< اَلتَّكْوِينُ 49 >

وَدَعَا يَعْقُوبُ بَنِيهِ وَقَالَ: «ٱجْتَمِعُوا لِأُنْبِئَكُمْ بِمَا يُصِيبُكُمْ فِي آخِرِ ٱلْأَيَّامِ. ١ 1
ಯಾಕೋಬನು ತನ್ನ ಮಕ್ಕಳನ್ನು ಕರೆಯಿಸಿ ಅವರಿಗೆ, ನೀವೆಲ್ಲರೂ ಕೂಡಿ ಬನ್ನಿರಿ. ಮುಂದಿನ ದಿನಗಳಲ್ಲಿ ನಿಮಗೆ ಸಂಭವಿಸುವುದನ್ನು ನಿಮಗೆ ತಿಳಿಸುತ್ತೇನೆ.
ٱجْتَمِعُوا وَٱسْمَعُوا يَا بَنِي يَعْقُوبَ، وَٱصْغَوْا إِلَى إِسْرَائِيلَ أَبِيكُمْ: ٢ 2
ಯಾಕೋಬನ ಮಕ್ಕಳೇ, ನೀವೆಲ್ಲರೂ ಕೂಡಿ ಬಂದು ಕೇಳಿರಿ. ನಿಮ್ಮ ತಂದೆಯಾದ ಇಸ್ರಾಯೇಲನ ಮಾತನ್ನು ಲಾಲಿಸಿರಿ.
رَأُوبَيْنُ، أَنْتَ بِكْرِي، قُوَّتِي وَأَوَّلُ قُدْرَتِي، فَضْلُ ٱلرِّفْعَةِ وَفَضْلُ ٱلْعِزِّ. ٣ 3
ರೂಬೇನನೇ, ನೀನು ನನ್ನ ಚೊಚ್ಚಲಮಗನೂ, ನನ್ನ ಚೈತನ್ಯಸ್ವರೂಪನೂ, ನನ್ನ ಪ್ರಥಮಫಲವೂ, ಗೌರವದಲ್ಲಿಯೂ, ಅಧಿಕಾರದಲ್ಲಿಯೂ ಪ್ರಮುಖನೂ ಆಗಿದ್ದೀ.
فَائِرًا كَٱلْمَاءِ لَا تَتَفَضَّلُ، لِأَنَّكَ صَعِدْتَ عَلَى مَضْجَعِ أَبِيكَ. حِينَئِذٍ دَنَّسْتَهُ. عَلَى فِرَاشِي صَعِدَ. ٤ 4
ಆದರೆ ದಡಮೀರಿದ ಪ್ರವಾಹದಂತಿರುವ ನೀನು ಇನ್ನು ಶ್ರೇಷ್ಠನಾಗುವುದಿಲ್ಲ. ಏಕೆಂದರೆ ನೀನು ನಿನ್ನ ತಂದೆಯ ಹಾಸಿಗೆಯನ್ನು ಹತ್ತಿ, ಅದನ್ನು ಹೊಲೆ ಮಾಡಿದಿಯಲ್ಲಾ. ಇವನು ನನ್ನ ಮಂಚವನ್ನು ಹತ್ತಿದನು!
شِمْعُونُ وَلَاوِي أَخَوَانِ، آلَاتُ ظُلْمٍ سُيُوفُهُمَا. ٥ 5
ಸಿಮೆಯೋನನು ಲೇವಿಯೂ ಅಣ್ಣತಮ್ಮಂದಿರು. ಇವರ ಕತ್ತಿಗಳು ಹಿಂಸಾಚಾರದ ಆಯುಧಗಳು.
