< اَلْقُضَاة 9 >

وَذَهَبَ أَبِيمَالِكُ بْنُ يَرُبَّعْلَ إِلَى شَكِيمَ إِلَى إِخْوَةِ أُمِّهِ، وَكَلَّمَهُمْ وَجَمِيعَ عَشِيرَةِ بَيْتِ أَبِي أُمِّهِ قَائِلًا: ١ 1
ಯೆರುಬ್ಬಾಳನ ಮಗನಾದ ಅಬೀಮೆಲೆಕನು ಶೆಕೆಮಿನಲ್ಲಿರುವ ತನ್ನ ತಾಯಿಯ ಸಹೋದರರ ಬಳಿಗೆ ಹೋಗಿ, ಅವರ ಸಂಗಡ ಮತ್ತು ತನ್ನ ತಾಯಿಯ ತಂದೆ ಮನೆಯ ಕುಟುಂಬದವರೆಲ್ಲರ ಸಂಗಡ ಮಾತನಾಡಿ,
«تَكَلَّمُوا ٱلْآنَ فِي آذَانِ جَمِيعِ أَهْلِ شَكِيمَ. أَيُّمَا هُوَ خَيْرٌ لَكُمْ: أَأَنْ يَتَسَلَّطَ عَلَيْكُمْ سَبْعُونَ رَجُلًا، جَمِيعُ بَنِي يَرُبَّعْلَ، أَمْ أَنْ يَتَسَلَّطَ عَلَيْكُمْ رَجُلٌ وَاحِدٌ؟ وَٱذْكُرُوا أَنِّي أَنَا عَظْمُكُمْ وَلَحْمُكُمْ». ٢ 2
“ನೀವು ದಯಮಾಡಿ ಶೆಕೆಮಿನ ಹಿರಿಯರಿಗೆ, ‘ಯೆರುಬ್ಬಾಳನ ಮಕ್ಕಳಾದ ಎಪ್ಪತ್ತು ಮಂದಿಯು ನಿಮ್ಮನ್ನು ಆಳುವುದು ಒಳ್ಳೆಯದೋ? ಒಬ್ಬನು ಆಳುವುದು ಒಳ್ಳೆಯದೋ?’ ಎಂದು ವಿಚಾರಿಸಿರಿ. ನಾನು ನಿಮ್ಮ ಎಲುಬೂ, ನಿಮ್ಮ ಮಾಂಸವೂ ಆಗಿದ್ದೇನೆಂದು ಜ್ಞಾಪಕಮಾಡಿಕೊಳ್ಳಿರಿ,” ಎಂದನು.
فَتَكَلَّمَ إِخْوَةُ أُمِّهِ عَنْهُ فِي آذَانِ كُلِّ أَهْلِ شَكِيمَ بِجَمِيعِ هَذَا ٱلْكَلَامِ. فَمَالَ قَلْبُهُمْ وَرَاءَ أَبِيمَالِكَ، لِأَنَّهُمْ قَالُوا: «أَخُونَا هُوَ». ٣ 3
ಹಾಗೆಯೇ ಅವನ ತಾಯಿಯ ಸಹೋದರರು ಅವನನ್ನು ಕುರಿತು ಶೆಕೆಮಿನ ಹಿರಿಯರೆಲ್ಲರೂ ಕೇಳುವಂತೆ ಈ ಮಾತುಗಳನ್ನೆಲ್ಲಾ ಹೇಳಿದರು. ಅವರು, “ಇವನು ನಮ್ಮ ಸಹೋದರನು,” ಎಂದು ಹೇಳಿದ್ದರಿಂದ, ಆ ಜನರ ಹೃದಯವು ಅಬೀಮೆಲೆಕನ ಕಡೆಗೆ ತಿರುಗಿತು.
وَأَعْطَوْهُ سَبْعِينَ شَاقِلَ فِضَّةٍ مِنْ بَيْتِ بَعْلِ بَرِيثَ، فَٱسْتَأْجَرَ بِهَا أَبِيمَالِكُ رِجَالًا بَطَّالِينَ طَائِشِينَ، فَسَعَوْا وَرَاءَهُ. ٤ 4
ಅವರು ಬಾಳ್ ಬೆರೀತಿನ ಮನೆಯೊಳಗಿಂದ ಎಪ್ಪತ್ತು ಬೆಳ್ಳಿಯ ನಾಣ್ಯಗಳನ್ನು ತೆಗೆದುಕೊಂಡು ಅವನಿಗೆ ಕೊಟ್ಟರು. ಅವುಗಳಿಂದ ಅಬೀಮೆಲೆಕನು ಪುಂಡಪೋಕರಿಗಳನ್ನು ಸಂಬಳಕ್ಕೆ ಇಟ್ಟುಕೊಂಡನು. ಅವರು ಅವನ ಹಿಂದೆ ಹೋದರು.
ثُمَّ جَاءَ إِلَى بَيْتِ أَبِيهِ فِي عَفْرَةَ وَقَتَلَ إِخْوَتَهُ بَنِي يَرُبَّعْلَ، سَبْعِينَ رَجُلًا، عَلَى حَجَرٍ وَاحِدٍ. وَبَقِيَ يُوثَامُ بْنُ يَرُبَّعْلَ ٱلْأَصْغَرُ لِأَنَّهُ ٱخْتَبَأَ. ٥ 5
ಅವನು ಒಫ್ರದಲ್ಲಿರುವ ತನ್ನ ತಂದೆಯ ಮನೆಗೆ ಹೋಗಿ, ತನ್ನ ಸಹೋದರರಾದ ಯೆರುಬ್ಬಾಳನ ಎಪ್ಪತ್ತು ಮಂದಿ ಪುತ್ರರನ್ನು ಒಂದು ಬಂಡೆಯ ಮೇಲೆ ಕೊಂದುಹಾಕಿದನು. ಆದರೆ ಯೆರುಬ್ಬಾಳನ ಚಿಕ್ಕ ಮಗ ಯೋತಾಮನು ಒಬ್ಬನೇ ಉಳಿದನು. ಏಕೆಂದರೆ ಅವನು ಅಡಗಿಕೊಂಡನು.
فَٱجْتَمَعَ جَمِيعُ أَهْلِ شَكِيمَ وَكُلُّ سُكَّانِ ٱلْقَلْعَةِ وَذَهَبُوا وَجَعَلُوا أَبِيمَالِكَ مَلِكًا عِنْدَ بَلُّوطَةِ ٱلنَّصَبِ ٱلَّذِي فِي شَكِيمَ. ٦ 6
ಶೆಕೆಮಿನ ಜನರೆಲ್ಲರೂ, ಮಿಲ್ಲೋನಿನ ಮನೆಯವರೆಲ್ಲರೂ ಕೂಡಿಕೊಂಡು ಹೋಗಿ, ಶೆಕೆಮಿನ ಬಯಲಲ್ಲಿ ಇರುವ ಸ್ತಂಭದ ಬಳಿ ಇರುವ ಅಲ್ಲೋನ್ ಮರದ ಹತ್ತಿರ ಸೇರಿ ಅಬೀಮೆಲೆಕನನ್ನು ಅರಸನನ್ನಾಗಿ ನೇಮಿಸಿದರು.
