< أَيُّوبَ 17 >

«رُوحِي تَلِفَتْ. أَيَّامِي ٱنْطَفَأَتْ. إِنَّمَا ٱلْقُبُورُ لِي. ١ 1
“ನನ್ನ ಉಸಿರು ಕಟ್ಟುತ್ತಿದೆ, ನನ್ನ ಆಯಷ್ಕಾಲವು ಮುಗಿದಿವೆ, ಗೋರಿಯು ನನಗಾಗಿ ಕಾದಿದೆ.
«لَوْلَا ٱلْمُخَاتِلُونَ عِنْدِي، وَعَيْنِي تَبِيتُ عَلَى مُشَاجَرَاتِهِمْ. ٢ 2
ನನ್ನ ಬಳಿಯಲ್ಲಿರುವವರು ಹಾಸ್ಯಗಾರರೇ ಸರಿ, ಅವರ ಕೆಣಕಾಟವು ಯಾವಾಗಲೂ ನನ್ನ ಕಣ್ಣಿನ ಮುಂದೆ ಇದೆ.
كُنْ ضَامِنِي عِنْدَ نَفْسِكَ. مَنْ هُوَ ٱلَّذِي يُصَفِّقُ يَدِي؟ ٣ 3
ಕೃಪೆಮಾಡಿ ಈಡನ್ನು ಕೊಡು, ನನಗಾಗಿ ನೀನೇ ನಿನ್ನ ಹತ್ತಿರ ಹೊಣೆಯಾಗು, ನನ್ನ ಕೈ ಮೇಲೆ ಕೈ ಹಾಕತಕ್ಕವರು ನನಗೆ ಇನ್ನಾರೂ ಇಲ್ಲ.
لِأَنَّكَ مَنَعْتَ قَلْبَهُمْ عَنِ ٱلْفِطْنَةِ، لِأَجْلِ ذَلِكَ لَا تَرْفَعُهُمُ. ٤ 4
ವಿವೇಕವು ಪ್ರವೇಶಿಸದಂತೆ; ಅವರ ಮನಸ್ಸನ್ನು, ಹೃದಯವನ್ನು ಮುಚ್ಚಿರುವೆ, ಹೀಗೆ ಅವರು ಜಯಶೀಲರಾಗದಂತೆ ತಡೆಯುವೆ.
ٱلَّذِي يُسَلِّمُ ٱلْأَصْحَابَ لِلسَّلْبِ، تَتْلَفُ عُيُونُ بَنِيهِ. ٥ 5
ಯಾರು ಸ್ವಲಾಭಕ್ಕಾಗಿ ಮಿತ್ರರ ಮೇಲೆ ದೂರು ಹೊರಿಸುವನೋ, ಅವನ ಮಕ್ಕಳು ಕಂಗೆಡುವರು.
أَوْقَفَنِي مَثَلًا لِلشُّعُوبِ، وَصِرْتُ لِلْبَصْقِ فِي ٱلْوَجْهِ. ٦ 6
ಆತನು ನನ್ನನ್ನು ಅನ್ಯದೇಶದವರ ವ್ಯರ್ಥ ಆಪಾದನೆಗಳಿಗೆ ಗುರಿ ಮಾಡಿದ್ದಾನೆ, ಜನರ ಉಗುಳಿಗೆ ನನ್ನ ಮುಖ ಗುರಿಯಾಗಿದೆ.
كَلَّتْ عَيْنِي مِنَ ٱلْحُزْنِ، وَأَعْضَائِي كُلُّهَا كَٱلظِّلِّ. ٧ 7
ದುಃಖದಿಂದ ನನ್ನ ಕಣ್ಣು ಮೊಬ್ಬಾಗಿದೆ, ನನ್ನ ಅಂಗಗಳೆಲ್ಲಾ ನೆರಳಿನಂತೆ ನಿಸ್ಸಾರವಾಗಿವೆ.
يَتَعَجَّبُ ٱلْمُسْتَقِيمُونَ مِنْ هَذَا، وَٱلْبَرِئُ يَنْتَهِضُ عَلَى ٱلْفَاجِرِ. ٨ 8
ಯಥಾರ್ಥಜನರು ಇದನ್ನು ನೋಡಿ ಬೆರಗಾಗಿದ್ದಾರೆ, ಮತ್ತು ನಿರಪರಾಧಿಯು ಭ್ರಷ್ಟನ ವಿಷಯದಲ್ಲಿ ಎಚ್ಚರಗೊಳ್ಳುತ್ತಾನೆ.
