< ԱՌԱՋԻՆ ՅՈՎՀԱՆՆՈՒ 4 >

1 Սիրելինե՛ր, մի՛ հաւատաք ամէն հոգիի, հապա քննեցէ՛ք հոգիները՝ թէ արդեօք Աստուծմէ՛ են. որովհետեւ շատ սուտ մարգարէներ երեւան ելած են աշխարհի մէջ:
ಪ್ರಿಯರೇ, ಅನೇಕ ಸುಳ್ಳುಪ್ರವಾದಿಗಳು ಲೋಕದೊಳಗೆ ಬಂದಿರುವುದರಿಂದ ನೀವು ಎಲ್ಲಾ ಆತ್ಮಗಳ ನುಡಿಗಳನ್ನು ನಂಬದೆ ಆಯಾ ಆತ್ಮಗಳ ನುಡಿಗಳು ದೇವರಿಂದ ಪ್ರೇರಿತವಾದವುಗಳೋ ಅಲ್ಲವೋ ಎಂದು ಅವುಗಳನ್ನು ಪರೀಕ್ಷಿಸಬೇಕು.
2 Սա՛պէս կը ճանչնաք Աստուծոյ Հոգին.- ամէն հոգի որ կը դաւանի թէ Յիսուս Քրիստոս մարմինով եկաւ, Աստուծմէ է.
ದೇವರಾತ್ಮ ಪ್ರೇರಿತವಾದ ನುಡಿಗಳು ಎಂದು ತಿಳಿದುಕೊಳ್ಳುವುದು ಹೇಗೆಂದರೆ, ಯೇಸು ಕ್ರಿಸ್ತನು ಮನುಷ್ಯ ರೂಪವನ್ನು ಧರಿಸಿಕೊಂಡು ಬಂದನು ಎಂದು ಒಪ್ಪಿಕೊಳ್ಳುವ ಆತ್ಮವು ದೇವರಿಂದ ಪ್ರೇರಿತವಾಗಿ ಬಂದದ್ದಾಗಿದೆ.
3 իսկ ամէն հոգի որ չի դաւանիր թէ Յիսուս Քրիստոս մարմինով եկաւ, Աստուծմէ չէ. եւ ա՛յս է Նեռի հոգին, որուն մասին լսեցիք թէ պիտի գայ, ու արդէն աշխարհի մէջ է:
ಯೇಸುಕ್ರಿಸ್ತನನ್ನು ಒಪ್ಪಿಕೊಳ್ಳದಿರುವ ಪ್ರತಿಯೊಂದು ಆತ್ಮವು ದೇವರಿಂದ ಬಂದದ್ದಲ್ಲ. ಅದು ಕ್ರಿಸ್ತವಿರೋಧಿಯ ಆತ್ಮವಾಗಿದೆ. ಅದು ಬರುತ್ತದೆಂಬುದನ್ನು ನೀವು ಕೇಳಿದ್ದೀರಲ್ಲಾ. ಅದು ಈಗಾಗಲೇ ಲೋಕದಲ್ಲಿ ಇದೆ.
4 Դուք Աստուծմէ էք, որդեակնե՛ր, եւ յաղթեցիք անոնց. որովհետեւ ա՛ն որ ձեր մէջ է՝ աւելի մեծ է, քան ա՛ն՝ որ աշխարհի մէջ է:
ಪ್ರಿಯಮಕ್ಕಳೇ, ನೀವಂತೂ ದೇವರಿಗೆ ಸೇರಿದವರಾಗಿದ್ದೀರಿ. ಮತ್ತು ಲೋಕದಲ್ಲಿರುವವನಿಗಿಂತ ನಿಮ್ಮಲ್ಲಿರುವಾತನು ಉನ್ನತನಾಗಿರುವುದರಿಂದ ನೀವು ಆ ಸುಳ್ಳು ಪ್ರವಾದಿಗಳ ಆತ್ಮವನ್ನು ಜಯಿಸಿದ್ದೀರಿ.
5 Անոնք աշխարհէն են. ուստի կը խօսին աշխարհի մասին, եւ աշխարհը մտիկ կ՚ընէ անոնց:
ಅವರು ಲೋಕಸಂಬಂಧಿಗಳಾಗಿದ್ದಾರೆ. ಈ ಕಾರಣದಿಂದ ಅವರು ಲೌಕಿಕವಾದುದನ್ನೇ ಮಾತನಾಡುತ್ತಾರೆ ಮತ್ತು ಲೋಕದವರು ಅವರ ಮಾತನ್ನು ಕೇಳುತ್ತಾರೆ.