وَأَخْبَرُوا يُوثَامَ فَذَهَبَ وَوَقَفَ عَلَى رَأْسِ جَبَلِ جِرِزِّيمَ، وَرَفَعَ صَوْتَهُ وَنَادَى وَقَالَ لَهُمْ: «اِسْمَعُوا لِي يَا أَهْلَ شَكِيمَ، يَسْمَعْ لَكُمُ ٱللهُ. ٧ 7
ಯೋತಾಮನಿಗೆ ಇದನ್ನು ತಿಳಿಸಿದಾಗ, ಅವನು ಹೋಗಿ ಗೆರಿಜೀಮ್ ಬೆಟ್ಟದ ತುದಿಯಲ್ಲಿ ಏರಿ ನಿಂತು, ತನ್ನ ಸ್ವರವನ್ನೆತ್ತಿ ಕೂಗಿ ಅವರಿಗೆ, “ಶೆಕೆಮಿನ ಹಿರಿಯರೇ, ದೇವರು ನಿಮ್ಮನ್ನು ಕೇಳುವ ಹಾಗೆ ನನ್ನ ಮಾತನ್ನು ಕೇಳಿರಿ.
مَرَّةً ذَهَبَتِ ٱلْأَشْجَارُ لِتَمْسَحَ عَلَيْهَا مَلِكًا. فَقَالَتْ لِلزَّيْتُونَةِ: ٱمْلِكِي عَلَيْنَا. ٨ 8
ಮರಗಳು ತಮ್ಮ ಮೇಲೆ ಒಬ್ಬ ಅರಸನನ್ನು ಅಭಿಷೇಕಿಸಿಕೊಳ್ಳುವುದಕ್ಕಾಗಿ ಹೊರಟುಹೋಗಿ, ಹಿಪ್ಪೆಯ ಮರಕ್ಕೆ, ‘ನೀನು ನಮ್ಮನ್ನು ಆಳು,’ ಎಂದವು.
فَقَالَتْ لَهَا ٱلزَّيْتُونَةُ: أَأَتْرُكُ دُهْنِي ٱلَّذِي بِهِ يُكَرِّمُونَ بِيَ ٱللهَ وَٱلنَّاسَ، وَأَذْهَبُ لِكَيْ أَمْلِكَ عَلَى ٱلْأَشْجَارِ؟ ٩ 9
“ಹಿಪ್ಪೆಯ ಮರ ಅವುಗಳಿಗೆ, ‘ಯಾವುದರಿಂದ ದೇವರನ್ನೂ, ಮನುಷ್ಯನನ್ನೂ ಘನಪಡಿಸುತ್ತಾರೋ, ಈ ನನ್ನ ಎಣ್ಣೆಯನ್ನು ಬಿಟ್ಟು, ಮರಗಳ ಮೇಲೆ ಅಧಿಕಾರಿಯಾಗಿ ಹೋಗುವೆನೋ?’ ಎಂದಿತು.
ثُمَّ قَالَتِ ٱلْأَشْجَارُ لِلتِّينَةِ: تَعَالَيْ أَنْتِ وَٱمْلِكِي عَلَيْنَا. ١٠ 10
“ಮರಗಳು ಅಂಜೂರದ ಗಿಡಕ್ಕೆ, ‘ನೀನು ಬಂದು ನಮ್ಮ ಮೇಲೆ ಆಳಬೇಕು,’ ಎಂದವು.
فَقَالَتْ لَهَا ٱلتِّينَةُ: أَأَتْرُكُ حَلَاوَتِي وَثَمَرِي ٱلطَّيِّبَ وَأَذْهَبُ لِكَيْ أَمْلِكَ عَلَى ٱلْأَشْجَارِ؟ ١١ 11
“ಆದರೆ ಅಂಜೂರದ ಗಿಡಗಳು ಅವುಗಳಿಗೆ, ‘ನಾನು ನನ್ನ ಮಧುರವನ್ನೂ, ನನ್ನ ಒಳ್ಳೆಯ ಫಲವನ್ನೂ ಬಿಟ್ಟು ಮರಗಳ ಮೇಲೆ ಅಧಿಕಾರಿಯಾಗಿ ಹೋಗುವೆನೋ?’ ಎಂದಿತು.
فَقَالَتِ ٱلْأَشْجَارُ لِلْكَرْمَةِ: تَعَالَيْ أَنْتِ وَٱمْلِكِي عَلَيْنَا. ١٢ 12
“ಮರಗಳು ದ್ರಾಕ್ಷಿ ಗಿಡಕ್ಕೆ, ‘ನೀನು ಬಂದು ನಮ್ಮನ್ನು ಆಳು,’ ಎಂದವು.
فَقَالَتْ لَهَا ٱلْكَرْمَةُ: أَأَتْرُكُ مِسْطَارِي ٱلَّذِي يُفَرِّحُ ٱللهَ وَٱلنَّاسَ وَأَذْهَبُ لِكَيْ أَمْلِكَ عَلَى ٱلْأَشْجَارِ؟ ١٣ 13
“ಆದರೆ ದ್ರಾಕ್ಷಿ ಗಿಡವು ಅವುಗಳಿಗೆ, ‘ದೇವರನ್ನೂ, ಮನುಷ್ಯನನ್ನೂ ಸಂತೋಷಪಡಿಸುವ ನನ್ನ ರಸವನ್ನು ನಾನು ಬಿಟ್ಟು, ಮರಗಳ ಮೇಲೆ ಅಧಿಕಾರಿಯಾಗಿ ಹೋಗುವೆನೋ?’ ಎಂದಿತು.
ثُمَّ قَالَتْ جَمِيعُ ٱلْأَشْجَارِ لِلْعَوْسَجِ: تَعَالَ أَنْتَ وَٱمْلِكْ عَلَيْنَا. ١٤ 14
“ಆಗ ಎಲ್ಲಾ ಮರಗಳು ಮುಳ್ಳಿನ ಗಿಡಕ್ಕೆ, ‘ನೀನು ಬಂದು ನಮ್ಮನ್ನು ಆಳು,’ ಎಂದವು.
