< ՄԱՏԹԷՈՍ 15 >

1 Այն ատեն Յիսուսի եկան դպիրներ ու Փարիսեցիներ, որոնք Երուսաղէմէն էին, եւ ըսին.
ತರುವಾಯ ಯೆರೂಸಲೇಮಿನಿಂದ ಫರಿಸಾಯರೂ, ಶಾಸ್ತ್ರಿಗಳೂ ಯೇಸುವಿನ ಬಳಿಗೆ ಬಂದು,
2 «Ինչո՞ւ քու աշակերտներդ զանց կ՚ընեն նախնիքներուն աւանդութիւնը, քանի որ չեն լուար իրենց ձեռքերը՝ երբ հաց կ՚ուտեն»:
“ನಿನ್ನ ಶಿಷ್ಯರು ಹಿರಿಯರ ಸಂಪ್ರದಾಯವನ್ನು ಏಕೆ ಉಲ್ಲಂಘಿಸುತ್ತಾರೆ? ಅವರು ತಿನ್ನುವಾಗ ತಮ್ಮ ಕೈ ತೊಳೆದುಕೊಳ್ಳುವುದಿಲ್ಲ” ಎಂದು ಕೇಳಿದರು.
3 Ինք ալ պատասխանեց անոնց. «Հապա դո՛ւք ինչո՞ւ զանց կ՚ընէք Աստուծոյ պատուիրանը՝ ձեր աւանդութեան պատճառով:
ಅದಕ್ಕೆ ಆತನು ಅವರಿಗೆ ಪ್ರತ್ಯುತ್ತರವಾಗಿ ಹೇಳಿದ್ದೇನೆಂದರೆ, “ನೀವು ಸಹ ನಿಮ್ಮ ಸಂಪ್ರದಾಯದ ನಿಮಿತ್ತವಾಗಿ ದೇವರ ಆಜ್ಞೆಯನ್ನು ಏಕೆ ಉಲ್ಲಂಘಿಸುತ್ತೀರಿ?
4 Արդարեւ Աստուած պատուիրեց. “Պատուէ՛ հայրդ ու մայրդ.
ಹೇಗೆಂದರೆ‘ತಂದೆತಾಯಿಗಳನ್ನು ಸನ್ಮಾನಿಸಬೇಕೆಂತಲೂತಂದೆಯನ್ನಾಗಲಿ ತಾಯಿಯನ್ನಾಗಲಿ ದೂಷಿಸುವವನು ಸಾಯಲೇಬೇಕೆಂತಲೂ’ ದೇವರು ಹೇಳಿದ್ದಾನೆ.
5 եւ ո՛վ որ անիծէ իր հայրը կամ մայրը, մահո՛վ թող վախճանի”:
ನೀವೋ, ‘ಯಾವನಾದರೂ ತನ್ನ ತಂದೆಯನಾಗಲಿ, ತಾಯಿಯನ್ನಾಗಲಿ, ನೋಡಿ ನಾನು ನಿಮ್ಮ ಸಂರಕ್ಷಣೆಗಾಗಿ ಕೊಡತಕ್ಕದ್ದನ್ನು ದೇವರಿಗೆ ಮುಡಿಪುಮಾಡಿದ್ದೇನೆ’ ಎಂದು ಹೇಳಿದರೆ,
6 Բայց դուք կ՚ըսէք. “Ո՛վ որ իր հօր կամ մօր ըսէ թէ "ի՛նչ օգուտ որ պիտի ստանաս ինձմէ՝ Աստուծոյ տալիք ընծայ է", եւ իր հայրը կամ մայրը չպատուէ՝ ազատ է”: Ա՛յսպէս՝ անվաւեր դարձուցած էք Աստուծոյ պատուիրանը՝ ձեր աւանդութեան պատճառով:
ಅವನು ‘ತನ್ನ ತಂದೆತಾಯಿಗಳನ್ನು ಸನ್ಮಾನಿಸಬೇಕಾಗಿಲ್ಲ’ ಅನ್ನುತ್ತೀರಿ. ಹೀಗೆ ನಿಮ್ಮ ಸಂಪ್ರದಾಯದ ಸಲುವಾಗಿ ದೇವರ ವಾಕ್ಯವನ್ನು ನಿರರ್ಥಕ ಮಾಡಿದ್ದೀರಿ.
