< ᎨᏥᏅᏏᏛ ᏄᎾᏛᏁᎵᏙᎸᎢ 13 >

1 ᏧᎾᏁᎶᏗᏃ ᎥᏘᎣᎩ ᏧᎾᏓᏡᎬ ᎠᏁᎲᎩ ᎩᎶ ᎢᏳᎾᏍᏗ ᎠᎾᏙᎴᎰᏍᎩ ᎠᎴ ᏗᎾᏕᏲᎲᏍᎩ, ᎾᏍᎩ ᏆᏂᏆ, ᎠᎴ ᏏᎻᏂ ᎾᎦ ᏧᏙᎢᏛ, ᎠᎴ ᎷᏏᏯ ᏌᎵᏂ ᎡᎯ, ᎠᎴ ᎹᏁᏂ ᎾᏍᎩ ᎢᏧᎳᎭ ᏧᎾᏛᏒᎯ ᎡᎶᏛ ᏅᎩ ᎢᎦᏚᎩ ᎨᏒ ᏍᎦᏚᎩ ᎠᏥᎦᏘᏗᏍᏗ, ᎠᎴ ᏐᎳ.
ಅಂತಿಯೋಕ್ಯದ ಸಭೆಯಲ್ಲಿ, ಪ್ರವಾದಿಗಳೂ ಬೋಧಕರೂ ಇದ್ದರು. ಅವರು ಯಾರೆಂದರೆ ಬಾರ್ನಬನು, ನೀಗರ ಎಂದು ಕರೆಯಲಾಗುತ್ತಿದ್ದ ಸಿಮೆಯೋನ, ಕುರೇನೆದ ಲೂಕ್ಯ, ಚತುರಾಧಿಪತಿ ಹೆರೋದನೊಂದಿಗೆ ಬೆಳೆದ ಮೆನಹೇನ ಮತ್ತು ಸೌಲ ಮುಂತಾದವರೇ.
2 ᎠᎾᏓᏙᎵᏍᏓᏁᎲᏃ ᎤᎬᏫᏳᎯ ᎠᎴ ᎠᎹᏟ ᎠᏅᏍᎬᎢ, ᎦᎸᏉᏗᏳ ᎠᏓᏅᏙ ᎯᎠ ᏄᏪᏎᎢ; ᏗᏍᎩᏯᏓᏓᎴᏓᏏ ᏆᏂᏆ ᎠᎴ ᏐᎳ ᏧᏂᎸᏫᏍᏓᏁᏗᏱ ᎦᏥᏯᏑᏰᏒ ᎤᎬᏩᎵ.
ಇವರೆಲ್ಲರೂ ಕರ್ತದೇವರನ್ನು ಆರಾಧಿಸಿ, ಉಪವಾಸಮಾಡುತ್ತಿದ್ದರು. ಆಗ ಪವಿತ್ರಾತ್ಮ ದೇವರು, “ಬಾರ್ನಬನನ್ನೂ ಸೌಲನನ್ನೂ ನಾನು ಕರೆದಿರುವ ಕಾರ್ಯಕ್ಕಾಗಿ ಅವರನ್ನು ನನಗಾಗಿ ಪ್ರತ್ಯೇಕಿಸಿರಿ,” ಎಂದರು.
3 ᎿᎭᏉᏃ ᎠᎹᏟ ᎤᏅᏅ ᎠᎴ ᎤᎾᏓᏙᎵᏍᏔᏅ ᎠᎴ ᏚᎾᏏᏔᏛ, ᏚᏂᏅᏎᎢ.
ಆಗ ಅವರು ಉಪವಾಸವಿದ್ದು ಪ್ರಾರ್ಥನೆಮಾಡಿ, ಅವರಿಬ್ಬರ ಮೇಲೆ ಕೈಗಳನ್ನಿಟ್ಟು ಕಳುಹಿಸಿಬಿಟ್ಟರು.
4 ᎾᏍᎩᏃ ᎦᎸᏉᏗᏳ ᎠᏓᏅᏙ ᎤᏂᏅᏒ, ᏏᎷᏏᏱ ᏭᏂᎶᏎᎢ, ᎾᎿᎭᏃ ᏫᎤᏁᏅ ᏥᏳᎯ ᏫᎤᎾᏣᏁ ᏌᏈ ᏫᎤᏂᎷᏤᎢ.
ಪವಿತ್ರಾತ್ಮ ದೇವರಿಂದ ಕಳುಹಿಸಲಾದ ಅವರಿಬ್ಬರೂ ಸೆಲ್ಯೂಕ್ಯಕ್ಕೆ ಹೋಗಿ ಅಲ್ಲಿಂದ ನೌಕೆಯಲ್ಲಿ ಪ್ರಯಾಣಮಾಡಿ ಸೈಪ್ರಸಿಗೆ ತಲುಪಿದರು.
5 ᏌᎳᎻᏃ ᎠᏁᏙᎲᎢ ᎤᏂᏃᎮᎴ ᎠᏂᏧᏏ ᏧᏂᎳᏫᎢᏍᏗᏱ ᎧᏃᎮᏛ ᎤᏁᎳᏅᎯ ᎤᏤᎵᎦ, ᎠᎾᏘᏁᎮᏃ ᎾᏍᏉ ᏣᏂ ᎤᏂᏍᏕᎸᎯᏙᎯ.
ಸಲಮೀಸಿಗೆ ಬಂದು, ಅಲ್ಲಿಯ ಯೆಹೂದ್ಯರ ಸಭಾಮಂದಿರಗಳಲ್ಲಿ ದೇವರ ವಾಕ್ಯವನ್ನು ಸಾರಿದರು. ಮಾರ್ಕನೆನಿಸಿಕೊಂಡ ಯೋಹಾನನು ಸಹ ಅವರೊಂದಿಗಿದ್ದು ಅವರಿಗೆ ಸಹಾಯಕನಾಗಿದ್ದನು.
6 ᎤᏂᎶᏐᏅᏃ ᏂᎬᎾᏛ ᎠᎹᏰᎵ ᎨᏒᎢ ᎨᏆ ᎢᏴᏛ, ᎾᎿᎭᎤᏂᏩᏛᎮ ᎩᎶ ᎢᏳᏍᏗ ᎠᏧᏏ ᏆᏥᏌ ᏧᏙᎢᏛ, ᎠᏙᏂᏍᎩ, ᎤᏠᎾᏍᏗ ᎠᏙᎴᎰᏍᎩ,
ಅವರು ಆ ದ್ವೀಪದಲ್ಲೆಲ್ಲಾ ಪ್ರಯಾಣಮಾಡಿ ಪಾಫೋಸ್ ಎಂಬಲ್ಲಿಗೆ ಬಂದರು. ಅಲ್ಲಿ ಮಂತ್ರವಾದಿಯೂ ಸುಳ್ಳುಪ್ರವಾದಿಯೂ ಆಗಿದ್ದ “ಬಾರ್ ಯೇಸು” ಎಂಬ ಹೆಸರಿನ ಒಬ್ಬ ಯೆಹೂದ್ಯನನ್ನು ಕಂಡರು.
