وَكَانَ إِلَيَّ كَلَامُ ٱلرَّبِّ قَائِلًا:١1
ಯೆಹೋವನು ಈ ವಾಕ್ಯವನ್ನು ನನಗೆ ದಯಪಾಲಿಸಿದನು,
«يَا ٱبْنَ آدَمَ، ٱجْعَلْ وَجْهَكَ نَحْوَ بَنِي عَمُّونَ وَتَنَبَّأْ عَلَيْهِمْ،٢2
“ನರಪುತ್ರನೇ, ನೀನು ಅಮ್ಮೋನಿಗೆ ವಿರುದ್ಧವಾಗಿ, ಅದರ ವಿಷಯದಲ್ಲಿ ದೈವಸಂಕಲ್ಪವನ್ನು ಪ್ರವಾದಿಸುತ್ತಾ ಅದಕ್ಕೆ ಹೀಗೆ ನುಡಿ,
وَقُلْ لِبَنِي عَمُّونَ: ٱسْمَعُوا كَلَامَ ٱلسَّيِّدِ ٱلرَّبِّ: هَكَذَا قَالَ ٱلسَّيِّدُ ٱلرَّبُّ: مِنْ أَجْلِ أَنَّكِ قُلْتِ: هَهْ! عَلَى مَقْدِسِي لِأَنَّهُ تَنَجَّسَ، وَعَلَى أَرْضِ إِسْرَائِيلَ لِأَنَّهَا خَرِبَتْ، وَعَلَى بَيْتِ يَهُوذَا لِأَنَّهُمْ ذَهَبُوا إِلَى ٱلسَّبْيِ،٣3
‘ಕರ್ತನಾದ ಯೆಹೋವನ ಮಾತನ್ನು ಕೇಳು’ ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ‘ಅಮ್ಮೋನೇ, ನನ್ನ ಪವಿತ್ರಾಲಯವು ಅಪವಿತ್ರವಾದದ್ದನ್ನು, ಇಸ್ರಾಯೇಲ್ ದೇಶವು ಹಾಳುಬಿದ್ದದನ್ನು, ಯೆಹೂದ ವಂಶದವರು ಸೆರೆಹೋದದ್ದನ್ನು ನೀನು ನೋಡಿ, “ಅಹಾ!” ಎಂದು ಹಿಗ್ಗಿಕೊಂಡೆ.
فَلِذَلِكَ هَأَنَذَا أُسَلِّمُكِ لِبَنِي ٱلْمَشْرِقِ مِلْكًا، فَيُقِيمُونَ صِيَرَهُمْ فِيكِ، وَيَجْعَلُونَ مَسَاكِنَهُمْ فِيكِ. هُمْ يَأْكُلُونَ غَلَّتَكِ وَهُمْ يَشْرَبُونَ لَبَنَكِ.٤4
ಆದುದರಿಂದ ಇಗೋ, ನಾನು ನಿನ್ನನ್ನು ಮೂಡಣದವರಿಗೆ ಬಾಧ್ಯವಾಗಿ ವಶಪಡಿಸುವೆನು; ಅವರು ನಿನ್ನಲ್ಲಿ ತಮ್ಮ ಗುಡಾರಗಳನ್ನು ಹಾಕಿ ಪಾಳೆಯಮಾಡಿಕೊಳ್ಳುವರು; ನಿನ್ನ ಹಣ್ಣನ್ನು ತಿಂದು, ನಿನ್ನ ಹಾಲನ್ನು ಕುಡಿದುಬಿಡುವರು.
وَأَجْعَلُ «رَبَّةَ» مَنَاخًا لِلْإِبِلِ، وَبَنِي عَمُّونَ مَرْبِضًا لِلْغَنَمِ، فَتَعْلَمُونَ أَنِّي أَنَا ٱلرَّبُّ.٥5
ನಾನು ರಬ್ಬಾ ಪಟ್ಟಣವನ್ನು ಒಂಟೆಗಳಿಗೆ ಲಾಯವನ್ನಾಗಿಯೂ, ಅಮ್ಮೋನ್ ಸೀಮೆಯನ್ನು ಹಿಂಡುಗಳಿಗೆ ತಂಗುವ ಸ್ಥಳವನ್ನಾಗಿಯೂ ಮಾಡುವೆನು. ನಾನೇ ಯೆಹೋವನು ಎಂದು ನಿಮಗೆ ಗೊತ್ತಾಗುವುದು.’”
