< Birinci Şamuel 23 >

1 Davuda xəbər verərək dedilər: «Budur, Filiştlilər Qeilaya hücum çəkib xırmanları talan edirlər».
ಫಿಲಿಷ್ಟಿಯರು ಕೆಯೀಲಕ್ಕೆ ಮುತ್ತಿಗೆ ಹಾಕಿ ಅಲ್ಲಿನ ಕಣಗಳನ್ನು ಸೂರೆಮಾಡುತ್ತಿದ್ದಾರೆ ಎಂಬ ವರ್ತಮಾನವು ದಾವೀದನಿಗೆ ಮುಟ್ಟಲು
2 Davud Rəbbə müraciət edib dedi: «Gedib Filiştlilərlə vuruşummu?» Rəbb Davuda dedi: «Get Filiştlilərə hücum et və Qeilanı qurtar».
ಅವನು, “ನಾನು ಹೋಗಿ ಆ ಫಿಲಿಷ್ಟಿಯರನ್ನು ಹೊಡೆಯಬಹುದೋ” ಎಂದು ಯೆಹೋವನನ್ನು ಕೇಳಿದನು. ಆತನು ಅವನಿಗೆ, “ಹೋಗಿ ಫಿಲಿಷ್ಟಿಯರನ್ನು ಹೊಡೆದು ಕೆಯೀಲಾ ಊರನ್ನು ರಕ್ಷಿಸು” ಎಂದು ಉತ್ತರ ಕೊಟ್ಟನು.
3 Davudun adamları isə ona dedilər: «Bax burada – Yəhudada biz qorxu içərisindəyik. Bəs biz Qeilaya, Filişt ordularına qarşı necə çıxaq?»
ಆದರೆ ದಾವೀದನ ಸೈನಿಕರು ಅವನಿಗೆ, “ನಮಗೆ ಯೆಹೂದ ಸೀಮೆಯಲ್ಲಿಯೇ ಇಷ್ಟು ಭಯವಿರುವಾಗ ಫಿಲಿಷ್ಟಿಯ ಸೈನ್ಯದೊಡನೆ ಯುದ್ಧಮಾಡುವುದಕ್ಕೆ ಕೆಯೀಲಕ್ಕೆ ಹೋದರೆ ಅಲ್ಲಿ ಇನ್ನೂ ಹೆಚ್ಚು ಭಯ ಉಂಟಾಗುತ್ತದೆ” ಅಂದರು.
4 Davud Rəbbə yenidən müraciət etdi və Rəbb ona cavab verib dedi: «Qalx Qeilaya en, çünki Filiştliləri sənə təslim edəcəyəm».
ಆದುದರಿಂದ ಅವನು ಪುನಃ ಯೆಹೋವನನ್ನು ಕೇಳಿದನು. ಆತನು, “ನೀನೆದ್ದು ಕೆಯೀಲಕ್ಕೆ ಹೋಗು. ನಾನು ಫಿಲಿಷ್ಟಿಯರನ್ನು ನಿನ್ನ ಕೈಗೆ ಒಪ್ಪಿಸಿಕೊಡುವೆನು” ಎಂದು ಉತ್ತರಕೊಟ್ಟನು.
5 Davudla adamları Qeilaya gedib Filiştlilərə qarşı hücuma keçdilər. Davud onların mal-qaralarını apardı və Filiştlilərə güclü zərbə vurub Qeila əhalisini qurtardı.
ಆಗ ದಾವೀದನು ತನ್ನ ಜನರೊಡನೆ ಕೆಯೀಲಕ್ಕೆ ಹೋಗಿ, ಫಿಲಿಷ್ಟಿಯರೊಡನೆ ಯುದ್ಧಮಾಡಿ, ಅವರನ್ನು ಸಂಪೂರ್ಣವಾಗಿ ಸೋಲಿಸಿ, ಅವರ ಪಶುಗಳನ್ನು ತೆಗೆದುಕೊಂಡು ಕೆಯೀಲದವರನ್ನು ರಕ್ಷಿಸಿದನು.
