< ՂՈԻԿԱՍ 22 >

1 Բաղարջակերքի տօնը՝ որ Զատիկ կը կոչուէր՝ մօտեցաւ,
ಪಸ್ಕವೆಂದು ಕರೆಯಲ್ಪಡುವ ಹುಳಿಯಿಲ್ಲದ ರೊಟ್ಟಿಯ ಹಬ್ಬವು ಹತ್ತಿರವಾದಾಗ,
2 եւ քահանայապետներն ու դպիրները կը փնտռէին թէ ի՛նչպէս մեռցնեն զայն, քանի որ կը վախնային ժողովուրդէն:
ಮುಖ್ಯಯಾಜಕರೂ ಶಾಸ್ತ್ರಿಗಳೂ ಯೇಸುವನ್ನು ಕೊಲ್ಲಬೇಕೆಂದಿದ್ದರು. ಆದರೆ ಜನರಿಗೆ ಹೆದರಿ ತಕ್ಕ ಮಾರ್ಗವನ್ನು ಹುಡುಕುತ್ತಿದ್ದರು.
3 Սատանան մտաւ Իսկարիովտացի մականուանեալ Յուդայի ներսը, որ տասներկուքէն մէկն էր,
ಆಗ ಸೈತಾನನು ಹನ್ನೆರಡು ಮಂದಿ ಶಿಷ್ಯರಲ್ಲಿ ಒಬ್ಬನಾದ ಇಸ್ಕರಿಯೋತನೆಂಬ ಯೂದನಲ್ಲಿ ಪ್ರವೇಶಿಸಲು,
4 եւ ան գնաց բանակցելու քահանայապետներուն ու մեծաւորներուն հետ՝ թէ ի՛նչպէս մատնէ զայն անոնց:
ಅವನು ಮುಖ್ಯಯಾಜಕರ ಬಳಿಗೂ ಕಾವಲಿನ ದಳವಾಯಿಗಳ ಬಳಿಗೂ ಹೋಗಿ ತಾನು ಯೇಸುವನ್ನು ಹಿಡಿದುಕೊಡುವ ಉಪಾಯವನ್ನು ಕುರಿತು ಅವರ ಸಂಗಡ ಮಾತನಾಡಿದನು.
5 Անոնք ուրախացան եւ միաձայնեցան դրամ տալ անոր:
ಅವರು ಸಂತೋಷಪಟ್ಟು ನಿನಗೆ ಹಣ ಕೊಡುತ್ತೇವೆಂದು ಒಪ್ಪಂದ ಮಾಡಲು,
6 Ինք ալ խոստացաւ, ու կը փնտռէր պատեհութիւն մը զայն մատնելու անոնց՝ առանց բազմութեան:
ಅವನು ಒಪ್ಪಿಕೊಂಡು, ಜನಸಮೂಹವಿಲ್ಲದಿರುವಾಗ ಆತನನ್ನು ಅವರಿಗೆ ಹಿಡಿದುಕೊಡುವುದಕ್ಕೆ ಅನುಕೂಲವಾದ ಸಂದರ್ಭವನ್ನು ನೋಡುತ್ತಿದ್ದನು.
7 Բաղարջակերքի օրը եկաւ, երբ պէտք էր մորթել զատիկը:
ಹುಳಿಯಿಲ್ಲದ ರೊಟ್ಟಿಯನ್ನು ತಿನ್ನುವ ದಿನಗಳಲ್ಲಿ ಪಸ್ಕದ ಕುರಿಮರಿಯನ್ನು ಕೊಯ್ಯತಕ್ಕ ದಿನ ಬಂದಾಗ,
8 Ուստի ղրկեց Պետրոսն ու Յովհաննէսը՝ ըսելով. «Գացէ՛ք, պատրաստեցէ՛ք մեզի զատիկը՝ որպէսզի ուտենք»:
ಯೇಸು ಪೇತ್ರನಿಗೂ ಯೋಹಾನನಿಗೂ, “ನೀವು ಹೋಗಿ ನಾವು ಪಸ್ಕದ ಊಟಮಾಡುವಂತೆ ಸಿದ್ಧಮಾಡಿರಿ” ಎಂದು ಹೇಳಿ ಅವರನ್ನು ಕಳುಹಿಸಿದನು.
9 Անոնք ալ ըսին անոր. «Ո՞ւր կ՚ուզես որ պատրաստենք»:
ಅವರು, “ನಾವು ಎಲ್ಲಿ ಸಿದ್ಧಮಾಡಬೇಕನ್ನುತ್ತೀ?” ಎಂದು ಆತನನ್ನು ಕೇಳಲು,
10 Ըսաւ անոնց. «Ահա՛ երբ մտնէք քաղաքը, մարդ մը պիտի հանդիպի ձեզի՝ որ ուսին վրայ ունի ջուրի սափոր մը. հետեւեցէ՛ք անոր մինչեւ այն տունը՝ ուր ինք կը մտնէ,
೧೦ಆತನು ಅವರಿಗೆ, “ನೋಡಿರಿ, ನೀವು ಪಟ್ಟಣದೊಳಕ್ಕೆ ಹೋದ ಮೇಲೆ ಒಬ್ಬ ಮನುಷ್ಯನು ತುಂಬಿದ ಕೊಡವನ್ನು ಹೊತ್ತುಕೊಂಡು ನಿಮ್ಮೆದುರಿಗೆ ಬರುವನು. ಅವನು ಹೋಗುವ ಮನೆಗೆ ನೀವು ಅವನ ಹಿಂದೆ ಹೋಗಿ,
11 եւ ըսէ՛ք տանտիրոջ. «Վարդապետը կ՚ըսէ քեզի. “Ո՞ւր է իջեւանը, ուր պիտի ուտեմ զատիկը աշակերտներուս հետ”:
೧೧ಆ ಮನೆಯ ಯಜಮಾನನಿಗೆ, ‘ನನ್ನ ಶಿಷ್ಯರ ಸಂಗಡ ಪಸ್ಕದ ಊಟವನ್ನು ಮಾಡುವುದಕ್ಕಾಗಿ ವಿಶೇಷವಾದ ಕೊಠಡಿ ಎಲ್ಲಿ?’ ಎಂದು ನಿನ್ನನ್ನು ವಿಚಾರಿಸಲು ನಮ್ಮ ಗುರು ಹೇಳಿದ್ದಾನೆ, ಎಂದು ಹೇಳಿರಿ.
