< ՄԱՏԹԷՈՍ 25 >

1 «Այն ատեն երկինքի թագաւորութիւնը պիտի նմանի տասը կոյսերու, որոնք՝ առնելով իրենց լապտերները՝ գացին դիմաւորելու փեսան:
“ಪರಲೋಕ ರಾಜ್ಯವು ತಮ್ಮ ದೀಪಾರತಿಗಳನ್ನುತೆಗೆದುಕೊಂಡು ಮದಲಿಂಗನನ್ನು ಸಂಧಿಸುವುದಕ್ಕೆ ಹೊರಟಂತಹ ಹತ್ತು ಮಂದಿ ಕನ್ನಿಕೆಯರಿಗೆ ಹೋಲಿಕೆಯಾಗಿದೆ.
2 Ասոնցմէ հինգը իմաստուն էին, իսկ հինգը՝ յիմար:
ಅವರಲ್ಲಿ ಐದು ಮಂದಿ ಬುದ್ಧಿವಂತೆಯರು, ಐದು ಮಂದಿ ಬುದ್ಧಿಹೀನರು.
3 Յիմարները առին իրենց լապտերները, բայց ձէթ չառին իրենց հետ.
ಅವಿವೇಕಿಗಳು ತಮ್ಮ ದೀಪಾರತಿಗಳನ್ನು ತೆಗೆದುಕೊಂಡರು, ಆದರೆ ತಮ್ಮೊಂದಿಗೆ ಎಣ್ಣೆಯನ್ನು ತೆಗೆದುಕೊಳ್ಳಲಿಲ್ಲ.
4 սակայն իմաստունները՝ ամաններով ձէթ ալ առին իրենց լապտերներուն հետ:
ಆದರೆ ಬುದ್ಧಿವಂತರಾದ ಕನ್ನಿಕೆಯರು ತಮ್ಮ ದೀಪಾರತಿಗಳೊಂದಿಗೆ ಪಾತ್ರೆಗಳಲ್ಲಿ ಎಣ್ಣೆಯನ್ನೂ ತೆಗೆದುಕೊಂಡರು.
5 Երբ փեսան ուշացաւ, բոլորն ալ թմրեցան ու քնացան:
ಮದಲಿಂಗನು ಬರುವುದಕ್ಕೆ ತಡಮಾಡಲು ಅವರೆಲ್ಲರೂ ತೂಕಡಿಸಿ ನಿದ್ರಿಸಿದರು.
6 Կէս գիշերին գոչիւն մը եղաւ. “Ահա՛ փեսան կու գայ. գացէ՛ք դիմաւորելու զինք”:
ಆದರೆ ಅರ್ಧರಾತ್ರಿಯಲ್ಲಿ, ‘ಇಗೋ, ಮದಲಿಂಗನು ಬರುತ್ತಿದ್ದಾನೆ ಅವನನ್ನು ಎದುರುಗೊಳ್ಳಲು ಹೊರಡಿರಿ’ ಎಂಬ ಕೂಗು ಕೇಳಿಸಿತು.
7 Այն ատեն բոլոր կոյսերը ոտքի ելան եւ յարդարեցին իրենց լապտերները:
ಆಗ ಆ ಕನ್ನಿಕೆಯರೆಲ್ಲರು ಎಚ್ಚೆತ್ತು ತಮ್ಮ ದೀಪಾರತಿಗಳನ್ನು ಸರಿಮಾಡಿಕೊಂಡರು.
8 Յիմարները ըսին իմաստուններուն. “Տուէ՛ք մեզի ձեր ձէթէն, որովհետեւ մեր լապտերները կը մարին”:
ಆಗ ಬುದ್ಧಿಹೀನರಾದ ಕನ್ನಿಕೆಯರು ಬುದ್ಧಿವಂತರಾಗಿದ್ದ ಕನ್ನಿಕೆಯರಿಗೆ, ‘ನಿಮ್ಮ ಎಣ್ಣೆಯಲ್ಲಿ ನಮಗೆ ಸ್ವಲ್ಪ ಕೊಡಿರಿ.
