< صَمُوئِيلَ ٱلثَّانِي 9 >

وَقَالَ دَاوُدُ: «هَلْ يُوجَدُ بَعْدُ أَحَدٌ قَدْ بَقِيَ مِنْ بَيْتِ شَاوُلَ، فَأَصْنَعَ مَعَهُ مَعْرُوفًا مِنْ أَجْلِ يُونَاثَانَ؟» ١ 1
ದಾವೀದನು, “ಸೌಲನ ಕುಟುಂಬದಲ್ಲಿ ಯೋನಾತಾನನಿಗೋಸ್ಕರ ನಾನು ಅವನಿಗೆ ದಯೆ ತೋರಿಸುವ ಹಾಗೆ ಇನ್ನೂ ಯಾವನಾದರೂ ಉಳಿದಿದ್ದಾನೋ?” ಎಂದು ಕೇಳಿದನು.
وَكَانَ لِبَيْتِ شَاوُلَ عَبْدٌ ٱسْمُهُ صِيبَا، فَٱسْتَدْعَوْهُ إِلَى دَاوُدَ، وَقَالَ لَهُ ٱلْمَلِكُ: «أَأَنْتَ صِيبَا؟» فَقَالَ: «عَبْدُكَ». ٢ 2
ಆಗ ಸೌಲನ ಮನೆಯ ದಾಸನಾದ ಚೀಬನೆಂಬವನು ಇದ್ದನು. ಅವನನ್ನು ದಾವೀದನ ಬಳಿಗೆ ಕರೆತಂದರು. ಅರಸನು ಅವನಿಗೆ, “ನೀನು ಚೀಬನೋ?” ಎಂದನು. ಅದಕ್ಕವನು, “ನಿನ್ನ ದಾಸನು ನಾನೇ,” ಎಂದನು.
فَقَالَ ٱلْمَلِكُ: «أَلَا يُوجَدُ بَعْدُ أَحَدٌ لِبَيْتِ شَاوُلَ فَأَصْنَعَ مَعَهُ إِحْسَانَ ٱللهِ؟» فَقَالَ صِيبَا لِلْمَلِكِ: «بَعْدُ ٱبْنٌ لِيُونَاثَانَ أَعْرَجُ ٱلرِّجْلَيْنِ». ٣ 3
ಅರಸನು, “ನಾನು ದೇವರ ದಯೆ ತೋರಿಸುವ ಹಾಗೆ ಸೌಲನ ಕುಟುಂಬದಲ್ಲಿ ಇನ್ನೂ ಯಾವನಾದರೂ ಇದ್ದಾನೋ?” ಎಂದನು. ಆಗ ಚೀಬನು ಅರಸನಿಗೆ, “ಯೋನಾತಾನನಿಗೆ ಎರಡೂ ಕಾಲು ಕುಂಟಾದ ಮಗನಿದ್ದಾನೆ,” ಎಂದನು.
فَقَالَ لَهُ ٱلْمَلِكُ: «أَيْنَ هُوَ؟» فَقَالَ صِيبَا لِلْمَلِكِ: «هُوَذَا هُوَ فِي بَيْتِ مَاكِيرَ بْنِ عَمِّيئِيلَ فِي لُودَبَارَ». ٤ 4
“ಅವನು ಎಲ್ಲಿ ಇದ್ದಾನೆ?” ಎಂದು ಅರಸನು ಅವನನ್ನು ಕೇಳಿದನು. ಚೀಬನು ಅರಸನಿಗೆ, “ಅವನು ಲೋದೆಬಾರಲ್ಲಿ ಅಮ್ಮಿಯೇಲನ ಮಗ ಮಾಕೀರನ ಮನೆಯಲ್ಲಿ ಇದ್ದಾನೆ,” ಎಂದನು.
فَأَرْسَلَ ٱلْمَلِكُ دَاوُدُ وَأَخَذَهُ مِنْ بَيْتِ مَاكِيرَ بْنِ عَمِّيئِيلَ مِنْ لُودَبَارَ. ٥ 5
ಆಗ ಅರಸ ದಾವೀದನು ಲೋದೆಬಾರಿನಲ್ಲಿರುವ ಅಮ್ಮಿಯೇಲನ ಮಗ ಮಾಕೀರನ ಮನೆಯಿಂದ ಅವನನ್ನು ಕರೆಯಕಳುಹಿಸಿದನು.
