< إِشَعْيَاءَ 10 >

وَيْلٌ لِلَّذِينَ يَقْضُونَ أَقْضِيَةَ ٱلْبُطْلِ، وَلِلْكَتَبَةِ ٱلَّذِينَ يُسَجِّلُونَ جَوْرًا ١ 1
ಅಯ್ಯೋ, ಅನ್ಯಾಯವಾದ ತೀರ್ಪುಗಳನ್ನು ತೀರಿಸಿ, ಕೇಡಿನ ಪತ್ರಗಳನ್ನು ಬರೆಯಿಸುವವರ ಗತಿಯನ್ನು ಏನೆಂದು ಹೇಳಲಿ.
لِيَصُدُّوا ٱلضُّعَفَاءَ عَنِ ٱلْحُكْمِ، وَيَسْلُبُوا حَقَّ بَائِسِي شَعْبِي، لِتَكُونَ ٱلْأَرَامِلُ غَنِيمَتَهُمْ وَيَنْهَبُوا ٱلْأَيْتَامَ. ٢ 2
ಬಡವರನ್ನು ನ್ಯಾಯಸ್ಥಾನದಿಂದ ತಳ್ಳಿ, ದಿಕ್ಕಿಲ್ಲದವರಿಗೆ ನ್ಯಾಯವನ್ನು ತಪ್ಪಿಸಿ, ಅನಾಥರನ್ನು ಕೊಳ್ಳೆಹೊಡೆದು, ವಿಧವೆಯರನ್ನು ಸೂರೆಮಾಡಬೇಕೆಂದಿದ್ದಾರೆ.
وَمَاذَا تَفْعَلُونَ فِي يَوْمِ ٱلْعِقَابِ، حِينَ تَأْتِي ٱلتَّهْلُكَةُ مِنْ بَعِيدٍ؟ إِلَى مَنْ تَهْرُبُونَ لِلْمَعُونَةِ، وَأَيْنَ تَتْرُكُونَ مَجْدَكُمْ؟ ٣ 3
ದಂಡನೆಯ ದಿನದಲ್ಲಿಯೂ, ದೂರದಿಂದ ಬರುವ ನಾಶನದಲ್ಲಿಯೂ ನೀವು ಏನು ಮಾಡುವಿರಿ? ಸಹಾಯಕ್ಕಾಗಿ ಯಾರ ಬಳಿಗೆ ಓಡುವಿರಿ? ನಿಮ್ಮ ಐಶ್ವರ್ಯವನ್ನು ಯಾರ ವಶಮಾಡುವಿರಿ?
إِمَّا يَجْثُونَ بَيْنَ ٱلْأَسْرَى، وَإِمَّا يَسْقُطُونَ تَحْتَ ٱلْقَتْلَى. مَعَ كُلِّ هَذَا لَمْ يَرْتَدَّ غَضَبُهُ، بَلْ يَدُهُ مَمْدُودَةٌ بَعْدُ! ٤ 4
ಕೈದಿಗಳ ಕಾಲ ಕೆಳಗೆ ಮುದುರಿಕೊಂಡು, ಹತರಾದವರ ಕೆಳಗೆ ಬಿದ್ದಿರುವುದೇ ಇವರ ಗತಿ. ಏಕೆಂದರೆ ಇಷ್ಟೆಲ್ಲಾ ನಡೆದರೂ ಯೆಹೋವನ ಕೋಪವು ತೀರದೆ ಕೈ ಇನ್ನು ಚಾಚಿಯೇ ಇರುವುದು.
«وَيْلٌ لِأَشُّورَ قَضِيبِ غَضَبِي، وَٱلْعَصَا فِي يَدِهِمْ هِيَ سَخَطِي. ٥ 5
ಅಯ್ಯೋ, ಅಶ್ಶೂರವೇ ನೀನು ನನ್ನ ಕೋಪವೆಂಬ ಕೋಲು, ನಿನ್ನ ಕೈಯಲ್ಲಿರುವ ದೊಣ್ಣೆಯು ನನ್ನ ರೌದ್ರವೇ.