فِي مَجْلِسِهِمَا لَا تَدْخُلُ نَفْسِي. بِمَجْمَعِهِمَا لَا تَتَّحِدُ كَرَامَتِي. لِأَنَّهُمَا فِي غَضَبِهِمَا قَتَلَا إِنْسَانًا، وَفِي رِضَاهُمَا عَرْقَبَا ثَوْرًا. ٦ 6
ನನ್ನ ಪ್ರಾಣವೇ ಅವರ ಗುಪ್ತವಾದ ದುರಾಲೋಚನೆಗಳಿಗೆ ನೀನು ಒಳಪಡಬಾರದು. ನನ್ನ ಮನವೇ ಅವರ ಗುಂಪಿಗೆ ನೀನು ಸೇರಬೇಡ. ಆದುದರಿಂದ ನನ್ನ ಹೃದಯವು ಸಂತೋಷಿಸುತ್ತದೆ. ಅವರು ಕೋಪೋದ್ರೆಕದಿಂದ ಮನುಷ್ಯರನ್ನು ಸಂಹರಿಸಿದರು. ಮದದಿಂದ ಎತ್ತುಗಳನ್ನು ದುರ್ಬಲಗೊಳಿಸಿದರು.
مَلْعُونٌ غَضَبُهُمَا فَإِنَّهُ شَدِيدٌ، وَسَخَطُهُمَا فَإِنَّهُ قَاسٍ. أُقَسِّمُهُمَا فِي يَعْقُوبَ، وَأُفَرِّقُهُمَا فِي إِسْرَائِيلَ. ٧ 7
ಅವರ ಕೋಪವು ಭಯಂಕರವಾಗಿಯೂ ಅವರ ರೌದ್ರವು ಕ್ರೂರವಾಗಿಯೂ ಇದ್ದು ಅದು ಶಾಪಗ್ರಸ್ಥವಾದುದಾಗಿದೆ. ಯಾಕೋಬನ ಕುಲದವರಲ್ಲಿ ಅವರನ್ನು ವಿಭಾಗಿಸುವೆನು. ಇಸ್ರಾಯೇಲರಲ್ಲಿ ಅವರನ್ನು ಚದುರಿಸುವೆನು.
يَهُوذَا، إِيَّاكَ يَحْمَدُ إِخْوَتُكَ، يَدُكَ عَلَى قَفَا أَعْدَائِكَ، يَسْجُدُ لَكَ بَنُو أَبِيكَ. ٨ 8
ಯೆಹೂದನೇ, ನಿನ್ನ ಅಣ್ಣತಮ್ಮಂದಿರು ನಿನ್ನನ್ನೇ ಸ್ತುತಿಸುವರು. ನಿನ್ನ ಕೈ ನಿನ್ನ ಶತ್ರುಗಳ ಕುತ್ತಿಗೆಯ ಮೇಲಿರುವುದು. ನಿನ್ನ ಸಹೋದರರು ನಿನಗೆ ಆಡ್ಡ ಬೀಳುವರು.
يَهُوذَا جَرْوُ أَسَدٍ، مِنْ فَرِيسَةٍ صَعِدْتَ يَا ٱبْنِي، جَثَا وَرَبَضَ كَأَسَدٍ وَكَلَبْوَةٍ. مَنْ يُنْهِضُهُ؟ ٩ 9
ಯೆಹೂದನು ಪ್ರಾಯದ ಸಿಂಹದಂತಿದ್ದಾನೆ. ನನ್ನ ಪುತ್ರನೇ, ನೀನು ಮೃಗವನ್ನು ಹಿಡಿದು ಕೊಂದು ಬೆಟ್ಟವನ್ನು ಸೇರಿದ ಸಿಂಹದೋಪಾದಿಯಲ್ಲಿದ್ದೀ. ಅವನು ಸಿಂಹದಂತೆ ಕಾಲು ಮುದುರಿ ಹೊಂಚುಹಾಕಿಕೊಂಡಿದ್ದಾನೆ. ಮೃಗ ರಾಜನಿಗೆ ಸಮನಾದ ಇವನನ್ನು ಕೆಣಕುವುದು ಯಾರಿಂದಾದೀತು?