12 Ան ալ պիտի ցուցնէ ձեզի կահաւորուած մեծ վերնայարկ մը. հո՛ն պատրաստեցէք»:
೧೨ಅವನು ತಕ್ಕ ಪೀಠೋಪಕರಣಗಳಿಂದ ಅಲಂಕೃತವಾದ ಮೇಲ್ಮಾಳಿಗೆಯಲ್ಲಿ ದೊಡ್ಡ ಕೊಠಡಿಯನ್ನು ನಿಮಗೆ ತೋರಿಸುವನು. ಅಲ್ಲಿ ನೀವು ಭೋಜನಕ್ಕೆ ಸಿದ್ಧ ಮಾಡಿರಿ” ಎಂದು ಹೇಳಿ ಕಳುಹಿಸಿದನು.
13 Գացին, գտան ինչպէս ըսաւ իրենց, եւ պատրաստեցին զատիկը:
೧೩ಅವರು ಹೊರಟು ಆತನು ತಮಗೆ ಹೇಳಿದಂತೆ ಕಂಡು ಪಸ್ಕ ಹಬ್ಬಕ್ಕೆ ಸಿದ್ಧಮಾಡಿದರು.
14 Երբ ժամը հասաւ՝ սեղան նստաւ, ու տասներկու առաքեալները իրեն հետ:
೧೪ಆ ಸಮಯ ಬಂದಾಗ ಆತನು ತನ್ನ ಹನ್ನೆರಡು ಮಂದಿ ಅಪೊಸ್ತಲರ ಸಂಗಡ ಊಟಕ್ಕೆ ಕುಳಿತುಕೊಂಡನು.
15 Եւ ըսաւ անոնց. «Չափազանց ցանկացի որ այս զատիկը ուտեմ ձեզի հետ՝ իմ չարչարուելէս առաջ.
೧೫ಆಗ ಆತನು ಅವರಿಗೆ, “ನಾನು ಯಾತನೆಯನ್ನು ಅನುಭವಿಸುವುದಕ್ಕಿಂತ ಮೊದಲೇ ನಿಮ್ಮ ಸಂಗಡ ಈ ಪಸ್ಕದ ಊಟವನ್ನು ಮಾಡುವುದಕ್ಕೆ ಮನಃಪೂರ್ವಕವಾಗಿ ಬಯಸಿದ್ದೇನೆ.
16 որովհետեւ կը յայտարարեմ ձեզի. “Ա՛լ բնա՛ւ պիտի չուտեմ ասկէ, մինչեւ որ իրագործուի Աստուծոյ թագաւորութեան մէջ”»:
೧೬ಇನ್ನು ದೇವರ ರಾಜ್ಯದಲ್ಲಿಇದು ನೆರವೇರುವ ತನಕ ನಾನು ಇನ್ನು ಪಸ್ಕದ ಊಟವನ್ನು ಮಾಡುವುದೇ ಇಲ್ಲ” ಎಂದು ಹೇಳಿದನು.
17 Ու բաժակը առաւ, շնորհակալ եղաւ եւ ըսաւ. «Առէ՛ք ասիկա ու բաժնեցէ՛ք ձեր մէջ:
೧೭ಆ ಮೇಲೆ ಆತನು (ದ್ರಾಕ್ಷಾರಸದ) ಪಾತ್ರೆಯನ್ನು ತೆಗೆದುಕೊಂಡು ದೇವರ ಸ್ತೋತ್ರಮಾಡಿ, “ಇದನ್ನು ತೆಗೆದುಕೊಂಡು ಹಂಚಿಕೊಂಡು ಕುಡಿಯಿರಿ.
18 Արդարեւ կը յայտարարեմ ձեզի. “Բնա՛ւ որթատունկին բերքէն պիտի չխմեմ, մինչեւ որ գայ Աստուծոյ թագաւորութիւնը”»:
೧೮ಇಂದಿನಿಂದ ದೇವರ ರಾಜ್ಯವು ಬರುವ ತನಕ ನಾನು ದ್ರಾಕ್ಷಾರಸವನ್ನು ಕುಡಿಯುವುದೇ ಇಲ್ಲವೆಂದು ನಿಮಗೆ ಹೇಳುತ್ತೇನೆ” ಅಂದನು.
19 Ապա հաց առաւ, շնորհակալ եղաւ, կտրեց ու տուաւ անոնց, եւ ըսաւ. «Ա՛յս է իմ մարմինս՝ որ կը տրուի ձեզի համար. ըրէ՛ք ասիկա՝ իմ յիշատակիս համար»:
೧೯ಬಳಿಕ ಆತನು ರೊಟ್ಟಿಯನ್ನು ತೆಗೆದುಕೊಂಡು ಸ್ತೋತ್ರಮಾಡಿ ಮುರಿದು ಅವರಿಗೆ ಕೊಟ್ಟು, “ಇದು ನಿಮಗೋಸ್ಕರ ಕೊಟ್ಟಿರುವ ನನ್ನ ದೇಹ, ನನ್ನನ್ನು ನೆನಪಿಸಿಕೊಳ್ಳುವುದಕ್ಕೋಸ್ಕರ ಹೀಗೆ ಮಾಡಿರಿ” ಅಂದನು.