فَقَالَ ٱلْعَوْسَجُ لِلْأَشْجَارِ: إِنْ كُنْتُمْ بِٱلْحَقِّ تَمْسَحُونَنِي عَلَيْكُمْ مَلِكًا فَتَعَالَوْا وَٱحْتَمُوا تَحْتَ ظِلِّي. وَإِلأَّ فَتَخْرُجَ نَارٌ مِنَ ٱلْعَوْسَجِ وَتَأْكُلَ أَرْزَ لُبْنَانَ! ١٥ 15
“ಮುಳ್ಳಿನ ಗಿಡವು ಮರಗಳಿಗೆ, ‘ನೀವು ನನ್ನನ್ನು ಅರಸನನ್ನಾಗಿ ಅಭಿಷೇಕ ಮಾಡುವುದು ಸತ್ಯವಾದರೆ, ನನ್ನ ನೆರಳಲ್ಲಿ ಬಂದು ಆಶ್ರಯಿಸಿಕೊಳ್ಳಿರಿ; ಇಲ್ಲದಿದ್ದರೆ ಮುಳ್ಳಿನ ಗಿಡದಿಂದ ಬೆಂಕಿ ಹೊರಟು, ಲೆಬನೋನಿನ ದೇವದಾರುಗಳು ದಹಿಸಿಬಿಡಲಿ,’ ಎಂದಿತು.
فَٱلْآنَ إِنْ كُنْتُمْ قَدْ عَمِلْتُمْ بِٱلْحَقِّ وَٱلصِّحَّةِ إِذْ جَعَلْتُمْ أَبِيمَالِكَ مَلِكًا، وَإِنْ كُنْتُمْ قَدْ فَعَلْتُمْ خَيْرًا مَعَ يَرُبَّعْلَ وَمَعَ بَيْتِهِ، وَإِنْ كُنْتُمْ قَدْ فَعَلْتُمْ لَهُ حَسَبَ عَمَلِ يَدَيْهِ، ١٦ 16
“ನೀವು ಈಗ ಅಬೀಮೆಲೆಕನನ್ನು ಅರಸನಾಗಿ ಮಾಡಿದ್ದು ಸತ್ಯದಲ್ಲಿಯೂ, ಯಥಾರ್ಥದಿಂದಲೂ ಮಾಡಿರುವುದಾದರೆ ಮತ್ತು ಯೆರುಬ್ಬಾಳನಿಗೂ, ಅವನ ಮನೆಗೂ ಒಳ್ಳೆಯದನ್ನು ಮಾಡಿದ್ದರೆ,
لِأَنَّ أَبِي قَدْ حَارَبَ عَنْكُمْ وَخَاطَرَ بِنَفْسِهِ وَأَنْقَذَكُمْ مِنْ يَدِ مِدْيَانَ. ١٧ 17
ನನ್ನ ತಂದೆಯಾದ ಅವನು ನಿಮಗೋಸ್ಕರ ಯುದ್ಧಮಾಡಿದವನಾಗಿಯೂ, ತನ್ನ ಪ್ರಾಣವನ್ನು ಲೆಕ್ಕಿಸದೆ, ಮಿದ್ಯಾನಿನ ಕೈಯಿಂದ ನಿಮ್ಮನ್ನು ತಪ್ಪಿಸಿದವನಾಗಿಯೂ ಇರಲಾಗಿ,
وَأَنْتُمْ قَدْ قُمْتُمُ ٱلْيَوْمَ عَلَى بَيْتِ أَبِي وَقَتَلْتُمْ بَنِيهِ، سَبْعِينَ رَجُلًا عَلَى حَجَرٍ وَاحِدٍ، وَمَلَّكْتُمْ أَبِيمَالِكَ ٱبْنَ أَمَتِهِ عَلَى أَهْلِ شَكِيمَ لِأَنَّهُ أَخُوكُمْ. ١٨ 18
ನೀವು ಈ ಹೊತ್ತು ನನ್ನ ತಂದೆಯ ಮನೆಗೆ ವಿರೋಧವಾಗಿ ಎದ್ದು, ಅವನ ಎಪ್ಪತ್ತು ಮಕ್ಕಳನ್ನು ಒಂದೇ ಬಂಡೆ ಮೇಲೆ ಕೊಂದು, ಅವನ ದಾಸಿಯ ಮಗನಾದ ಅಬೀಮೆಲೆಕನನ್ನು, ಅವನು ನಿಮ್ಮ ಸಹೋದರನಾಗಿರುವುದರಿಂದ ಶೆಕೆಮಿನ ಜನರ ಮೇಲೆ ಅರಸನಾಗಿ ಇಟ್ಟದ್ದು,
فَإِنْ كُنْتُمْ قَدْ عَمِلْتُمْ بِٱلْحَقِّ وَٱلصِّحَّةِ مَعَ يَرُبَّعْلَ وَمَعَ بَيْتِهِ فِي هَذَا ٱلْيَوْمِ، فَٱفْرَحُوا أَنْتُمْ بِأَبِيمَالِكَ، وَلْيَفْرَحْ هُوَ أَيْضًا بِكُمْ. ١٩ 19
ಯೆರುಬ್ಬಾಳನ ಯೋಗ್ಯತೆಗೆ ತಕ್ಕದ್ದಾಗಿದ್ದರೆ ಮತ್ತು ಈ ಹೊತ್ತು ಅವನಿಗೂ, ಅವನ ಮಗನಿಗೂ ನೀವು ಸತ್ಯದಲ್ಲಿಯೂ, ಯಥಾರ್ಥತೆಯಲ್ಲಿಯೂ ಕಾರ್ಯ ಮಾಡಿದ್ದರೆ, ಅಬೀಮೆಲೆಕನಲ್ಲಿ ನೀವು ಸಂತೋಷಪಡಿರಿ. ಅವನು ಸಹ ನಿಮ್ಮಲ್ಲಿ ಸಂತೋಷಪಡಲಿ.
وَإِلأَّ فَتَخْرُجَ نَارٌ مِنْ أَبِيمَالِكَ وَتَأْكُلَ أَهْلَ شَكِيمَ وَسُكَّانَ ٱلْقَلْعَةِ، وَتَخْرُجَ نَارٌ مِنْ أَهْلِ شَكِيمَ وَمِنْ سُكَّانِ ٱلْقَلْعَةِ وَتَأْكُلَ أَبِيمَالِكَ». ٢٠ 20
ಇಲ್ಲದಿದ್ದರೆ ಅಬೀಮೆಲೆಕನಿಂದ ಬೆಂಕಿ ಹೊರಟು ಶೆಕೆಮಿನ ಹಿರಿಯರನ್ನೂ, ಮಿಲ್ಲೋನಿನ ಮನೆಯವರನ್ನೂ ದಹಿಸಿಬಿಡಲಿ. ಶೆಕೆಮಿನ ಜನರಿಂದಲೂ, ಮಿಲ್ಲೋನಿನ ಮನೆಯವರಿಂದಲೂ ಬೆಂಕಿ ಹೊರಟು ಅಬೀಮೆಲೆಕನನ್ನು ದಹಿಸಿಬಿಡಲಿ,” ಎಂದನು.