6 Aximelekin oğlu Evyatar Qeilaya – Davudun yanına qaçarkən əlində efod enmişdi.
ದಾವೀದನ ಬಳಿಗೆ ಓಡಿಬಂದಿದ್ದ ಅಹೀಮೆಲೆಕನ ಮಗನಾದ ಎಬ್ಯಾತಾರನು ಕೆಯೀಲಕ್ಕೆ ಬರುವಾಗ ಏಫೋದನ್ನು ತಂದಿದ್ದನು,
7 Davudun Qeilaya gəlməsi Şaula çatdırıldı. Şaul dedi: «Allah onu mənim ovcumun içinə qoyub, çünki cəftəli darvazaları olan bir şəhərə girməklə o özünü çıxılmaz vəziyyətə salıb».
ದಾವೀದನು ಕೆಯೀಲದಲ್ಲಿದ್ದಾನೆಂಬ ವರ್ತಮಾನವು ಸೌಲನಿಗೆ ಮುಟ್ಟಿತು. ಆಗ ಅವನು, ದೇವರು ದಾವೀದನನ್ನು ನನ್ನ ಕೈಗೆ ಒಪ್ಪಿಸಿದನು. ಅವನು ಅಗುಳಿ ಬಾಗಿಲುಗಳಿಂದ ಭದ್ರವಾಗಿರುವ ಪಟ್ಟಣವನ್ನು ಪ್ರವೇಶಿಸಿದ್ದಾನಲ್ಲಾ ಅವನು ಅಲ್ಲಿಂದ ತಪ್ಪಿಸಿಕೊಳ್ಳಲಾರನು ಅಂದುಕೊಂಡು,
8 Şaul Qeilaya enmək və Davudla adamlarını mühasirəyə almaq üçün bütün xalqı müharibəyə çağırdı.
ಕೆಯೀಲದಲ್ಲಿದ್ದ ದಾವೀದನನ್ನೂ, ಅವನ ಜನರನ್ನೂ ಹಿಡಿಯಲು ಹೋಗುವುದಕ್ಕೋಸ್ಕರ ಸೈನ್ಯವನ್ನು ಕೂಡಿಸಿದನು.
9 Şaulun ona pislik etmək istədiyini Davud bilirdi. O, kahin Evyatara dedi: «Efodu bura gətir».
ಸೌಲನು ತನಗೆ ಕೇಡುಮಾಡಬೇಕೆಂದಿದ್ದಾನೆ ಎಂಬುದನ್ನು ದಾವೀದನು ತಿಳಿದು ಯಾಜಕನಾದ ಎಬ್ಯಾತಾರನಿಗೆ, “ಏಫೋದನ್ನು ಇಲ್ಲಿಗೆ ತೆಗೆದುಕೊಂಡು ಬಾ” ಎಂದನು.
10 Davud sözünə davam etdi: «Ey İsrailin Allahı Rəbb, mən ciddi məlumat almışam ki, bu quluna görə şəhəri məhv etmək üçün Şaul Qeilaya gəlmək istəyir.
೧೦ಆಗ ದಾವೀದನು, “ಇಸ್ರಾಯೇಲ್ಯರ ದೇವರಾದ ಯೆಹೋವನೇ ಸೌಲನು ಕೆಯೀಲಕ್ಕೆ ಬಂದು ನನ್ನ ನಿಮಿತ್ತವಾಗಿ ಪಟ್ಟಣವನ್ನು ಹಾಳು ಮಾಡಬೇಕೆಂದಿದ್ದಾನೆಂದು ನಿನ್ನ ಸೇವಕನಾದ ನನಗೆ ಸುದ್ದಿ ಬಂದಿತು.