لَا يَزُولُ قَضِيبٌ مِنْ يَهُوذَا وَمُشْتَرِعٌ مِنْ بَيْنِ رِجْلَيْهِ حَتَّى يَأْتِيَ شِيلُونُ وَلَهُ يَكُونُ خُضُوعُ شُعُوبٍ. ١٠ 10
೧೦ರಾಜದಂಡವನ್ನು ಹಿಡಿಯತಕ್ಕವನು ಶಿಲೋವಿನಿಂದ ಬರುವ ತನಕ ಆ ದಂಡವು ಯೆಹೂದನ ಕೈಯಿಂದ ತಪ್ಪುವುದಿಲ್ಲ. ಮುದ್ರೆ ಕೋಲು ಅವನ ಪಾದಗಳ ಬಳಿಯಿಂದ ಕದಲುವುದಿಲ್ಲ. ಅನ್ಯಜನಾಂಗಗಳೂ ಅವನಿಗೆ ವಿಧೇಯರಾಗಿರುವರು.
رَابِطًا بِٱلْكَرْمَةِ جَحْشَهُ، وَبِالْجَفْنَةِ ٱبْنَ أَتَانِهِ، غَسَلَ بِٱلْخَمْرِ لِبَاسَهُ، وَبِدَمِ ٱلْعِنَبِ ثَوْبَهُ. ١١ 11
೧೧ಅವನು ತನ್ನ ವಾಹನ ಮೃಗವನ್ನು ವಿಶಿಷ್ಟವಾದ ದ್ರಾಕ್ಷಾಲತೆಗೆ ಕಟ್ಟುವನು. ದ್ರಾಕ್ಷಿಯ ಬಳ್ಳಿಗೆ ತನ್ನ ಕತ್ತೆಮರಿಯನ್ನು ಬಿಗಿಯುವನು; ದ್ರಾಕ್ಷಾರಸದಲ್ಲಿ ತನ್ನ ಅಂಗಿಗಳನ್ನು ಒಗೆಯುವನು; ದ್ರಾಕ್ಷಾರಸದಲ್ಲಿಯೇ ತನ್ನ ವಸ್ತ್ರಗಳನ್ನು ಅದ್ದಿ ತೊಳೆಯುವನು.
مُسْوَدُّ ٱلْعَيْنَيْنِ مِنَ ٱلْخَمْرِ، وَمُبْيَضُّ ٱلْأَسْنَانِ مِنَ ٱللَّبَنِ. ١٢ 12
೧೨ದ್ರಾಕ್ಷಾರಸದ ಸಮೃದ್ಧಿಯಿಂದ ಅವನ ಕಣ್ಣುಗಳು ಕೆಂಪಾಗಿ ಇರುವವು. ಹಾಲಿನ ಸಮೃದ್ಧಿಯಿಂದ ಅವನ ಹಲ್ಲುಗಳು ಬೆಳ್ಳಗಾಗಿ ಇರುವವು.
زَبُولُونُ، عِنْدَ سَاحِلِ ٱلْبَحْرِ يَسْكُنُ، وَهُوَ عِنْدَ سَاحِلِ ٱلسُّفُنِ، وَجَانِبُهُ عِنْدَ صَيْدُونَ. ١٣ 13
೧೩ಜೆಬುಲೂನನು ಸಮುದ್ರದ ಕರಾವಳಿಯಲ್ಲಿ ವಾಸಮಾಡುವನು. ಅವನಿಗೆ ಹಡಗುಗಳು ಸೇರುವ ಬಂದರು ಇರುವುದು. ಅವನ ಸೀಮೆಯ ಒಂದು ಮೇರೆ ಚೀದೋನಿಗೆ ಮುಟ್ಟುವುದು.
يَسَّاكَرُ، حِمَارٌ جَسِيمٌ رَابِضٌ بَيْنَ ٱلْحَظَائِرِ. ١٤ 14
೧೪ಇಸ್ಸಾಕಾರನು ಕುರಿಯ ಹಟ್ಟಿಗಳ ನಡುವೆ ಮಲಗಿಕೊಂಡಿರುವ ಬಲವುಳ್ಳ ಕತ್ತೆಯಂತಿರುವನು.
