< اَلتَّكْوِينُ 37 >

وَسَكَنَ يَعْقُوبُ فِي أَرْضِ غُرْبَةِ أَبِيهِ، فِي أَرْضِ كَنْعَانَ. ١ 1
ಯಾಕೋಬನು ತನ್ನ ತಂದೆಯು ಪ್ರವಾಸವಾಗಿದ್ದ ಕಾನಾನ್ ದೇಶದಲ್ಲಿ ವಾಸವಾಗಿದ್ದನು.
هَذِهِ مَوَالِيدُ يَعْقُوبَ: يُوسُفُ إِذْ كَانَ ٱبْنَ سَبْعَ عَشَرَةَ سَنَةً، كَانَ يَرْعَى مَعَ إِخْوَتِهِ ٱلْغَنَمَ وَهُوَ غُلَامٌ عِنْدَ بَنِي بِلْهَةَ وَبَنِي زِلْفَةَ ٱمْرَأَتَيْ أَبِيهِ، وَأَتَى يُوسُفُ بِنَمِيمَتِهِمِ ٱلرَّدِيئَةِ إِلَى أَبِيهِمْ. ٢ 2
ಇದು ಯಾಕೋಬನ ವಂಶದವರ ಚರಿತ್ರೆ: ಯೋಸೇಫನು ಹದಿನೇಳು ವರ್ಷದವನಾಗಿದ್ದಾಗ ತನ್ನ ಅಣ್ಣಂದಿರ ಜೊತೆಯಲ್ಲಿ ಅಂದರೆ, ತನ್ನ ತಂದೆಯ ಹೆಂಡತಿಯರಾದ ಬಿಲ್ಹಾ ಮತ್ತು ಜಿಲ್ಪಾರ ಮಕ್ಕಳ ಜೊತೆಯಲ್ಲಿ ಆಡು ಕುರಿಗಳನ್ನು ಮೇಯಿಸುತ್ತಿದ್ದನು. ಅವರು ಏನಾದರೂ ಕೆಟ್ಟ ಕೆಲಸ ಮಾಡುವಾಗ ಅವನು ತಂದೆಗೆ ತಿಳಿಸುತ್ತಿದ್ದನು.
وَأَمَّا إِسْرَائِيلُ فَأَحَبَّ يُوسُفَ أَكْثَرَ مِنْ سَائِرِ بَنِيهِ لِأَنَّهُ ٱبْنُ شَيْخُوخَتِهِ، فَصَنَعَ لَهُ قَمِيصًا مُلَوَّنًا. ٣ 3
ಯೋಸೇಫನು ಇಸ್ರಾಯೇಲನಿಗೆ ಮುಪ್ಪಿನಲ್ಲಿ ಹುಟ್ಟಿದವನಾಗಿದ್ದುದರಿಂದ ಅವನನ್ನು ತನ್ನ ಎಲ್ಲಾ ಮಕ್ಕಳಿಗಿಂತ ಹೆಚ್ಚಾಗಿ ಪ್ರೀತಿಸುತ್ತಿದ್ದನು, ಅಲ್ಲದೆ ಅವನಿಗೆ ಬಣ್ಣಬಣ್ಣದ ಒಂದು ನಿಲುವಂಗಿಯನ್ನು ಹೊಲಿಸಿ ಕೊಟ್ಟಿದ್ದನು.
فَلَمَّا رَأَى إِخْوَتُهُ أَنَّ أَبَاهُمْ أَحَبَّهُ أَكْثَرَ مِنْ جَمِيعِ إِخْوَتِهِ أَبْغَضُوهُ، وَلَمْ يَسْتَطِيعُوا أَنْ يُكَلِّمُوهُ بِسَلَامٍ. ٤ 4
ಅವನ ಅಣ್ಣತಮ್ಮಂದಿರು, ತಮ್ಮ ತಂದೆಯು ಎಲ್ಲಾ ಮಕ್ಕಳಿಗಿಂತಲೂ ಇವನನ್ನೇ ಹೆಚ್ಚಾಗಿ ಪ್ರೀತಿಸುತ್ತಿರುವುದನ್ನು ನೋಡಿ ಯೋಸೇಫನನ್ನು ಹಗೆಮಾಡಿ ಅವನೊಡನೆ ಸ್ನೇಹಭಾವದಿಂದ ಮಾತನಾಡಲಾರದೆ ಹೋದರು.
