< اَللَّاوِيِّينَ 7 >

«وَهَذِهِ شَرِيعَةُ ذَبِيحَةِ ٱلْإِثْمِ: إِنَّهَا قُدْسُ أَقْدَاسٍ. ١ 1
“‘ಇವು ಪ್ರಾಯಶ್ಚಿತ್ತ ಬಲಿಯ ನಿಯಮಗಳು: ಇದು ಮಹಾಪರಿಶುದ್ಧವಾದದ್ದು.
فِي ٱلْمَكَانِ ٱلَّذِي يَذْبَحُونَ فِيهِ ٱلْمُحْرَقَةَ، يَذْبَحُونَ ذَبِيحَةَ ٱلْإِثْمِ، وَيَرُشُّ دَمَهَا عَلَى ٱلْمَذْبَحِ مُسْتَدِيرًا، ٢ 2
ದಹನಬಲಿಯನ್ನು ವಧಿಸಿದ ಸ್ಥಳದಲ್ಲಿಯೇ ಪ್ರಾಯಶ್ಚಿತ್ತದ ಬಲಿಯನ್ನು ವಧಿಸಬೇಕು. ಅದರ ರಕ್ತವನ್ನು ಬಲಿಪೀಠದ ಮೇಲೆ ಸುತ್ತಲೂ ಚಿಮುಕಿಸಬೇಕು.
وَيُقَرِّبُ مِنْهَا كُلَّ شَحْمِهَا: ٱلْأَلْيَةَ، وَٱلشَّحْمَ ٱلَّذِي يُغَشِّي ٱلْأَحْشَاءَ، ٣ 3
ಅದರ ಎಲ್ಲಾ ಕೊಬ್ಬನ್ನೂ, ಅಂದರೆ ಬಾಲದ ಕೊಬ್ಬನ್ನೂ ಕರುಳಿನ ಸುತ್ತಲಿರುವ ಕೊಬ್ಬನ್ನು,
وَٱلْكُلْيَتَيْنِ وَٱلشَّحْمَ ٱلَّذِي عَلَيْهِمَا، ٱلَّذِي عَلَى ٱلْخَاصِرَتَيْنِ، وَزِيَادَةَ ٱلْكَبِدِ مَعَ ٱلْكُلْيَتَيْنِ يَنْزِعُهَا. ٤ 4
ಬದಿಯಲ್ಲಿರುವ ಎರಡು ಮೂತ್ರ ಜನಕಾಂಗಗಳನ್ನೂ, ಅವುಗಳ ಮೇಲಿರುವ ಕೊಬ್ಬನ್ನೂ, ಪಕ್ಕೆಯ ಬದಿಯಲ್ಲಿಯ ಪೊರೆಯನ್ನೂ ಮೂತ್ರಜನಕಾಂಗಗಳೊಂದಿಗೆ ತೆಗೆದುಕೊಂಡು ಅರ್ಪಿಸಬೇಕು.
وَيُوقِدُهُنَّ ٱلْكَاهِنُ عَلَى ٱلْمَذْبَحِ وَقُودًا لِلرَّبِّ. إِنَّهَا ذَبِيحَةُ إِثْمٍ. ٥ 5
ಆಗ ಯಾಜಕನು ಅವುಗಳನ್ನು ಬೆಂಕಿಯಿಂದ ಯೆಹೋವ ದೇವರಿಗೆ ಸಮರ್ಪಿಸುವ ಬಲಿಪೀಠದ ಮೇಲೆ ಸುಡಬೇಕು. ಇದು ಪ್ರಾಯಶ್ಚಿತ್ತದ ಬಲಿಯಾಗಿದೆ.
كُلُّ ذَكَرٍ مِنَ ٱلْكَهَنَةِ يَأْكُلُ مِنْهَا. فِي مَكَانٍ مُقَدَّسٍ تُؤْكَلُ. إِنَّهَا قُدْسُ أَقْدَاسٍ. ٦ 6
ಯಾಜಕರಲ್ಲಿ ಪ್ರತಿಯೊಬ್ಬ ಪುರುಷನು ಅದನ್ನು ತಿನ್ನಬೇಕು. ಅದನ್ನು ಪರಿಶುದ್ಧವಾದ ಸ್ಥಳದಲ್ಲಿ ತಿನ್ನಬೇಕು. ಅದು ಮಹಾಪರಿಶುದ್ಧವಾದದ್ದು.