7 ᎾᏍᎩ ᎠᏁᏙᎮ ᎾᎿᎭᎦᏓ ᎠᎲ ᎠᏥᎦᏘᏗᏍᏗ ᏌᏥᏯ ᏉᎳ ᏧᏙᎢᏛ ᎠᎦᏔᎿᎭᎢ ᎠᏍᎦᏯ, ᎾᏍᎩ ᏫᏚᏯᏅᎮ ᏆᏂᏆ ᎠᎴ ᏐᎳ ᎤᏔᏲᎴ ᎤᏛᎪᏗᏱ ᎧᏃᎮᏛ ᎤᏁᎳᏅᎯ ᎤᏤᎵᎦ.
ಅವನು ರಾಜ್ಯಪಾಲ ಸೆರ್ಗ್ಯಪೌಲನ ಜೊತೆಗಿದ್ದನು. ಈ ರಾಜ್ಯಪಾಲನು ಬುದ್ಧಿವಂತನಾಗಿದ್ದನು. ಇವನು ದೇವರ ವಾಕ್ಯವನ್ನು ಕೇಳುವ ಉದ್ದೇಶದಿಂದ ಬಾರ್ನಬ ಮತ್ತು ಸೌಲರನ್ನು ಕರೆಕಳುಹಿಸಿದನು.
8 ᎠᏎᏃ ᎡᎵᏑ ᎠᏙᏂᏍᎩ, ᎾᏍᎩᏰᏃ ᏄᏍᏗ ᏕᎤᏙᎥ ᎠᏁᏢᏔᏅᎯ, ᎤᏂᎭᎷᎩᏍᎨᎢ, ᎤᏚᎵᏍᎨ ᎠᏥᎦᏘᏗᏍᏗ ᎤᎦᏔᎲᎡᏗᏱ ᎤᏬᎯᏳᏒᎢ.
ಆದರೆ ಮಂತ್ರವಾದಿಯಾದ ಎಲುಮನು ಅವರನ್ನು ವಿರೋಧಿಸಿ ರಾಜ್ಯಪಾಲನು ವಿಶ್ವಾಸಿಯಾಗದಂತೆ ಅಡ್ಡಿಮಾಡಲು ಪ್ರಯತ್ನಿಸಿದನು. ಎಲುಮ ಎಂಬ ಹೆಸರಿಗೆ ಮಂತ್ರವಾದಿ ಎಂಬುದೇ ಅರ್ಥ.
9 ᏐᎳᏃ ᎾᏍᎩ ᎾᏍᏉ ᏉᎳ ᏥᏚᏙᎥ, ᎦᎸᏉᏗᏳ ᎠᏓᏅᏙ ᎤᎧᎵᏨᎯ ᎨᏎ ᎾᏍᎩ ᎤᏯᏅᏒᎯ ᏚᎧᎿᎭᏁᎢ,
ಆಗ ಪೌಲನೆಂದೂ ಕರೆಯಲಾಗುತ್ತಿದ್ದ ಸೌಲನು, ಪವಿತ್ರಾತ್ಮಭರಿತನಾಗಿ, ಎಲುಮನನ್ನು ನೇರವಾಗಿ ದೃಷ್ಟಿಸಿ,
10 ᎯᎠ ᏄᏪᏎᎢ; ᎦᎶᏄᎮᏛ ᎠᎴ ᎤᏁᎫᏥᏛ ᏣᎧᎵᏨᎯ, ᎠᏍᎩᎾ ᎤᏪᏥ, ᎭᏡᏗᏍᎩ ᏂᎦᎥ ᏚᏳᎪᏛ ᎨᏒᎢ, ᏝᏍᎪ ᏴᏘᏑᎵᎪᏥ ᎤᏣᏘᏂ ᏂᏕᎲᏁᎲ ᏚᏳᎪᏛ ᏅᏃᎯ ᎤᏁᎳᏅᎯ ᏧᏤᎵᎦ?
“ಎಲೈ ಸೈತಾನನ ಮಗನೇ, ನೀತಿಗೆಲ್ಲಾ ವೈರಿಯೇ, ನಿನ್ನಲ್ಲಿ ಎಲ್ಲಾ ತರದ ಮೋಸವೂ ಕುತಂತ್ರವೂ ತುಂಬಿವೆ. ಕರ್ತದೇವರ ಸನ್ಮಾರ್ಗಗಳಿಗೆ ಅಡ್ಡಿಯಾಗುವುದನ್ನು ನೀನೆಂದೂ ನಿಲ್ಲಿಸುವುದಿಲ್ಲವೋ?
11 Ꭷ ᎬᏂᏳᏉ ᎤᎬᏫᏳᎯ ᏣᏏᏔᏓ, ᎠᎴ ᏙᏘᎨᏩᏥ ᎥᏝ ᏱᎪᏩᏘᏍᎨᏍᏗ ᏅᏙ ᎢᎸᏍᎩ ᎢᎪᎯᏛ. ᎩᎳᏉᏃ ᎢᏴᏛ ᎤᎵᏏᎩ ᎤᏭᏢᏁᎢ, ᎠᎴ ᎡᏙᎮ ᏚᏲᎮ ᎩᎶ ᎬᏬᏱᏂᏙᎯ.
ಇಗೋ ಕರ್ತದೇವರ ಹಸ್ತ ನಿನಗೆ ವಿರೋಧವಾಗಿದೆ. ಈಗ ನೀನು ಕುರುಡನಾಗಿ, ಸ್ವಲ್ಪ ಕಾಲ ಸೂರ್ಯನ ಬೆಳಕನ್ನು ಕಾಣದೇ ಹೋಗುವೆ,” ಎಂದನು. ತಕ್ಷಣವೇ ಅವನ ಮೇಲೆ ಮಂಜು ಮುಸುಕಿ ಕತ್ತಲೆ ಆವರಿಸಿತು. ಅವನು ತಡವರಿಸುತ್ತಾ ತನ್ನನ್ನು ಯಾರಾದರೂ ಕೈಹಿಡಿದು ನಡೆಸುವರೋ ಎಂದು ಹುಡುಕಾಡಿದನು.
12 ᎿᎭᏉᏃ ᎠᏥᎦᏘᏗᏍᏗ ᎤᎪᎲ ᎾᏍᎩ ᏄᎵᏍᏔᏅᎢ, ᎤᏬᎯᏳᏁᎢ, ᎠᏍᏆᏂᎪᏍᎨ ᏄᏍᏛ ᏓᎾᏕᏲᎲᏍᎬ ᎤᎬᏫᏳᎯ ᎤᏤᎵᎦ.
ಸಂಭವಿಸಿದ್ದೆಲ್ಲವನ್ನೂ ರಾಜ್ಯಪಾಲನು ಕಂಡು, ಕರ್ತ ಯೇಸುವಿನ ವಿಷಯವಾಗಿದ್ದ ಬೋಧನೆಯ ಬಗ್ಗೆ ಆಶ್ಚರ್ಯಪಟ್ಟು ವಿಶ್ವಾಸವನ್ನಿಟ್ಟನು.