20 Նոյնպէս ալ բաժակը առաւ ընթրիքէն ետք, եւ ըսաւ. «Այս բաժակը նո՛ր ուխտն է՝ իմ արիւնովս, որ կը թափուի ձեզի համար»:
೨೦ಊಟವಾದ ಮೇಲೆ ಆತನು ಅದೇ ರೀತಿಯಾಗಿ ಪಾತ್ರೆಯನ್ನು ತೆಗೆದುಕೊಂಡು, “ಈ ಪಾತ್ರೆಯು ನಿಮಗೋಸ್ಕರ ಸುರಿಸಲ್ಪಡುವ, ನನ್ನ ರಕ್ತದಿಂದ ಸ್ಥಾಪಿತವಾಗುವ ಹೊಸ ಒಡಂಬಡಿಕೆಯನ್ನು ಸೂಚಿಸುತ್ತದೆ.
21 «Բայց ահա՛ զիս մատնողին ձեռքը ինծի հետ՝ այս սեղանին վրայ է:
೨೧“ಆದರೂ ನೋಡಿರಿ, ನನ್ನನ್ನು ಹಿಡಿದುಕೊಡುವವನು ನನ್ನೊಡನೆ ಮೇಜಿನ ಮೇಲೆ ಕೈಯಿಟ್ಟು ಊಟಮಾಡುತ್ತಿದ್ದಾನೆ.
22 Իրաւ է թէ մարդու Որդին կ՚երթայ՝ ինչպէս սահմանուած է. բայց վա՜յ այն մարդուն՝ որուն միջոցով կը մատնուի ան»:
೨೨ನಿರ್ಣಯವಾಗಿರುವ ಪ್ರಕಾರ ಮನುಷ್ಯಕುಮಾರನು ಹೊರಟುಹೋಗುತ್ತಾನೆ ಸರಿ, ಆದರೆ ಆತನನ್ನು ಹಿಡಿದುಕೊಡುವ ಮನುಷ್ಯನ ಗತಿಯನ್ನು ಏನು ಹೇಳಲಿ” ಅಂದನು.
23 Անոնք ալ սկսան հարցնել իրարու թէ իրենցմէ ո՛վ էր՝ որ պիտի ընէր այդ բանը:
೨೩ಇದನ್ನು ಕೇಳಿ ಅವರು, ಇಂಥ ಕೆಲಸವನ್ನು ಮಾಡಬೇಕೆಂದಿರುವವನು ನಮ್ಮಲ್ಲಿ ಯಾವನಾಗಿರಬಹುದು ಎಂದು ಒಬ್ಬರನ್ನೊಬ್ಬರು ಕೇಳತೊಡಗಿದರು.
24 Վէճ մըն ալ եղաւ անոնց մէջ, թէ իրենցմէ ո՛վ պիտի համարուի մեծագոյնը:
೨೪ಇದಲ್ಲದೆ ತಮ್ಮಲ್ಲಿ ದೊಡ್ಡವನು ಯಾರು ಎಂಬ ವಿಷಯದಲ್ಲಿ ಅವರೊಳಗೆ ಚರ್ಚೆ ಹುಟ್ಟಿತು.
25 Ան ալ ըսաւ անոնց. «Հեթանոսներուն թագաւորնե՛րը կը տիրեն իրենց, եւ անոնք որ կ՚իշխեն իրենց վրայ՝ բարերար կը կոչուին:
೨೫ಆಗ ಆತನು ಅವರಿಗೆ, “ಅನ್ಯಜನಾಂಗದ ಅರಸರು ತಮ್ಮ ತಮ್ಮ ಜನಗಳ ಮೇಲೆ ದೊರೆತನ ಮಾಡುತ್ತಾರೆ ಮತ್ತು ಅವರ ಮೇಲೆ ಅಧಿಕಾರದಿಂದ ಆಡಳಿತ ನಡಿಸುವವರು ಉಪಕಾರಿಗಳೆಂದು ಕರೆಸಿಕೊಳ್ಳುತ್ತಾರೆ.
26 Բայց դուք այնպէս պէտք չէ ըլլաք. հապա ա՛ն որ ձեր մէջ մեծագոյնն է՝ կրտսերին պէս թող ըլլայ, ու հրամայողը՝ սպասարկուին պէս:
೨೬ನೀವು ಹಾಗಿರಬಾರದು, ನಿಮ್ಮಲ್ಲಿ ದೊಡ್ಡವನು ಚಿಕ್ಕವನಂತಾಗಬೇಕು, ಮುಖ್ಯಸ್ಥನು ಸೇವಕನಂತಾಗಬೇಕು.
27 Քանի որ ո՞վ է մեծը, սեղան նստո՞ղը՝ թէ սպասարկուն: Միթէ սեղան նստողը չէ՞. սակայն ես ձեր մէջ սպասարկուի մը պէս եմ:
೨೭ಯಾರು ದೊಡ್ಡವನು? ಊಟಕ್ಕೆ ಕುಳಿತವನೋ ಸೇವೆಮಾಡುವವನೋ? ಊಟಕ್ಕೆ ಕುಳಿತವನಲ್ಲವೇ. ಆದರೆ ನಾನು ನಿಮ್ಮಲ್ಲಿ ಸೇವೆ ಮಾಡುವವನಂತಿದ್ದೇನೆ.
