< Çixiş 13 >

1 Rəbb Musaya dedi:
ಯೆಹೋವನು ಮೋಶೆಯ ಸಂಗಡ ಮಾತನಾಡಿ,
2 «İsrail övladları arasında hər bətndən ilk doğulan bütün oğlanları və bütün heyvanların balalarını Mənim üçün təqdis et; onlar Mənimdir».
“ಇಸ್ರಾಯೇಲರಲ್ಲಿ ಹುಟ್ಟಿರುವ ಪ್ರತಿಯೊಂದು ಚೊಚ್ಚಲ ಗಂಡನ್ನು ನನಗಾಗಿ ಪ್ರತಿಷ್ಠಿಸಬೇಕು. ಮನುಷ್ಯರಲ್ಲಾಗಲೀ, ಪಶುಗಳಲ್ಲಾಗಲೀ ಹುಟ್ಟುವ ಪ್ರಥಮ ಗರ್ಭಫಲವು ನನ್ನದಾಗಿದೆ” ಎಂದು ಹೇಳಿದನು.
3 Musa xalqa dedi: «Misirdən, köləlik diyarından çıxdığınız bu günü xatırlayın. Çünki Rəbb sizi qüdrətli əli ilə oradan çıxartdı və buna görə də mayalı çörək yeməyin.
ಮೋಶೆಯು ಇಸ್ರಾಯೇಲರಿಗೆ, “ನೀವು ದಾಸತ್ವದಲ್ಲಿದ್ದ ಐಗುಪ್ತ ದೇಶದೊಳಗಿಂದ ಬಿಡುಗಡೆಯಾದ ಈ ದಿನವನ್ನು ನೆನಪಿನಲ್ಲಿಟ್ಟುಕೊಳ್ಳಿರಿ. ಯೆಹೋವನು ತನ್ನ ಭುಜಬಲದಿಂದ ನಿಮ್ಮನ್ನು ಆ ಸ್ಥಳದಿಂದ ಬಿಡಿಸಿದ್ದಾನೆ. ಈ ದಿನದಲ್ಲಿ ನೀವು ಹುಳಿಬೆರೆಸಿದ್ದನ್ನು ತಿನ್ನಬಾರದು.
4 Çıxdığınız bu gün Aviv ayındadır.
ಚೈತ್ರ ಮಾಸದ ಈ ದಿನದಲ್ಲೇ ನೀವು ಹೊರಗೆ ಬಂದಿರುವಿರಿ.
5 Rəbb atalarınıza and etmişdi ki, Kənanlıların, Xetlilərin, Emorluların, Xivlilərin, Yevusluların ölkəsini sizə verəcək. Sizi süd və bal axan torpağa gətirəcəyi vaxt bu ibadəti həmin ayda icra edin.
ಯೆಹೋವನು ನಿಮ್ಮ ಪೂರ್ವಿಕರಿಗೆ ಪ್ರಮಾಣಮಾಡಿ ಹೇಳಿದಂತೆ, ನಿಮ್ಮನ್ನು ಹಾಲೂ ಮತ್ತು ಜೇನೂ ಹರಿಯುವ ದೇಶಕ್ಕೆ ಅಂದರೆ ಕಾನಾನ್ಯರು, ಹಿತ್ತಿಯರು, ಅಮೋರಿಯರು, ಹಿವ್ವಿಯರು, ಯೆಬೂಸಿಯರು ವಾಸವಾಗಿರುವ ದೇಶಕ್ಕೆ ಕರೆದು ತಂದು ಅದನ್ನು ನಿಮಗೆ ಕೊಟ್ಟಾಗ ನೀವು ಈ ತಿಂಗಳಲ್ಲಿ ಈ ಆಚರಣೆಯನ್ನು ನಡೆಸಬೇಕು.
6 Yeddi gün mayasız çörək yeyin, yeddinci gün Rəbbə bayram olsun.
ಏಳು ದಿನ ನೀವು ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕು, ಏಳನೆಯ ದಿನದಲ್ಲಿ ಯೆಹೋವನ ಘನಕ್ಕಾಗಿ ಹಬ್ಬವನ್ನು ಆಚರಿಸಬೇಕು.
7 O yeddi gün ərzində yalnız mayasız çörək yeyilməlidir. Aranızda bütün ölkədə nə mayalı çörək, nə də maya görünməsin.
ಆ ಏಳು ದಿನವೂ ನೀವು ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕು. ಮಾತ್ರವಲ್ಲದೆ, ನಿಮ್ಮಲ್ಲಿ ಹುಳಿಹಿಟ್ಟು ಕಾಣಿಸಬಾರದು. ಇಲ್ಲವೆ ಹುಳಿಹಿಟ್ಟು ನಿಮ್ಮ ಗಡಿಯಲ್ಲೇ ಕಾಣಬಾರದು.
