< اَلْقُضَاة 2 >

وَصَعِدَ مَلَاكُ ٱلرَّبِّ مِنَ ٱلْجِلْجَالِ إِلَى بُوكِيمَ وَقَالَ: «قَدْ أَصْعَدْتُكُمْ مِنْ مِصْرَ وَأَتَيْتُ بِكُمْ إِلَى ٱلْأَرْضِ ٱلَّتِي أَقْسَمْتُ لِآبَائِكُمْ، وَقُلْتُ: لَا أَنْكُثُ عَهْدِي مَعَكُمْ إِلَى ٱلْأَبَدِ. ١ 1
ಯೆಹೋವ ದೇವರ ದೂತನು ಗಿಲ್ಗಾಲಿನಿಂದ ಬೋಕೀಮಿಗೆ ಬಂದು, “ನಾನು ನಿಮ್ಮನ್ನು ಈಜಿಪ್ಟಿನಿಂದ ಬರಮಾಡಿ, ನಿಮ್ಮ ತಂದೆಗಳಿಗೆ ಆಣೆ ಇಟ್ಟ ದೇಶದಲ್ಲಿ ನಿಮ್ಮನ್ನು ಸೇರಿಸಿದೆನು. ನಾನು ನಿಮ್ಮ ಸಂಗಡ ಮಾಡಿದ ನನ್ನ ಒಡಂಬಡಿಕೆಯನ್ನು ಎಂದಿಗೂ ನಿರರ್ಥಕ ಮಾಡೆನು.
وَأَنْتُمْ فَلَا تَقْطَعُوا عَهْدًا مَعَ سُكَّانِ هَذِهِ ٱلْأَرْضِ. ٱهْدِمُوا مَذَابِحَهُمْ. وَلَمْ تَسْمَعُوا لِصَوْتِي. فَمَاذَا عَمِلْتُمْ؟ ٢ 2
‘ನೀವು ಈ ದೇಶದ ನಿವಾಸಿಗಳ ಸಂಗಡ ಒಡಂಬಡಿಕೆ ಮಾಡದೆ, ಅವರ ಬಲಿಪೀಠಗಳನ್ನು ಕೆಡಿವಿಬಿಡಿರಿ,’ ಎಂದು ಹೇಳಿದೆನು. ಆದರೆ ನೀವು ನನ್ನ ಮಾತನ್ನು ಕೇಳಲಿಲ್ಲ. ಹೀಗೆ ಏಕೆ ಮಾಡಿದಿರಿ?
فَقُلْتُ أَيْضًا: لَا أَطْرُدُهُمْ مِنْ أَمَامِكُمْ، بَلْ يَكُونُونَ لَكُمْ مُضَايِقِينَ، وَتَكُونُ آلِهَتُهُمْ لَكُمْ شَرَكًا». ٣ 3
ಆದ್ದರಿಂದ, ‘ನಾನು ಸಹ ಅವರನ್ನು ನಿಮ್ಮ ಎದುರಿನಿಂದ ಓಡಿಸಿಬಿಡುವುದಿಲ್ಲ. ಅವರು ನಿಮ್ಮ ಪಕ್ಕದಲ್ಲಿ ಮುಳ್ಳುಗಳಂತಿರುವರು. ಅವರ ದೇವರುಗಳು ನಿಮಗೆ ಉರುಲಾಗುವುವು,’ ಎಂದು ನಾನು ಹೇಳಿದ್ದೆನು.”
وَكَانَ لَمَّا تَكَلَّمَ مَلَاكُ ٱلرَّبِّ بِهَذَا ٱلْكَلَامِ إِلَى جَمِيعِ بَنِي إِسْرَائِيلَ، أَنَّ ٱلشَّعْبَ رَفَعُوا صَوْتَهُمْ وَبَكَوْا. ٤ 4
ಯೆಹೋವ ದೇವರ ದೂತನು ಈ ಮಾತುಗಳನ್ನು ಇಸ್ರಾಯೇಲರೆಲ್ಲರಿಗೆ ಹೇಳುವಾಗ, ಜನರು ಗಟ್ಟಿಯಾಗಿ ಅತ್ತರು.
فَدَعَوْا ٱسْمَ ذَلِكَ ٱلْمَكَانِ «بُوكِيمَ». وَذَبَحُوا هُنَاكَ لِلرَّبِّ. ٥ 5
ಆ ಸ್ಥಳಕ್ಕೆ ಬೋಕೀಮ್ ಎಂಬ ಹೆಸರಿಟ್ಟು, ಅಲ್ಲಿ ಯೆಹೋವ ದೇವರಿಗೆ ಬಲಿಯನ್ನು ಅರ್ಪಿಸಿದರು.