28 Եւ դուք անոնք էք՝ որ միշտ ինծի հետ կը մնայիք փորձութիւններուս մէջ.
೨೮ನೀವು ನನ್ನ ಕಷ್ಟಗಳಲ್ಲಿ ನನ್ನ ಸಂಗಡ ಎಡೆಬಿಡದೆ ಇದ್ದವರು.
29 ես ալ թագաւորութիւն մը կը կտակեմ ձեզի, ինչպէս իմ Հայրս թագաւորութիւն մը կտակեց ինծի.
೨೯ಆದುದರಿಂದ ನನ್ನ ತಂದೆಯು ನನಗೆ ರಾಜ್ಯವನ್ನು ನೇಮಿಸಿರುವ ಪ್ರಕಾರ ನಾನು ನಿಮಗೂ ನೇಮಿಸುತ್ತೇನೆ;
30 որպէսզի դուք ուտէք ու խմէք իմ սեղանէս՝ իմ թագաւորութեանս մէջ, եւ բազմիք գահերու վրայ՝ դատելու Իսրայէլի տասներկու տոհմերը»:
೩೦ನನ್ನ ರಾಜ್ಯದಲ್ಲಿ ನೀವು ನನ್ನ ಮೇಜಿನ ಮೇಲೆ ಊಟಮಾಡುವಿರಿ, ಕುಡಿಯುವಿರಿ ಮತ್ತು ಸಿಂಹಾಸನಗಳ ಮೇಲೆ ಕುಳಿತುಕೊಂಡು ಇಸ್ರಾಯೇಲಿನ ಹನ್ನೆರಡು ಕುಲಗಳಿಗೆ ನ್ಯಾಯತೀರ್ಪುಮಾಡುವಿರಿ.
31 Տէրը ըսաւ. «Սիմո՛ն, Սիմո՛ն, ահա՛ Սատանան շատ ուզեց խարբալել ձեզ ցորենի պէս:
೩೧“ಸೀಮೋನನೇ, ಸೀಮೋನನೇ, ನೋಡು, ಸೈತಾನನು ನಿನ್ನನ್ನು ಗೋದಿಯಂತೆ ಕೇರಬೇಕೆಂದು ಅಪ್ಪಣೆ ಕೇಳಿಕೊಂಡನು.
32 Բայց ես աղերսեցի քեզի համար, որպէսզի հաւատքդ չպակսի. եւ դուն երբ դարձի գաս՝ եղբայրնե՛րդ ալ ամրացուր»:
೩೨ಆದರೆ ನಿನ್ನ ನಂಬಿಕೆ ಕುಂದಿಹೋಗಬಾರದೆಂದು ನಾನು ನಿನ್ನ ವಿಷಯದಲ್ಲಿ ದೇವರಿಗೆ ವಿಜ್ಞಾಪನೆ ಮಾಡಿಕೊಂಡೆನು. ನೀನು ತಿರುಗಿಕೊಂಡ ಮೇಲೆ ನಿನ್ನ ಸಹೋದರರನ್ನು ದೃಢಪಡಿಸು” ಎಂದು ಹೇಳಿದನು.
33 Իսկ ինք ըսաւ անոր. «Տէ՛ր, ես պատրաստ եմ քեզի հետ թէ՛ բանտ երթալու, թէ՛ մեռնելու»:
೩೩ಆದರೆ ಅವನು, “ಕರ್ತನೇ, ನಿನ್ನ ಸಂಗಡ ಸೆರೆಮನೆಗೆ ಹೋಗುವುದಕ್ಕೂ ಸಾಯುವುದಕ್ಕೂ ನಾನು ಸಿದ್ಧನಾಗಿದ್ದೇನೆ” ಅನ್ನಲು,
34 Ան ալ ըսաւ. «Պետրո՛ս, կը յայտարարեմ քեզի. “Այսօր աքաղաղը պիտի չկանչէ, մինչեւ որ դուն երե՛ք անգամ ուրանաս՝ թէ զիս կը ճանչնաս”»:
೩೪ಆತನು, “ಪೇತ್ರನೇ, ನನ್ನ ವಿಷಯದಲ್ಲಿ ಇವನನ್ನು ಅರಿಯೆನೆಂದು ನೀನು ಮೂರು ಸಾರಿ ಹೇಳುವ ತನಕ ಈಹೊತ್ತು ಕೋಳಿ ಕೂಗುವುದಿಲ್ಲವೆಂದು ನಿನಗೆ ಹೇಳುತ್ತೇನೆ” ಅಂದನು.
35 Նաեւ ըսաւ անոնց. «Երբ ղրկեցի ձեզ առանց քսակի, պարկի ու կօշիկներու, որեւէ բան պակսեցա՞ւ ձեզի»:
೩೫ಮತ್ತು ಆತನು, “ನಿಮ್ಮನ್ನು ನಾನು ಹಣ, ಕೈಚೀಲಜೋಡುಗಳಿಲ್ಲದೆ ಕಳುಹಿಸಿದಾಗ ನಿಮಗೆ ಏನಾದರೂ ಕೊರತೆಯಾಯಿತೋ?” ಎಂದು ಕೇಳಲು ಅವರು ಏನೂ ಇಲ್ಲವೆಂದು ಉತ್ತರಕೊಟ್ಟರು.
