< ԳՈՐԾՔ ԱՌԱՔԵԼՈՑ 23 >

1 Պօղոս՝ ակնապիշ նայելով ատեանին՝ ըսաւ. «Մարդի՛կ եղբայրներ, ես մինչեւ այսօր բոլորովին բարի խղճմտանքով կեանք վարեր եմ Աստուծոյ առջեւ»:
ಪೌಲನು ನ್ಯಾಯಸಭೆಯ ಸದಸ್ಯರನ್ನು ದಿಟ್ಟಿಸಿ ನೋಡಿ, “ನನ್ನ ಸಹೋದರರೇ, ಇಂದಿನವರೆಗೂ ಒಳ್ಳೆಯ ಮನಸ್ಸಾಕ್ಷಿಯಿಂದ ನಾನು ದೇವರ ಮುಂದೆ ನಡೆದುಕೊಂಡಿದ್ದೇನೆ,” ಎಂದನು.
2 Անանիա քահանայապետն ալ հրամայեց իր քով կայնողներուն՝ որ զարնեն անոր բերանին:
ಅದಕ್ಕೆ ಮಹಾಯಾಜಕ ಅನನೀಯನು ಪೌಲನ ಬಳಿ ನಿಂತಿದ್ದವರಿಗೆ ಅವನ ಬಾಯಮೇಲೆ ಹೊಡೆಯಬೇಕೆಂದು ಆಜ್ಞಾಪಿಸಿದನು.
3 Այն ատեն Պօղոս ըսաւ անոր. «Աստուա՛ծ պիտի զարնէ քեզի, ծեփուա՛ծ պատ: Դուն բազմած ես՝ դատելու զիս Օրէնքին համաձայն, եւ կը հրամայե՞ս Օրէնքին հակառակ՝ որ զարնեն ինծի»:
ಆಗ ಪೌಲನು ಅವನಿಗೆ, “ಸುಣ್ಣ ಬಳಿದ ಗೋಡೆಯೇ, ದೇವರು ನಿನ್ನನ್ನು ಹೊಡೆಯುವರು. ಮೋಶೆಯ ನಿಯಮದ ಪ್ರಕಾರ ನನ್ನ ನ್ಯಾಯವಿಚಾರಣೆ ಮಾಡಲು ನೀನು ಕುಳಿತುಕೊಂಡು, ನಿಯಮಕ್ಕೆ ವಿರುದ್ಧವಾಗಿ ನನ್ನನ್ನು ಹೊಡೆಯಬೇಕೆಂದು ಆಜ್ಞಾಪಿಸುತ್ತೀಯೋ?” ಎಂದನು.
4 Շուրջը կայնողները ըսին. «Աստուծոյ քահանայապե՞տը կը հեգնես»:
ಪೌಲನ ಹತ್ತಿರ ನಿಂತಿದ್ದವರು, “ದೇವರು ನೇಮಿಸಿದ ಮಹಾಯಾಜಕನನ್ನು ನಿಂದಿಸುತ್ತಿದ್ದೀಯಾ?” ಎಂದು ಹೇಳಲು,
5 Պօղոս ալ ըսաւ. «Եղբայրնե՛ր, չէի գիտեր թէ քահանայապետ է, որովհետեւ գրուած է. “Քու ժողովուրդիդ պետին դէմ չարախօսութիւն մի՛ ըներ”»:
“ಸಹೋದರರೇ, ಮಹಾಯಾಜಕನೆಂದು ನನಗೆ ತಿಳಿಯಲಿಲ್ಲ. ಏಕೆಂದರೆ, ‘ನಿನ್ನ ಜನರ ಅಧಿಪತಿಯ ಕುರಿತಾಗಿ ಕೆಟ್ಟದ್ದನ್ನು ಮಾತನಾಡಬಾರದು’ ಎಂದು ಪವಿತ್ರ ವೇದದಲ್ಲಿ ಬರೆದಿದೆ,” ಎಂದು ಪೌಲನು ಹೇಳಿದನು.