عَلَى أُمَّةٍ مُنَافِقَةٍ أُرْسِلُهُ، وَعَلَى شَعْبِ سَخَطِي أُوصِيهِ، لِيَغْتَنِمَ غَنِيمَةً وَيَنْهَبَ نَهْبًا، وَيَجْعَلَهُمْ مَدُوسِينَ كَطِينِ ٱلْأَزِقَّةِ. ٦ 6
ನಾನು ಅವನನ್ನು ಭ್ರಷ್ಟಜನರ ವಿರುದ್ಧವಾಗಿ ಕಳುಹಿಸಿ, ನನ್ನ ಕೋಪಕ್ಕೆ ಗುರಿಯಾದ ನನ್ನ ಪ್ರಜೆಯನ್ನು ಸೂರೆಮಾಡಿ, ಕೊಳ್ಳೆ ಹೊಡೆದು ಬೀದಿಯ ಕೆಸರನ್ನೋ ಎಂಬಂತೆ ತುಳಿದು ಹಾಕಬೇಕೆಂದು ಅಪ್ಪಣೆ ಕೊಡುವೆನು.
أَمَّا هُوَ فَلَا يَفْتَكِرُ هَكَذَا، وَلَا يَحْسِبُ قَلْبُهُ هَكَذَا. بَلْ فِي قَلْبِهِ أَنْ يُبِيدَ وَيَقْرِضَ أُمَمًا لَيْسَتْ بِقَلِيلَةٍ. ٧ 7
ಅವನ ಅಭಿಪ್ರಾಯವೋ, ಹಾಗಲ್ಲ. ಅನೇಕ ಜನಾಂಗಗಳನ್ನು ತಾನೇ ಸಂಹರಿಸಿ ನಿರ್ಮೂಲ ಮಾಡುವೆನೆಂಬುದೇ ಹೊರತು ಈ ಯೋಚನೆಯು ಅವನ ಮನಸ್ಸಿನಲ್ಲಿ ಇಲ್ಲವೇ ಇಲ್ಲ.
فَإِنَّهُ يَقُولُ: أَلَيْسَتْ رُؤَسَائِي جَمِيعًا مُلُوكًا؟ ٨ 8
ಅವನು ಹೇಳುವುದೇನೆಂದರೆ, “ನನ್ನ ಅಧಿಪತಿಗಳೆಲ್ಲಾ ಅರಸರಲ್ಲವೇ?
أَلَيْسَتْ كَلْنُو مِثْلَ كَرْكَمِيشَ؟ أَلَيْسَتْ حَمَاةُ مِثْلَ أَرْفَادَ؟ أَلَيْسَتِ ٱلسَّامِرَةُ مِثْلَ دِمَشْقَ؟ ٩ 9
ಕರ್ಕೆಮೀಷಿನ ಗತಿಯು ಕಲ್ನೋವಿಗೆ ಆಯಿತಲ್ಲವೇ? ಅರ್ಪದಿಗೆ ಆದ ಪಾಡು ಹಮಾತಿಗೂ ಬಂತಲ್ಲವೇ? ದಮಸ್ಕದ ಗತಿಯು ಸಮಾರ್ಯಕ್ಕೂ ಸಂಭವಿಸಿತಲ್ಲವೇ?
كَمَا أَصَابَتْ يَدِي مَمَالِكَ ٱلْأَوْثَانِ، وَأَصْنَامُهَا ٱلْمَنْحُوتَةُ هِيَ أَكْثَرُ مِنَ ٱلَّتِي لِأُورُشَلِيمَ وَلِلسَّامِرَةِ، ١٠ 10
೧೦ಯೆರೂಸಲೇಮಿನ ಮತ್ತು ಸಮಾರ್ಯದ ವಿಗ್ರಹಗಳಿಗಿಂತ ವಿಶೇಷ ವಿಗ್ರಹಗಳುಳ್ಳ ದೇವತೆಗಳ ವಶವಾಗಿರುವ ರಾಜ್ಯಗಳ ಮೇಲೆ ನಾನು ಕೈಮಾಡಿದಂತೆಯೇ,
أَفَلَيْسَ كَمَا صَنَعْتُ بِٱلسَّامِرَةِ وَبِأَوْثَانِهَا أَصْنَعُ بِأُورُشَلِيمَ وَأَصْنَامِهَا؟». ١١ 11
೧೧ಸಮಾರ್ಯವನ್ನೂ, ಅದರ ವಿಗ್ರಹಗಳನ್ನೂ ನಾನು ಕೆಡವಿಬಿಟ್ಟ ಹಾಗೆ, ಯೆರೂಸಲೇಮನ್ನೂ ಅದರ ವಿಗ್ರಹಗಳನ್ನೂ ಕೆಡವಲಾರೆನೋ?” ಎಂಬುದೇ.