وَصَرَفَ يَشُوعُ ٱلشَّعْبَ، فَذَهَبَ بَنُو إِسْرَائِيلَ كُلُّ وَاحِدٍ إِلَى مُلْكِهِ لِأَجْلِ ٱمْتِلَاكِ ٱلْأَرْضِ. ٦ 6
ಯೆಹೋಶುವನು ಜನರನ್ನು ಕಳುಹಿಸಿಬಿಟ್ಟಾಗ, ಇಸ್ರಾಯೇಲರು ದೇಶವನ್ನು ಸ್ವಾಧೀನಮಾಡಿಕೊಳ್ಳುವುದಕ್ಕೆ ತಮ್ಮ ತಮ್ಮ ಬಾಧ್ಯತೆಗಳಿಗೆ ಹೋದರು.
وَعَبَدَ ٱلشَّعْبُ ٱلرَّبَّ كُلَّ أَيَّامِ يَشُوعَ، وَكُلَّ أَيَّامِ ٱلشُّيُوخِ ٱلَّذِينَ طَالَتْ أَيَّامُهُمْ بَعْدَ يَشُوعَ ٱلَّذِينَ رَأَوْا كُلَّ عَمَلِ ٱلرَّبِّ ٱلْعَظِيمِ ٱلَّذِي عَمِلَ لِإِسْرَائِيلَ. ٧ 7
ಆದರೆ ಯೆಹೋಶುವನ ಎಲ್ಲಾ ದಿನಗಳಲ್ಲಿಯೂ ಅವನ ಕಾಲದಿಂದ ಇನ್ನೂ ಜೀವಿಸುತ್ತಾ ಯೆಹೋವ ದೇವರು ಇಸ್ರಾಯೇಲರಿಗೋಸ್ಕರ ಮಾಡಿದ ಎಲ್ಲ ಮಹತ್ಕಾರ್ಯಗಳನ್ನು ಅರಿತಿದ್ದ ಹಿರಿಯರ ದಿನಗಳಲ್ಲಿಯೂ ಇಸ್ರಾಯೇಲರು ಯೆಹೋವ ದೇವರನ್ನು ಸೇವಿಸಿದರು.
وَمَاتَ يَشُوعُ بْنُ نُونَ عَبْدُ ٱلرَّبِّ ٱبْنَ مِئَةٍ وَعَشْرَ سِنِينَ. ٨ 8
ಆದರೆ ನೂನನ ಮಗನೆಂಬ ಯೆಹೋವ ದೇವರ ಸೇವಕನಾದ ಯೆಹೋಶುವನು ನೂರಹತ್ತು ವರ್ಷ ಪ್ರಾಯದವನಾಗಿ ಮರಣಹೊಂದಿದನು.
فَدَفَنُوهُ فِي تُخْمِ مُلْكِهِ فِي تِمْنَةَ حَارَسَ فِي جَبَلِ أَفْرَايِمَ، شِمَالِيَّ جَبَلِ جَاعَشَ. ٩ 9
ಅವನನ್ನು ಎಫ್ರಾಯೀಮನ ಬೆಟ್ಟದಲ್ಲಿ ಗಾಷ್ ಪರ್ವತದ ಉತ್ತರ ದಿಕ್ಕಿನಲ್ಲಿರುವ ಅವನ ಬಾಧ್ಯತೆಯ ಮೇರೆಯಾದ ತಿಮ್ನತ್ ಹೆರೆಸ್‌ನಲ್ಲಿ ಹೂಳಿಟ್ಟರು.
وَكُلُّ ذَلِكَ ٱلْجِيلِ أَيْضًا ٱنْضَمَّ إِلَى آبَائِهِ، وَقَامَ بَعْدَهُمْ جِيلٌ آخَرُ لَمْ يَعْرِفِ ٱلرَّبَّ، وَلَا ٱلْعَمَلَ ٱلَّذِي عَمِلَ لِإِسْرَائِيلَ. ١٠ 10
ಅವನ ಕಾಲದವರೆಲ್ಲರೂ ಪಿತೃಗಳ ಬಳಿಗೆ ಸೇರಿದ ಮೇಲೆ, ಯೆಹೋವ ದೇವರನ್ನೂ ಅವರು ಇಸ್ರಾಯೇಲರಿಗೋಸ್ಕರ ಮಾಡಿದ ಮಹತ್ಕಾರ್ಯಗಳನ್ನೂ ಅರಿಯದಿದ್ದ ಬೇರೊಂದು ಸಂತಾನವು ಹುಟ್ಟಿತು.