وَحَلُمَ يُوسُفُ حُلْمًا وَأَخْبَرَ إِخْوَتَهُ، فَٱزْدَادُوا أَيْضًا بُغْضًا لَهُ. ٥ 5
ಒಂದು ದಿನ ಯೋಸೇಫನು ಕನಸು ಕಂಡು ಅದನ್ನು ತನ್ನ ಅಣ್ಣಂದಿರಿಗೆ ತಿಳಿಸಿದಾಗ ಅವರು ಅವನನ್ನು ಇನ್ನೂ ಹೆಚ್ಚಾಗಿ ದ್ವೇಷಿಸಿದರು.
فَقَالَ لَهُمُ: «ٱسْمَعُوا هَذَا ٱلْحُلْمَ ٱلَّذِي حَلُمْتُ: ٦ 6
ಅವನು ಅವರಿಗೆ, “ನಾನು ಕನಸಿನಲ್ಲಿ ಕಂಡದ್ದನ್ನು ಹೇಳುತ್ತೇನೆ, ದಯವಿಟ್ಟು ಕೇಳಿರಿ.
فَهَا نَحْنُ حَازِمُونَ حُزَمًا فِي ٱلْحَقْلِ، وَإِذَا حُزْمَتِي قَامَتْ وَٱنْتَصَبَتْ، فَٱحْتَاطَتْ حُزَمُكُمْ وَسَجَدَتْ لِحُزْمَتِي». ٧ 7
ಆ ಕನಸಿನಲ್ಲಿ ನಾವು ಹೊಲದಲ್ಲಿ ಸಿವುಡುಗಳನ್ನು ಕಟ್ಟುತ್ತಾ ಇದ್ದೆವು. ಆಗ ನನ್ನ ಸಿವುಡು ಎದ್ದು ನಿಂತಿತು. ನಿಮ್ಮ ಸಿವುಡುಗಳು ಸುತ್ತಲೂ ಬಂದು ನನ್ನ ಸಿವುಡಿಗೆ ಅಡ್ಡಬಿದ್ದದ್ದನ್ನು ಕಂಡೆನು” ಎಂದು ಹೇಳಿದನು.
فَقَالَ لَهُ إِخْوَتُهُ: «أَلَعَلَّكَ تَمْلِكُ عَلَيْنَا مُلْكًا أَمْ تَتَسَلَّطُ عَلَيْنَا تَسَلُّطًا؟» وَٱزْدَادُوا أَيْضًا بُغْضًا لَهُ مِنْ أَجْلِ أَحْلَامِهِ وَمِنْ أَجْلِ كَلَامِهِ. ٨ 8
ಅದಕ್ಕೆ ಅವನ ಅಣ್ಣಂದಿರು ಅವನಿಗೆ, “ನೀನು ನಿಜವಾಗಿ ನಮ್ಮನ್ನು ಆಳುವಿಯಾ? ನೀನು ನಮ್ಮ ಮೇಲೆ ದೊರೆತನ ಮಾಡುವಿಯಾ?” ಎಂದು ಹೇಳಿ ಅವನ ಕನಸುಗಳಿಗಾಗಿಯೂ, ಅದನ್ನು ಅವನು ಅವರಿಗೆ ತಿಳಿಸಿದ್ದಕ್ಕಾಗಿಯು ಮತ್ತಷ್ಟು ಅವನನ್ನು ದ್ವೇಷಿಸಿದರು.