فَيَكُونُ مَتَى أَكْمَلَ ٱلسَّيِّدُ كُلَّ عَمَلِهِ بِجَبَلِ صِهْيَوْنَ وَبِأُورُشَلِيمَ، أَنِّي أُعَاقِبُ ثَمَرَ عَظَمَةِ قَلْبِ مَلِكِ أَشُّورَ وَفَخْرَ رِفْعَةِ عَيْنَيْهِ. ١٢ 12
೧೨ಆದಕಾರಣ ಕರ್ತನಾದ ನಾನು ಚೀಯೋನ್ ಪರ್ವತದಲ್ಲಿಯೂ, ಯೆರೂಸಲೇಮಿನಲ್ಲಿಯೂ ನನ್ನ ಉದ್ದೇಶವನ್ನೆಲ್ಲಾ ನೆರವೇರಿಸಿದ ಮೇಲೆ, “ಅಶ್ಶೂರದ ರಾಜನ ಹೃದಯದ ದೊಡ್ಡಸ್ತಿಕೆಯ ಫಲಕ್ಕೂ, ಅವನ ಗರ್ವದೃಷ್ಟಿಯ ಮೆರೆದಾಟಕ್ಕೂ ತಕ್ಕ ದಂಡನೆಯನ್ನು ಮಾಡುವೆನು.”
لِأَنَّهُ قَالَ: «بِقُدْرَةِ يَدِي صَنَعْتُ، وَبِحِكْمَتِي. لِأَنِّي فَهِيمٌ. وَنَقَلْتُ تُخُومَ شُعُوبٍ، وَنَهَبْتُ ذَخَائِرَهُمْ، وَحَطَطْتُ ٱلْمُلُوكَ كَبَطَلٍ. ١٣ 13
೧೩ಏಕೆಂದರೆ ಅವನು ತನ್ನೊಳಗೆ, “ನನ್ನ ಜ್ಞಾನ, ಭುಜಬಲಗಳಿಂದಲೇ ಇದನ್ನು ಮಾಡಿದ್ದೇನೆ. ನಾನೇ ವಿವೇಕವುಳ್ಳ ಜನಾಂಗಗಳ ಮೇರೆಗಳನ್ನು ಕಿತ್ತು, ಅವರ ನಿಧಿನಿಕ್ಷೇಪಗಳನ್ನು ಸೂರೆಮಾಡಿ, ಸಿಂಹಾಸನಾರೂಢರನ್ನು ಮಹಾವೀರನಂತೆ ಕೆಡವಿಬಿಟ್ಟಿದ್ದೇನೆ.
فَأَصَابَتْ يَدِي ثَرْوَةَ ٱلشُّعُوبِ كَعُشٍّ، وَكَمَا يُجْمَعُ بَيْضٌ مَهْجُورٌ، جَمَعْتُ أَنَا كُلَّ ٱلْأَرْضِ، وَلَمْ يَكُنْ مُرَفْرِفُ جَنَاحٍ وَلَا فَاتِحُ فَمٍ وَلَا مُصَفْصِفٌ». ١٤ 14
೧೪ಜನಗಳ ಆಸ್ತಿಪಾಸ್ತಿಯು ಗೂಡಿನಂತೆ ನನ್ನ ಕೈಗೆ ಸಿಕ್ಕಿದೆ. ಪಕ್ಷಿಯು ಇಟ್ಟುಹೋದ ಮೊಟ್ಟೆಗಳನ್ನು ಸಂಗ್ರಹಿಸಿಕೊಳ್ಳುವವನಂತೆ ಭೂಮಿಯನ್ನೆಲ್ಲಾ ಸಂಗ್ರಹಿಸಿಕೊಂಡಿದ್ದೇನೆ. ರೆಕ್ಕೆಯಾಡಿಸಿ, ಬಾಯಿ ತೆರೆದು ಕಿಚುಗುಟ್ಟುವವರು ಯಾರೂ ಇಲ್ಲ” ಎಂದು ಅಂದುಕೊಂಡನು.
