< ᎣᏍᏛ ᎧᏃᎮᏛ ᎹᎦ ᎤᏬᏪᎳᏅᎯ 4 >

1 ᏔᎵᏁᏃ ᎤᎴᏅᎮ ᏚᏕᏲᏁ ᎥᏓᎷᎶᏗ; ᎤᏂᏣᏘᏃ ᎬᏩᏓᏡᏫᏍᏔᏁᎢ, ᎾᏍᎩ ᎢᏳᏍᏗ ᏥᏳᎯ ᎤᏣᏁᎢ, ᎠᎴ ᎥᏓᎵ ᎠᏔᎸ ᎤᏪᏁᎢ; ᏂᎦᏛᏃ ᎤᏂᏣᏘ ᎨᏒ ᎥᏓᎷᎶᏗ ᏙᏱ ᎨᏒ ᎠᏂᏙᎾᎡᎢ.
ಯೇಸು ಮತ್ತೊಮ್ಮೆ ಗಲಿಲಾಯ ಸರೋವರದ ತೀರದಲ್ಲಿ ಬೋಧಿಸಲಾರಂಭಿಸಿದರು. ಜನರು ಗುಂಪುಗುಂಪಾಗಿ ಯೇಸುವಿನ ಸುತ್ತಲೂ ನೆರೆದು ಬಂದದ್ದರಿಂದ ಯೇಸು ಸರೋವರದಲ್ಲಿದ್ದ ದೋಣಿಯನ್ನು ಹತ್ತಿ ಕುಳಿತುಕೊಂಡರು. ಜನರು ದಡದಲ್ಲಿ ಸುತ್ತಲೂ ನಿಂತಿದ್ದರು.
2 ᎠᎴ ᎤᏣᏖ ᏧᏓᎴᏅᏛ ᏚᏪᏲᏁ ᏚᏟᎶᏍᏓᏁᎴᎢ, ᎠᎴ ᎯᎠ ᏂᏚᏪᏎᎴ ᏓᏕᏲᎲᏍᎬᎢ,
ಯೇಸು ಸಾಮ್ಯಗಳ ಮೂಲಕ ಅನೇಕ ಸಂಗತಿಗಳನ್ನು ಅವರಿಗೆ ಬೋಧಿಸಿ ಹೇಳಿದ್ದೇನೆಂದರೆ:
3 ᎢᏣᏛᏓᏍᏓ; ᎬᏂᏳᏉ, ᎠᏫᏍᎩ ᎤᏫᏒᏎᎢ;
“ಕೇಳಿರಿ! ಒಬ್ಬ ರೈತನು ಬಿತ್ತುವುದಕ್ಕೆ ಹೊರಟನು.
4 ᎯᎠᏃ ᏄᎵᏍᏔᏁ ᎠᏫᏍᎬᎢ, ᎾᏍᎩ ᎢᎦᏛ ᏅᏃᎱᎶᏗ ᎤᎳᎨᏯᏛᏤᎢ, ᏥᏍᏆᏃ ᎦᎸᎶᎢ ᎠᏂᏃᎯᎢᏙᎯ ᎤᏂᎷᏤ ᎠᎴ ᎤᏂᎪᏁᎢ.
ಅವನು ಬಿತ್ತುತ್ತಿರುವಾಗ ಕೆಲವು ಬೀಜಗಳು ದಾರಿಯ ಪಕ್ಕದಲ್ಲಿ ಬಿದ್ದವು. ಪಕ್ಷಿಗಳು ಬಂದು ಅವುಗಳನ್ನು ತಿಂದುಬಿಟ್ಟವು.
5 ᎢᎦᏛᏃ ᏅᏲᎯ ᎨᏒ ᎤᎳᎨᏯᏛᏤᎢ, ᎾᎿᎭᎦᏲᎵᏳ ᎨᏒ ᎦᏓ; ᎠᎴ ᎩᎳᏉ ᎢᏴᏛ ᏗᎤᎵᏰᏁᎢ, ᏅᏗᎦᎵᏍᏙᏗᏍᎨ ᏌᎨᎢᏳ ᎨᏒ ᎦᏓ;
ಕೆಲವು ಬೀಜಗಳು ಹೆಚ್ಚು ಮಣ್ಣಿಲ್ಲದ ಬಂಡೆಯ ಸ್ಥಳಗಳಲ್ಲಿ ಬಿದ್ದವು. ಅಲ್ಲಿ ಆಳವಾದ ಮಣ್ಣಿಲ್ಲದ ಕಾರಣ ಅವು ಬೇಗನೆ ಮೊಳೆತವು.