ثُمَّ هَرَبَ يُوثَامُ وَفَرَّ وَذَهَبَ إِلَى بِئْرَ، وَأَقَامَ هُنَاكَ مِنْ وَجْهِ أَبِيمَالِكَ أَخِيهِ. ٢١ 21
ಆಗ ಯೋತಾಮನು ತಪ್ಪಿಸಿಕೊಂಡು ಓಡಿ ಬೇರಕ್ಕೆ ಹೋಗಿ, ತನ್ನ ಸಹೋದರನಾದ ಅಬೀಮೆಲೆಕನ ಭಯದ ನಿಮಿತ್ತವಾಗಿ ಅಲ್ಲಿ ವಾಸವಾಗಿದ್ದನು.
فَتَرَأَّسَ أَبِيمَالِكُ عَلَى إِسْرَائِيلَ ثَلَاثَ سِنِينَ. ٢٢ 22
ಅಬೀಮೆಲೆಕನು ಇಸ್ರಾಯೇಲನ್ನು ಮೂರು ವರ್ಷ ಆಳಿದ ತರುವಾಯ,
وَأَرْسَلَ ٱلرَّبُّ رُوحًا رَدِيًّا بَيْنَ أَبِيمَالِكَ وَأَهْلِ شَكِيمَ، فَغَدَرَ أَهْلُ شَكِيمَ بِأَبِيمَالِكَ. ٢٣ 23
ದೇವರು ಅಬೀಮೆಲೆಕ ಮತ್ತು ಶೆಕೆಮಿನ ಹಿರಿಯರ ನಡುವೆ ಒಂದು ದುರಾತ್ಮನನ್ನು ಕಳುಹಿಸಿದರು. ಆಗ ಶೆಕೆಮಿನವರು ಅಬೀಮೆಲೆಕನಿಗೆ ದ್ರೋಹಮಾಡಿದರು.
لِيَأْتِيَ ظُلْمُ بَنِي يَرُبَّعْلَ ٱلسَّبْعِينَ، وَيُجْلَبَ دَمُهُمْ عَلَى أَبِيمَالِكَ أَخِيهِمِ ٱلَّذِي قَتَلَهُمْ، وَعَلَى أَهْلِ شَكِيمَ ٱلَّذِينَ شَدَّدُوا يَدَيْهِ لِقَتْلِ إِخْوَتِهِ. ٢٤ 24
ಇದರಿಂದ ಯೆರುಬ್ಬಾಳನ ಎಪ್ಪತ್ತು ಮಂದಿ ಮಕ್ಕಳಿಗೆ ಮಾಡಿದ್ದ ಕ್ರೂರತ್ವವು ಬಂದು ಪ್ರಾಪ್ತಿಸುವ ಹಾಗೆಯೂ, ಅವರ ರಕ್ತವು ಅವರನ್ನು ಕೊಂದ ಅವರ ಸಹೋದರನಾದ ಅಬೀಮೆಲೆಕನ ಮೇಲೆಯೂ, ಅವನ ಸಹೋದರರನ್ನು ಕೊಲ್ಲುವುದಕ್ಕೆ ಅವನ ಕೈಗಳನ್ನು ಬಲಪಡಿಸಿದ ಶೆಕೆಮಿನ ಮನುಷ್ಯರ ಮೇಲೆಯೂ ಬರುವ ಹಾಗೆ, ಶೆಕೆಮಿನ ಜನರು ಅಬೀಮೆಲೆಕನಿಗೆ ದ್ರೋಹಮಾಡಿದರು.
فَوَضَعَ لَهُ أَهْلُ شَكِيمَ كَمِينًا عَلَى رُؤُوسِ ٱلْجِبَالِ، وَكَانُوا يَسْتَلِبُونَ كُلَّ مَنْ عَبَرَ بِهِمْ فِي ٱلطَّرِيقِ. فَأُخْبِرَ أَبِيمَالِكُ. ٢٥ 25
ಶೆಕೆಮಿನ ಹಿರಿಯರು ಪರ್ವತ ಶಿಖರಗಳ ಮೇಲೆ ಅವನಿಗೋಸ್ಕರ ಹೊಂಚುಗಾರರನ್ನು ಇಟ್ಟು, ತಮ್ಮ ಸಮೀಪವಾಗಿ ಮಾರ್ಗದಲ್ಲಿ ಹಾದುಹೋಗುವ ಎಲ್ಲರನ್ನು ಸುಲಿದುಕೊಂಡರು. ಈ ವರ್ತಮಾನವು ಅಬೀಮೆಲೆಕನಿಗೆ ಮುಟ್ಟಿತು.
وَجَاءَ جَعَلُ بْنُ عَابِدٍ مَعَ إِخْوَتِهِ وَعَبَرُوا إِلَى شَكِيمَ فَوَثِقَ بِهِ أَهْلُ شَكِيمَ. ٢٦ 26
ಆಗ ಏಬೆದನ ಮಗನಾದ ಗಾಳನೂ, ಅವನ ಸಹೋದರರೂ ಶೆಕೆಮಿಗೆ ದಾಟಿ ಬಂದರು. ಆದರೆ ಶೆಕೆಮಿನ ಹಿರಿಯರು ಅವನಲ್ಲಿ ಭರವಸೆಯಿಟ್ಟು,
وَخَرَجُوا إِلَى ٱلْحَقْلِ وَقَطَفُوا كُرُومَهُمْ وَدَاسُوا وَصَنَعُوا تَمْجِيدًا، وَدَخَلُوا بَيْتَ إِلَهِهِمْ وَأَكَلُوا وَشَرِبُوا وَلَعَنُوا أَبِيمَالِكَ. ٢٧ 27
ಹೊರಗೆ ಹೋಗಿ ತಮ್ಮ ದ್ರಾಕ್ಷಿ ಫಲಗಳನ್ನು ಕೊಯ್ದು, ಅವುಗಳನ್ನು ತುಳಿದು ಸಂತೋಷಪಟ್ಟು, ತಮ್ಮ ದೇವರ ಮನೆಯೊಳಗೆ ಹೋಗಿ, ತಿಂದು ಕುಡಿದು ಅಬೀಮೆಲೆಕನನ್ನು ಶಪಿಸಿದರು.
فَقَالَ جَعَلُ بْنُ عَابِدٍ: «مَنْ هُوَ أَبِيمَالِكُ وَمَنْ هُوَ شَكِيمُ حَتَّى نَخْدِمَهُ؟ أَمَا هُوَ ٱبْنُ يَرُبَّعْلَ، وَزَبُولُ وَكِيلُهُ؟ ٱخْدِمُوا رِجَالَ حَمُورَ أَبِي شَكِيمَ. فَلِمَاذَا نَخْدِمُهُ نَحْنُ؟ ٢٨ 28
ಆಗ ಏಬೆದನ ಮಗನಾದ ಗಾಳನು, “ನಾವು ಅವನನ್ನು ಸೇವಿಸುವ ಹಾಗೆ ಅಬೀಮೆಲೆಕನು ಯಾರು? ಶೆಕೆಮನು ಯಾರು? ಅವನು ಯೆರುಬ್ಬಾಳನ ಮಗನಲ್ಲವೋ? ಅವನ ಪ್ರಧಾನನು ಜೆಬೂಲನಲ್ಲವೋ? ಶೆಕೆಮಿನ ತಂದೆಯಾದ ಹಮೋರನ ಮನುಷ್ಯರನ್ನೇ ಸೇವಿಸಿರಿ. ಇವನನ್ನು ನಾವು ಏಕೆ ಸೇವಿಸಬೇಕು?