9 Իմաստունները պատասխանեցին. “Ո՛չ. գուցէ չբաւէ մեզի ու ձեզի. այլ մանաւանդ գացէ՛ք ծախողներուն եւ գնեցէ՛ք ձեզի համար”:
ಏಕೆಂದರೆ ನಮ್ಮ ದೀಪಗಳು ಆರಿಹೋಗುತ್ತವೆ’ ಎಂದು ಕೇಳಿದರು. ಅದಕ್ಕೆ ಆ ಬುದ್ಧಿವಂತರಾದ ಕನ್ನಿಕೆಯರು, ಆಗುವುದಿಲ್ಲ ‘ನಿಮಗೆ ಕೊಟ್ಟರೆ ನಮಗೂ ನಿಮಗೂ ಸಾಲದೆ ಹೋದೀತು; ನೀವು ಮಾರುವವರ ಬಳಿಗೆ ಹೋಗಿ ಕೊಂಡುಕೊಂಡರೆ ಒಳ್ಳೆಯದು’ ಅಂದರು.
10 Երբ անոնք գացին գնելու՝ փեսան եկաւ. պատրաստ եղողները հարսանիքի մտան անոր հետ, ու դուռը գոցուեցաւ:
೧೦ಅವರು ಕೊಂಡುಕೊಳ್ಳುವುದಕ್ಕೆ ಹೊರಟುಹೋದಾಗ ಮದಲಿಂಗನು ಬಂದನು. ಸಿದ್ಧವಾಗಿದ್ದವರು ಅವನ ಸಂಗಡ ಮದುವೆಯ ಮನೆಯೊಳಗೆ ಹೋದರು, ಬಾಗಿಲನ್ನು ಮುಚ್ಚಲಾಯಿತು.
11 Յետոյ միւս կոյսերը եկան եւ ըսին. “Տէ՛ր, Տէ՛ր, բա՛ց մեզի”:
೧೧ಅನಂತರ ಉಳಿದ ಕನ್ನಿಕೆಯರು ಸಹ ಬಂದು, ‘ಕರ್ತನೇ, ಕರ್ತನೇ, ನಮಗೆ ಬಾಗಿಲು ತೆರೆಯಿರಿ’ ಅಂದರು.
12 Բայց ան պատասխանեց. “Ճշմա՛րտապէս կը յայտարարեմ ձեզի. "Ես չեմ ճանչնար ձեզ"”:
೧೨ಆದರೆ ಆತನು ಅವರಿಗೆ ಉತ್ತರವಾಗಿ, ‘ನಿಮ್ಮನ್ನು ನಾನರಿಯೆನೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ’ ಅಂದನು.
13 Ուրեմն արթո՛ւն կեցէք, որովհետեւ գիտէք ո՛չ օրը, ո՛չ ժամը»:
೧೩ಏಕೆಂದರೆ ಆ ದಿನವಾದರೂ ಗಳಿಗೆಯಾದರೂ ನಿಮಗೆ ತಿಳಿಯದು, ಆದಕಾರಣ ಎಚ್ಚರವಾಗಿರಿ.
14 «Արդարեւ երկինքի թագաւորութիւնը կը նմանի ճամբորդող մարդու մը, որ կանչեց իր ծառաները, եւ յանձնեց անոնց իր ինչքը.
೧೪“ದೇವರ ರಾಜ್ಯವು ಹೇಗೆಂದರೆದೇಶಾಂತರಕ್ಕೆ ಹೊರಟ್ಟಿದ್ದ ಒಬ್ಬ ಮನುಷ್ಯನು ತನ್ನ ಸೇವಕರನ್ನು ಕರೆದು ಅವರಿಗೆ ತನ್ನ ಆಸ್ತಿಯನ್ನು ಒಪ್ಪಿಸಿಕೊಟ್ಟಂತಿರುವುದು.