هَلْ تَفْتَخِرُ ٱلْفَأْسُ عَلَى ٱلْقَاطِعِ بِهَا، أَوْ يَتَكَبَّرُ ٱلْمِنْشَارُ عَلَى مُرَدِّدِهِ؟ كَأَنَّ ٱلْقَضِيبَ يُحَرِّكُ رَافِعَهُ! كَأَنَّ ٱلْعَصَا تَرْفَعُ مَنْ لَيْسَ هُوَ عُودًا! ١٥ 15
೧೫ಕೊಡಲಿಯು ಕಡಿಯುವವನಿಗೆ ವಿರುದ್ಧವಾಗಿ ಕೊಚ್ಚಿಕೊಂಡೀತೇ? ಗರಗಸವು ಕತ್ತರಿಸುವವನಿಗೆ ಪ್ರತಿಯಾಗಿ ತನ್ನನ್ನು ಹೆಚ್ಚಿಸಿಕೊಂಡೀತೇ? ಕೋಲು ತನ್ನನ್ನು ಎತ್ತಿದವನ ಮೇಲೆಯೇ ಬೀಸುವಂತಾಯಿತು, ಮರಕ್ಕಿಂತ ಶ್ರೇಷ್ಠನಾಗಿರುವ ಮನುಷ್ಯನನ್ನು ದೊಣ್ಣೆಯು ಎತ್ತಿಕೊಂಡ ಹಾಗಾಯಿತು.
لِذَلِكَ يُرْسِلُ ٱلسَّيِّدُ، سَيِّدُ ٱلْجُنُودِ، عَلَى سِمَانِهِ هُزَالًا، وَيُوقِدُ تَحْتَ مَجْدِهِ وَقِيدًا كَوَقِيدِ ٱلنَّارِ. ١٦ 16
೧೬ಆದಕಾರಣ ಸೇನಾಧೀಶ್ವರನಾದ ಯೆಹೋವನೆಂಬ ಕರ್ತನು ಕೊಬ್ಬಿದ ಪ್ರಜೆಗಳಿಗೆ ಕ್ಷಯವನ್ನು ಉಂಟುಮಾಡುವನು. ದಹಿಸುವ ಅಗ್ನಿಯಂತಿರುವ ಉರಿಯೊಂದು ಅವನ ವೈಭವದ ಅಸ್ತಿವಾರಕ್ಕೆ ಹತ್ತಿಕೊಳ್ಳುವುದು.
وَيَصِيرُ نُورُ إِسْرَائِيلَ نَارًا وَقُدُّوسُهُ لَهِيبًا، فَيُحْرِقُ وَيَأْكُلُ حَسَكَهُ وَشَوْكَهُ فِي يَوْمٍ وَاحِدٍ، ١٧ 17
೧೭ಇಸ್ರಾಯೇಲರ ಪರಂಜ್ಯೋತಿಯು ದಹಿಸುವ ಅಗ್ನಿಯಾಗುವುದು. ಅವರ ಪರಿಶುದ್ಧನು ಜ್ವಾಲೆಯಂತಿರುವನು. ಅದು ಒಂದೇ ದಿನದಲ್ಲಿ ಅಶ್ಶೂರದ ಮುಳ್ಳುಗಿಳ್ಳನ್ನು ಸುಟ್ಟು ನುಂಗಿಬಿಡುವುದು.
وَيُفْنِي مَجْدَ وَعْرِهِ وَبُسْتَانِهِ، ٱلنَّفْسَ وَٱلْجَسَدَ جَمِيعًا. فَيَكُونُ كَذَوَبَانِ ٱلْمَرِيضِ. ١٨ 18
೧೮ಅದು ದೇಹಾತ್ಮಗಳನ್ನು ಉಳಿಸದೇ ಅಲ್ಲಿನ ವನದ ಮತ್ತು ತೋಟದ ವೈಭವವನ್ನು ನಿರ್ಮೂಲ ಮಾಡುವುದು. ದೇಶವೋ ರೋಗಿಯಂತೆ ನಾಶವಾಗುವುದು.
