< ٢ أخبار 25 >

مَلَكَ أَمَصْيَا وَهُوَ ٱبْنُ خَمْسٍ وَعِشْرِينَ سَنَةً، وَمَلَكَ تِسْعًا وَعِشْرِينَ سَنَةً فِي أُورُشَلِيمَ، وَٱسْمُ أُمِّهِ يَهُوعَدَّانُ مِنْ أُورُشَلِيمَ. ١ 1
ಅಮಚ್ಯನು ಪಟ್ಟಕ್ಕೆ ಬಂದಾಗ ಇಪ್ಪತ್ತೈದು ವರ್ಷದವನಾಗಿದ್ದನು. ಅವನು ಯೆರೂಸಲೇಮಿನಲ್ಲಿ ಇಪ್ಪತ್ತೊಂಭತ್ತು ವರ್ಷ ಆಳ್ವಿಕೆ ಮಾಡಿದನು. ಯೆರೂಸಲೇಮಿನವಳಾದ ಯೆಹೋವದ್ದಾನ್ ಎಂಬಾಕೆಯು ಅವನ ತಾಯಿ.
وَعَمِلَ ٱلْمُسْتَقِيمَ فِي عَيْنَيِ ٱلرَّبِّ، وَلَكِنْ لَيْسَ بِقَلْبٍ كَامِلٍ. ٢ 2
ಅವನು ಯೆಹೋವನ ಚಿತ್ತಾನುಸಾರವಾಗಿ ನಡೆದನು; ಆದರೆ ಯಥಾರ್ಥಚಿತ್ತನಾಗಿರಲಿಲ್ಲ.
وَلَمَّا تَثَبَّتَتِ ٱلْمَمْلَكَةُ عَلَيْهِ قَتَلَ عَبِيدَهُ ٱلَّذِينَ قَتَلُوا ٱلْمَلِكَ أَبَاهُ. ٣ 3
ಅವನು ರಾಜ್ಯವನ್ನು ಭದ್ರಪಡಿಸಿಕೊಂಡ ಕೂಡಲೆ ತನ್ನ ತಂದೆಯನ್ನು ಕೊಂದ ಸೇವಕರನ್ನು ಕೊಲ್ಲಿಸಿದನು.
وَأَمَّا بَنُوهُمْ فَلَمْ يَقْتُلْهُمْ، بَلْ كَمَا هُوَ مَكْتُوبٌ فِي ٱلشَّرِيعَةِ فِي سِفْرِ مُوسَى حَيْثُ أَمَرَ ٱلرَّبُّ قَائِلًا: «لَا تَمُوتُ ٱلْآبَاءُ لِأَجْلِ ٱلْبَنِينَ، وَلَا ٱلْبَنُونَ يَمُوتُونَ لِأَجْلِ ٱلْآبَاءِ، بَلْ كُلُّ وَاحِدٍ يَمُوتُ لِأَجْلِ خَطِيَّتِهِ». ٤ 4
ಆದರೆ, “ಮಕ್ಕಳ ಪಾಪದ ದೆಸೆಯಿಂದ ತಂದೆಗೂ ತಂದೆಯ ಪಾಪದ ದೆಸೆಯಿಂದ ಮಕ್ಕಳಿಗೂ ಮರಣ ಶಿಕ್ಷೆಯಾಗಬಾರದು; ಪ್ರತಿಯೊಬ್ಬನೂ ತನ್ನ ಪಾಪದ ಫಲವನ್ನು ತಾನೇ ಅನುಭವಿಸಬೇಕು” ಎಂಬುದಾಗಿ ಮೋಶೆಯ ಧರ್ಮಶಾಸ್ತ್ರದಲ್ಲಿರುವ ಯೆಹೋವನ ಅಪ್ಪಣೆಯನ್ನು ನೆನಪು ಮಾಡಿಕೊಂಡು ಅವರ ಮಕ್ಕಳನ್ನು ಕೊಲ್ಲಿಸಲಿಲ್ಲ.