ثُمَّ حَلُمَ أَيْضًا حُلْمًا آخَرَ وَقَصَّهُ عَلَى إِخْوَتِهِ، فَقَالَ: «إِنِّي قَدْ حَلُمْتُ حُلْمًا أَيْضًا، وَإِذَا ٱلشَّمْسُ وَٱلْقَمَرُ وَأَحَدَ عَشَرَ كَوْكَبًا سَاجِدَةٌ لِي». ٩ 9
ಅವನು ಇನ್ನೊಂದು ಕನಸನ್ನು ಕಂಡನು. ಅದನ್ನು ತನ್ನ ಅಣ್ಣಂದಿರಿಗೆ ತಿಳಿಸಿದನು. ಅವನು ಅವರಿಗೆ, “ಇನ್ನೊಂದು ಕನಸು ಕಂಡಿದ್ದೇನೆ. ಅದರಲ್ಲಿ ಸೂರ್ಯಚಂದ್ರರೂ, ಹನ್ನೊಂದು ನಕ್ಷತ್ರಗಳೂ ನನಗೆ ಅಡ್ಡ ಬಿದ್ದವು” ಎಂದು ಹೇಳಿದನು.
وَقَصَّهُ عَلَى أَبِيهِ وَعَلَى إِخْوَتِهِ، فَٱنْتَهَرَهُ أَبُوهُ وَقَالَ لَهُ: «مَا هَذَا ٱلْحُلْمُ ٱلَّذِي حَلُمْتَ؟ هَلْ نَأْتِي أَنَا وَأُمُّكَ وَإِخْوَتُكَ لِنَسْجُدَ لَكَ إِلَى ٱلْأَرْضِ؟» ١٠ 10
೧೦ಅವನು ಈ ಕನಸನ್ನು ತನ್ನ ತಂದೆಗೂ ಮತ್ತು ಅಣ್ಣಂದಿರಿಗೂ ತಿಳಿಸಿದಾಗ ತಂದೆಯು ಅವನಿಗೆ, “ಇದು ಎಂಥಾ ಕನಸು ನೀನು ಕಂಡದ್ದು? ನಾನೂ ನಿನ್ನ ತಾಯಿಯೂ, ಅಣ್ಣತಮ್ಮಂದಿರೂ ನಿನ್ನ ಮುಂದೆ ಅಡ್ಡ ಬೀಳುವುದಕ್ಕೆ ಬಂದೆವೋ?” ಎಂದು ಹೇಳಿ ಗದರಿಸಿದನು.
فَحَسَدَهُ إِخْوَتُهُ، وَأَمَّا أَبُوهُ فَحَفِظَ ٱلْأَمْرَ. ١١ 11
೧೧ಹೀಗೆ ಯೋಸೇಫನ ಅಣ್ಣಂದಿರು ಅವನ ಮೇಲೆ ಹೊಟ್ಟೆಕಿಚ್ಚುಪಟ್ಟರು. ಆದರೆ ಅವನ ತಂದೆಯು ಅವನ ಮಾತುಗಳನ್ನು ಮನಸ್ಸಿನಲ್ಲಿ ಇಟ್ಟುಕೊಂಡನು.
وَمَضَى إِخْوَتُهُ لِيَرْعَوْا غَنَمَ أَبِيهِمْ عِنْدَ شَكِيمَ. ١٢ 12
೧೨ಅವನ ಅಣ್ಣಂದಿರು ತಂದೆಯ ಆಡುಕುರಿ ಹಿಂಡುಗಳನ್ನು ಮೇಯಿಸುವುದಕ್ಕೆ ಶೆಕೆಮಿಗೆ ಹೋದರು.
فَقَالَ إِسْرَائِيلُ لِيُوسُفَ: «أَلَيْسَ إِخْوَتُكَ يَرْعَوْنَ عِنْدَ شَكِيمَ؟ تَعَالَ فَأُرْسِلَكَ إِلَيْهِمْ». فَقَالَ لَهُ: «هَأَنَذَا». ١٣ 13
೧೩ಇಸ್ರಾಯೇಲನು ಯೋಸೇಫನಿಗೆ, “ನಿನ್ನ ಅಣ್ಣಂದಿರು ಶೆಕೆಮಿನಲ್ಲಿ ಆಡುಕುರಿಗಳನ್ನು ಮೇಯಿಸುತ್ತಿದ್ದಾರಲ್ಲಾ ಅವರ ಬಳಿಗೆ ನಿನ್ನನ್ನು ಕಳುಹಿಸುತ್ತೇನೆ, ಹೋಗು” ಎಂದು ಹೇಳಿದನು. ಅದಕ್ಕೆ ಅವನು, “ಆಗಲಿ, ಹೋಗುತ್ತೇನೆ” ಎಂದನು.