11 Qeila sakinləri məni ona təslim edəcəklərmi? Ey İsrailin Allahı Rəbb, yalvarıram, bunu quluna agah et. Şaul da Sənin qulun eşitdiyi kimi bura enəcəkmi?» Rəbb «o enəcək» dedi.
೧೧ನಾನು ಕೇಳಿದ ಸುದ್ದಿಯಂತೆ ಅವನು ನಿಜವಾಗಿ ಬರುವನೋ ಕೆಯೀಲಾ ಊರಿನವರು ನನ್ನನ್ನು ಅವನ ಕೈಗೆ ಒಪ್ಪಿಸುವರೋ? ಇಸ್ರಾಯೇಲರ ದೇವರಾದ ಯೆಹೋವನೇ ಈ ವಿಷಯದಲ್ಲಿ ಉತ್ತರ ದಯಪಾಲಿಸು” ಎಂದು ಪ್ರಾರ್ಥಿಸಲು ಅವನು ಬರುವನೆಂಬುದಾಗಿ ಯೆಹೋವನಿಂದ ಉತ್ತರ ಸಿಕ್ಕಿತು.
12 O zaman Davud dedi: «Qeilalılar məni və adamlarımı Şaula təslim edəcəkmi?» Rəbb «təslim edəcəklər» dedi.
೧೨ದಾವೀದನು ತಿರುಗಿ ಯೆಹೋವನನ್ನು, “ಕೆಯೀಲದವರು ನನ್ನನ್ನೂ, ನನ್ನ ಜನರನ್ನೂ ಸೌಲನ ಕೈಗೆ ಒಪ್ಪಿಸುವರೋ” ಎಂದು ಕೇಳಿದಾಗ ಆತನು, “ಒಪ್ಪಿಸಿಕೊಡುವರು” ಎಂದು ಉತ್ತರಕೊಟ್ಟನು.
13 Davud təxminən altı yüz nəfər adam ilə qalxıb Qeiladan çıxdı və bu yerdən başqa yerə getdi. Davudun Qeiladan qaçdığını eşidən Şaul oraya getmək fikrindən döndü.
೧೩ಆಗ ದಾವೀದನು ತನ್ನ ಸಂಗಡ ಇದ್ದ ಆರುನೂರು ಜನರ ಸಹಿತವಾಗಿ ಕೆಯೀಲಾ ಊರನ್ನು ಬಿಟ್ಟು ಮನಬಂದ ಕಡೆಗೆ ಅಲೆದಾಡಿದರು. ದಾವೀದನು ಕೆಯೀಲದಿಂದ ತಪ್ಪಿಸಿಕೊಂಡನೆಂದು ಸೌಲನಿಗೆ ಗೊತ್ತಾಗಲು ಅವನು ಹೊರಡುವುದನ್ನು ನಿಲ್ಲಿಸಿಬಿಟ್ಟನು.
14 Davud çöllükdə qalalarda qalıb Zif səhrasındakı dağlıq bölgəsində yaşadı. Şaul hər gün Davudu axtarırdı, lakin Allah onu Şaula təslim etmədi.
೧೪ಅನಂತರ ದಾವೀದನು ಅರಣ್ಯದಲ್ಲಿರುವ ಆಯಾ ಆಶ್ರಯಗಿರಿಗಳಲ್ಲಿ ಇರುತ್ತಿದ್ದನು. ಅನಂತರ ಜೀಫ್ ಅರಣ್ಯದ ಪರ್ವತಪ್ರಾಂತ್ಯಕ್ಕೆ ಬಂದು ಅಲ್ಲಿ ವಾಸಮಾಡಿದನು. ಸೌಲನು ಪ್ರತಿದಿನ ಅವನನ್ನು ಹುಡುಕುತ್ತಿದ್ದರೂ ದೇವರು ಅವನನ್ನು ಸೌಲನ ಕೈಗೆ ಒಪ್ಪಿಸಲಿಲ್ಲ.
