವುದು, ಮರಣಾಧೀನವಾಗಿರುವ ಈ ದೇಹವು ಅಮರತ್ವವನ್ನು ಧರಿಸಿಕೊಳ್ಳುವುದು.
وَمَتَى لَبِسَ هَذَا ٱلْفَاسِدُ عَدَمَ فَسَادٍ، وَلَبِسَ هَذَا ٱلْمَائِتُ عَدَمَ مَوْتٍ، فَحِينَئِذٍ تَصِيرُ ٱلْكَلِمَةُ ٱلْمَكْتُوبَةُ: «ٱبْتُلِعَ ٱلْمَوْتُ إِلَى غَلَبَةٍ». ٥٤ 54
ನಶಿಸಿಹೋಗುವಂಥದ್ದು ನಶಿಸಿಹೋಗದಂಥದ್ದನ್ನೂ, ಮರಣಾಧೀನವಾದ ಈ ದೇಹವು ಅಮರತ್ವವನ್ನೂ ಧರಿಸಿಕೊಳ್ಳುವಾಗ, ಬರೆದಿರುವ ಈ ಮಾತುಗಳು ನೆರವೇರುವುದು: “ಮರಣವು ನುಂಗಿಯೇ ಹೋಯಿತು, ಜಯವಾಯಿತು.”
«أَيْنَ شَوْكَتُكَ يَا مَوْتُ؟ أَيْنَ غَلَبَتُكِ يَا هَاوِيَةُ؟» (Hadēs g86) ٥٥ 55
“ಓ ಮರಣವೇ, ನಿನ್ನ ಜಯವು ಎಲ್ಲಿ? ಓ ಮರಣವೇ, ನಿನ್ನ ವಿಷದ ಕೊಂಡಿ ಎಲ್ಲಿ?” (Hadēs g86)
أَمَّا شَوْكَةُ ٱلْمَوْتِ فَهِيَ ٱلْخَطِيَّةُ، وَقُوَّةُ ٱلْخَطِيَّةِ هِيَ ٱلنَّامُوسُ. ٥٦ 56
ಮರಣದ ಕೊಂಡಿ ಪಾಪವೇ ಮತ್ತು ಪಾಪದ ಶಕ್ತಿಯು ನಿಯಮವೇ.
وَلَكِنْ شُكْرًا لِلهِ ٱلَّذِي يُعْطِينَا ٱلْغَلَبَةَ بِرَبِّنَا يَسُوعَ ٱلْمَسِيحِ. ٥٧ 57
ಆದರೆ ನಮ್ಮ ಕರ್ತ ಆಗಿರುವ ಯೇಸುಕ್ರಿಸ್ತರ ಮೂಲಕ ನಮಗೆ ಜಯವನ್ನು ಕೊಡುವ ದೇವರಿಗೆ ಸ್ತೋತ್ರ.
إِذًا يَا إِخْوَتِي ٱلْأَحِبَّاءَ، كُونُوا رَاسِخِينَ، غَيْرَ مُتَزَعْزِعِينَ، مُكْثِرِينَ فِي عَمَلِ ٱلرَّبِّ كُلَّ حِينٍ، عَالِمِينَ أَنَّ تَعَبَكُمْ لَيْسَ بَاطِلًا فِي ٱلرَّبِّ. ٥٨ 58
ಆದ್ದರಿಂದ, ನನ್ನ ಪ್ರಿಯ ಸಹೋದರರೇ, ಸ್ಥಿರವಾಗಿ ನಿಲ್ಲಿರಿ. ಯಾವುದೂ ನಿಮ್ಮನ್ನು ಕದಲಿಸದಿರಲಿ. ಕರ್ತನಲ್ಲಿ ನಿಮ್ಮ ಪ್ರಯಾಸವು ನಿಷ್ಫಲವಾಗುವುದಿಲ್ಲವೆಂದು ತಿಳಿದು, ಕರ್ತನ ಕೆಲಸಕ್ಕೆ ಯಾವಾಗಲೂ ನಿಮ್ಮನ್ನು ಸಂಪೂರ್ಣವಾಗಿ ಒಪ್ಪಿಸಿಕೊಡಿರಿ.

< ١ كورنثوس 15 >