< اَللَّاوِيِّينَ 27 >

وَكَلَّمَ ٱلرَّبُّ مُوسَى قَائِلًا: ١ 1
ಯೆಹೋವ ದೇವರು ಮಾತನಾಡಿ ಮೋಶೆಗೆ ಹೇಳಿದ್ದೇನೆಂದರೆ,
«كَلِّمْ بَنِي إِسْرَائِيلَ وَقُلْ لَهُمْ: إِذَا أَفْرَزَ إِنْسَانٌ نَذْرًا حَسَبَ تَقْوِيمِكَ نُفُوسًا لِلرَّبِّ، ٢ 2
“ಇಸ್ರಾಯೇಲರ ಸಂಗಡ ನೀನು ಮಾತನಾಡಿ ಅವರಿಗೆ ಹೇಳಬೇಕಾದದ್ದೇನೆಂದರೆ, ‘ಒಬ್ಬನು ಪ್ರತ್ಯೇಕವಾಗಿ ಯೆಹೋವ ದೇವರಿಗೆ ಹರಕೆಮಾಡಿ ಪ್ರತಿಷ್ಠಿಸಿಕೊಂಡರೆ, ನೀನು ನೇಮಿಸಿದ ಕ್ರಯದ ಪ್ರಕಾರ ಜನರು ಕೊಡಬೇಕು.
فَإِنْ كَانَ تَقْوِيمُكَ لِذَكَرٍ مِنِ ٱبْنِ عِشْرِينَ سَنَةً إِلَى ٱبْنِ سِتِّينَ سَنَةً، يَكُونُ تَقْوِيمُكَ خَمْسِينَ شَاقِلَ فِضَّةٍ عَلَى شَاقِلِ ٱلْمَقْدِسِ. ٣ 3
ನೀನು ನೇಮಿಸಬೇಕಾದ ಕ್ರಯವು ಯಾವುದೆಂದರೆ, ಇಪ್ಪತ್ತರಿಂದ ಅರವತ್ತು ವಯಸ್ಸುಳ್ಳ ಪುರುಷನಿಗೆ ನೀನು ಪವಿತ್ರ ಸ್ಥಳದ ಶೆಕೆಲ್ ಅನುಸಾರವಾಗಿ ನೇಮಿಸುವ ಕ್ರಯವು ಐವತ್ತು ಶೆಕೆಲ್ ಆಗಿರಬೇಕು.
وَإِنْ كَانَ أُنْثَى يَكُونُ تَقْوِيمُكَ ثَلَاثِينَ شَاقِلًا. ٤ 4
ಹೆಣ್ಣಾಗಿದ್ದರೆ, ನೀನು ನೇಮಿಸುವ ಕ್ರಯವು ಮೂವತ್ತು ಶೆಕೆಲ್ ಆಗಿರಬೇಕು.
وَإِنْ كَانَ مِنِ ٱبْنِ خَمْسِ سِنِينَ إِلَى ٱبْنِ عِشْرِينَ سَنَةً يَكُونُ تَقْوِيمُكَ لِذَكَرٍ عِشْرِينَ شَاقِلًا، وَلِأُنْثَى عَشَرَةَ شَوَاقِلَ. ٥ 5
ಐದರಿಂದ ಇಪ್ಪತ್ತು ವಯಸ್ಸುಳ್ಳ ಪುರುಷನ ಕ್ರಯವು ಇಪ್ಪತ್ತು ಶೆಕೆಲ್, ಸ್ತ್ರೀ ಕ್ರಯವು ಹತ್ತು ಶೆಕೆಲ್ ಆಗಿರಬೇಕು.
وَإِنْ كَانَ مِنِ ٱبْنِ شَهْرٍ إِلَى ٱبْنِ خَمْسِ سِنِينَ يَكُونُ تَقْوِيمُكَ لِذَكَرٍ خَمْسَةَ شَوَاقِلِ فِضَّةٍ، وَلِأُنْثَى يَكُونُ تَقْوِيمُكَ ثَلَاثَةَ شَوَاقِلِ فِضَّةٍ. ٦ 6
ಒಂದು ತಿಂಗಳಿಂದ ಐದು ವಯಸ್ಸುಳ್ಳ ಹುಡುಗನ ಕ್ರಯವು ಐದು ಶೆಕೆಲ್, ಹುಡುಗಿಯ ಕ್ರಯವು ಮೂರು ಶೆಕೆಲ್ ಆಗಿರಬೇಕು.