36 Անոնք ալ ըսին. «Ո՛չ մէկ բան»: Յետոյ ըսաւ. «Բայց հիմա՝ ա՛ն որ քսակ ունի՝ թող առնէ զայն, նմանապէս պարկը. եւ ա՛ն որ սուր չունի, թող ծախէ իր հանդերձը ու սուր մը գնէ իրեն:
೩೬ಅದಕ್ಕೆ ಆತನು, “ಈಗಲಾದರೋ ಹಣವಿದ್ದವನು ಅದನ್ನು ತೆಗೆದುಕೊಳ್ಳಲಿ, ಕೈಚೀಲವಿರುವವನು ಅದನ್ನು ತೆಗೆದುಕೊಳ್ಳಲಿ, ಮತ್ತು ಕತ್ತಿಯಿಲ್ಲದವನು ತನ್ನ ಮೇಲಂಗಿಯನ್ನು ಮಾರಿ ಒಂದು ಕತ್ತಿಯನ್ನು ಕೊಂಡುಕೊಳ್ಳಲಿ.
37 Քանի որ կը յայտարարեմ ձեզի թէ պէտք է որ սա՛ գրուածն ալ կատարուի իմ վրաս. “Անօրէններու հետ սեպուեցաւ”. որովհետեւ աւարտելու վրայ են ինծի վերաբերող բաները»:
೩೭ಏಕೆಂದರೆ, ‘ಆತನು ಅಪರಾಧಿಗಳಲ್ಲಿ ಒಬ್ಬನಂತೆ ಎಣಿಸಲ್ಪಟ್ಟನು’ ಎಂದು ಬರೆದಿರುವ ಮಾತು ನನ್ನಲ್ಲಿ ನೆರವೇರಬೇಕಾಗಿದೆ ಎಂದು ನಿಮಗೆ ಹೇಳುತ್ತೇನೆ. ನನ್ನ ವಿಷಯದಲ್ಲಿ ಬರೆಯಲ್ಪಟ್ಟಿರುವ ಎಲ್ಲವು ನೆರವೇರಬೇಕು” ಎಂದು ಹೇಳಿದನು.
38 Անոնք ալ ըսին. «Տէ՛ր, ահա՛ հոս երկու սուր կայ»: Ան ալ ըսաւ անոնց. «Կը բաւէ»:
೩೮ಅವರು, “ಕರ್ತನೇ, ಇಗೋ ಇಲ್ಲಿ ಎರಡು ಕತ್ತಿಗಳಿವೆ” ಅನ್ನಲು, ಆತನು ಅವರಿಗೆ, “ಅಷ್ಟು ಸಾಕು” ಅಂದನು.
39 Յետոյ դուրս ելլելով՝ իր սովորութեան համաձայն գնաց Ձիթենիներու լեռը. աշակերտներն ալ հետեւեցան իրեն:
೩೯ತರುವಾಯ ಆತನು ಪ್ರತಿದಿನದಂತೆ ಹೊರಟು ಎಣ್ಣೆಮರಗಳ ಗುಡ್ಡಕ್ಕೆ ಹೋದನು. ಶಿಷ್ಯರೂ ಆತನ ಹಿಂದೆ ಹೋದರು.
40 Երբ հասաւ այդ տեղը՝ ըսաւ անոնց. «Աղօթեցէ՛ք՝ որպէսզի փորձութեան մէջ չմտնէք»:
೪೦ಆತನು ಆ ಕ್ಲುಪ್ತ ಸ್ಥಳಕ್ಕೆ ಬಂದಾಗ ಅವರಿಗೆ, “ನೀವು ಶೋಧನೆಗೆ ಒಳಗಾಗದಂತೆ ಪ್ರಾರ್ಥಿಸಿರಿ” ಎಂದು ಹೇಳಿದನು.
41 Ապա մեկուսացաւ անոնցմէ՝ քարընկէցի մը չափ, ու ծնրադրելով՝ կ՚աղօթէր
೪೧ಆ ಮೇಲೆ ಆತನು ಅವರನ್ನು ಬಿಟ್ಟು ಕಲ್ಲೆಸೆತದಷ್ಟು ದೂರ ಹೋಗಿ, ಮೊಣಕಾಲೂರಿ,
42 եւ կ՚ըսէր. «Հա՛յր, եթէ փափաքիս՝ հեռացո՛ւր այս բաժակը ինձմէ. բայց ո՛չ թէ ի՛մ կամքս՝ հապա քո՛ւկդ թող ըլլայ»:
೪೨“ತಂದೆಯೇ, ನಿನಗೆ ಇಷ್ಟವಿದ್ದರೆ ಈ ಪಾತ್ರೆಯನ್ನು ನನ್ನಿಂದ ತೊಲಗಿಸು. ಹೇಗೂ ನನ್ನ ಚಿತ್ತವಲ್ಲ, ನಿನ್ನ ಚಿತ್ತದಂತೆಯೇ ಆಗಲಿ” ಪ್ರಾರ್ಥಿಸಿದನು.
43 Երկինքէն հրեշտակ մը երեւցաւ իրեն, ու կը զօրացնէր զինք: Ճգնաժամի մէջ ըլլալով՝ աւելի՛ ջերմեռանդութեամբ կ՚աղօթէր,
೪೩ಆಗ ಪರಲೋಕದಿಂದ ಬಂದ ಒಬ್ಬ ದೇವದೂತನು ಆತನಿಗೆ ಕಾಣಿಸಿಕೊಂಡು, ಆತನನ್ನು ಬಲಪಡಿಸಿದನು.
44 եւ իր քրտինքը՝ գետին ինկող արիւնի մեծ կաթիլներու պէս էր:
೪೪ಯೇಸು ತೀವ್ರವಾದ ಮನೋವ್ಯಥೆಯುಳ್ಳವನಾಗಿ, ಆಸಕ್ತಿಯಿಂದ ಪ್ರಾರ್ಥಿಸುತ್ತಿರಲಾಗಿ, ಆತನ ಬೆವರು ರಕ್ತದ ಹನಿಗಳೋಪಾದಿಯಲ್ಲಿ ನೆಲಕ್ಕೆ ಬೀಳುತ್ತಿತ್ತು.