13 ᎿᎭᏉᏃ ᏉᎳ ᎠᎴ ᎾᏍᎩ ᎠᏁᎯ ᎨᏆ ᏫᎤᎾᏣᏅ ᏭᏂᎷᏤ ᏆᎩ ᎦᏚᎲ ᏆᎻᏈᎵᏱ. ᏣᏂᏃ ᎤᎾᏓᏓᎴᏓᏁᎸ ᏥᎷᏏᎵᎻ ᏫᎤᎶᏎᎢ.
ಪಾಫೋಸಿನಿಂದ, ಪೌಲ ಮತ್ತು ಅವನ ಸಂಗಡಿಗರು ಪಂಫುಲ್ಯಕ್ಕೆ ಸೇರಿದ ಪೆರ್ಗೆ ಎಂಬಲ್ಲಿಗೆ ನೌಕೆಯಲ್ಲಿ ಪ್ರಯಾಣಮಾಡಿದರು, ಅಲ್ಲಿ ಯೋಹಾನನು ಅವರನ್ನು ಬಿಟ್ಟು ಯೆರೂಸಲೇಮಿಗೆ ಹಿಂತಿರುಗಿ ಹೋದನು.
14 ᎾᏍᎩᏃ ᏆᎩ ᏫᎤᎾᏂᎩᏒ ᏭᏂᎷᏤ ᎥᏘᎣᎩ ᎦᏚᎲ ᏆᏏᏗᏱ; ᎤᎾᏙᏓᏆᏍᎬᏃ ᎢᎦ ᏗᎦᎳᏫᎢᏍᏗᏱ ᏭᏂᏴᎸ ᎤᎾᏅᏁᎢ.
ಉಳಿದವರು ಪೆರ್ಗೆದಿಂದ ಪಿಸಿದ್ಯದ ಅಂತಿಯೋಕ್ಯಕ್ಕೆ ಹೋದರು. ಸಬ್ಬತ್ ದಿನ ಅವರು ಸಭಾಮಂದಿರದೊಳಗೆ ಹೋಗಿ ಕುಳಿತುಕೊಂಡರು.
15 ᏚᏂᎪᎵᏰᎥᏃ ᏗᎧᎿᎭᏩᏛᏍᏗ ᎠᎴ ᎠᎾᏙᎴᎰᏍᎩ, ᏗᎦᎳᏫᎢᏍᏗᏱ ᎨᏥᎦᏘᏗᏍᏗ ᎤᎾᏓᏅᏎ ᎯᎠ ᏫᏂᏚᏂᏪᏎᎴᎢ; ᎢᏥᏍᎦᏯ ᎢᏓᏓᏅᏟ, ᎢᏳᏃ ᏗᎨᏥᏬᏁᏙᏗ ᎨᏎᏍᏗ ᏴᏫ, ᎢᏥᏁᎩ.
ನಿಯಮ ಮತ್ತು ಪ್ರವಾದಿಗಳ ಗ್ರಂಥವು ಪಾರಾಯಣವಾದ ತರುವಾಯ, ಸಭಾಮಂದಿರದ ಅಧಿಕಾರಿಗಳು ಅವರಿಗೆ, “ಸಹೋದರರೇ, ಜನರಿಗೆ ಪ್ರೋತ್ಸಾಹ ಕೊಡುವ ಸಂದೇಶ ನಿಮ್ಮಲ್ಲಿದ್ದರೆ, ಮಾತನಾಡಿರಿ,” ಎಂದು ಕೇಳಿಕೊಂಡರು.
16 ᏉᎳᏃ ᏚᎴᏅ, ᎤᏬᏰᏂᏃ ᎤᏖᎸᏅ, ᎯᎠ ᏄᏪᏎᎢ; ᎢᏥᏍᎦᏯ ᎢᏏᎵ ᏧᏪᏥ ᎠᎴ ᎤᏁᎳᏅᎯ ᎢᏥᎾᏰᏍᎩ, ᎢᏣᏛᏓᏍᏓ.
ಪೌಲನು ಎದ್ದು ನಿಂತು, ಕೈಸನ್ನೆ ಮಾಡಿ ಹೀಗೆ ಹೇಳಿದನು: “ಇಸ್ರಾಯೇಲ್ ಜನರೇ, ದೇವರಲ್ಲಿ ಭಯಭಕ್ತಿಯುಳ್ಳವರೇ, ಕೇಳಿರಿ!
17 ᎤᏁᎳᏅᎯ ᎯᎠ ᏴᏫ ᎢᏏᎵ ᎤᎾᏤᎵᎦ ᏚᏑᏰᏎ ᏗᎩᎦᏴᎵᎨᎢ, ᎠᎴ ᏚᏌᎳᏓᏁ ᎯᎠ ᏴᏫ ᎠᏁᏙᎯᏉ ᏥᎨᏎ ᎢᏥᏈᏱ, ᎠᎴ ᎧᏃᎨᏂ ᎤᏌᎳᏛ ᎤᏩᏔᏁ ᎾᎿᎭᏙᏧᏄᎪᏫᏎᎢ.
ಈ ಇಸ್ರಾಯೇಲ್ ಜನರ ದೇವರು ನಮ್ಮ ಪಿತೃಗಳನ್ನು ಆಯ್ದುಕೊಂಡರು; ಈಜಿಪ್ಟಿನಲ್ಲಿ ನಮ್ಮ ಜನರು ವಾಸಿಸುತ್ತಿದ್ದಾಗ; ಅವರನ್ನು ಪ್ರಬಲರನ್ನಾಗಿ ಮಾಡಿ ತಮ್ಮ ಭುಜಬಲವನ್ನು ಪ್ರಯೋಗಿಸಿ ಆ ದೇಶದೊಳಗಿಂದ ಅವರನ್ನು ಬಿಡಿಸಿ ಕರೆತಂದರು;
18 ᏅᎦᏍᎪᎯᏃ ᏧᏕᏘᏴᏛ ᎢᎪᎯᏛ ᎤᏁᎳᎩ ᎤᏪᎵᏎ ᏄᎾᏛᏁᎵᏙᎸ ᎢᎾᎨᎢ.
ಅರಣ್ಯದಲ್ಲಿ ಸುಮಾರು ನಲವತ್ತು ವರ್ಷ ಅವರ ನಡತೆಯನ್ನು ಸಹಿಸಿಕೊಂಡರು.
19 ᏚᏒᏅᏃ ᎦᎵᏉᎩ ᎢᏳᎾᏓᎴᎩ ᏴᏫ ᎨᎾᏂ ᎠᏁᎯ, ᎾᏍᎩ ᎤᎾᏤᎵ ᎦᏙᎯ ᏚᏯᏙᎮᎴ ᏓᎾᏎᏍᎬᎢ.
ಕಾನಾನ್ ದೇಶದಲ್ಲಿದ್ದ ಏಳು ರಾಜ್ಯಗಳನ್ನು ಜಯಿಸಿ, ಅವರ ದೇಶವನ್ನು ತಮ್ಮ ಜನರಿಗೆ ಬಾಧ್ಯವಾಗಿ ದಯಪಾಲಿಸಿದರು.