وَجَمَعَ أَمَصْيَا يَهُوذَا وَأَقَامَهُمْ حَسَبَ بُيُوتِ ٱلْآبَاءِ رُؤَسَاءَ أُلُوفٍ وَرُؤَسَاءَ مِئَاتٍ فِي كُلِّ يَهُوذَا وَبَنْيَامِينَ، وَأَحْصَاهُمْ مِنِ ٱبْنِ عِشْرِينَ سَنَةً فَمَا فَوْقُ، فَوَجَدَهُمْ ثَلَاثَ مِئَةِ أَلْفِ مُخْتَارٍ خَارِجٍ لِلْحَرْبِ حَامِلِ رُمْحٍ وَتُرْسٍ. ٥ 5
ಆಮೇಲೆ ಅಮಚ್ಯನು ಯೆಹೂದ್ಯರನ್ನು ಒಟ್ಟಾಗಿ ಸೇರಿಸಿ ಸಹಸ್ರಾಧಿಪತಿ, ಶತಾಧಿಪತಿಗಳ ಕೈಕೆಳಗೆ ಯೆಹೂದ ಮತ್ತು ಬೆನ್ಯಾಮೀನ್ ಕುಲಗಳಲ್ಲಿ ಆಯಾ ಗೋತ್ರಗಳ ಪ್ರಕಾರ ಅವರನ್ನು ನಿಲ್ಲಿಸಿ, ಇಪ್ಪತ್ತು ವರ್ಷಕ್ಕೆ ಮೇಲ್ಪಟ್ಟವರನ್ನು ಲೆಕ್ಕ ಮಾಡಿಸಿದನು. ಅವರಲ್ಲಿ ಬರ್ಜಿ ಗುರಾಣಿಗಳನ್ನು ಹಿಡಿದುಕೊಂಡು ಯುದ್ಧಕ್ಕೆ ಹೊರಡತಕ್ಕ ಶೂರರು ಮೂರು ಲಕ್ಷ ಮಂದಿ ಸಿಕ್ಕಿದರು.
وَٱسْتَأْجَرَ مِنْ إِسْرَائِيلَ مِئَةَ أَلْفِ جَبَّارِ بَأْسٍ بِمِئَةِ وَزْنَةٍ مِنَ ٱلْفِضَّةِ. ٦ 6
ಇದಲ್ಲದೆ ಅವನು ನೂರು ತಲಾಂತು ಬೆಳ್ಳಿಯನ್ನು ಕೊಟ್ಟು, ಇಸ್ರಾಯೇಲರಿಂದಲೂ ಲಕ್ಷ ಮಂದಿ ಭಟರನ್ನು ತರಿಸಿದನು.
وَجَاءَ إِلَيْهِ رَجُلُ ٱللهِ قَائِلًا: «أَيُّهَا ٱلْمَلِكُ، لَا يَأْتِي مَعَكَ جَيْشُ إِسْرَائِيلَ، لِأَنَّ ٱلرَّبَّ لَيْسَ مَعَ إِسْرَائِيلَ، مَعَ كُلِّ بَنِي أَفْرَايِمَ. ٧ 7
ಆಗ ದೇವರ ಮನುಷ್ಯನೊಬ್ಬನು ಅವನ ಬಳಿಗೆ ಬಂದು ಅವನಿಗೆ, “ಅರಸನೇ, ಇಸ್ರಾಯೇಲ್ ಸೈನ್ಯದವರು ನಿನ್ನ ಜೊತೆಯಲ್ಲಿ ಯುದ್ಧಕ್ಕೆ ಹೋಗಬಾರದು. ಯೆಹೋವನು ಎಫ್ರಾಯೀಮ್ಯರಾದ ಇಸ್ರಾಯೇಲರನ್ನೆಲ್ಲಾ ಕೈಬಿಟ್ಟಿದ್ದಾನೆ.