7 Կեղծաւորնե՛ր, Եսայի ճի՛շդ մարգարէացաւ ձեր մասին՝ ըսելով.
ಕಪಟಿಗಳೇ, ನಿಮ್ಮ ಕುರಿತು ಯೆಶಾಯನು ಸರಿಯಾಗಿ ಪ್ರವಾದಿಸಿ, ಅವನು ಹೇಳಿರುವುದೇನೆಂದರೆ,
8 “Այս ժողովուրդը միայն շրթունքո՛վ կը պատուէ զիս, բայց իրենց սիրտը հեռու է ինձմէ.
“ಈ ಜನರು ತಮ್ಮ ತುಟಿಗಳಿಂದ ನನ್ನನ್ನು ಸನ್ಮಾನಿಸುತ್ತಾರೆ ಆದರೆ ಅವರ ಹೃದಯವು ನನ್ನಿಂದ ದೂರವಾಗಿದೆ.
9 եւ պարապ տեղը կը պաշտեն զիս՝ մարդոց պատուէրները սորվեցնելով իբր վարդապետութիւն”»:
ಮನುಷ್ಯರು ಕಲ್ಪಿಸಿದ ಕಟ್ಟಳೆಗಳನ್ನೇ ಅವರು ಉಪದೇಶವಾಗಿ ಬೋಧಿಸುತ್ತಿರುವುದರಿಂದ ನನ್ನನ್ನು ವ್ಯರ್ಥವಾಗಿ ಆರಾಧಿಸುವರು” ಎಂಬುದೇ.
10 Եւ բազմութիւնը կանչելով իրեն՝ ըսաւ անոնց. «Լսեցէ՛ք ու հասկցէ՛ք.
೧೦ಆ ಮೇಲೆ ಯೇಸು ಜನರ ಗುಂಪನ್ನು ಹತ್ತಿರಕ್ಕೆ ಕರೆದು ಅವರಿಗೆ, “ಕೇಳಿ ತಿಳಿದುಕೊಳ್ಳಿರಿ,
11 ո՛չ թէ ինչ որ կը մտնէ բերանը՝ կը պղծէ մարդը, հապա ինչ որ կ՚ելլէ բերանէն՝ անիկա՛ կը պղծէ մարդը»:
೧೧ಬಾಯೊಳಕ್ಕೆ ಹೋಗುವಂಥದ್ದು ಮನುಷ್ಯನನ್ನು ಅಶುದ್ಧಿಗೊಳಿಸುವುದಿಲ್ಲ. ಬಾಯೊಳಗಿಂದ ಹೊರಗೆ ಬರುವಂಥ ಮಾತು ಮನುಷ್ಯನನ್ನು ಅಶುದ್ಧಗೊಳಿಸುವುದು” ಎಂದು ಹೇಳಿದನು.
12 Այն ատեն իր աշակերտները մօտեցան եւ ըսին իրեն. «Գիտե՞ս թէ Փարիսեցիները գայթակղեցան, երբ լսեցին այդ խօսքը»:
೧೨ಆಗ ಶಿಷ್ಯರು ಬಂದು ಆತನನ್ನು, “ಫರಿಸಾಯರು ಈ ಮಾತನ್ನು ಕೇಳಿ ಬೇಸರಗೊಂಡರೆಂದು ನಿನಗೆ ಗೊತ್ತಾಯಿತೋ” ಎಂದು ಕೇಳಿದರು.
13 Ան ալ պատասխանեց. «Ամէն տունկ՝ որ իմ երկնաւոր Հայրս չէ տնկած, պիտի խլուի:
೧೩ಅದಕ್ಕೆ ಆತನು “ಪರಲೋಕದ ನನ್ನ ತಂದೆಯು ನೆಡದೆ ಇರುವ ಗಿಡಗಳನ್ನೆಲ್ಲಾ ಬೇರುಸಹಿತ ಕಿತ್ತುಹಾಕಲಾಗುವುದು.
14 Թողուցէ՛ք զանոնք. իրենք կոյր են, ու կոյրերու առաջնորդ: Եթէ կոյրը առաջնորդէ կոյրը, երկուքն ալ փոսը պիտի իյնան»:
೧೪ಅವರನ್ನು ಬಿಡಿರಿ, ಅವರುಕುರುಡರಿಗೆ ದಾರಿ ತೋರಿಸುವವರು ಕುರುಡರ ಹಾಗಿದ್ದಾರೆ. ಕುರುಡನು ಕುರುಡನಿಗೆ ದಾರಿ ತೋರಿಸಿದರೆ ಅವರಿಬ್ಬರೂ ಕುಣಿಯೊಳಗೆ ಬೀಳುವರು” ಅಂದನು.
