< ՅՈՒԴԱՅԻ 1 >

1 Յուդա, Յիսուս Քրիստոսի ծառան ու Յակոբոսի եղբայրը, անոնց՝ որ Հայր Աստուծմով սրբացած, Յիսուս Քրիստոսով պահուած ու կանչուած են.
ಕ್ರಿಸ್ತ ಯೇಸುವಿನ ದಾಸನೂ ಯಾಕೋಬನ ಸಹೋದರನೂ ಆಗಿರುವ ಯೂದನು, ತಂದೆಯಾದ ದೇವರಿಗೆ ಪ್ರಿಯರಾದವವರಿಗೂ ಕ್ರಿಸ್ತ ಯೇಸು ಸುರಕ್ಷತೆಯನ್ನೂ ಅವರ ಕರೆಯುವಿಕೆಯನ್ನೂ ಹೊಂದಿದವರಿಗೆ ಬರೆಯುವ ಪತ್ರ:
2 ողորմութիւն, խաղաղութիւն եւ սէր թող շատնան ձեր վրայ:
ನಿಮಗೆ ಕರುಣೆಯೂ ಶಾಂತಿಯೂ ಪ್ರೀತಿಯೂ ಹೆಚ್ಚೆಚ್ಚಾಗಿ ದೊರೆಯಲಿ.
3 Սիրելինե՛ր, երբ ամբողջ փութաջանութեամբ կը գրէի ձեզի հասարակաց փրկութեան համար, հարկաւոր նկատեցի գրել ձեզի եւ յորդորել՝ որպէսզի պայքարիք այն հաւատքին համար, որ մէ՛կ անգամ աւանդուեցաւ սուրբերուն:
ಪ್ರಿಯ ಸ್ನೇಹಿತರೇ, ನಾವು ಹಂಚಿಕೊಳ್ಳುವ ರಕ್ಷಣೆಯ ವಿಷಯದಲ್ಲಿ ನಿಮಗೆ ಬರೆಯುವುದಕ್ಕೆ ಪೂರ್ಣಜಾಗ್ರತೆಯಿಂದ ಪ್ರಯತ್ನ ಮಾಡುತ್ತಿದ್ದಾಗ, ಪರಿಶುದ್ಧರಿಗೆ ಒಂದೇ ಸಾರಿ ಒಪ್ಪಿಸಲಾದ ನಂಬಿಕೆಯನ್ನು ಕಾಪಾಡಿಕೊಳ್ಳುವುದಕ್ಕೆ ನೀವು ಹೋರಾಡಬೇಕೆಂದು ಎಚ್ಚರಿಸಿ ಬರೆಯುವುದು ನನಗೆ ಅವಶ್ಯವೆಂದು ತೋರಿತು.
4 Որովհետեւ քանի մը մարդիկ - որոնց դատապարտութիւնը վաղուց արձանագրուած է՝՝ - գաղտնի մտան ձեր մէջ, ամբարիշտներ՝ որոնք մեր Աստուծոյն շնորհքը այլափոխեցին ցոփութեան, եւ ուրացան միակ Տիրակալն ու մեր Տէրը՝ Յիսուս Քրիստոսը:
ಏಕೆಂದರೆ ಭಕ್ತಿಹೀನರೂ ನಮ್ಮ ದೇವರ ಕೃಪೆಯನ್ನು ನೆಪಮಾಡಿಕೊಂಡು ನಾಚಿಕೆಗೆಟ್ಟ ಕೃತ್ಯಗಳನ್ನು ನಡೆಸುವವರೂ ನಮ್ಮ ಒಬ್ಬರೇ ಕರ್ತ ಆಗಿರುವ ದೇವರನ್ನು ಮತ್ತು ನಮಗೆ ಕರ್ತ ಆಗಿರುವ ಯೇಸು ಕ್ರಿಸ್ತರನ್ನು ಅಲ್ಲಗಳೆಯುವ ಕೆಲವು ಜನರೂ ರಹಸ್ಯವಾಗಿ ಸಭೆಯೊಳಗೆ ಹೊಕ್ಕಿದ್ದಾರೆ. ಇವರು ದಂಡನೆಗೋಸ್ಕರ ಪೂರ್ವದಲ್ಲಿಯೇ ನೇಮಕವಾಗಿದ್ದಾರೆ.