وَإِنْ ذَهَبْتَ أَنْتَ فَٱعْمَلْ وَتَشَدَّدْ لِلْقِتَالِ، لِأَنَّ ٱللهَ يُسْقِطُكَ أَمَامَ ٱلْعَدُوِّ، لِأَنَّ عِنْدَ ٱللهِ قُوَّةً لِلْمُسَاعَدَةِ وَلِلْإِسْقَاطِ». ٨ 8
ನೀನೇ ಹೋಗಿ ಆ ಕಾರ್ಯವನ್ನು ನಿರ್ವಹಿಸು; ಧೈರ್ಯದಿಂದ ಯುದ್ಧಮಾಡು. ಹಾಗೆ ಮಾಡದಿದ್ದರೆ ದೇವರು ಶತ್ರುಗಳಿಂದ ನೀನು ಅಪಜಯಹೊಂದುವಂತೆ ಮಾಡುವನು, ಜಯಾ, ಅಪಜಯಗಳನ್ನು ಉಂಟುಮಾಡುವುದಕ್ಕೆ ಆತನು ಶಕ್ತನಾಗಿರುತ್ತಾನಲ್ಲವೆ?” ಎಂದನು.
فَقَالَ أَمَصْيَا لِرَجُلِ ٱللهِ: «فَمَاذَا يُعْمَلُ لِأَجْلِ ٱلْمِئَةِ ٱلْوَزْنَةِ ٱلَّتِي أَعْطَيْتُهَا لِغُزَاةِ إِسْرَائِيلَ؟» فَقَالَ رَجُلُ ٱللهِ: «إِنَّ ٱلرَّبَّ قَادِرٌ أَنْ يُعْطِيَكَ أَكْثَرَ مِنْ هَذِهِ». ٩ 9
ಅಮಚ್ಯನು ದೇವರ ಮನುಷ್ಯನನ್ನು, “ಹಾಗಾದರೆ ನಾನು ಇಸ್ರಾಯೇಲ್ ಸೈನ್ಯಕ್ಕೋಸ್ಕರ ನೂರು ತಲಾಂತುಗಳನ್ನು ಕೊಟ್ಟ ವಿಷಯದಲ್ಲಿ ನಾನೇನು ಮಾಡಬೇಕು?” ಎಂದು ಕೇಳಲು ಅವನು, “ಯೆಹೋವನು ಅದಕ್ಕಿಂತ ಎಷ್ಟೋ ಹೆಚ್ಚಾಗಿ ನಿನಗೆ ಕೊಡಬಲ್ಲನು” ಎಂದನು.
فَأَفْرَزَ أَمَصْيَا ٱلْغُزَاةَ ٱلَّذِينَ جَاءُوا إِلَيْهِ مِنْ أَفْرَايِمَ لِكَيْ يَنْطَلِقُوا إِلَى مَكَانِهِمْ، فَحَمِيَ غَضَبُهُمْ جِدًّا عَلَى يَهُوذَا وَرَجَعُوا إِلَى مَكَانِهِمْ بِحُمُوِّ ٱلْغَضَبِ. ١٠ 10
೧೦ಆಗ ಅಮಚ್ಯನು ಎಫ್ರಾಯೀಮ್ಯ ರಿಂದ ಬಂದ ಸೈನಿಕರನ್ನು ಬೇರೆ ಮಾಡಿ, ಅವರನ್ನು ಅವರ ದೇಶಕ್ಕೆ ಕಳುಹಿಸಿದನು. ಅವರು ಯೆಹೂದ್ಯರ ಮೇಲೆ ಬಹಳ ಕೋಪಗೊಂಡು ತಮ್ಮ ದೇಶಕ್ಕೆ ಹೊರಟು ಹೋದರು.
وَأَمَّا أَمَصْيَا فَتَشَدَّدَ وَٱقْتَادَ شَعْبَهُ وَذَهَبَ إِلَى وَادِي ٱلْمِلْحِ، وَضَرَبَ مِنْ بَنِي سَاعِيرَ عَشَرَةَ آلَافٍ، ١١ 11
೧೧ಅಮಚ್ಯನಾದರೋ ಧೈರ್ಯದಿಂದ ತನ್ನ ಸೈನ್ಯವನ್ನು ಕರೆದುಕೊಂಡು, ಉಪ್ಪಿನ ತಗ್ಗಿಗೆ ಹೋಗಿ ಸೇಯೀರ್ಯರಲ್ಲಿ ಹತ್ತು ಸಾವಿರ ಮಂದಿಯನ್ನು ಕೊಂದುಹಾಕಿದನು.