مَنْ يَجْعَلُ هَذَا ٱلشَّعْبَ بِيَدِي فَأَعْزِلَ أَبِيمَالِكَ». وَقَالَ لِأَبِيمَالِكَ: «كَثِّرْ جُنْدَكَ وَٱخْرُجْ!». ٢٩ 29
ಈ ಜನರನ್ನು ದೇವರು ನನ್ನ ಕೈಗೆ ಒಪ್ಪಿಸಿದರೆ ಚೆನ್ನಾಗಿತ್ತು, ಆಗ ನಾನು ಅಬೀಮೆಲೆಕನನ್ನು ತೆಗೆದುಹಾಕುತ್ತಿದ್ದೆನು. ತರುವಾಯ ಅಬೀಮೆಲೆಕನಿಗೆ, ‘ನೀನು ನಿನ್ನ ಸೈನ್ಯವನ್ನು ಹೆಚ್ಚಿಸಿಕೊಂಡು ಹೊರಟು ಬಾ,’ ಎಂದು ಹೇಳುತ್ತಿದ್ದೆನು,” ಎಂದನು.
وَلَمَّا سَمِعَ زَبُولُ رَئِيسُ ٱلْمَدِينَةِ كَلَامَ جَعَلَ بْنِ عَابِدٍ حَمِيَ غَضَبُهُ، ٣٠ 30
ಆ ಪಟ್ಟಣದ ಅಧಿಪತಿಯಾದ ಜೆಬೂಲನು, ಏಬೆದನ ಮಗ ಗಾಳನು ಹೇಳಿದ ಮಾತುಗಳನ್ನು ಕೇಳಿದಾಗ ಕೋಪಗೊಂಡು,
وَأَرْسَلَ رُسُلًا إِلَى أَبِيمَالِكَ فِي تُرْمَةَ يَقُولُ: «هُوَذَا جَعَلُ بْنُ عَابِدٍ وَإِخْوَتُهُ قَدْ أَتَوْا إِلَى شَكِيمَ، وَهَا هُمْ يُهَيِّجُونَ ٱلْمَدِينَةَ ضِدَّكَ. ٣١ 31
ಅವನು ಅಬೀಮೆಲೆಕನ ಬಳಿಗೆ ರಹಸ್ಯವಾಗಿ ದೂತರನ್ನು ಕಳುಹಿಸಿ, “ಏಬೆದನ ಮಗ ಗಾಳನೂ, ಅವನ ಸಹೋದರರೂ ಶೆಕೆಮಿಗೆ ಬಂದಿದ್ದಾರೆ. ಅವರು ಪಟ್ಟಣವನ್ನು ನಿನಗೆ ವಿರೋಧವಾಗಿ ಬಲಪಡಿಸುತ್ತಿದ್ದಾರೆ.
فَٱلْآنَ قُمْ لَيْلًا أَنْتَ وَٱلشَّعْبُ ٱلَّذِي مَعَكَ وَٱكْمُنْ فِي ٱلْحَقْلِ. ٣٢ 32
ಆದ್ದರಿಂದ ಈಗ ನೀನೂ, ನಿನ್ನ ಸಂಗಡ ಇರುವ ಜನರೂ ಕೂಡಿ, ರಾತ್ರಿಯಲ್ಲಿ ಎದ್ದು, ಹೊಲದಲ್ಲಿ ಹೊಂಚುಹಾಕಿಕೊಂಡಿರಬೇಕು.
وَيَكُونُ فِي ٱلصَّبَاحِ عِنْدَ شُرُوقِ ٱلشَّمْسِ أَنَّكَ تُبَكِّرُ وَتَقْتَحِمُ ٱلْمَدِينَةَ. وَهَا هُوَ وَٱلشَّعْبُ ٱلَّذِي مَعَهُ يَخْرُجُونَ إِلَيْكَ فَتَفْعَلُ بِهِ حَسَبَمَا تَجِدُهُ يَدُكَ». ٣٣ 33
ಹೊತ್ತಾರೆ ಸೂರ್ಯನು ಉದಯಿಸುವಾಗ, ನೀನು ಎದ್ದು ಪಟ್ಟಣದ ಮೇಲೆ ಬೀಳಬೇಕು. ಗಾಳನೂ, ಅವನ ಸಂಗಡ ಇರುವ ಜನರೂ ನಿಮಗೆದುರಾಗಿ ಹೊರಟು ಬರುವಾಗ, ನೀನು ನಿನ್ನ ಕೈಗೆ ಸರಿಬಂದ ಹಾಗೆ ಅವನಿಗೆ ಮಾಡಬೇಕು,” ಎಂದು ಹೇಳಿದನು.
فَقَامَ أَبِيمَالِكُ وَكُلُّ ٱلشَّعْبِ ٱلَّذِي مَعَهُ لَيْلًا وَكَمَنُوا لِشَكِيمَ أَرْبَعَ فِرَقٍ. ٣٤ 34
ಹಾಗೆಯೇ ಅಬೀಮೆಲೆಕನೂ, ಅವನ ಸಂಗಡ ಇದ್ದ ಸಮಸ್ತ ಜನರೂ ರಾತ್ರಿಯಲ್ಲಿ ಎದ್ದು, ಶೆಕೆಮಿಗೆ ವಿರೋಧವಾಗಿ ನಾಲ್ಕು ಗುಂಪಾಗಿ ಹೊಂಚಿಕಾಯುತ್ತಿದ್ದರು.
فَخَرَجَ جَعَلُ بْنُ عَابِدٍ وَوَقَفَ فِي مَدْخَلِ بَابِ ٱلْمَدِينَةِ. فَقَامَ أَبِيمَالِكُ وَٱلشَّعْبُ ٱلَّذِي مَعَهُ مِنَ ٱلْمَكْمَنِ. ٣٥ 35
ಏಬೆದನ ಮಗ ಗಾಳನು ಹೊರಟುಬಂದು ಪಟ್ಟಣದ ಬಾಗಿಲಿನ ದ್ವಾರದಲ್ಲಿ ನಿಂತನು. ಆಗ ಹೊಂಚುಹಾಕೊಕೊಂಡಿದ್ದ ಅಬೀಮೆಲೆಕನೂ, ಅವನ ಸಂಗಡ ಇದ್ದ ಜನರೂ ಎದ್ದು ಬಂದರು.
