< ԳՈՐԾՔ ԱՌԱՔԵԼՈՑ 26 >

1 Այն ատեն Ագրիպպաս ըսաւ Պօղոսի. «Արտօնուած է քեզի՝ խօսիլ դուն քեզի համար»: Պօղոս ալ՝ երկարելով ձեռքը՝ ջատագովեց ինքզինք.
ಆಗ ಅಗ್ರಿಪ್ಪನು, ಪೌಲನಿಗೆ; “ನೀನು ನಿನ್ನ ಪರವಾಗಿ ಮಾತನಾಡಬಹುದು” ಅನ್ನಲು, ಪೌಲನು ಕೈಯೆತ್ತಿ, ಪ್ರತಿವಾದ ಮಾಡಿದ್ದೇನಂದರೆ;
2 «Ագրիպպա՛ս թագաւոր, ես երանելի կը համարեմ զիս, որ այսօր քու առջեւդ պիտի ջատագովեմ զիս՝ Հրեաներուն ինծի դէմ ըրած բոլոր ամբաստանութիւններուն համար.
“ಅಗ್ರಿಪ್ಪರಾಜನೇ, ಯೆಹೂದ್ಯರು ನನ್ನ ಮೇಲೆ ಆರೋಪಿಸುವ ಎಲ್ಲಾ ಆರೋಪಗಳ ವಿಷಯವಾಗಿ ನಿನ್ನ ಎದುರಿನಲ್ಲಿ ನಾನು ಈಹೊತ್ತು ಪ್ರತಿವಾದ ಮಾಡಬೇಕಾಗಿರುವುದರಿಂದ, ನನ್ನನ್ನು ಧನ್ಯನೆಂದು ಎಣಿಸಿಕೊಳ್ಳುತ್ತೇನೆ.
3 մա՛նաւանդ որ դուն լաւ գիտես Հրեաներուն բոլոր սովորութիւններն ու հարցերը: Ուստի կ՚աղերսե՛մ որ համբերատարութեամբ մտիկ ընես ինծի:
ಏಕೆಂದರೆ, ಯೆಹೂದ್ಯರಲ್ಲಿರುವ ಎಲ್ಲಾ ಆಚಾರಗಳನ್ನೂ, ವಿವಾದಗಳನ್ನೂ ನೀನು ಚೆನ್ನಾಗಿ ಬಲ್ಲವನಾಗಿರುತ್ತೀ. ನನ್ನ ಮಾತುಗಳನ್ನು ಸಹನೆಯಿಂದ ಕೇಳಬೇಕೆಂದು ಬೇಡಿಕೊಳ್ಳುತ್ತೇನೆ.
4 Բոլոր Հրեաները տեղեակ են իմ կենցաղիս՝ պատանութենէս ի վեր, սկիզբէն Երուսաղէմ՝ իմ ազգիս մէջ ըլլալուս համար.
“ನಾನು ಚಿಕ್ಕಂದಿನಿಂದಲೂ, ಯೆರೂಸಲೇಮಿನಲ್ಲಿ ನನ್ನ ದೇಶದ ಜನರೊಳಗಿದ್ದು, ಬದುಕಿದ ರೀತಿಯು ಎಲ್ಲಾ ಯೆಹೂದ್ಯರಿಗೆ ತಿಳಿದ ವಿಷಯವಾಗಿದೆ.
5 անոնք սկիզբէն ի վեր կը ճանչնան զիս, (եթէ ուզեն վկայել, ) գիտնալով թէ ապրած եմ մեր կրօնին ամենէն խիստ աղանդին համաձայն՝ իբր Փարիսեցի:
ನಾನು, ನಮ್ಮ ಧರ್ಮದಲ್ಲಿ ಬಹು ಕಟ್ಟುನಿಟ್ಟಾಗಿ ಆಚರಿಸುವ ಫರಿಸಾಯರ ಪಂಥವನ್ನನುಸರಿಸಿ ಫರಿಸಾಯನಾಗಿ ನಡೆದುಕೊಂಡೆನೆಂಬುದನ್ನು, ಪ್ರಾರಂಭದಿಂದಲೂ ಅವರು ಬಲ್ಲರು. ಸಾಕ್ಷಿ ಹೇಳುವುದಕ್ಕೆ ಅವರಿಗೆ ಮನಸ್ಸಿದ್ದರೆ ಹೇಳಬಹುದು.