15 Zif səhrasındakı Xoreşdə olan Davud gördü ki, Şaul onun canını almaq üçün yola çıxıb.
೧೫ಸೌಲನು ತನ್ನನ್ನು ಕೊಲ್ಲಲು ಹೊರಟಿದ್ದಾನೆಂದು ದಾವೀದನು ತಿಳಿದು ಜೀಫ್ ಅರಣ್ಯದ ಹೋರೆಷದಲ್ಲಿ ಅಡಗಿಕೊಂಡಿದ್ದನು.
16 Şaulun oğlu Yonatan qalxıb Xoreşə, Davudun yanına gəldi və onu Allah naminə ruhlandırdı.
೧೬ಆಗ ಸೌಲನ ಮಗನಾದ ಯೋನಾತಾನನು ಅಲ್ಲಿಗೆ ಹೋಗಿ,
17 Ona dedi: «Qorxma, atam Şaulun əlinə düşməyəcəksən, İsrailin padşahı sən olacaqsan, mən səndən sonra ikinci olacağam. Bunu hətta atam Şaul da bilir».
೧೭ದಾವೀದನಿಗೆ, “ಭಯಪಡಬೇಡ; ನೀನು ನನ್ನ ತಂದೆಯಾದ ಸೌಲನ ಕೈಗೆ ಸಿಕ್ಕಿಬೀಳುವುದಿಲ್ಲ. ನೀನು ಇಸ್ರಾಯೇಲ್ಯರ ಅರಸನಾಗುವಿ; ನಾನು ನಿನಗೆ ಎರಡನೆಯವನಾಗಿರುವೆನು. ಹೀಗಾಗುವುದೆಂದು ನನ್ನ ತಂದೆಯಾದ ಸೌಲನೂ ತಿಳಿದುಕೊಂಡಿದ್ದಾನೆ” ಎಂದು ಹೇಳಿ, ದೇವರಲ್ಲಿ ಅವನನ್ನು ಬಲಪಡಿಸಿದನು.
18 Sonra ikisi də Rəbbin önündə əhd bağladı və Davud Xoreşdə qaldı, Yonatan isə evinə qayıtdı.
೧೮ಅವರಿಬ್ಬರೂ ಯೆಹೋವನ ಸನ್ನಿಧಿಯಲ್ಲಿ ಒಡಂಬಡಿಕೆ ಮಾಡಿಕೊಂಡರು. ತರುವಾಯ ಯೋನಾತಾನನು ತನ್ನ ಮನೆಗೆ ಹೋದನು. ದಾವೀದನು ಹೋರೆಷದಲ್ಲಿಯೇ ಇದ್ದನು.
19 Ziflilər Giveaya, Şaulun yanına qalxıb dedilər: «Davud bizim yanımızda, Yeşimonun cənubundakı Xakila təpəsində, Xoreşdəki qalalarda gizlənmişdi.
೧೯ಜೀಫ್ಯರು ಗಿಬೆಯಲ್ಲಿದ್ದ ಸೌಲನ ಬಳಿಗೆ ಬಂದು ಅವನಿಗೆ, “ಒಡೆಯಾ, ಕೇಳು ದಾವೀದನು ನಮ್ಮ ಪ್ರಾಂತ್ಯಕ್ಕೆ ಸೇರಿದ ಹೋರೆಷದ ಗಿರಿಗಳಲ್ಲಿ, ಅಂದರೆ ಯೆಷಿಮೋನಿನ ದಕ್ಷಿಣದಲ್ಲಿರುವ ಹಕೀಲಾ ಬೆಟ್ಟದಲ್ಲಿ ಅಡಗಿಕೊಂಡಿದ್ದಾನೆ.