ذَبِيحَةُ ٱلْإِثْمِ كَذَبِيحَةِ ٱلْخَطِيَّةِ، لَهُمَا شَرِيعَةٌ وَاحِدَةٌ. الْكَاهِنُ ٱلَّذِي يُكَفِّرُ بِهَا تَكُونُ لَهُ. ٧ 7
“‘ಪಾಪ ಪರಿಹಾರದ ಬಲಿಯ ಹಾಗೆಯೇ ಪ್ರಾಯಶ್ಚಿತ್ತದ ಬಲಿಯೂ ಆಗಿದೆ. ಅವುಗಳಿಗೆ ಇರುವುದು ಒಂದೇ ನಿಯಮ, ಅವುಗಳಿಂದ ಪ್ರಾಯಶ್ಚಿತ್ತ ಮಾಡುವ ಯಾಜಕನೇ ಅವುಗಳನ್ನು ತೆಗೆದುಕೊಳ್ಳಬೇಕು.
وَٱلْكَاهِنُ ٱلَّذِي يُقَرِّبُ مُحْرَقَةَ إِنْسَانٍ فَجِلْدُ ٱلْمُحْرَقَةِ ٱلَّتِي يُقَرِّبُهَا يَكُونُ لَهُ. ٨ 8
ದಹನಬಲಿಯನ್ನು ಸಮರ್ಪಿಸುವ ಯಾಜಕನು ತಾನು ಸಮರ್ಪಿಸಿದ ದಹನಬಲಿಯ ತೊಗಲನ್ನು ತಾನೇ ತೆಗೆದುಕೊಳ್ಳಬೇಕು.
وَكُلُّ تَقْدِمَةٍ خُبِزَتْ فِي ٱلتَّنُّورِ، وَكُلُّ مَا عُمِلَ فِي طَاجِنٍ أَوْ عَلَى صَاجٍ يَكُونُ لِلْكَاهِنِ ٱلَّذِي يُقَرِّبُهُ. ٩ 9
ಒಲೆಯಲ್ಲಿ ಬೇಯಿಸಿದ ಬಾಂಡ್ಲಿಯಲ್ಲಿಯೂ ಬೋಗುಣಿಯಲ್ಲಿಯೂ ತಯಾರಿಸಿದ ಎಲ್ಲಾ ಧಾನ್ಯ ಸಮರ್ಪಣೆಯು ಸಮರ್ಪಿಸಿದ ಯಾಜಕನದಾಗಿರಬೇಕು.
وَكُلُّ تَقْدِمَةٍ مَلْتُوتَةٍ بِزَيْتٍ أَوْ نَاشِفَةٍ تَكُونُ لِجَمِيعِ بَنِي هَارُونَ، كُلِّ إِنْسَانٍ كَأَخِيهِ. ١٠ 10
ಎಣ್ಣೆಯಿಂದ ಮಿಶ್ರಿತವಾದ ಮತ್ತು ಒಣಗಿದ್ದ ಪ್ರತಿಯೊಂದು ಧಾನ್ಯ ಸಮರ್ಪಣೆಯನ್ನೂ ಆರೋನನ ಪುತ್ರರು ಸರಿ ಸಮಾನವಾಗಿ ತೆಗೆದುಕೊಳ್ಳಬೇಕು.
«وَهَذِهِ شَرِيعَةُ ذَبِيحَةِ ٱلسَّلَامَةِ. ٱلَّذِي يُقَرِّبُهَا لِلرَّبِّ: ١١ 11
“‘ಅವನು ಯೆಹೋವ ದೇವರಿಗೆ ಸಮರ್ಪಿಸಬೇಕಾದ ಸಮಾಧಾನದ ಬಲಿಗಳ ನಿಯಮವು ಇದೇ.