أَمَّا ٱلصِّدِّيقُ فَيَسْتَمْسِكُ بِطَرِيقِهِ، وَٱلطَّاهِرُ ٱلْيَدَيْنِ يَزْدَادُ قُوَّةً. ٩ 9
ಹೀಗಾದರೂ ಶಿಷ್ಟನು ತನ್ನ ಮಾರ್ಗವನ್ನೇ ಹಿಡಿದು ನಡೆಯುವನು, ಶುದ್ಧಹಸ್ತನು ಬಲಗೊಳ್ಳುತ್ತಲೇ ಇರುವನು.
«وَلَكِنِ ٱرْجِعُوا كُلُّكُمْ وَتَعَالَوْا، فَلَا أَجِدُ فِيكُمْ حَكِيمًا. ١٠ 10
೧೦ಆದರೆ ನೀವೆಲ್ಲರೂ ಮತ್ತೆ ವಾದಕ್ಕೆ ಬನ್ನಿರಿ, ನಿಮ್ಮಲ್ಲಿ ಒಬ್ಬ ಜ್ಞಾನಿಯನ್ನಾದರೂ ಕಾಣೆನು.
أَيَّامِي قَدْ عَبَرَتْ. مَقَاصِدِي، إِرْثُ قَلْبِي، قَدِ ٱنْتَزَعَتْ. ١١ 11
೧೧ನನ್ನ ದಿನಗಳು ಮುಗಿದುಹೋದವು. ನನ್ನ ಉದ್ದೇಶಗಳೂ, ನನ್ನ ಹೃದಯದ ಆಶೆಗಳೂ ಭಂಗವಾದವು.
يَجْعَلُونَ ٱللَّيْلَ نَهَارًا، نُورًا قَرِيبًا لِلظُّلْمَةِ. ١٢ 12
೧೨ಇವರು ಇರುಳನ್ನು ಹಗಲೆಂದು ಸಾಧಿಸಿ, ಕತ್ತಲಿಂದ ಬೆಳಕು ಬೇಗನೆ ಬರುವುದೆಂದು ತಿಳಿಸುತ್ತಾರೆ.
إِذَا رَجَوْتُ ٱلْهَاوِيَةَ بَيْتًا لِي، وَفِي ٱلظَّلَامِ مَهَّدْتُ فِرَاشِي، (Sheol h7585) ١٣ 13
೧೩ನಾನು ಪಾತಾಳವನ್ನು ನನ್ನ ಮನೆಯೆಂದು ನಿರೀಕ್ಷಿಸಿ, ನನ್ನ ಹಾಸಿಗೆಯನ್ನು ಕತ್ತಲಲ್ಲಿ ಹಾಸಿದ್ದೇನೆ. (Sheol h7585)
وَقُلْتُ لِلْقَبْرِ: أَنْتَ أَبِي، وَلِلدُّودِ: أَنْتَ أُمِّي وَأُخْتِي، ١٤ 14
೧೪ಸಮಾಧಿಯನ್ನು, ‘ನೀನು, ನನ್ನ ತಂದೆ’ ಎಂದೂ ಹುಳವನ್ನು, ‘ನನ್ನ ತಾಯಿ, ನನ್ನ ತಂಗಿ’ ಎಂದೂ ಕರೆಯುವುದಾದರೆ,
فَأَيْنَ إِذًا آمَالِي؟ آمَالِي، مَنْ يُعَايِنُهَا؟ ١٥ 15
೧೫ನನ್ನ ನಿರೀಕ್ಷೆ ಎಂಥದು? ನನ್ನ ನಿರೀಕ್ಷೆಯನ್ನು ಯಾರು ನೋಡುವರು?
تَهْبِطُ إِلَى مَغَالِيقِ ٱلْهَاوِيَةِ إِذْ تَرْتَاحُ مَعًا فِي ٱلتُّرَابِ». (Sheol h7585) ١٦ 16
೧೬ಅದು ನನ್ನ ಸಂಗಡ ಪಾತಾಳಕ್ಕೆ ಇಳಿದು ಬಂದೀತೇ? ನಾವು ಜೊತೆಯಾಗಿ ಧೂಳಿಗೆ ಸೇರಲು ಸಾಧ್ಯವೇ?” (Sheol h7585)

< أَيُّوبَ 17 >