فَقَالَ لَهُ: «ٱذْهَبِ ٱنْظُرْ سَلَامَةَ إِخْوَتِكَ وَسَلَامَةَ ٱلْغَنَمِ وَرُدَّ لِي خَبَرًا». فَأَرْسَلَهُ مِنْ وَطَاءِ حَبْرُونَ فَأَتَى إِلَى شَكِيمَ. ١٤ 14
೧೪ಇಸ್ರಾಯೇಲ್ಯನು ಅವನಿಗೆ, “ನೀನು ಶೆಕೆಮಿಗೆ ಹೋಗಿ ನಿನ್ನ ಅಣ್ಣಂದಿರ ಯೋಗ ಕ್ಷೇಮವನ್ನೂ, ಆಡುಕುರಿಗಳ ಹಿಂಡಿನ ಯೋಗ ಕ್ಷೇಮವನ್ನೂ ವಿಚಾರಿಸಿಕೊಂಡು ಬಾ” ಎಂದು ಅಪ್ಪಣೆ ಕೊಟ್ಟು, ಅವನನ್ನು ಹೆಬ್ರೋನ್ ಕಣಿವೆಯಿಂದ ಕಳುಹಿಸಲು ಯೋಸೇಫನು ಹೊರಟನು.
فَوَجَدَهُ رَجُلٌ وَإِذَا هُوَ ضَالٌّ فِي ٱلْحَقْلِ. فَسَأَلَهُ ٱلرَّجُلُ قَائِلًا: «مَاذَا تَطْلُبُ؟» ١٥ 15
೧೫ಅವನು ಶೆಕೆಮಿಗೆ ಬಂದು ಅಲ್ಲಿ ಅಡವಿಯೊಳಗೆ ತಿರುಗಾಡುತ್ತಿರುವಾಗ ಒಬ್ಬ ಮನುಷ್ಯನು ಅವನನ್ನು ಕಂಡು, “ಏನು ಹುಡುಕುತ್ತೀ?” ಎಂದು ವಿಚಾರಿಸಿದನು.
فَقَالَ: «أَنَا طَالِبٌ إِخْوَتِي. أَخْبِرْنِي «أَيْنَ يَرْعَوْنَ؟». ١٦ 16
೧೬ಅದಕ್ಕೆ ಅವನು, “ನನ್ನ ಅಣ್ಣಂದಿರನ್ನು ಹುಡುಕುತ್ತಾ ಇದ್ದೇನೆ. ಅವರು ಆಡುಕುರಿಗಳನ್ನು ಎಲ್ಲಿ ಮೇಯಿಸುತ್ತಾರೆ ದಯವಿಟ್ಟು ಹೇಳು” ಎಂದನು.
فَقَالَ ٱلرَّجُلُ: «قَدِ ٱرْتَحَلُوا مِنْ هُنَا، لِأَنِّي سَمِعْتُهُمْ يَقُولُونَ: لِنَذْهَبْ إِلَى دُوثَانَ». فَذَهَبَ يُوسُفُ وَرَاءَ إِخْوَتِهِ فَوَجَدَهُمْ فِي دُوثَانَ. ١٧ 17
೧೭ಅದಕ್ಕೆ ಆ ಮನುಷ್ಯನು, “ಅವರು ಇಲ್ಲಿಂದ ಹೊರಟುಹೋದರು. ಅವರು ನಾವು ದೋತಾನಿಗೆ ಹೋಗೋಣ ಎಂಬುದಾಗಿ ಮಾತನಾಡುವುದನ್ನು ನಾನು ಕೇಳಿಸಿಕೊಂಡೆನು” ಎಂದು ಹೇಳಲು ಯೋಸೇಫನು ಅವರನ್ನು ಹುಡುಕುತ್ತಾ ಹೋಗಿ ದೋತಾನಿನಲ್ಲಿ ಅವರನ್ನು ಕಂಡನು.