إِنْ قَرَّبَهَا لِأَجْلِ ٱلشُّكْرِ، يُقَرِّبُ عَلَى ذَبِيحَةِ ٱلشُّكْرِ أَقْرَاصَ فَطِيرٍ مَلْتُوتَةً بِزَيْتٍ، وَرِقَاقَ فَطِيرٍ مَدْهُونَةً بِزَيْتٍ، وَدَقِيقًا مَرْبُوكًا أَقْرَاصًا مَلْتُوتَةً بِزَيْتٍ، ١٢ 12
“‘ಅವನು ಉಪಕಾರ ಸ್ತುತಿಗಾಗಿ ಅರ್ಪಿಸುವುದಾದರೆ, ಕೃತಜ್ಞತಾಸ್ತುತಿ ಬಲಿಯನ್ನು ಎಣ್ಣೆ ಬೆರೆಸಿದ ಹುಳಿಯಿಲ್ಲದ ರೊಟ್ಟಿಗಳೊಂದಿಗೆ, ಎಣ್ಣೆ ಹೊಯ್ದ ಹುಳಿಯಿಲ್ಲದ ದೋಸೆಗಳೊಂದಿಗೆ ಮತ್ತು ನಯವಾದ ಹಿಟ್ಟಿನ ಎಣ್ಣೆ ಬೆರೆಸಿದ ಹುರಿದ ರೊಟ್ಟಿಗಳೊಂದಿಗೆ ಸಮರ್ಪಿಸಬೇಕು.
مَعَ أَقْرَاصِ خُبْزٍ خَمِيرٍ يُقَرِّبُ قُرْبَانَهُ عَلَى ذَبِيحَةِ شُكْرِ سَلَامَتِهِ. ١٣ 13
ರೊಟ್ಟಿಗಳಲ್ಲದೆ, ಅವನು ಸಮಾಧಾನದ ಬಲಿಗಳನ್ನು ಉಪಕಾರಸ್ತುತಿ ಯಜ್ಞದೊಂದಿಗೆ ತನ್ನ ಬಲಿಗಾಗಿ ಹುಳಿರೊಟ್ಟಿಗಳನ್ನು ಸಮರ್ಪಿಸಬೇಕು.
وَيُقَرِّبُ مِنْهُ وَاحِدًا مِنْ كُلِّ قُرْبَانٍ رَفِيعَةً لِلرَّبِّ، يَكُونُ لِلْكَاهِنِ ٱلَّذِي يَرُشُّ دَمَ ذَبِيحَةِ ٱلسَّلَامَةِ. ١٤ 14
ಅವನು ಇಡೀ ಕಾಣಿಕೆಯಲ್ಲಿ ಒಂದನ್ನು ಕಾಣಿಕೆಯನ್ನಾಗಿ ಯೆಹೋವ ದೇವರಿಗೆ ಅರ್ಪಿಸಬೇಕು. ಅದು ಸಮಾಧಾನ ಬಲಿಗಳ ರಕ್ತವನ್ನು ಚಿಮುಕಿಸುವ ಯಾಜಕನದ್ದಾಗಬೇಕು.
وَلَحْمُ ذَبِيحَةِ شُكْرِ سَلَامَتِهِ يُؤْكَلُ يَوْمَ قُرْبَانِهِ. لَا يُبْقِي مِنْهُ شَيْئًا إِلَى ٱلصَّبَاحِ. ١٥ 15
ಉಪಕಾರ ಸ್ತುತಿಗಾಗಿ ಅವನು ಸಮಾಧಾನ ಬಲಿಯ ಮಾಂಸವನ್ನು ಅರ್ಪಿಸಲಾದ ದಿನವೇ ತಿನ್ನಬೇಕು. ಅವನು ಅದರಲ್ಲಿ ಬೆಳಗಿನವರೆಗೆ ಯಾವುದನ್ನೂ ಉಳಿಸಬಾರದು.