5 Ուրեմն կը փափաքիմ յիշեցնել ձեզի, թէպէտ ժամանակին գիտէիք ասիկա, թէ Տէրը՝ որ փրկեց ժողովուրդը Եգիպտոսի երկրէն՝ երկրորդ անգամ կորսնցուց չհաւատացողները.
ಇದನ್ನು ನೀವು ಈಗಾಗಲೇ ಒಂದು ಸಾರಿ ತಿಳಿದವರಾಗಿದ್ದೀರಿ. ಆದರೂ ನಾನು ಅದನ್ನೇ ನಿಮ್ಮ ಜ್ಞಾಪಕಕ್ಕೆ ತರಬೇಕೆಂದು ಅಪೇಕ್ಷಿಸುತ್ತೇನೆ. ಅದು ಯಾವುದೆಂದರೆ: ಕರ್ತದೇವರು ತಮ್ಮ ಪ್ರಜೆಯನ್ನು ಈಜಿಪ್ಟ್ ದೇಶದೊಳಗಿಂದ ರಕ್ಷಿಸಿದರೂ ತರುವಾಯ ಅವರೊಳಗೆ ನಂಬದೆ ಹೋದವರನ್ನು ಸಂಹಾರ ಮಾಡಿದರು.
6 եւ այն հրեշտակները, որոնք չպահեցին իրենց սկզբնական դիրքը՝՝, հապա ձգեցին իրենց բնակութիւնը, յաւերժական կապերով վերապահեց մեծ օրուան դատաստանին համար՝ մթութեան մէջ: (aïdios g126)
ತಮ್ಮ ಅಧಿಕಾರದ ಸ್ಥಾನವನ್ನು ಕಾಪಾಡದೆ, ತಮ್ಮ ಸ್ವಂತ ವಾಸಸ್ಥಾನವನ್ನು ಬಿಟ್ಟ ದೇವದೂತರಿಗೆ ಅವರು ನಿತ್ಯವಾದ ಬೇಡಿಗಳನ್ನು ಹಾಕಿ, ಮಹಾದಿನದ ತೀರ್ಪಿಗಾಗಿ ಅವರನ್ನು ಕತ್ತಲೆಯೊಳಗೆ ಕಾದಿಟ್ಟಿದ್ದಾರೆ. (aïdios g126)
7 Նմանապէս Սոդոմ ու Գոմոր, ինչպէս նաեւ անոնց շուրջը եղած քաղաքները, որոնք անձնատուր եղան պոռնկութեան եւ ընթացան ուրիշ մարմինի ետեւէն, իբր օրինակ դրուած են մեր առջեւ, կրելով յաւիտենական կրակին վճիռը: (aiōnios g166)
ಸೊದೋಮ ಗೊಮೋರದವರೂ ಹಾಗೆಯೇ ಅವುಗಳ ಸುತ್ತಮುತ್ತಣ ಪಟ್ಟಣಗಳವರೂ ಅದೇ ರೀತಿಯಲ್ಲಿ ತಮ್ಮನ್ನು ಅನೈತಿಕತೆಗೆ ಒಪ್ಪಿಸಿಕೊಟ್ಟರು. ಅವರು ಸ್ವಭಾವಕ್ಕೆ ವಿರುದ್ಧ ಕಾರ್ಯಗಳನ್ನು ಅನುಸರಿಸಿದ್ದರಿಂದ ಅವರು ನಿತ್ಯವಾದ ಅಗ್ನಿಯಲ್ಲಿ ದಂಡನೆಯನ್ನು ಅನುಭವಿಸುತ್ತಾ ಉದಾಹರಣೆಗಾಗಿ ಇಡಲಾಗಿದ್ದಾರೆ. (aiōnios g166)
8 Նմանապէս այս ցնորածներն ալ կը պղծեն մարմինը, կ՚անարգեն տէրութիւնը ու կը հայհոյեն փառքերը:
ಹಾಗೆಯೇ ಈ ದುಃಸ್ವಪ್ನದವರೂ ಶರೀರವನ್ನು ಮಲಿನಮಾಡಿಕೊಳ್ಳುವವರೂ ಪ್ರಭುತ್ವವನ್ನು ಅಸಡ್ಡೆಮಾಡುವವರೂ ದೇವದೂತರುಗಳನ್ನು ದೂಷಿಸುವವರೂ ಆಗಿದ್ದಾರೆ.
