< اَلْمَزَامِيرُ 30 >

مَزْمُورٌ أُغْنِيَةُ تَدْشِينِ اَلْبَيْتِ. لِدَاوُدَ أُعَظِّمُكَ يَارَبُّ لِأَنَّكَ نَشَلْتَنِي وَلَمْ تُشْمِتْ بِي أَعْدَائِي. ١ 1
ದಾವೀದನ ಕೀರ್ತನೆ, ದೇವಾಲಯದ ಪ್ರತಿಷ್ಠೆಯಲ್ಲಿ ಹಾಡತಕ್ಕದ್ದು. ಯೆಹೋವನೇ, ನನ್ನ ಶತ್ರುಗಳು ಸಂತೋಷಿಸುವುದಕ್ಕೆ ಅವಕಾಶಕೊಡದೆ, ನನ್ನನ್ನು ಉದ್ಧರಿಸಿದ್ದರಿಂದ ನಿನ್ನನ್ನು ಕೊಂಡಾಡುವೆನು.
يَارَبُّ إِلَهِي، ٱسْتَغَثْتُ بِكَ فَشَفَيْتَنِي. ٢ 2
ಯೆಹೋವನೇ, ನನ್ನ ದೇವರೇ, ನಿನಗೆ ಮೊರೆಯಿಡಲು ನನ್ನನ್ನು ಸ್ವಸ್ಥಮಾಡಿದಿ.
يَارَبُّ، أَصْعَدْتَ مِنَ ٱلْهَاوِيَةِ نَفْسِي. أَحْيَيْتَنِي مِنْ بَيْنِ ٱلْهَابِطِينَ فِي ٱلْجُبِّ. (Sheol h7585) ٣ 3
ಯೆಹೋವನೇ, ನನ್ನ ಪ್ರಾಣವನ್ನು ಪಾತಾಳದಿಂದಲೂ ಎತ್ತಿದಿಯಲ್ಲಾ; ನನ್ನನ್ನು ಸಮಾಧಿಯಲ್ಲಿ ಸೇರಿಸದೆ ಬದುಕಿಸಿದಿಯಲ್ಲಾ. (Sheol h7585)
رَنِّمُوا لِلرَّبِّ يَا أَتْقِيَاءَهُ، وَٱحْمَدُوا ذِكْرَ قُدْسِهِ. ٤ 4
ಯೆಹೋವನ ಭಕ್ತರೇ, ಆತನನ್ನು ಕೀರ್ತಿಸಿರಿ; ಆತನ ಪರಿಶುದ್ಧನಾಮವನ್ನು ಕೊಂಡಾಡಿರಿ.
لِأَنَّ لِلَحْظَةٍ غَضَبَهُ. حَيَاةٌ فِي رِضَاهُ. عِنْدَ ٱلْمَسَاءِ يَبِيتُ ٱلْبُكَاءُ، وَفِي ٱلصَّبَاحِ تَرَنُّمٌ. ٥ 5
ಆತನ ಕೋಪವು ಕ್ಷಣಮಾತ್ರವೇ; ಆತನ ಅನುಗ್ರಹವೋ ಜೀವಮಾನವೆಲ್ಲಾ ಇರುವುದು; ಸಂಜೆಗೆ ದುಃಖವೆಂಬುದು ಬಂದು ನಮ್ಮ ಬಳಿಯಲ್ಲಿ ಇಳಿದುಕೊಂಡರೂ, ಮುಂಜಾನೆ ಹರ್ಷಧ್ವನಿಯು ಕೇಳಿಸುವುದು.
وَأَنَا قُلْتُ فِي طُمَأْنِينَتِي: «لَا أَتَزَعْزَعُ إِلَى ٱلْأَبَدِ». ٦ 6
ನಾನಂತೂ ಸುಖದಿಂದಿದ್ದಾಗ, “ನಾನು ಎಂದಿಗೂ ಕದಲುವುದಿಲ್ಲ” ಎಂದು ಹೇಳಿಕೊಂಡಿದ್ದೆನು.