8 O günü övladlarınıza bildirib deyin: “Misirdən çıxdığım vaxt Rəbb mənim üçün nələr etdiyinə görə belə edirəm”.
ಆ ದಿನದಲ್ಲಿ ನೀವು ನಿಮ್ಮ ಮಕ್ಕಳಿಗೆ, ನಮ್ಮ ಜನರು ಐಗುಪ್ತ ದೇಶದಿಂದ ಹೊರಟು ಬಂದಾಗ ಯೆಹೋವನು ನಮಗೋಸ್ಕರ ಮಾಡಿದ್ದನ್ನು ನೆನಪು ಮಾಡಿಕೊಳ್ಳುವುದಕ್ಕಾಗಿ ಈ ಆಚರಣೆಯನ್ನು ಆಚರಿಸುತ್ತೇವೆ.
9 Qoy bu əlinizdə nişanə və gözlərinizin önündə xatirə olsun ki, Rəbbin qanunu dilinizdən düşməsin. Çünki Rəbb sizi qüdrətli əli ilə Misirdən çıxartdı.
ಯೆಹೋವನು ತನ್ನ ಭುಜಬಲದಿಂದ ನಿಮ್ಮನ್ನು ಐಗುಪ್ತ ದೇಶದಿಂದ ಬಿಡಿಸಿದ್ದರಿಂದ ಆತನ ನಿಯಮವನ್ನು ಕುರಿತು ನೀವು ಹೇಳಬೇಕು. ಈ ಆಚರಣೆಯು ನಿಮ್ಮ ಕೈಗಳ ಮೇಲೆ ಗುರುತಾಗಿಯೂ, ಹಣೆಗೆ ಕಟ್ಟಿಕೊಂಡಿರುವ ಜ್ಞಾಪಕಪಟ್ಟಿಯಂತೆಯೂ ಇರಬೇಕು.
10 İldən-ilə təyin olunan vaxt bu qanuna riayət edin.
೧೦ಹೀಗಿರುವುದರಿಂದ ಪ್ರತಿವರ್ಷವು ನಿಯಮಿತವಾದ ಕಾಲದಲ್ಲಿ ನೀವು ಈ ಆಚರಣೆಯನ್ನು ಮಾಡಬೇಕು.
11 Rəbb sizə və atalarınıza and içdiyi kimi Kənanlıların ölkəsinə gətirib, oranı sizə verən vaxtdan bəri
೧೧“ಯೆಹೋವನು ನಿಮಗೂ ನಿಮ್ಮ ಪೂರ್ವಿಕರಿಗೂ ಪ್ರಮಾಣಮಾಡಿದ ಪ್ರಕಾರ ನಿಮ್ಮನ್ನು ಕಾನಾನ್ಯರ ದೇಶಕ್ಕೆ ಬರಮಾಡಿ ಆ ದೇಶವನ್ನು ನಿಮಗೆ ಕೊಟ್ಟ ನಂತರ,
12 ana bətnindən hər ilk doğulan oğlanlarınızı Rəbbə təqdim etməlisiniz: ilk doğulan bütün heyvan balaları da Rəbbin olsun.
೧೨ನಿಮ್ಮಲ್ಲಿಯೂ ನಿಮ್ಮ ಪಶುಗಳಲ್ಲಿಯೂ ಹುಟ್ಟುವ ಪ್ರಥಮ ಗರ್ಭಫಲವು ಗಂಡಾದ ಪಕ್ಷಕ್ಕೆ ಅದು ಯೆಹೋವನ ಭಾಗವೆಂದು ತಿಳಿದುಕೊಂಡು ಅದನ್ನು ಆತನಿಗೆ ಸಮರ್ಪಿಸಬೇಕು.
13 Hər ilk doğulan eşşək balası əvəzinə bir qoyun-keçi balası verin. Əgər əvəzini verməsəniz, boynunu sındırın. Övladlarınızın arasında hər ilk oğulun əvəzini ödəyin.
೧೩ಮೊದಲು ಹುಟ್ಟಿದ ಕತ್ತೆಯ ಚೊಚ್ಚಲಮರಿಗೆ ಬದಲಾಗಿ ಕುರಿಮರಿಯನ್ನು ಬಿಡಿಸಿಕೊಳ್ಳಬಹುದು. ಹಾಗೆ ಬಿಡಿಸದೆ ಹೋದರೆ ಅದರ ಕುತ್ತಿಗೆ ಮುರಿದು ಕೊಲ್ಲಬೇಕು. ಮನುಷ್ಯರ ಚೊಚ್ಚಲ ಗಂಡು ಮಕ್ಕಳನ್ನು ಯೆಹೋವನಿಗಾಗಿ ಬಿಡಿಸಿಕೊಳ್ಳಲೇ ಬೇಕು.