15 մէկուն տուաւ հինգ տաղանդ, մէկուն՝ երկու, ու մէկուն՝ մէկ. իւրաքանչիւրին՝ իր կարողութեան չափով, եւ իսկոյն մեկնեցաւ:
೧೫ಅವನು ಒಬ್ಬನಿಗೆ ಐದುತಲಾಂತು, ಇನ್ನೊಬ್ಬನಿಗೆ ಎರಡು, ಮತ್ತೊಬ್ಬನಿಗೆ ಒಂದು, ಹೀಗೆ ಅವನವನ ಸಾಮರ್ಥ್ಯದ ಪ್ರಕಾರ ತಲಾಂತನ್ನು ವಹಿಸಿಕೊಟ್ಟು ತನ್ನ ಪ್ರಯಾಣಕ್ಕೆ ಹೋದನು.
16 Հինգ տաղանդ ստացողը գնաց, օգտագործեց զանոնք, ու շահեցաւ ուրիշ հինգ տաղանդ:
೧೬ತಕ್ಷಣವೇ ಐದು ತಲಾಂತು ಹೊಂದಿದವನು ಹೋಗಿ ಅದನ್ನು ವ್ಯಾಪಾರಕ್ಕೆ ಹಾಕಿ ಇನ್ನೂ ಐದು ತಲಾಂತು ಗಳಿಸಿಕೊಂಡನು.
17 Նմանապէս երկու ստացողը շահեցաւ ուրիշ երկու ալ:
೧೭ಹಾಗೆಯೇ ಎರಡು ತಲಾಂತು ಹೊಂದಿದವನು ಇನ್ನೂ ಎರಡು ಸಂಪಾದಿಸಿಕೊಂಡನು.
18 Իսկ մէկ ստացողը գնաց, փորեց գետինը եւ ծածկեց իր տիրոջ դրամը:
೧೮ಆದರೆ ಒಂದು ತಲಾಂತು ಹೊಂದಿದವನು ಹೋಗಿ ಭೂಮಿಯನ್ನು ಅಗೆದು ತನ್ನ ಯಜಮಾನನ ಹಣವನ್ನು ಬಚ್ಚಿಟ್ಟನು.
19 Շատ ժամանակ ետք՝ այդ ծառաներուն տէրը եկաւ ու հաշիւ ուզեց անոնցմէ:
೧೯ಬಹುಕಾಲದ ಮೇಲೆ ಆ ಸೇವಕರ ಯಜಮಾನನು ಬಂದು ಅವರಿಂದ ಲೆಕ್ಕ ತೆಗೆದುಕೊಳ್ಳಲು
20 Հինգ տաղանդ ստացողը մօտեցաւ եւ բերաւ ուրիշ հինգ տաղանդ՝ ըսելով. “Տէ՛ր, հինգ տաղանդ յանձնեցիր ինծի. ահա՛ ուրիշ հինգ տաղանդ ալ շահեցայ անոնցմէ զատ”:
೨೦ಐದು ತಲಾಂತುಗಳು ಹೊಂದಿದವನು ಮುಂದೆ ಬಂದು ಇನ್ನೂ ಐದು ತಲಾಂತುಗಳನ್ನು ತಂದು, ‘ಯಜಮಾನನೇ, ನೀನು ಐದು ತಲಾಂತಗಳನ್ನು ನನಗೆ ಕೊಟ್ಟಿದ್ದೆಯಲ್ಲಾ, ಇಗೋ, ಇನ್ನು ಐದು ತಲಾಂತು ಸಂಪಾದಿಸಿದ್ದೇನೆ’ ಅಂದನು.