6 ᎠᏎᏃ ᏅᏙ ᎢᎦ-ᎡᎯ ᏧᎧᎸᏨ ᎤᎴᏴᏎᎢ; ᎠᎴ ᏂᏚᎿᎭᏍᏕᏢᎾ ᎨᏒ ᎢᏳᏍᏗ, ᎤᎿᎭᏍᎬᏤᏉ.
ಆದರೆ ಬಿಸಿಲೇರಿದಾಗ ಅವು ಬಾಡಿಹೋಗಿ, ಬೇರಿಲ್ಲದ ಕಾರಣ ಒಣಗಿಹೋದವು.
7 ᎢᎦᏛᏃ ᎠᏄᎦᎸᎯ ᎤᎳᎨᏯᏛᏤᎢ; ᎠᏄᎦᎸᏃ ᏧᏛᏎᎢ, ᎠᎴ ᎤᏁᏄᎳᏍᏔᏁᎢ, ᎠᎴ ᏄᎾᏄᎪᏫᏒᎾ ᎨᏎ ᎤᎦᏔ.
ಮತ್ತೆ ಕೆಲವು ಬೀಜಗಳು ಮುಳ್ಳುಗಿಡಗಳ ಮಧ್ಯದಲ್ಲಿ ಬಿದ್ದವು. ಮುಳ್ಳುಗಿಡಗಳು ಬೆಳೆದು ಆ ಎಳೆಯ ಸಸಿಗಳನ್ನು ಅಡಗಿಸಿಬಿಟ್ಟಿದ್ದರಿಂದ ಅವು ಫಲ ಕೊಡಲಿಲ್ಲ.
8 ᎢᎦᏛᏃ ᎣᏒ ᎦᏙᎯ ᎤᎳᎨᏯᏛᏤᎢ, ᎠᎴ ᎤᎵᏰᏁᎢ, ᎠᎴ ᎠᏛᏍᎨᎢ, ᎠᎴ ᎧᏁᏉᎨᎢ, ᎠᎴ ᎤᎦᏔᏔᏁᎢ, ᎢᎦᏛ ᏦᎠᏍᎪᎯ ᎢᏳᏩᎫᏗ, ᎢᎦᏛᏃ ᏑᏓᎵᏍᎪᎯ, ᎢᎦᏛᏃ ᎠᏍᎪᎯᏧᏈ.
ಇನ್ನು ಕೆಲವು ಬೀಜಗಳು ಒಳ್ಳೆಯ ಭೂಮಿಯಲ್ಲಿ ಬಿದ್ದು ಬೆಳೆದು ಮೂವತ್ತರಷ್ಟು, ಅರವತ್ತರಷ್ಟು, ನೂರರಷ್ಟು ಫಲಕೊಟ್ಟವು.”
9 ᎯᎠᏃ ᏂᏚᏪᏎᎴᎢ, ᎩᎶ ᏕᎦᎵᎷᎨᏍᏗ ᎤᏛᎪᏗᏱ, ᏩᏛᎬᎦ.
ಅನಂತರ ಯೇಸು, “ಕೇಳುವುದಕ್ಕೆ ಕಿವಿಯುಳ್ಳವನು ಕೇಳಲಿ,” ಎಂದು ಹೇಳಿದರು.
10 ᎤᏩᏒᏃ ᎨᏎᎢ, ᎾᏍᎩ ᎬᏩᏍᏓᏩᏗᏕᎩ ᎠᎴ ᏔᎳᏚ ᎢᏯᏂᏛ ᎬᏩᏛᏛᏁ ᎦᏛᎬ ᎾᏍᎩ ᏓᏟᎶᏍᏛᎢ.
ಯೇಸು ಒಬ್ಬರೇ ಇದ್ದಾಗ, ಹನ್ನೆರಡು ಮಂದಿ ಶಿಷ್ಯರು ಮತ್ತು ಯೇಸುವಿನ ಸುತ್ತಲಿದ್ದವರು ಬಂದು ಆ ಸಾಮ್ಯಗಳ ವಿಷಯವಾಗಿ ಕೇಳಿದರು.