وَعَشَرَةَ آلَافٍ أَحْيَاءَ سَبَاهُمْ بَنُو يَهُوذَا وَأَتَوْا بِهِمْ إِلَى رَأْسِ سَالِعَ وَطَرَحُوهُمْ عَنْ رَأْسِ سَالِعَ فَتَكَسَّرُوا أَجْمَعُونَ. ١٢ 12
೧೨ಯೆಹೂದ್ಯರು ಬೇರೆ ಹತ್ತು ಸಾವಿರ ಮಂದಿಯನ್ನು ಜೀವಸಹಿತವಾಗಿ ಹಿಡಿದು, ಕಡಿದಾದ ಬಂಡೆಯ ತುದಿಗೆ ಒಯ್ದು, ಅವರೆಲ್ಲರೂ ಚೂರು ಚೂರಾಗುವ ಹಾಗೆ ಅವರನ್ನು ಕೆಳಕ್ಕೆ ದೊಬ್ಬಿದರು.
وَأَمَّا ٱلرِّجَالُ ٱلْغُزَاةُ ٱلَّذِينَ أَرْجَعَهُمْ أَمَصْيَا عَنِ ٱلذَّهَابِ مَعَهُ إِلَى ٱلْقِتَالِ فَٱقْتَحَمُوا مُدُنَ يَهُوذَا مِنَ ٱلسَّامِرَةِ إِلَى بَيْتِ حُورُونَ، وَضَرَبُوا مِنْهُمْ ثَلَاثَةَ آلَافٍ وَنَهَبُوا نَهْبًا كَثِيرًا. ١٣ 13
೧೩ಅಷ್ಟರಲ್ಲಿ ಅಮಚ್ಯನು ತನ್ನ ಜೊತೆಯಲ್ಲಿ ಯುದ್ಧಕ್ಕೆ ಬರಬಾರದೆಂದು ಹಿಂದಕ್ಕೆ ಕಳುಹಿಸಿದ ಗುಂಪಿನವರು ಸಮಾರ್ಯಕ್ಕೂ ಬೇತ್ಹೋರೋನಿಗೂ ಮಧ್ಯದಲ್ಲಿರುವ ಯೆಹೂದ ಪಟ್ಟಣಗಳ ಮೇಲೆ ದಾಳಿಮಾಡಿ ಮೂರು ಸಾವಿರ ಜನರನ್ನು ಕೊಂದು, ದೊಡ್ಡ ಕೊಳ್ಳೆಯನ್ನು ತೆಗೆದುಕೊಂಡು ಹೋದರು
ثُمَّ بَعْدَ مَجِيءِ أَمَصْيَا مِنْ ضَرْبِ ٱلْأَدُومِيِّينَ أَتَى بِآلِهَةِ بَنِي سَاعِيرَ وَأَقَامَهُمْ لَهُ آلِهَةً، وَسَجَدَ أَمَامَهُمْ وَأَوْقَدَ لَهُمْ. ١٤ 14
೧೪ಅಮಚ್ಯನು ಎದೋಮ್ಯರನ್ನು ಸೋಲಿಸಿ ಮನೆಗೆ ಬಂದ ಮೇಲೆ, ತಾನು ತೆಗೆದುಕೊಂಡು ಬಂದಿದ್ದ ಸೇಯೀರಿನವರ ದೇವತಾಪ್ರತಿಮೆಗಳನ್ನು ತನ್ನ ದೇವರುಗಳೆಂದು ಪ್ರತಿಷ್ಠಿಸಿ ಅವುಗಳಿಗೆ ಅಡ್ಡಬಿದ್ದು ಧೂಪ ಹಾಕುತ್ತಿದ್ದನು.
