< ՄԱՏԹԷՈՍ 18 >

1 Նոյն ժամուն աշակերտները եկան Յիսուսի քով ու ըսին. «Ո՞վ է մեծագոյնը երկինքի թագաւորութեան մէջ»:
ಆದೇ ವೇಳೆಯಲ್ಲಿ ಶಿಷ್ಯರು ಯೇಸುವಿನ ಬಳಿ ಬಂದು, “ಪರಲೋಕ ರಾಜ್ಯದಲ್ಲಿ ಯಾವನು ದೊಡ್ಡವನು?” ಎಂದು ಕೇಳಿದರು.
2 Յիսուս ալ կանչեց իրեն մանուկ մը, կայնեցուց զայն անոնց մէջտեղ,
ಆತನು ಚಿಕ್ಕ ಮಗುವನ್ನು ಹತ್ತಿರಕ್ಕೆ ಕರೆದು ಅವರ ನಡುವೆ ನಿಲ್ಲಿಸಿ,
3 եւ ըսաւ. «Ճշմա՛րտապէս կը յայտարարեմ ձեզի. “Եթէ դարձի չգաք ու մանուկներու պէս չըլլաք, բնա՛ւ պիտի չմտնէք երկինքի թագաւորութիւնը”:
ಅವರಿಗೆ, “ನಿಮ್ಮ ಮನಸ್ಸು ಪರಿವರ್ತನೆಕೊಂಡು ಚಿಕ್ಕ ಮಕ್ಕಳಂತೆ ಆಗದೇ ಹೋದರೆ ನೀವು ಪರಲೋಕ ರಾಜ್ಯದಲ್ಲಿ ಪ್ರವೇಶಿಸುವುದೇ ಇಲ್ಲವೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.
4 Ուրեմն ո՛վ որ կը խոնարհեցնէ ինքզինք՝ այս փոքր մանուկին պէս, անիկա՛ է մեծագոյնը երկինքի թագաւորութեան մէջ.
ಹೀಗಿರುವುದರಿಂದ ಯಾವನು ಈ ಚಿಕ್ಕ ಮಗುವಿನಂತೆ ತನ್ನನ್ನು ತಾನೇ ತಗ್ಗಿಸಿಕೊಳ್ಳುತ್ತಾನೋ ಅವನೇ ಪರಲೋಕ ರಾಜ್ಯದಲ್ಲಿ ದೊಡ್ಡವನು.
5 եւ ո՛վ որ կ՚ընդունի այսպիսի մանուկ մը՝ իմ անունովս, զի՛ս կ՚ընդունի»:
ಇದಲ್ಲದೆ ಯಾವನಾದರೂ ನನ್ನ ಹೆಸರಿನಲ್ಲಿ ಇಂಥ ಒಂದು ಚಿಕ್ಕ ಮಗುವನ್ನು ಸ್ವೀಕರಿಸುವನೋ ನನ್ನನ್ನೇ ಸ್ವೀಕರಿಸುವವನಾಗಿದ್ದಾನೆ.
6 «Ո՛վ որ գայթակղեցնէ մէկը այս պզտիկներէն՝ որոնք ինծի կը հաւատան, աւելի օգտակար պիտի ըլլար անոր՝ որ իշու ջաղացքի քար մը կախուէր իր վիզէն, ու ծովուն անդունդը ընկղմէր:
ಆದರೆನನ್ನಲ್ಲಿ ನಂಬಿಕೆಯಿಡುವ ಈ ಚಿಕ್ಕವರಲ್ಲಿ ಒಬ್ಬನಿಗೆ ಯಾವನಾದರೂ ಅಡ್ಡಿಯನ್ನುಂಟುಮಾಡಿದರೆ ಅಂಥವನ ಕೊರಳಿಗೆ ದೊಡ್ಡ ಬೀಸುವ ಕಲ್ಲನ್ನು ಕಟ್ಟಿ ಅವನನ್ನು ಆಳವಾದ ಸಮುದ್ರದಲ್ಲಿ ಮುಳುಗಿಸಿಬಿಡುವುದು ಅವನಿಗೆ ಉತ್ತಮ.
7 Վա՜յ աշխարհի՝ գայթակղութիւններու պատճառով. որովհետեւ հարկ է որ գայթակղութիւնները գան, բայց վա՜յ այն մարդուն՝ որուն միջոցով գայթակղութիւնը կու գայ:
“ತೊಡಕುಗಳ ನಿಮಿತ್ತ ಲೋಕಕ್ಕೆ ಅಯ್ಯೋ, ತೊಡಕುಗಳು ಬರುವುದು ಅನಿವಾರ್ಯ, ಆದಾಗ್ಯೂ ಯಾವ ಮನುಷ್ಯನಿಂದ ತೊಡಕು ಬರುತ್ತದೋ ಅವನಿಗೆ ಅಯ್ಯೋ.