فَرَأَى ٱلْمَحَلَّ أَنَّهُ حَسَنٌ، وَٱلْأَرْضَ أَنَّهَا نَزِهَةٌ، فَأَحْنَى كَتِفَهُ لِلْحِمْلِ وَصَارَ لِلْجِزْيَةِ عَبْدًا. ١٥ 15
೧೫ತಾನು ಸೇರಿದ ಪ್ರದೇಶವು ವಿಶ್ರಾಂತಿಗೆ ಅನುಕೂಲವೂ ಸುಖಾಸ್ಪದವೂ ಆಗಿರುವುದನ್ನು ಕಂಡನು. ಅವನು ಹೊರೆಯನ್ನು ಹೊರುವುದಕ್ಕೆ ಬೆನ್ನು ಬಗ್ಗಿಸಿಕೊಂಡು ಬಿಟ್ಟೀ ಸೇವೆಮಾಡುವನು.
دَانُ، يَدِينُ شَعْبَهُ كَأَحَدِ أَسْبَاطِ إِسْرَائِيلَ. ١٦ 16
೧೬ದಾನನು ಇಸ್ರಾಯೇಲರ ಕುಲಗಳಲ್ಲಿ ಒಂದರಂತೆ ತನ್ನ ಜನರಿಗೆ ನ್ಯಾಯತೀರಿಸುವನು.
يَكُونُ دَانُ حَيَّةً عَلَى ٱلطَّرِيقِ، أُفْعُوانًا عَلَى ٱلسَّبِيلِ، يَلْسَعُ عَقِبَيِ ٱلْفَرَسِ فَيَسْقُطُ رَاكِبُهُ إِلَى ٱلْوَرَاءِ. ١٧ 17
೧೭ದಾನನು ಮಾರ್ಗದ ಮಧ್ಯದಲ್ಲಿರುವ ವಿಷಸರ್ಪದಂತೆ ಇರುವನು ಅದು ಕುದುರೆಯ ಹಿಮ್ಮಡಿಯನ್ನು ಕಚ್ಚುವುದು. ಸವಾರನು ಕೆಳಗೆ ಅಂಗಾತವಾಗಿ ಬೀಳುವನು.
لِخَلَاصِكَ ٱنْتَظَرْتُ يَا رَبُّ. ١٨ 18
೧೮ಯೆಹೋವನೇ, ನಾನು ನಿನ್ನ ರಕ್ಷಣೆಯ ಮಾರ್ಗವನ್ನು ನಿರೀಕ್ಷಿಸಿಕೊಂಡಿದ್ದೇನೆ.
جَادُ، يَزْحَمُهُ جَيْشٌ، وَلَكِنَّهُ يَزْحَمُ مُؤَخَّرَهُ. ١٩ 19
೧೯ಗಾದನ ಮೇಲೆ ಸುಲಿಗೆ ಮಾಡುವವರು ಬೀಳಲು, ಇವನು ಅವರನ್ನು ಹಿಮ್ಮಟ್ಟಿಕೊಂಡು ಹೋಗುವನು.
أَشِيرُ، خُبْزُهُ سَمِينٌ وَهُوَ يُعْطِي لَذَّاتِ مُلُوكٍ. ٢٠ 20
೨೦ಆಶೇರನಿಗೆ ಧಾನ್ಯ ಸಮೃದ್ಧಿಯಾಗುವುದು. ಅವನಲ್ಲಿ ರಾಜಭೋಗ ಪದಾರ್ಥಗಳು ದೊರಕುವವು.
نَفْتَالِي، أَيِّلَةٌ مُسَيَّبَةٌ يُعْطِي أَقْوَالًا حَسَنَةً. ٢١ 21
೨೧ನಫ್ತಾಲಿಯು ಸ್ವತಂತ್ರವಾಗಿ ಜಿಂಕೆಯಂತಿದ್ದಾನೆ. ಅವನಿಂದ ಇಂಪಾದ ಮಾತುಗಳುಂಟಾಗುವವು.
يُوسُفُ، غُصْنُ شَجَرَةٍ مُثْمِرَةٍ، غُصْنُ شَجَرَةٍ مُثْمِرَةٍ عَلَى عَيْنٍ. أَغْصَانٌ قَدِ ٱرْتَفَعَتْ فَوْقَ حَائِطٍ. ٢٢ 22
೨೨ಯೋಸೇಫನು ಫಲಭರಿತವಾದ ವೃಕ್ಷವು, ಒರತೆಯ ಬಳಿಯಲ್ಲಿರುವ ಫಲವತ್ತಾದ ವೃಕ್ಷವೇ ಆಗಿದ್ದಾನೆ. ಗೋಡೆಯ ಆಚೆಗೆ ಅದರ ರೆಂಬೆಗಳು ಹರಡಿವೆ.