11 ᎯᎠᏃ ᏂᏚᏪᏎᎴᎢ. ᏂᎯ ᎡᏥᏁᎸ ᎢᏦᎵᏍᏗᏱ ᎤᏕᎵᏛ ᎨᏒ ᎤᏁᎳᏅᎯ ᎤᎬᏫᏳᎯ ᎨᏒᎢ; Ꮎ-ᏍᎩᏂ ᏙᏱᏗᏢ ᎠᏁᏙᎯ ᎯᎠ ᎾᏍᎩ ᏂᎦᏛ ᏕᎨᎦᏟᎶᏍᏓᏁᎰᎢ;
ಅದಕ್ಕೆ ಯೇಸು, “ದೇವರ ರಾಜ್ಯದ ರಹಸ್ಯವನ್ನು ತಿಳಿದುಕೊಳ್ಳುವ ಜ್ಞಾನ ನಿಮಗೆ ಕೊಡಲಾಗಿದೆ. ಆದರೆ ಹೊರಗಿನವರಿಗೆ ಎಲ್ಲವೂ ಸಾಮ್ಯದ ರೂಪದಲ್ಲಿ ಹೇಳಲಾಗಿದೆ.
12 ᎾᏍᎩ ᎠᏂᎪᏩᏗᏍᎬ ᎤᏂᎪᏩᏛᏗᏱ, ᎠᎴ ᎬᏩᎾᏙᎴᎰᎯᏍᏗ ᏂᎨᏒᎾ ᎢᏳᎵᏍᏙᏗᏱ; ᎠᎴ ᎠᎾᏛᎩᏍᎬ ᎤᎾᏛᎪᏗᏱ, ᎠᎴ ᎬᏩᏃᎵᏍᏗ ᏂᎨᏒᎾ ᎢᏳᎵᏍᏙᏗᏱ; ᎾᏍᎩ ᏧᎾᏓᏁᏟᏴᎡᏗᏱ ᏂᎨᏒᎾ ᏚᎾᏓᏅᏛ, ᎠᎴ ᎤᏂᏍᎦᏅᏨ ᎦᎨᏥᏁᏗᏱ ᏂᎨᏒᎾ.
ಈ ಕಾರಣದಿಂದ, “‘ಅವರು ಕಣ್ಣಿದ್ದರೂ ಕಾಣುವುದಿಲ್ಲ. ಕೇಳಿಸಿಕೊಳ್ಳುತ್ತಿದ್ದರೂ ಗ್ರಹಿಸುವುದಿಲ್ಲ. ಹಾಗೆ ಮಾಡುವುದಾದರೆ, ಅವರು ದೇವರ ಕಡೆಗೆ ತಿರುಗಿಕೊಂಡು ಕ್ಷಮೆಹೊಂದುತ್ತಿದ್ದರು!’” ಎಂದರು.
13 ᎠᎴ ᎯᎠ ᏂᏚᏪᏎᎴᎢ, ᏝᏍᎪ ᏱᏦᎵᎦ ᎯᎠ ᎾᏍᎩ ᏓᏟᎶᏍᏛᎢ? ᎦᏙᏃ ᏱᎦᎵᏍᏙᏓ ᏱᏕᏦᎵᎩ ᏂᎦᏛ ᏓᏟᎶᏍᏛᎢ?
ಅನಂತರ ಯೇಸು ಅವರಿಗೆ, “ನಿಮಗೆ ಈ ಸಾಮ್ಯ ಅರ್ಥವಾಗಲಿಲ್ಲವೇ? ಹಾಗಾದರೆ ನೀವು ಬೇರೆ ಸಾಮ್ಯಗಳನ್ನು ಹೇಗೆ ಅರ್ಥಮಾಡಿಕೊಳ್ಳುವಿರಿ?
14 ᎾᏍᎩ ᎠᏫᏍᎩ ᎧᏃᎮᏛ ᎠᏫᏍᎪᎢ.
ರೈತನು ‘ವಾಕ್ಯ’ ಎಂಬ ಬೀಜ ಬಿತ್ತುತ್ತಾನೆ.
