< إِشَعْيَاءَ 3 >

فَإِنَّهُ هُوَذَا ٱلسَّيِّدُ رَبُّ ٱلْجُنُودِ يَنْزِعُ مِنْ أُورُشَلِيمَ وَمِنْ يَهُوذَا ٱلسَّنَدَ وَٱلرُّكْنَ، كُلَّ سَنَدِ خُبْزٍ، وَكُلَّ سَنَدِ مَاءٍ. ١ 1
ಇಗೋ, ಕರ್ತನೂ, ಸೇನಾಧೀಶ್ವರನೂ ಆಗಿರುವ ಯೆಹೋವನೆಂಬ ನಾನು ಯೆರೂಸಲೇಮಿನಿಂದಲೂ, ಯೆಹೂದದಿಂದಲೂ ಜೀವನಕ್ಕೆ ಆಧಾರವಾದ ಅನ್ನಪಾನಗಳನ್ನೆಲ್ಲಾ ತೆಗೆದುಬಿಡುವೆನು.
ٱلْجَبَّارَ وَرَجُلَ ٱلْحَرْبِ. ٱلْقَاضِيَ وَٱلنَّبِيَّ وَٱلْعَرَّافَ وَٱلشَّيْخَ. ٢ 2
ಇದಲ್ಲದೆ ಶೂರ, ಯುದ್ಧಭಟರು, ನ್ಯಾಯಾಧಿಪತಿ, ಪ್ರವಾದಿ, ಶಕುನದವ, ಹಿರಿಯ,
رَئِيسَ ٱلْخَمْسِينَ وَٱلْمُعْتَبَرَ وَٱلْمُشِيرَ، وَٱلْمَاهِرَ بَيْنَ ٱلصُّنَّاعِ، وَٱلْحَاذِقَ بِٱلرُّقْيَةِ. ٣ 3
ಪಂಚಾಶತಾಧಿಪತಿ, ಘನವಂತನು, ಆಲೋಚನಾಪರನು, ತಾಂತ್ರಿಕನು ಮತ್ತು ವಾಕ್ಚಾತುರ್ಯವುಳ್ಳವನು ಆಗಿರುವ ಇವರೆಲ್ಲರನ್ನು ತೊಲಗಿಸಿಬಿಡುವೆನು.
وَأَجْعَلُ صُبْيَانًا رُؤَسَاءَ لَهُمْ، وَأَطْفَالًا تَتَسَلَّطُ عَلَيْهِمْ. ٤ 4
ನಾನು, “ಬಾಲಕರನ್ನು ಪ್ರಭುಗಳನ್ನಾಗಿ ಆ ದೇಶಕ್ಕೆ ನೇಮಿಸುವೆನು, ಬಾಲಕರು ಅದನ್ನು ಆಳುವರು.
وَيَظْلِمُ ٱلشَّعْبُ بَعْضُهُمْ بَعْضًا، وَٱلرَّجُلُ صَاحِبَهُ. يَتَمَرَّدُ ٱلصَّبِيُّ عَلَى ٱلشَّيْخِ، وَٱلدَّنِيءُ عَلَى ٱلشَّرِيفِ. ٥ 5
ಪ್ರಜೆಗಳು ಪರಸ್ಪರ ವಿರೋಧಿಗಳಾಗಿ, ಒಬ್ಬರನೊಬ್ಬರು ಹಿಂಸಿಸುವರು, ಬಾಲಕರು ಹಿರಿಯರ ಮೇಲೆಯೂ, ನೀಚನು ಘನವಂತನ ಜೊತೆಯಲ್ಲಿ ಸೊಕ್ಕಿನಿಂದ ವರ್ತಿಸುವರು.