9 Բայց Միքայէլ հրեշտակապետը, երբ կը վիճէր Չարախօսին հետ՝ խօսելով Մովսէսի մարմինին մասին, չյանդգնեցաւ հայհոյալից դատավճիռ արձակել՝՝ անոր դէմ, հապա ըսաւ. «Տէ՛րը յանդիմանէ քեզ»:
ಆದರೂ ಪ್ರಧಾನ ದೇವದೂತನಾದ ಮೀಕಾಯೇಲನು, ಮೋಶೆಯ ಶವದ ವಿಷಯದಲ್ಲಿ ಸೈತಾನನೊಂದಿಗೆ ವ್ಯಾಜ್ಯವಾಡಿ ವಾಗ್ವಾದ ಮಾಡಿದಾಗ, ಅವನು ಸೈತಾನನನ್ನು ದೂಷಿಸುವುದಕ್ಕೆ ಧೈರ್ಯಗೊಳ್ಳದೆ, “ಕರ್ತದೇವರು ನಿನ್ನನ್ನು ಗದರಿಸಲಿ!” ಎಂದನು.
10 Մինչդեռ ասոնք կը հայհոյեն այն բաները՝ որ չեն գիտեր. իսկ ինչ որ գիտեն բնականաբար, անբան կենդանիներու պէս, կ՚ապականին այդ բաներուն մէջ:
ಆದರೆ ಈ ಜನರು ತಮಗೆ ಗೊತ್ತಿಲ್ಲದವುಗಳ ವಿಷಯವಾಗಿ ಕೆಟ್ಟದ್ದಾಗಿ ಮಾತನಾಡುತ್ತಾರೆ. ತಾವು ವಿವೇಕಶೂನ್ಯ ಮೃಗಗಳಂತೆ ಸ್ವಾಭಾವಿಕವಾಗಿ ಏನೇನನ್ನು ತಿಳಿದುಕೊಳ್ಳುತ್ತಾರೋ ಅವುಗಳಲ್ಲಿ ತಮ್ಮನ್ನು ಕೆಡಿಸಿಕೊಳ್ಳುತ್ತಾರೆ.
11 Վա՜յ անոնց, քանի որ գացին Կայէնի ճամբայէն, ինկան Բաղաամի մոլորութեան մէջ՝ վարձքի համար, եւ կորսուեցան Կորխի հակաճառութեամբ:
ಅವರು ಕಾಯಿನನ ಮಾರ್ಗ ಹಿಡಿದವರೂ ಪ್ರತೀಕಾರ ಹೊಂದುವುದಕ್ಕಾಗಿ ಬಿಳಾಮನ ದೋಷವನ್ನು ಮಾಡುವುದಕ್ಕೆ ದುರಾಶೆಯಿಂದ ಓಡುವವರಾಗಿದ್ದಾರೆ. ಅವರು ಕೋರಹನಂತೆ ಎದುರು ಮಾತನಾಡಿ ನಾಶವಾಗುವವರಾಗಿದ್ದಾರೆ. ಆದ್ದರಿಂದ ಅವರ ಗತಿ ಏನೆಂದು ಹೇಳಲಿ!