15 ᎯᎠᏃ ᎾᏍᎩ ᏅᏃᎱᎶᏗ ᎾᎿᎭᎧᏃᎮᏛ ᏥᎨᏥᏫᏎᎴᎢ; ᎿᎭᏉᏃ ᎠᎾᏛᎬᎦ, ᎠᏍᎩᎾ ᎦᎷᎪ ᎩᎳᏉ ᎢᏴᏛ, ᎠᎴ ᎠᎩᏍᎪ ᎧᏃᎮᏛ ᏧᏂᎾᏫᏱ ᎠᏫᏒᎯ.
ಕೆಲವರು ದಾರಿಯ ಪಕ್ಕದಲ್ಲಿ ಬಿದ್ದ ಬೀಜದಂತಿದ್ದಾರೆ. ಅವರು ವಾಕ್ಯ ಕೇಳಿದ ಕೂಡಲೇ ಸೈತಾನನು ಬಂದು ಅವರಲ್ಲಿ ಬಿತ್ತಿದ್ದ ದೇವರ ವಾಕ್ಯವನ್ನು ತೆಗೆದುಬಿಡುತ್ತಾನೆ.
16 ᎯᎠᏃ ᎾᏍᎩ ᎾᏍᏉ ᏅᏲᎯ ᏥᎨᏥᏫᏎᎴᎢ; ᎾᏍᎩ ᎿᎭᏉ ᎧᏃᎮᏛ ᎠᎾᏛᎬᎦ ᎩᎳᏉ ᎢᏴᏛ ᎤᎾᎵᎮᎵᏨᎯ ᏓᎾᏓᏂᎸᎪᎢ;
ಇನ್ನೂ ಕೆಲವರು ಕಲ್ಲು ನೆಲದ ಮೇಲೆ ಬಿದ್ದ ಬೀಜದಂತಿರುವರು. ಅವರು ವಾಕ್ಯವನ್ನು ಕೇಳಿದ ಕೂಡಲೇ ಸಂತೋಷದಿಂದ ಅದನ್ನು ಸ್ವೀಕರಿಸುತ್ತಾರೆ.
17 ᎠᎴ ᎥᏝ ᏱᏚᏂᎿᎭᏍᏕᏠᎢ, ᏞᎦᏉᏍᎩᏂ ᏓᏂᎧᎿᎭᏩᏕᎪᎢ; ᎿᎭᏉᏃ, ᎠᎩᎵᏯ ᎠᎴ ᎤᏕᏯᏙᏗ ᎠᎵᏰᎢᎶᎦ ᎧᏃᎮᏛ ᏛᎵᏰᎢᎸᏍᏓ, ᎩᎳᏉ ᎢᏴᏛ ᏚᏃᏕᎯᎰᎢ.
ಆದರೆ ಅವರಲ್ಲಿ ಬೇರಿಲ್ಲದ ಕಾರಣ ಸ್ವಲ್ಪಕಾಲ ಮಾತ್ರ ಇದ್ದು, ವಾಕ್ಯದ ನಿಮಿತ್ತವಾಗಿ ಸಂಕಟ ಇಲ್ಲವೆ ಹಿಂಸೆ ಬಂದಾಗ, ಅವರು ಬೇಗನೆ ಬಿದ್ದು ಹೋಗುತ್ತಾರೆ.
18 ᎠᎴ ᎯᎠ ᎠᏄᎦᎸᎯ ᏥᎨᏥᏫᏎᎴᎢ; ᎾᏍᎩ ᎯᎠ ᎧᏃᎮᏛ ᏣᎾᏛᎩᏍᎪᎢ,
ಮತ್ತೆ ಕೆಲವರು ಮುಳ್ಳುಗಿಡಗಳಲ್ಲಿ ಬಿದ್ದ ಬೀಜದಂತಿದ್ದಾರೆ. ಅವರು ವಾಕ್ಯವನ್ನು ಕೇಳುತ್ತಾರೆ.