وَإِنْ كَانَتْ ذَبِيحَةُ قُرْبَانِهِ نَذْرًا أَوْ نَافِلَةً، فَفِي يَوْمِ تَقْرِيبِهِ ذَبِيحَتَهُ تُؤْكَلُ. وَفِي ٱلْغَدِ يُؤْكَلُ مَا فَضَلَ مِنْهَا. ١٦ 16
“‘ಆದರೆ ಅವನ ಯಜ್ಞ ಸಮರ್ಪಣೆಯು ಒಂದು ಹರಕೆಯಾಗಿದ್ದರೆ ಇಲ್ಲವೆ ಸ್ವಯಿಚ್ಛೆಯಾದ ಸಮರ್ಪಣೆಯಾಗಿದ್ದರೆ ಅವನು ತನ್ನ ಯಜ್ಞವನ್ನು ಅರ್ಪಿಸಿದ ದಿನದಲ್ಲಿಯೇ ಅದನ್ನು ತಿನ್ನಬೇಕು. ಅದರಲ್ಲಿ ಉಳಿದದ್ದನ್ನು ಮಾರನೆಯ ದಿನದಲ್ಲಿ ಸಹ ತಿನ್ನಬಹುದು.
وَأَمَّا ٱلْفَاضِلُ مِنْ لَحْمِ ٱلذَّبِيحَةِ فِي ٱلْيَوْمِ ٱلثَّالِثِ فَيُحْرَقُ بِٱلنَّارِ. ١٧ 17
ಆದರೆ ಉಳಿದಿರುವ ಯಜ್ಞದ ಮಾಂಸವನ್ನು ಮೂರನೆಯ ದಿನದಲ್ಲಿ ಬೆಂಕಿಯಿಂದ ಸುಡಬೇಕು.
وَإِنْ أُكِلَ مِنْ لَحْمِ ذَبِيحَةِ سَلَامَتِهِ فِي ٱلْيَوْمِ ٱلثَّالِثِ لَا تُقْبَلُ. ٱلَّذِي يُقَرِّبُهَا لَا تُحْسَبُ لَهُ، تَكُونُ نَجَاسَةً، وَٱلنَّفْسُ ٱلَّتِي تَأْكُلُ مِنْهَا تَحْمِلُ ذَنْبَهَا. ١٨ 18
ತನ್ನ ಸಮಾಧಾನ ಬಲಿಯ ಯಜ್ಞದ ಮಾಂಸದಲ್ಲಿ ಯಾವ ಭಾಗವನ್ನಾದರೂ ಮೂರನೆಯ ದಿನದಲ್ಲಿ ತಿಂದರೆ ಅದು ಬಲಿಯಾಗುವುದಿಲ್ಲ, ಇಲ್ಲವೆ ಅರ್ಪಿಸುವವನ ಲೆಕ್ಕಕ್ಕೆ ಸೇರುವುದಿಲ್ಲ. ಅದು ಅಶುಚಿಯಾಗಿರುವುದು, ಅದನ್ನು ತಿನ್ನುವವನು ತನ್ನ ಅಪರಾಧವನ್ನು ಹೊರುವನು.
وَٱللَّحْمُ ٱلَّذِي مَسَّ شَيْئًا مَا نَجِسًا لَا يُؤْكَلُ. يُحْرَقُ بِٱلنَّارِ. وَٱللَّحْمُ يَأْكُلُ كُلُّ طَاهِرٍ مِنْهُ. ١٩ 19
“‘ಅಶುದ್ಧವಾದ ಯಾವುದನ್ನಾದರೂ ಮುಟ್ಟಿದ ಮಾಂಸವನ್ನು ತಿನ್ನಬಾರದು, ಅದನ್ನು ಬೆಂಕಿಯಿಂದ ಸುಟ್ಟುಬಿಡಬೇಕು. ಮಾಂಸದ ವಿಷಯದಲ್ಲಿ ಶುದ್ಧವಾಗಿರುವವರೆಲ್ಲರೂ ಅದರಲ್ಲಿ ತಿನ್ನಬಹುದು.