فَمَرَّرَتْهُ وَرَمَتْهُ وَٱضْطَهَدَتْهُ أَرْبَابُ ٱلسِّهَامِ. ٢٣ 23
೨೩ಬಿಲ್ಲುಗಾರರು ಅವನನ್ನು ಆಕ್ರಮಿಸುವರು, ಹಗೆತನದಿಂದ ಬಾಣವನ್ನು ಅವನ ಮೇಲೆ ಪ್ರಯೋಗಿಸುವರು.
وَلَكِنْ ثَبَتَتْ بِمَتَانَةٍ قَوْسُهُ، وَتَشَدَّدَتْ سَوَاعِدُ يَدَيْهِ. مِنْ يَدَيْ عَزِيزِ يَعْقُوبَ، مِنْ هُنَاكَ، مِنَ ٱلرَّاعِي صَخْرِ إِسْرَائِيلَ، ٢٤ 24
೨೪ಆದರೂ ಯಾಕೋಬನ ವಂಶಸ್ಥರನ್ನು ರಕ್ಷಿಸುವ ಪರಾಕ್ರಮಿಯ ಭುಜಬಲದಿಂದಲೂ, ಇಸ್ರಾಯೇಲನಿಗೆ ಪಾಲಕನೂ ಬಂಡೆಯೂ ಆಗಿರುವಾತನಿಂದಲೂ ಅವನ ಕೈಗಳ ಬಿಲ್ಲು ಸ್ಥಿರವಾಗಿ ನಿಂತಿರುವುದು. ಅವನ ಕೈಗಳು ಯಾಕೋಬನ ಒಡೆಯನಿಂದ ಬಲಗೊಂಡಿವೆ.
مِنْ إِلَهِ أَبِيكَ ٱلَّذِي يُعِينُكَ، وَمِنَ ٱلْقَادِرِ عَلَى كُلِّ شَيْءٍ ٱلَّذِي يُبَارِكُكَ، تَأْتِي بَرَكَاتُ ٱلسَّمَاءِ مِنْ فَوْقُ، وَبَرَكَاتُ ٱلْغَمْرِ ٱلرَّابِضِ تَحْتُ. بَرَكَاتُ ٱلثَّدْيَيْنِ وَٱلرَّحِمِ. ٢٥ 25
೨೫ನಿನ್ನ ತಂದೆಯ ದೇವರು ನಿನಗೆ ಸಹಾಯ ಹಸ್ತವಾಗಿದ್ದಾನೆ. ನಿನ್ನ ತಂದೆಯ ದೇವರು ನಿನ್ನನ್ನು ಆಶೀರ್ವದಿಸುವನು. ಸರ್ವಶಕ್ತನಾದ ದೇವರು, ಆತನು ಮೇಲಣ ಆಕಾಶದಿಂದಲೂ, ಕೆಳಗಣ ಸಾಗರದ ಸೆಲೆಗಳಿಂದಲೂ, ಸ್ತನದಿಂದಲೂ, ಗರ್ಭಫಲದಿಂದಲೂ ಉಂಟಾಗುವ ಸೌಭಾಗ್ಯಗಳನ್ನು ಕೊಟ್ಟು ನಿನ್ನನ್ನು ಆಶೀರ್ವದಿಸಲಿ.