فَحَمِيَ غَضَبُ ٱلرَّبِّ عَلَى أَمَصْيَا وَأَرْسَلَ إِلَيْهِ نَبِيًّا فَقَالَ لَهُ: «لِمَاذَا طَلَبْتَ آلِهَةَ ٱلشَّعْبِ ٱلَّذِينَ لَمْ يُنْقِذُوا شَعْبَهُمْ مِنْ يَدِكَ؟» ١٥ 15
೧೫ಆಗ ಯೆಹೋವನು ಅಮಚ್ಯನ ಮೇಲೆ ಬಹಳವಾಗಿ ಕೋಪಗೊಂಡು, ಅವನ ಬಳಿಗೆ ಪ್ರವಾದಿಯನ್ನು ಕಳುಹಿಸಿ ಅವನಿಗೆ, “ನಿನ್ನ ಕೈಯಿಂದ ನಿನ್ನ ಜನರನ್ನು ರಕ್ಷಿಸಲಾರದೆ ಹೋದ ಅನ್ಯದೇವತೆಗಳಲ್ಲಿ ಏಕೆ ಇಷ್ಟು ಭಕ್ತಿ?” ಎಂದು ಕೇಳಿದನು.
وَفِيمَا هُوَ يُكَلِّمُهُ قَالَ لَهُ: «هَلْ جَعَلُوكَ مُشِيرًا لِلْمَلِكِ؟ كُفَّ! لِمَاذَا يَقْتُلُونَكَ؟» فَكَفَّ ٱلنَّبِيُّ وَقَالَ: «قَدْ عَلِمْتُ أَنَّ ٱللهَ قَدْ قَضَى بِهَلَاكِكَ لِأَنَّكَ عَمِلْتَ هَذَا وَلَمْ تَسْمَعْ لِمَشُورَتِي». ١٦ 16
೧೬ಆ ಮಾತನ್ನು ಹೇಳಿದ ಪ್ರವಾದಿಗೆ ಅರಸನು, “ನಿನ್ನನ್ನು ನನಗೆ ಆಲೋಚನಾಮಂತ್ರಿಯನ್ನಾಗಿ ನೇಮಿಸಿದವರು ಯಾರು?; ಸುಮ್ಮನಿರು, ನಿನಗೆ ಪೆಟ್ಟು ಬೇಕೋ?” ಎಂದನು. ಅವನು, “ನೀನು ನನ್ನ ಬುದ್ಧಿವಾದವನ್ನು ಆಲಿಸದೆ ಹೀಗೆ ಮಾಡುತ್ತಿರುವುದರಿಂದ ದೇವರು ನಿನ್ನನ್ನು ನಾಶ ಮಾಡಬೇಕೆಂದು ನಿಶ್ಚಯಿಸಿಕೊಂಡಿದ್ದಾನೆ ಎಂಬುದನ್ನು ನಾನು ಬಲ್ಲೆ” ಎಂದು ಹೇಳಿ ಸುಮ್ಮನಾದನು.
فَٱسْتَشَارَ أَمَصْيَا مَلِكُ يَهُوذَا، وَأَرْسَلَ إِلَى يُوآشَ بْنِ يَهُوآحَازَ بْنِ يَاهُو مَلِكِ إِسْرَائِيلَ قَائِلًا: «هَلُمَّ نَتَرَاءَ مُواجَهَةً». ١٧ 17
೧೭ಅನಂತರ ಯೆಹೂದದ ಅರಸನಾದ ಅಮಚ್ಯನು ಸಮಾಲೋಚನೆ ನಡೆಸಿ, ಯೇಹುವಿನ ಮೊಮ್ಮಗನೂ, ಯೆಹೋವಾಹಾಜನ ಮಗನೂ, ಇಸ್ರಾಯೇಲರ ಅರಸನೂ ಆದ ಯೋವಾಷನಿಗೆ, “ನಾವು ಒಬ್ಬರನ್ನೊಬ್ಬರು ಎದುರುಗೊಳ್ಳೋಣ” ಎಂದು ದೂತರ ಮುಖಾಂತರವಾಗಿ ಹೇಳಿ ಕಳುಹಿಸಿದನು.