وَأَمَّا ٱلنَّفْسُ ٱلَّتِي تَأْكُلُ لَحْمًا مِنْ ذَبِيحَةِ ٱلسَّلَامَةِ ٱلَّتِي لِلرَّبِّ وَنَجَاسَتُهَا عَلَيْهَا فَتُقْطَعُ تِلْكَ ٱلنَّفْسُ مِنْ شَعْبِهَا. ٢٠ 20
ಆದರೆ ಯೆಹೋವ ದೇವರಿಗೆ ಸಂಬಂಧಪಟ್ಟ ಸಮಾಧಾನದ ಬಲಿಯ ಯಜ್ಞದ ಮಾಂಸವನ್ನು ಯಾವನಾದರೂ ಅಶುದ್ಧನಾಗಿದ್ದು ತಿನ್ನುವನೋ, ಅಂಥವರನ್ನು ತಮ್ಮ ಜನರಿಂದ ತೆಗೆದುಹಾಕಬೇಕು.
وَٱلنَّفْسُ ٱلَّتِي تَمَسُّ شَيْئًا مَّا نَجِسًا نَجَاسَةَ إِنْسَانٍ أَوْ بَهِيمَةً نَجِسَةً أَوْ مَكْرُوهًا مَّا نَجِسًا، ثُمَّ تَأْكُلُ مِنْ لَحْمِ ذَبِيحَةِ ٱلسَّلَامَةِ ٱلَّتِي لِلرَّبِّ، تُقْطَعُ تِلْكَ ٱلنَّفْسُ مِنْ شَعْبِهَا». ٢١ 21
ಇದಲ್ಲದೆ ಯಾವನಾದರೂ ಮನುಷ್ಯನ ಅಶುದ್ಧ ವಸ್ತುವನ್ನೇ ಇಲ್ಲವೆ ಯಾವುದೇ ಹೊಲೆಯಾದ ಅಶುದ್ಧವಸ್ತುವನ್ನಾಗಲಿ ಮುಟ್ಟಿದರೆ ಮತ್ತು ಯೆಹೋವ ದೇವರಿಗೆ ಸಂಬಂಧಿಸಿದ ಸಮಾಧಾನ ಬಲಿಯ ಯಜ್ಞದ ಮಾಂಸವನ್ನು ತಿಂದರೆ ಅವನು ತನ್ನ ಕುಲದಿಂದ ಬಹಿಷ್ಕೃತನಾಗಬೇಕು,’” ಎಂದರು.
وَكَلَّمَ ٱلرَّبُّ مُوسَى قَائِلًا: ٢٢ 22
ಯೆಹೋವ ದೇವರು ಮೋಶೆಯೊಂದಿಗೆ ಮಾತನಾಡಿ,
«كَلِّمْ بَنِي إِسْرَائِيلَ قَائِلًا: كُلَّ شَحْمِ ثَوْرٍ أَوْ كَبْشٍ أَوْ مَاعِزٍ لَا تَأْكُلُوا. ٢٣ 23
“ಇಸ್ರಾಯೇಲರೊಂದಿಗೆ ಮಾತನಾಡಿ ಹೀಗೆ ಹೇಳು: ‘ನೀವು ಎತ್ತು ಇಲ್ಲವೆ ಕುರಿ ಇಲ್ಲವೆ ಮೇಕೆಗಳ ಕೊಬ್ಬನ್ನು ತಿನ್ನಬಾರದು.
وَأَمَّا شَحْمُ ٱلْمَيْتَةِ وَشَحْمُ ٱلْمُفْتَرَسَةِ فَيُسْتَعْمَلُ لِكُلِّ عَمَلٍ، لَكِنْ أَكْلًا لَا تَأْكُلُوهُ. ٢٤ 24
ತಾನಾಗಿಯೇ ಸತ್ತ ಪ್ರಾಣಿಯ ಕೊಬ್ಬನ್ನೂ, ಕಾಡುಮೃಗಗಳು ಸೀಳಿದ್ದರ ಕೊಬ್ಬನ್ನೂ ಬೇರೆ ಯಾವುದಕ್ಕಾದರೂ ಉಪಯೋಗಿಸಬಹುದು. ಆದರೆ ನೀವು ಅದನ್ನು ಎಷ್ಟು ಮಾತ್ರವೂ ತಿನ್ನಬಾರದು.