15 Պետրոս ըսաւ անոր. «Բացատրէ՛ մեզի այս առակը»:
೧೫ಆಗ ಪೇತ್ರನು, “ಈ ಸಾಮ್ಯವನ್ನು ನಮಗೆ ವಿವರಿಸಿ ಹೇಳು” ಅಂದನು,
16 Յիսուս ըսաւ. «Դո՞ւք ալ տակաւին անխելք էք.
೧೬ಅದಕ್ಕೆ ಯೇಸು, “ನೀವೂ ಕೂಡಾ ಇನ್ನೂ ತಿಳಿವಳಿಕೆ ಇಲ್ಲದವರಾಗಿದ್ದೀರಾ?
17 չէ՞ք հասկնար թէ ամէն ինչ որ կը մտնէ բերանը, կը պարունակուի փորին մէջ, ու կը ձգուի արտաքնոցը:
೧೭ಬಾಯೊಳಕ್ಕೆ ಹೋಗುವಂಥದ್ದು ಹೊಟ್ಟೆಯಲ್ಲಿ ಸೇರಿ ವಿಸರ್ಜಿತವಾಗುತ್ತದೆಂದು ನಿಮಗೆ ತಿಳಿಯಲಿಲ್ಲವೋ?
18 Իսկ ինչ որ բերանէն դուրս կ՚ելլէ՝ սիրտէ՛ն յառաջ կու գայ, եւ անիկա՛ կը պղծէ մարդը:
೧೮ಆದರೆ ಬಾಯೊಳಗಿಂದ ಹೊರ ಬರುವಂಥವುಗಳು ಹೃದಯದಿಂದ ಬರುತ್ತವೆ. ಇವೇ ಮನುಷ್ಯನನ್ನು ಅಶುದ್ಧಿಮಾಡುವವು.
19 Որովհետեւ սիրտէ՛ն կ՚ելլեն չար մտածումներ, սպանութիւններ, շնութիւններ, պոռնկութիւններ, գողութիւններ, սուտ վկայութիւններ ու հայհոյութիւններ:
೧೯ಏಕೆಂದರೆ ಹೃದಯದಿಂದ ಕೆಟ್ಟ ಆಲೋಚನೆಗಳು, ಕೊಲೆ, ವ್ಯಭಿಚಾರ, ಜಾರತ್ವ, ಕಳ್ಳತನ, ಸುಳ್ಳುಸಾಕ್ಷಿ ಮತ್ತು ದೂಷಣೆಗಳು ಹೊರಟು ಬರುತ್ತವೆ.
20 Ասո՛նք են որ կը պղծեն մարդը, բայց անլուայ ձեռքով հաց ուտելը՝ չի պղծեր մարդը»:
೨೦ಇಂಥವುಗಳೇ ಮನುಷ್ಯನನ್ನು ಅಶುದ್ಧಿಗೊಳಿಸುತ್ತವೆ. ಆದರೆ ಕೈ ತೊಳೆದುಕೊಳ್ಳದೆ ಊಟಮಾಡುವುದು ಮನುಷ್ಯನನ್ನು ಅಶುದ್ಧಿಗೊಳಿಸುವುದಿಲ್ಲ” ಅಂದನು.
21 Յիսուս անկէ մեկնելով՝ գնաց Տիւրոսի ու Սիդոնի երկրամասերը:
೨೧ಅನಂತರ ಯೇಸು ಅಲ್ಲಿಂದ ಹೊರಟು ತೂರ್ ಸೀದೋನ್ ಪಟ್ಟಣಗಳ ಪ್ರಾಂತ್ಯಗಳಿಗೆ ಹೋದನು.