6 Եւ հիմա դատարան ներկայացած եմ ու կը դատուիմ՝ Աստուծմէ մեր հայրերուն եղած խոստումի յոյսին համար,
ಈಗಲೂ ದೇವರು ನಮ್ಮ ಪೂರ್ವಿಕರಿಗೆ, ಮಾಡಿದ ವಾಗ್ದಾನವು ನೆರವೇರುವುದೆಂಬ ನಿರೀಕ್ಷೆಯ ನಿಮಿತ್ತವೇ, ನಾನು ಇಂದು ನ್ಯಾಯವಿಚಾರಣೆಗೆ ಇಲ್ಲಿ ನಿಂತಿದ್ದೇನೆ.
7 որուն կը յուսան հասնիլ մեր տասներկու տոհմերը՝ ջերմեռանդութեամբ պաշտելով Աստուած գիշեր ու ցերեկ: Ես կ՚ամբաստանուիմ Հրեաներէն այս յոյսին համար, Ագրիպպա՛ս թագաւոր:
ನಮ್ಮ ಹನ್ನೆರಡು ಕುಲದವರು ಹಗಲಿರುಳು ಆಸಕ್ತಿಯಿಂದ ದೇವರನ್ನು ಆರಾಧಿಸುತ್ತಾ, ಆ ವಾಗ್ದಾನದ ಫಲವನ್ನು ಹೊಂದುವುದಕ್ಕಾಗಿ ನಿರೀಕ್ಷಿಸುತ್ತಾ ಇದ್ದಾರೆ. ಅರಸನೇ, ಅದೇ ನಿರೀಕ್ಷೆಯ ವಿಷಯದಲ್ಲಿಯೇ ಯೆಹೂದ್ಯರು, ನನ್ನ ವಿರುದ್ಧ ದೋಷಾರೋಪಣೆಮಾಡುತ್ತಿದ್ದಾರೆ.
8 Ինչո՞ւ անհաւատալի կը թուի ձեզի՝ թէ Աստուած կը յարուցանէ մեռելները:
ದೇವರು ಸತ್ತವರನ್ನು ಎಬ್ಬಿಸಿದ್ದು ನಂಬಲು ಅಸಾಧ್ಯವೆಂದು ನೀವು ಏಕೆ ತೀರ್ಮಾನಿಸುತ್ತೀರಿ?
9 Ես ինքս ալ կը կարծէի թէ շատ բաներ պէտք էր ընել Յիսուս Նազովրեցիի անունին դէմ.
ಒಂದು ಕಾಲದಲ್ಲಿ ನಜರೇತಿನ ಯೇಸುವಿನ ಹೆಸರಿಗೆ ವಿರುದ್ಧವಾಗಿ ಅನೇಕ ಕಾರ್ಯಗಳನ್ನು ನಡೆಸಬೇಕೆಂದು ನಾನೂ ಯೋಚಿಸಿಕೊಂಡಿದ್ದೆನು.
10 եւ ըրի ալ Երուսաղէմի մէջ, ու քահանայապետներէն իրաւասութիւն ստացած՝ բանտարկեցի սուրբերէն շատերը, եւ հաւանութիւն տուի անոնց մեռցուած ատենը:
೧೦ಯೆರೂಸಲೇಮಿನಲ್ಲಿ ಹಾಗೆಯೇ ಮಾಡಿದ್ದೆನು. ಮುಖ್ಯಯಾಜಕರಿಂದ, ಅಧಿಕಾರವನ್ನು ಪಡೆದು ದೇವಜನರಲ್ಲಿ ಅನೇಕರನ್ನು ಸೆರೆಮನೆಗಳಲ್ಲಿ ಇರಿಸಿ, ಅವರಿಗೆ ಮರಣದ ತೀರ್ಪಾದಾಗ, ನಾನು ಅದಕ್ಕೆ ಸಮ್ಮತಿಯನ್ನು ಸೂಚಿಸಿದೆನು.
11 Բոլոր ժողովարաններուն մէջ յաճախ պատժելով զանոնք՝ կը հարկադրէի որ հայհոյեն, եւ սաստիկ խելագարած անոնց դէմ՝ կը հալածէի զանոնք մինչեւ անգամ օտար քաղաքներու մէջ»:
೧೧ಎಲ್ಲಾ ಸಭಾಮಂದಿರಗಳಲ್ಲಿಯೂ, ನಾನು ಅನೇಕ ಸಾರಿ ಅವರನ್ನು ದಂಡಿಸಿ ಅವರಿಂದ ದೇವದೂಷಣೆಯ ಮಾತುಗಳನ್ನಾಡಿಸುವುದಕ್ಕೆ ಪ್ರಯತ್ನಿಸಿದೆನು. ಇದಲ್ಲದೆ ಅವರ ಮೇಲೆ ಬಹು ಕೋಪಾವೇಶವುಳ್ಳವನಾಗಿ ಬೇರೆ ಪಟ್ಟಣಗಳವರೆಗೂ ಹೋಗಿ, ಅವರನ್ನು ಹಿಂಸೆಪಡಿಸಿದೆನು.