8 Ուրեմն եթէ ձեռքդ կամ ոտքդ կը գայթակղեցնէ քեզ, կտրէ՛ զայն ու նետէ՛ քեզմէ. աւելի լաւ է քեզի՝ կա՛ղ կամ պակասաւո՛ր մտնել կեանքը, քան երկու ձեռք կամ երկու ոտք ունենալ եւ նետուիլ յաւիտենական կրակին մէջ: (aiōnios g166)
ನಿನ್ನ ಕೈಯಾಗಲಿ, ನಿನ್ನ ಕಾಲಾಗಲಿ ನಿನ್ನನ್ನು ಪಾಪದಲ್ಲಿ ಸಿಕ್ಕಿಸುವುದಾದರೆ ಅದನ್ನು ಕಡಿದು ಬಿಸಾಡಿಬಿಡು, ಎರಡು ಕೈ, ಎರಡು ಕಾಲು ಉಳ್ಳವನಾಗಿ ನಿತ್ಯ ಬೆಂಕಿಯಲ್ಲಿ ಹಾಕಲ್ಪಡುವುದಕ್ಕಿಂತ ಅಂಗಹೀನನಾಗಿ ಅಥವಾ ಕುಂಟನಾಗಿ ಜೀವದಲ್ಲಿ ಸೇರುವುದು ನಿನಗೆ ಉತ್ತಮ. (aiōnios g166)
9 Եթէ աչքդ կը գայթակղեցնէ քեզ, հանէ՛ զայն ու նետէ՛ քեզմէ. աւելի լաւ է քեզի՝ մէ՛կ աչքով մտնել կեանքը, քան երկու աչք ունենալ եւ նետուիլ գեհենի կրակին մէջ»: (Geenna g1067)
ನಿನ್ನ ಕಣ್ಣು ನಿನ್ನನ್ನು ಪಾಪದಲ್ಲಿ ಸಿಕ್ಕಿಸುವುದಾದರೆ ಅದನ್ನು ಕಿತ್ತು ಬಿಸಾಡಿಬಿಡು, ಎರಡು ಕಣ್ಣುಳ್ಳವನಾಗಿ ಅಗ್ನಿನರಕದಲ್ಲಿ ಹಾಕಿಸಿಕೊಳ್ಳುವುದಕ್ಕಿಂತ ಒಂದೇ ಕಣ್ಣುಳ್ಳವನಾಗಿ ಜೀವದಲ್ಲಿ ಸೇರುವುದು ನಿನಗೆ ಉತ್ತಮ. (Geenna g1067)
10 «Ուշադի՛ր եղէք որ չարհամարհէք այս պզտիկներէն մէկը. քանի որ կ՚ըսեմ ձեզի թէ երկինքի մէջ անոնց հրեշտակները ամէն ատեն կը տեսնեն երեսը իմ Հօրս՝ որ երկինքն է:
೧೦ಈ ಚಿಕ್ಕವರಲ್ಲಿ ಒಬ್ಬನನ್ನಾದರೂ ತಾತ್ಸಾರಮಾಡದಂತೆ ನೋಡಿಕೊಳ್ಳಿರಿ. ಏಕೆಂದರೆಪರಲೋಕದಲ್ಲಿ ಇವರ ದೂತರು ನನ್ನ ಸ್ವರ್ಗೀಯ ತಂದೆಯ ಮುಖವನ್ನು ಯಾವಾಗಲೂ ನೋಡುತ್ತಿರುತ್ತಾರೆ ಎಂದು ನಿಮಗೆ ಹೇಳುತ್ತೇನೆ.
11 Որովհետեւ մարդու Որդին եկաւ կորսուա՛ծը փրկելու:
೧೧ಮನುಷ್ಯಕುಮಾರನು ಕೆಟ್ಟು ಹೋಗಿರುವುದನ್ನು ಹುಡುಕಿ ರಕ್ಷಿಸುವುದಕ್ಕೆ ಬಂದನು.