إِنَّ كُلَّ مَنْ أَكَلَ شَحْمًا مِنَ ٱلْبَهَائِمِ ٱلَّتِي يُقَرِّبُ مِنْهَا وَقُودًا لِلرَّبِّ تُقْطَعُ مِنْ شَعْبِهَا، ٱلنَّفْسُ ٱلَّتِي تَأْكُلُ. ٢٥ 25
ಏಕೆಂದರೆ ಮನುಷ್ಯರು ಯೆಹೋವ ದೇವರಿಗೆ ಬೆಂಕಿಯಿಂದ ಸಮರ್ಪಿಸಿದ ಬಲಿ, ಪ್ರಾಣಿಯ ಕೊಬ್ಬನ್ನು ಯಾವನಾದರೂ ತಿಂದರೆ, ಅಂಥವರನ್ನು ತಮ್ಮ ಜನರಿಂದ ತೆಗೆದುಹಾಕಬೇಕು.
وَكُلَّ دَمٍ لَا تَأْكُلُوا فِي جَمِيعِ مَسَاكِنِكُمْ مِنَ ٱلطَّيْرِ وَمِنَ ٱلْبَهَائِمِ. ٢٦ 26
ಇದಲ್ಲದೆ ನೀವು ಯಾವ ತರದ ರಕ್ತವನ್ನೂ ಅಂದರೆ ಅದು ಪಕ್ಷಿಯದಾಗಿರಲಿ, ಪ್ರಾಣಿಯದಾಗಿರಲಿ ನಿಮ್ಮ ಯಾವ ನಿವಾಸಗಳಲ್ಲಿಯೂ ತಿನ್ನಬಾರದು.
كُلُّ نَفْسٍ تَأْكُلُ شَيْئًا مِنَ ٱلدَّمِ تُقْطَعُ تِلْكَ ٱلنَّفْسُ مِنْ شَعْبِهَا». ٢٧ 27
ಯಾವುದೇ ತರದ ರಕ್ತವನ್ನು ತಿಂದವನು ಯಾವನೇ ಆಗಿರಲಿ, ಅಂಥವನನ್ನು ತನ್ನ ಜನರಿಂದ ತೆಗೆದುಹಾಕಬೇಕು.’”
وَكَلَّمَ ٱلرَّبُّ مُوسَى قَائِلًا: ٢٨ 28
ಯೆಹೋವ ದೇವರು ಮೋಶೆಯೊಂದಿಗೆ ಮಾತನಾಡಿ,
«كَلِّمْ بَنِي إِسْرَائِيلَ قَائِلًا: ٱلَّذِي يُقَرِّبُ ذَبِيحَةَ سَلَامَتِهِ لِلرَّبِّ، يَأْتِي بِقُرْبَانِهِ إِلَى ٱلرَّبِّ مِنْ ذَبِيحَةِ سَلَامَتِهِ. ٢٩ 29
“ನೀನು ಇಸ್ರಾಯೇಲರೊಂದಿಗೆ ಮಾತನಾಡಿ ಹೀಗೆ ಹೇಳು: ‘ಯೆಹೋವ ದೇವರಿಗೆ ಸಮಾಧಾನ ಬಲಿಯನ್ನು ಅರ್ಪಿಸುವವನು, ಸಮಾಧಾನ ಬಲಿಯ ತನ್ನ ಕಾಣಿಕೆಯನ್ನು ಯೆಹೋವ ದೇವರಿಗೆ ತರಬೇಕು.