6 Երբ Պօղոս գիտցաւ թէ մէկ մասը Սադուկեցիներ էին, ու միւսը՝ Փարիսեցիներ, աղաղակեց ատեանին մէջ. «Մարդի՛կ եղբայրներ, ես Փարիսեցի եմ, Փարիսեցիի որդի. կը դատուիմ մեռելներու յարութեան յոյսի՛ն համար»:
ಅಲ್ಲಿ ಸಭೆ ಸೇರಿದ್ದವರಲ್ಲಿ ಕೆಲವರು ಸದ್ದುಕಾಯರು, ಇನ್ನು ಕೆಲವರು ಫರಿಸಾಯರು ಎಂಬುದನ್ನು ಪೌಲನು ತಿಳಿದುಕೊಂಡು ನ್ಯಾಯಸಭೆಯಲ್ಲಿ, “ನನ್ನ ಸಹೋದರರೇ, ನಾನು ಫರಿಸಾಯನು, ಫರಿಸಾಯನ ಮಗನು. ಸತ್ತವರ ಪುನರುತ್ಥಾನದ ನಿರೀಕ್ಷೆಯ ವಿಷಯದಲ್ಲಿ ನಾನು ನ್ಯಾಯವಿಚಾರಣೆಗೆ ಗುರಿಯಾಗಿದ್ದೇನೆ,” ಎಂದು ಕೂಗಿ ಹೇಳಿದನು.
7 Երբ ըսաւ ասիկա, ընդվզում մը ծագեցաւ Փարիսեցիներուն եւ Սադուկեցիներուն միջեւ, ու բազմութիւնը բաժնուեցաւ.
ಪೌಲನು ಹಾಗೆ ಹೇಳಿದಾಗ ಫರಿಸಾಯರ ಮತ್ತು ಸದ್ದುಕಾಯರ ನಡುವೆ ಭೇದ ಉಂಟಾಯಿತು. ಇದರಿಂದ ಸಮೂಹವು ವಿಭಾಗವಾಯಿತು.
8 քանի որ Սադուկեցիները կ՚ըսեն թէ ո՛չ յարութիւն կայ, ո՛չ ալ հրեշտակ կամ հոգի, իսկ Փարիսեցիները կը դաւանին երկուքն ալ:
ಏಕೆಂದರೆ ಸದ್ದುಕಾಯರು ಪುನರುತ್ಥಾನ ಇಲ್ಲವೆಂದೂ ದೇವದೂತರಾಗಲಿ, ಆತ್ಮಗಳಾಗಲಿ ಇಲ್ಲವೆಂದೂ ಹೇಳುತ್ತಿದ್ದರು. ಫರಿಸಾಯರು ಇವೆರಡನ್ನೂ ಒಪ್ಪಿಕೊಳ್ಳುತ್ತಿದ್ದರು.
9 Հզօր գոչիւն մը բարձրացաւ, եւ Փարիսեցիներու կողմէն եղող դպիրները կանգնեցան ու մաքառեցան՝ ըսելով. «Մենք ո՛չ մէկ չարութիւն կը գտնենք այս մարդուն վրայ. հապա եթէ հոգի մը կամ հրեշտակ մը խօսած է անոր, ի՞նչ կրնանք ընել՝՝»:
ಆಗ ದೊಡ್ಡ ಗಲಭೆಯೇ ಉಂಟಾಯಿತು. ಫರಿಸಾಯರ ಪಕ್ಷದ ನಿಯಮ ಬೋಧಕರಲ್ಲಿ ಕೆಲವರು ಎದ್ದು, “ನಾವು ಈ ಮನುಷ್ಯನಲ್ಲಿ ಯಾವುದೇ ತಪ್ಪನ್ನು ಕಾಣುವುದಿಲ್ಲ. ಆತ್ಮವಾಗಲಿ, ದೇವದೂತನಾಗಲಿ ಇವನೊಂದಿಗೆ ಮಾತನಾಡಿರಬಹುದು,” ಎಂದು ವಾದಿಸಿದರು.