فَلَمَّا أَبْصَرُوهُ مِنْ بَعِيدٍ، قَبْلَمَا ٱقْتَرَبَ إِلَيْهِمِ، ٱحْتَالُوا لَهُ لِيُمِيتُوهُ. ١٨ 18
೧೮ಅವರು ಅವನನ್ನು ದೂರದಿಂದ ನೋಡಿ ಅವನು ತಮ್ಮ ಬಳಿಗೆ ಬರುವಷ್ಟರೊಳಗೆ ಅವನನ್ನು ಕೊಲ್ಲುವುದಕ್ಕೆ ಒಳಸಂಚು ಮಾಡಿಕೊಂಡರು.
فَقَالَ بَعْضُهُمْ لِبَعْضٍ: «هُوَذَا هَذَا صَاحِبُ ٱلْأَحْلَامِ قَادِمٌ. ١٩ 19
೧೯ಅವರು ಒಬ್ಬರಿಗೊಬ್ಬರು, “ಅಗೋ ಆ ಕನಸುಗಾರನು ಬರುತ್ತಿದ್ದಾನೆ ನೋಡಿರಿ
فَٱلْآنَ هَلُمَّ نَقْتُلْهُ وَنَطْرَحْهُ فِي إِحْدَى ٱلْآبَارِ وَنَقُولُ: وَحْشٌ رَدِيءٌ أَكَلَهُ. فَنَرَى مَاذَا تَكُونُ أَحْلَامُهُ». ٢٠ 20
೨೦ಬನ್ನಿರಿ, ಈಗ ನಾವು ಅವನನ್ನು ಕೊಂದು ಈ ಗುಂಡಿಗಳಲ್ಲಿ ಒಂದರೊಳಗೆ ಹಾಕಿ, ಕಾಡುಮೃಗವು ಅವನನ್ನು ತಿಂದು ಬಿಟ್ಟಿತೆಂದು ಹೇಳೋಣ. ಆಗ ಅವನ ಕನಸುಗಳು ಏನಾಗುವವೋ? ನೋಡೋಣ” ಎಂದು ಒಬ್ಬರಿಗೊಬ್ಬರು ಮಾತನಾಡಿಕೊಂಡರು.
فَسَمِعَ رَأُوبَيْنُ وَأَنْقَذَهُ مِنْ أَيْدِيهِمْ، وَقَالَ: «لَا نَقْتُلُهُ». ٢١ 21
೨೧ರೂಬೇನನು ಈ ಮಾತನ್ನು ಕೇಳಿ, “ನಾವು ಅವನ ಪ್ರಾಣವನ್ನು ತೆಗೆಯಬಾರದು” ಎಂದು ಹೇಳಿದನು.
وَقَالَ لَهُمْ رَأُوبَيْنُ: «لَا تَسْفِكُوا دَمًا. اِطْرَحُوهُ فِي هَذِهِ ٱلْبِئْرِ ٱلَّتِي فِي ٱلْبَرِّيَّةِ وَلَا تَمُدُّوا إِلَيْهِ يَدًا». لِكَيْ يُنْقِذَهُ مِنْ أَيْدِيهِمْ لِيَرُدَّهُ إِلَى أَبِيهِ. ٢٢ 22
೨೨ರೂಬೇನನು ಅವನನ್ನು ಅವರ ಕೈಯಿಂದ ತಪ್ಪಿಸಿ ತಂದೆಗೆ ತಿರುಗಿ ಒಪ್ಪಿಸಬೇಕೆಂದು ನೆನಸಿ ಅವರಿಗೆ, “ಇವನ ರಕ್ತ ಸುರಿಸಬೇಡಿರಿ, ಅವನನ್ನು ಈ ಕಾಡಿನಲ್ಲಿರುವ ಈ ಗುಂಡಿಯೊಳಗೆ ಹಾಕಿರಿ, ಅವನ ಮೇಲೆ ಕೈಹಾಕಬೇಡಿರಿ” ಎಂದು ಹೇಳಿದನು.