20 ᎣᏂᏃ ᏚᏪᎧᏁᎴ ᏗᏄᎪᏗᏍᎩ ᏅᎩᏧᏈ ᎯᏍᎩᏍᎪᎯ ᏧᏕᏘᏴᏛ ᎢᏴᏛ ᎢᎪᎯᏛ, ᏌᎻ ᎠᏙᎴᎰᏍᎩ ᏤᎮ ᎢᏯᏍᏘ.
ಇದಕ್ಕೆ ನಾನೂರ ಐವತ್ತು ವರ್ಷಗಳ ಕಾಲ ಹಿಡಿಯಿತು. “ಇದಾದನಂತರ, ದೇವರು ಅವರಿಗೆ ಪ್ರವಾದಿ ಸಮುಯೇಲನ ಸಮಯದವರೆಗೆ ನ್ಯಾಯಸ್ಥಾಪಕರನ್ನು ದಯಪಾಲಿಸಿದರು.
21 ᎿᎭᏉᏃ ᎤᏂᏔᏲᎴ ᎤᎬᏫᏳᎯ; ᎤᏁᎳᏅᎯᏃ ᏚᏪᎧᏁᎴ ᏐᎳ ᎩᏌ ᎤᏪᏥ ᏇᏂ ᏧᏴᏫ, ᏅᎦᏍᎪᎯ ᏧᏕᏘᏴᏛ ᎢᎪᎯᏛ.
ಅನಂತರ ಜನರು ಒಬ್ಬ ಅರಸನು ತಮಗೆ ಬೇಕೆಂದು ಕೇಳಿಕೊಳ್ಳಲು, ದೇವರು ಬೆನ್ಯಾಮೀನ್ ಗೋತ್ರದ ಕೀಷನ ಮಗ ಸೌಲನನ್ನು ಅವರಿಗೆ ಕೊಟ್ಟರು. ಇವನು ನಲವತ್ತು ವರ್ಷ ಆಳ್ವಿಕೆ ಮಾಡಿದನು.
22 ᎾᏍᎩᏃ ᎤᏪᎧᎲᏒ, ᏚᎾᏄᎪᏫᏎᎴ ᏕᏫ ᎤᎾᏤᎵ ᎤᎬᏫᏳᎯ ᎢᏳᎵᏍᏙᏗᏱ; ᎾᏍᎩ ᎾᏍᏉ ᏧᏁᎢᏍᏔᏁ ᎯᎠ ᏥᏄᏪᏎᎢ; ᏥᏩᏛᎲ ᏕᏫ ᏤᏏ ᎤᏪᏥ, ᎠᏍᎦᏯ ᎣᏍᏛ ᏥᏰᎸᎢ, ᎾᏍᎩ ᏅᏛᏛᏁᎵ ᏂᎦᎥ ᎦᏓᏅᏖᏍᎬᎢ.
ದೇವರು ಸೌಲನನ್ನು ಅರಸುತನದಿಂದ ತೆಗೆದುಹಾಕಿ, ದೇವರು ದಾವೀದನನ್ನು ಅವರ ಅರಸನನ್ನಾಗಿ ಎಬ್ಬಿಸಿದರು. ಇವನನ್ನು ಕುರಿತು, ‘ಇಷಯನ ಮಗ ದಾವೀದನು ನನಗೆ ಸಿಕ್ಕಿದನು. ನನ್ನ ಹೃದಯಕ್ಕೆ ತಕ್ಕಂಥ ಮನುಷ್ಯನು; ಇವನು ನಾನು ಅಪೇಕ್ಷಿಸುವುದೆಲ್ಲವನ್ನೂ ಮಾಡುವನು,’ ಎಂದು ದೇವರು ತಾವೇ ಸಾಕ್ಷಿಕೊಟ್ಟರು.
23 ᎾᏍᎩ ᎤᏁᏢᏔᏅᏛ ᎨᏒ ᎤᏁᎳᏅᎯ ᎾᏍᎩᏯ ᎤᏚᎢᏍᏛᎢ ᏚᎾᏄᎪᏫᏎᎸ ᎢᏏᎵ ᎤᏂᏍᏕᎵᏍᎩ, ᎾᏍᎩ ᏥᏌ;
“ಈ ದಾವೀದನ ಸಂತತಿಯಲ್ಲಿಯೇ ದೇವರು ಇಸ್ರಾಯೇಲಿಗೆ ತನ್ನ ವಾಗ್ದಾನದಂತೆ ರಕ್ಷಕ ಯೇಸುವನ್ನು ತಂದರು.
24 ᎠᏏᏉᏃ ᏂᎦᎷᎬᎾ ᏥᎨᏎᎢ, ᏣᏂ ᏧᎵᏥᏙᏁᎸᎯ ᎨᏎ ᎾᏂᎥ ᏴᏫ ᎢᏏᎵ, ᏧᏃᎮᎮᎸᎯ ᎨᏎ ᏗᏓᏬᏍᏗ ᎨᏒ ᎦᏁᏟᏴᏍᏗ ᎣᏓᏅᏛ ᎤᎬᏩᎵ.
ಯೇಸು ಬರುವ ಮೊದಲು, ಸ್ನಾನಿಕ ಯೋಹಾನನು ಎಲ್ಲಾ ಇಸ್ರಾಯೇಲರಿಗೆ ಪಶ್ಚಾತ್ತಾಪ ಮತ್ತು ದೀಕ್ಷಾಸ್ನಾನದ ಬಗ್ಗೆ ಸಾರಿದನು.
25 ᏣᏂᏃ ᎿᎭᏉ ᎠᎧᎵᎢᎮ ᏧᎸᏫᏍᏓᏁᏗ ᎨᏒᎢ, ᎯᎠ ᏄᏪᏎᎢ; ᎦᎪ ᏍᎩᏰᎵᏎᎭ? ᎥᏝ ᎠᏴ ᎾᏍᎩ ᏱᎩ, ᎠᏎᏃ ᎬᏂᏳᏉ ᎣᏂ ᏓᏯᎢ ᎾᏍᎩ ᏚᎳᏑᎸ ᎥᏝ ᎠᏴ ᏰᎵ ᏗᎬᎩᎧᏁᏴᏗ ᏱᎩ.
ಯೋಹಾನನು ತನ್ನ ಸೇವೆಯನ್ನು ಪೂರೈಸುತ್ತಿರುವಾಗ, ‘ನನ್ನನ್ನು ಯಾರೆಂದು ನೀವು ನೆನೆಸುತ್ತೀರಿ? ನೀವು ಎದುರು ನೋಡುತ್ತಿರುವ ಅವರು ನಾನಲ್ಲ, ಇಗೋ, ಅವರು ನನ್ನ ನಂತರ ಬರುತ್ತಾರೆ. ಅವರ ಪಾದರಕ್ಷೆಗಳನ್ನು ಬಿಚ್ಚುವುದಕ್ಕೂ ನಾನು ಯೋಗ್ಯನಲ್ಲ,’ ಎಂದನು.
26 ᎢᏥᏍᎦᏯ ᎢᏓᏓᏅᏟ, ᎡᏆᎭᎻ ᏅᏓᏳᏁᏢᏔᏅᏛ, ᎠᎴ ᎩᎶ ᎢᏣᏓᏑᏰᏍᏗ ᎡᏥᎾᏰᏍᎩ ᎤᏁᎳᏅᎯ, ᏂᎯ ᎢᏣᏛᎪᏗ ᎡᏥᏰᎸᎾᏁᎸ ᎧᏃᎮᏛ ᎾᏍᎩ ᎯᎠ ᎠᎵᏍᏕᎸᏙᏗ ᎨᏒ ᎧᏃᎮᏍᎩ.