14 Gələcəkdə övladlarınız sizdən “Bu nədir?” soruşanda deyin: “Rəbb bizi Misirdən, köləlik diyarından qüdrətli əli ilə çıxartdı.
೧೪ಮುಂದೆ ನಿಮ್ಮ ಮಕ್ಕಳು, ‘ಇದರ ಅರ್ಥ ಏನು?’ ಎಂದು ನಿಮ್ಮನ್ನು ವಿಚಾರಿಸುವಾಗ ನೀವು ಅವರಿಗೆ, ‘ನಾವು ದಾಸತ್ವದಲ್ಲಿದ್ದ ಐಗುಪ್ತ ದೇಶದಿಂದ ಯೆಹೋವನು ತನ್ನ ಭುಜಬಲದಿಂದ ನಮ್ಮನ್ನು ಬಿಡಿಸಿದನು.
15 Firon bizi buraxmamağa inadkarlıq edəndə Rəbb Misir torpağında olan həm insanların bütün ilk oğlanlarını, həm də heyvanların bütün ilk balalarını öldürdü. Buna görə mən bütün ilk doğulan heyvan balalarını Rəbbə qurban verirəm, bütün ilk oğullarımın isə əvəzini ödəyirəm”.
೧೫ಫರೋಹನು ಹಠಹಿಡಿದು ನಮ್ಮನ್ನು ಹೋಗಗೊಡಿಸದೇ ಇದ್ದಾಗ ಯೆಹೋವನು ಐಗುಪ್ತ ದೇಶದಲ್ಲಿ ಮನುಷ್ಯರ ಚೊಚ್ಚಲಮಕ್ಕಳನ್ನು, ಪಶುಗಳ ಚೊಚ್ಚಲು ಮರಿಗಳನ್ನು ಅಂತೂ ಆ ದೇಶದಲ್ಲಿ ಚೊಚ್ಚಲಾಗಿದ್ದ ಎಲ್ಲವನ್ನು ಸಂಹಾರ ಮಾಡಿದನು. ಆದಕಾರಣ ಗಂಡಾಗಿ ಹುಟ್ಟುವ ಪ್ರಥಮ ಗರ್ಭಫಲವನ್ನೆಲ್ಲಾ ನಾವು ಯೆಹೋವನಿಗೆ ಸಮರ್ಪಿಸುವುದುಂಟು. ಮನುಷ್ಯರಿಂದಾದ ಪ್ರಥಮ ಗರ್ಭಫಲವನ್ನಾದರೋ ಅದನ್ನು ಬದಲುಕೊಟ್ಟು ಬಿಡಿಸುತ್ತೇವೆ’” ಎಂದು ಹೇಳಬೇಕು.
16 Qoy bu əlinizdə nişanə və gözünüz önündə xatirə olsun, çünki Rəbb bizi qüdrətli əli ilə Misirdən çıxartdı».
೧೬ಯೆಹೋವನು ಭುಜಬಲದಿಂದ ನಿಮ್ಮನ್ನು ಐಗುಪ್ತ ದೇಶದಿಂದ ಬಿಡಿಸಿದ ಸಂಗತಿಯನ್ನು ನೀವು ಜ್ಞಾಪಕದಲ್ಲಿಟ್ಟುಕೊಳ್ಳುವುದರ ಗುರುತಾಗಿ ಅದನ್ನು ನಿಮ್ಮ ಕೈಗಳ ಮೇಲೆಯೂ, ಹಣೆಯ ಮೇಲೆ ಜ್ಞಾಪಕಪಟ್ಟಿಯಂತೆಯೂ ಇರಬೇಕು.
17 Firon xalqı buraxdığı zaman Allah onları Filiştlilərin ölkəsindən yol qısa olduğuna baxmayaraq, o yolla gətirmədi. Çünki O dedi: «Yoxsa xalq müharibə görəndə bəlkə peşman olub Misirə qayıdar».
೧೭ಫರೋಹನು ಇಸ್ರಾಯೇಲರಿಗೆ ಹೋಗುವುದಕ್ಕೆ ಅಪ್ಪಣೆ ಕೊಟ್ಟಾಗ, ಫಿಲಿಷ್ಟಿಯರ ದೇಶದ ಮಾರ್ಗವು ಸಮೀಪವಾಗಿದ್ದರೂ ದೇವರು ಆ ದಾರಿಯಲ್ಲಿ ಅವರನ್ನು ಹೋಗಗೊಡಿಸಲಿಲ್ಲ. ಏಕೆಂದರೆ, “ದೇವರು, ಜನರು ಯುದ್ಧವನ್ನು ನೋಡಿ ಗಾಬರಿಯಾಗಿ ಮನಸ್ಸನ್ನು ಬದಲಾಯಿಸಿಕೊಂಡು ಐಗುಪ್ತಕ್ಕೆ ಹಿಂದಿರುಗಿ ಹೋದಾರೂ” ಎಂದು ಹೇಳಿದನು.