20 Ey padşah, indi oraya ensən, ürəyindəki arzuna çatarsan. Onu padşaha təslim etmək bizim payımıza düşər».
೨೦ಅರಸನು ತನ್ನ ಇಚ್ಛೆಯಂತೆ ನಮ್ಮ ಜೊತೆಯಲ್ಲಿ ಬರೋಣವಾಗಲಿ. ಅವನನ್ನು ಅರಸನ ಕೈಗೆ ಒಪ್ಪಿಸುವ ಕೆಲಸ ನಮ್ಮದು” ಎಂದು ಹೇಳಿದರು.
21 Şaul dedi: «Mənə xeyirxahlıq etdiyiniz üçün Rəbb sizə bərəkət versin.
೨೧ಆಗ ಸೌಲನು ಅವರಿಗೆ, “ನೀವು ನನ್ನ ಮೇಲೆ ಕನಿಕರ ತೋರಿಸಿ ಸಹಾಯ ಮಾಡುತ್ತಿರುವುದರಿಂದ ಯೆಹೋವನ ಆಶೀರ್ವಾದವು ನಿಮ್ಮ ಮೇಲಿರಲಿ.
22 Gedin daha yaxşı araşdırın və öyrənin ki, hara ayaq basıb, kimlər onu görüb. Deyirlər ki, o çox hiyləgərdir.
೨೨ನೀವು ದಯವಿಟ್ಟು ಹೋಗಿ ಅವನು ಅಡಗಿಕೊಂಡಿರುವ ಸ್ಥಳವನ್ನು, ಅಲ್ಲಿ ಅವನನ್ನು ಕಂಡವರನ್ನೂ ಸೂಕ್ಷ್ಮವಾಗಿ ವಿಚಾರಿಸಿ, ತಿಳಿದುಕೊಳ್ಳಿರಿ. ಅವನು ಬಹು ಯುಕ್ತಿವಂತನೆಂದು ಕೇಳಿದ್ದೇನೆ.
23 Gizləndiyi yerlərin hamısını tapıb öyrənin, doğru xəbərlə mütləq yanıma gəlin və mən də sizinlə oraya gedəcəyəm. Əgər o bölgədə olsa, onu bütün Yəhuda tayfaları arasında axtaracağam».
೨೩ಆದುದರಿಂದ ಅವನು ಅಡಗಿಕೊಳ್ಳತಕ್ಕ ಎಲ್ಲಾ ಗುಪ್ತಸ್ಥಳಗಳನ್ನು ಗೊತ್ತುಮಾಡಿಕೊಂಡು ಸರಿಯಾದ ವರ್ತಮಾನವನ್ನು ನನಗೆ ತಲುಪಿಸಿರಿ. ನಾನು ನಿಮ್ಮ ಸಂಗಡ ಬರುವೆನು. ಅವನು ದೇಶದಲ್ಲಿರುವುದಾದರೆ ಎಲ್ಲಾ ಯೆಹೂದ ಪ್ರಜೆಗಳ ಮಧ್ಯದಲ್ಲಾಗಲಿ ಹುಡುಕಿ ಅವನನ್ನು ಕಂಡುಹಿಡಿಯುವೆನು” ಅಂದನು.
24 Ziflilər qalxıb Şauldan qabaq Zifə qayıtdılar. Davudla adamları Yeşimonun cənubunda – Aravadakı Maon səhrasında idi.
೨೪ಅವರು ಹೊರಟು ಸೌಲನ ಮುಂದಾಗಿ ಜೀಫಿಗೆ ಬಂದರು. ದಾವೀದನೂ ಅವನ ಜನರೂ ಮಾವೋನ ಅರಣ್ಯದ ದಕ್ಷಿಣ ದಿಕ್ಕಿನಲ್ಲಿರುವ ಅರಾಬ್ ಎಂಬ ತಗ್ಗಾದ ಪ್ರದೇಶದಲ್ಲಿದ್ದನು.