12 Ասոնք բիծեր են ձեր սիրոյ խնճոյքներուն մէջ, երբ խրախճանք կ՚ընեն ձեզի հետ, իրենք զիրենք արածելով առանց վախի: Անջուր ամպեր են՝ հովերէն քշուած, աշնանային խամրած պտուղով ծառեր, անպտուղ, երկու անգամ մեռած, արմատախիլ եղած.
ಕಳಂಕರಾದ ಇವರು ನಿಮ್ಮ ಪ್ರೇಮ ಭೋಜನಗಳಲ್ಲಿ ನಿರ್ಭಯವಾಗಿ ತಿಂದು, ತಮ್ಮನ್ನು ತಾವೇ ಪೋಷಿಸಿಕೊಳ್ಳುತ್ತಾರೆ. ಇವರು ಗಾಳಿಯಿಂದ ಚದುರಿ ಹೋಗುವ ನೀರಿಲ್ಲದ ಮೇಘಗಳೂ ಎರಡು ಸಾರಿ ಸತ್ತು, ಹಣ್ಣು ಬಿಡದೆ ಒಣಗಿ ಹೋಗಿ ಬೇರುಸಹಿತ ಕಿತ್ತು ಬಿದ್ದ ಮರಗಳೂ
13 ծովու վայրագ ալիքներ, որ կը փրփրցնեն իրենց ամօթը. մոլորած աստղեր, որոնց համար վերապահուած է խաւարին մթութիւնը յաւիտեան: (aiōn g165)
ಸ್ವಂತ ಅವಮಾನವೆಂಬ ನೊರೆಯನ್ನು ಕಾರುವ ಸಮುದ್ರದ ಹುಚ್ಚುತೆರೆಗಳೂ ಆಗಿದ್ದಾರೆ. ಅಲೆಯುವ ನಕ್ಷತ್ರಗಳಾದ ಇವರ ಪಾಲಿಗೆ ಕಾರ್ಗತ್ತಲೆಯು ಸದಾಕಾಲಕ್ಕೆ ಇಡಲಾಗಿದೆ. (aiōn g165)
14 Ենովք ալ, եօթներորդը Ադամէն ետք, մարգարէացաւ ասոնց համար եւ ըսաւ. «Ահա՛ Տէրը կու գայ իր բիւրաւոր սուրբերով՝
ಇಂಥವರ ವಿಷಯದಲ್ಲಿಯೇ ಆದಾಮನಿಂದ ಏಳನೆಯವನಾದ ಹನೋಕನು ಸಹ, “ಇಗೋ, ಕರ್ತದೇವರು ತಮ್ಮ ಅಸಂಖ್ಯಾತ ಪರಿಶುದ್ಧರನ್ನು ಕೂಡಿಕೊಂಡು
15 դատաստան կիրարկելու բոլորին հանդէպ, ու կշտամբելու անոնց մէջ եղող բոլոր ամբարիշտները՝ իրենց ամբարշտութեամբ ըրած բոլոր ամբարիշտ գործերուն համար, եւ բոլոր խիստ խօսքերուն համար՝ որ ամբարիշտ մեղաւորները խօսեցան անոր դէմ»:
ಎಲ್ಲರಿಗೆ ನ್ಯಾಯತೀರಿಸುವುದಕ್ಕೆ ಬರುವರು. ಮಾತ್ರವಲ್ಲದೆ ಅವರಲ್ಲಿ ಭಕ್ತಿಹೀನರೆಲ್ಲರು ಮಾಡಿದ ದುಷ್ಕೃತ್ಯಗಳನ್ನು ಮತ್ತು ಪಾಪಿಷ್ಠರು ತಮಗೆ ವಿರೋಧವಾಗಿ ಆಡಿದ ಎಲ್ಲಾ ದೂಷಣೆಗಳ ವಿಷಯವಾಗಿ ಅವರನ್ನು ಖಂಡಿಸಲು ಬರುವರು,” ಎಂಬುದಾಗಿ ಪ್ರವಾದಿಸಿದನು.