21 Տէրը ըսաւ անոր. “Ապրի՛ս, բարի ու հաւատարիմ ծառայ. դո՛ւն՝ որ հաւատարիմ եղար քի՛չ բանի մէջ, պիտի նշանակեմ քեզ շա՛տ բաներու վրայ. մտի՛ր տիրոջդ ուրախութեան մէջ”:
೨೧ಅವನ ಯಜಮಾನನು ಅವನಿಗೆ, ‘ಭಲಾ, ನಂಬಿಗಸ್ತನಾದ ಒಳ್ಳೆಯ ಸೇವಕನೇ; ನೀನು ಸ್ವಲ್ಪ ಕೆಲಸದಲ್ಲಿ ಪ್ರಾಮಾಣಿಕನಾಗಿದ್ದಿ; ದೊಡ್ಡ ಕೆಲಸದಲ್ಲಿ ನಿನ್ನನ್ನು ಇಡುತ್ತೇನೆ; ನಿನ್ನ ಒಡೆಯನ ಸಂತೋಷದಲ್ಲಿ ಸೇರು’ ಅಂದನು.
22 Երկու տաղանդ ստացողն ալ մօտեցաւ եւ ըսաւ. “Տէ՛ր, երկու տաղանդ յանձնեցիր ինծի. ահա՛ ուրիշ երկու տաղանդ ալ շահեցայ անոնցմէ զատ”:
೨೨ಆಗ ಎರಡು ತಲಾಂತು ಹೊಂದಿದವನು ಮುಂದೆ ಬಂದು, ‘ಯಜಮಾನನೇ, ನೀನು ಎರಡು ತಲಾಂತನ್ನು ನನಗೆ ಒಪ್ಪಿಸಿದ್ದೆಯಲ್ಲಾ; ಇಗೋ, ಇನ್ನು ಎರಡು ತಲಾಂತು ಸಂಪಾದಿಸಿದ್ದೇನೆ’ ಅಂದನು.
23 Տէրը ըսաւ անոր. “Ապրի՛ս, բարի ու հաւատարիմ ծառայ. դո՛ւն՝ որ հաւատարիմ եղար քի՛չ բանի մէջ, պիտի նշանակեմ քեզ շա՛տ բաներու վրայ. մտի՛ր տիրոջդ ուրախութեան մէջ”:
೨೩ಅವನ ಯಜಮಾನನು ಅವನಿಗೆ, ‘ಭಲಾ, ನಂಬಿಗಸ್ತನಾದ ಒಳ್ಳೆಯ ಸೇವಕನೇ; ನೀನು ಸ್ವಲ್ಪ ಕೆಲಸದಲ್ಲಿ ಪ್ರಾಮಾಣಿಕನಾಗಿದ್ದಿ, ದೊಡ್ಡ ಕೆಲಸದಲ್ಲಿ ನಿನ್ನನ್ನು ಇಡುತ್ತೇನೆ; ನಿನ್ನ ಒಡೆಯನ ಸಂತೋಷದಲ್ಲಿ ಸೇರು’ ಎಂದು ಹೇಳಿದನು.
24 Մէկ տաղանդ ստացողն ալ մօտեցաւ եւ ըսաւ. “Տէ՛ր, գիտէի թէ դուն խիստ մարդ մըն ես. կը հնձես չսերմանած տեղէդ, ու կը ժողվես չցանած տեղէդ.
೨೪ತರುವಾಯ ಒಂದು ತಲಾಂತು ಹೊಂದಿದವನು ಸಹ ಮುಂದೆಬಂದು, ‘ಯಜಮಾನನೇ, ನೀನು ಬಿತ್ತದಿರುವಲ್ಲಿ ಕೊಯ್ಯುವವನು, ನೀನು ತೂರದಿರುವಲ್ಲಿ ರಾಶಿಮಾಡಿಕೊಳ್ಳುವವನು ಆಗಿರುವ ಕಠಿಣ ಮನುಷ್ಯನು ಎಂದು ನಾನು ತಿಳಿದು
25 ուստի վախնալով՝ գացի, պահեցի քու տաղանդդ գետինին տակ. ուստի ահա՛ քուկդ՝ քեզի”:
೨೫ಹೆದರಿ, ಹೊರಟುಹೋಗಿ ನಿನ್ನ ತಲಾಂತನ್ನು ಭೂಮಿಯಲ್ಲಿ ಬಚ್ಚಿಟ್ಟೆನು; ಇಗೋ, ನಿನ್ನದು ನಿನಗೇ ಸಲ್ಲಿಸುತ್ತಿದ್ದೇನೆ’ ಅಂದನು.