12 Ի՞նչ է ձեր կարծիքը. եթէ մարդ մը ունենայ հարիւր ոչխար եւ անոնցմէ մէկը մոլորի, իննսունինը ոչխարները լեռները չի՞ թողուր ու՝՝ երթար՝ փնտռելու մոլորածը:
೧೨“ನಿಮ್ಮಲ್ಲಿಒಬ್ಬ ಮನುಷ್ಯನಿಗೆ ನೂರು ಕುರಿಗಳು ಇರಲಾಗಿ ಅವುಗಳಲ್ಲಿ ಒಂದು ಕುರಿಯು ತಪ್ಪಿಸಿಕೊಂಡು ಹೋಯಿತೆಂದು ಇಟ್ಟುಕೊಳ್ಳಿ. ಆಗ ನಿಮಗೇನು ಅನ್ನಿಸುತ್ತದೆ? ಅವನು ಉಳಿದ ತೊಂಬತ್ತೊಂಬತ್ತು ಕುರಿಗಳನ್ನು ಬೆಟ್ಟದಲ್ಲಿ ಬಿಟ್ಟು ತಪ್ಪಿಸಿಕೊಂಡು ಹೋದ ಆ ಒಂದು ಕುರಿಯನ್ನು ಹುಡುಕಿಕೊಂಡು ಹೋಗುವುದಿಲ್ಲವೇ?
13 Եթէ պատահի որ գտնէ զայն, ճշմա՛րտապէս կը յայտարարեմ ձեզի թէ աւելի՛ կ՚ուրախանայ անոր համար, քան իննսունիննին՝ որոնք մոլորած չէին:
೧೩ಅದು ಅವನಿಗೆ ಸಿಕ್ಕಿದರೆ, ತಪ್ಪಿಸಿಕೊಳ್ಳದೆ ಇರುವ ತೊಂಬತ್ತೊಂಬತ್ತು ಕುರಿಗಳಿಗಿಂತ ಆ ಒಂದು ಕುರಿಗೋಸ್ಕರ ತುಂಬಾ ಸಂತೋಷಪಡುವನೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.
14 Ա՛յսպէս՝ ձեր երկնաւոր Հայրը չի հաճիր որ այս պզտիկներէն մէ՛կը կորսուի»:
೧೪ಹಾಗೆಯೇ ಈ ಚಿಕ್ಕವರಲ್ಲಿ ಒಬ್ಬನಾದರೂ ನಾಶವಾಗಿಹೋಗುವುದು ಪರಲೋಕದಲ್ಲಿರುವ ನಿಮ್ಮ ತಂದೆಯ ಚಿತ್ತವಲ್ಲ.
15 «Եթէ եղբայրդ մեղանչէ քեզի դէմ, գնա՛ եւ ըսէ՛ իրեն իր յանցանքը՝ երբ դուն ու ան մինակ էք. եթէ մտիկ ընէ քեզի՝ շահեցա՛ր եղբայրդ:
೧೫“ನಿನ್ನ ಸಹೋದರನು ನಿನ್ನ ವಿರುದ್ಧತಪ್ಪು ಮಾಡಿದರೆ, ನೀನು ಹೋಗಿ ಅವನು ಒಬ್ಬನೇ ಇರುವಾಗ ಅವನ ತಪ್ಪನ್ನು ಅವನಿಗೆ ಅರಿವಾಗುವಂತೆ ತಿಳಿಸು. ಅವನು ನಿನ್ನ ಮಾತನ್ನು ಕೇಳಿದರೆ ನಿನ್ನ ಸಹೋದರನನ್ನು ನೀನು ಸಂಪಾದಿಸಿಕೊಂಡಿರುವಿ.
16 Բայց եթէ մտիկ չընէ քեզի, ա՛ռ քեզի հետ մէկ կամ երկու հոգի եւս, որպէսզի ամէն խօսք հաստատուի երկու կամ երեք վկաներու բերանով:
೧೬ಆದರೆ ಅವನು ನಿನ್ನ ಮಾತು ಕೇಳದೇ ಹೋದರೆಎರಡು ಮೂರು ಸಾಕ್ಷಿಗಳ ಬಾಯಿಂದ ಪ್ರತಿಯೊಂದು ಮಾತು ಸ್ಥಿರಪಡುವ ಹಾಗೆ ಒಬ್ಬನನ್ನು ಅಥವಾ ಇಬ್ಬರನ್ನು ನಿನ್ನ ಸಂಗಡ ಕರೆದುಕೊಂಡು ಹೋಗು.