فَكَانَ لَمَّا جَاءَ يُوسُفُ إِلَى إِخْوَتِهِ أَنَّهُمْ خَلَعُوا عَنْ يُوسُفَ قَمِيصَهُ، ٱلْقَمِيصَ ٱلْمُلَوَّنَ ٱلَّذِي عَلَيْهِ، ٢٣ 23
೨೩ಯೋಸೇಫನು ತನ್ನ ಅಣ್ಣಂದಿರ ಹತ್ತಿರಕ್ಕೆ ಬಂದಾಗ ಅವರು ಅವನ ಮೇಲಿದ್ದ ನಿಲುವಂಗಿಯನ್ನು ತೆಗೆದರು.
وَأَخَذُوهُ وَطَرَحُوهُ فِي ٱلْبِئْرِ. وَأَمَّا ٱلْبِئْرُ فَكَانَتْ فَارِغَةً لَيْسَ فِيهَا مَاءٌ. ٢٤ 24
೨೪ಅವನನ್ನು ಹಿಡಿದು ಆ ಗುಂಡಿಯೊಳಗೆ ಹಾಕಿದರು. ಆ ಗುಂಡಿ ನೀರಿಲ್ಲದೆ ಬರಿದಾಗಿತ್ತು.
ثُمَّ جَلَسُوا لِيَأْكُلُوا طَعَامًا. فَرَفَعُوا عُيُونَهُمْ وَنَظَرُوا وَإِذَا قَافِلَةُ إِسْمَاعِيلِيِّينَ مُقْبِلَةٌ مِنْ جِلْعَادَ، وَجِمَالُهُمْ حَامِلَةٌ كَثِيرَاءَ وَبَلَسَانًا وَلَاذَنًا، ذَاهِبِينَ لِيَنْزِلُوا بِهَا إِلَى مِصْرَ. ٢٥ 25
೨೫ಆ ಮೇಲೆ ಅವರು ಊಟಕ್ಕೆ ಕುಳಿತುಕೊಂಡಾಗ ಅವರು ತಮ್ಮ ಕಣ್ಣುಗಳನ್ನೆತ್ತಿ ನೋಡಲಾಗಿ, ಇಷ್ಮಾಯೇಲರ ಗುಂಪು ಒಂಟೆಗಳ ಮೇಲೆ ಪರಿಮಳ ದ್ರವ್ಯ, ಸುಗಂಧ ತೈಲ, ರಕ್ತಬೋಳ, ಇವುಗಳನ್ನು ಹೇರಿಕೊಂಡು ಗಿಲ್ಯಾದಿನಿಂದ ಐಗುಪ್ತದೇಶಕ್ಕೆ ಪ್ರಯಾಣಮಾಡುತ್ತಾ ಬರುವುದನ್ನು ಕಂಡರು.
فَقَالَ يَهُوذَا لِإِخْوَتِهِ: «مَا ٱلْفَائِدَةُ أَنْ نَقْتُلَ أَخَانَا وَنُخْفِيَ دَمَهُ؟ ٢٦ 26
೨೬ಆಗ ಯೆಹೂದನು ತನ್ನ ಅಣ್ಣತಮ್ಮಂದಿರಿಗೆ, “ನಾವು ನಮ್ಮ ತಮ್ಮನನ್ನು ಕೊಂದು ಹಾಕಿ ಅವನ ರಕ್ತವನ್ನು ಮರೆಮಾಡಿದರೆ ಲಾಭವೇನು?
تَعَالَوْا فَنَبِيعَهُ لِلْإِسْمَاعِيلِيِّينَ، وَلَا تَكُنْ أَيْدِينَا عَلَيْهِ لِأَنَّهُ أَخُونَا وَلَحْمُنَا». فَسَمِعَ لَهُ إِخْوَتُهُ. ٢٧ 27
೨೭ಬನ್ನಿರಿ, ಅವನನ್ನು ಆ ಇಷ್ಮಾಯೇಲ್ಯರಿಗೆ ಮಾರಿಬಿಡೋಣ. ನಾವು ಅವನ ಮೇಲೆ ಕೈಹಾಕಬಾರದು. ಅವನು ನಮ್ಮ ಒಡಹುಟ್ಟಿದ ತಮ್ಮನಲ್ಲವೇ” ಎಂದು ಹೇಳಿದನು. ಆ ಮಾತಿಗೆ ಅವನ ಅಣ್ಣಂದಿರು ಒಪ್ಪಿದರು.