“ಅಬ್ರಹಾಮನ ವಂಶದವರಾದ ಸಹೋದರರೇ, ದೇವರಲ್ಲಿ ಭಯಭಕ್ತಿಯುಳ್ಳ ಇನ್ನಿತರರೇ, ಈ ರಕ್ಷಣೆಯ ಸಂದೇಶ ಕಳುಹಿಸಿರುವುದು ನಮಗಾಗಿಯೇ.
27 ᏥᎷᏏᎵᎻᏰᏃ ᎠᏁᎯ, ᎠᎴ ᏧᎾᏤᎵ ᎤᏂᎬᏫᏳᏌᏕᎩ, ᎾᏍᎩ ᏂᎬᏩᎦᏔᎲᎾ ᎨᏒ ᎢᏳᏍᏗ ᎠᎴ ᎾᏍᏉ ᎾᏂᎦᏔᎲᎾ ᎨᏒ ᎢᏳᏍᏗ ᎠᏂᏁᎬ ᎠᎾᏙᎴᎰᏍᎩ ᏄᎾᏙᏓᏈᏒ ᏥᏓᏂᎪᎵᏰᎠ, ᎾᏍᎩ ᏚᏃᎯᏳᏔᏅ ᏥᏚᏄᎪᏓᏁᎴᎢ.
ಯೆರೂಸಲೇಮಿನಲ್ಲಿ ವಾಸವಾಗಿರುವವರೂ ಅವರ ಅಧಿಕಾರಿಗಳೂ ಯೇಸುವನ್ನು ಯಾರೆಂದು ಗುರುತಿಸಿಲಿಲ್ಲ. ಆದರೂ ಅವರು ಪ್ರತಿ ಸಬ್ಬತ್ ದಿನದಲ್ಲಿ ಪಾರಾಯಣವಾಗುವ ಪ್ರವಾದಿಗಳ ವಾಕ್ಯಗಳನ್ನೂ ಗ್ರಹಿಸಲಿಲ್ಲ. ಅವರು ಯೇಸುವನ್ನು ಅಪರಾಧಿಯೆಂದು ತೀರ್ಪು ಮಾಡಿ, ಪ್ರವಾದಿಗಳ ವಾಕ್ಯಗಳನ್ನು ನೆರವೇರಿಸಿದರು.
28 ᏄᏂᏩᏛᎲᎾᏃ ᎨᏎ ᏰᎵ ᎬᏩᏲᎱᎯᏍᏗ ᎨᏒᎢ, ᎠᏎᏃ ᎤᏂᏔᏲᏎᎴ ᏆᎴᏗ ᎾᏍᎩ ᎠᏥᎢᏍᏗᏱ.
ಮರಣದಂಡನೆ ವಿಧಿಸಲು ಯಾವುದೇ ಕಾರಣ ಸಿಗದಿದ್ದರೂ ಯೇಸುವನ್ನು ಕೊಲ್ಲಬೇಕೆಂದು ಪಿಲಾತನನ್ನು ಕೇಳಿಕೊಂಡರು.
29 ᎤᏂᏍᏆᏛᏃ ᏂᎦᎥ ᎪᏪᎸ ᎾᏍᎩ ᎠᏥᏃᎮᏍᎬᎢ, ᎤᎾᏕᏎ ᎠᏓ ᎨᏛᎢ, ᎠᎴ ᎠᏤᎵᏍᏛ ᎤᏂᏅᏁᎢ.
ಪವಿತ್ರ ವೇದದಲ್ಲಿ ಯೇಸುವನ್ನು ಕುರಿತು ಬರೆದಿರುವ ಪ್ರಕಾರ ನೆರವೇರಿದ ನಂತರ, ಅವರನ್ನು ಶಿಲುಬೆಯಿಂದ ಕೆಳಗಿಳಿಸಿ ಸಮಾಧಿಯಲ್ಲಿಟ್ಟರು.
30 ᎠᏎᏃ ᎤᏁᎳᏅᎯ ᏚᎴᏔᏁ ᎤᏲᎱᏒᎢ.
ಆದರೆ ದೇವರು ಯೇಸುವನ್ನು ಸತ್ತವರೊಳಗಿಂದ ಜೀವಂತವಾಗಿ ಎಬ್ಬಿಸಿದರು.
31 ᎠᎴ ᎤᏬᎯᏤ ᎬᏩᎪᏩᏘᏍᎨ ᎨᎵᎵ ᎾᏍᎩ ᏅᏓᎬᏩᏍᏓᏩᏛᏛ ᎢᏧᎳᎭ ᏥᎷᏏᎵᎻ ᎤᏂᎷᏨᎯ; ᎾᏍᎩ ᏧᏤᎵ ᎬᏩᏃᎮᏍᎩ ᏴᏫ ᎠᏂᎦᏔᎲᎢ.
ಯೇಸುವಿನೊಡನೆ ಗಲಿಲಾಯದಿಂದ ಯೆರೂಸಲೇಮಿನವರೆಗೆ ಮುಂಚೆ ಬಂದಿದ್ದವರಿಗೆ ಯೇಸು ಅನೇಕ ದಿನಗಳವರೆಗೆ ಕಾಣಿಸಿಕೊಂಡರು. ಈಗ ಅವರೇ ನಮ್ಮ ಜನರಿಗೆ ಯೇಸುವಿನ ಸಾಕ್ಷಿಗಳಾಗಿದ್ದಾರೆ.
32 ᎠᏎᏃ ᏂᎯ ᎢᏨᏃᎮᎮᎭ ᎣᏍᏛ ᎧᏃᎮᏛ ᎾᏍᎩ ᏥᎨᏥᏚᎢᏍᏓᏁᎴ ᏗᎩᎦᏴᎵᎨᎢ,
“ನಾವು ನಿಮಗೆ, ದೇವರು ನಮ್ಮ ಪಿತೃಗಳಿಗೆ ವಾಗ್ದಾನ ಮಾಡಿದ್ದನ್ನು ಶುಭವರ್ತಮಾನವನ್ನಾಗಿ ಹೇಳುತ್ತಿದ್ದೇವೆ.
33 ᎾᏍᎩ ᎤᏁᎳᏅᎯ ᎤᏙᎯᏳᎯ ᏂᎬᏁᎸ ᎠᏴ ᎾᏍᎩ ᏧᏁᏥ, ᎾᏍᎩ ᏥᏌ ᏕᎤᎴᏔᏅᎢ; ᎾᏍᎩᏯ ᎾᏍᏉ ᎯᎠ ᏥᏂᎬᏅ ᏥᎪᏪᎳ ᏗᎧᏃᎩᏍᏗᏱ ᏔᎵᏁᎢ; “ᎠᏇᏥ ᏂᎯ, ᎪᎯ ᎢᎦ ᏍᏆᏕᏁᎸ.”