17 Եթէ անոնց ալ մտիկ չընէ, ըսէ՛ եկեղեցիին. իսկ եթէ եկեղեցիին ալ մտիկ չընէ, թող ըլլայ քեզի հեթանոսի ու մաքսաւորի պէս:
೧೭ಅವನು ಅವರ ಮಾತನ್ನು ಕೇಳದೆ ಹೋದರೆ ಅದನ್ನು ಸಭೆಗೆ ಹೇಳು. ಅವನು ಸಭೆಯ ಮಾತನ್ನು ಕೇಳದೆ ಹೋದರೆ ಅವನು ನಿನಗೆ ಅನ್ಯನಂತೆಯೂಸುಂಕದವನಂತೆಯೂ ಇರಲಿ.
18 Ճշմա՛րտապէս կը յայտարարեմ ձեզի. “Ի՛նչ որ կապէք երկրի վրայ՝ կապուած պիտի ըլլայ երկինքի մէջ, եւ ի՛նչ որ արձակէք երկրի վրայ՝ արձակուած պիտի ըլլայ երկինքի մէջ”:
೧೮“ಭೂಲೋಕದಲ್ಲಿ ನೀವು ಏನೇನು ಕಟ್ಟುತ್ತೀರೋ ಅದು ಪರಲೋಕದಲ್ಲಿಯೂ ಕಟ್ಟಲ್ಪಡುವುದು. ಮತ್ತು ಭೂಲೋಕದಲ್ಲಿ ಏನೇನು ಬಿಚ್ಚುತ್ತೀರೋ ಅದು ಪರಲೋಕದಲ್ಲಿಯೂ ಬಿಚ್ಚಲ್ಪಡುವುದು ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.
19 Դարձեալ կը յայտարարեմ ձեզի. “Եթէ ձեզմէ երկու հոգի համաձայնին երկրի վրայ՝ որեւէ բան խնդրելու, պիտի ըլլայ անոնց իմ Հօրմէս՝ որ երկինքն է”:
೧೯ಇದಲ್ಲದೆ ನಿಮ್ಮಲ್ಲಿ ಇಬ್ಬರು ಬೇಡಿಕೊಳ್ಳತಕ್ಕ ಯಾವುದಾದರು ಒಂದು ವಿಷಯವಾಗಿ ಭೂಲೋಕದಲ್ಲಿ ಒಂದೇ ಮನಸ್ಸುಳ್ಳವರಾಗಿದ್ದರೆ ಅದು ಪರಲೋಕದಲ್ಲಿರುವ ನನ್ನ ತಂದೆಯಿಂದ ಅವರಿಗೆ ಆಗುವುದೆಂದು ನಿಮಗೆ ಹೇಳುತ್ತೇನೆ.
20 Որովհետեւ ուր որ երկու կամ երեք հոգի հաւաքուած ըլլան իմ անունովս, ես հոն եմ՝ անոնց մէջ»:
೨೦ಏಕೆಂದರೆ ಇಬ್ಬರಾಗಲೀ ಮೂವರಾಗಲೀ ನನ್ನ ಹೆಸರಿನಲ್ಲಿ ಎಲ್ಲಿ ಕೂಡಿ ಬರುತ್ತಾರೋ ಅಲ್ಲಿ ಅವರ ಮಧ್ಯದಲ್ಲಿ ನಾನು ಇದ್ದೇನೆ” ಅಂದನು.
21 Այն ատեն Պետրոս մօտեցաւ անոր եւ ըսաւ. «Տէ՛ր, եթէ եղբայրս մեղանչէ ինծի դէմ՝ քանի՞ անգամ ներեմ անոր. մինչեւ եօ՞թը անգամ»:
೨೧ಆಗ ಪೇತ್ರನು ಆತನ ಬಳಿಗೆ ಬಂದು, “ಕರ್ತನೇ ನನ್ನ ಸಹೋದರನು ನನ್ನ ವಿರುದ್ಧ ಪಾಪ ಮಾಡಿದರೆ ನಾನು ಎಷ್ಟು ಸಾರಿ ಅವನನ್ನು ಕ್ಷಮಿಸಬೇಕು? ಏಳು ಸಾರಿಯೋ?” ಎಂದು ಕೇಳಿದನು.
22 Յիսուս ըսաւ անոր. «Քեզի չեմ ըսեր՝ “մինչեւ եօթն անգամ”, հապա՝ “մինչեւ եօթանասուն անգամ եօթը”:
೨೨ಯೇಸು ಅವನಿಗೆ, “ಏಳು ಸಾರಿ ಎಂದಲ್ಲ ಏಳೆಪ್ಪತ್ತು ಸಾರಿ ಎಂದು ನಿನಗೆ ಹೇಳುತ್ತೇನೆ.