وَرَأَى جَعَلُ ٱلشَّعْبَ فَقَالَ لِزَبُولَ: «هُوَذَا شَعْبٌ نَازِلٌ عَنْ رُؤُوسِ ٱلْجِبَالِ». فَقَالَ لَهُ زَبُولُ: «إِنَّكَ تَرَى ظِلَّ ٱلْجِبَالِ كَأَنَّهُ أُنَاسٌ». ٣٦ 36
ಗಾಳನು ಆ ಜನರನ್ನು ಕಂಡಾಗ, “ಬೆಟ್ಟದ ಶಿಖರಗಳಿಂದ ಜನರು ಬರುತ್ತಾರೆ,” ಎಂದು ಜೆಬೂಲನಿಗೆ ಹೇಳಿದರು. ಜೆಬೂಲನು ಅವನಿಗೆ, “ನೀನು ಬೆಟ್ಟಗಳ ನೆರಳನ್ನು ಮನುಷ್ಯರಂತೆ ಕಾಣುತ್ತೀ,” ಎಂದನು.
فَعَادَ جَعَلُ وَتَكَلَّمَ أَيْضًا قَائِلًا: «هُوَذَا شَعْبٌ نَازِلٌ مِنْ عِنْدِ أَعَالِي ٱلْأَرْضِ، وَفِرْقَةٌ وَاحِدَةٌ آتِيَةٌ عَنْ طَرِيقِ بَلُّوطَةِ ٱلْعَائِفِينَ». ٣٧ 37
ಗಾಳನು ತಿರುಗಿ ಅವನ ಸಂಗಡ ಮಾತನಾಡಿ, “ಇಗೋ, ಜನರು ಭೂಮಧ್ಯ ಸ್ಥಳದಿಂದ ಇಳಿದು ಬರುತ್ತಾರೆ. ಕಣಿಹೇಳುವವರ ಮರದ ಮಾರ್ಗವಾಗಿ ಇನ್ನೊಂದು ಗುಂಪು ಬರುತ್ತಿದೆ,” ಎಂದನು.
فَقَالَ لَهُ زَبُولُ: «أَيْنَ ٱلْآنَ فُوكَ ٱلَّذِي قُلْتَ بِهِ: مَنْ هُوَ أَبِيمَالِكُ حَتَّى نَخْدِمَهُ؟ أَلَيْسَ هَذَا هُوَ ٱلشَّعْبُ ٱلَّذِي رَذَلْتَهُ؟ فَٱخْرُجِ ٱلْآنَ وَحَارِبْهُ». ٣٨ 38
ಆಗ ಜೆಬೂಲನು ಅವನಿಗೆ, “ನಾವು ಅವನನ್ನು ಸೇವಿಸುವ ಹಾಗೆ ಅಬೀಮೆಲೆಕನು ಯಾರು, ಎಂದು ನೀನು ಹೇಳಿದ ನಿನ್ನ ಬಾಯಿ ಈಗ ಎಲ್ಲಿ? ಅದು ನೀನು ಅಲಕ್ಷ್ಯಮಾಡಿದ ಜನರಲ್ಲವೋ? ಈಗ ನೀನು ಹೊರಟು ಅವರ ಸಂಗಡ ಯುದ್ಧ ಮಾಡು,” ಎಂದನು.
فَخَرَجَ جَعَلُ أَمَامَ أَهْلِ شَكِيمَ وَحَارَبَ أَبِيمَالِكَ. ٣٩ 39
ಗಾಳನು ಶೆಕೆಮಿನವರ ನಾಯಕನಾಗಿ ಹೊರಟು, ಅಬೀಮೆಲೆಕನ ಸಂಗಡ ಯುದ್ಧಮಾಡಿದನು.
فَهَزَمَهُ أَبِيمَالِكُ، فَهَرَبَ مِنْ قُدَّامِهِ وَسَقَطَ قَتْلَى كَثِيرُونَ حَتَّى عِنْدَ مَدْخَلِ ٱلْبَابِ. ٤٠ 40
ಆದರೆ ಅಬೀಮೆಲೆಕನು ಅವನನ್ನು ಹಿಂದಟ್ಟಿದಾಗ, ಗಾಳನು ಅವನ ಮುಂದೆ ಓಡಿಹೋದನು. ಬಾಗಿಲ ಹತ್ತಿರದವರೆಗೆ ಅನೇಕರು ಸಂಹಾರವಾಗಿ, ಅನೇಕರು ಗಾಯಗೊಂಡರು.
فَأَقَامَ أَبِيمَالِكُ فِي أَرُومَةَ. وَطَرَدَ زَبُولُ جَعَلًا وَإِخْوَتَهُ عَنِ ٱلْإِقَامَةِ فِي شَكِيمَ. ٤١ 41
ಆಗ ಅಬೀಮೆಲೆಕನು ಅರೂಮದಲ್ಲಿ ವಾಸಮಾಡಿದನು. ಆದರೆ ಜೆಬೂಲನು ಗಾಳನನ್ನೂ, ಅವನ ಸಹೋದರರನ್ನೂ ಶೆಕೆಮಿನಲ್ಲಿ ಇರದ ಹಾಗೆ ಹೊರಡಿಸಿಬಿಟ್ಟನು.
وَكَانَ فِي ٱلْغَدِ أَنَّ ٱلشَّعْبَ خَرَجَ إِلَى ٱلْحَقْلِ وَأَخْبَرُوا أَبِيمَالِكَ. ٤٢ 42
ಮಾರನೆಯ ದಿನ ಶೆಕೆಮಿನ ಜನರು ಹೊಲಕ್ಕೆ ಹೊರಟರು. ಸೈನಿಕರು ಅದನ್ನು ಅಬೀಮೆಲೆಕನಿಗೆ ತಿಳಿಸಿದರು.
فَأَخَذَ ٱلْقَوْمَ وَقَسَمَهُمْ إِلَى ثَلَاثِ فِرَقٍ، وَكَمَنَ فِي ٱلْحَقْلِ وَنَظَرَ وَإِذَا ٱلشَّعْبُ يَخْرُجُ مِنَ ٱلْمَدِينَةِ، فَقَامَ عَلَيْهِمْ وَضَرَبَهُمْ. ٤٣ 43
ಅವನು ಸೈನಿಕರನ್ನು ತೆಗೆದುಕೊಂಡು, ಅವರನ್ನು ಮೂರು ಗುಂಪುಗಳಾಗಿ ಮಾಡಿ, ಹೊಲದಲ್ಲಿ ಹೊಂಚಿಹಾಕಿಕೊಂಡನು. ಆಗ ಜನರು ಪಟ್ಟಣದಿಂದ ಹೊರಗೆ ಬಂದರು. ಅವನು ಅವರ ಮೇಲೆ ಎದ್ದು ಬಂದು, ಅವರನ್ನು ಹೊಡೆದನು.