وَفَعَلَ بَنُو إِسْرَائِيلَ ٱلشَّرَّ فِي عَيْنَيِ ٱلرَّبِّ وَعَبَدُوا ٱلْبَعْلِيمَ. ١١ 11
ಇಸ್ರಾಯೇಲರು ಯೆಹೋವ ದೇವರ ಮುಂದೆ ಕೆಟ್ಟತನ ಮಾಡಿ, ಬಾಳನನ್ನು ಸೇವಿಸಿ,
وَتَرَكُوا ٱلرَّبَّ إِلَهَ آبَائِهِمِ ٱلَّذِي أَخْرَجَهُمْ مِنْ أَرْضِ مِصْرَ، وَسَارُوا وَرَاءَ آلِهَةٍ أُخْرَى مِنْ آلِهَةِ ٱلشُّعُوبِ ٱلَّذِينَ حَوْلَهُمْ، وَسَجَدُوا لَهَا وَأَغَاظُوا ٱلرَّبَّ. ١٢ 12
ತಮ್ಮ ತಂದೆಗಳನ್ನು ಈಜಿಪ್ಟಿನಿಂದ ಹೊರಡಿಸಿದ ತಮ್ಮ ದೇವರಾದ ಯೆಹೋವ ದೇವರನ್ನು ಬಿಟ್ಟು, ತಮ್ಮ ಸುತ್ತಲಿರುವ ಜನಾಂಗಗಳ ದೇವರುಗಳ ಹಿಂದೆ ಹೋಗಿ, ಅವುಗಳಿಗೆ ಅಡ್ಡಬಿದ್ದು, ಯೆಹೋವ ದೇವರಿಗೆ ಕೋಪವನ್ನೆಬ್ಬಿಸಿದರು.
تَرَكُوا ٱلرَّبَّ وَعَبَدُوا ٱلْبَعْلَ وَعَشْتَارُوثَ. ١٣ 13
ಅವರು ಯೆಹೋವ ದೇವರನ್ನು ಬಿಟ್ಟು, ಬಾಳನನ್ನೂ ಅಷ್ಟೋರೆತನ್ನೂ ಸೇವಿಸಿದರು.
فَحَمِيَ غَضَبُ ٱلرَّبِّ عَلَى إِسْرَائِيلَ، فَدَفَعَهُمْ بِأَيْدِي نَاهِبِينَ نَهَبُوهُمْ، وَبَاعَهُمْ بِيَدِ أَعْدَائِهِمْ حَوْلَهُمْ، وَلَمْ يَقْدِرُوا بَعْدُ عَلَى ٱلْوُقُوفِ أَمَامَ أَعْدَائِهِمْ. ١٤ 14
ಆದ್ದರಿಂದ ಯೆಹೋವ ದೇವರು ಇಸ್ರಾಯೇಲಿಗೆ ವಿರೋಧವಾಗಿ ಉರಿಗೊಂಡು, ಅವರನ್ನು ಕೊಳ್ಳೆಗಾರರ ಕೈಯಲ್ಲಿ ಒಪ್ಪಿಸಿಕೊಟ್ಟರು. ಅವರು ಇನ್ನು ಮೇಲೆ ತಮ್ಮ ಶತ್ರುಗಳಿಗೆ ಎದುರಾಗಿ ನಿಲ್ಲದ ಹಾಗೆ, ಅವರ ಸುತ್ತಲಿರುವ ಅವರ ಶತ್ರುಗಳ ಕೈಗೆ ಅವರನ್ನು ಮಾರಿಬಿಟ್ಟರು.
حَيْثُمَا خَرَجُوا كَانَتْ يَدُ ٱلرَّبِّ عَلَيْهِمْ لِلشَّرِّ، كَمَا تَكَلَّمَ ٱلرَّبُّ وَكَمَا أَقْسَمَ ٱلرَّبُّ لَهُمْ. فَضَاقَ بِهِمُ ٱلْأَمْرُ جِدًّا. ١٥ 15
ಯೆಹೋವ ದೇವರು ಹೇಳಿದ ಹಾಗೆಯೂ ಕರ್ತನು ಅವರಿಗೆ ಆಣೆಯಿಟ್ಟ ಹಾಗೆಯೂ ಅವರು ಎಲ್ಲಿ ಹೋದರೂ ಅಲ್ಲಿ ಕೇಡು ಆಗುವುದಕ್ಕೆ ಯೆಹೋವ ದೇವರ ಕೈ ಅವರಿಗೆ ವಿರೋಧವಾಗಿತ್ತು.
