< Birinci Salnamələr 24 >

1 Harun nəslinin bölükləri bunlardır. Harunun oğulları: Nadav, Avihu, Eleazar və İtamar.
ಆರೋನನ ಸಂತಾನದವರೂ ವರ್ಗಗಳಾಗಿ ವಿಭಾಗಿಸಲ್ಪಟ್ಟರು. ಆರೋನನ ಮಕ್ಕಳು ನಾದಾಬ್, ಅಬೀಹೂ, ಎಲ್ಲಾಜಾರ್ ಮತ್ತು ಈತಾಮಾರ್ ಎಂಬುವರು.
2 Ancaq Nadav və Avihu atalarından əvvəl öldü və oğulları da yox idi. Buna görə də Eleazar və İtamar kahin oldu.
ನಾದಾಬ್ ಮತ್ತು ಅಬೀಹೂ ಎಂಬುವರು ಮಕ್ಕಳಿಲ್ಲದೆ ತಮ್ಮ ತಂದೆಗಿಂತ ಮೊದಲೇ ಸತ್ತು ಹೋದುದರಿಂದ ಎಲ್ಲಾಜಾರನೂ, ಈತಾಮಾರನೂ ಯಾಜಕ ಉದ್ಯೋಗವನ್ನು ನಡೆಸುತ್ತಿದ್ದರು.
3 Davud, Eleazar nəslindən Sadoq və İtamar nəslindən Aximelek onları xidmət işlərinə görə növbələrə ayırdı.
ದಾವೀದನು ಎಲ್ಲಾಜಾರನ ಸಂತಾನದವನಾದ ಚಾದೋಕನೂ, ಈತಾಮಾರನ ಸಂತಾನದವನಾದ ಅಹೀಮೆಲೆಕನು ಯಾಜಕರನ್ನು ಸರದಿಯ ಮೇಲೆ ಸೇವೆಮಾಡತಕ್ಕ ವರ್ಗಗಳನ್ನಾಗಿ ವಿಭಾಗಿಸಿದರು.
4 Eleazar nəsli arasında İtamar nəslindən daha çox nəsil başçısı tapıldı. Onlar belə ayrıldı: Eleazar nəslindən nəsil başçısı on altı nəfər, İtamar nəslindən nəsil başçısı səkkiz nəfər.
ಎಲ್ಲಾಜಾರನ ಸಂತಾನದ ಕುಟುಂಬ ಪ್ರಧಾನರು ಈತಾಮಾರ್ಯರಿಗಿಂತ ಹೆಚ್ಚೆಂದು ಕಂಡು ಬಂದುದರಿಂದ ಎಲ್ಲಾಜಾರರ ಕುಟುಂಬಗಳನ್ನು ಪ್ರಧಾನರ ಲೆಕ್ಕದ ಪ್ರಕಾರ ಹದಿನಾರು ವರ್ಗಗಳನ್ನಾಗಿಯೂ, ಈತಾಮಾರ್ಯರ ಕುಟುಂಬಗಳನ್ನು ಎಂಟು ವರ್ಗಗಳನ್ನಾಗಿಯೂ ಮಾಡಿ,
5 Beləcə onlar püşklə eyni qayda ilə ayrıldı, çünki həm Eleazar nəslindən, həm də İtamar nəslindən Müqəddəs yerdə və Allahın önündə durmaq üçün başçılar var idi.
ಈ ವರ್ಗಗಳ ವಿಷಯವಾಗಿ ಚೀಟು ಹಾಕಿದರು. ಎಲ್ಲಾಜಾರನ ಸಂತಾನದವರಲ್ಲಿ ಹೇಗೋ ಹಾಗೆಯೇ ಈತಾಮಾರನ ಸಂತಾನದವರಲ್ಲಿಯೂ ಪವಿತ್ರಾಲಯದ ಅಧಿಪತಿಗಳು, ದೈವಿಕ ಕಾರ್ಯಗಳ ಅಧ್ಯಕ್ಷರೂ ಇರುವುದರಿಂದ ಉಭಯ ಸಂತಾನದವರು ಸಮಾನ ಸ್ಥಾನದವರಾಗಿದ್ದರು.