25 Şaulla adamları onu axtarmaq üçün həmin yerə getdilər. Bu, Davuda xəbər verildi və o da qayalığa enib Maon səhrasında qaldı. Şaul bunu eşidərkən Maon səhrasında Davudu təqib etdi.
೨೫ಸೌಲನು ತನ್ನ ಜನರೊಡನೆ ದಾವೀದನನ್ನು ಹಿಡಿಯುವುದಕ್ಕೆ ಬಂದನು. ಈ ವರ್ತಮಾನವು ದಾವೀದನಿಗೆ ತಲುಪಲು ಅವನು ಮಾವೋನಿನಲ್ಲಿರುವ ಒಂದು ಕಡಿದಾದ ಬೆಟ್ಟಕ್ಕೆ ಹೋಗಿ ಅಡಗಿಕೊಂಡನು. ಸೌಲನು ಇದನ್ನು ಕೇಳಿ ಮಾವೋನ ಅರಣ್ಯಕ್ಕೆ ಬಂದು ಆ ಬೆಟ್ಟದ ಒಂದು ಕಡೆಯಲ್ಲಿ ಹೋಗುತ್ತಿದ್ದನು.
26 Şaul dağın bir tərəfi, Davudla adamları isə dağın o biri tərəfi ilə getməkdə idi. Davud cəld tərpənib Şaulun qabağından qaçdı, çünki Şaulla adamları Davudla adamlarını tutmaq üçün oranı mühasirəyə alırdılar.
೨೬ಅದರ ಇನ್ನೊಂದು ಕಡೆಯಲ್ಲಿ ದಾವೀದನೂ ಅವನ ಜನರೂ ಇದ್ದರು. ದಾವೀದನೂ ಅವನ ಜನರೂ ತಪ್ಪಿಸಿಕೊಳ್ಳುವುದಕ್ಕೆ ತ್ವರೆಪಡುವಷ್ಟರಲ್ಲಿ ಸೌಲನೂ, ಅವನ ಜನರೂ ಬಂದು ಅವರನ್ನು ಮುತ್ತಿಗೆ ಹಾಕುವುದಕ್ಕಿದ್ದರು.
27 Bu vaxt Şaulun yanına bir qasid gəlib dedi: «Tez ol, geri qayıt, çünki Filiştlilər ölkəyə hücum ediblər».
೨೭ಆಗಲೇ ಒಬ್ಬ ದೂತನು ಸೌಲನ ಬಳಿಗೆ ಬಂದು ಅವನಿಗೆ, “ಬೇಗ ಬಾ, ಫಿಲಿಷ್ಟಿಯರು ದೇಶದೊಳಗೆ ನುಗ್ಗಿದ್ದಾರೆ” ಎಂದು ತಿಳಿಸಿದನು.
28 Şaul Davudu təqib etməkdən əl çəkərək Filiştlilərə qarşı döyüşə getdi. Ona görə də o yerə Sela-Hammaxleqot adı verildi.
೨೮ಅವನು ದಾವೀದನನ್ನು ಹಿಡಿಯುವ ಕೆಲಸವನ್ನು ಬಿಟ್ಟು ಫಿಲಿಷ್ಟಿಯರ ವಿರುದ್ಧ ಯುದ್ಧಮಾಡಲು ಹೊರಟನು. ಆದುದರಿಂದ ಆ ಬೆಟ್ಟಕ್ಕೆ “ಮಕ್ಹೆಲೋಕೆತ್” ಎಂದರೆ “ಪಾರಾದ ಬಂಡೆ” ಎಂದು ಹೆಸರಾಯಿತು.
29 Davud oradan çıxıb En-Gedi qalalarında qaldı.
೨೯ದಾವೀದನು ಅಲ್ಲಿಂದ ಗಟ್ಟಾಹತ್ತಿ ಹೋಗಿ ಏಂಗೆದಿಯ ಗಿರಿಗಳಲ್ಲಿ ವಾಸಿಸಿದನು.

< Birinci Şamuel 23 >