22 Եւ ահա՛ քանանացի կին մը, այդ հողամասերէն ելած, կը պոռար անոր. «Ողորմէ՜ ինծի, Տէ՛ր, Դաւիթի՛ որդի, աղջիկս սաստիկ կը չարչարուի դեւէն»:
೨೨ಆ ಸೀಮೆಯಿಂದ ಕಾನಾನ್ಯಳಾದ ಸ್ತ್ರೀಯೊಬ್ಬಳು ಹೊರಟು ಬಂದು, “ಕರ್ತನೇ, ದಾವೀದನ ಕುಮಾರನೇ, ನನ್ನ ಮೇಲೆ ಕರುಣೆಯಿಡು, ನನ್ನ ಮಗಳಿಗೆ ದೆವ್ವಹಿಡಿದು ಬಹಳ ಯಾತನೆಪಡುತ್ತಿದ್ದಾಳೆ” ಎಂದು ಕೂಗಿಕೊಂಡಳು.
23 Ինք ո՛չ մէկ խօսքով պատասխանեց անոր. իսկ իր աշակերտները մօտենալով՝ կը թախանձէին իրեն ու կ՚ըսէին. «Արձակէ՛ զայն, որովհետեւ կ՚աղաղակէ մեր ետեւէն»:
೨೩ಆದರೆ ಆತನು ಆಕೆಗೆ ಏನೂ ಉತ್ತರ ಕೊಡಲಿಲ್ಲ. ಆಗ ಆತನ ಶಿಷ್ಯರು ಬಂದು, “ಅವಳು ನಮ್ಮ ಹಿಂದೆ ಕೂಗಿಕೊಂಡು ಬರುತ್ತಿದ್ದಾಳೆ. ಆಕೆಯನ್ನು ಕಳುಹಿಸಿಬಿಡು” ಎಂದು ಆತನನ್ನು ಬೇಡಿಕೊಂಡರು.
24 Ինք ալ պատասխանեց. «Ես ղրկուեցայ միայն Իսրայէլի տան կորսուած ոչխարներուն»:
೨೪ಆದರೆ ಯೇಸು ಹೇಳಿದ್ದೇನೆಂದರೆ “ಕಳೆದುಹೋದ ಕುರಿಗಳಂತಿರುವ ಇಸ್ರಾಯೇಲ್ ಮನೆತನದವರ ಬಳಿಗೇ ಹೊರತು ಮತ್ತಾರ ಬಳಿಗೂ ನಾನು ಕಳುಹಿಸಲ್ಪಟ್ಟವನಲ್ಲ” ಅಂದನು.
25 Բայց անիկա եկաւ, երկրպագեց անոր եւ ըսաւ. «Տէ՛ր, օգնէ՛ ինծի»:
೨೫ಆಗ ಆಕೆ ಬಂದು ಆತನ ಮುಂದೆ ಅಡ್ಡ ಬಿದ್ದು, “ಕರ್ತನೇ ನನಗೆ ಸಹಾಯಮಾಡು” ಅಂದಳು.
26 Ան ալ պատասխանեց. «Լաւ չէ առնել զաւակներուն հացը ու նետել շուներուն»:
೨೬ಅದಕ್ಕಾತನು, “ಮಕ್ಕಳ ರೊಟ್ಟಿಯನ್ನು ತೆಗೆದುಕೊಂಡು ನಾಯಿಮರಿಗಳಿಗೆ ಹಾಕುವುದು ಸರಿಯಲ್ಲ” ಎಂದು ಉತ್ತರಕೊಟ್ಟನು.
27 Անիկա ալ ըսաւ. «Այո՛, Տէ՛ր. սակայն շուները կը կերակրուին իրենց տիրոջ սեղանէն ինկած փշրանքներով»:
೨೭ಆಕೆಯು, “ಹೌದು, ಕರ್ತನೇ, ಆದರೆ ನಾಯಿಮರಿಗಳಂತೂ ತಮ್ಮ ಯಜಮಾನನ ಮೇಜಿನಿಂದ ಬೀಳುವ ರೊಟ್ಟಿಯ ತುಂಡುಗಳನ್ನು ತಿನ್ನುತ್ತವಲ್ಲಾ” ಅಂದಳು.
28 Այն ատեն Յիսուս պատասխանեց անոր. «Ո՛վ կին, մեծ է հաւատքդ. թող ըլլայ քեզի՝ ի՛նչ որ կ՚ուզես»: Եւ նոյն ժամուն անոր աղջիկը բժշկուեցաւ:
೨೮ಆಗ ಯೇಸು ಆಕೆಗೆ, “ಸ್ತ್ರೀಯೇ ನಿನ್ನ ನಂಬಿಕೆ ದೊಡ್ಡದು. ನಿನ್ನ ಇಷ್ಟದಂತೆಯೇ ನಿನಗಾಗಲಿ” ಎಂದು ಉತ್ತರಕೊಟ್ಟನು. ಅದೇ ಗಳಿಗೆಯಲ್ಲಿ ಆಕೆಯ ಮಗಳು ಸ್ವಸ್ಥವಾದಳು.