10 Երբ աղմուկը սաստկացաւ՝՝, հազարապետը՝ վախնալով որ Պօղոս բզքտուի անոնցմէ՝ հրամայեց զօրքերուն որ իջնեն, յափշտակեն զայն անոնց մէջէն ու բերեն բերդը:
ಜನಸಮೂಹವು ಪೌಲನನ್ನು ಎಳೆದು ತುಂಡುತುಂಡಾಗಿ ಮಾಡುವರೇನೋ ಎಂದು ಸಹಸ್ರಾಧಿಪತಿಗೆ ಬಹಳ ಭಯವಾಯಿತು. ಸೈನಿಕರ ಗುಂಪುಗಳು ಕೆಳಗಿಳಿದು ಹೋಗಿ ಬಲಪ್ರಯೋಗದಿಂದ ಪೌಲನನ್ನು ಎತ್ತಿಕೊಂಡು ಸೈನಿಕ ಪಾಳ್ಯದೊಳಗೆ ಬರಬೇಕೆಂದು ಅವನು ಸೈನಿಕರಿಗೆ ಆಜ್ಞಾಪಿಸಿದನು.
11 Հետեւեալ գիշերը Տէրը կայնեցաւ անոր քով եւ ըսաւ. «Քաջալերուէ՛, Պօղո՛ս, որովհետեւ ի՛նչպէս վկայեցիր ինծի համար Երուսաղէմի մէջ, ա՛յնպէս ալ պէտք է վկայես Հռոմի մէջ»:
ಮರುದಿನ ರಾತ್ರಿ ಕರ್ತ ಯೇಸು ಪೌಲನ ಬಳಿಯಲ್ಲಿ ನಿಂತುಕೊಂಡು, “ಧೈರ್ಯದಿಂದಿರು! ನೀನು ಯೆರೂಸಲೇಮಿನಲ್ಲಿ ನನ್ನ ವಿಷಯದಲ್ಲಿ ಸಾಕ್ಷಿ ಕೊಟ್ಟಂತೆಯೇ ರೋಮಿನಲ್ಲಿಯೂ ಸಾಕ್ಷಿಕೊಡತಕ್ಕದ್ದು,” ಎಂದರು.
12 Երբ առտու եղաւ, Հրեաներէն ոմանք միաբանեցան եւ նզովեցին իրենք զիրենք, ըսելով թէ ո՛չ պիտի ուտեն, ո՛չ ալ խմեն՝ մինչեւ որ սպաննեն Պօղոսը:
ಮರುದಿನ ಯೆಹೂದ್ಯರು ರಹಸ್ಯವಾಗಿ ಕೂಡಿಬಂದು, ಪೌಲನನ್ನು ತಾವು ಕೊಲ್ಲುವವರೆಗೆ ಅನ್ನಪಾನ ಸ್ವೀಕರಿಸುವುದಿಲ್ಲವೆಂದು ಶಪಥಮಾಡಿಕೊಂಡರು.
13 Այս երդումը ընողները՝ քառասունէ աւելի էին:
ಈ ಒಳಸಂಚಿನಲ್ಲಿ ನಾಲ್ವತ್ತಕ್ಕಿಂತಲೂ ಹೆಚ್ಚು ಜನ ಪುರುಷರಿದ್ದರು.
14 Անոնք գացին քահանայապետներուն ու երէցներուն, եւ ըսին. «Սաստիկ նզովեցինք մենք մեզ, որ ո՛չ մէկ բան ճաշակենք՝ մինչեւ որ սպաննենք Պօղոսը:
ಅವರು ಮುಖ್ಯಯಾಜಕರ ಹಾಗೂ ಹಿರಿಯರ ಬಳಿಗೆ ಹೋಗಿ, “ಪೌಲನನ್ನು ಕೊಲ್ಲುವವರೆಗೆ ನಾವು ಊಟಮಾಡುವುದಿಲ್ಲ ಎಂದು ಗಂಭೀರ ಶಪಥಮಾಡಿದ್ದೇವೆ.