وَبَقِيَّةُ أَشْجَارِ وَعْرِهِ تَكُونُ قَلِيلَةً حَتَّى يَكْتُبَهَا صَبِيٌّ. ١٩ 19
೧೯ಅದರ ವನವೃಕ್ಷಗಳ ಸಂಖ್ಯೆಯು ಒಂದು ಚಿಕ್ಕಮಗುವೂ ಸಹ ಎಣಿಸಿ ಬರೆಯುವಷ್ಟು ಕಡಿಮೆಯಾಗುವುದು.
وَيَكُونُ فِي ذَلِكَ ٱلْيَوْمِ أَنَّ بَقِيَّةَ إِسْرَائِيلَ وَٱلنَّاجِينَ مِنْ بَيْتِ يَعْقُوبَ لَا يَعُودُونَ يَتَوَكَّلُونَ أَيْضًا عَلَى ضَارِبِهِمْ، بَلْ يَتَوَكَّلُونَ عَلَى ٱلرَّبِّ قُدُّوسِ إِسْرَائِيلَ بِٱلْحَقِّ. ٢٠ 20
೨೦ಆ ದಿನದಲ್ಲಿ ಇಸ್ರಾಯೇಲರೊಳಗೆ ಉಳಿದವರು, ಯಾಕೋಬಿನ ಮನೆತನದವರಲ್ಲಿ ತಪ್ಪಿಸಿಕೊಂಡವರು ತಮ್ಮನ್ನು ಹೊಡೆದವನ ಆಧಾರವನ್ನು ಬಿಟ್ಟು ಯೆಹೋವನೆಂಬ ಇಸ್ರಾಯೇಲರ ಸದಮಲಸ್ವಾಮಿಯನ್ನು ನಂಬಿಗಸ್ತರಾಗಿ ಆಧಾರಮಾಡಿಕೊಳ್ಳುವರು.
تَرْجِعُ ٱلْبَقِيَّةُ، بَقِيَّةُ يَعْقُوبَ، إِلَى ٱللهِ ٱلْقَدِيرِ. ٢١ 21
೨೧ಉಳಿದವರು ಅಂದರೆ ಯಾಕೋಬ್ಯರಲ್ಲಿ ಉಳಿದವರೂ ಸಹ ಪರಾಕ್ರಮಿಯಾದ ದೇವರ ಕಡೆಗೆ ತಿರುಗಿಕೊಳ್ಳುವರು.
لِأَنَّهُ وَإِنْ كَانَ شَعْبُكَ يَا إِسْرَائِيلُ كَرَمْلِ ٱلْبَحْرِ تَرْجِعُ بَقِيَّةٌ مِنْهُ. قَدْ قُضِيَ بِفَنَاءٍ فَائِضٍ بِٱلْعَدْلِ. ٢٢ 22
೨೨ಇಸ್ರಾಯೇಲೇ, ನಿನ್ನ ಜನರು ಸಮುದ್ರದ ಉಸುಬಿನಂತೆ ಅಸಂಖ್ಯವಾಗಿದ್ದರೂ ಅವರಲ್ಲಿ ಉಳಿದವರು ಮಾತ್ರ ತಿರುಗಿಕೊಳ್ಳುವರು. ನಾಶವಾಗುವುದಕ್ಕೆ ವಿಧಿಸಲ್ಪಟ್ಟದ್ದು, ನ್ಯಾಯನೀತಿಯಿಂದ ತುಂಬಿ ತುಳುಕುವುದು.
لِأَنَّ ٱلسَّيِّدَ رَبَّ ٱلْجُنُودِ يَصْنَعُ فَنَاءً وَقَضَاءً فِي كُلِّ ٱلْأَرْضِ. ٢٣ 23
೨೩ಏಕೆಂದರೆ ಸೇನಾಧೀಶ್ವರನಾದ ಯೆಹೋವನೆಂಬ ಕರ್ತನು ಭೂಮಂಡಲದಲ್ಲೆಲ್ಲಾ ನಿಶ್ಚಯಿಸಲ್ಪಟ್ಟ ನಾಶನವನ್ನು ಉಂಟುಮಾಡುವನು.