لِأَنَّهُ هَكَذَا قَالَ ٱلسَّيِّدُ ٱلرَّبُّ: مِنْ أَجْلِ أَنَّكَ صَفَّقْتَ بِيَدَيْكَ وَخَبَطْتَ بِرِجْلَيْكَ وَفَرِحْتَ بِكُلِّ إِهَانَتِكَ لِلْمَوْتِ عَلَى أَرْضِ إِسْرَائِيلَ.٦6
ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನೀನು ಚಪ್ಪಾಳೆ ಹೊಡೆದು, ಕಾಲಿನಿಂದ ನೆಲವನ್ನು ಬಡಿದು, ಇಸ್ರಾಯೇಲ್ ದೇಶವನ್ನು ಮನಃಪೂರ್ವಕವಾಗಿ ತಿರಸ್ಕರಿಸಿ, ಅದರ ಗತಿಗೆ ಹಿಗ್ಗಿಕೊಂಡೆ.
فَلِذَلِكَ هَأَنَذَا أَمُدُّ يَدِي عَلَيْكَ وَأُسَلِّمُكَ غَنِيمَةً لِلْأُمَمِ، وَأَسْتَأْصِلُكَ مِنَ ٱلشُّعُوبِ، وَأُبِيدُكَ مِنَ ٱلْأَرَاضِي. أَخْرِبُكَ، فَتَعْلَمُ أَنِّي أَنَا ٱلرَّبُّ.٧7
ಆದುದರಿಂದ ಇಗೋ, ನಾನು ನಿನ್ನ ಮೇಲೆ ಕೈಯೆತ್ತಿ ನಿನ್ನನ್ನು ಸುಲಿಗೆಗಾಗಿ ಮ್ಲೇಚ್ಛರಿಗೆ ವಶಪಡಿಸಿ, ಜನಾಂಗಗಳೊಳಗಿಂದ ಕಿತ್ತುಬಿಟ್ಟು, ದೇಶಗಳೊಳಗಿಂದ ನಿನ್ನ ಹೆಸರನ್ನು ಅಳಿಸಿ, ನಿನ್ನನ್ನು ಹಾಳುಮಾಡುವೆನು; ಆಗ ನಾನೇ ಯೆಹೋವನು ಎಂದು ನಿನಗೆ ಗೊತ್ತಾಗುವುದು.”
«هَكَذَا قَالَ ٱلسَّيِّدُ ٱلرَّبُّ: مِنْ أَجْلِ أَنَّ مُوآبَ وَسَعِيرَ يَقُولُونَ: هُوَذَا بَيْتُ يَهُوذَا مِثْلُ كُلِّ ٱلْأُمَمِ.٨8
ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಆಹಾ, ಯೆಹೂದ ವಂಶವು ಎಲ್ಲಾ ಜನಾಂಗಗಳ ಹಾಗೆಯೇ ಇದೆ, ವಿಶೇಷವೇನು? ಎಂದು ಮೋವಾಬೂ ಮತ್ತು ಸೇಯೀರೂ ಅಂದುಕೊಂಡಿದೆ.
لِذَلِكَ هَأَنَذَا أَفْتَحُ جَانِبَ مُوآبَ مِنَ ٱلْمُدُنِ، مِنْ مَدُنِهِ مِنْ أَقْصَاهَا، بَهَاءِ ٱلْأَرْضِ، بَيْتِ بَشِيمُوتَ وَبَعْلِ مَعُونَ وَقِرْيَتَايِمَ،٩9
ಆದುದರಿಂದ, ಇಗೋ, ದೇಶಭೂಷಣಗಳಾದ ಮೋವಾಬಿನ ಗಡಿಯ ಪಟ್ಟಣಗಳು, ಅಂದರೆ ಬೇತ್ ಯೆಷೀಮೋತ್, ಬಾಳ್ ಮೆಯೋನ್, ಕಿರ್ಯಾಥಯಿಮ್ ಎಂಬ ಪಟ್ಟಣಗಳು ಇರುವ ಕಡೆಯಲ್ಲಿ ನಾನು ಮೋವಾಬಿನ ಮೇರೆಯನ್ನು ಒಡೆದುಬಿಡುವೆನು.