6 Padşahın, rəislərin, kahin Sadoqun, Evyatar oğlu Aximelekin, kahinlərin və Levililərin nəsil başçılarının önündə Levili mirzə Netanel oğlu Şemaya onları qeydə aldı. Bir nəsil Eleazar üçün, o biri İtamar üçün alındı.
ನೆತನೇಲನ ಮಗನಾದ ಶೆಮಾಯನೆಂಬ ಲೇವಿಯ ಲೇಖಕನು ಅರಸನ ಮುಂದೆಯೂ, ಅಧಿಪತಿಗಳು, ಯಾಜಕನಾದ ಚಾದೋಕ್, ಎಬ್ಯಾತಾರನ ಮಗನಾದ ಅಹೀಮೆಲೆಕ್, ಯಾಜಕರ ಮತ್ತು ಲೇವಿಯರ ಕುಟುಂಬ ಪ್ರಧಾನರು ಇವರ ಮುಂದೆಯೂ ಆ ವರ್ಗಗಳ ಪಟ್ಟಿಯನ್ನು ಬರೆದನು. ಎಲ್ಲಾಜಾರನ ಒಂದು ವರ್ಗದವರಾದ ನಂತರ ಈತಾಮಾರ್ಯರ ಒಂದು ವರ್ಗದವರು ಸೇವಿಸಬೇಕೆಂದು ನೇಮಿಸಿ ಎಲ್ಲಾ ವರ್ಗಗಳ ಸರದಿಯನ್ನು ಚೀಟಿನಿಂದಲೇ ಗೊತ್ತುಮಾಡಿದರು.
7 Birinci püşk Yehoyarivə, ikincisi Yedayaya,
ಮೊದಲನೆಯ ಚೀಟು ಯೆಹೋಯಾರೀಬನಿಗೆ, ಎರಡನೆಯದು ಯೆದಾಯನಿಗೆ,
8 üçüncüsü Xarimə, dördüncüsü Seorimə,
ಮೂರನೆಯದು ಹಾರೀಮನಿಗೆ, ನಾಲ್ಕನೆಯದು ಸೆಯೋರೀಮನಿಗೆ,
9 beşincisi Malkiyaya, altıncısı Miyaminə,
ಐದನೆಯದು ಮಲ್ಕೀಯನಿಗೆ, ಆರನೆಯದು ಮಿಯ್ಯಾಮೀನನಿಗೆ,
10 yeddincisi Haqqosa, səkkizincisi Aviyaya,
೧೦ಏಳನೆಯದು ಹಕ್ಕೋಚನಿಗೆ, ಎಂಟನೆಯದು ಅಬೀಯನಿಗೆ,
11 doqquzuncusu Yeşuaya, onuncusu Şekanyaya,
೧೧ಒಂಬತ್ತನೆಯದು ಯೆಷೂವನಿಗೆ, ಹತ್ತನೆಯದು ಶೆಕನ್ಯನಿಗೆ,
12 on birincisi Elyaşivə, on ikincisi Yaqimə,
೧೨ಹನ್ನೊಂದನೆಯದು ಎಲ್ಯಾಷೀಬನಿಗೆ, ಹನ್ನೆರಡನೆಯದು ಯಾಕೀಮನಿಗೆ,
13 on üçüncüsü Xuppaya, on dördüncüsü Yeşevaya,
೧೩ಹದಿಮೂರನೆಯದು ಹುಪ್ಪನಿಗೆ, ಹದಿನಾಲ್ಕನೆಯದು ಎಷೆಬಾಬನಿಗೆ,
14 on beşincisi Bilqaya, on altıncısı İmmerə,