إِذَا أَمْسَكَ إِنْسَانٌ بِأَخِيهِ فِي بَيْتِ أَبِيهِ قَائِلًا: «لَكَ ثَوْبٌ فَتَكُونُ لَنَا رَئِيسًا، وَهَذَا ٱلْخَرَابُ تَحْتَ يَدِكَ» ٦ 6
ಆ ದಿನದಲ್ಲಿ ಒಬ್ಬನು ತನ್ನ ಸಹೋದರನನ್ನು ತಂದೆಯ ಮನೆಯಲ್ಲಿ ಹಿಡಿದು, ‘ನಿನಗೆ ನಿಲುವಂಗಿ ಇದೆ. ನೀನು ನಮಗೆ ಒಡೆಯನಾಗಬೇಕು. ಹಾಳಾದ ಈ ಪಟ್ಟಣವು ನಿನ್ನ ಕೈಕೆಳಗಿರಲಿ ತಂದೆಯ ಮನೆಯೊಳಗೆ ಅಣ್ಣನನ್ನು ಬಲವಂತ ಮಾಡಲು ಅಣ್ಣನು ದೇಶದ ನಿರರ್ಥಕ ವ್ರಣವೈದ್ಯನಾಗುವುದಕ್ಕೆ ನನಗೆ ಇಷ್ಟವಿಲ್ಲ’ ಎಂದು ನಿರಾಕರಿಸುವನು.
يَرْفَعُ صَوْتَهُ فِي ذَلِكَ ٱلْيَوْمِ قَائِلًا: «لَا أَكُونُ عَاصِبًا وَفِي بَيْتِي لَا خُبْزَ وَلَا ثَوْبَ. لَا تَجْعَلُونِي رَئِيسَ ٱلشَّعْبِ». ٧ 7
ಆ ದಿನದಲ್ಲಿ ಅವನು ಗಟ್ಟಿಯಾಗಿ ಕೂಗುತ್ತಾ, ‘ನಾನು ನಿಮ್ಮನ್ನು ಸ್ವಸ್ಥಪಡಿಸುವುದಿಲ್ಲ. ನನ್ನ ಮನೆಯಲ್ಲಿ ಅನ್ನವಾಗಲೀ, ವಸ್ತ್ರವಾಗಲೀ ಇಲ್ಲ: ಜನರನ್ನು ಆಳುವ ಒಡೆಯನನ್ನಾಗಿ ನನ್ನನ್ನು ಮಾಡಬೇಡಿರಿ’” ಎಂದು ಹೇಳುವನು.
لِأَنَّ أُورُشَلِيمَ عَثَرَتْ، وَيَهُوذَا سَقَطَتْ، لِأَنَّ لِسَانَهُمَا وَأَفْعَالَهُمَا ضِدَّ ٱلرَّبِّ لِإِغَاظَةِ عَيْنَيْ مَجْدِهِ. ٨ 8
ಏಕೆಂದರೆ ಯೆರೂಸಲೇಮ್ ಹಾಳಾಯಿತು. ಯೆಹೂದವು ಬಿದ್ದುಹೋಯಿತು. ಅವರ ನಡೆನುಡಿಗಳು ಯೆಹೋವನಿಗೆ ವಿರುದ್ಧವಾಗಿ ಆತನ ಪ್ರಭಾವದ ದೃಷ್ಟಿಯನ್ನು ಕೆರಳಿಸುತ್ತದಲ್ಲವೇ?
نَظَرُ وُجُوهِهِمْ يَشْهَدُ عَلَيْهِمْ، وَهُمْ يُخْبِرُونَ بِخَطِيَّتِهِمْ كَسَدُومَ. لَا يُخْفُونَهَا. وَيْلٌ لِنُفُوسِهِمْ لِأَنَّهُمْ يَصْنَعُونَ لِأَنْفُسِهِمْ شَرًّا. ٩ 9
ಅವರ ಮುಖಭಾವವೇ ಅವರಿಗೆ ವಿರುದ್ಧ ಸಾಕ್ಷಿಯಾಗಿದೆ. ತಮ್ಮ ಪಾಪವನ್ನು ಮರೆಮಾಡದೇ ಸೊದೋಮಿನವರಂತೆ ಪ್ರಕಟಿಸುತ್ತಾರೆ. ಅಯ್ಯೋ, ಅವರ ಆತ್ಮದ ಗತಿಯೇ! ತಮಗೆ ತಾವೇ ಕೇಡು ಮಾಡಿಕೊಂಡಿದ್ದಾರೆ.