يَارَبُّ، بِرِضَاكَ ثَبَّتَّ لِجَبَلِي عِزًّا. حَجَبْتَ وَجْهَكَ فَصِرْتُ مُرْتَاعًا. ٧ 7
ಯೆಹೋವನೇ, ಕೃಪೆಮಾಡಿ ನಾನಿರುವ ಬೆಟ್ಟಕ್ಕೆ ಸ್ಥಿರವಾದ ಬಲವನ್ನು ಅನುಗ್ರಹಿಸಿದಿಯಲ್ಲಾ. ಆದರೂ ನೀನು ನಿನ್ನ ಮುಖವನ್ನು ಮರೆಮಾಡಿಕೊಂಡಾಗ ನಾನು ಕಳವಳಗೊಂಡೆನು.
إِلَيْكَ يَارَبُّ أَصْرُخُ، وإِلَى ٱلسَّيِّدِ أَتَضَرَّعُ ٨ 8
ಯೆಹೋವನೇ, ನಿನಗೆ ಮೊರೆಯಿಟ್ಟೆನು; ನನ್ನ ಒಡೆಯನಿಗೆ ಬಿನ್ನವಿಸಿ,
مَا ٱلْفَائِدَةُ مِنْ دَمِي إِذَا نَزَلْتُ إِلَى ٱلْحُفْرَةِ؟ هَلْ يَحْمَدُكَ ٱلتُّرَابُ؟ هَلْ يُخْبِرُ بِحَقِّكَ؟ ٩ 9
“ನನ್ನನ್ನು ಕೊಂದುಹಾಕಿ ಸಮಾಧಿಗೆ ಸೇರಿಸಿದರೆ ನಿನಗೆ ಲಾಭವೇನು? ಮಣ್ಣು ನಿನ್ನನ್ನು ಸ್ತುತಿಸುವುದೋ? ಅದು ನಿನ್ನ ನಂಬಿಕೆಯನ್ನು ಹೊಗಳುವುದೇನು?
ٱسْتَمِعْ يَارَبُّ وَٱرْحَمْنِي. يَارَبُّ، كُنْ مُعِينًا لِي. ١٠ 10
೧೦ಯೆಹೋವನೇ, ನನ್ನ ಪ್ರಾರ್ಥನೆಯನ್ನು ಕೇಳಿ ಕರುಣಿಸು; ಯೆಹೋವನೇ, ನನ್ನ ಸಹಾಯಕ್ಕೆ ಬಾ” ಎಂದು ಹೇಳಿದೆನು.
حَوَّلْتَ نَوْحِي إِلَى رَقْصٍ لِي. حَلَلْتَ مِسْحِي وَمَنْطَقْتَنِي فَرَحًا، ١١ 11
೧೧ಆಗ ನೀನು ನನ್ನ ಗೋಳಾಟವನ್ನು ತಪ್ಪಿಸಿ, ಸಂತೋಷದಿಂದ ಕುಣಿದಾಡುವಂತೆ ಮಾಡಿದಿ; ನಾನು ಕಟ್ಟಿಕೊಂಡಿದ್ದ ಗೋಣಿತಟ್ಟನ್ನು ತೆಗೆದುಬಿಟ್ಟು, ಹರ್ಷವಸ್ತ್ರವನ್ನು ನನಗೆ ಧಾರಣೆಮಾಡಿಸಿದಿ.
لِكَيْ تَتَرَنَّمَ لَكَ رُوحِي وَلَا تَسْكُتَ. يَارَبُّ إِلَهِي، إِلَى ٱلْأَبَدِ أَحْمَدُكَ. ١٢ 12
೧೨ಇದರಿಂದ ಯೆಹೋವನೇ, ನನ್ನ ಮನಸ್ಸು ಎಡೆಬಿಡದೆ ನಿನ್ನನ್ನು ಕೀರ್ತಿಸುತ್ತಿರುವುದು; ನನ್ನ ದೇವರೇ, ನಿನ್ನನ್ನು ಸದಾಕಾಲವೂ ಸ್ತುತಿಸುವೆನು.

< اَلْمَزَامِيرُ 30 >