೧೪ಹದಿನೈದನೆಯದು ಬಿಲ್ಗನಿಗೆ, ಹದಿನಾರನೆಯದು ಇಮ್ಮೇರನಿಗೆ,
15 on yeddincisi Xezirə, on səkkizincisi Happissesə,
೧೫ಹದಿನೇಳನೆಯದು ಹೇಜೀರನಿಗೆ, ಹದಿನೆಂಟನೆಯದು ಹಪ್ಪಿಚ್ಚೇಚನಿಗೆ,
16 on doqquzuncusu Petahyaya, iyirmincisi Yezekelə,
೧೬ಹತ್ತೊಂಬತ್ತನೆಯದು ಪೆತಹ್ಯನಿಗೆ, ಇಪ್ಪತ್ತನೆಯದು ಯೆಹೆಜ್ಕೇಲನಿಗೆ,
17 iyirmi birincisi Yakinə, iyirmi ikincisi Qamula,
೧೭ಇಪ್ಪತ್ತೊಂದನೆಯದು ಯಾಕೀನನಿಗೆ, ಇಪ್ಪತ್ತೆರಡನೆಯದು ಗಾಮೂಲನಿಗೆ,
18 iyirmi üçüncüsü Delayaya, iyirmi dördüncüsü Maazyaya çıxdı.
೧೮ಇಪ್ಪತ್ತ ಮೂರನೆಯದು ದೆಲಾಯನಿಗೆ, ಇಪ್ಪತ್ತ ನಾಲ್ಕನೆಯದು ಮಾಜ್ಯನಿಗೆ ಬಿದ್ದಿತು.
19 İsrailin Allahı Rəbbin əmr etdiyi kimi babaları Harunun vasitəsilə onlara verilən qaydalarına görə, Rəbbin məbədinə girmək üçün xidmət işinə görə növbələri belə idi.
೧೯ಆರೋನ್ಯರು ಈ ವರ್ಗ ಕ್ರಮದಿಂದ ಯೆಹೋವನ ಆಲಯಕ್ಕೆ ಬಂದು ಇಸ್ರಾಯೇಲಿನ ದೇವರಾದ ಯೆಹೋವನಿಗೆ ಲೇವಿಯರ ಮೂಲಪುರುಷನಾದ ಆರೋನನ ಮುಖಾಂತರವಾಗಿ ನೇಮಿಸಿದ ಸೇವೆಯನ್ನು ನಡೆಸತಕ್ಕದ್ದು.
20 Levililərin qalan bölmələri bunlardır: Amramın nəslindən Şuvael, Şuvaelin nəslindən Yexdeya.
೨೦ಉಳಿದ ಲೇವಿಯರ ಪಟ್ಟಿ. ಅಮ್ರಾಮನ ಸಂತಾನದವರಾದ ಶೂಬಾಯೇಲನ ಕುಟುಂಬದವರಲ್ಲಿ ಯೆಹ್ದೆಯಾಹನು.
21 Rexavyanın nəslindən ilk oğlu İşşiya.
೨೧ರೆಹಬ್ಯನ ಸಂತಾನದವರಲ್ಲಿ ಇಷ್ಷೀಯನೂ,
22 İsharın nəslindən Şelomot, Şelomotun nəslindən Yaxat.
೨೨ಇಚ್ಹಾರನ ಸಂತಾನದ ಶೆಲೋಮೋತನ ಕುಟುಂಬದವರಲ್ಲಿ ಯಹತನೂ ಪ್ರಧಾನರು.