26 Իր տէրը պատասխանեց իրեն. “Չա՛ր եւ ծո՛յլ ծառայ. գիտէիր թէ կը հնձեմ չսերմանած տեղէս, ու կը ժողվեմ չցանած տեղէս.
೨೬ಆಗ ಅವನ ಯಜಮಾನನು ಅವನಿಗೆ, ‘ಮೈಗಳ್ಳನಾದ ದುಷ್ಟ ಸೇವಕನೇ; ನೀನು ನನ್ನನ್ನು ಬಿತ್ತದಿರುವಲ್ಲಿ ಕೊಯ್ಯುವವನು ತೂರದಿರುವಲ್ಲಿ ರಾಶಿಮಾಡಿಕೊಳ್ಳುವವನು ಎಂದು ತಿಳಿದಿದ್ದೇಯಾ?
27 ուրեմն պէտք էր որ դնէիր իմ դրամս սեղանաւորներուն քով, որպէսզի տոկոսո՛վ ստանայի եկած ատենս”:
೨೭ಹಾಗಾದರೆ, ನೀನು ನನ್ನ ಹಣವನ್ನು ಸಾಹುಕಾರರಲ್ಲಿ ಬಡ್ಡಿಗೆ ಹಾಕಬೇಕಾಗಿತ್ತು; ನಾನು ಬಂದು ನನ್ನದನ್ನು ಬಡ್ಡಿ ಸಹಿತ ಪಡೆದುಕೊಳ್ಳುತ್ತಿದ್ದೆನು ಎಂದು ಹೇಳಿ,
28 “Ուստի առէ՛ք ատկէ տաղանդը, ու տուէ՛ք տասը տաղանդ ունեցողին.
೨೮ಅವನಿಂದ ಆ ತಲಾಂತನ್ನು ತೆಗೆದು ಹತ್ತು ತಲಾಂತು ಇರುವ ಸೇವಕನಿಗೆ ಕೊಟ್ಟನು.
29 որովհետեւ ամէն ունեցողի պիտի տրուի, եւ պիտի ըլլայ առատութեան մէջ, բայց չունեցողէն պիտի առնուի ունեցա՛ծն ալ:
೨೯ಇದ್ದವರಿಗೆ ಇನ್ನೂ ಹೆಚ್ಚಾಗಿ ಕೊಡಲ್ಪಡುವುದು, ಅವರಿಗೆ ಇನ್ನೂ ಹೆಚ್ಚಾಗುವುದು; ಇಲ್ಲದವನ ಕಡೆಯಿಂದ ಇದ್ದದ್ದೂ ತೆಗೆಯಲ್ಪಡುವುದು.
30 Իսկ նետեցէ՛ք այդ անպէտ ծառան դուրսի խաւարը. հոն պիտի ըլլայ լաց ու ակռաներու կրճտում”»:
೩೦ಮತ್ತು ನಿಷ್ಪ್ರಯೋಜಕನಾದ ಈ ಸೇವಕನನ್ನು ಹೊರಗೆ ಕಗ್ಗತ್ತಲೆಗೆ ಹಾಕಿಬಿಡಿರಿ ಎಂದು ಅಪ್ಪಣೆಕೊಟ್ಟನು. ಅಲ್ಲಿ ಗೋಳಾಟವೂ ಕಟಕಟನೆ ಹಲ್ಲುಕಡಿಯೋಣವೂ ಇರುವವು.’