وَلَكِنْ هَكَذَا يَقُولُ ٱلسَّيِّدُ رَبُّ ٱلْجُنُودِ: «لَا تَخَفْ مِنْ أَشُّورَ يَا شَعْبِي ٱلسَّاكِنُ فِي صِهْيَوْنَ. يَضْرِبُكَ بِٱلْقَضِيبِ، وَيَرْفَعُ عَصَاهُ عَلَيْكَ عَلَى أُسْلُوبِ مِصْرَ. ٢٤ 24
೨೪ಆದುದರಿಂದ ಸೇನಾಧೀಶ್ವರನಾದ ಯೆಹೋವನೆಂಬ ಕರ್ತನು ಹೀಗೆ ಹೇಳುತ್ತಾನೆ, “ಚೀಯೋನಿನಲ್ಲಿ ವಾಸಿಸುವ ನನ್ನ ಜನರೇ, ಐಗುಪ್ತರು ಮಾಡಿದಂತೆ, ನಿಮ್ಮನ್ನು ಕೋಲಿನಿಂದ ಹೊಡೆದು, ನಿಮ್ಮ ವಿರುದ್ಧವಾಗಿ ದೊಣ್ಣೆಯನ್ನು ಎತ್ತುವ ಅಶ್ಶೂರರಿಗೆ ಭಯಪಡಬೇಡಿರಿ.
لِأَنَّهُ بَعْدَ قَلِيلٍ جِدًّا يَتِمُّ ٱلسَّخَطُ وَغَضَبِي فِي إِبَادَتِهِمْ». ٢٥ 25
೨೫ಇನ್ನು ಸ್ವಲ್ಪ ಕಾಲದೊಳಗೆ ನಿಮ್ಮ ಮೇಲಿನ ಉಗ್ರವು ತೀರಿ, ನನ್ನ ಕೋಪವು ಅವರ ನಾಶನಕ್ಕಾಗುವುದು.”
وَيُقِيمُ عَلَيْهِ رَبُّ ٱلْجُنُودِ سَوْطًا، كَضَرْبَةِ مِدْيَانَ عِنْدَ صَخْرَةِ غُرَابَ، وَعَصَاهُ عَلَى ٱلْبَحْرِ، وَيَرْفَعُهَا عَلَى أُسْلُوبِ مِصْرَ. ٢٦ 26
೨೬ಸೇನಾಧೀಶ್ವರನಾದ ಯೆಹೋವನು ಓರೇಬ ಬಂಡೆಯ ಹತ್ತಿರ ಮಿದ್ಯಾನ್ಯರನ್ನು ಹತಮಾಡಿದಂತೆ, ಆತನು ಕೋಲನ್ನು ಸಮುದ್ರದ ಮೇಲೆ ಚಾಚಿ, ಐಗುಪ್ತರ ಮೇಲೆ ಎತ್ತಿದಂತೆ ಎತ್ತುವನು.
وَيَكُونُ فِي ذَلِكَ ٱلْيَوْمِ أَنَّ حِمْلَهُ يَزُولُ عَنْ كَتِفِكَ، وَنِيرَهُ عَنْ عُنُقِكَ، وَيَتْلَفُ ٱلنِّيرُ بِسَبَبِ ٱلسَّمَانَةِ. ٢٧ 27
೨೭ಆ ದಿನದಲ್ಲಿ, ಅವರು ಹೊರಿಸಿದ ಹೊರೆಯು, ನಿಮ್ಮ ಬೆನ್ನಿನಿಂದಲೂ, ಹೂಡಿದ ನೊಗವು ಕುತ್ತಿಗೆಯಿಂದಲೂ ತೊಲಗುವುದು, ಮತ್ತು ನೀವು ಕೊಬ್ಬಿದ ಕಾರಣ ನೊಗವು ಮುರಿದು ಹೋಗುವುದು.
قَدْ جَاءَ إِلَى عَيَّاثَ. عَبَرَ بِمِجْرُونَ. وَضَعَ فِي مِخْمَاشَ أَمْتِعَتَهُ. ٢٨ 28
೨೮ಶತ್ರುಗಳು ಅಯ್ಯಾಥಿನ ಮೇಲೆ ದಂಡೆತ್ತಿ ಬಂದಿದ್ದಾರೆ, ಮಿಗ್ರೋನನ್ನು ಹಾದುಹೋಗಿದ್ದಾರೆ; ಮಿಕ್ಮಾಷಿನಲ್ಲಿ ತಮ್ಮ ಸಾಮಗ್ರಿಯನ್ನು ಇಟ್ಟುಬಿಟ್ಟಿದ್ದಾರೆ.