يَدَاهُ تَأْتِيَانِ بِوَقَائِدِ ٱلرَّبِّ. ٱلشَّحْمُ يَأْتِي بِهِ مَعَ ٱلصَّدْرِ. أَمَّا ٱلصَّدْرُ فَلِكَيْ يُرَدِّدَهُ تَرْدِيدًا أَمَامَ ٱلرَّبِّ. ٣٠ 30
ಅವನು ಯೆಹೋವ ದೇವರಿಗೆ ಬೆಂಕಿಯಿಂದ ಮಾಡಿದ ಸಮರ್ಪಣೆಗಳನ್ನು ತನ್ನ ಸ್ವಂತ ಕೈಗಳಿಂದಲೇ ತರಬೇಕು. ಯೆಹೋವ ದೇವರ ಮುಂದೆ ನೈವೇದ್ಯರೂಪವಾಗಿ ನಿವಾಳಿಸುವದಕ್ಕೆ ಕೊಬ್ಬಿನೊಂದಿಗೆ ಎದೆಯನ್ನು ತರಬೇಕು.
فَيُوقِدُ ٱلْكَاهِنُ ٱلشَّحْمَ عَلَى ٱلْمَذْبَحِ، وَيَكُونُ ٱلصَّدْرُ لِهَارُونَ وَبَنِيهِ. ٣١ 31
ಯಾಜಕನು ಆ ಕೊಬ್ಬನ್ನು ಬಲಿಪೀಠದ ಮೇಲೆ ಸುಡಬೇಕು. ಆದರೆ ಎದೆಯು ಆರೋನನ ಮತ್ತು ಅವನ ಮಕ್ಕಳಿಗೆ ಸೇರುವುದು.
وَٱلسَّاقُ ٱلْيُمْنَى تُعْطُونَهَا رَفِيعَةً لِلْكَاهِنِ مِنْ ذَبَائِحِ سَلَامَتِكُمْ. ٣٢ 32
ಬಲಭುಜವನ್ನು ನೀವು ಯಾಜಕನಿಗೆ ಸಮಾಧಾನದ ಬಲಿಯಾಗಿ ಕೊಡಬೇಕು.
اَلَّذِي يُقَرِّبُ دَمَ ذَبِيحَةِ ٱلسَّلَامَةِ وَٱلشَّحْمَ مِنْ بَنِي هَارُونَ، تَكُونُ لَهُ ٱلسَّاقُ ٱلْيُمْنَى نَصِيبًا، ٣٣ 33
ಸಮಾಧಾನದ ಬಲಿಗಳ ರಕ್ತವನ್ನೂ, ಕೊಬ್ಬನ್ನೂ ಸಮರ್ಪಿಸುವ ಆರೋನನ ಪುತ್ರರಲ್ಲಿ ಒಬ್ಬನು ಭುಜದ ಬಲಭಾಗವನ್ನು ತನ್ನ ಪಾಲಾಗಿ ತೆಗೆದುಕೊಳ್ಳಲಿ.
لِأَنَّ صَدْرَ ٱلتَّرْدِيدِ وَسَاقَ ٱلرَّفِيعَةِ قَدْ أَخَذْتُهُمَا مِنْ بَنِي إِسْرَائِيلَ مِنْ ذَبَائِحِ سَلَامَتِهِمْ وَأَعْطَيْتُهُمَا لِهَارُونَ ٱلْكَاهِنِ وَلِبَنِيهِ فَرِيضَةً دَهْرِيَّةً مِنْ بَنِي إِسْرَائِيلَ». ٣٤ 34
ಏಕೆಂದರೆ ನೈವೇದ್ಯ ಮಾಡಿದ ಎದೆಯನ್ನು ಮತ್ತು ನಿವಾಳಿಸುವ ಭುಜವನ್ನು ಇಸ್ರಾಯೇಲಿನ ಮಕ್ಕಳ ಸಮಾಧಾನದ ಬಲಿಗಳ ಯಜ್ಞಗಳಿಂದ ನಾನು ತೆಗೆದುಕೊಂಡು ಯಾಜಕನಾದ ಆರೋನನಿಗೂ, ಅವನ ಪುತ್ರರಿಗೂ ಇಸ್ರಾಯೇಲರಲ್ಲಿ ಒಂದು ನಿರಂತರವಾದ ಕಟ್ಟಳೆಯಾಗಿ ಅವರಿಗೆ ಕೊಟ್ಟಿದ್ದೇನೆ.’”