31 «Երբ մարդու Որդին գայ իր փառքով՝ եւ բոլոր սուրբ հրեշտակները իրեն հետ, այն ատեն պիտի բազմի իր փառքի գահին վրայ:
೩೧“ಇದಲ್ಲದೆ ಮನುಷ್ಯಕುಮಾರನು ತನ್ನ ಮಹಿಮೆಯಿಂದ ಸಮಸ್ತ ದೇವದೂತರೊಂದಿಗೆ ಬರುವಾಗ ತನ್ನ ಮಹಿಮೆಯ ಸಿಂಹಾಸನದಲ್ಲಿ ಕುಳಿತುಕೊಳ್ಳುವನು;
32 Բոլոր ազգերը պիտի հաւաքուին անոր առջեւ, ու պիտի զատէ զանոնք իրարմէ՝ ինչպէս հովիւ մը կը զատէ ոչխարները այծերէն:
೩೨ಆಗ ಎಲ್ಲಾ ದೇಶಗಳ ಜನರನ್ನೂ ಆತನ ಸಮ್ಮುಖದಲ್ಲಿ ತಂದು ಸೇರಿಸುವರು. ಕುರುಬನು ಕುರಿಗಳನ್ನೂ, ಆಡುಗಳನ್ನೂ ಬೇರ್ಪಡಿಸುವ ಪ್ರಕಾರ ಆತನು ಅವರನ್ನು ಬೇರ್ಪಡಿಸುವನು.
33 Ոչխարները պիտի կեցնէ իր աջ կողմը, իսկ այծերը՝ ձախ կողմը:
೩೩ಕುರಿಗಳನ್ನು ತನ್ನ ಬಲಗಡೆಯಲ್ಲಿ ಮತ್ತು ಆಡುಗಳನ್ನು ಎಡಗಡೆಯಲ್ಲಿ ನಿಲ್ಲಿಸುವನು.
34 Այն ատեն թագաւորը պիտի ըսէ իր աջ կողմը եղողներուն. “Եկէ՛ք իմ Հօրս օրհնածները, ժառանգեցէ՛ք այն թագաւորութիւնը, որ պատրաստուած է ձեզի համար՝ աշխարհի հիմնադրութենէն ի վեր:
೩೪ಆಗ ಅರಸನು ತನ್ನ ಬಲಗಡೆಯಲ್ಲಿರುವವರಿಗೆ, ‘ನನ್ನ ತಂದೆಯ ಆಶೀರ್ವಾದ ಹೊಂದಿದವರೇ ಬನ್ನಿರಿ, ಲೋಕಾದಿಯಿಂದ ನಿಮಗೋಸ್ಕರ ಸಿದ್ಧಮಾಡಿದ ರಾಜ್ಯವನ್ನು ಸ್ವತ್ತಾಗಿ ಪಡೆದುಕೊಳ್ಳಿರಿ.
35 Որովհետեւ անօթեցայ՝ եւ ուտելիք տուիք ինծի, ծարաւցայ՝ ու խմցուցիք ինծի, օտարական էի՝ ներս ընդունեցիք զիս,
೩೫ನಾನು ಹಸಿದಿದ್ದೆನು, ನನಗೆ ಊಟ ಕೊಟ್ಟಿರಿ; ನಾನು ಬಾಯಾರಿದ್ದೆನು, ನನಗೆ ಕುಡಿಯುವುದಕ್ಕೆ ಕೊಟ್ಟಿರಿ; ಪರದೇಶಿಯಾಗಿದ್ದೆನು, ನನಗೆ ಆಶ್ರಯ ಕೊಟ್ಟಿರಿ;
36 մերկ էի՝ հագուեցուցիք զիս, հիւանդ էի՝ այցելեցիք ինծի, բանտի մէջ էի՝ եկաք ինծի”:
೩೬ಬಟ್ಟೆಯಿಲ್ಲದವನಾಗಿದ್ದೆನು, ನನಗೆ ಉಡುವುದಕ್ಕೆ ಕೊಟ್ಟಿರಿ; ಅಸ್ವಸ್ಥನಾಗಿದ್ದಾಗ, ನನ್ನನ್ನು ಆರೈಕೆ ಮಾಡಿದಿರಿ; ಸೆರೆಮನೆಯಲ್ಲಿದ್ದೆನು, ನನ್ನನ್ನು ನೋಡುವುದಕ್ಕೆ ಬಂದಿರಿ’ ಎಂದು ಹೇಳುವನು.