16 Ասոնք տրտնջողներ ու քրթմնջողներ են, որոնք կ՚ընթանան իրենց ցանկութիւններուն համաձայն. իրենց բերանները կը խօսին յոխորտաբանութիւններ, ու երեսպաշտութիւն կ՚ընեն օգուտի համար:
ಇವರು ಗೊಣಗುಟ್ಟುವವರೂ ದೂರುವವರೂ ತಮ್ಮ ದುರಾಶೆಗಳನ್ನು ಅನುಸರಿಸಿ ನಡೆಯುವವರೂ ಆಗಿದ್ದಾರೆ. ಇವರ ಬಾಯಿಂದ ದೊಡ್ಡ ದೊಡ್ಡ ಮಾತುಗಳು ಉದುರುತ್ತವೆ. ಇವರು ಸ್ವಪ್ರಯೋಜನಕ್ಕಾಗಿ ಮುಖಸ್ತುತಿ ಮಾಡುತ್ತಾರೆ.
17 Բայց դո՛ւք, սիրելինե՛ր, յիշեցէ՛ք այն խօսքերը՝ որ նախապէս ըսուեցան մեր Տէրոջ՝ Յիսուս Քրիստոսի առաքեալներուն կողմէ:
ಪ್ರಿಯ ಸ್ನೇಹಿತರೇ, ನೀವಾದರೋ ನಮ್ಮ ಕರ್ತ ಆಗಿರುವ ಯೇಸುಕ್ರಿಸ್ತರ ಅಪೊಸ್ತಲರು ಮೊದಲು ಹೇಳಿದ ಮಾತುಗಳನ್ನು ಜ್ಞಾಪಕಮಾಡಿಕೊಳ್ಳಿರಿ.
18 Անոնք կ՚ըսէին ձեզի թէ “վերջին ժամանակը ծաղրողներ պիտի ըլլան, որոնք պիտի ընթանան իրենց ամբարիշտ ցանկութիւններուն համաձայն”:
“ಭಕ್ತಿಗೆ ವಿರುದ್ಧವಾದ ತಮ್ಮ ಆಶೆಗಳನ್ನು ಅನುಸರಿಸಿ ನಡೆಯುವ ಕುಚೋದ್ಯಗಾರರು ಅಂತ್ಯಕಾಲದಲ್ಲಿ ಬರುವರು,” ಎಂದು ಅಪೊಸ್ತಲರು ನಿಮಗೆ ಹೇಳಿದರು.
19 Ասոնք՝ իրենք զիրենք զատող, շնչաւոր մարդիկ են, որոնք չունին Հոգին:
ಇವರು ನಿಮ್ಮಲ್ಲಿ ಭಿನ್ನಾಭಿಪ್ರಾಯವನ್ನು ಉಂಟುಮಾಡುವವರೂ ಪ್ರಾಪಂಚಿಕ ಮನುಷ್ಯರೂ ಪವಿತ್ರಾತ್ಮ ದೇವರಿಲ್ಲದವರೂ ಆಗಿದ್ದಾರೆ.
20 Իսկ դո՛ւք, սիրելինե՛ր, շինելով դուք ձեզ՝ ձեր ամենասուրբ հաւատքին վրայ, եւ աղօթելով Սուրբ Հոգիով,
ಪ್ರಿಯರೇ, ನೀವಾದರೋ ನಿಮಗಿರುವ ಅತಿಪರಿಶುದ್ಧವಾದ ನಂಬಿಕೆಯಲ್ಲಿ ನಿಮ್ಮನ್ನು ನಿರ್ಮಿಸಿಕೊಂಡವರಾಗಿ ಪರಿಶುದ್ಧಾತ್ಮ ದೇವರಲ್ಲಿ ಪ್ರಾರ್ಥಿಸಿರಿ.