فَجَاءَ مَفِيبُوشَثُ بْنُ يُونَاثَانَ بْنِ شَاوُلَ إِلَى دَاوُدَ وَخَرَّ عَلَى وَجْهِهِ وَسَجَدَ، فَقَالَ دَاوُدُ: «يَامَفِيبُوشَثُ». فَقَالَ: «هَأَنَذَا عَبْدُكَ». ٦ 6
ಸೌಲನ ಮಗನಾಗಿರುವ ಯೋನಾತಾನನ ಮಗ ಮೆಫೀಬೋಶೆತನು ದಾವೀದನ ಬಳಿಗೆ ಬಂದಾಗ, ಮೋರೆ ಕೆಳಗಾಗಿ ಬಿದ್ದು ವಂದಿಸಿದನು. ದಾವೀದನು, “ಮೆಫೀಬೋಶೆತನೇ,” ಎಂದನು. ಅವನು, “ಇಗೋ, ನಿನ್ನ ದಾಸನು,” ಎಂದನು.
فَقَالَ لَهُ دَاوُدُ: «لَا تَخَفْ. فَإِنِّي لَأَعْمَلَنَّ مَعَكَ مَعْرُوفًا مِنْ أَجْلِ يُونَاثَانَ أَبِيكَ، وَأَرُدُّ لَكَ كُلَّ حُقُولِ شَاوُلَ أَبِيكَ، وَأَنْتَ تَأْكُلُ خُبْزًا عَلَى مَائِدَتِي دَائِمًا». ٧ 7
ಆಗ ದಾವೀದನು ಅವನಿಗೆ, “ಭಯಪಡಬೇಡ, ಏಕೆಂದರೆ ನಿನ್ನ ತಂದೆಯಾದ ಯೋನಾತಾನನ ನಿಮಿತ್ತ ನಾನು ನಿನಗೆ ಖಂಡಿತವಾಗಿ ದಯೆ ತೋರಿಸುವೆನು. ನಿನ್ನ ಅಜ್ಜನಾದ ಸೌಲನ ಭೂಮಿಯನ್ನೆಲ್ಲಾ ನಿನಗೆ ತಿರುಗಿ ಕೊಡುವೆನು ಮತ್ತು ನೀನು ನನ್ನ ಮೇಜಿನಲ್ಲಿ ನಿತ್ಯವೂ ಭೋಜನ ಮಾಡುವೆ,” ಎಂದನು.
فَسَجَدَ وَقَالَ: «مَنْ هُوَ عَبْدُكَ حَتَّى تَلْتَفِتَ إِلَى كَلْبٍ مَيِّتٍ مِثْلِي؟». ٨ 8
ಆಗ ಅವನು ಅಡ್ಡಬಿದ್ದು, “ನೀನು ನನ್ನಂಥ ಸತ್ತ ನಾಯಿಯನ್ನು ದೃಷ್ಟಿಸುವ ಹಾಗೆ ನಿನ್ನ ದಾಸನು ಎಷ್ಟರವನು,” ಎಂದನು.
وَدَعَا ٱلْمَلِكُ صِيبَا غُلَامَ شَاوُلَ وَقَالَ لَهُ: «كُلُّ مَا كَانَ لِشَاوُلَ وَلِكُلِّ بَيْتِهِ قَدْ دَفَعْتُهُ لِٱبْنِ سَيِّدِكَ. ٩ 9
ಅನಂತರ ದಾವೀದನು ಸೌಲನ ಸೇವಕನಾದ ಚೀಬನನ್ನು ಕರೆದು, “ನಿನ್ನ ಯಜಮಾನ ಸೌಲನಿಗೂ, ಅವನ ಕುಟುಂಬದವರಿಗೂ ಇದ್ದ ಎಲ್ಲವನ್ನು ಅವನ ಮೊಮ್ಮಗನಿಗೆ ಕೊಟ್ಟಿರುತ್ತೇನೆ.