37 Այն ատեն արդարները պիտի պատասխանեն անոր. “Տէ՛ր, ե՞րբ տեսանք քեզ անօթեցած՝ եւ կերակրեցինք, կամ ծարաւցած՝ ու խմցուցինք.
೩೭ಅದಕ್ಕೆ ಉತ್ತರವಾಗಿ ನೀತಿವಂತರು, ‘ಕರ್ತನೇ, ಯಾವಾಗ ನೀನು ಹಸಿದಿದ್ದನ್ನು ಕಂಡು ನಿನಗೆ ಊಟ ಕೊಟ್ಟೆವು? ಇಲ್ಲವೆ ನೀನು ಬಾಯಾರಿದ್ದನ್ನು ಕಂಡು ಕುಡಿಯುವುದಕ್ಕೆ ಕೊಟ್ಟೆವು?
38 ե՞րբ տեսանք քեզ օտարական՝ եւ ներս ընդունեցինք, կամ մերկ՝ ու հագուեցուցինք.
೩೮ಯಾವಾಗ ನೀನು ಪರದೇಶಿಯಾಗಿರುವುದನ್ನು ಕಂಡು ಆಶ್ರಯ ನೀಡಿದೆವು? ಇಲ್ಲವೆ ನಿನಗೆ ಬಟ್ಟೆಯಿಲ್ಲದ್ದನ್ನು ಕಂಡು ಉಡುವುದಕ್ಕೆ ಕೊಟ್ಟೆವು?
39 ե՞րբ տեսանք քեզ հիւանդ կամ բանտի մէջ՝ ու եկանք քեզի”:
೩೯ಯಾವಾಗ ನೀನು ಅಸ್ವಸ್ಥನಾಗಿದ್ದಾಗ ಅಥವಾ ಸೆರೆಮನೆಯಲ್ಲಿ ಇದ್ದುದನ್ನು ಕಂಡು ನಿನ್ನನ್ನು ನೋಡುವುದಕ್ಕೆ ಬಂದೆವು’ ಎಂದು ಕೇಳುವರು.
40 Թագաւորը պիտի պատասխանէ անոնց. “Ճշմա՛րտապէս կը յայտարարեմ ձեզի. "Քանի իմ այս եղբայրներուս փոքրագոյններէն մէկուն ըրիք՝ ինծի՛ ըրիք"”:
೪೦ಅದಕ್ಕೆ ಉತ್ತರವಾಗಿ ಅರಸನು, ‘ಈ ನನ್ನ ಸಹೋದರರಲ್ಲಿ ಕೇವಲ ಅಲ್ಪನಾದವನೊಬ್ಬನಿಗೆ ಏನೇನು ಮಾಡಿದಿರೋ ಅದನ್ನು ನನಗೂ ಮಾಡಿದ ಹಾಗಾಯಿತು ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ’ ಅನ್ನುವನು.
41 Այն ատեն պիտի ըսէ նաեւ իր ձախ կողմը եղողներուն. “Հեռացէ՛ք ինձմէ, անիծեալնե՛ր, յաւիտենական կրակին մէջ՝ որ պատրաստուած է Չարախօսին եւ իր հրեշտակներուն համար: (aiōnios g166)
೪೧ಆ ಮೇಲೆ ಆತನು ಎಡಗಡೆಯಲ್ಲಿರುವವರಿಗೆ, ‘ಶಾಪಗ್ರಸ್ತರೇ, ನನ್ನನ್ನು ಬಿಟ್ಟು ಪಿಶಾಚಿಗೂ ಅವನ ದೂತರಿಗೂ ಸಿದ್ಧಮಾಡಿರುವ ನಿತ್ಯ ಬೆಂಕಿಯೊಳಕ್ಕೆ ಹೋಗಿರಿ. (aiōnios g166)
42 Որովհետեւ անօթեցայ՝ ուտելիք չտուիք ինծի, ծարաւցայ՝ չխմցուցիք ինծի,
೪೨ನಾನು ಹಸಿದಿದ್ದೆನು, ನೀವು ನನಗೆ ಊಟ ಕೊಡಲಿಲ್ಲ; ನಾನು ಬಾಯಾರಿದ್ದೆನು, ನೀವು ನನಗೆ ಕುಡಿಯುವುದಕ್ಕೆ ಕೊಡಲಿಲ್ಲ.