وَإِنْ كَانَ مِنِ ٱبْنِ سِتِّينَ سَنَةً فَصَاعِدًا فَإِنْ كَانَ ذَكَرًا يَكُونُ تَقْوِيمُكَ خَمْسَةَ عَشَرَ شَاقِلًا، وَأَمَّا لِلْأُنْثَى فَعَشَرَةَ شَوَاقِلَ. ٧ 7
ಅರವತ್ತು ವರುಷವೂ, ಅದಕ್ಕೂ ಹೆಚ್ಚಾದ ಪ್ರಾಯವುಳ್ಳ ಪುರುಷನಾಗಿದ್ದರೆ, ನೀನು ನೇಮಿಸುವ ಕ್ರಯವು ಹದಿನೈದು ಶೆಕೆಲ್, ಸ್ತ್ರೀಗೆ ಹತ್ತು ಶೆಕೆಲ್ ಆಗಿರಬೇಕು.
وَإِنْ كَانَ فَقِيرًا عَنْ تَقْوِيمِكَ يُوقِفُهُ أَمَامَ ٱلْكَاهِنِ فَيُقَوِّمُهُ ٱلْكَاهِنُ. عَلَى قَدْرِ مَا تَنَالُ يَدُ ٱلنَّاذِرِ يُقَوِّمُهُ ٱلْكَاهِنُ. ٨ 8
ಆದರೆ ನೀನು ನೇಮಿಸಿದ ಕ್ರಯವನ್ನು ಕೊಡದಷ್ಟು ಅವನು ಬಡವನಾಗಿದ್ದರೆ, ಅವನನ್ನು ಯಾಜಕನ ಮುಂದೆ ನಿಲ್ಲಿಸಬೇಕು. ಯಾಜಕನು ಅವನಿಗೆ ಕ್ರಯವನ್ನು ನೇಮಿಸಬೇಕು. ಪ್ರಮಾಣ ಮಾಡಿದವನ ಸಂಪತ್ತಿಗೆ ತಕ್ಕಂತೆ ಯಾಜಕನು ಅವನಿಗೆ ಕ್ರಯವನ್ನು ನಿರ್ಣಯಿಸಬೇಕು.
«وَإِنْ كَانَ بَهِيمَةً مِمَّا يُقَرِّبُونَهُ قُرْبَانًا لِلرَّبِّ، فَكُلُّ مَا يُعْطِي مِنْهُ لِلرَّبِّ يَكُونُ قُدْسًا. ٩ 9
“‘ಆದರೆ ಯೆಹೋವ ದೇವರಿಗೆ ಸಮರ್ಪಿಸಬೇಕಾದ ಪಶುಗಳ ಜಾತಿಯಲ್ಲಿ ಯಾವುದಾಗಿದ್ದರೂ, ಅವುಗಳಲ್ಲಿ ಯೆಹೋವ ದೇವರಿಗೆ ಕೊಡುವಂಥದ್ದು ಪರಿಶುದ್ಧವಾಗಿರಬೇಕು.
لَا يُغَيِّرُهُ وَلَا يُبْدِلُهُ جَيِّدًا بِرَدِيءٍ، أَوْ رَدِيئًا بِجَيِّدٍ. وَإِنْ أَبْدَلَ بَهِيمَةً بِبَهِيمَةٍ تَكُونُ هِيَ وَبَدِيلُهَا قُدْسًا. ١٠ 10
ಅದನ್ನು ಒಳ್ಳೆಯದಕ್ಕೆ ಕೆಟ್ಟದ್ದನ್ನಾಗಲಿ, ಕೆಟ್ಟದ್ದಕ್ಕೆ ಒಳ್ಳೆಯದನ್ನಾಗಲಿ ಬದಲು ಮಾಡಬಾರದು, ಮಾರ್ಪಡಿಸಲೂಬಾರದು. ಅವನು ಗೊತ್ತುಮಾಡಿದ ಒಂದು ಪಶುವಿಗೆ ಮತ್ತೊಂದನ್ನು ಬದಲು ಮಾಡಿದರೆ, ಅದು ಮತ್ತು ಅದರ ಬದಲಾಗಿಟ್ಟ ಪಶು ಇವೆರಡೂ ಯೆಹೋವ ದೇವರಿಗೆ ಪರಿಶುದ್ಧವಾಗಿರಬೇಕು.