45 Աղօթքէն կանգնելով՝ եկաւ աշակերտներուն քով, ու գտաւ զանոնք՝ տրտմութենէն քնացած:
೪೫ಆತನು ಪ್ರಾರ್ಥನೆ ಮುಗಿಸಿ ಎದ್ದು ಶಿಷ್ಯರ ಬಳಿಗೆ ಬಂದು, ಅವರು ದುಃಖದಿಂದ ಬಳಲಿಹೋದವರಾಗಿ ನಿದ್ರೆಹತ್ತಿರುವುದನ್ನು ಕಂಡು,
46 Ըսաւ անոնց. «Ինչո՞ւ կը քնանաք. կանգնեցէ՛ք եւ աղօթեցէ՛ք, որպէսզի չմտնէք փորձութեան մէջ»:
೪೬ಅವರಿಗೆ, “ನೀವು ನಿದ್ರೆಮಾಡುವುದೇನು? ಏಳಿರಿ, ಶೋಧನೆಗೆ ಒಳಗಾಗದಂತೆ ಪ್ರಾರ್ಥಿಸಿರಿ” ಎಂದು ಹೇಳಿದನು.
47 Երբ դեռ կը խօսէր, ահա՛ բազմութիւն մը եկաւ. Յուդա կոչուածն ալ՝ տասներկուքէն մէկը՝ կ՚երթար անոր առջեւէն, ու մօտեցաւ Յիսուսի՝ որպէսզի համբուրէ զայն:
೪೭ಆತನು ಇನ್ನೂ ಮಾತನಾಡುತ್ತಿರುವಾಗಲೇ ಇಗೋ, ಜನರ ಗುಂಪು ಕಾಣಿಸಿತು. ಹನ್ನೆರಡು ಮಂದಿ ಶಿಷ್ಯರಲ್ಲಿ ಒಬ್ಬನಾದ ಯೂದನೆಂಬುವನು ಆ ಜನರ ಗುಂಪಿನ ಮುಂದೆ ನಡೆಯುತ್ತಾ, ಯೇಸುವಿಗೆ ಮುದ್ದಿಡುವುದಕ್ಕಾಗಿ ಆತನ ಬಳಿಗೆ ಬರಲು,
48 Յիսուս ըսաւ անոր. «Յուդա՛, համբուրելո՞վ կը մատնես մարդու Որդին»:
೪೮ಯೇಸು ಅವನಿಗೆ, “ಯೂದನೇ, ಮುದ್ದಿಟ್ಟು ಮನುಷ್ಯಕುಮಾರನನ್ನು ಹಿಡಿದುಕೊಡುತ್ತೀಯಾ?” ಎಂದು ಕೇಳಿದನು.
49 Երբ անոր շուրջը եղողները տեսան ինչ որ պիտի ըլլար, ըսին անոր. «Տէ՛ր, զարնե՞նք սուրով»:
೪೯ಆತನ ಸುತ್ತಲಿದ್ದವರು ಘಟನೆಯ ಸೂಕ್ಷ್ಮತೆಯನ್ನು ತಿಳಿದು ತಕ್ಷಣ, “ಕರ್ತನೇ, ನಾವು ಕತ್ತಿಯಿಂದ ಹೊಡೆಯೋಣವೋ?” ಎಂದು ಕೇಳಿದರು.
50 Եւ անոնցմէ մէկը զարկաւ քահանայապետին ծառային, ու խլեց անոր աջ ականջը:
೫೦ಅಷ್ಟರಲ್ಲಿ ಅವರಲ್ಲಿ ಒಬ್ಬನು ಮಹಾಯಾಜಕನ ಆಳನ್ನು ಕತ್ತಿಯಿಂದ ಹೊಡೆದು ಅವನ ಬಲಗಿವಿಯನ್ನು ಕತ್ತರಿಸಿ ಹಾಕಿದನು.
51 Յիսուս ըսաւ. «Թոյլատրեցէ՛ք մինչեւ այդ տեղը»: Եւ դպաւ անոր ականջին ու բժշկեց զայն:
೫೧ಆದರೆ ಯೇಸು, “ಇಷ್ಟಕ್ಕೇ ಬಿಡಿರಿ” ಎಂದು ಹೇಳಿ ಆ ಆಳಿನ ಕಿವಿಯನ್ನು ಮುಟ್ಟಿ ವಾಸಿಮಾಡಿದನು.
52 Յիսուս ըսաւ իրեն եկած քահանայապետներուն, տաճարին մեծաւորներուն եւ երէցներուն. «Իբր թէ աւազակի՞ դէմ եկաք՝ սուրերով ու բիրերով:
೫೨ಬಳಿಕ ಯೇಸು ತನ್ನನ್ನು ಹಿಡಿಯುವುದಕ್ಕೆ ಬಂದ ಮುಖ್ಯಯಾಜಕರಿಗೂ, ದೇವಾಲಯದ ಕಾವಲಿನ ದಳವಾಯಿಗಳಿಗೂ, ಸಭೆಯ ಹಿರಿಯರಿಗೂ, “ದರೋಡೆಗಾರನನ್ನು ಹಿಡಿಯುವುದಕ್ಕೆ ಬಂದಂತೆ ಕತ್ತಿಗಳನ್ನೂ ದೊಣ್ಣೆಗಳನ್ನೂ ತೆಗೆದುಕೊಂಡು ಬಂದಿರುವಿರಾ?