فَأَرْسَلَ يُوآشُ مَلِكُ إِسْرَائِيلَ إِلَى أَمَصْيَا مَلِكِ يَهُوذَا قَائِلًا: «ٱلْعَوْسَجُ ٱلَّذِي فِي لُبْنَانَ أَرْسَلَ إِلَى ٱلْأَرْزِ ٱلَّذِي فِي لُبْنَانَ يَقُولُ: أَعْطِ ٱبْنَتَكَ لِٱبْنِي ٱمْرَأَةً. فَعَبَرَ حَيَوَانٌ بَرِّيٌّ كَانَ فِي لُبْنَانَ وَدَاسَ ٱلْعَوْسَجَ. ١٨ 18
೧೮ಆಗ ಇಸ್ರಾಯೇಲರ ಅರಸನಾದ ಯೋವಾಷನು ಯೆಹೂದ್ಯರ ಅರಸನಾದ ಅಮಚ್ಯನಿಗೆ, “ಲೆಬನೋನಿನ ಒಂದು ಮುಳ್ಳುಗಿಡವು, ಅಲ್ಲಿನ ದೇವದಾರು ಮರಕ್ಕೆ, ‘ನನ್ನ ಮಗನಿಗೆ ನಿನ್ನ ಮಗಳನ್ನು ಕೊಡು’ ಎಂದು ಹೇಳಿ ಕಳುಹಿಸಿತು. ತುಸು ಹೊತ್ತಾದ ಮೇಲೆ ಲೆಬನೋನಿನ ಒಂದು ಕಾಡುಮೃಗವು ಆ ಮಾರ್ಗವಾಗಿ ಹಾದು ಹೋಗುತ್ತಿರುವಾಗ, ಆ ಮುಳ್ಳುಗಿಡವನ್ನು ತುಳಿದು ಬಿಟ್ಟಿತು.
تَقُولُ: هَأَنَذَا قَدْ ضَرَبْتُ أَدُومَ، فَرَفَّعَكَ قَلْبُكَ لِلتَّمَجُّدِ! فَٱلْآنَ أَقِمْ فِي بَيْتِكَ. لِمَاذَا تَهْجُمُ عَلَى ٱلشَّرِّ فَتَسْقُطَ أَنْتَ وَيَهُوذَا مَعَكَ؟». ١٩ 19
೧೯ಅಹಹ! ಎದೋಮ್ಯರನ್ನು ಸೋಲಿಸಿ ಬಹಳ ಕೀರ್ತಿಯನ್ನು ಪಡಕೊಂಡೆ, ಎಂದು ನೀನು ಹೆಮ್ಮೆಪಡುತಿರುವೆ; ಸುಮ್ಮನೆ ಮನೆಯಲ್ಲಿ ಕುಳಿತುಕೊಳ್ಳಬಾರದೇ? ನನ್ನನ್ನು ಕೆಣಕಿ ನಿನಗೂ ನಿನ್ನ ಯೆಹೂದ ರಾಜ್ಯಕ್ಕೂ ಏಕೆ ಕೇಡನ್ನು ತಂದುಕೊಳ್ಳುವೆ” ಎಂದು ಉತ್ತರಕೊಟ್ಟನು.
فَلَمْ يَسْمَعْ أَمَصْيَا لِأَنَّهُ كَانَ مِنْ قِبَلِ ٱللهِ أَنْ يُسَلِّمَهُمْ، لِأَنَّهُمْ طَلَبُوا آلِهَةَ أَدُومَ. ٢٠ 20
೨೦ಅಮಚ್ಯನು ಆ ಮಾತನ್ನು ಲಕ್ಷಿಸಲಿಲ್ಲ; ಅದು ದೇವರ ಸಂಕಲ್ಪದಿಂದಲೇ ಆಯಿತು. ಯೆಹೂದ್ಯರು ಎದೋಮ್ಯರ ದೇವತೆಗಳಲ್ಲಿ ಭಕ್ತಿಯನ್ನಿಟ್ಟದ್ದರಿಂದ ಅವರನ್ನು ಅಪಜಯ ಮಾಡಬೇಕೆಂದು ಯೆಹೋವನು ನಿರ್ಣಯಿಸಿದ್ದನು.