وَإِنْ كَانَ بَهِيمَةً نَجِسَةً مِمَّا لَا يُقَرِّبُونَهُ قُرْبَانًا لِلرَّبِّ يُوقِفُ ٱلْبَهِيمَةَ أَمَامَ ٱلْكَاهِنِ، ١١ 11
ಅದು ಯೆಹೋವ ದೇವರಿಗೆ ಸಮರ್ಪಿಸಬೇಕಾದ ಪಶುವು ಅಶುದ್ಧವಾಗಿದ್ದರೆ, ಆ ಪಶುವನ್ನು ಅವನು ಯಾಜಕನ ಮುಂದೆ ನಿಲ್ಲಿಸಬೇಕು.
فَيُقَوِّمُهَا ٱلْكَاهِنُ جَيِّدَةً أَمْ رَدِيئَةً. فَحَسَبَ تَقْوِيمِكَ يَا كَاهِنُ هَكَذَا يَكُونُ. ١٢ 12
ಆಗ ಯಾಜಕನು ಅದು ಒಳ್ಳೆಯದೋ, ಕೆಟ್ಟದ್ದೋ ಎಂದು ಅದಕ್ಕೆ ಕ್ರಯ ಕಟ್ಟಬೇಕು. ಯಾಜಕನು ನಿರ್ಧರಿಸಿದ ಕ್ರಯವೇ ಅಂತಿಮ ಕ್ರಯವಾಗಿರಬೇಕು.
فَإِنْ فَكَّهَا يَزِيدُ خُمْسَهَا عَلَى تَقْوِيمِكَ. ١٣ 13
ಹರಕೆ ಮಾಡುವವನು ಅದನ್ನು ಹೇಗಾದರೂ ವಿಮೋಚಿಸಬೇಕೆಂದಿದ್ದರೆ, ನೀನು ನಿರ್ಧರಿಸಿದ ಕ್ರಯಕ್ಕಿಂತ ಹೆಚ್ಚಾಗಿ ಐದನೇ ಪಾಲನ್ನು ಅದಕ್ಕೆ ಕೂಡಿಸಬೇಕು.
«وَإِذَا قَدَّسَ إِنْسَانٌ بَيْتَهُ قُدْسًا لِلرَّبِّ، يُقَوِّمُهُ ٱلْكَاهِنُ جَيِّدًا أَمْ رَدِيئًا. وَكَمَا يُقَوِّمُهُ ٱلْكَاهِنُ هَكَذَا يَقُومُ. ١٤ 14
“‘ಒಬ್ಬನು ತನ್ನ ಮನೆಯನ್ನು ಯೆಹೋವ ದೇವರಿಗೆ ಪರಿಶುದ್ಧವಾಗಿರಲೆಂದು ಪ್ರತಿಷ್ಠೆಪಡಿಸಿದರೆ, ಯಾಜಕನು ಅದು ಒಳ್ಳೆಯದೋ, ಕೆಟ್ಟದ್ದೋ ಎಂದು ಪರೀಕ್ಷಿಸಿ ಕ್ರಯವನ್ನು ಕಟ್ಟಬೇಕು. ಯಾಜಕನು ನಿರ್ಧರಿಸಿದ ಬೆಲೆಯೇ ಸ್ಥಿರವಾಗಿರಬೇಕು.
فَإِنْ كَانَ ٱلْمُقَدِّسُ يَفُكُّ بَيْتَهُ، يَزِيدُ خُمْسَ فِضَّةِ تَقْوِيمِكَ عَلَيْهِ فَيَكُونُ لَهُ. ١٥ 15
ಆದರೆ ಪ್ರತಿಷ್ಠೆ ಪಡಿಸಿದವನು ತನ್ನ ಮನೆಯನ್ನು ಬಿಡಿಸಿಕೊಳ್ಳಬೇಕೆಂದಿದ್ದರೆ, ಅವನು ಕಟ್ಟಿದ ಕ್ರಯಕ್ಕಿಂತ ಹೆಚ್ಚಾಗಿ ಐದನೇ ಒಂದು ಭಾಗ ಹಣವನ್ನು ಕೊಡಲಿ, ಆಗ ಅದು ಅವನದಾಗಿರುವುದು.