وَأَقَامَ ٱلرَّبُّ قُضَاةً فَخَلَّصُوهُمْ مِنْ يَدِ نَاهِبِيهِمْ. ١٦ 16
ಆದರೂ ಯೆಹೋವ ದೇವರು ಅವರನ್ನು ಕೊಳ್ಳೆಹೊಡೆಯುವವರ ಕೈಯಿಂದ ಬಿಡಿಸುವದಕ್ಕೋಸ್ಕರ ನ್ಯಾಯಾಧಿಪತಿಗಳನ್ನು ಎಬ್ಬಿಸಿದರು.
وَلِقُضَاتِهِمْ أَيْضًا لَمْ يَسْمَعُوا، بَلْ زَنَوْا وَرَاءَ آلِهَةٍ أُخْرَى وَسَجَدُوا لَهَا. حَادُوا سَرِيعًا عَنِ ٱلطَّرِيقِ ٱلَّتِي سَارَ بِهَا آبَاؤُهُمْ لِسَمْعِ وَصَايَا ٱلرَّبِّ، لَمْ يَفْعَلُوا هَكَذَا. ١٧ 17
ಅವರು ತಮ್ಮ ನ್ಯಾಯಾಧಿಪತಿಗಳ ಮಾತನ್ನು ಕೇಳದೆ, ಅನ್ಯದೇವರುಗಳ ಹಿಂದೆ ಹೋಗಿ, ಅವುಗಳಿಗೆ ಅಡ್ಡಬಿದ್ದು, ತಮ್ಮ ಪಿತೃಗಳು ಯೆಹೋವ ದೇವರ ಆಜ್ಞೆಗಳನ್ನು ಕೇಳಿ ನಡೆದ ಮಾರ್ಗವನ್ನು ಶೀಘ್ರವಾಗಿ ತೊರೆದುಬಿಟ್ಟರು. ಅವರು ಮಾಡಿದ ಪ್ರಕಾರ ಮಾಡಲಿಲ್ಲ.
وَحِينَمَا أَقَامَ ٱلرَّبُّ لَهُمْ قُضَاةً، كَانَ ٱلرَّبُّ مَعَ ٱلْقَاضِي، وَخَلَّصَهُمْ مِنْ يَدِ أَعْدَائِهِمْ كُلَّ أَيَّامِ ٱلْقَاضِي، لِأَنَّ ٱلرَّبَّ نَدِمَ مِنْ أَجْلِ أَنِينِهِمْ بِسَبَبِ مُضَايِقِيهِمْ وَزَاحِمِيهِمْ. ١٨ 18
ಯೆಹೋವ ದೇವರು ಅವರಿಗೆ ನ್ಯಾಯಾಧಿಪತಿಗಳನ್ನು ಎಬ್ಬಿಸಿದಾಗ, ಯೆಹೋವ ದೇವರು ನ್ಯಾಯಾಧಿಪತಿಯ ಸಂಗಡ ಇದ್ದು, ಆ ನ್ಯಾಯಾಧಿಪತಿಯ ದಿವಸಗಳಲ್ಲೆಲ್ಲಾ ಅವರನ್ನು ಅವರ ಶತ್ರುಗಳ ಕೈಯಿಂದ ತಪ್ಪಿಸಿ ರಕ್ಷಿಸುತ್ತಿದ್ದರು. ಏಕೆಂದರೆ ಅವರು ತಮ್ಮನ್ನು ಬಾಧಿಸಿ, ಶ್ರಮೆಪಡಿಸುವವರ ನಿಮಿತ್ತ ಗೋಳಾಡಿದ್ದರಿಂದ ಯೆಹೋವ ದೇವರು ಕನಿಕರಪಟ್ಟರು.