وَصَعِدَ يُوآشُ مَلِكُ إِسْرَائِيلَ فَتَرَاءَيَا مُواجَهَةً، هُوَ وَأَمَصْيَا مَلِكُ يَهُوذَا، فِي بَيْتِ شَمْسٍ ٱلَّتِي لِيَهُوذَا. ٢١ 21
೨೧ಇಸ್ರಾಯೇಲರ ಅರಸನಾದ ಯೋವಾಷನು ಯುದ್ಧಕ್ಕೆ ಹೊರಟನು; ಅವನೂ ಯೆಹೂದದ ಅರಸನಾದ ಅಮಚ್ಯನೂ ಯೆಹೂದ ಪ್ರಾಂತ್ಯದ ಬೇತ್ಷೆಮೆಷಿನಲ್ಲಿ ಒಬ್ಬರನ್ನೊಬ್ಬರು ಎದುರುಗೊಂಡರು.
فَٱنْهَزَمَ يَهُوذَا أَمَامَ إِسْرَائِيلَ وَهَرَبُوا كُلُّ وَاحِدٍ إِلَى خَيْمَتِهِ. ٢٢ 22
೨೨ಯೆಹೂದ್ಯರು ಇಸ್ರಾಯೇಲ್ಯರಿಗೆ ಸೋತು ತಮ್ಮ ತಮ್ಮ ನಿವಾಸಗಳಿಗೆ ಓಡಿಹೋದರು.
وَأَمَّا أَمَصْيَا مَلِكُ يَهُوذَا ٱبْنُ يُوآشَ بْنِ يَهُوآحَازَ فَأَمْسَكَهُ يُوآشُ مَلِكُ إِسْرَائِيلَ فِي بَيْتِ شَمْسٍ وَجَاءَ بِهِ إِلَى أُورُشَلِيمَ، وَهَدَمَ سُورَ أُورُشَلِيمَ مِنْ بَابِ أَفْرَايِمَ إِلَى بَابِ ٱلزَّاوِيَةِ، أَرْبَعَ مِئَةِ ذِرَاعٍ. ٢٣ 23
೨೩ಇಸ್ರಾಯೇಲರ ಅರಸನಾದ ಯೋವಾಷನು, ಯೆಹೋವಾಹಾಜನ ಮೊಮ್ಮಗನೂ, ಯೆಹೋವಾಷನ ಮಗನೂ, ಯೆಹೂದದ ಅರಸನೂ, ಆದ ಅಮಚ್ಯನನ್ನು ಬೇತ್ಷೆಮೆಷಿನಲ್ಲಿ ಸೆರೆ ಹಿಡಿದನು. ಅವನನ್ನು ಯೆರೂಸಲೇಮಿಗೆ ಕರೆದುಕೊಂಡು ಬಂದು, ಎಫ್ರಾಯೀಮಿನ ಮುಂಬಾಗಿಲಿಗೂ, ಮೂಲೆಯ ಬಾಗಿಲಿಗೂ ಮಧ್ಯದಲ್ಲಿದ್ದ ಯೆರೂಸಲೇಮಿನ ಗೋಡೆಯನ್ನು ನಾನೂರು ಮೊಳದಷ್ಟು ಕೆಡವಿಹಾಕಿದ್ದಲ್ಲದೆ,
وَأَخَذَ كُلَّ ٱلذَّهَبِ وَٱلْفِضَّةِ وَكُلَّ ٱلْآنِيَةِ ٱلْمَوْجُودَةِ فِي بَيْتِ ٱللهِ مَعَ عُوبِيدَ أَدُومَ وَخَزَائِنِ بَيْتِ ٱلْمَلِكِ وَٱلرُّهَنَاءَ وَرَجَعَ إِلَى ٱلسَّامِرَةِ. ٢٤ 24
೨೪ಅವನು ಓಬೇದೆದೋಮನ ವಶದಲ್ಲಿದ್ದ ದೇವಾಲಯದ ಎಲ್ಲ ಬೆಳ್ಳಿಬಂಗಾರವನ್ನು, ಪಾತ್ರೆಗಳನ್ನು, ಅರಸನ ಅರಮನೆಯ ಭಂಡಾರಗಳಲ್ಲಿದ್ದುದೆಲ್ಲವನ್ನು ತೆಗೆದುಕೊಂಡು, ಹೊಣೆಗಾರರಾದ ಕೆಲವರನ್ನು ಸೆರೆ ಹಿಡಿದು ಸಮಾರ್ಯಕ್ಕೆ ಹಿಂದಿರುಗಿದನು.