6 Իսկ մենք Աստուծմէ ենք. ա՛ն որ կը ճանչնայ Աստուած՝ մտիկ կ՚ընէ մեզի, ա՛ն որ Աստուծմէ չէ՝ մտիկ չ՚ըներ մեզի: Ասո՛վ կը գիտնանք ճշմարտութեան Հոգին ու մոլորութեան հոգին:
ನಾವಂತೂ ದೇವರಿಗೆ ಸಂಬಂಧಪಟ್ಟವರಾಗಿದ್ದೇವೆ. ದೇವರನ್ನು ಬಲ್ಲವರು ನಮ್ಮ ಮಾತನ್ನು ಕೇಳುತ್ತಾರೆ. ದೇವರಿಗೆ ಸಂಬಂಧಪಡದವರು ನಮ್ಮ ಮಾತನ್ನು ಕೇಳುವುದಿಲ್ಲ. ಇದರಿಂದಲೇ ಸತ್ಯವನ್ನು ಬೋಧಿಸುವ ಆತ್ಮ ಯಾವುದು ಮತ್ತು ಸುಳ್ಳನ್ನು ಬೋಧಿಸುವ ಆತ್ಮ ಯಾವುದು ಎಂದು ನಾವು ತಿಳಿದುಕೊಳ್ಳುತ್ತೇವೆ.
7 Սիրելինե՛ր, սիրե՛նք զիրար, քանի որ սէրը Աստուծմէ է: Ո՛վ որ կը սիրէ՝ ծնած է Աստուծմէ ու կը ճանչնայ Աստուած:
ಪ್ರಿಯರೇ, ನಾವು ಒಬ್ಬರನ್ನೊಬ್ಬರು ಪ್ರೀತಿಸೋಣ. ಏಕೆಂದರೆ ಪ್ರೀತಿಯು ದೇವರಿಂದ ಬಂದದ್ದಾಗಿದೆ ಮತ್ತು ಪ್ರೀತಿ ಮಾಡುವ ಪ್ರತಿಯೊಬ್ಬನು ದೇವರಿಂದ ಹುಟ್ಟಿದವನೂ ದೇವರನ್ನು ಬಲ್ಲವನೂ ಆಗಿದ್ದಾನೆ.
8 Ա՛ն որ չի սիրեր՝ չի ճանչնար Աստուած, որովհետեւ Աստուած սէր է:
ಪ್ರೀತಿ ಇಲ್ಲದವನು ದೇವರನ್ನು ಬಲ್ಲವನಲ್ಲ. ಏಕೆಂದರೆ ದೇವರು ಪ್ರೀತಿಸ್ವರೂಪನಾಗಿದ್ದಾನೆ.
9 Աստուծոյ սէրը սա՛պէս բացայայտուեցաւ մեզի հանդէպ. Աստուած աշխարհ ղրկեց իր միածին Որդին, որպէսզի ապրինք անոր միջոցով:
ನಾವು ಆತನ ಮೂಲಕ ಜೀವಿಸುವುದಕ್ಕಾಗಿ ದೇವರು ತನ್ನ ಒಬ್ಬನೇ ಮಗನನ್ನು ಲೋಕಕ್ಕೆ ಕಳುಹಿಸಿಕೊಟ್ಟದ್ದರಲ್ಲಿಯೇ ದೇವರ ಪ್ರೀತಿಯು ನಮ್ಮಲ್ಲಿ ಪ್ರತ್ಯಕ್ಷವಾಗಿದೆ.
10 Սէրը ասո՛ր մէջ է. ո՛չ թէ մենք սիրեցինք Աստուած, հապա ա՛ն սիրեց մեզ եւ ղրկեց իր Որդին՝ իբր քաւութիւն մեր մեղքերուն:
೧೦ನಾವು ದೇವರನ್ನು ಪ್ರೀತಿಸಿಲ್ಲ, ಆದರೂ ಆತನು ನಮ್ಮನ್ನು ಪ್ರೀತಿಸಿ ನಮ್ಮ ಪಾಪಗಳಿಗೆ ಪ್ರಾಯಶ್ಚಿತ್ತ ಬಲಿಯಾಗಿ ತನ್ನ ಮಗನನ್ನು ಕಳುಹಿಸಿಕೊಟ್ಟಿದ್ದರಲ್ಲಿಯೇ ಆತನ ನಿಜವಾದ ಪ್ರೀತಿಯು ತೋರಿಬರುತ್ತದೆ.