وَٱجْتَازَ رِجَالٌ مِدْيَانِيُّونَ تُجَّارٌ، فَسَحَبُوا يُوسُفَ وَأَصْعَدُوهُ مِنَ ٱلْبِئْرِ، وَبَاعُوا يُوسُفَ لِلْإِسْمَاعِيلِيِّينَ بِعِشْرِينَ مِنَ ٱلْفِضَّةِ. فَأَتَوْا بِيُوسُفَ إِلَى مِصْرَ. ٢٨ 28
೨೮ಅಷ್ಟರಲ್ಲಿ ಮಿದ್ಯಾನ್ಯರಾದ ವರ್ತಕರು ಹಾದುಹೋಗುತ್ತಿದ್ದರು. ಅವರು ಯೋಸೇಫನನ್ನು ಗುಂಡಿಯೊಳಗಿಂದ ಮೇಲೆ ಎತ್ತಿ ಆ ಇಷ್ಮಾಯೇಲ್ಯರಿಗೆ ಇಪ್ಪತ್ತು ಬೆಳ್ಳಿಯ ನಾಣ್ಯಗಳಿಗೆ ಅವನನ್ನು ಮಾರಿದರು. ಅವರು ಅವನನ್ನು ಐಗುಪ್ತ ದೇಶಕ್ಕೆ ಕರೆದುಕೊಂಡು ಹೋದರು.
وَرَجَعَ رَأُوبَيْنُ إِلَى ٱلْبِئْرِ، وَإِذَا يُوسُفُ لَيْسَ فِي ٱلْبِئْرِ، فَمَزَّقَ ثِيَابَهُ. ٢٩ 29
೨೯ರೂಬೇನನು ತಿರುಗಿ ಆ ಗುಂಡಿಯ ಹತ್ತಿರಕ್ಕೆ ಬಂದು ಅದರಲ್ಲಿ ಯೋಸೇಫನು ಇಲ್ಲದೆ ಇರುವುದನ್ನು ಕಂಡು ತನ್ನ ಬಟ್ಟೆಗಳನ್ನು ಹರಿದುಕೊಂಡನು.
ثُمَّ رَجَعَ إِلَى إِخْوَتِهِ وَقَالَ: «ٱلْوَلَدُ لَيْسَ مَوْجُودًا، وَأَنَا إِلَى أَيْنَ أَذْهَبُ؟». ٣٠ 30
೩೦ಅವನು ತನ್ನ ತಮ್ಮಂದಿರ ಬಳಿಗೆ ಬಂದು, “ಅಯ್ಯೋ, ಹುಡುಗನು ಇಲ್ಲವಲ್ಲಾ, ನಾನೆಲ್ಲಿಗೆ ಹೋಗಲಿ?” ಎಂದು ಗೋಳಾಡಿದನು.
فَأَخَذُوا قَمِيصَ يُوسُفَ وَذَبَحُوا تَيْسًا مِنَ ٱلْمِعْزَى وَغَمَسُوا ٱلْقَمِيصَ فِي ٱلدَّمِ. ٣١ 31
೩೧ಆ ಮೇಲೆ ಅವರು ಒಂದು ಹೋತವನ್ನು ಕೊಯ್ದು ಅದರ ರಕ್ತದಲ್ಲಿ ಯೋಸೇಫನ ಅಂಗಿಯನ್ನು ಅದ್ದಿ,
وَأَرْسَلُوا ٱلْقَمِيصَ ٱلْمُلَوَّنَ وَأَحْضَرُوهُ إِلَى أَبِيهِمْ وَقَالُوا: «وَجَدْنَا هَذَا. حَقِّقْ أَقَمِيصُ ٱبْنِكَ هُوَ أَمْ لَا؟». ٣٢ 32
೩೨ಆ ಬಣ್ಣದ ನಿಲುವಂಗಿಯನ್ನು ತಮ್ಮ ತಂದೆಯ ಬಳಿಗೆ ತಂದು, “ಇದು ನಮಗೆ ಸಿಕ್ಕಿತು. ಇದು ನಿನ್ನ ಮಗನ ಅಂಗಿಯೋ ಏನೋ ದಯವಿಟ್ಟು ನೋಡು” ಎಂದು ಅವನಿಗೆ ಹೇಳಿದರು.