21 պահեցէ՛ք դուք ձեզ Աստուծոյ սիրոյն մէջ, սպասելով մեր Տէրոջ՝ Յիսուս Քրիստոսի ողորմութեան՝ յաւիտենական կեանքի համար: (aiōnios g166)
ನಿತ್ಯಜೀವಕ್ಕಾಗಿ ನಮಗೆ ಕರ್ತ ಆಗಿರುವ ಯೇಸುಕ್ರಿಸ್ತರ ಕರುಣೆಗೋಸ್ಕರ ಎದುರುನೋಡುತ್ತಾ ನಿಮ್ಮನ್ನು ದೇವರ ಪ್ರೀತಿಯಲ್ಲಿ ಕಾಪಾಡಿಕೊಳ್ಳಿರಿ. (aiōnios g166)
22 Կարեկցեցէ՛ք ոմանց՝ զատորոշելով.
ಸಂಶಯಪಡುವ ಕೆಲವರಿಗೆ ಕನಿಕರವನ್ನು ತೋರಿಸಿರಿ.
23 իսկ փրկեցէ՛ք ուրիշները, վախով յափշտակելով զանոնք կրակէն, ատելով մարմինէն ապականած բաճկոնն ալ:
ಬೇರೆಯವರನ್ನು ಬೆಂಕಿಯಿಂದ ಎಳೆದು ರಕ್ಷಿಸಿರಿ. ಭಯದಿಂದ ಕರುಣೆ ತೋರಿಸಿರಿ. ಪಾಪ ಕೃತ್ಯಗಳಿಂದ ಮೈಲಿಗೆಯಾದ ಅವರ ಜೀವನವನ್ನು ಸಹ ಹಗೆ ಮಾಡಿರಿ.
24 Անոր՝ որ կարող է զերծ պահել ձեզ անկումէ, եւ անարատ կեցնել իր փառքին առջեւ՝ ցնծութեամբ,
ಎಡವಿಬೀಳದಂತೆ ನಿಮ್ಮನ್ನು ಕಾಪಾಡುವುದಕ್ಕೂ ತಮ್ಮ ಪ್ರಭಾವದ ಸಮಕ್ಷಮದಲ್ಲಿ ನಿಮ್ಮನ್ನು ಅತ್ಯಂತ ಹರ್ಷದೊಡನೆ ನಿರ್ದೋಷಿಗಳನ್ನಾಗಿ ನಿಲ್ಲಿಸುವುದಕ್ಕೂ ಶಕ್ತರಾಗಿರುವ
25 մեր Փրկիչին՝ միա՛կ Աստուծոյ, (մեր Տէրոջ՝ Յիսուս Քրիստոսի միջոցով) փա՜ռք ու մեծափառութի՜ւն, զօրութի՜ւն եւ իշխանութի՜ւն (բոլոր դարերէն առաջ, ) հիմա ու բոլոր դարերուն մէջ: Ամէն: (aiōn g165)
ನಮ್ಮ ರಕ್ಷಕರಾದ ಒಬ್ಬರೇ ದೇವರಿಗೆ ನಮಗೆ ಕರ್ತ ಆಗಿರುವ ಯೇಸುಕ್ರಿಸ್ತರ ಮುಖಾಂತರ ಮಹಿಮೆ, ಮಹತ್ವ, ಬಲವು, ಅಧಿಕಾರಗಳು ಎಂದೂ ಇದ್ದಂತೆ ಈಗಲೂ ಯಾವಾಗಲೂ ಇರಲಿ. ಆಮೆನ್. (aiōn g165)

< ՅՈՒԴԱՅԻ 1 >