11 Սիրելինե՛ր, եթէ Աստուած ա՛յսպէս սիրեց մեզ, մենք ալ պարտաւոր ենք սիրել զիրար:
೧೧ಪ್ರಿಯರೇ, ದೇವರು ನಮ್ಮನ್ನು ಹೀಗೆ ಪ್ರೀತಿಸಿದ ಮೇಲೆ ನಾವೂ ಸಹ ಒಬ್ಬರನ್ನೊಬ್ಬರು ಪ್ರೀತಿಸುವ ಹಂಗಿನಲ್ಲಿದ್ದೇವೆ.
12 Ո՛չ մէկը երբեք տեսած է Աստուած: Եթէ սիրենք զիրար, Աստուած կը բնակի մեր մէջ ու անոր սէրը կատարեալ է:
೧೨ದೇವರನ್ನು ಯಾರೂ ಎಂದೂ ನೋಡಿಲ್ಲ. ನಾವು ಒಬ್ಬರನ್ನೊಬ್ಬರು ಪ್ರೀತಿಸಿದರೆ ದೇವರು ನಮ್ಮಲ್ಲಿ ನೆಲೆಗೊಂಡಿದ್ದಾನೆ, ಮತ್ತು ಆತನ ಪ್ರೀತಿಯು ನಮ್ಮಲ್ಲಿ ಪರಿಪೂರ್ಣಗೊಂಡಿರುತ್ತದೆ.
13 Ան իր Հոգիէն տուաւ մեզի. ասո՛վ գիտենք թէ մենք կը բնակինք անոր մէջ, ան ալ՝ մեր մէջ:
೧೩ದೇವರು ನಮಗೆ ತನ್ನ ಆತ್ಮವನ್ನು ಕೊಟ್ಟಿರುವುದರಿಂದಲೇ ನಾವು ಆತನಲ್ಲಿ ನೆಲೆಗೊಂಡಿದ್ದೇವೆ ಮತ್ತು ಆತನು ನಮ್ಮಲ್ಲಿ ನೆಲೆಗೊಂಡಿದ್ದಾನೆಂದು ತಿಳಿದುಕೊಳ್ಳುತ್ತೇವೆ.
14 Ու մենք տեսանք եւ կը վկայենք թէ Հայրը ղրկեց իր Որդին իբր աշխարհի Փրկիչ:
೧೪ತಂದೆಯು ತನ್ನ ಮಗನನ್ನು ಲೋಕರಕ್ಷಕನನ್ನಾಗಿ ಕಳುಹಿಸಿಕೊಟ್ಟಿರುವುದನ್ನು ನಾವು ತಿಳಿದಿದ್ದೇವೆ ಮತ್ತು ಅದರ ವಿಷಯದಲ್ಲಿ ನಾವು ಸಾಕ್ಷಿ ಹೇಳುತ್ತೇವೆ.
15 Ո՛վ որ կը դաւանի թէ Յիսուս Աստուծոյ Որդին է, Աստուած կը բնակի անոր մէջ, ան ալ՝ Աստուծոյ մէջ:
೧೫ಯೇಸುಕ್ರಿಸ್ತನು ದೇವರ ಮಗನಾಗಿದ್ದಾನೆಂದು ಯಾರು ಒಪ್ಪಿಕೊಳ್ಳುತ್ತಾರೋ ಅವರಲ್ಲಿ ದೇವರು ನೆಲೆಗೊಂಡಿರುತ್ತಾನೆ, ಹಾಗೂ ಅವನು ದೇವರಲ್ಲಿ ನೆಲೆಗೊಂಡಿದ್ದಾನೆ.
16 Մենք գիտցանք Աստուծոյ մեզի հանդէպ ունեցած սէրը, ու հաւատացինք: Աստուած սէր է. ա՛ն որ կը բնակի սիրոյ մէջ՝ կը բնակի Աստուծոյ մէջ, եւ Աստուած՝ անոր մէջ:
೧೬ಹೀಗೆ ದೇವರು ನಮ್ಮಲ್ಲಿಟ್ಟಿರುವ ಪ್ರೀತಿಯನ್ನು ನಾವು ತಿಳಿದುಕೊಂಡಿದ್ದೇವೆ. ಅದನ್ನು ನಂಬಿದ್ದೇವೆ. ದೇವರು ಪ್ರೀತಿಸ್ವರೂಪಿ, ಪ್ರೀತಿಯಲ್ಲಿ ನೆಲೆಗೊಂಡಿರುವವನು ದೇವರಲ್ಲಿ ನೆಲೆಗೊಂಡಿದ್ದಾನೆ. ದೇವರು ಅವನಲ್ಲಿ ನೆಲೆಗೊಂಡಿದ್ದಾನೆ.