فَتَحَقَّقَهُ وَقَالَ: «قَمِيصُ ٱبْنِي! وَحْشٌ رَدِيءٌ أَكَلَهُ، ٱفْتُرِسَ يُوسُفُ ٱفْتِرَاسًا». ٣٣ 33
೩೩ಯಾಕೋಬನು ಅದರ ಗುರುತು ಹಿಡಿದು, “ಈ ಅಂಗಿ ನನ್ನ ಮಗನದೇ ಹೌದು, ಕಾಡುಮೃಗವು ಅವನನ್ನು ಕೊಂದು ತಿಂದು ಬಿಟ್ಟಿದೆ. ಯೋಸೇಫನನ್ನು ಸಂದೇಹವಿಲ್ಲದೆ ಸೀಳಿಹಾಕಿರಬೇಕು” ಎಂದು ಹೇಳಿದನು.
فَمَزَّقَ يَعْقُوبُ ثِيَابَهُ، وَوَضَعَ مِسْحًا عَلَى حَقَوَيْهِ، وَنَاحَ عَلَى ٱبْنِهِ أَيَّامًا كَثِيرَةً. ٣٤ 34
೩೪ಯಾಕೋಬನು ತನ್ನ ಬಟ್ಟೆಗಳನ್ನು ಹರಿದುಕೊಂಡು ನಡುವಿಗೆ ಗೋಣಿಯನ್ನು ಕಟ್ಟಿಕೊಂಡು ತನ್ನ ಮಗನಿಗಾಗಿ ಬಹು ದಿನಗಳವರೆಗೂ ದುಃಖಪಟ್ಟನು.
فَقَامَ جَمِيعُ بَنِيهِ وَجَمِيعُ بَنَاتِهِ لِيُعَزُّوهُ، فَأَبَى أَنْ يَتَعَزَّى وَقَالَ: «إِنِّي أَنْزِلُ إِلَى ٱبْنِي نَائِحًا إِلَى ٱلْهَاوِيَةِ». وَبَكَى عَلَيْهِ أَبُوهُ. (Sheol h7585) ٣٥ 35
೩೫ಅವನ ಗಂಡುಮಕ್ಕಳೂ ಮತ್ತು ಹೆಣ್ಣುಮಕ್ಕಳೂ ಎಲ್ಲರೂ ಅವನ ದುಃಖ ಶಮನಮಾಡುವುದಕ್ಕೆ ಪ್ರಯತ್ನಿಸಿದ್ದಾಗ್ಯೂ ಅವನು ಸಮಾಧಾನ ಆದರಣೆ ಹೊಂದಲಾರದೇ, “ನಾನು ಹೀಗೆ ದುಃಖಪಡುತ್ತಾ ನನ್ನ ಮಗನೊಂದಿಗೆ ಸಮಾಧಿ ಸೇರುವೆನು” ಎಂದನು. ಹೀಗೆ ತಂದೆಯು ಮಗನಿಗೋಸ್ಕರ ದುಃಖಿಸಿದನು. (Sheol h7585)
وَأَمَّا ٱلْمِدْيَانِيُّونَ فَبَاعُوهُ فِي مِصْرَ لِفُوطِيفَارَ خَصِيِّ فِرْعَوْنَ، رَئِيسِ ٱلشُّرَطِ. ٣٦ 36
೩೬ಇದಲ್ಲದೆ ಆ ಮಿದ್ಯಾನ್ಯರು ಯೋಸೇಫನನ್ನು ತೆಗೆದುಕೊಂಡು ಹೋಗಿ ಐಗುಪ್ತ ದೇಶದ ಫರೋಹನ ಉದ್ಯೋಗಸ್ಥನಾದ ಪೋಟೀಫರನಿಗೆ ಮಾರಿದರು. ಇವನು ಅರಸನ ಮೈಗಾವಲಿನವರ ದಳಪತಿಯೂ ಆಗಿದ್ದನು.

< اَلتَّكْوِينُ 37 >