15 Ուստի դուք հիմա՝ ատեանին հետ՝ խնդրա՛նք յայտնեցէք հազարապետին, որ վաղը իջեցնէ զայն ձեզի, իբր թէ կ՚ուզէք աւելի ճշգրիտ տեղեկութիւն ունենալ անոր մասին. իսկ մենք՝ անոր մօտենալէն առաջ՝ պատրաստ ենք սպաննել զայն»:
ಆದ್ದರಿಂದ ಈಗ ವಿಚಾರಣೆಯ ಬಗ್ಗೆ ಹೆಚ್ಚಿನ ನಿರ್ದಿಷ್ಟವಾದ ಮಾಹಿತಿಗಳನ್ನು ತಿಳಿದುಕೊಳ್ಳಬೇಕೆಂಬ ನೆಪದಿಂದ ಪೌಲನನ್ನು ನಿಮ್ಮ ಮುಂದೆ ತರುವಂತೆ ನೀವೂ ನ್ಯಾಯಸಭೆಯೂ ಸಹಸ್ರಾಧಿಪತಿಯನ್ನು ಬೇಡಿಕೊಳ್ಳಿರಿ. ಇಲ್ಲಿಗೆ ಬರುವ ಮೊದಲೇ ಪೌಲನನ್ನು ನಾವು ಕೊಂದುಬಿಡುತ್ತೇವೆ,” ಎಂದರು.
16 Բայց Պօղոսի քրոջ որդին՝ լսելով այս դարանակալութիւնը՝ գնաց, մտաւ բերդը, ու պատմեց Պօղոսի:
ಈ ಒಳಸಂಚು ಪೌಲನ ಸಹೋದರಿಯ ಮಗನಿಗೆ ತಿಳಿಯಲು ಅವನು ಸೈನಿಕ ಪಾಳ್ಯದೊಳಗೆ ಹೋಗಿ ಪೌಲನಿಗೆ ತಿಳಿಸಿದನು.
17 Պօղոս ալ կանչեց հարիւրապետներէն մէկը եւ ըսաւ. «Տա՛ր այս երիտասարդը հազարապետին, որովհետեւ լուր մը ունի՝ տալու անոր»:
ಆಗ ಪೌಲನು ಶತಾಧಿಪತಿಗಳಲ್ಲಿ ಒಬ್ಬನನ್ನು ಕರೆದು, “ಈ ಯುವಕನನ್ನು ಸಹಸ್ರಾಧಿಪತಿಯ ಬಳಿಗೆ ಕರೆದುಕೊಂಡು ಹೋಗಿರಿ. ಏಕೆಂದರೆ ಇವನಿಗೆ ತಿಳಿಸಲು ಏನೋ ವಿಷಯವಿದೆಯಂತೆ,” ಎಂದನು.
18 Ան ալ առաւ զայն, տարաւ հազարապետին եւ ըսաւ. «Բանտարկեալ Պօղոսը կանչեց զիս ու խնդրեց՝ որ բերեմ քեզի այս երիտասարդը, քանի որ ըսելիք ունի քեզի»:
ಅದರಂತೆ ಅವನನ್ನು ಸಹಸ್ರಾಧಿಪತಿಯ ಬಳಿಗೆ ಕರೆದುಕೊಂಡು ಹೋಗಿ, “ನಿಮಗೆ ತಿಳಿಸತಕ್ಕ ವಿಷಯವಿದೆಯೆಂದು ಸೆರೆಯವನಾದ ಪೌಲನು ನನ್ನನ್ನು ಕರೆದು ಈ ಯುವಕನನ್ನು ನಿಮ್ಮ ಬಳಿ ತರುವಂತೆ ಬೇಡಿಕೊಂಡಿದ್ದಾನೆ,” ಎಂದನು.
19 Հազարապետը անոր ձեռքէն բռնելով՝ մէկդի քաշուեցաւ եւ հարցուց. «Ի՞նչ լուր ունիս՝ տալու ինծի»:
ಸಹಸ್ರಾಧಿಪತಿಯು ಯುವಕನ ಕೈಹಿಡಿದು ಏಕಾಂತವಾಗಿ ಪಕ್ಕಕ್ಕೆ ಕರೆದು, “ನೀನು ನನಗೆ ಹೇಳಬೇಕಾದದ್ದು ಏನು?” ಎಂದನು.