53 Ամէ՛ն օր ձեզի հետ էի՝ տաճարին մէջ, եւ ձեռք չերկարեցիք իմ վրաս. բայց ասիկա՛ է ձեր ժամն ու խաւարին իշխանութիւնը»:
೫೩ನಾನು ಪ್ರತಿದಿನ ದೇವಾಲಯದಲ್ಲಿ ನಿಮ್ಮ ಸಂಗಡ ಇದ್ದಾಗ ನೀವು ನನ್ನ ಮೇಲೆ ಕೈಹಾಕಲಿಲ್ಲ. ಆದರೆ ಇದು ನಿಮ್ಮ ಕಾಲ, ಇದು ಅಂಧಕಾರದ ದೊರೆತನದ ಕಾಲ” ಎಂದು ಹೇಳಿದನು.
54 Բռնելով զայն՝ տարին եւ մտցուցին քահանայապետին տունը. Պետրոս ալ կը հետեւէր անոր հեռուէն:
೫೪ಅವರು ಆತನನ್ನು ಹಿಡಿದು ಮಹಾಯಾಜಕನ ಮನೆಯೊಳಕ್ಕೆ ಕರೆದುಕೊಂಡು ಹೋದರು. ಪೇತ್ರನು ದೂರದಿಂದ ಅವರನ್ನು ಹಿಂಬಾಲಿಸುತ್ತಿದ್ದನು.
55 Երբ կրակ վառեցին գաւիթին մէջտեղը ու նստան միասին, Պետրոս ալ նստաւ անոնց մէջ:
೫೫ಅಂಗಳದ ನಡುವೆ ಅವರು ಬೆಂಕಿ ಹೊತ್ತಿಸಿ ಒಟ್ಟಾಗಿ ಕುಳಿತುಕೊಂಡಿರಲು ಅವರ ನಡುವೆ ಪೇತ್ರನೂ ಕುಳಿತುಕೊಂಡನು.
56 Աղախին մը տեսնելով զայն՝ որ նստած էր կրակին քով, ակնապիշ նայեցաւ անոր եւ ըսաւ. «Ասիկա՛ ալ անոր հետ էր»:
೫೬ಅವನು ಬೆಳಕಿಗೆ ಮುಖವಾಗಿ ಕುಳಿತಿರುವಾಗ ಒಬ್ಬ ದಾಸಿಯು ಅವನನ್ನು ಕಂಡು, ಅವನನ್ನು ದೃಷ್ಟಿಸಿ ನೋಡಿ, “ಇವನು ಸಹ ಅವನ ಸಂಗಡ ಇದ್ದವನು” ಅಂದಳು.
57 Բայց Պետրոս ուրացաւ զայն՝ ըսելով. «Կի՛ն, չեմ ճանչնար զայն»:
೫೭ಆದರೆ ಅವನು, “ನಾನು ಅವನನ್ನು ಅರಿಯೆನಮ್ಮಾ” ಎಂದು ಹೇಳಿದನು.
58 Կարճ պահէ մը ետք՝ ուրի՛շ մը տեսաւ զինք եւ ըսաւ. «Դո՛ւն ալ անոնցմէ ես»: Պետրոս ըսաւ. «Մա՛րդ, ես անոնցմէ չեմ»:
೫೮ಸ್ವಲ್ಪಹೊತ್ತಿನ ಮೇಲೆ ಮತ್ತೊಬ್ಬನು ಬಂದು ಅವನನ್ನು ಕಂಡು, “ನೀನೂ ಸಹ ಅವರಲ್ಲಿ ಒಬ್ಬನು” ಅನ್ನಲು ಪೇತ್ರನು, “ನಾನಲ್ಲಪ್ಪಾ” ಅಂದನು.
59 Գրեթէ ժամ մը ետք՝ ուրիշ մըն ալ կը պնդէր ու կ՚ըսէր. «Ճշմարտապէս ասիկա՛ ալ անոր հետ էր, որովհետեւ Գալիլեացի է»:
೫೯ಹೆಚ್ಚು ಕಡಿಮೆ ಒಂದು ಘಂಟೆ ಹೊತ್ತಿನ ಮೇಲೆ ಇನ್ನೊಬ್ಬನು, “ನಿಶ್ಚಯವಾಗಿ ಇವನು ಸಹ ಅವನ ಸಂಗಡ ಇದ್ದವನು, ಇವನು ಗಲಿಲಾಯದವನಷ್ಟೆ” ಎಂದು ದೃಢವಾಗಿ ಹೇಳಿದನು.
60 Բայց Պետրոս ըսաւ. «Մա՛րդ, չեմ գիտեր ի՛նչ կը խօսիս»: Անմի՛ջապէս, մինչ ինք դեռ կը խօսէր, աքաղաղը կանչեց:
೬೦ಆದರೆ ಪೇತ್ರನು, “ನೀನು ಹೇಳುವುದೇನೋ ನಾನರಿಯೆನಪ್ಪಾ” ಅಂದನು. ಅವನು ಈ ಮಾತನ್ನು ಆಡುತ್ತಿರುವಾಗಲೇ ಕೋಳಿ ಕೂಗಿತು.