وَإِنْ قَدَّسَ إِنْسَانٌ بَعْضَ حَقْلِ مُلْكِهِ لِلرَّبِّ، يَكُونُ تَقْوِيمُكَ عَلَى قَدَرِ بِذَارِهِ. بِذَارُ حُومَرٍ مِنَ ٱلشَّعِيرِ بِخَمْسِينَ شَاقِلِ فِضَّةٍ. ١٦ 16
“‘ಒಬ್ಬನು ತನ್ನ ಸ್ವಾಸ್ತ್ಯದ ಹೊಲದಲ್ಲಿ ಏನಾದರೂ ಯೆಹೋವ ದೇವರಿಗೆ ಪ್ರತಿಷ್ಠಿಸಿದರೆ, ಅದರ ಬೀಜದ ಪ್ರಕಾರ ಕ್ರಯ ಕಟ್ಟಬೇಕು. ಒಂದು ಓಮೆರ್ ಜವೆಗೋಧಿಯನ್ನು, ಬೀಜಕ್ಕೆ ಐವತ್ತು ಬೆಳ್ಳಿ ಶೆಕೆಲ್‌ಗಳನ್ನು ಕೊಡಬೇಕಾಗುವುದು.
إِنْ قَدَّسَ حَقْلَهُ مِنْ سَنَةِ ٱلْيُوبِيلِ فَحَسَبَ تَقْوِيمِكَ يَقُومُ. ١٧ 17
ಜೂಬಿಲಿ ಸಂವತ್ಸರ ಮೊದಲುಗೊಂಡು ಅವನು ತನ್ನ ಹೊಲವನ್ನು ಪ್ರತಿಷ್ಠಿಸಿದರೆ, ನೀನು ಕಟ್ಟುವ ಕ್ರಯದ ಪ್ರಕಾರ ಅದು ಸ್ಥಿರವಾಗಿರಬೇಕು.
وَإِنْ قَدَّسَ حَقْلَهُ بَعْدَ سَنَةِ ٱلْيُوبِيلِ يَحْسُبُ لَهُ ٱلْكَاهِنُ ٱلْفِضَّةَ عَلَى قَدَرِ ٱلسِّنِينَ ٱلْبَاقِيَةِ إِلَى سَنَةِ ٱلْيُوبِيلِ، فَيُنَقَّصُ مِنْ تَقْوِيمِكَ. ١٨ 18
ಆದರೆ ಜೂಬಿಲಿ ಸಂವತ್ಸರವಾದ ಮೇಲೆ ತನ್ನ ಹೊಲವನ್ನು ಪ್ರತಿಷ್ಠೆ ಮಾಡಿದರೆ, ಜೂಬಿಲಿ ಸಂವತ್ಸರದವರೆಗೆ ಮಿಕ್ಕ ವರ್ಷಗಳ ಲೆಕ್ಕದ ಪ್ರಕಾರ ಯಾಜಕನು ಅವನಿಗೆ ಹಣವನ್ನು ನಿರ್ಧರಿಸಿ, ಕಟ್ಟಿದ ಕ್ರಯದಿಂದ ಕಳೆಯಬೇಕು.
فَإِنْ فَكَّ ٱلْحَقْلَ مُقَدِّسُهُ، يَزِيدُ خُمْسَ فِضَّةِ تَقْوِيمِكَ عَلَيْهِ فَيَجِبُ لَهُ. ١٩ 19
ಇದಲ್ಲದೆ ಆ ಹೊಲವನ್ನು ಪರಿಶುದ್ಧ ಮಾಡಿದವನು ಅದನ್ನು ಅವನು ವಿಮೋಚಿಸಬೇಕೆಂದಿದ್ದರೆ, ಅವನು ಕಟ್ಟಿದ ಕ್ರಯಕ್ಕಿಂತ ಹೆಚ್ಚಾಗಿ ಐದನೆಯ ಒಂದು ಪಾಲನ್ನು ಕೊಡಬೇಕು. ಆಗ ಅದು ಸ್ಥಿರವಾಗಿರುವುದು.