18 Allah xalqı Qırmızı dənizə tərəf səhra yolu ilə dolayı apardı. İsrail övladları Misir torpağından silahlanıb çıxdılar.
೧೮ಹೀಗಿರುವುದರಿಂದ ಯೆಹೋವನು ಜನರನ್ನು ಕೆಂಪುಸಮುದ್ರದ ಸಮೀಪದಲ್ಲಿರುವ ಮರುಭೂಮಿಯನ್ನು ಬಳಸಿಕೊಂಡು ಹೋಗುವಂತೆ ಮಾಡಿದನು. ಆದರೂ ಇಸ್ರಾಯೇಲರು ಯುದ್ಧಸನ್ನದ್ದರಾಗಿ ಐಗುಪ್ತ ದೇಶದೊಳಗಿಂದ ಹೊರಟುಬಂದರು.
19 Musa Yusifin sümüklərini özü ilə apardı, çünki Yusif İsrail övladlarına «Allah mütləq sizə nəzər salacaq. Gedən zaman özünüzlə sümüklərimi də buradan çıxarın» deyərək and içdirmişdi.
೧೯ಇದಲ್ಲದೆ ಯೋಸೇಫನು ಇಸ್ರಾಯೇಲರಿಗೆ, “ದೇವರು ನಿಸ್ಸಂದೇಹವಾಗಿ ನಿಮ್ಮನ್ನು ಪರಾಂಬರಿಸಿ ತನ್ನ ವಾಗ್ದಾನವನ್ನು ನೆರವೇರಿಸುವವನಾಗಿರುವುದರಿಂದ ನೀವು ಹೋಗುವಾಗ ನನ್ನ ದೇಹದ ಅಸ್ತಿಮೂಳೆಗಳನ್ನು ನಿಮ್ಮ ಸಂಗಡ ತೆಗೆದುಕೊಂಡು ಹೋಗಬೇಕು” ಎಂದು ಖಂಡಿತವಾದ ಪ್ರಮಾಣವನ್ನು ಮಾಡಿಸಿದ್ದರಿಂದ ಮೋಶೆಯು ಅವನ ಮೂಳೆಗಳನ್ನು ತನ್ನ ಸಂಗಡ ತೆಗೆದುಕೊಂಡು ಹೋದನು.
20 İsrail övladları Sukkotdan yola düşüb səhranın kənarında olan Etamda düşərgə saldılar.
೨೦ಅವರು ಸುಕ್ಕೋತಿನಿಂದ ಪ್ರಯಾಣ ಮಾಡಿ ಮರಳುಗಾಡಿನ ಅಂಚಿನಲ್ಲಿರುವ ಏತಾಮಿನಲ್ಲಿ ಪಾಳೆಯಮಾಡಿ ಇಳಿದುಕೊಂಡರು.
21 Rəbb onların qabağı ilə gündüz onlara yol göstərmək üçün bulud dirəyində, gecə isə onlara işıq vermək üçün od dirəyində gedirdi ki, gündüz də, gecə də gedə bilsinlər.
೨೧ಯೆಹೋವನು ಹಗಲು ಹೊತ್ತಿನಲ್ಲಿ ದಾರಿತೋರಿಸುವುದಕ್ಕೆ ಮೇಘಸ್ತಂಭದಲ್ಲಿಯೂ, ರಾತ್ರಿವೇಳೆಯಲ್ಲಿ ಬೆಳಕುಕೊಡುವುದಕ್ಕೆ ಅಗ್ನಿಸ್ತಂಭದಲ್ಲಿಯೂ ಇದ್ದು ಅವನ್ನು ನಡೆಸುತಿದ್ದನು. ಈ ರೀತಿಯಲ್ಲಿ ಅವರು ಹಗಲಿರುಳು ಪ್ರಯಾಣಮಾಡಿದರು.
22 Gündüzlər bulud dirəyi, gecələr isə od dirəyi xalqın önündən ayrılmadı.
೨೨ಹಗಲಿನಲ್ಲಿ ಮೇಘಸ್ತಂಭವಾಗಿ, ರಾತ್ರಿಯಲ್ಲಿ ಅಗ್ನಿಸ್ತಂಭವಾಗಿ ಜನರನ್ನು ಬಿಟ್ಟು ಹೋಗದೆ ಅಲ್ಲಿಯೇ ಇರುತ್ತಿದ್ದನು.

< Çixiş 13 >