لِبَنِي ٱلْمَشْرِقِ عَلَى بَنِي عَمُّونَ، وَأَجْعَلُهُمْ مُلْكًا، لِكَيْلَا يُذْكَرَ بَنُو عَمُّونَ بَيْنَ ٱلْأُمَمِ.١٠10
೧೦ಆ ಸೀಮೆಯನ್ನಲ್ಲದೆ, ಅಮ್ಮೋನನ್ನೂ ಮೂಡಣದವರಿಗೆ ಬಾಧ್ಯವಾಗಿ ಕೊಟ್ಟು, ಅಮ್ಮೋನ್ಯರು ಜನಾಂಗಗಳೊಳಗೆ ನಿರ್ನಾಮವಾಗಬೇಕೆಂಬ ನನ್ನ ಸಂಕಲ್ಪವನ್ನು ನೆರವೇರಿಸುವೆನು.
وَبِمُوآبَ أُجْرِي أَحْكَامًا، فَيَعْلَمُونَ أَنِّي أَنَا ٱلرَّبُّ.١١11
೧೧ಮೋವಾಬ್ಯರಿಗೂ ದಂಡನೆಗಳನ್ನು ವಿಧಿಸಿ ತೀರಿಸುವೆನು. ಆಗ ನಾನೇ ಯೆಹೋವನು ಎಂದು ಅವರಿಗೆ ಗೊತ್ತಾಗುವುದು.”
«هَكَذَا قَالَ ٱلسَّيِّدُ ٱلرَّبُّ: مِنْ أَجْلِ أَنَّ أَدُومَ قَدْ عَمِلَ بِالِٱنْتِقَامِ عَلَى بَيْتِ يَهُوذَا وَأَسَاءَ إِسَاءَةً وَٱنْتَقَمَ مِنْهُ،١٢12
೧೨ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಎದೋಮು ಯೆಹೂದ ವಂಶಕ್ಕೆ ಪ್ರತೀಕಾರಮಾಡಿದೆ; ಮುಯ್ಯಿಗೆ ಮುಯ್ಯಿ ತೀರಿಸಿ ಮಹಾಪರಾಧವನ್ನು ನಡೆಸಿದೆ.”
لِذَلِكَ هَكَذَا قَالَ ٱلسَّيِّدُ ٱلرَّبُّ: وَأَمُدُّ يَدِي عَلَى أَدُومَ، وَأَقْطَعُ مِنْهَا ٱلْإِنْسَانَ وَٱلْحَيَوَانَ، وَأُصَيِّرُهَا خَرَابًا. مِنَ ٱلتَّيْمَنِ وَإِلَى دَدَانَ يَسْقُطُونَ بِٱلسَّيْفِ.١٣13
೧೩ಹೀಗಿರಲು ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನಾನು ಎದೋಮಿನ ಮೇಲೆ ಕೈಯೆತ್ತಿ, ಅದರೊಳಗಿಂದ ಜನರನ್ನೂ ಮತ್ತು ಪಶುಗಳನ್ನೂ ನಿರ್ಮೂಲಮಾಡಿ, ತೇಮಾನಿನಿಂದ ದೆದಾನಿನವರೆಗೂ ಅದನ್ನು ಹಾಳುಮಾಡಿ, ಪ್ರಜೆಗಳನ್ನು ಖಡ್ಗಕ್ಕೆ ಸಿಕ್ಕಿಸುವೆನು.