عَبَرُوا ٱلْمَعْبَرَ. بَاتُوا فِي جَبَعَ. ٱرْتَعَدَتِ ٱلرَّامَةُ. هَرَبَتْ جِبْعَةُ شَاوُلَ. ٢٩ 29
೨೯ಕಣಿವೆಯನ್ನು ದಾಟಿದ್ದಾರೆ, ಗೆಬದಲ್ಲಿ ದಂಡಿಳಿಸುವ ಅನ್ನುತ್ತಾರೆ. ರಾಮಾ ನಡುಗುತ್ತದೆ, ಸೌಲನ ಗಿಬೆಯು ಓಡಿಹೋಯಿತು.
اِصْهِلِي بِصَوْتِكِ يَا بِنْتَ جَلِّيمَ. ٱسْمَعِي يَا لَيْشَةُ. مِسْكِينَةٌ هِيَ عَنَاثُوثُ. ٣٠ 30
೩೦ಗಲ್ಲೀಮ್ ಗ್ರಾಮವೇ, ಕೂಗಿ ಅರಚಿಕೋ! ಲಯೆಷವೇ, ಕಿವಿಗೊಡು! ಅನಾತೋತೇ, ಪ್ರತಿಧ್ವನಿ ಕೊಡು!
هَرَبَتْ مَدْمِينَةُ. ٱحْتَمَى سُكَّانُ جِيبِيمَ. ٣١ 31
೩೧ಮದ್ಮೇನ ದಿಕ್ಕಾಪಾಲಾಯಿತು. ಗೇಬೀಮಿನ ನಿವಾಸಿಗಳು ವಲಸೆ ಹೋದರು.
ٱلْيَوْمَ يَقِفُ فِي نُوبَ. يَهُزُّ يَدَهُ عَلَى جَبَلِ بِنْتِ صِهْيَوْنَ، أَكَمَةِ أُورُشَلِيمَ. ٣٢ 32
೩೨ಇದೇ ದಿನ ಶತ್ರುಗಳು ನೋಬಿನಲ್ಲಿ ಬೀಡುಬಿಡುವರು. ಚೀಯೋನ್ ನಗರಿಯ ಪರ್ವತದ ಕಡೆಗೆ ಯೆರೂಸಲೇಮಿನ ಬೆಟ್ಟದ ಕಡೆಗೆ ಕೈ ಬೀಸುತ್ತಾರೆ.
هُوَذَا ٱلسَّيِّدُ رَبُّ ٱلْجُنُودِ يَقْضِبُ ٱلْأَغْصَانَ بِرُعْبٍ، وَٱلْمُرْتَفِعُو ٱلْقَامَةِ يُقْطَعُونَ، وَٱلْمُتَشَامِخُونَ يَنْخَفِضُونَ. ٣٣ 33
೩೩ಆಹಾ, ಸೇನಾಧೀಶ್ವರನಾದ ಯೆಹೋವನೆಂಬ ಕರ್ತನು ಕೊಂಬೆಗಳನ್ನು ಕತ್ತರಿಸುವನು. ಅವು ಧಡಮ್ಮನೆ ಬೀಳುವವು. ಉನ್ನತವಾದ ವೃಕ್ಷಗಳು ಕಡಿದು ಕೆಳಗೆ ಬೀಳುವವು. ಎತ್ತರವಾದ ಮರಗಳು ನೆಲದ ಪಾಲಾಗುವವು.
وَيُقْطَعُ غَابُ ٱلْوَعْرِ بِٱلْحَدِيدِ، وَيَسْقُطُ لُبْنَانُ بِقَدِيرٍ. ٣٤ 34
೩೪ಆತನು ಅಡವಿಯ ಪೊದೆಗಳನ್ನು ಕಬ್ಬಿಣದ ಕೊಡಲಿಯಿಂದ ಕಡಿದುಬಿಡುವನು. ಲೆಬನೋನಿನ ವನವು ಬಲಿಷ್ಠನಾದವನ ಮುಂದೆ ಬಿದ್ದುಹೋಗುವುದು.

< إِشَعْيَاءَ 10 >