12 «Այսպէս, երբ Դամասկոս ալ կ՚երթայի՝ քահանայապետներուն իրաւասութեամբ ու հրահանգով,
೧೨ಈ ಉದ್ದೇಶದಿಂದ ನಾನು ಮುಖ್ಯಯಾಜಕರಿಂದ ಅಧಿಕಾರವನ್ನೂ, ಆದೇಶವನ್ನೂ ಹೊಂದಿ ದಮಸ್ಕಕ್ಕೆ ಹೋಗುವ ದಾರಿಯಲ್ಲಿ ರಾಜನೇ,
13 կէսօրին, ո՛վ թագաւոր, ճամբան տեսայ արեւէն աւելի պայծառ լոյս մը՝ որ երկինքէն փայլեցաւ իմ շուրջս, նաեւ ինծի հետ գացողներուն շուրջը:
೧೩ಮಧ್ಯಾಹ್ನದ ಹೊತ್ತಿನಲ್ಲಿ ಪರಲೋಕದಿಂದ ಒಂದು ಬೆಳಕು ನನ್ನ ಸುತ್ತಲೂ ಮತ್ತು ನನ್ನ ಜೊತೆಯಲ್ಲಿ ಪ್ರಯಾಣಮಾಡುತ್ತಿದ್ದವರ ಸುತ್ತಲೂ ಸೂರ್ಯನ ಹೊಳಪಿಗಿಂತ ಹೆಚ್ಚಾಗಿ ಹೊಳೆಯುವುದನ್ನು ನಾನು ಕಂಡೆನು.
14 Երբ մենք բոլորս գետին ինկանք, լսեցի ձայն մը՝ որ կ՚ըսէր ինծի եբրայական բարբառով. “Սաւո՛ւղ, Սաւո՛ւղ, ինչո՞ւ կը հալածես զիս. տաժանելի է քեզի՝ աքացել խթանի դէմ”:
೧೪ನಾವೆಲ್ಲರು ನೆಲಕ್ಕೆ ಬೀಳಲು; ‘ಸೌಲನೇ, ಸೌಲನೇ, ನನ್ನನ್ನು ಏಕೆ ಹಿಂಸೆಪಡಿಸುತ್ತೀ? ಮುಳ್ಳುಗೋಲನ್ನು ಒದೆಯುವುದರಿಂದ ನಿನಗೇ ಹಾನಿಯಲ್ಲವೇ? ಎಂದು ಇಬ್ರಿಯ ಭಾಷೆಯಿಂದ ಹೇಳುವ ವಾಣಿಯನ್ನು’ ಕೇಳಿದೆನು.
15 Ես ալ ըսի. “Դուն ո՞վ ես, Տէ՛ր”: Եւ ան ըսաւ. “Ես Յիսուսն եմ, որ դուն կը հալածես:
೧೫ಆಗ ನಾನು; ‘ಕರ್ತನೇ, ನೀನಾರು?’ ಅನ್ನಲು ಕರ್ತನು; ‘ನೀನು ಹಿಂಸೆಪಡಿಸುವ ಯೇಸುವೇ ನಾನು.
16 Բայց կանգնէ՛ ու կեցի՛ր ոտքերուդ վրայ. որովհետեւ երեւցայ քեզի՝ որպէսզի կարգեմ քեզ սպասաւոր եւ վկայ թէ՛ այն բաներուն՝ որ տեսար, թէ՛ ալ այն բաներուն՝ որոնցմով պիտի երեւնամ քեզի:
೧೬ನೀನು ಎದ್ದು, ನಿಂತುಕೋ. ನಿನ್ನನ್ನು ನನ್ನ ಸೇವಕನಾಗಿಯೂ, ಸಾಕ್ಷಿಯಾಗಿಯೂ ನೇಮಿಸುವುದಕ್ಕೋಸ್ಕರ ನಿನಗೆ ಕಾಣಿಸಿಕೊಂಡಿದ್ದೇನೆ. ಈಗಲೂ, ಮುಂದೆಯೂ ನಿನಗೆ ತೋರಿಸಲಿರುವ ದರ್ಶನಗಳಲ್ಲಿಯೂ, ನಿನಗೆ ಕಾಣಿಸಿಕೊಂಡದ್ದನ್ನು ಕುರಿತು ನೀನು ನನ್ನ ಸಾಕ್ಷಿಯಾಗಿರಬೇಕು.