وَأَجْعَلُ نَقْمَتِي فِي أَدُومَ بِيَدِ شَعْبِي إِسْرَائِيلَ، فَيَفْعَلُونَ بِأَدُومَ كَغَضَبِي وَكَسَخَطِي، فَيَعْرِفُونَ نَقْمَتِي، يَقُولُ ٱلسَّيِّدُ ٱلرَّبُّ.١٤14
೧೪ನಾನು ಎದೋಮಿಗೆ ನನ್ನ ಜನರಾದ ಇಸ್ರಾಯೇಲರ ಕೈಯಿಂದ ಮುಯ್ಯಿ ತೀರಿಸುವೆನು; ಅವರು ನನ್ನ ಕೋಪರೋಷಗಳಿಗೆ ತಕ್ಕ ಹಾಗೆ ಅದಕ್ಕೆ ಮಾಡುವರು; ನನ್ನ ಪ್ರತೀಕಾರವು ಎದೋಮಿನ ಅನುಭವಕ್ಕೆ ಬರುವುದು” ಇದು ಕರ್ತನಾದ ಯೆಹೋವನ ನುಡಿ.
«هَكَذَا قَالَ ٱلسَّيِّدُ ٱلرَّبُّ: مِنْ أَجْلِ أَنَّ ٱلْفِلِسْطِينِيِّينَ قَدْ عَمِلُوا بِالِٱنْتِقَامِ، وَٱنْتَقَمُوا نَقْمَةً بِٱلْإِهَانَةِ إِلَى ٱلْمَوْتِ لِلْخَرَابِ مِنْ عَدَاوَةٍ أَبَدِيَّةٍ،١٥15
೧೫ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಫಿಲಿಷ್ಟಿಯರು ಯೆಹೂದಕ್ಕೆ ಪ್ರತೀಕಾರಮಾಡಿದ್ದಾರೆ; ಹೌದು, ಮುಯ್ಯಿಗೆಮುಯ್ಯಿ ತೀರಿಸುತ್ತಾ ಅದನ್ನು ಮನಃಪೂರ್ವಕವಾಗಿ ತಿರಸ್ಕರಿಸಿ ದೀರ್ಘದ್ವೇಷದಿಂದ ಹಾಳುಮಾಡಿದ್ದಾರೆ.”
فَلِذَلِكَ هَكَذَا قَالَ ٱلسَّيِّدُ ٱلرَّبُّ: هَأَنَذَا أَمُدُّ يَدِي عَلَى ٱلْفِلِسْطِينِيِّينَ وَأَسْتَأْصِلُ ٱلْكَرِيتِيِّينَ، وَأُهْلِكُ بَقِيَّةَ سَاحِلِ ٱلْبَحْرِ.١٦16
೧೬ಹೀಗಿರಲು ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಇಗೋ, ನಾನು ಫಿಲಿಷ್ಟಿಯರ ಮೇಲೆ ಕೈಯೆತ್ತುವೆನು; ಕೆರೇತಿಯರನ್ನು ಕತ್ತರಿಸಿಬಿಟ್ಟು, ಸಮುದ್ರತೀರದಲ್ಲಿನ ಜನಶೇಷವನ್ನು ನಿಶ್ಶೇಷಮಾಡುವೆನು.
وَأُجْرِي عَلَيْهِمْ نَقْمَاتٍ عَظِيمَةً بِتَأْدِيبِ سَخَطٍ، فَيَعْلَمُونَ أَنِّي أَنَا ٱلرَّبُّ، إِذْ أَجْعَلُ نَقْمَتِي عَلَيْهِمْ».١٧17
೧೭ಅವರೆಲ್ಲರನ್ನು ಬಲವಾಗಿ ಖಂಡಿಸಿ ಮುಯ್ಯಿಗೆಮುಯ್ಯಿ ತೀರಿಸುವೆನು; ಹೀಗೆ ಪ್ರತೀಕಾರಮಾಡುವುದರಿಂದ ನಾನೇ ಯೆಹೋವನು ಎಂದು ಅವರಿಗೆ ಗೊತ್ತಾಗುವುದು.”