قُولُوا لِلصِّدِّيقِ خَيْرٌ! لِأَنَّهُمْ يَأْكُلُونَ ثَمَرَ أَفْعَالِهِمْ. ١٠ 10
೧೦ನೀವು ನೀತಿವಂತರಿಗೆ, “ನಿಮಗೆ ಒಳ್ಳೆಯದಾಗಲಿ” ಎಂದು ಹೇಳಿರಿ, ಅವರು ತಮ್ಮ ಒಳ್ಳೆಯ ಫಲವನ್ನು ಅನುಭವಿಸುವರು.
وَيْلٌ لِلشِّرِّيرِ. شَرٌّ! لِأَنَّ مُجَازَاةَ يَدَيْهِ تُعْمَلُ بِهِ. ١١ 11
೧೧ದುಷ್ಟರ ಗತಿಯನ್ನು ಏನು ಹೇಳಲಿ! ಅವರ ಕಾರ್ಯಗಳಿಗೆ ತಕ್ಕ ಪ್ರತಿಫಲವು ಅವರಿಗೆ ದೊರಕುವುದು.
شَعْبِي ظَالِمُوهُ أَوْلَادٌ، وَنِسَاءٌ يَتَسَلَّطْنَ عَلَيْهِ. يَا شَعْبِي، مُرْشِدُوكَ مُضِلُّونَ، وَيَبْلَعُونَ طَرِيقَ مَسَالِكِكَ. ١٢ 12
೧೨ನನ್ನ ಪ್ರಜೆಗಳನ್ನು ಬಾಲಕರು ಬಾಧಿಸುವರು. ಸ್ತ್ರೀಯರು ಅವರನ್ನು ಆಳುವರು. ನನ್ನ ಪ್ರಜೆಗಳೇ, ನಿಮ್ಮನ್ನು ನಡೆಸುವವರು ದಾರಿತಪ್ಪಿಸುವವರಾಗಿದ್ದಾರೆ. ನೀವು ನಡೆಯತಕ್ಕ ದಾರಿಯನ್ನು ಹಾಳುಮಾಡಿದ್ದಾರೆ.
قَدِ ٱنْتَصَبَ ٱلرَّبُّ لِلْمُخَاصَمَةِ، وَهُوَ قَائِمٌ لِدَيْنُونَةِ ٱلشُّعُوبِ. ١٣ 13
೧೩ಯೆಹೋವನು ವಾದಿಸುವುದಕ್ಕೂ, ಜನರಿಗೆ ನ್ಯಾಯತೀರಿಸುವುದಕ್ಕೂ ಎದ್ದು ನಿಂತಿದ್ದಾನೆ.
اَلرَّبُّ يَدْخُلُ فِي ٱلْمُحَاكَمَةِ مَعَ شُيُوخِ شَعْبِهِ وَرُؤَسَائِهِمْ: «وَأَنْتُمْ قَدْ أَكَلْتُمُ ٱلْكَرْمَ. سَلَبُ ٱلْبَائِسِ فِي بُيُوتِكُمْ. ١٤ 14
೧೪ಯೆಹೋವನು ತನ್ನ ಜನರ ಹಿರಿಯರನ್ನು, ಅಧಿಕಾರಿಗಳನ್ನೂ ನ್ಯಾಯವಿಚಾರಣೆಗೆ ತರುವನು. ಏಕೆಂದರೆ, “ನೀವು ದ್ರಾಕ್ಷಿಯ ತೋಟವನ್ನು ನುಂಗಿಬಿಟ್ಟಿದ್ದೀರಿ. ಬಡವರಿಂದ ಕೊಳ್ಳೆಹೊಡೆದದ್ದು ನಿಮ್ಮ ಮನೆಗಳಲ್ಲಿ ಇದೆ.