لَكِنْ إِنْ لَمْ يَفُكَّ ٱلْحَقْلَ وَبِيعَ ٱلْحَقْلُ لِإِنْسَانٍ آخَرَ لَا يُفَكُّ بَعْدُ، ٢٠ 20
ಆದರೆ ಅವನು ಹೊಲವನ್ನು ವಿಮೋಚಿಸದೆ ಹೋದರೆ, ಇಲ್ಲವೆ ಮತ್ತೊಬ್ಬನಿಗೆ ಆ ಹೊಲವನ್ನು ಮಾರಿದ್ದರೆ, ಅದನ್ನು ಅನಂತರ ವಿಮೋಚಿಸಕೂಡದು.
بَلْ يَكُونُ ٱلْحَقْلُ عِنْدَ خُرُوجِهِ فِي ٱلْيُوبِيلِ قُدْسًا لِلرَّبِّ كَٱلْحَقْلِ ٱلْمُحَرَّمِ. لِلْكَاهِنِ يَكُونُ مُلْكُهُ. ٢١ 21
ಜೂಬಿಲಿ ಸಂವತ್ಸರದಲ್ಲಿ ಆ ಹೊಲವು ಬಿಡುಗಡೆಯಾಗುವಾಗ ಆ ಹೊಲವು ಯೆಹೋವ ದೇವರಿಗೆ ಪವಿತ್ರವಾದ ಹೊಲದಂತೆ ಆತನ ಸೊತ್ತಾಗಿಯೇ ಇರಬೇಕು, ಅದು ಯಾಜಕನಿಗೆ ಸಲ್ಲಬೇಕು.
«وَإِنْ قَدَّسَ لِلرَّبِّ حَقْلًا مِنْ شِرَائِهِ لَيْسَ مِنْ حُقُولِ مُلْكِهِ، ٢٢ 22
“‘ಆದರೆ ತನ್ನ ಹೊಲಗಳಲ್ಲಿ ಅಂದರೆ ಪಿತ್ರಾರ್ಜಿತ ಭೂಮಿಗೆ ಸೇರದಂಥ ಹೊಲವನ್ನು ಯೆಹೋವ ದೇವರಿಗೆ ಹರಕೆಮಾಡಿ ಪ್ರತಿಷ್ಠಿಸಿದರೆ,
يَحْسُبُ لَهُ ٱلْكَاهِنُ مَبْلَغَ تَقْوِيمِكَ إِلَى سَنَةِ ٱلْيُوبِيلِ، فَيُعْطِي تَقْوِيمَكَ فِي ذَلِكَ ٱلْيَوْمِ قُدْسًا لِلرَّبِّ. ٢٣ 23
ಯಾಜಕನು ಅವನಿಗೆ ನೇಮಿಸಿದ ಕ್ರಯದ ಹಣವನ್ನು ಜೂಬಿಲಿ ಸಂವತ್ಸರದವರೆಗೂ ಎಣಿಸಬೇಕು. ಅವನು ಆ ದಿವಸದಲ್ಲಿ ಕಟ್ಟಿದ ಕ್ರಯವನ್ನು ಯೆಹೋವ ದೇವರಿಗೆ ಮೀಸಲಾದದ್ದು ಎಂದು ಭಾವಿಸಿ ಕೊಡಬೇಕು.
وَفِي سَنَةِ ٱلْيُوبِيلِ يَرْجِعُ ٱلْحَقْلُ إِلَى ٱلَّذِي ٱشْتَرَاهُ مِنْهُ، إِلَى ٱلَّذِي لَهُ مُلْكُ ٱلْأَرْضِ. ٢٤ 24
ಆ ಹೊಲವು ಯಾರಿಗೆ ಸ್ವಂತವಾಗಿದ್ದು, ಯಾರಿಂದ ಕೊಂಡುಕೊಳ್ಳಲಾಗಿದೆಯೋ ಅದು ಜೂಬಿಲಿ ವರ್ಷದಲ್ಲಿ ಅವರಿಗೇ ಹಿಂದಕ್ಕೆ ಕೊಡಬೇಕು.