ದೇವರು ಯೇಸುವನ್ನು ಎಬ್ಬಿಸುವುದರ ಮೂಲಕ ಅವರ ಸಂತತಿಯಾದ ನಮಗಿಂದು ಆ ವಾಗ್ದಾನವನ್ನು ನೆರವೇರಿಸಿದ್ದಾರೆ; ಮಾತ್ರವಲ್ಲದೆ ಎರಡನೆಯ ಕೀರ್ತನೆಯಲ್ಲಿ ಹೀಗೆ ಬರೆಯಲಾಗಿದೆ: “‘ನೀನು ನನ್ನ ಪುತ್ರನು, ಇಂದು ನಾನು ನಿನ್ನ ತಂದೆಯಾಗಿದ್ದೇನೆ.’
34 ᎾᏃ ᏕᎤᎴᏔᏅᎢ ᎤᏲᎱᏒᎢ ᎿᎭᏉ ᎤᎪᎯᏍᏗ ᏂᎨᏒᎾ ᎨᏒᎢ, ᎯᎠ ᏂᎤᏪᏎᎢ; “ᏓᏨᏁᎵ ᎤᏲᎢᏍᏗ ᏂᎨᏒᎾ ᎣᏍᏛ ᎢᏳᎵᏍᏓᏁᏗ ᏕᏫ.”
ಹೀಗೆ ಯೇಸುವನ್ನು ಸಮಾಧಿಯಲ್ಲಿ ಕೊಳೆಯಲು ಬಿಡದೇ ದೇವರು ಅವರನ್ನು ಜೀವಂತವಾಗಿ ಎಬ್ಬಿಸಿದ ಸತ್ಯವು ಈ ಮಾತುಗಳಲ್ಲಿ ಬಂದಿದೆ: “‘ನಾನು ದಾವೀದನಿಗೆ ವಾಗ್ದಾನ ಮಾಡಿದ ಪವಿತ್ರ ಹಾಗೂ ನಿಶ್ಚಯವಾದ ಆಶೀರ್ವಾದಗಳನ್ನು ನಿಮಗೆ ಕೊಡುವೆನು’
35 ᎾᏍᎩ ᎢᏳᏍᏗ ᎾᏍᏉ ᎯᎠ ᏂᎦᏪᎠ ᏅᏩᏓᎴ ᎪᏪᎸᎢ; “ᎾᏍᎦᏅᎾ ᏣᏤᎵ ᎥᏝ ᎤᏁᎳᎩ ᏭᎪᎯ ᎦᎯᏰᎵᏎᏗ ᏱᎩ.”
ಇನ್ನೊಂದು ಕೀರ್ತನೆಯಲ್ಲಿ ಹೀಗೆ ಹೇಳಿದ್ದಾರೆ: “‘ನಿಮ್ಮ ಪರಿಶುದ್ಧ ವ್ಯಕ್ತಿಯನ್ನು ಕೊಳೆಯುವಂತೆ ಬಿಡುವುದೇ ಇಲ್ಲ.’
36 ᏕᏫᏰᏃ ᎪᎱᏍᏗ ᏚᏛᏁᎸ ᎾᎯᏳ ᎤᎾᏕᏅᎯ ᎤᏁᎳᏅᎯ ᎠᏓᏅᏖᏍᎬ ᎾᏍᎩᏯᎢ, ᎤᎸᏁᎢ, ᎠᎴ ᏧᎦᏴᎵᎨ ᏓᏂᎾᎥ ᎠᏥᏅᏁᎢ, ᎠᎴ ᎤᎪᏎᎢ.
“ದಾವೀದನು ತನ್ನ ಜೀವಮಾನದಲ್ಲಿ ದೇವರ ಉದ್ದೇಶಕ್ಕೆ ಅನುಗುಣವಾಗಿ ಸೇವೆಮಾಡಿ ಮರಣಹೊಂದಿದನು. ಅವನ ಪಿತೃಗಳೊಂದಿಗೆ ಅವನನ್ನು ಸೇರಿಸಿದರು. ಅವನ ದೇಹ ಕೊಳೆತುಹೋಯಿತು.
37 ᎾᏍᎩᏂ ᎤᏁᎳᏅᎯ ᏧᎴᏔᏅᎯ ᎨᏒ ᎥᏝ ᏳᎪᏎᎢ.
ಆದರೆ ದೇವರು ಮರಣದಿಂದ ಎಬ್ಬಿಸಿದ ಈ ಯೇಸು ಕೊಳೆಯುವ ಅವಸ್ಥೆಯನ್ನು ಕಾಣಲಿಲ್ಲ.
38 ᎾᏍᎩ ᎢᏳᏍᏗ ᎢᏣᏅᏖᏍᏗ ᎢᏥᏍᎦᏯ ᏗᏓᏓᏅᏟ, ᎾᏍᎩ ᎯᎠ [ ᎠᏍᎦᏯ ] ᎢᏳᏩᏂᏌᏛ ᎡᏥᏃᏁᎭ ᎦᏰᏥᏙᎵᏍᏗ ᎨᏒ ᎢᏥᏍᎦᏅᏨᎢ.
“ಆದ್ದರಿಂದ, ನನ್ನ ಸಹೋದರರೇ, ಯೇಸುವಿನ ಮೂಲಕವೇ ಪಾಪಕ್ಷಮಾಪಣೆ ಸಾಧ್ಯವೆಂದು ನಿಮಗೆ ಸಾರಲಾಗುತ್ತಿದೆಯೆಂದು ನೀವು ತಿಳಿಯಬೇಕೆಂಬುದೇ ನನ್ನ ಅಪೇಕ್ಷೆ.
39 ᎠᎴ ᎾᏍᎩ ᏅᏗᎦᎵᏍᏙᏗᎭ ᏂᎦᏛ ᎠᏃᎯᏳᎲᏍᎩ ᎠᎾᏚᏓᎴᎭ ᏂᎦᎥ ᏧᏓᎴᏅᏛ, ᎾᏍᎩ ᎨᏣᏚᏓᎳᎡᏗ ᏂᎨᏒᎾ ᏥᎨᏒ ᎼᏏ ᎤᏤᎵ ᏗᎧᎿᎭᏩᏛᏍᏗ ᏕᏥᎧᎿᎭᏩᏗᏒ ᎢᏳᏍᏗ.
ಮೋಶೆಯ ನಿಯಮದ ಮೂಲಕವಾಗಿ ನೀತಿವಂತರೆಂದು ನಿರ್ಣಯಿಸಲಾಗದ ಎಲ್ಲಾ ಪಾಪಗಳಿಂದ ಬಿಡುಗಡೆಯಾಗಿ, ಯೇಸುವನ್ನು ನಂಬುವ ಪ್ರತಿಯೊಬ್ಬರೂ ಯೇಸುವಿನ ಮೂಲಕವಾಗಿ ಬಿಡುಗಡೆಹೊಂದಿ ನೀತಿವಂತರಾಗುವರು.