فَتَشْتَغِلُ لَهُ فِي ٱلْأَرْضِ أَنْتَ وَبَنُوكَ وَعَبِيدُكَ، وَتَسْتَغِلُّ لِيَكُونَ لِٱبْنِ سَيِّدِكَ خُبْزٌ لِيَأْكُلَ. وَمَفِيبُوشَثُ ٱبْنُ سَيِّدِكَ يَأْكُلُ دَائِمًا خُبْزًا عَلَى مَائِدَتِي». وَكَانَ لِصِيبَا خَمْسَةَ عَشَرَ ٱبْنًا وَعِشْرُونَ عَبْدًا. ١٠ 10
ಆದ್ದರಿಂದ ನೀನೂ, ನಿನ್ನ ಪುತ್ರರೂ, ನಿನ್ನ ದಾಸರೂ ನಿನ್ನ ಯಜಮಾನನ ಮಗನಿಗೆ ಆಹಾರ ಒದಗಿಸುವ ಹಾಗೆ, ಅವನಿಗೋಸ್ಕರ ಭೂಮಿಯನ್ನು ವ್ಯವಸಾಯಮಾಡಿ, ಅದರ ಫಲವನ್ನು ತರಬೇಕು. ಆದರೆ ನಿನ್ನ ಯಜಮಾನನ ಮೊಮ್ಮಗ ಮೆಫೀಬೋಶೆತನು ನಿತ್ಯವೂ ನನ್ನ ಮೇಜಿನಲ್ಲಿ ಊಟಮಾಡುವನು,” ಎಂದನು. ಈ ಚೀಬನಿಗೆ ಹದಿನೈದು ಮಂದಿ ಪುತ್ರರೂ ಇಪ್ಪತ್ತು ಮಂದಿ ದಾಸರೂ ಇದ್ದರು.
فَقَالَ صِيبَا لِلْمَلِكِ: «حَسَبَ كُلِّ مَا يَأْمُرُ بِهِ سَيِّدِي ٱلْمَلِكُ عَبْدَهُ كَذَلِكَ يَصْنَعُ عَبْدُكَ». «فَيَأْكُلُ مَفِيبُوشَثُ عَلَى مَائِدَتِي كَوَاحِدٍ مِنْ بَنِي ٱلْمَلِكِ». ١١ 11
ಆಗ ಚೀಬನು ಅರಸನಿಗೆ, “ಅರಸನಾದ ನನ್ನ ಒಡೆಯನು ತನ್ನ ದಾಸನಿಗೆ ಆಜ್ಞಾಪಿಸಿದ್ದನ್ನೆಲ್ಲಾ ನಿನ್ನ ದಾಸನು ಹಾಗೆಯೇ ಮಾಡುವನು,” ಎಂದನು. ಅರಸನ ಪುತ್ರರಲ್ಲಿ ಒಬ್ಬನ ಹಾಗೆ ಮೆಫೀಬೋಶೆತನು ಭೋಜನ ಮಾಡುವನೆಂದು ಅರಸನು ಹೇಳಿದನು.
وَكَانَ لِمَفِيبُوشَثَ ٱبْنٌ صَغِيرٌ ٱسْمُهُ مِيخَا. وَكَانَ جَمِيعُ سَاكِنِي بَيْتِ صِيبَا عَبِيدًا لِمَفِيبُوشَثَ. ١٢ 12
ಮೆಫೀಬೋಶೆತನಿಗೆ ಮೀಕನೆಂಬ ಹೆಸರುಳ್ಳ ಒಬ್ಬ ಮಗನಿದ್ದನು. ಚೀಬನ ಮನೆಯಲ್ಲಿ ವಾಸವಾಗಿದ್ದ ಸಮಸ್ತರೂ ಮೆಫೀಬೋಶೆತನಿಗೆ ದಾಸರಾಗಿದ್ದರು.
فَسَكَنَ مَفِيبُوشَثُ فِي أُورُشَلِيمَ، لِأَنَّهُ كَانَ يَأْكُلُ دَائِمًا عَلَى مَائِدَةِ ٱلْمَلِكِ. وَكَانَ أَعْرَجَ مِنْ رِجْلَيْهِ كِلْتَيْهِمَا. ١٣ 13
ಹೀಗೆಯೇ ಮೆಫೀಬೋಶೆತನು ಅರಸನ ಪಂಕ್ತಿಯಲ್ಲಿ ನಿತ್ಯವೂ ಭೋಜನ ಮಾಡುತ್ತಿದ್ದುದರಿಂದ ಯೆರೂಸಲೇಮಿನಲ್ಲೇ ವಾಸವಾಗಿದ್ದನು. ಅವನಿಗೆ ಎರಡೂ ಕಾಲು ಕುಂಟಾಗಿದ್ದವು.

< صَمُوئِيلَ ٱلثَّانِي 9 >