وَكُلُّ تَقْوِيمِكَ يَكُونُ عَلَى شَاقِلِ ٱلْمَقْدِسِ. عِشْرِينَ جِيرَةً يَكُونُ ٱلشَّاقِلُ. ٢٥ 25
ಪವಿತ್ರ ಸ್ಥಳದ ಶೆಕೆಲ್ ಅನುಸಾರವಾಗಿ ನೇಮಿಸುವ ಕ್ರಯವು ಇಪ್ಪತ್ತು ಗೇರಾ ತೂಕದ ಶೆಕೆಲ್ ಮೇರೆಗೆ ನೀವು ಕ್ರಯವನ್ನು ನಿಗದಿಮಾಡಬೇಕು.
«لَكِنَّ ٱلْبِكْرَ ٱلَّذِي يُفْرَزُ بِكْرًا لِلرَّبِّ مِنَ ٱلْبَهَائِمِ فَلَا يُقَدِّسُهُ أَحَدٌ. ثَوْرًا كَانَ أَوْ شَاةً فَهُوَ لِلرَّبِّ. ٢٦ 26
“‘ಪಶುಗಳ ಚೊಚ್ಚಲ ಮರಿ ಯೆಹೋವ ದೇವರದಾದ್ದರಿಂದ ಅದನ್ನೂ ಹರಕೆಯಾಗಿ ಕೊಡಬಾರದು. ಅದು ಎತ್ತಾಗಲಿ ಇಲ್ಲವೆ ಕುರಿಯಾಗಲಿ, ಅದು ಯೆಹೋವ ದೇವರದೇ.
وَإِنْ كَانَ مِنَ ٱلْبَهَائِمِ ٱلنَّجِسَةِ يَفْدِيهِ حَسَبَ تَقْوِيمِكَ وَيَزِيدُ خُمْسَهُ عَلَيْهِ. وَإِنْ لَمْ يُفَكَّ، فَيُبَاعُ حَسَبَ تَقْوِيمِكَ. ٢٧ 27
ಆದರೆ ಅದು ಅಶುದ್ಧ ಪಶುಗಳಲ್ಲಿ ಹುಟ್ಟಿದ್ದಾಗಿದ್ದರೆ, ಹರಕೆ ಮಾಡಿದವನು ನಿರ್ಣಯವಾದ ಬೆಲೆಯೊಂದಿಗೆ ಐದನೆಯ ಭಾಗವನ್ನು ಹೆಚ್ಚಾಗಿ ಕೊಟ್ಟು ಅದನ್ನು ಬಿಡಿಸಿಕೊಳ್ಳಬಹುದು. ಅವನು ಬಿಡಿಸದೆಹೋದರೆ ಅದನ್ನು ಕಟ್ಟಿದ ಕ್ರಯದ ಪ್ರಕಾರ ಮಾರಬೇಕು.
أَمَّا كُلُّ مُحَرَّمٍ يُحَرِّمُهُ إِنْسَانٌ لِلرَّبِّ مِنْ كُلِّ مَا لَهُ مِنَ ٱلنَّاسِ وَٱلْبَهَائِمِ وَمِنْ حُقُولِ مُلْكِهِ فَلَا يُبَاعُ وَلَا يُفَكُّ. إِنَّ كُلَّ مُحَرَّمٍ هُوَ قُدْسُ أَقْدَاسٍ لِلرَّبِّ. ٢٨ 28
“‘ಯಾರಾದರೂ ಮನುಷ್ಯನನ್ನಾಗಲಿ, ಪಶುವನ್ನಾಗಲಿ, ಪಿತ್ರಾರ್ಜಿತ ಹೊಲವನ್ನಾಗಲಿ ತನಗಿದ್ದ ಬೇರೆ ಯಾವುದನ್ನಾಗಲಿ ಒಬ್ಬ ಮನುಷ್ಯನು ಯೆಹೋವ ದೇವರಿಗಾಗಿ ಮೀಸಲಾಗಿಟ್ಟಿದ್ದರೆ, ಅದನ್ನು ಮಾರಬಾರದು ಇಲ್ಲವೆ ವಿಮೋಚಿಸಬಾರದು. ಮೀಸಲಾಗಿರುವ ಪ್ರತಿಯೊಂದೂ ಯೆಹೋವ ದೇವರಿಗೆ ಮಹಾಪರಿಶುದ್ಧವಾದದ್ದು.