40 ᎾᏍᎩ ᎢᏳᏍᏗ ᎢᏤᏯᏔᎮᏍᏗ ᏞᏍᏗ ᎢᏥᎷᏤᎸᎩ ᎯᎠ ᏥᎾᏂᏪ ᎠᎾᏙᎴᎰᏍᎩ;
ಆದ್ದರಿಂದ ಪ್ರವಾದಿಗಳು ಹೇಳಿದ ಮಾತುಗಳು ನಿಮ್ಮಲ್ಲಿ ನಡೆಯದಂತೆ ಜಾಗರೂಕರಾಗಿರಿ:
41 “ᏗᏣᎧᏅᎦ, ᎢᏥᏂᏆᏘᎯ, ᎠᎴ ᎢᏥᏍᏆᏂᎪᎯ ᎠᎴ ᎢᏣᏗᏒᏅ; ᎠᏴᏰᏃ ᎪᎯ ᎢᏤᎲ ᏓᎩᎸᏫᏍᏓᏁ ᏗᎦᎸᏫᏍᏓᏁᏗ, ᎾᏍᎩ ᏗᎦᎸᏫᏍᏓᏁᏗ ᎥᏝ ᏴᎨᏦᎯᏳᎲᎦ ᎾᏍᏉ ᎠᏎ ᎩᎶ ᏱᏥᏁᎮᎮᎸ.”
“‘ತಿರಸ್ಕಾರ ಮಾಡುವವರೇ, ಗಮನಿಸಿರಿ, ಆಶ್ಚರ್ಯಪಟ್ಟು, ಚದುರಿ ಹೋಗಿರಿ, ನಿಮ್ಮ ಜೀವಮಾನ ಕಾಲದಲ್ಲಿ ನಾನು ಒಂದು ಕಾರ್ಯವನ್ನು ಮಾಡಲಿದ್ದೇನೆ ಆ ಕಾರ್ಯವನ್ನು ಯಾರಾದರೂ ವಿವರಿಸಿ ಹೇಳಿದರೂ ನೀವದನ್ನು ಎಂದಿಗೂ ನಂಬುವುದೇ ಇಲ್ಲ,’” ಎಂದು ಹೇಳಿದನು.
42 ᎠᏂᏧᏏᏃ ᎤᏂᏄᎪᏨ ᏗᎦᎳᏫᎢᏍᏗᏱ, ᏧᎾᏓᎴᏅᏛ ᏴᏫ ᎤᏂᏔᏲᎴ ᎾᏍᎩ ᎯᎠ ᎨᏥᏃᎮᎮᏗᏱ ᏔᎵᏁ ᎤᎾᏙᏓᏆᏍᎬᎢ.
ಪೌಲ ಬಾರ್ನಬರು ಸಭಾಮಂದಿರವನ್ನು ಬಿಟ್ಟು ಹೊರಡುವಾಗ, “ಬರುವ ಸಬ್ಬತ್ ದಿನವೂ ಬಂದು ಇದೇ ವಿಷಯಗಳನ್ನು ಕುರಿತು ಮಾತನಾಡಿರಿ,” ಎಂದು ಜನರು ಅವರನ್ನು ಕೇಳಿಕೊಂಡರು.
43 ᏓᏂᎳᏫᎥᏃ ᏚᏂᏰᎵᏒ ᎤᏂᏣᏖ ᎠᏂᏧᏏ ᎠᎴ ᎤᏁᎳᏅᎯ ᎠᎾᏓᏙᎵᏍᏓᏁᎯ ᎠᏂᏧᏏ ᏧᎾᎵᎪᏁᎸᎯ ᏚᏂᏍᏓᏩᏛᏎ ᏉᎳ ᎠᎴ ᏆᏂᏆ, ᎾᏍᎩᏃ ᏚᏂᏬᏁᏔᏁ ᏚᏂᏔᏲᏎᎴ ᏧᏂᏲᎯᏍᏗᏱ ᏂᎨᏒᎾ ᎤᏁᎳᏅᎯ ᎤᏓᏙᎵᏍᏗ ᎨᏒᎢ.
ಸಭೆಯು ಮುಗಿದ ತರುವಾಯ ಅನೇಕ ಯೆಹೂದ್ಯರೂ ದೇವಭಕ್ತಿವುಳ್ಳ ಯೆಹೂದಿ ಮಾರ್ಗದ ವಿಶ್ವಾಸಿಗಳು ಪೌಲ ಬಾರ್ನಬರನ್ನು ಹಿಂಬಾಲಿಸಿದರು. ಪೌಲ ಬಾರ್ನಬರು ತಮ್ಮೊಂದಿಗೆ ಬಂದವರ ಜೊತೆ ಮಾತನಾಡಿ ದೇವರ ಕೃಪೆಯಲ್ಲಿ ಮುಂದುವರಿಯಲು ಅವರನ್ನು ಒಡಂಬಡಿಸಿದರು.
44 ᏔᎵᏁᏃ ᏫᎤᎾᏙᏓᏋ ᎠᎴᏉ ᏂᎦᏛ ᎦᏚᎲ ᏂᏚᏂᏔᏫᏤ ᎤᎾᏛᏓᏍᏔᏂᎴ ᎧᏃᎮᏛ ᎤᏁᎳᏅᎯ ᎤᏤᎵᎦ.
ಮುಂದಿನ ಸಬ್ಬತ್ ದಿನ ಕರ್ತದೇವರ ವಾಕ್ಯ ಕೇಳಲು ನಗರದ ಜನರೆಲ್ಲರೂ ಹೆಚ್ಚಾಗಿ ಕೂಡಿಬಂದರು.
45 ᎠᏎᏃ ᎠᏂᏧᏏ, ᎤᏂᏣᏘ ᏚᏂᎪᎲ, ᎤᏂᎧᎵᏤ ᎠᏛᏳᎨᏗ ᎨᏒᎢ, ᎠᎴ ᎠᏂᏬᏂᏍᎬ ᎠᎾᏡᏗᏍᎨ ᏉᎳ ᏂᎦᏪᏍᎬ ᎦᏬᏂᏍᎬᎢ, ᎤᏂᎪᏁᎶᏍᎨᎢ ᎠᎴ ᎠᏂᏐᏢᎢᏍᏗᏍᎨᎢ.
ಜನಸಮೂಹಗಳನ್ನು ಯೆಹೂದ್ಯರು ಕಂಡಾಗ ಅಸೂಯೆಗೊಂಡು ಪೌಲನು ಹೇಳಿದ ಮಾತುಗಳಿಗೆ ವಿರೋಧವಾಗಿ ವಾದಿಸಿ ದೂಷಣೆಮಾಡತೊಡಗಿದರು.