بَرَكَاتُ أَبِيكَ فَاقَتْ عَلَى بَرَكَاتِ أَبَوَيَّ. إِلَى مُنْيَةِ ٱلْآكَامِ ٱلدَّهْرِيَّةِ تَكُونُ عَلَى رَأْسِ يُوسُفَ، وَعَلَى قِمَّةِ نَذِيرِ إِخْوَتِهِ. ٢٦ 26
೨೬ನಿನ್ನ ತಂದೆಯ ಆಶೀರ್ವಾದಗಳು ನಿನ್ನ ಪೂರ್ವಿಕರ ಆಶೀರ್ವಾದಕ್ಕಿಂತಲೂ ಮೀಗಿಲಾಗಿರುತ್ತದೆ. ಆದಿಯಿಂದಲೂ ಪರ್ವತಗಳಿಂದ ಉಂಟಾಗುವ ಎಲ್ಲಾ ಮೇಲುಗಳಿಗಿಂತಲೂ, ಸದಾಕಾಲ ಪ್ರಕೃತಿಯಿಂದ ಉಂಟಾಗುವ ಎಲ್ಲಾ ಸುಫಲಗಳು ಕೊನೆಯವರೆಗೂ ಯೋಸೇಫನಿಗೂ ಅವನ ಅಣ್ಣತಮ್ಮಂದಿರಿಗೂ ಸಮೃದ್ಧಿಯಾಗಿ ದೊರೆಯುವುದು.
بَنْيَامِينُ ذِئْبٌ يَفْتَرِسُ. فِي ٱلصَّبَاحِ يَأْكُلُ غَنِيمَةً، وَعِنْدَ ٱلْمَسَاءِ يُقَسِّمُ نَهْبًا». ٢٧ 27
೨೭“ಬೆನ್ಯಾಮೀನನು ಕುರಿಗಳನ್ನು ಹಿಡಿದುಕೊಳ್ಳುವ ತೋಳದಂತಿದ್ದಾನೆ. ರಾತ್ರಿ ಹಿಡಿದುಕೊಂಡದ್ದನ್ನು ಬೆಳಿಗ್ಗೆ ತಿನ್ನುತ್ತಾನೆ. ಕೊಳ್ಳೆಮಾಡಿದ್ದನ್ನು ಸಂಜೆಯಲ್ಲಿ ಹಂಚಿಕೊಳ್ಳುವನು” ಎಂದನು.
جَمِيعُ هَؤُلَاءِ هُمْ أَسْبَاطُ إِسْرَائِيلَ ٱلِٱثْنَا عَشَرَ. وَهَذَا مَا كَلَّمَهُمْ بِهِ أَبُوهُمْ وَبَارَكَهُمْ. كُلُّ وَاحِدٍ بِحَسَبِ بَرَكَتِهِ بَارَكَهُمْ. ٢٨ 28
೨೮ಇವರೆಲ್ಲರೂ ಇಸ್ರಾಯೇಲನಿಂದುಂಟಾದ ಹನ್ನೆರಡು ಕುಲಗಳು. ಅವರ ತಂದೆ ಅವರನ್ನು ಆಶೀರ್ವದಿಸಿ ಹೇಳಿದ ನುಡಿಗಳು ಇವುಗಳೇ. ಅವನು ಪ್ರತಿಯೊಬ್ಬನಿಗೂ ಅವನವನಿಗೆ ತಕ್ಕ ಆಶೀರ್ವಾದದ ಪ್ರಕಾರ ಆಶೀರ್ವಚನಗಳನ್ನು ನುಡಿದನು.
وَأَوْصَاهُمْ وَقَالَ لَهُمْ: «أَنَا أَنْضَمُّ إِلَى قَوْمِي. اِدْفِنُونِي عِنْدَ آبَائِي فِي ٱلْمَغَارَةِ ٱلَّتِي فِي حَقْلِ عِفْرُونَ ٱلْحِثِّيِّ. ٢٩ 29
೨೯ಇಸ್ರಾಯೇಲನು ತನ್ನ ಮಕ್ಕಳಿಗೆ ಆಜ್ಞಾಪಿಸಿ ಹೇಳಿದ್ದೇನಂದರೆ, “ನಾನು ನನ್ನ ಪೂರ್ವಿಕರ ಬಳಿಗೆ ಸೇರಬೇಕಾದ ಕಾಲವು ಸಮೀಪಿಸಿತು. ಹಿತ್ತಿಯನಾದ ಎಫ್ರೋನನ ಭೂಮಿಯಲ್ಲಿರುವ ಗವಿಯೊಳಗೆ ನನ್ನನ್ನು ನನ್ನ ಪೂರ್ವಿಕರ ಬಳಿಯಲ್ಲಿ ಸಮಾಧಿಮಾಡಬೇಕು.