23 Ուստի երկինքի թագաւորութիւնը կը նմանի թագաւորի մը, որ ուզեց հաշիւ առնել իր ծառաներէն:
೨೩ಆದುದರಿಂದ ಪರಲೋಕ ರಾಜ್ಯವು ತನ್ನ ಸೇವಕರಿಂದ ಲೆಕ್ಕವನ್ನು ತೆಗೆದುಕೊಳ್ಳಬೇಕೆಂದಿದ್ದ ಒಬ್ಬ ಅರಸನಿಗೆ ಹೋಲಿಕೆಯಾಗಿದೆ.
24 Երբ սկսաւ հաշիւ առնել, տասը հազար տաղանդի պարտապան մը բերուեցաւ իրեն:
೨೪ಅವನು ಲೆಕ್ಕ ತೆಗೆದುಕೊಳ್ಳುವುದಕ್ಕೆ ಪ್ರಾರಂಭಮಾಡಿದಾಗಹತ್ತು ಸಾವಿರ ಬಂಗಾರದ ನಾಣ್ಯ ನೀಡಬೇಕಿದ್ದ ಸೇವಕನನ್ನು ಅವನ ಬಳಿಗೆ ಕರತಂದರು.
25 Բայց ան վճարելու կարողութիւն չունենալով՝ անոր տէրը հրամայեց, որ ան ծախուի, նաեւ անոր կինն ու զաւակները եւ անոր ամբողջ ունեցածը, ու պարտքը վճարուի:
೨೫ಆ ಸಾಲ ತೀರಿಸುವುದಕ್ಕೆ ಅವನಲ್ಲಿ ಏನೂ ಇಲ್ಲದುದರಿಂದ ಅವನ ಒಡೆಯನು ಅವನನ್ನೂ, ಅವನ ಹೆಂಡತಿ, ಮಕ್ಕಳನ್ನೂ ಅವನಿಗಿದ್ದದ್ದೆಲ್ಲವನ್ನೂ ಮಾರಿ ಅದನ್ನು ತೀರಿಸಬೇಕೆಂದು ಅಪ್ಪಣೆ ಮಾಡಿದನು.
26 Իսկ ծառան իյնալով՝ երկրպագեց անոր եւ ըսաւ. “Տէ՛ր, համբերատա՛ր եղիր ինծի հանդէպ, ու ամէ՛նը պիտի վճարեմ քեզի”:
೨೬ಆ ಸೇವಕನು ಮೊಣಕಾಲೂರಿ ತನ್ನ ತಲೆಯನ್ನು ಬಾಗಿ ಅವನಿಗೆ, ‘ಒಡೆಯನೇ, ನನ್ನ ಮೇಲೆ ತಾಳ್ಮೆಯಿರಲಿ, ನಿನ್ನದೆಲ್ಲವನ್ನೂ ನಾನು ಕೊಟ್ಟು ತೀರಿಸುತ್ತೇನೆಂದು’ ಹೇಳಿದನು.
27 Ծառային տէրը՝ գթալով՝ արձակեց զայն, եւ ներեց անոր պարտքը:
೨೭ಆ ಸೇವಕನ ಒಡೆಯನು ಕನಿಕರಪಟ್ಟು ಅವನನ್ನು ಬಿಡಿಸಿ ಆ ಸಾಲವನ್ನೆಲ್ಲಾ ಮನ್ನಿಸಿಬಿಟ್ಟನು.
28 Նոյն ծառան գնաց, գտաւ իր ծառայակիցներէն մէկը՝ որ հարիւր դահեկան կը պարտէր իրեն, ու բռնելով զայն՝ կը խեղդէր եւ կ՚ըսէր. “Վճարէ՛ ինծի ունեցած պարտքդ”:
೨೮ತರುವಾಯ ಆ ಸೇವಕನು ಹೊರಕ್ಕೆ ಬಂದು ತನಗೆ ನೂರು ಬೆಳ್ಳಿ ನಾಣ್ಯ ಕೊಡಬೇಕಾಗಿದ್ದ ಒಬ್ಬ ಜೊತೆ ಸೇವಕನನ್ನು ಕಂಡು ಅವನನ್ನು ಹಿಡಿದು ಕುತ್ತಿಗೆ ಹಿಸುಕಿ, ‘ನನ್ನ ಸಾಲ ತೀರಿಸು’ ಎಂದು ಹೇಳಿದನು.