17 Ինչպէս ի՛նք է, նոյնպէս մե՛նք ենք այս աշխարհի մէջ. ասո՛վ մեր սէրը կատարեալ է, որպէսզի համարձակութիւն ունենանք դատաստանին օրը:
೧೭ನ್ಯಾಯತೀರ್ಪಿನ ದಿನದಲ್ಲಿ ನಾವು ಧೈರ್ಯದಿಂದಿರುವುದಕ್ಕಾಗಿ ಆತನ ಪ್ರೀತಿಯು ನಮ್ಮೊಳಗೆ ಪೂರ್ಣಗೊಂಡಿದೆ. ಈ ಲೋಕದಲ್ಲಿ ನಮ್ಮ ಬಾಳು ಕ್ರಿಸ್ತಯೇಸುವಿನ ಬಾಳಿನಂತೆ ಇರುವುದರಿಂದಲೇ ಆ ಭರವಸೆ ನಮಗೆ ಇರುತ್ತದೆ.
18 Սիրոյ մէջ վախ չկայ, հապա կատարեալ սէրը կը վտարէ վախը. որովհետեւ վախը կ՚ենթադրէ պատուհաս: Ուստի ո՛վ որ կը վախնայ՝ կատարեալ չէ սիրոյ մէջ:
೧೮ಪ್ರೀತಿ ಇರುವಲ್ಲಿ ಹೆದರಿಕೆಯಿಲ್ಲ. ಹೆದರಿಕೆಯಿರುವಲ್ಲಿ ಯಾತನೆಗಳಿರುವವು. ಆದರೆ ಪೂರ್ಣಪ್ರೀತಿಯು ಹೆದರಿಕೆಯನ್ನು ಹೊಡೆದೊಡಿಸಿಬಿಡುತ್ತದೆ. ಹೆದರುವವನು ಪ್ರೀತಿಯಲ್ಲಿ ಪೂರ್ಣಗೊಂಡವನಲ್ಲ.
19 Մենք կը սիրենք զայն, որովհետեւ նախ ա՛ն սիրեց մեզ:
೧೯ದೇವರು ಮೊದಲು ನಮ್ಮನ್ನು ಪ್ರೀತಿಸಿದ್ದರಿಂದಲೇ ನಾವು ಆತನನ್ನು ಪ್ರೀತಿಸುತ್ತೇವೆ.
20 Եթէ մէկը ըսէ. «Ես կը սիրեմ Աստուած», եւ ատէ իր եղբայրը, ստախօս է. որովհետեւ ա՛ն որ չի սիրեր իր եղբայրը՝ որ կը տեսնէ, ի՞նչպէս կրնայ սիրել Աստուած՝ որ չի տեսներ:
೨೦ಒಬ್ಬನು, “ತಾನು ದೇವರನ್ನು ಪ್ರೀತಿಸುತ್ತೇನೆ” ಎಂದು ಹೇಳಿ ತನ್ನ ಸಹೋದರನನ್ನು ದ್ವೇಷಿಸಿದರೆ ಅವನು ಸುಳ್ಳುಗಾರನಾಗಿದ್ದಾನೆ. ಏಕೆಂದರೆ ತನ್ನೊಂದಿಗೆ ಇರುವ ಸಹೋದರನನ್ನು ಪ್ರೀತಿಸದವನು, ತಾನು ಕಾಣದಿರುವ ದೇವರನ್ನು ಹೇಗೆ ಪ್ರೀತಿಸಬಲ್ಲನು?
21 Եւ սա՛ պատուիրանը ունինք անկէ. «Ո՛վ որ կը սիրէ Աստուած, թող սիրէ նաեւ իր եղբայրը»:
೨೧ದೇವರನ್ನು ಪ್ರೀತಿಸುವವನು, ತನ್ನ ಸಹೋದರನನ್ನೂ ಪ್ರೀತಿಸಬೇಕೆಂಬ ಆಜ್ಞೆಯನ್ನು ನಾವು ಆತನಿಂದ ಹೊಂದಿದ್ದೇವೆ.

< ԱՌԱՋԻՆ ՅՈՎՀԱՆՆՈՒ 4 >