17 Պիտի ազատեմ քեզ այդ ժողովուրդէն ու հեթանոսներէն, որոնց հիմա կը ղրկեմ քեզ՝
೧೭ನಾನು ನಿನ್ನ ಸ್ವಂತ ಜನರಿಂದಲೂ, ಅನ್ಯಜನರಿಂದಲೂ ನಿನ್ನನ್ನು ರಕ್ಷಿಸುವೆನು.
18 անոնց աչքերը բանալու, խաւարէն՝ լոյսի, եւ Սատանայի իշխանութենէն՝ Աստուծոյ դարձնելու, որպէսզի անոնք ստանան մեղքերու ներում, նաեւ ժառանգութիւն անոնց հետ՝ որ սրբացած են հաւատալով ինծի”»:
೧೮ಅವರು ಕತ್ತಲೆಯಿಂದ ಬೆಳಕಿಗೂ, ಸೈತಾನನ ಅಧಿಕಾರದಿಂದ ದೇವರ ಕಡೆಗೂ ತಿರುಗಿಕೊಂಡು, ನನ್ನಲ್ಲಿ ನಂಬಿಕೆಯಿಡುವುದರಿಂದ ಪಾಪಕ್ಷಮಾಪಣೆಯನ್ನೂ, ಪರಿಶುದ್ಧರೊಂದಿಗೆ ಹಕ್ಕನ್ನೂ ಹೊಂದುವಂತೆ, ಅವರ ಕಣ್ಣುಗಳನ್ನು ತೆರೆಯಬೇಕೆಂದು ಅವರ ಬಳಿಗೆ ನಾನು ನಿನ್ನನ್ನು ಕಳುಹಿಸುತ್ತೇನೆ’ ಅಂದನು.
19 «Ուստի, Ագրիպպա՛ս թագաւոր, ես անհնազանդ չեղայ այդ երկնային տեսիլքին:
೧೯ಆದಕಾರಣ ಅಗ್ರಿಪ್ಪರಾಜನೇ, ಪರಲೋಕದಿಂದ ನನಗೆ ಉಂಟಾದ ಆ ದರ್ಶನಕ್ಕೆ ನಾನು ಅವಿಧೇಯನಾಗದೆ ಮೊದಲು ದಮಸ್ಕದವರಿಗೆ,
20 Հապա՝ նախ Դամասկոս եղողներուն, յետոյ Երուսաղէմ, ամբողջ Հրէաստանի երկիրը ու հեթանոսներուն քարոզեցի որ ապաշխարեն, դառնան Աստուծոյ, եւ ապաշխարութեան արժանավայել գործեր կատարեն:
೨೦ಆಮೇಲೆ ಯೆರೂಸಲೇಮಿನಲ್ಲಿಯೂ, ಯೂದಾಯದ ಎಲ್ಲಾ ಸೀಮೆಯಲ್ಲಿಯೂ ಇರುವವರಿಗೆ ಮತ್ತು ಅನ್ಯಜನರಿಗೆ ಸಹ; ನೀವು ದೇವರ ಕಡೆಗೆ ತಿರುಗಿಕೊಳ್ಳಬೇಕೆಂತಲೂ, ಮಾನಸಾಂತರಕ್ಕೆ ಯೋಗ್ಯವಾದ ಕೃತ್ಯಗಳನ್ನು ಮಾಡಬೇಕೆಂತಲೂ ಸಾರಿದೆನು.
21 Այս պատճառով Հրեաները բռնեցին զիս տաճարին մէջ, ու կը ձգտէին սպաննել:
೨೧ಈ ಕಾರಣದಿಂದ ಯೆಹೂದ್ಯರು ದೇವಾಲಯದಲ್ಲಿ ನನ್ನನ್ನು ಹಿಡಿದು ಕೊಲ್ಲುವುದಕ್ಕೆ ಪ್ರಯತ್ನಿಸಿದರು.
22 Սակայն Աստուծմէ հասած օգնութեամբ՝ մինչեւ այսօր ողջ մնացի, պզտիկին թէ մեծին վկայելով, ոչինչ ըսելով այն բաներէն դուրս՝ որ մարգարէները եւ Մովսէս խօսեցան թէ պիտի ըլլային.