20 Ան ալ ըսաւ. «Հրեաները միաձայնեցան թախանձել քեզի՝ որ վաղը ատեանին առջեւ իջեցնես Պօղոսը, որպէս թէ կ՚ուզեն աւելի ճշգրտութեամբ հարցաքննել զայն:
ಆ ಯುವಕನು, “ಪೌಲನ ಬಗ್ಗೆ ನಿರ್ದಿಷ್ಟ ಮಾಹಿತಿಯನ್ನು ಪಡೆಯುವ ಅಪೇಕ್ಷೆಯ ನೆಪದಲ್ಲಿ ಅವನನ್ನು ನ್ಯಾಯಸಭೆಯ ಮುಂದೆ ಕರೆತರುವಂತೆ ನಿಮ್ಮನ್ನು ಕೇಳಿಕೊಳ್ಳಲು ಯೆಹೂದ್ಯರು ತೀರ್ಮಾನಿಸಿಕೊಂಡಿದ್ದಾರೆ.
21 Բայց դուն մտիկ մի՛ ըներ անոնց, որովհետեւ անոնցմէ քառասունէ աւելի մարդիկ դարան մտած են անոր համար, եւ իրենք զիրենք նզոված՝ որ ո՛չ ուտեն, ո՛չ ալ խմեն, մինչեւ որ սպաննեն զայն. ու հիմա պատրաստ են, եւ կը սպասեն քու խոստումիդ»:
ನೀವು ಅವರ ಮಾತಿಗೆ ಒಪ್ಪಿಕೊಳ್ಳಬೇಡಿ, ಏಕೆಂದರೆ ನಾಲ್ವತ್ತಕ್ಕಿಂತಲೂ ಹೆಚ್ಚು ಜನರು ಅವನಿಗಾಗಿ ಹೊಂಚುಹಾಕಿದ್ದಾರೆ. ಅವನನ್ನು ಕೊಲ್ಲುವವರೆಗೆ ಊಟಮಾಡುವುದಿಲ್ಲ, ಪಾನ ಮಾಡುವುದಿಲ್ಲ, ಎಂದು ಅವರು ಶಪಥ ಮಾಡಿದ್ದಾರೆ. ಅವರ ಬೇಡಿಕೆಗೆ ನಿಮ್ಮ ಒಪ್ಪಿಗೆಯನ್ನೇ ಈಗ ಅವರು ಎದುರುನೋಡುತ್ತಾ ಇದ್ದಾರೆ,” ಎಂದು ಹೇಳಿದನು.
22 Հետեւաբար հազարապետը արձակեց երիտասարդը՝ պատուիրելով անոր. «Ո՛չ մէկուն ըսէ թէ այս բաները յայտնեցիր ինծի»:
“ಈ ವಿಷಯವನ್ನು ನನಗೆ ವರದಿ ಮಾಡಿದ್ದನ್ನು ಯಾರಿಗೂ ಹೇಳಬೇಡ,” ಎಂದು ಆ ಯುವಕನಿಗೆ ಎಚ್ಚರಿಕೆಯನ್ನು ನೀಡಿ ಅವನನ್ನು ಸಹಸ್ರಾಧಿಪತಿ ಕಳುಹಿಸಿಕೊಟ್ಟನು.
23 Ապա կանչելով հարիւրապետներէն երկուքը՝ ըսաւ. «Պատրաստեցէ՛ք երկու հարիւր զինուոր, եօթանասուն ձիաւոր ու երկու հարիւր գեղարդաւոր, որպէսզի երթան մինչեւ Կեսարիա՝ գիշերուան երրորդ ժամուն՝՝.
ಆಮೇಲೆ ಸಹಸ್ರಾಧಿಪತಿಯು ತನ್ನ ಇಬ್ಬರು ಶತಾಧಿಪತಿಗಳನ್ನು ಕರೆದು, “ಈ ರಾತ್ರಿ ಒಂಬತ್ತು ಗಂಟೆಗೆ ಕೈಸರೈಯಕ್ಕೆ ಹೋಗಲು ಇನ್ನೂರು ಜನ ಸೈನಿಕರನ್ನೂ ಎಪ್ಪತ್ತು ಕುದುರೆ ಸವಾರರನ್ನೂ ಇನ್ನೂರು ಜನ ಭರ್ಜಿಧರಿಸಿದವರನ್ನೂ ಸಿದ್ಧಗೊಳಿಸಿರಿ.