29 Ուստի իր ծառայակիցը ինկաւ անոր ոտքը, կ՚աղաչէր անոր ու կ՚ըսէր. “Համբերատա՛ր եղիր ինծի, եւ պիտի վճարեմ քեզի”:
೨೯ಆದರೆ ಅವನ ಜೊತೆ ಸೇವಕನು ಮೊಣಕಾಲೂರಿ, ‘ನನ್ನ ಮೇಲೆ ತಾಳ್ಮೆಯಿರಲಿ ನಾನು ತೀರಿಸುತ್ತೇನೆ’ ಎಂದು ಬೇಡಿಕೊಂಡನು.
30 Բայց ինք չէր ուզեր. հապա գնաց ու բանտը նետել տուաւ զայն՝ մինչեւ որ վճարէր պարտքը:
೩೦ಆದರೆ ಅವನು ಒಪ್ಪದೆ ಹೊರಟುಹೋಗಿ ಆ ಸಾಲ ತೀರಿಸುವ ತನಕ ಅವನನ್ನು ಸೆರೆಮನೆಯಲ್ಲಿ ಹಾಕಿಸಿದನು.
31 Երբ իր ծառայակիցները տեսան ինչ որ պատահեցաւ՝ շատ տրտմեցան, ու եկան եւ պատմեցին իրենց տիրոջ ամբողջ պատահածը:
೩೧ಅವನ ಜೊತೆ ಸೇವಕರು ನಡೆದ ಸಂಗತಿಯನ್ನು ನೋಡಿ ಬಹಳವಾಗಿ ದುಃಖಪಟ್ಟು ತಮ್ಮ ಒಡೆಯನ ಬಳಿಗೆ ಬಂದು ನಡೆದದ್ದನ್ನೆಲ್ಲಾ ಆತನಿಗೆ ತಿಳಿಸಿದರು.
32 Այն ատեն անոր տէրը կանչեց զայն ու ըսաւ. “Չա՛ր ծառայ, այդ ամբողջ պարտքը ներեցի քեզի՝ քանի որ աղաչեցիր ինծի.
೩೨ಆಗ ಅವನ ಒಡೆಯನು ಅವನನ್ನು ಕರಸಿ, ‘ಓ, ದುಷ್ಟ ಸೇವಕನೇ, ನೀನು ನನ್ನನ್ನು ಬೇಡಿಕೊಂಡದ್ದರಿಂದ ನಿನ್ನ ಸಾಲವನ್ನೆಲ್ಲಾ ನಾನು ಮನ್ನಿಸಿಬಿಟ್ಟೆನಲ್ಲವೇ?
33 ուրեմն պէտք չէ՞ր որ դո՛ւն ալ ողորմէիր ծառայակիցիդ, ինչպէս ես ողորմեցայ քեզի”:
೩೩ನಾನು ನಿನ್ನನ್ನು ಕರುಣಿಸಿದ ಹಾಗೆ ನೀನು ಸಹ ನಿನ್ನ ಜೊತೆ ಸೇವಕನನ್ನು ಕರುಣಿಸಬಾರದಾಗಿತ್ತೇ?’ ಎಂದು ಹೇಳಿ,
34 Եւ անոր տէրը բարկանալով՝ յանձնեց զայն տանջողներուն, մինչեւ որ վճարէր ամբողջ պարտքը:
೩೪ಒಡೆಯನು ಸಿಟ್ಟುಗೊಂಡು ತನಗೆ ಕೊಡಬೇಕಾದ ಸಾಲವನ್ನು ತೀರಿಸುವ ತನಕ ಅವನನ್ನು ಪೀಡಿಸುವವರ ಕೈಗೆ ಒಪ್ಪಿಸಿದನು.
35 Իմ երկնաւոր Հայրս ալ նո՛յնպէս պիտի ընէ ձեզի, եթէ ձեզմէ իւրաքանչիւրը իր եղբօր սրտանց չներէ իր յանցանքները»:
೩೫ನಿಮ್ಮಲ್ಲಿ ಪ್ರತಿಯೊಬ್ಬನೂ ತನ್ನ ಸಹೋದರನಿಗೆ ಹೃದಯಪೂರ್ವಕವಾಗಿ ಕ್ಷಮಿಸದೇ ಹೋದರೆ ಪರಲೋಕದಲ್ಲಿರುವ ನನ್ನ ತಂದೆಯು ನಿಮಗೂ ಹಾಗೆಯೇ ಮಾಡುವನು” ಅಂದನು.

< ՄԱՏԹԷՈՍ 18 >