29 Յիսուս անկէ մեկնեցաւ. երբ Գալիլեայի ծովեզերքը հասաւ՝ լեռը ելլելով նստաւ:
೨೯ಯೇಸು ಅಲ್ಲಿಂದ ಹೊರಟು ಗಲಿಲಾಯ ಸಮುದ್ರದ ಬಳಿಗೆ ಬಂದನು. ಆಗ ಆತನು ಒಂದು ಬೆಟ್ಟವನ್ನು ಹತ್ತಿ ಕುಳಿತುಕೊಂಡನು.
30 Ու մեծ բազմութիւններ եկան իրեն, որոնք ունէին իրենց հետ կաղեր, կոյրեր, համրեր, հաշմանդամներ եւ շատ ուրիշներ, ու ձգեցին զանոնք Յիսուսի ոտքը: Ան ալ բուժեց զանոնք.
೩೦ಆಗ ಜನರು ದೊಡ್ಡ ಗುಂಪುಗಳಾಗಿ ಆತನ ಬಳಿಗೆ ಬಂದುದಲ್ಲದೆ ಕುಂಟರು, ಕುರುಡರು, ಮೂಕರು, ಕೈಕಾಲಿಲ್ಲದವರು ಈ ಮುಂತಾದ ಅನೇಕರನ್ನು ತಮ್ಮೊಂದಿಗೆ ಕರೆತಂದು ಅವರನ್ನು ಆತನ ಪಾದಗಳ ಬಳಿಯಲ್ಲಿ ಬಿಟ್ಟರು. ಆತನು ಅವರನ್ನು ಸ್ವಸ್ಥಮಾಡಿದನು.
31 այնպէս որ բազմութիւնը զմայլեցաւ՝ տեսնելով որ համրերը կը խօսէին, հաշմանդամները կը բժշկուէին, կաղերը կը քալէին եւ կոյրերը կը տեսնէին. ու կը փառաբանէին Իսրայէլի Աստուածը:
೩೧ಮೂಕರಾಗಿದ್ದವರು ಮಾತನಾಡುವುದನ್ನೂ ಕೈಕಾಲಿಲ್ಲದವರು ಸ್ವಸ್ಥವಾದದ್ದನ್ನೂ, ಕುಂಟರು ನಡೆದಾಡುವುದನ್ನೂ, ಕುರುಡರು ನೋಡುವುದನ್ನೂ ಜನರು ಕಂಡು ಆಶ್ಚರ್ಯಪಟ್ಟು ಇಸ್ರಾಯೇಲ್ಯರ ದೇವರನ್ನು ಕೊಂಡಾಡಿದರು.
32 Յիսուս՝ քովը կանչելով իր աշակերտները՝ ըսաւ. «Կը գթամ այդ բազմութեան վրայ, որովհետեւ արդէն երեք օրէ ի վեր քովս են, եւ ուտելիք ոչի՛նչ ունին: Չեմ ուզեր անօթի արձակել զանոնք, որպէսզի ճամբան չպարտասին»:
೩೨ಆಗ ಯೇಸು ತನ್ನ ಶಿಷ್ಯರನ್ನು ಹತ್ತಿರಕ್ಕೆ ಕರೆದು ಅವರಿಗೆ, “ನಾನು ಈ ಜನರನ್ನು ನೋಡಿ ಕನಿಕರಪಡುತ್ತೇನೆ. ಏಕೆಂದರೆ ಅವರು ಮೂರು ದಿನಗಳಿಂದಲೂ ನನ್ನ ಜೊತೆಯಲ್ಲಿದ್ದಾರೆ. ಅವರಿಗೆ ತಿನ್ನುವುದಕ್ಕೆ ಏನೂ ಇಲ್ಲ. ಅವರನ್ನು ಹಸಿವಿನಿಂದ ಕಳುಹಿಸಿಬಿಡುವುದಕ್ಕೆ ನನಗೆ ಇಷ್ಟವಿಲ್ಲ. ಅವರು ದಾರಿಯಲ್ಲಿ ಬಳಲಿ ಹೋದಾರು” ಎಂದು ಹೇಳಿದನು.