46 ᎾᏉᏃ ᏉᎳ ᎠᎴ ᏆᏂᏆ ᎧᏁᏉᎨ ᎾᏂᏍᎦᎢᎲᎾ ᎨᏒᎢ, ᎯᎠ ᏄᏂᏪᏎᎢ; ᏂᎯ ᎢᎬᏱ ᎠᏎ ᎡᏥᏃᎮᎮᏗ ᎨᏒᎩ ᎤᏁᎳᏅᎯ ᎤᏤᎵ ᎧᏃᎮᏛ; ᎠᏎᏃ ᎢᏢᏉ ᏥᏂᏨᏁᎭ ᎠᎴ ᎢᏨᏒ ᎢᏣᏓᏅᏖᏍᎬ ᏰᎵ ᎦᏰᏥᏁᏗ ᏂᎨᏒᎾ ᏥᏥᏰᎸ ᎬᏂᏛ, ᎬᏂᏳᏉ ᏧᎾᏓᎴᏅᏛ ᏴᏫ ᏗᏁᎲ ᏬᏍᏓᎦᏔᎲᏍᏓ. (aiōnios g166)
ಆಗ ಪೌಲ, ಬಾರ್ನಬರು ಧೈರ್ಯದಿಂದ ಅವರಿಗೆ ಉತ್ತರಕೊಟ್ಟರು: “ದೇವರ ವಾಕ್ಯವನ್ನು ನಾವು ಮೊದಲು ನಿಮಗೆ ಹೇಳುವುದು ಅವಶ್ಯವಾಗಿತ್ತು. ಆದರೆ ನೀವು ಅದನ್ನು ತಳ್ಳಿಬಿಟ್ಟಿದ್ದರಿಂದಲೂ ನಿತ್ಯಜೀವಕ್ಕೆ ನೀವು ಅಯೋಗ್ಯರೆಂದು ತೀರ್ಮಾನಿಸಿಕೊಂಡಿದ್ದೀರಿ. ಆದುದರಿಂದ ಇಗೋ, ನಾವೀಗ ಯೆಹೂದ್ಯರಲ್ಲದ ಜನರ ಬಳಿಗೆ ಹೋಗುತ್ತೇವೆ. (aiōnios g166)
47 ᎾᏍᎩᏰᏃ ᏄᏍᏗ ᎤᎬᏫᏳᎯ ᎣᎩᏂᏁᏤᎸ, [ ᎯᎠ ᏂᎦᏪᎭ; ] “ᎬᏯᎧᏅ ᎢᎦ ᏔᏘᏍᏓᏁᏗᏱ ᏧᎾᏓᎴᏅᏛ ᏴᏫ, ᎤᎵᏍᏕᎸᏙᏗ ᎢᏣᎵᏍᏙᏗᏱ ᎡᎶᎯ ᏂᎬᎾᏛᎢ.”
ಕರ್ತದೇವರು ನಮಗೆ ಆಜ್ಞಾಪಿಸಿದ್ದು ಇಂತಿದೆ: “‘ಭೂಲೋಕದ ಕಟ್ಟಕಡೆಯವರೆಗೆ ನೀನು ರಕ್ಷಣೆಯನ್ನು ತರುವಂತೆ ನಾನು ಯೆಹೂದ್ಯರಲ್ಲದವರಿಗೆ ನಿನ್ನನ್ನು ಬೆಳಕನ್ನಾಗಿ ನೇಮಿಸಿರುವೆನು.’”
48 ᏧᎾᏓᎴᏅᏛᏃ ᏴᏫ ᎾᏍᎩ ᎤᎾᏛᎦᏅ ᎤᎾᎵᎮᎵᏤᎢ, ᎠᎴ ᎤᏂᎸᏉᏔᏁ ᎤᎬᏫᏳᎯ ᎤᏤᎵ ᎧᏃᎮᏛ, ᎠᎴ ᎤᏃᎯᏳᏁ ᎾᏂᎥ ᎬᏂᏛ ᎤᏂᏩᏛᏗ ᎢᎨᎬᏁᎸᎯ. (aiōnios g166)
ಯೆಹೂದ್ಯರಲ್ಲದವರು ಇದನ್ನು ಕೇಳಿದಾಗ, ಬಹಳ ಹರ್ಷಗೊಂಡು ಕರ್ತದೇವರ ವಾಕ್ಯವನ್ನು ಘನಪಡಿಸಿದರು. ನಿತ್ಯಜೀವಕ್ಕೆ ನೇಮಕರಾದ ಎಲ್ಲರೂ ವಿಶ್ವಾಸವನ್ನಿಟ್ಟರು. (aiōnios g166)
49 ᎤᎬᏫᏳᎯᏃ ᎤᏤᎵ ᎧᏃᎮᏛ ᏚᏰᎵᏎ ᎾᎿᎭᏂᎬᎾᏛᎢ.
ಆ ಪ್ರದೇಶದಲ್ಲೆಲ್ಲಾ ಕರ್ತದೇವರ ವಾಕ್ಯವು ಪ್ರಸಾರವಾಗುತ್ತಾ ಬಂತು.
50 ᎠᏎᏃ ᎠᏂᏧᏏ ᏚᏂᏖᎸᏁ ᎨᏥᎸᏉᏗ ᎠᏂᎨᏴ ᎤᏁᎳᏅᎯ ᎠᎾᏓᏙᎵᏍᏓᏁᎯ, ᎠᎴ ᎾᎿᎭᎦᏚᎲ ᏗᎨᎦᏁᎶᏗ ᎠᏂᏍᎦᏯ, ᎠᎴ ᎾᏍᎩ ᏄᏅᏂᏌᏁ ᎦᎨᏥᏐᏢᏙᏗᏱ ᏉᎳ ᎠᎴ ᏆᏂᏆ, ᎠᎴ ᏚᏂᎨᎯᏙᎴ ᎤᎾᏤᎵᎪᎯ ᎨᏒᎢ.
ಆದರೆ ಯೆಹೂದ್ಯರು, ಆರಾಧಕರಾಗಿದ್ದ ಮಾನ್ಯರಾದ ಸ್ತ್ರೀಯರನ್ನೂ ನಗರದ ಗಣ್ಯ ನಾಯಕರನ್ನೂ ಪ್ರೇರೇಪಿಸಿ, ಪೌಲ, ಬಾರ್ನಬರ ಮೇಲೆ ಹಿಂಸೆಯನ್ನು ಎಬ್ಬಿಸಿ ತಮ್ಮ ಪ್ರದೇಶದಿಂದ ಹೊರಗೋಡಿಸಿದರು.
51 ᎠᏎᏃ ᏚᏂᏅᎪᎥᏓᏁᎴᏉ ᎪᏍᏚ ᏧᎾᎳᏏᏕᏂ ᎤᏓᏅᎵᏰᎥᎢ, ᎢᎪᏂᏯᏃ ᏭᏂᎷᏤᎢ.
ಆಗ ಅವರಿಗೆ ವಿರೋಧವಾಗಿ ಪೌಲ, ಬಾರ್ನಬರು ತಮ್ಮ ಪಾದದ ಧೂಳನ್ನು ಝಾಡಿಸಿ ಇಕೋನ್ಯಕ್ಕೆ ಹೊರಟು ಹೋದರು.
52 ᎠᏃᎯᏳᎲᏍᎩᏃ ᎤᏂᎧᎵᏨᎯ ᎨᏎ ᎠᎾᎵᎮᎵᎬᎢ ᎠᎴ ᎦᎸᏉᏗᏳ ᎠᏓᏅᏙ.
ಶಿಷ್ಯರು ಬಹಳ ಸಂತೋಷದಿಂದಲೂ ಪವಿತ್ರಾತ್ಮ ದೇವರಿಂದಲೂ ತುಂಬಿದವರಾದರು.

< ᎨᏥᏅᏏᏛ ᏄᎾᏛᏁᎵᏙᎸᎢ 13 >