24 նաեւ հայթայթեցէ՛ք գրաստներ, որպէսզի հեծցնեն Պօղոսը եւ ապահովութեամբ տանին Փելիքս կառավարիչին»:
ಕುದುರೆಗಳನ್ನು ಸಿದ್ಧಮಾಡಿ ಪೌಲನನ್ನು ಹತ್ತಿಸಿ ಅವನು ಸುರಕ್ಷಿತವಾಗಿ ರಾಜ್ಯಪಾಲ ಫೇಲಿಕ್ಸನ ಬಳಿಗೆ ತಲುಪುವಂತೆ ವ್ಯವಸ್ಥೆಮಾಡಿರಿ,” ಎಂದು ಆಜ್ಞಾಪಿಸಿದನು.
25 Նամակ մըն ալ գրեց՝ սա՛ տիպարին համաձայն.
ಅವರಿಗೆ ಒಂದು ಪತ್ರವನ್ನು ಹೀಗೆ ಬರೆದುಕೊಟ್ಟನು:
26 «Կղօդիոս Լիւսիաս՝ պատուական Փելիքս կառավարիչին. ողջո՜յն:
ಮಹಾಪ್ರಭುಗಳಾದ ರಾಜ್ಯಪಾಲ ಫೇಲಿಕ್ಸ್, ಅವರಿಗೆ ಕ್ಲೌದ್ಯ ಲೂಸ್ಯನು, ಮಾಡುವ ವಂದನೆಗಳು.
27 Այս մարդը բռնուած էր Հրեաներէն եւ պիտի սպաննուէր անոնցմէ. իսկ ես վրայ հասայ զօրքերով եւ ազատեցի զայն, հասկնալով որ Հռոմայեցի է:
ಈ ಪೌಲನನ್ನು ಯೆಹೂದ್ಯರು ಬಂಧಿಸಿ, ಇವನನ್ನು ಕೊಲ್ಲಬೇಕೆಂದಿದ್ದರು. ಆದರೆ ನಾನು ಸೈನಿಕರೊಂದಿಗೆ ಹೋಗಿ ಇವನನ್ನು ಬಿಡಿಸಿದೆನು. ಇವನು ರೋಮ್ ಪೌರ ಎಂದು ನನಗೆ ಗೊತ್ತಾಯಿತು.
28 Ուզելով գիտնալ պատճառը՝ որուն համար կ՚ամբաստանէին զինք, տարի զինք անոնց ատեանին առջեւ,
ಅವರು ಏಕೆ ಪೌಲನ ಮೇಲೆ ದೋಷಾರೋಪಣೆ ಮಾಡುತ್ತಿದ್ದಾರೆ ಎಂಬುದನ್ನು ತಿಳಿದುಕೊಳ್ಳಲು ಅಪೇಕ್ಷಿಸಿ ಇವನನ್ನು ಅವರ ನ್ಯಾಯಸಭೆಯ ಮುಂದೆ ಕರೆದುಕೊಂಡು ಹೋದೆನು.
29 եւ գտայ թէ ամբաստանուած էր իրենց Օրէնքին վերաբերեալ հարցերու համար, բայց մահուան կամ կապերու արժանի ո՛չ մէկ յանցանք ունէր:
ಇವನ ಮೇಲಿನ ದೋಷಾರೋಪಣೆ ಅವರ ನಿಯಮದ ಪ್ರಶ್ನೆಗಳಿಗೆ ಸಂಬಂಧಪಟ್ಟದ್ದು. ಇವನಲ್ಲಿ ಮರಣದಂಡನೆಗಾಗಲಿ, ಸೆರೆಮನೆಗಾಗಲಿ ಯೋಗ್ಯವಾದ ಯಾವ ಅಪರಾಧಗಳೂ ಇಲ್ಲವೆಂದು ನಾನು ಕಂಡುಕೊಂಡಿದ್ದೇನೆ.