وَأَبِيمَالِكُ وَٱلْفِرْقَةُ ٱلَّتِي مَعَهُ ٱقْتَحَمُوا وَوَقَفُوا فِي مَدْخَلِ بَابِ ٱلْمَدِينَةِ. وَأَمَّا ٱلْفِرْقَتَانِ فَهَجَمَتَا عَلَى كُلِّ مَنْ فِي ٱلْحَقْلِ وَضَرَبَتَاهُ. ٤٤ 44
ಅಬೀಮೆಲೆಕನೂ, ಅವನ ಸಂಗಡ ಇದ್ದ ಸೈನಿಕರ ಗುಂಪೂ ಮುಂದಕ್ಕೆ ಓಡಿ, ಪಟ್ಟಣದ ಬಾಗಿಲಿನ ಬಳಿ ನಿಂತರು. ಮಿಕ್ಕಾದ ಎರಡು ಗುಂಪಿನ ಜನರು, ಹೊಲದಲ್ಲಿರುವವರೆಲ್ಲರ ಮೇಲೆ ಬಿದ್ದು ಅವರನ್ನು ಹತಮಾಡಿದರು.
وَحَارَبَ أَبِيمَالِكُ ٱلْمَدِينَةَ كُلَّ ذَلِكَ ٱلْيَوْمِ، وَأَخَذَ ٱلْمَدِينَةَ وَقَتَلَ ٱلشَّعْبَ ٱلَّذِي بِهَا، وَهَدَمَ ٱلْمَدِينَةَ وَزَرَعَهَا مِلْحًا. ٤٥ 45
ಅಬೀಮೆಲೆಕನು ಆ ದಿನವೆಲ್ಲಾ ಪಟ್ಟಣದ ಮೇಲೆ ಯುದ್ಧಮಾಡಿ, ಪಟ್ಟಣವನ್ನು ಹಿಡಿದು, ಅದರಲ್ಲಿದ್ದ ಜನರನ್ನು ಕೊಂದು, ಪಟ್ಟಣವನ್ನು ಕೆಡವಿಬಿಟ್ಟು, ಅದರಲ್ಲಿ ಉಪ್ಪು ಎರಚಿಬಿಟ್ಟನು.
وَسَمِعَ كُلُّ أَهْلِ بُرْجِ شَكِيمَ فَدَخَلُوا إِلَى صَرْحِ بَيْتِ إِيلِ بَرِيثَ. ٤٦ 46
ಅದನ್ನು ಶೆಕೆಮಿನ ಗೋಪುರದಲ್ಲಿ ಜನರೆಲ್ಲರೂ ಕೇಳಿದಾಗ, ಅವರು ಬೆರೀತೆಂಬ ದೇವರ ಮನೆಯ ಭದ್ರವಾದ ಸ್ಥಳದಲ್ಲಿ ಅಡಗಿಕೊಂಡರು.
فَأُخْبِرَ أَبِيمَالِكُ أَنَّ كُلَّ أَهْلِ بُرْجِ شَكِيمَ قَدِ ٱجْتَمَعُوا. ٤٧ 47
ಆದರೆ ಶೆಕೆಮಿನ ಗೋಪುರದಲ್ಲಿದ್ದ ಜನರೆಲ್ಲರೂ ಅಲ್ಲಿ ಕೂಡಿದ್ದಾರೆಂದು ಅಬೀಮೆಲೆಕನಿಗೆ ಗೊತ್ತಾದಾಗ,
فَصَعِدَ أَبِيمَالِكُ إِلَى جَبَلِ صَلْمُونَ هُوَ وَكُلُّ ٱلشَّعْبِ ٱلَّذِي مَعَهُ. وَأَخَذَ أَبِيمَالِكُ ٱلْفُؤُوسَ بِيَدِهِ، وَقَطَعَ غُصْنَ شَجَرٍ وَرَفَعَهُ وَوَضَعَهُ عَلَى كَتِفِهِ، وَقَالَ لِلشَّعْبِ ٱلَّذِي مَعَهُ: «مَا رَأَيْتُمُونِي أَفْعَلُهُ فَأَسْرِعُوا ٱفْعَلُوا مِثْلِي». ٤٨ 48
ಅಬೀಮೆಲೆಕನು ತನ್ನ ಸಂಗಡ ಇದ್ದ ಸೈನಿಕರೆಲ್ಲರ ಸಹಿತವಾಗಿ ಚಲ್ಮೋನ್ ಬೆಟ್ಟವನ್ನೇರಿ, ತನ್ನ ಕೈಯಲ್ಲಿ ಕೊಡಲಿಯನ್ನು ಹಿಡಿದು, ಒಂದು ಮರದ ಕೊಂಬೆಯನ್ನು ಕಡಿದು, ಅದನ್ನು ತನ್ನ ಹೆಗಲಿನ ಮೇಲೆ ಹೊತ್ತುಕೊಂಡು, ತನ್ನ ಕೂಡ ಇದ್ದ ಜನರಿಗೆ, “ನಾನು ಮಾಡಿದ್ದನ್ನು ನೋಡಿ ಹಾಗೆಯೇ ತೀವ್ರವಾಗಿ ಮಾಡಿರಿ,” ಎಂದನು.
فَقَطَعَ ٱلشَّعْبُ أَيْضًا كُلُّ وَاحِدٍ غُصْنًا وَسَارُوا وَرَاءَ أَبِيمَالِكَ، وَوَضَعُوهَا عَلَى ٱلصَّرْحِ، وَأَحْرَقُوا عَلَيْهِمِ ٱلصَّرْحَ بِٱلنَّارِ. فَمَاتَ أَيْضًا جَمِيعُ أَهْلِ بُرْجِ شَكِيمَ، نَحْوُ أَلْفِ رَجُلٍ وَٱمْرَأَةٍ. ٤٩ 49
ಸೈನಿಕರೆಲ್ಲರಲ್ಲಿ ಒಬ್ಬೊಬ್ಬನು ಒಂದೊಂದು ಕೊಂಬೆಯನ್ನು ಕಡಿದು, ಅಬೀಮೆಲೆಕನ ಹಿಂದೆ ಹೋಗಿ, ಅವುಗಳನ್ನು ಆ ಭದ್ರವಾದ ಸ್ಥಳಕ್ಕೆ ಹಾಕಿ, ಅದಕ್ಕೆ ಬೆಂಕಿಯನ್ನು ಹಚ್ಚಿದರು. ಆಗ ಶೆಕೆಮಿನ ಗೋಪುರದಲ್ಲಿರುವವರೆಲ್ಲರೂ ಹೆಚ್ಚು ಕಡಿಮೆ ಸಾವಿರ ಜನರು ಸತ್ತುಹೋದರು. ಅವರು ಸ್ತ್ರೀಪುರುಷರೆಲ್ಲಾ ಸುಮಾರು ಸಾವಿರ ಜನರಿದ್ದರು.