فِي ٱلْمَغَارَةِ ٱلَّتِي فِي حَقْلِ ٱلْمَكْفِيلَةِ، ٱلَّتِي أَمَامَ مَمْرَا فِي أَرْضِ كَنْعَانَ، ٱلَّتِي ٱشْتَرَاهَا إِبْرَاهِيمُ مَعَ ٱلْحَقْلِ مِنْ عِفْرُونَ ٱلْحِثِّيِّ مُلْكَ قَبْرٍ. ٣٠ 30
೩೦ಆ ಗವಿಯು ಕಾನಾನ್ ದೇಶದ ಮಮ್ರೆಗೆದುರಾಗಿರುವ ಮಕ್ಪೇಲ ಎಂಬ ಬಯಲಿನಲ್ಲಿ ಇದೆ. ಅದನ್ನು ಅಬ್ರಹಾಮನು ಅದರ ಸುತ್ತಲಿರುವ ಭೂಮಿ ಸಹಿತವಾಗಿ ಹಿತ್ತಿಯನಾದ ಎಫ್ರೋನನಿಂದ ಸ್ವಂತ ಸ್ಮಶಾನ ಭೂಮಿಗಾಗಿ ಕೊಂಡುಕೊಂಡನು.
هُنَاكَ دَفَنُوا إِبْرَاهِيمَ وَسَارَةَ ٱمْرَأَتَهُ. هُنَاكَ دَفَنُوا إِسْحَاقَ وَرِفْقَةَ ٱمْرَأَتَهُ، وَهُنَاكَ دَفَنْتُ لَيْئَةَ. ٣١ 31
೩೧ಅಲ್ಲಿ ಅಬ್ರಹಾಮನಿಗೂ ಅವನ ಪತ್ನಿಯಾದ ಸಾರಳಿಗೂ ಸಮಾಧಿಯಾಯಿತು. ಅಲ್ಲೇ ಇಸಾಕನಿಗೂ ಅವನ ಹೆಂಡತಿಯಾದ ರೆಬೆಕ್ಕಳಿಗೂ ಸಮಾಧಿಯಾಯಿತು. ಅಲ್ಲಿ ನಾನು ಲೇಯಳನ್ನು ಸಮಾಧಿಮಾಡಿದ್ದೇನೆ.
شِرَاءُ ٱلْحَقْلِ وَٱلْمَغَارَةِ ٱلَّتِي فِيهِ كَانَ مِنْ بَنِي حِثَّ». ٣٢ 32
೩೨ಹೊಲದೊಂದಿಗೆ ಹಿತ್ತಿಯರಿಂದ ಕ್ರಯಕ್ಕೆ ತೆಗೆದುಕೊಂಡ ಆ ಗುಹೆಯೊಳಗೆ ನನಗೂ ಸಮಾಧಿಮಾಡಬೇಕು” ಎಂದನು.
وَلَمَّا فَرَغَ يَعْقُوبُ مِنْ تَوْصِيَةِ بَنِيهِ ضَمَّ رِجْلَيْهِ إِلَى ٱلسَّرِيرِ، وَأَسْلَمَ ٱلرُّوحَ وَٱنْضَمَّ إِلَى قَوْمِهِ. ٣٣ 33
೩೩ಯಾಕೋಬನು ತನ್ನ ಮಕ್ಕಳಿಗೆ ಅಪ್ಪಣೆ ಕೊಡುವುದನ್ನು ಮುಗಿಸಿದ ನಂತರ ಹಾಸಿಗೆಯ ಮೇಲೆ ತನ್ನ ಕಾಲುಗಳನ್ನು ಮಡಚಿಕೊಂಡು ಪ್ರಾಣಬಿಟ್ಟು ಪೂರ್ವಿಕರ ಬಳಿಗೆ ಸೇರಿದನು.

< اَلتَّكْوِينُ 49 >