33 Աշակերտները ըսին անոր. «Մենք անապատին մէջ ուրկէ՞ պիտի ունենանք այնչափ հաց, որ կշտացնենք ա՛յսչափ մեծ բազմութիւն մը»:
೩೩ಶಿಷ್ಯರು ಆತನಿಗೆ, “ಇಷ್ಟು ದೊಡ್ಡ ಜನರ ಗುಂಪನ್ನು ತೃಪ್ತಿಪಡಿಸಲಾಗುವಷ್ಟು ರೊಟ್ಟಿಯು ಈ ಅಡವಿಯಲ್ಲಿ ನಮಗೆ ಎಲ್ಲಿಂದ ಸಿಕ್ಕೀತು?” ಎಂದು ಹೇಳಿದರು.
34 Յիսուս ըսաւ անոնց. «Քանի՞ նկանակ ունիք»: Անոնք ալ ըսին. «Եօթը, ու քանի մը մանր ձուկ»:
೩೪ಅದಕ್ಕೆ ಯೇಸು, “ನಿಮ್ಮಲ್ಲಿ ಎಷ್ಟು ರೊಟ್ಟಿಗಳಿವೆ?” ಎಂದು ಕೇಳಿದ್ದಕ್ಕೆ ಅವರು, “ಏಳು ರೊಟ್ಟಿಗಳಿವೆ ಮತ್ತು ಕೆಲವು ಸಣ್ಣ ಮೀನುಗಳು ಅವೆ” ಅಂದರು.
35 Հրամայեց բազմութեան՝ որ նստին գետինին վրայ:
೩೫ಆಗ ಆತನು ಜನರ ಗುಂಪಿಗೆ, ನೆಲದ ಮೇಲೆ ಕುಳಿತುಕೊಳ್ಳಿರಿ ಎಂದು ಅಪ್ಪಣೆ ಕೊಟ್ಟನು.
36 Առաւ եօթը նկանակներն ու ձուկերը, շնորհակալ եղաւ, կտրեց եւ տուաւ աշակերտներուն, աշակերտներն ալ՝ բազմութեան:
೩೬ಆತನು ಆ ಏಳು ರೊಟ್ಟಿಗಳನ್ನೂ ಆ ಮೀನುಗಳನ್ನೂ ತೆಗೆದುಕೊಂಡು ದೇವರಿಗೆ ಸ್ತೋತ್ರ ಮಾಡಿ ಅವುಗಳನ್ನು ಮುರಿದು ಶಿಷ್ಯರಿಗೆ ಕೊಟ್ಟನು. ಶಿಷ್ಯರು ಜನರಿಗೆ ಹಂಚಿಕೊಟ್ಟರು.
37 Բոլորը կերան ու կշտացան, եւ վերցնելով աւելցած բեկորները՝ եօթը զամբիւղ լեցուցին:
೩೭ಆ ಜನರೆಲ್ಲರೂ ಊಟಮಾಡಿ ತೃಪ್ತರಾದರು. ಉಳಿದ ತುಂಡುಗಳನ್ನು ಕೂಡಿಸಲಾಗಿ ಏಳು ಪುಟ್ಟಿಗಳು ತುಂಬಿದವು.
38 Անոնք որ կերան՝ չորս հազար այր մարդիկ էին, կիներէն ու մանուկներէն զատ:
೩೮ಊಟಮಾಡಿದವರು ಹೆಂಗಸರು ಮಕ್ಕಳು ಅಲ್ಲದೆ ಗಂಡಸರೇ ನಾಲ್ಕು ಸಾವಿರವಿದ್ದರು.
39 Երբ արձակեց բազմութիւնը, նաւ մտաւ եւ գնաց Մագդաղայի հողամասը:
೩೯ತರುವಾಯ ಆತನು ಆ ಜನರ ಗುಂಪುಗಳನ್ನು ಕಳುಹಿಸಿ ಬಿಟ್ಟು ದೋಣಿಯನ್ನು ಹತ್ತಿ ಮಗದಾನ್ ಸೀಮೆಗೆ ಹೋದನು.

< ՄԱՏԹԷՈՍ 15 >