مَا لَكُمْ تَسْحَقُونَ شَعْبِي، وَتَطْحَنُونَ وُجُوهَ ٱلْبَائِسِينَ؟ يَقُولُ ٱلسَّيِّدُ رَبُّ ٱلْجُنُودِ». ١٥ 15
೧೫ನೀವು ನನ್ನ ಜನರನ್ನು ಜಜ್ಜಿ, ಬಡವರನ್ನು ದುಃಖದಿಂದ ಹಿಂಸಿಸುವುದೇಕೆ?” ಎಂದು ಕರ್ತನಾದ ಸೇನಾಧೀಶ್ವರ ಯೆಹೋವನು ವಾದಿಸುವನು.
وَقَالَ ٱلرَّبُّ: «مِنْ أَجْلِ أَنَّ بَنَاتِ صِهْيَوْنَ يَتَشَامَخْنَ، وَيَمْشِينَ مَمْدُودَاتِ ٱلْأَعْنَاقِ، وَغَامِزَاتٍ بِعُيُونِهِنَّ، وَخَاطِرَاتٍ فِي مَشْيِهِنَّ، وَيُخَشْخِشْنَ بِأَرْجُلِهِنَّ، ١٦ 16
೧೬ಇದಲ್ಲದೆ ಯೆಹೋವನು ಹೀಗನ್ನುತ್ತಾನೆ, ಚೀಯೋನಿನ ಹೆಂಗಸರು ಅಹಂಕಾರವುಳ್ಳವರಾಗಿ, ಕತ್ತು ತೂಗುತ್ತಾ, ಕಣ್ಣುಗಳನ್ನು ತಿರುಗಿಸುತ್ತಾ, ವಯ್ಯಾರವಾಗಿ ಹೆಜ್ಜೆ ಇಡುತ್ತಾ, ಕಾಲು ಗೆಜ್ಜೆ ಜಣಜಣಿಸುತ್ತಾ ನಡೆಯುವವರಾಗಿರುವುದರಿಂದ,
يُصْلِعُ ٱلسَّيِّدُ هَامَةَ بَنَاتِ صِهْيَوْنَ، وَيُعَرِّي ٱلرَّبُّ عَوْرَتَهُنَّ. ١٧ 17
೧೭ಕರ್ತನಾದ ಯೆಹೋವನು ಚೀಯೋನಿನ ಪುತ್ರಿಯರ ನಡುನೆತ್ತಿಯನ್ನೂ ಹುಣ್ಣಿನಿಂದ ಬಾಧಿಸಿ, ಅವರ ಮಾನವನ್ನು ಬಯಲುಮಾಡುವನು.