43 օտարական էի՝ ներս չընդունեցիք զիս, մերկ էի՝ չհագուեցուցիք զիս, հիւանդ ու բանտի մէջ էի՝ չայցելեցիք ինծի”:
೪೩ಪರದೇಶಿಯಾಗಿದ್ದೆನು, ನೀವು ನನಗೆ ಆಶ್ರಯ ಕೊಡಲಿಲ್ಲ; ಬಟ್ಟೆಯಿಲ್ಲದವನಾಗಿದ್ದೆನು, ನೀವು ನನಗೆ ಉಡುವುದಕ್ಕೆ ಕೊಡಲಿಲ್ಲ; ಅಸ್ವಸ್ಥನಾಗಿದ್ದೆನು, ಸೆರೆಮನೆಯಲ್ಲಿದ್ದೆನು, ನೀವು ನನ್ನನ್ನು ಆರೈಕೆಮಾಡುವುದಕ್ಕೆ ಬರಲಿಲ್ಲವೆಂದು’ ಹೇಳುವನು.
44 Այն ատեն անոնք ալ պիտի պատասխանեն. “Տէ՛ր, ե՞րբ տեսանք քեզ անօթեցած, կամ ծարաւցած, կամ օտարական, կամ մերկ, կամ հիւանդ, կամ բանտի մէջ, եւ չսպասարկեցինք քեզի”:
೪೪ಅದಕ್ಕೆ ಉತ್ತರವಾಗಿ ಅವರೂ ಸಹ, ‘ಕರ್ತನೇ, ಯಾವಾಗ ನೀನು ಹಸಿದಿದ್ದನ್ನೂ, ನೀನು ಬಾಯಾರಿದ್ದನ್ನೂ, ನೀನು ಪರದೇಶಿಯಾಗಿದ್ದನ್ನೂ, ಬಟ್ಟೆಯಿಲ್ಲದವನಾಗಿದ್ದನ್ನೂ, ಅಸ್ವಸ್ಥನಾಗಿದ್ದುದನ್ನೂ, ಸೆರೆಮನೆಯಲ್ಲಿದ್ದುದನ್ನೂ ಕಂಡು ನಿನಗೆ ಉಪಚಾರಮಾಡದೆ ಹೋದೆವು?’ ಅನ್ನುವರು.
45 Այն ատեն պիտի պատասխանէ անոնց. “Ճշմա՛րտապէս կ՚ըսեմ ձեզի. "Քանի ասոնց փոքրագոյններէն մէկուն չըրիք՝ ինծի՛ ալ չըրիք"”:
೪೫ಆಗ ಆತನು ಉತ್ತರವಾಗಿ ಅವರಿಗೆ, ‘ನೀವು ಈ ಕೇವಲ ಅಲ್ಪರಾದವರಲ್ಲಿ ಒಬ್ಬನಿಗೆ ಏನನ್ನು ಮಾಡದೆ ಹೋದಿರೋ ಅದನ್ನು ನನಗೂ ಮಾಡದೆ ಹೋದ ಹಾಗಾಯಿತು ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ’ ಅನ್ನುವನು.
46 Ասոնք պիտի երթան յաւիտենական պատուհասին, իսկ արդարները՝ յաւիտենական կեանքին»: (aiōnios g166)
೪೬ಮತ್ತು ಅನೀತಿವಂತರಾದ ಇವರುನಿತ್ಯದಂಡನೆಗೆ ಹೋಗುವರು ಆದರೆ ನೀತಿವಂತರು ನಿತ್ಯಜೀವಕ್ಕೆ ಹೋಗುವರು” ಎಂದು ಹೇಳಿದನು. (aiōnios g166)

< ՄԱՏԹԷՈՍ 25 >