61 Տէրը դարձաւ ու նայեցաւ Պետրոսի: Պետրոս ալ մտաբերեց Տէրոջ խօսքը, որ ըսեր էր իրեն. «Դեռ աքաղաղը չկանչած՝ երե՛ք անգամ պիտի ուրանաս զիս»:
೬೧ಕರ್ತನು ಹಿಂತಿರುಗಿಕೊಂಡು ಪೇತ್ರನನ್ನು ದೃಷ್ಟಿಸಿ ನೋಡಿದನು. ಆಗ ಪೇತ್ರನು, “ಈಹೊತ್ತು ಕೋಳಿ ಕೂಗುವುದಕ್ಕಿಂತ ಮುಂಚೆ ಮೂರು ಸಾರಿ ನನ್ನ ವಿಷಯವಾಗಿ ಅವನನ್ನು ಅರಿಯೆನೆಂಬದಾಗಿ ಹೇಳುವಿ” ಎಂದು ಕರ್ತನು ನುಡಿದ ಮಾತನ್ನು ನೆನಪಿಸಿಕೊಂಡು,
62 Պետրոս դուրս ելլելով՝ դառնապէս լացաւ:
೬೨ಹೊರಗೆ ಹೋಗಿ ತುಂಬಾ ವ್ಯಥೆಪಟ್ಟು ಅತ್ತನು.
63 Այն մարդիկը՝ որ բռնած էին Յիսուսը, կը ծաղրէին զայն ու կը ծեծէին.
೬೩ಆ ಮೇಲೆ ಯೇಸುವನ್ನು ಹಿಡಿದವರು ಆತನನ್ನು ಪರಿಹಾಸ್ಯಮಾಡುತ್ತಾ, ಆತನಿಗೆ ಮುಸುಕುಹಾಕಿ ಹೊಡೆದು, “ನಿನ್ನನ್ನು ಹೊಡೆದವನಾರು? ಪ್ರವಾದನೆ ಹೇಳು” ಎಂದು ಆತನನ್ನು ಕೇಳಿದರು.
64 Ծածկելով անոր աչքերը՝ կը զարնէին անոր երեսին եւ կը հարցնէին իրեն. «Մարգարէացի՛ր. ո՞վ է ա՛ն՝ որ զարկաւ քեզի»:
೬೪
65 Ուրիշ շատ բաներ ալ կ՚ըսէին անոր դէմ՝ հայհոյելով:
೬೫ಆತನ ಕುರಿತು ಇನ್ನೂ ಅನೇಕ ದೂಷಣೆಯ ಮಾತುಗಳನ್ನಾಡಿದರು.
66 Երբ առտու եղաւ՝ ժողովուրդին երէցներու ժողովը, քահանայապետներն ու դպիրները հաւաքուեցան, տարին զայն իրենց ատեանին առջեւ եւ ըսին. «Եթէ Քրիստոսը դո՛ւն ես, ըսէ՛ մեզի»:
೬೬ಬೆಳಗಾಗುವಾಗ ಯೆಹೂದ್ಯರ ಹಿರೀಸಭೆಯವರು, ಮುಖ್ಯಯಾಜಕರು ಮತ್ತು ಶಾಸ್ತ್ರಿಗಳು ಕೂಡಿ ಆತನನ್ನು ತಮ್ಮ ನ್ಯಾಯವಿಚಾರಣಾಸಭೆಗೆ ತೆಗೆದುಕೊಂಡು ಬಂದು,
67 Ըսաւ անոնց. «Եթէ ըսեմ ալ ձեզի՝ պիտի չհաւատաք.
೬೭“ನೀನು ಕ್ರಿಸ್ತನಾಗಿದ್ದರೆ ನಮಗೆ ಹೇಳು” ಅಂದರು. ಆತನು ಅವರಿಗೆ, “ನಾನು ನಿಮಗೆ ಹೇಳಿದರೆ ನೀವು ನಂಬುವುದಿಲ್ಲ.
68 ու եթէ հարցնեմ ձեզի բան մը՝ պիտի չպատասխանէք ինծի, ո՛չ ալ պիտի արձակէք զիս:
೬೮ನಾನು ನಿಮ್ಮನ್ನು ಏನಾದರೂ ಕೇಳಿದರೆ ನೀವು ಉತ್ತರಕೊಡುವುದಿಲ್ಲ.
69 Ասկէ ետք՝ մարդու Որդին պիտի բազմի Աստուծոյ զօրութեան աջ կողմը»:
೬೯ಆದರೆ ಇಂದಿನಿಂದ ಮನುಷ್ಯಕುಮಾರನು ಸರ್ವಶಕ್ತನಾದ ದೇವರ ಬಲಗಡೆಯಲ್ಲಿ ಆಸೀನನಾಗಿರುವನು” ಎಂದು ಹೇಳಿದನು.
70 Բոլորը ըսին. «Ուրեմն դուն Աստուծոյ Որդի՞ն ես»: Ինք ալ ըսաւ անոնց. «Դո՛ւք կ՚ըսէք թէ ես եմ»:
೭೦ಆಗ ಎಲ್ಲರು, “ಹಾಗಾದರೆ ನೀನು ದೇವರ ಕುಮಾರನೋ?” ಎಂದು ಕೇಳಲು ಆತನು ಅವರಿಗೆ, “ನನ್ನನ್ನು ಕುರಿತು ದೇವಕುಮಾರನೆಂದು ನೀವೇ ಹೇಳಿದ್ದೀರಿ” ಎಂದು ಹೇಳಿದನು.
71 Եւ անոնք ըսին. «Ա՛լ ի՞նչ պէտք ունինք վկայութեան, որովհետեւ մենք իսկ լսեցինք անոր բերանէն»:
೭೧ಅದಕ್ಕೆ ಅವರು, “ನಮಗೆ ಸಾಕ್ಷಿ ಇನ್ನು ಯಾತಕ್ಕೆ ಬೇಕು? ನಾವೇ ಇವನ ಬಾಯಿಂದ ಕೇಳಿದೆವಲ್ಲಾ” ಅಂದರು.

< ՂՈԻԿԱՍ 22 >