೨೨ಆದರೆ ನಾನು ದೇವರಿಂದ ಸಹಾಯವನ್ನು ಪಡೆದು ಈ ದಿನದವರೆಗೂ ಸುರಕ್ಷಿತವಾಗಿದ್ದು ಚಿಕ್ಕವರಿಗೂ, ದೊಡ್ಡವರಿಗೂ ಸಾಕ್ಷಿಹೇಳುವವನಾಗಿದ್ದೇನೆ. ಪ್ರವಾದಿಗಳೂ, ಮೋಶೆಯೂ ಮುಂದೆ ಆಗುವುದನ್ನು ಕುರಿತು ತಿಳಿಸಿದ ಸಂಗತಿಗಳನ್ನೇ, ಹೊರತು ನಾನು ಇನ್ನೇನೂ ಹೇಳುವವನಲ್ಲ.
23 թէ Քրիստոս պիտի չարչարուէր, ի՛նք պիտի ըլլար առաջինը՝ որ մեռելներէն յարութիւն պիտի առնէր, ու լոյս պիտի քարոզէր ժողովուրդին եւ հեթանոսներուն»:
೨೩ಆ ಸಂಗತಿಗಳು ಏನೆಂದರೆ; ಕ್ರಿಸ್ತನು ಬಾಧೆಪಟ್ಟು ಸಾಯಬೇಕಾದವನು ಮತ್ತು ಆತನು ಸತ್ತವರೊಳಗಿಂದ ಮೊದಲನೆಯವನಾಗಿ ಎದ್ದು ಯೆಹೂದ್ಯರಿಗೂ, ಅನ್ಯಜನರಿಗೂ ಬೆಳಕನ್ನು ಪ್ರಸಿದ್ಧಿಪಡಿಸುವವನಾಗಿರುವನು” ಎಂಬುದೇ.
24 Մինչ ան այսպէս կը ջատագովէր ինքզինք, Փեստոս բարձրաձայն ըսաւ. «Կը ցնորի՛ս, Պօղո՛ս. շատ կարդացած ըլլալդ քեզ կը խելագարեցնէ»:
೨೪ಹೀಗೆ ಪೌಲನು ಪ್ರತಿವಾದ ಮಾಡುತ್ತಿದ್ದಾಗ, ಫೆಸ್ತನು ಮಹಾಶಬ್ದದಿಂದ; “ಪೌಲನೇ, ನಿನಗೆ ಹುಚ್ಚು ಹಿಡಿದಿದೆ; ಅಧಿಕ ಪಾಂಡಿತ್ಯ ನಿನ್ನನ್ನು ಹುಚ್ಚನನ್ನಾಗಿಸಿದೆ,” ಎಂದು ಹೇಳಿದನು.
25 Պօղոս ալ ըսաւ. «Ես չեմ խելագարիր, պատուակա՛ն Փեստոս, հապա կ՚ըսեմ ճշմարտութեան ու խոհեմութեան խօսքեր.
೨೫ಅದಕ್ಕೆ ಪೌಲನು; “ಮಹಾ ಶ್ರೇಷ್ಠನಾದ ಫೆಸ್ತನೇ, ನಾನು ಹುಚ್ಚನಲ್ಲ; ಸ್ವಸ್ಥಬುದ್ಧಿಯುಳ್ಳವನಾಗಿ ಸತ್ಯವಾದ ಮಾತುಗಳನ್ನೇ ಹೇಳುತ್ತಿದ್ದೇನೆ.
26 քանի որ թագաւորը գիտէ այս բաները, եւ անոր առջեւ ալ համարձակութեամբ կը խօսիմ: Արդարեւ համոզուած եմ թէ ասոնցմէ ոչինչ թաքուն մնացած է իրմէ, որովհետեւ այս բանը անկիւնի մը մէջ եղած չէ:
೨೬ಅಗ್ರಿಪ್ಪರಾಜನು ಈ ಸಂಗತಿಗಳನ್ನೆಲ್ಲಾ ತಿಳಿದವನು; ಆದುದರಿಂದ, ಅವನ ಮುಂದೆ ಧೈರ್ಯವಾಗಿ ಮಾತನಾಡುತ್ತೇನೆ. ಇವುಗಳಲ್ಲಿ ಒಂದಾದರೂ ಅವನಿಗೆ ಮುಚ್ಚುಮರೆಯಾದುದಲ್ಲವೆಂದು ನಂಬಿದ್ದೇನೆ, ಏಕೆಂದರೆ ಇದು ಒಂದು ಮೂಲೆಯಲ್ಲಿ ನಡೆದ ಕಾರ್ಯವಲ್ಲ.