تِلْكَ مَسْحَةُ هَارُونَ وَمَسْحَةُ بَنِيهِ مِنْ وَقَائِدِ ٱلرَّبِّ يَوْمَ تَقْدِيمِهِمْ لِيَكْهَنُوا لِلرَّبِّ، ٣٥ 35
ಆರೋನನ ಅಭಿಷೇಕದ ಮತ್ತು ಅವನ ಮಕ್ಕಳ ಅಭಿಷೇಕದ ದಿನದಲ್ಲಿ ಅವರು ತಮ್ಮನ್ನು ಯಾಜಕನ ಉದ್ಯೋಗದ ಸೇವೆಗಾಗಿ ಯೆಹೋವ ದೇವರಿಗೆ ಒಪ್ಪಿಸಿಕೊಳ್ಳುವಾಗ, ಯೆಹೋವ ದೇವರಿಗೆ ಬೆಂಕಿಯಿಂದ ಸಮರ್ಪಿಸುವ ಬಲಿಗಳಲ್ಲಿ ಇರುವ ಪಾಲು ಇದೆ.
ٱلَّتِي أَمَرَ ٱلرَّبُّ أَنْ تُعْطَى لَهُمْ يَوْمَ مَسْحِهِ إِيَّاهُمْ مِنْ بَنِي إِسْرَائِيلَ، فَرِيضَةً دَهْرِيَّةً فِي أَجْيَالِهِمْ. ٣٦ 36
ಅವರನ್ನು ಅಭಿಷೇಕಿಸಿದ ದಿನದಲ್ಲಿ ಇದನ್ನು ಯೆಹೋವ ದೇವರು ಇಸ್ರಾಯೇಲರಿಗೆ ಅವರ ಎಲ್ಲಾ ಸಂತತಿಗಳಲ್ಲಿ ಒಂದು ನಿರಂತರವಾದ ಕಟ್ಟಳೆಯಾಗಿರುವಂತೆ ಅವರಿಗೆ ಆಜ್ಞಾಪಿಸಿದ್ದಾರೆ.
تِلْكَ شَرِيعَةُ ٱلْمُحْرَقَةِ، وَٱلتَّقْدِمَةِ، وَذَبِيحَةِ ٱلْخَطِيَّةِ، وَذَبِيحَةِ ٱلْإِثْمِ، وَذَبِيحَةِ ٱلْمِلْءِ، وَذَبِيحَةِ ٱلسَّلَامَةِ، ٣٧ 37
ದಹನಬಲಿ, ಧಾನ್ಯ ಬಲಿ, ಪಾಪ ಪರಿಹಾರದ ಬಲಿ, ಪ್ರಾಯಶ್ಚಿತ್ತದ ಬಲಿ, ಪ್ರತಿಷ್ಠೆಗಳ ಮತ್ತು ಸಮಾಧಾನದ ಬಲಿಗಳ ಉಪದೇಶಗಳು ಇವೇ.
ٱلَّتِي أَمَرَ ٱلرَّبُّ بِهَا مُوسَى فِي جَبَلِ سِينَاءَ، يَوْمَ أَمْرِهِ بَنِي إِسْرَائِيلَ بِتَقْرِيبِ قَرَابِينِهِمْ لِلرَّبِّ فِي بَرِّيَّةِ سِينَاءَ. ٣٨ 38
ಇವುಗಳನ್ನು ಯೆಹೋವ ದೇವರು ಇಸ್ರಾಯೇಲರಿಗೆ ಅವರು ತಮ್ಮ ಕಾಣಿಕೆಗಳನ್ನು ಸಮರ್ಪಿಸುವಂತೆ ಆಜ್ಞಾಪಿಸಿದ ದಿನದಲ್ಲಿ ಸೀನಾಯಿ ಮರುಭೂಮಿಯ ಸೀನಾಯಿ ಬೆಟ್ಟದಲ್ಲಿ ಯೆಹೋವ ದೇವರು ಮೋಶೆಗೆ ಆಜ್ಞಾಪಿಸಿದರು.

< اَللَّاوِيِّينَ 7 >