23 Xevronun oğulları: ilk oğlu Yeriya, ikincisi Amarya, üçüncüsü Yaxaziel, dördüncüsü Yeqameam.
೨೩ಹೆಬ್ರೋನನ ಸಂತಾನದವರಲ್ಲಿ ಯೆರೀಯನು ಪ್ರಧಾನನು, ಅಮರ್ಯನು ಎರಡನೆಯವನು, ಯಹಜೀಯೇಲನು, ಮೂರನೆಯವನು ಮತ್ತು ಯೆಕಮ್ಮಾಮನು ನಾಲ್ಕನೆಯವನು,
24 Uzzielin nəslindən Mikeya, Mikeyanın nəslindən Şamir.
೨೪ಉಜ್ಜೀಯೇಲನ ಮಗನಾದ ಮೀಕನ ಸಂತಾನದವರಲ್ಲಿ ಶಾಮೀರನೂ,
25 Mikeyanın qardaşı İşşiya, İşşiyanın nəslindən Zəkəriyyə.
೨೫ಮೀಕನ ತಮ್ಮನಾದ ಇಷ್ಷೀಯನ ಸಂತಾನದವರಲ್ಲಿ ಜೆಕರ್ಯನು ಪ್ರಧಾನರು.
26 Merarinin oğulları: Maxli, Muşi, onun nəslindən Yaaziya.
೨೬ಮೆರಾರೀಯ ಮಕ್ಕಳು ಮಹ್ಲೀ ಮತ್ತು ಮೂಷೀ ಎಂಬುವವರು. ಅವನ ಮತ್ತೊಬ್ಬ ಮಗನಾದ ಯಾಜ್ಯನ ವಂಶದವನು ಬೆನೋ.
27 Merari nəslindən olan Yaaziyanın oğulları: Şoham, Zakkur və İvri.
೨೭ಮೆರಾರೀಯ ಸಂತಾನದವರಲ್ಲಿ ಯಾಜ್ಯ, ಬೆನೋ, ಶೋಹಮ್, ಜಕ್ಕೂರ್ ಮತ್ತು ಇಬ್ರೀ ಇವರೇ.
28 Maxlinin nəslindən Eleazar. Onun oğlu yox idi.
೨೮ಮಹ್ಲೀಯನ ಮಗನಾದ ಎಲ್ಲಾಜಾರನೂ ಮಕ್ಕಳಿಲ್ಲದೆ ಸತ್ತನು.
29 Qişin nəslindən Yeraxmeel.
೨೯ಕೀಷನಿಂದ ಯೆರಹ್ಮೇಲನು ಹುಟ್ಟಿದನು.
30 Muşinin oğulları: Maxli, Eder və Yerimot. Bunlar nəsillərinə görə Levililərin bölükləridir.
೩೦ಮೂಷೀಯನ ಮಕ್ಕಳು ಮಹ್ಲೀ, ಏದೆರ್ ಮತ್ತು ಯೆರೀಮೋತ್ ಎಂಬುವವರು.
31 Onlar da qohumları olan Harun nəsli kimi padşah Davudun, Sadoqun, Aximelekin, kahinlərin və Levililərin nəsil başçılarının önündə püşk atdılar. Böyük nəsil başçıları da, qohumları olan kiçik nəsil başçıları da eyni qayda ilə püşk atdılar.
೩೧ಇವರೆಲ್ಲಾ ಲೇವಿ ಸಂತಾನದವರು. ಇವರ ಕುಟುಂಬಗಳಲ್ಲಿ ಎಲ್ಲಾ ಹಿರಿಯರೂ, ಕಿರಿಯರೂ ತಮ್ಮ ಕುಲ ಬಂಧುಗಳಾದ ಆರೋನ್ಯರಂತೆ ಅರಸನಾದ ದಾವೀದ ಚಾದೋಕ್ ಅಹೀಮೆಲೆಕ್ ಇವರ ಮುಂದೆಯೂ, ಯಾಜಕರ ಮತ್ತು ಲೇವಿಯರ ಕುಟುಂಬ ಪ್ರಧಾನರ ಮುಂದೆಯೂ, ಚೀಟಿನಿಂದ ತಮ್ಮಲ್ಲಿ ಸರದಿಗಳನ್ನು ನೇಮಿಸಿಕೊಂಡರು.

< Birinci Salnamələr 24 >