ثُمَّ ذَهَبَ أَبِيمَالِكُ إِلَى تَابَاصَ وَنَزَلَ فِي تَابَاصَ وَأَخَذَهَا. ٥٠ 50
ಆಗ ಅಬೀಮೆಲೆಕನು ತೆಬೇಚಿಗೆ ಹೋಗಿ, ಅದಕ್ಕೆ ವಿರೋಧವಾಗಿ ಮುತ್ತಿಗೆ ಹಾಕಿ, ಅದನ್ನು ಹಿಡಿದನು.
وَكَانَ بُرْجٌ قَوِيٌّ فِي وَسَطِ ٱلْمَدِينَةِ فَهَرَبَ إِلَيْهِ جَمِيعُ ٱلرِّجَالِ وَٱلنِّسَاءِ وَكُلُّ أَهْلِ ٱلْمَدِينَةِ، وَأَغْلَقُوا وَرَاءَهُمْ، وَصَعِدُوا إِلَى سَطْحِ ٱلْبُرْجِ. ٥١ 51
ಆದರೆ ಪಟ್ಟಣದ ಒಳಗೆ ಬಲವಾದ ಗೋಪುರ ಇತ್ತು. ಆ ಪಟ್ಟಣದಲ್ಲಿರುವ ಸಮಸ್ತ ಸ್ತ್ರೀ ಪುರುಷರು ಅಲ್ಲಿಗೆ ಓಡಿಹೋಗಿ, ಅದರಲ್ಲಿ ಹೊಕ್ಕು, ತಮ್ಮ ಹಿಂದಿನಿಂದ ಬಾಗಿಲನ್ನು ಮುಚ್ಚಿ ಗೋಪುರದ ಮೇಲೆ ಏರಿದರು.
فَجَاءَ أَبِيمَالِكُ إِلَى ٱلْبُرْجِ وَحَارَبَهُ، وَٱقْتَرَبَ إِلَى بَابِ ٱلْبُرْجِ لِيُحْرِقَهُ بِٱلنَّارِ. ٥٢ 52
ಆಗ ಅಬೀಮೆಲೆಕನು ಆ ಗೋಪುರಕ್ಕೆ ಬಂದು, ಅದರ ವಿರುದ್ಧ ಯುದ್ಧಮಾಡಿ, ಗೋಪುರದ ಬಾಗಿಲನ್ನು ಸುಟ್ಟು ಬಿಡುವುದಕ್ಕೆ ಅದರ ಬಳಿಗೆ ಬಂದನು.
فَطَرَحَتِ ٱمْرَأَةٌ قِطْعَةَ رَحًى عَلَى رَأْسِ أَبِيمَالِكَ فَشَجَّتْ جُمْجُمَتَهُ. ٥٣ 53
ಆದರೆ ಒಬ್ಬ ಸ್ತ್ರೀಯು ಒಂದು ಬೀಸುವ ಕಲ್ಲಿನ ತುಂಡನ್ನು ಅಬೀಮೆಲೆಕನ ತಲೆಯ ಮೇಲೆ ಹಾಕಿದಳು. ಅದರಿಂದ ಅವನ ತಲೆಯನ್ನು ಒಡೆದು ಹಾಕಿದಳು.
فَدَعَا حَالًا ٱلْغُلَامَ حَامِلَ عُدَّتِهِ وَقَالَ لَهُ: «ٱخْتَرِطْ سَيْفَكَ وَٱقْتُلْنِي، لِئَلَّا يَقُولُوا عَنِّي: قَتَلَتْهُ ٱمْرَأَةٌ». فَطَعَنَهُ ٱلْغُلَامُ فَمَاتَ. ٥٤ 54
ಆಗ ಅವನು ಶೀಘ್ರವಾಗಿ ತನ್ನ ಆಯುಧಗಳನ್ನು ಹೊರುವ ಸೇವಕನನ್ನು ಕರೆದು ಅವನಿಗೆ, “ಒಬ್ಬ ಸ್ತ್ರೀಯು ಕೊಂದಳೆಂದು ಮನುಷ್ಯರು ನನ್ನನ್ನು ಕುರಿತು ಹೇಳದ ಹಾಗೆ ನೀನು ನಿನ್ನ ಖಡ್ಗದಿಂದ ಇರಿದು, ನನ್ನನ್ನು ಕೊಲ್ಲು,” ಎಂದು ಅವನಿಗೆ ಹೇಳಿದನು. ಹಾಗೆಯೇ ಅವನ ಸೇವಕನು ಅವನನ್ನು ತಿವಿದು ಹಾಕಿದನು. ಅವನು ಮರಣಹೊಂದಿದನು.
وَلَمَّا رَأَى رِجَالُ إِسْرَائِيلَ أَنَّ أَبِيمَالِكَ قَدْ مَاتَ، ذَهَبَ كُلُّ وَاحِدٍ إِلَى مَكَانِهِ. ٥٥ 55
ಅಬೀಮೆಲೆಕನು ಮರಣಹೊಂದಿದ್ದನ್ನು ಇಸ್ರಾಯೇಲರು ಕಂಡಾಗ, ಅವರು ತಮ್ಮ ತಮ್ಮ ಮನೆಗಳಿಗೆ ಹೋದರು.
فَرَدَّ ٱللهُ شَرَّ أَبِيمَالِكَ ٱلَّذِي فَعَلَهُ بِأَبِيهِ لِقَتْلِهِ إِخْوَتَهُ ٱلسَّبْعِينَ، ٥٦ 56
ಈ ಪ್ರಕಾರ ಅಬೀಮೆಲೆಕನು ತನ್ನ ಎಪ್ಪತ್ತು ಮಂದಿ ಸಹೋದರರನ್ನು ಕೊಂದುಹಾಕಿದ್ದರಿಂದ, ತನ್ನ ತಂದೆಗೆ ಮಾಡಿದ ಕೇಡನ್ನು ದೇವರು ಅವನ ಮೇಲೆ ತಿರುಗಿ ಬರಮಾಡಿದರು.
وَكُلَّ شَرِّ أَهْلِ شَكِيمَ رَدَّهُ ٱللهُ عَلَى رُؤُوسِهِمْ، وَأَتَتْ عَلَيْهِمْ لَعْنَةُ يُوثَامَ بْنِ يَرُبَّعْلَ. ٥٧ 57
ಇದಲ್ಲದೆ ಶೆಕೆಮಿನವರು ಮಾಡಿದ ಸಮಸ್ತ ಕೆಟ್ಟತನವನ್ನು ಅವರ ತಲೆಗಳ ಮೇಲೆ ದೇವರು ಬರಮಾಡಿದರು. ಹೀಗೆ ಯೆರುಬ್ಬಾಳನ ಮಗನಾದ ಯೋತಾಮನ ಶಾಪವು ಅವರ ಮೇಲೆ ಬಂದಿತು.

< اَلْقُضَاة 9 >