كُلُّ مُحَرَّمٍ يُحَرَّمُ مِنَ ٱلنَّاسِ لَا يُفْدَى. يُقْتَلُ قَتْلًا. ٢٩ 29
“‘ಯೆಹೋವ ದೇವರಿಗೆಂದು ಮೀಸಲಾದದನ್ನು ಯಾರೂ ಕ್ರಯಕೊಟ್ಟು ವಿಮೋಚಿಸಬಾರದು. ಅಂಥವನಿಗೆ ಮರಣವೇ ಆಗಬೇಕು.
«وَكُلُّ عُشْرِ ٱلْأَرْضِ مِنْ حُبُوبِ ٱلْأَرْضِ وَأَثْمَارِ ٱلشَّجَرِ فَهُوَ لِلرَّبِّ. قُدْسٌ لِلرَّبِّ. ٣٠ 30
“‘ಭೂಮಿಯ ಬೀಜದಲ್ಲಾಗಲಿ, ಮರದ ಫಲದಲ್ಲಾಗಲಿ ಹತ್ತನೆಯ ಒಂದು ಪಾಲೆಲ್ಲಾ ಯೆಹೋವ ದೇವರದೇ. ಅದು ಯೆಹೋವ ದೇವರಿಗೆ ಪರಿಶುದ್ಧವಾದದ್ದು.
وَإِنْ فَكَّ إِنْسَانٌ بَعْضَ عُشْرِهِ يَزِيدُ خُمْسَهُ عَلَيْهِ. ٣١ 31
ಯಾವನಾದರೂ ತನ್ನ ಹತ್ತನೆಯ ಪಾಲುಗಳನ್ನು ವಿಮೋಚಿಸಬೇಕೆಂದಿದ್ದರೆ, ಅದಕ್ಕಿಂತ ಹೆಚ್ಚಾಗಿ ಅದರ ಐದನೆಯ ಒಂದು ಪಾಲನ್ನು ಕೊಡಬೇಕು.
وَأَمَّا كُلُّ عُشْرِ ٱلْبَقَرِ وَٱلْغَنَمِ فَكُلُّ مَا يَعْبُرُ تَحْتَ ٱلْعَصَا يَكُونُ ٱلْعَاشِرُ قُدْسًا لِلرَّبِّ. ٣٢ 32
ಇದಲ್ಲದೆ ದನಕುರಿಗಳಲ್ಲಿಯೂ, ಕುರುಬನು ಎಣಿಸುವ ಪಶುಗಳಲ್ಲಿಯೂ ಹತ್ತನೆಯ ಪಾಲು, ಹತ್ತರಲ್ಲಿ ಒಂದು ಯೆಹೋವ ದೇವರಿಗೆ ಪರಿಶುದ್ಧವಾಗಿರುವುದು.
لَا يُفْحَصُ أَجَيِّدٌ هُوَ أَمْ رَدِيءٌ، وَلَا يُبْدِلُهُ. وَإِنْ أَبْدَلَهُ يَكُونُ هُوَ وَبَدِيلُهُ قُدْسًا. لَا يُفَكُّ». ٣٣ 33
ಆ ಪಶು ಒಳ್ಳೆಯದೋ ಕೆಟ್ಟದ್ದೋ ಎಂದು ಅವನು ವಿಚಾರಿಸಬಾರದು. ಅವನು ಅದನ್ನು ಬದಲಾಯಿಸಬಾರದು. ಯಾರಾದರೂ ಅದನ್ನು ಬದಲಾಯಿಸಿದ್ದಾದರೆ, ಆಗ ಎರಡೂ ಪಶುಗಳು ಯೆಹೋವ ದೇವರಿಗೆ ಸೇರುತ್ತದೆ, ಅದು ಪರಿಶುದ್ಧವಾಗಿರುತ್ತದೆ ಅದನ್ನು ವಿಮೋಚಿಸಬಾರದು.’”
هَذِهِ هِيَ ٱلْوَصَايَا ٱلَّتِي أَوْصَى ٱلرَّبُّ بِهَا مُوسَى إِلَى بَنِي إِسْرَائِيلَ فِي جَبَلِ سِينَاءَ. ٣٤ 34
ಯೆಹೋವ ದೇವರು ಸೀನಾಯಿ ಬೆಟ್ಟದಲ್ಲಿ ಮೋಶೆಗೆ ಇಸ್ರಾಯೇಲರಿಗಾಗಿ ಕೊಟ್ಟ ಆಜ್ಞೆಗಳು ಇವೇ.

< اَللَّاوِيِّينَ 27 >