30 Երբ տեղեկացայ թէ Հրեաները կը դաւադրեն այդ մարդուն դէմ, անյապաղ ղրկեցի քեզի, պատուիրելով ամբաստանողներուն ալ՝ որ խօսին քու առջեւդ անոր դէմ: Ո՛ղջ եղիր»:
ಆದರೂ ಪೌಲನ ವಿರೋಧವಾಗಿ ಒಂದು ಒಳಸಂಚು ನಡೆದಿದೆ ಎಂದು ನನಗೆ ರಹಸ್ಯ ಸುದ್ದಿ ಬಂದದ್ದರಿಂದ, ಕೂಡಲೇ ಇವನನ್ನು ನಿಮ್ಮ ಬಳಿಗೆ ಕಳುಹಿಸುತ್ತಿದ್ದೇನೆ. ಇವನಿಗೆ ವಿರೋಧವಾದ ಆರೋಪಣೆಯನ್ನು ನಿಮಗೆ ಸಲ್ಲಿಸಬೇಕೆಂದು ಇವನ ವಿರೋಧಿಗಳಿಗೆ ಅಪ್ಪಣೆ ಕೊಟ್ಟಿದ್ದೇನೆ.
31 Զինուորներն ալ առին Պօղոսը եւ գիշերուան մէջ տարին Անտիպատրոս, իրենց հրամայուածին համաձայն:
ಸೈನಿಕರು ಈ ಆಜ್ಞೆಯಂತೆ, ರಾತ್ರಿಯಲ್ಲಿ ಪೌಲನನ್ನು ತಮ್ಮೊಂದಿಗೆ ಕರೆದುಕೊಂಡು ಅಂತಿಪತ್ರಿ ಎಂಬ ಊರಿನವರೆಗೆ ಹೋದರು.
32 Հետեւեալ օրը՝ թողուցին ձիաւորները որ երթան անոր հետ, իսկ իրենք վերադարձան բերդը:
ಮರುದಿನ ಪೌಲನೊಂದಿಗೆ ಮುಂದೆ ಹೋಗಲು ಕುದುರೆಸವಾರರನ್ನು ಬಿಟ್ಟು, ಸೈನಿಕರು ಅವರ ಪಾಳ್ಯಕ್ಕೆ ಹಿಂದಿರುಗಿದರು.
33 Անոնք ալ մտան Կեսարիա, տուին նամակը կառավարիչին ու ներկայացուցին Պօղոսը անոր:
ಅವರು ಕೈಸರೈಯವನ್ನು ತಲುಪಿ ರಾಜ್ಯಪಾಲನಿಗೆ ಪತ್ರವನ್ನು ಕೊಟ್ಟು ಪೌಲನನ್ನು ಅವನಿಗೆ ಒಪ್ಪಿಸಿದರು.
34 Երբ կարդաց, հարցուց թէ ո՛ր գաւառէն է, եւ հասկնալով թէ Կիլիկիայէն է՝
ರಾಜ್ಯಪಾಲನು ಪತ್ರವನ್ನು ಓದಿ, ಪೌಲನು ಯಾವ ಪ್ರಾಂತದವನೆಂದು ಪ್ರಶ್ನಿಸಿ, ಅವನು ಕಿಲಿಕ್ಯದವನೆಂದು ತಿಳಿದುಕೊಂಡು,
35 ըսաւ. «Մտիկ պիտի ընեմ քեզի՝ երբ գան քեզ ամբաստանողներն ալ»: Ու հրամայեց որ պահեն զայն Հերովդէսի պալատին մէջ:
“ನಿನ್ನ ಮೇಲೆ ಆರೋಪ ಹೊರಿಸಿದವರು ಇಲ್ಲಿಗೆ ಬಂದು ತಲುಪಿದ ತರುವಾಯ ನಿನ್ನ ವಿಚಾರಣೆ ಮಾಡುತ್ತೇನೆ,” ಎಂದು ಹೇಳಿ, ಪೌಲನನ್ನು ಹೆರೋದನ ಅರಮನೆಯಲ್ಲಿ ಕಾವಲಲ್ಲಿಡಬೇಕೆಂದು ಆಜ್ಞಾಪಿಸಿದನು.

< ԳՈՐԾՔ ԱՌԱՔԵԼՈՑ 23 >