وَعِنْدَ مَوْتِ ٱلْقَاضِي كَانُوا يَرْجِعُونَ وَيَفْسُدُونَ أَكْثَرَ مِنْ آبَائِهِمْ، بِٱلذَّهَابِ وَرَاءَ آلِهَةٍ أُخْرَى لِيَعْبُدُوهَا وَيَسْجُدُوا لَهَا. لَمْ يَكُفُّوا عَنْ أَفْعَالِهِمْ وَطَرِيقِهِمْ ٱلْقَاسِيَةِ. ١٩ 19
ಆ ನ್ಯಾಯಾಧಿಪತಿಯ ಮರಣದ ನಂತರ, ಅವರು ತಿರುಗಿ ಮಾರ್ಗತಪ್ಪಿ, ಅನ್ಯದೇವರುಗಳನ್ನು ಹಿಂಬಾಲಿಸಿ ಹೋಗಿ, ಅವುಗಳನ್ನು ಸೇವಿಸಿ, ಅವುಗಳಿಗೆ ಅಡ್ಡಬಿದ್ದು, ತಮ್ಮ ಹಿರಿಯರಿಗಿಂತ ಅಧಿಕ ಭ್ರಷ್ಟರಾದರು. ಅವರು ತಮ್ಮ ದುರ್ಮಾರ್ಗಗಳನ್ನೂ ಹಟಮಾರಿತನವನ್ನೂ ಬಿಡಲೇ ಇಲ್ಲ.
فَحَمِيَ غَضَبُ ٱلرَّبِّ عَلَى إِسْرَائِيلَ وَقَالَ: «مِنْ أَجْلِ أَنَّ هَذَا ٱلشَّعْبَ قَدْ تَعَدَّوْا عَهْدِيَ ٱلَّذِي أَوْصَيْتُ بِهِ آبَاءَهُمْ وَلَمْ يَسْمَعُوا لِصَوْتِي، ٢٠ 20
ಆದ್ದರಿಂದ ಯೆಹೋವ ದೇವರು ಇಸ್ರಾಯೇಲರ ಮೇಲೆ ಕೋಪದಿಂದ ಉರಿಗೊಂಡು, “ಈ ಜನಾಂಗವು ನಾನು ಅವರ ಪಿತೃಗಳಿಗೆ ಆಜ್ಞಾಪಿಸಿದ ನನ್ನ ಒಡಂಬಡಿಕೆಯನ್ನು ಮೀರಿ, ನನ್ನ ಮಾತನ್ನು ಕೇಳದೆ ಹೋದದ್ದರಿಂದ,
فَأَنَا أَيْضًا لَا أَعُودُ أَطْرُدُ إِنْسَانًا مِنْ أَمَامِهِمْ مِنَ ٱلْأُمَمِ ٱلَّذِينَ تَرَكَهُمْ يَشُوعُ عِنْدَ مَوْتِهِ ٢١ 21
ನಾನು ಸಹ ಇನ್ನು ಮೇಲೆ ಯೆಹೋಶುವನು ಮರಣಹೊಂದುವಾಗ ಉಳಿಸಿದ ಜನಾಂಗಗಳಲ್ಲಿ ಒಬ್ಬರನ್ನಾದರೂ ಇವರ ಮುಂದೆ ಹೊರಡಿಸಿಬಿಡುವುದಿಲ್ಲ,” ಎಂದರು.
لِكَيْ أَمْتَحِنَ بِهِمْ إِسْرَائِيلَ: أَيَحْفَظُونَ طَرِيقَ ٱلرَّبِّ لِيَسْلُكُوا بِهَا كَمَا حَفِظَهَا آبَاؤُهُمْ، أَمْ لَا». ٢٢ 22
ಇಸ್ರಾಯೇಲರು ತಮ್ಮ ತಂದೆಗಳು ಕೈಗೊಂಡು ನಡೆದ ಯೆಹೋವ ದೇವರ ಮಾರ್ಗದಲ್ಲಿ ತಾವು ಕೈಗೊಂಡು ನಡೆಯುವರೋ ಇಲ್ಲವೋ ಎಂದು ಪರೀಕ್ಷಿಸುವ ಹಾಗೆ,
فَتَرَكَ ٱلرَّبُّ أُولَئِكَ ٱلْأُمَمَ وَلَمْ يَطْرُدْهُمْ سَرِيعًا وَلَمْ يَدْفَعْهُمْ بِيَدِ يَشُوعَ. ٢٣ 23
ಯೆಹೋವ ದೇವರು ಆ ಜನಾಂಗಗಳನ್ನು ಯೆಹೋಶುವನ ಕೈಯಲ್ಲಿ ಒಪ್ಪಿಸಿಕೊಡದೆ, ಅವುಗಳನ್ನು ಶೀಘ್ರವಾಗಿ ಓಡಿಸಿಬಿಡದೆ ಉಳಿಸಿದರು.

< اَلْقُضَاة 2 >