يَنْزِعُ ٱلسَّيِّدُ فِي ذَلِكَ ٱلْيَوْمِ زِينَةَ ٱلْخَلَاخِيلِ وَٱلضَّفَائِرِ وَٱلْأَهِلَّةِ، ١٨ 18
೧೮ಆ ದಿನದಲ್ಲಿ ಕರ್ತನು ಅವರ ಅಂದುಗೆ, ತುರುಬುಬಲೆ, ಅರ್ಧಚಂದ್ರ,
وَٱلْحَلَقِ وَٱلْأَسَاوِرِ وَٱلْبَرَاقِعِ ١٩ 19
೧೯ಜುಮುಕಿ, ಬಳೆ, ಶಿರವಸ್ತ್ರ,
وَٱلْعَصَائِبِ وَٱلسَّلَاسِلِ وَٱلْمَنَاطِقِ وَحَنَاجِرِ ٱلشَّمَّامَاتِ وَٱلْأَحْرَازِ، ٢٠ 20
೨೦ಮುಂಡಾಸು, ಕಾಲಗೆಜ್ಜೆ, ಡಾಬು, ಗಂಧದ ಭರಣಿ, ತೋಳಬಂಧಿ,
وَٱلْخَوَاتِمِ وَخَزَائِمِ ٱلْأَنْفِ، ٢١ 21
೨೧ಮುದ್ರೆ ಉಂಗುರ, ಮೂಗುತಿ,
وَٱلثِّيَابِ ٱلْمُزَخْرَفَةِ وَٱلْعُطْفِ وَٱلْأَرْدِيَةِ وَٱلْأَكْيَاسِ، ٢٢ 22
೨೨ಹಬ್ಬದ ಉಡುಗೆ-ತೊಡುಗೆ, ಮೇಲಂಗಿ, ಶಾಲು, ಕೈಚೀಲ,
وَٱلْمَرَائِي وَٱلْقُمْصَانِ وَٱلْعَمَائِمِ وَٱلْأُزُرِ. ٢٣ 23
೨೩ಕೈಗನ್ನಡಿ, ನಾರುಮಡಿ, ಮುಡಿ ಮುಕುಟ, ಮೇಲ್ಹೊದಿಕೆ ಈ ಸೊಗಸಾದ ಭೂಷಣಗಳನ್ನೆಲ್ಲಾ ತೆಗೆದುಹಾಕುವನು.
فَيَكُونُ عِوَضَ ٱلطِّيبِ عُفُونَةٌ، وَعِوَضَ ٱلْمِنْطَقَةِ حَبْلٌ، وَعِوَضَ ٱلْجَدَائِلِ قَرْعَةٌ، وَعِوَضَ ٱلدِّيبَاجِ زُنَّارُ مِسْحٍ، وَعِوَضَ ٱلْجَمَالِ كَيٌّ! ٢٤ 24
೨೪ಆಗ ಸುಗಂಧದ ಬದಲಾಗಿ ದುರ್ವಾಸನೆ, ಡಾಬಿಗೆ ಬದಲಾಗಿ ಹಗ್ಗ, ಅಂದವಾದ ಜಡೆಯ ಬದಲಾಗಿ ಬೋಳುತಲೆ, ನಡುವಿನ ಶಲ್ಯಕ್ಕೆ ಬದಲಾಗಿ ಗೋಣಿತಟ್ಟು, ಸೌಂದರ್ಯಕ್ಕೆ ಬದಲಾಗಿ ಕುರೂಪ, ಬೆತ್ತಲೆ ಉಂಟಾಗುವುದು.
رِجَالُكِ يَسْقُطُونَ بِٱلسَّيْفِ، وَأَبْطَالُكِ فِي ٱلْحَرْبِ. ٢٥ 25
೨೫ಚೀಯೋನ್ ನಗರಿಯೇ, ನಿನ್ನ ವೀರರು ಖಡ್ಗದಿಂದ ಬಿದ್ದುಹೋಗುವರು. ನಿನ್ನ ಶೌರ್ಯವು ಯುದ್ಧದಲ್ಲಿ ಅಡಗಿ ಹೋಗುವುದು.
فَتَئِنُّ وَتَنُوحُ أَبْوَابُهَا، وَهِيَ فَارِغَةً تَجْلِسُ عَلَى ٱلْأَرْضِ. ٢٦ 26
೨೬ಅವಳ ಪುರದ್ವಾರಗಳಲ್ಲಿ ಪ್ರಲಾಪವೂ, ದುಃಖವೂ ತುಂಬಿರುವವು. ಅವಳು ಹಾಳಾಗಿ ನೆಲದ ಮೇಲೆ ಕುಳಿತುಕೊಳ್ಳುವಳು.

< إِشَعْيَاءَ 3 >