وَعَاشَ أَمَصْيَا بْنُ يُوآشَ مَلِكُ يَهُوذَا بَعْدَ مَوْتِ يُوآشَ بْنِ يَهُوآحَازَ مَلِكِ إِسْرَائِيلَ خَمْسَ عَشَرَةَ سَنَةً. ٢٥ 25
೨೫ಇಸ್ರಾಯೇಲರ ಅರಸನೂ ಯೆಹೋವಾಹಾಜನ ಮಗನೂ ಆದ ಯೋವಾಷನು ಸತ್ತ ನಂತರ, ಯೆಹೂದದ ಅರಸನಾದ ಯೆಹೋವಾಷನ ಮಗ ಅಮಚ್ಯನು ಇನ್ನೂ ಹದಿನೈದು ವರ್ಷ ಬದುಕಿದ್ದನು.
وَبَقِيَّةُ أُمُورِ أَمَصْيَا ٱلْأُولَى وَٱلْأَخِيرَةِ، أَمَا هِيَ مَكْتُوبَةٌ فِي سِفْرِ مُلُوكِ يَهُوذَا وَإِسْرَائِيلَ.؟ ٢٦ 26
೨೬ಅಮಚ್ಯನ ಉಳಿದ ಪೂರ್ವೋತ್ತರ ಚರಿತ್ರೆಯು ಯೆಹೂದ್ಯರ ಮತ್ತು ಇಸ್ರಾಯೇಲರ ರಾಜರ ಗ್ರಂಥಗಳಲ್ಲಿ ಬರೆಯಲ್ಪಟ್ಟಿವೆ.
وَمِنْ حِينَ حَادَ أَمَصْيَا مِنْ وَرَاءِ ٱلرَّبِّ فَتَنُوا عَلَيْهِ فِي أُورُشَلِيمَ، فَهَرَبَ إِلَى لَخِيشَ، فَأَرْسَلُوا وَرَاءَهُ إِلَى لَخِيشَ وَقَتَلُوهُ هُنَاكَ، ٢٧ 27
೨೭ಅಮಚ್ಯನು ಯೆಹೋವನನ್ನು ತ್ಯಜಿಸಿದ್ದರಿಂದ ಯೆರೂಸಲೇಮಿನವರು ಅವನಿಗೆ ವಿರುದ್ಧವಾಗಿ ಒಳಸಂಚು ಮಾಡುತ್ತಿದ್ದರು. ಆದ್ದರಿಂದ ಅವನು ಲಾಕೀಷಿಗೆ ಓಡಿಹೋದನು; ಆದರೆ ಅವರು ಆಳುಗಳನ್ನು ಕಳುಹಿಸಿ ಅವನನ್ನು ಅಲ್ಲಿಯೇ ಕೊಲ್ಲಿಸಿದರು.
وَحَمَلُوهُ عَلَى ٱلْخَيْلِ وَدَفَنُوهُ مَعَ آبَائِهِ فِي مَدِينَةِ يَهُوذَا. ٢٨ 28
೨೮ಅವನ ಜನರು ಆ ಶವವನ್ನು ಕುದುರೆಯ ಮೇಲೆ ಯೆರೂಸಲೇಮ್ ಪಟ್ಟಣಕ್ಕೆ ತಂದು ಯೆಹೂದದ ರಾಜಧಾನಿಯೊಳಗೆ ಅವನ ಪೂರ್ವಿಕರ ಸ್ಮಶಾನದಲ್ಲಿ ಸಮಾಧಿಮಾಡಿದರು.

< ٢ أخبار 25 >