27 Մարգարէներուն կը հաւատա՞ս, Ագրիպպա՛ս թագաւոր: Գիտե՛մ թէ կը հաւատաս»:
೨೭ಅಗ್ರಿಪ್ಪರಾಜನೇ, ಪ್ರವಾದಿಗಳಲ್ಲಿ ನಿನಗೆ ನಂಬಿಕೆಯುಂಟೋ?” ಉಂಟೆಂದು ನಾನು ಬಲ್ಲೆನು ಅಂದನು.
28 Ագրիպպաս ըսաւ Պօղոսի. «Քիչ մնաց որ համոզես զիս քրիստոնեայ ըլլալու»:
೨೮ಅದಕ್ಕೆ ಅಗ್ರಿಪ್ಪನು; “ಅಲ್ಪಪ್ರಯತ್ನದಿಂದ, ನನ್ನನ್ನು ಕ್ರೈಸ್ತನಾಗುವುದಕ್ಕೆ ಒಡಂಬಡಿಸುತ್ತೀಯಾ?” ಎಂದು ಹೇಳಲು
29 Պօղոս ալ ըսաւ. «Աստուծմէ պիտի խնդրէի որ ո՛չ միայն դուն, այլ նաեւ բոլոր անոնք՝ որ այսօր կը լսեն զիս, բոլորովին ինծի պէս ըլլան, այս կապերէն զատ»:
೨೯ಪೌಲನು; “ಅಲ್ಪಪ್ರಯತ್ನದಿಂದಾಗಲಿ, ಅಧಿಕ ಪ್ರಯತ್ನದಿಂದಾಗಲಿ ನೀನು ಮಾತ್ರವಲ್ಲದೆ ಈಹೊತ್ತು ನನ್ನ ಮಾತುಗಳನ್ನು ಕೇಳುವವರೆಲ್ಲರೂ, ಈ ಬೇಡಿಗಳ ಹೊರತು, ನನ್ನಂತೆ ಆಗಬೇಕೆಂದು ದೇವರನ್ನು ಪ್ರಾರ್ಥಿಸುತ್ತೇನೆ” ಅಂದನು.
30 Թագաւորը, կառավարիչը, Բերինիկէ, եւ անոնք՝ որ բազմած էին իրենց հետ՝ կանգնեցան.
೩೦ಆ ಮೇಲೆ ರಾಜನೂ, ದೇಶಾಧಿಪತಿಯೂ ಮತ್ತು ಬೆರ್ನಿಕೆಯೂ ಅವರ ಸಂಗಡ ಕುಳಿತಿದ್ದವರೂ, ಎದ್ದು ಹೊರಗೆ ಹೋಗಿ;
31 ու երբ առանձնացան՝ իրարու հետ խօսակցեցան եւ ըսին. «Այս մարդը մահուան կամ կապերու արժանի ոչինչ կ՚ընէ»:
೩೧“ಈ ಮನುಷ್ಯನು ಮರಣದಂಡನೆಗಾಗಲಿ, ಬೇಡಿಗಾಗಲಿ ಆಧಾರವಾದದ್ದೇನೂ ಮಾಡಿದವನಲ್ಲ” ಎಂಬುದಾಗಿ ತಮ್ಮ ತಮ್ಮೊಳಗೆ ಮಾತನಾಡಿಕೊಳ್ಳುತ್ತಿದ್ದರು.
32 Ագրիպպաս ալ ըսաւ Փեստոսի. «Կարելի էր արձակել այս մարդը, եթէ բողոքած չըլլար կայսրին»:
೩೨ಅಗ್ರಿಪ್ಪನು ಫೆಸ್ತನಿಗೆ; “ಈ ಮನುಷ್ಯನು ಕೈಸರನಿಗೆ ಎದುರಿನಲ್ಲಿ ಹೇಳಿಕೊಳ್ಳುತ್ತೇನೆಂದು ಹೇಳದೆ ಹೋಗಿದ್ದರೆ ಇವನನ್ನು ಬಿಡುಗಡೆ ಮಾಡಬಹುದಿತ್ತು” ಎಂದು ಹೇಳಿದನು.

< ԳՈՐԾՔ ԱՌԱՔԵԼՈՑ 26 >