19 ᎤᏪᎵᎯᏍᏗᏃ ᎡᎶᎯ ᎡᎯ, ᎠᎴ ᎨᏅᎢᏍᏗ ᎨᏒ ᎤᏓᎵᏓᏍᏗ ᎨᏒᎢ, ᎠᎴ ᏧᏓᎴᏅᏛ ᎪᎱᏍᏗ ᎠᏚᎸᏗ ᎨᏒ, ᎠᏂᏴᎯᎲ ᎠᏂᏁᏄᎳᏍᏗᏍᎪ ᎧᏃᎮᏛ, ᎠᎴ ᎾᏍᎩ ᎾᎦᏔᏛᏍᎬᎾᏉ ᎨᏐᎢ. (aiōn g165)
ಆದರೆ ಈ ಜೀವನದ ಚಿಂತೆಗಳೂ ಐಶ್ವರ್ಯದ ವ್ಯಾಮೋಹವೂ ಇನ್ನಿತರ ಅಭಿಲಾಷೆಗಳು ಸೇರಿ ದೇವರ ವಾಕ್ಯವನ್ನು ಅಡಗಿಸುವುದರಿಂದ, ವಾಕ್ಯವು ಫಲವನ್ನು ಕೊಡುವುದಿಲ್ಲ. (aiōn g165)
20 ᎯᎠᏃ ᎾᏍᎩ ᎣᏒ ᎦᏙᎯ ᏥᎨᏥᏫᏎᎴᎢ; ᎾᏍᎩ ᎠᎾᏛᎩᏍᎩ ᎧᏃᎮᏛ, ᎠᎴ ᏗᎾᏓᏂᎸᎩ, ᎠᎴ ᎠᏂᎦᏔᏛᏍᎩ, ᎢᎦᏛ ᏦᎠᏍᎪᎯ ᎢᏳᏩᎫᏗ, ᎢᎦᏛᏃ ᏑᏓᎳᏍᎪᎯ, ᎢᎦᏛᏃ ᎠᏍᎪᎯᏧᏈ.
ಇನ್ನೂ ಕೆಲವರು ಒಳ್ಳೆಯ ಭೂಮಿಯಲ್ಲಿ ಬಿದ್ದ ಬೀಜದಂತಿದ್ದು, ವಾಕ್ಯವನ್ನು ಕೇಳಿ ಅಂಗೀಕರಿಸಿ, ಮೂವತ್ತರಷ್ಟು, ಅರವತ್ತರಷ್ಟು, ನೂರರಷ್ಟು ಫಲಕೊಡುತ್ತಾರೆ,” ಎಂದರು.
21 ᎯᎠᏃ ᏂᏚᏪᏎᎴᎢ, ᎠᏨᏍᏙᏗᏍᎪ ᎠᏂᏃᎯᎰ ᎠᏟᎶᏍᏗ ᎦᎧᎲ ᎭᏫᏂᏗᏢ ᎤᏂᎪᏗᏱ, ᎠᎴ ᎦᏂᏢᏫᏉ? ᎥᏝᏃ ᎤᏂᎪᏗᏱ ᎠᏨᏍᏙᏗ ᎦᎪᏗᏱ?
ಯೇಸು ಅವರಿಗೆ, “ಯಾರಾದರೂ ದೀಪವನ್ನು ತಂದು ಬೋಗುಣಿಯೊಳಗೆ ಅಥವಾ ಮಂಚದ ಕೆಳಗೆ ಇಡುತ್ತಾರೋ? ಅದರ ಬದಲು ಅದನ್ನು ದೀಪಸ್ತಂಭದ ಮೇಲೆ ಇಡುತ್ತಾರೆ.
22 ᎥᏝᏰᏃ ᎪᎱᏍᏗ ᏱᎬᏍᎦᎳ ᎾᏍᎩ ᎬᏂᎨᏒ ᎢᎬᏁᏗ ᏂᎨᏒᎾ; ᎥᏝ ᎠᎴ ᎪᎱᏍᏗ ᎤᏕᎵᏛ ᏱᏂᎬᏃ, ᎾᏍᎩ ᎠᏎ ᎬᏂᎨᏒ ᎢᏳᎵᏍᏙᏗ ᏂᎨᏒᎾ.
ಮರೆಯಾಗಿರುವ ಯಾವುದೂ ವ್ಯಕ್ತವಾಗದೇ ಇರುವುದಿಲ್ಲ. ರಹಸ್ಯಗಳು ಬಹಿರಂಗವಾಗದೆ ಇರುವುದಿಲ್ಲ.
23 ᎩᎶ ᏕᎦᎵᎷᎨᏍᏗ ᎤᏛᎪᏗᏱ ᏩᏛᎬᎦ.
ಕಿವಿಯುಳ್ಳವರು ಕೇಳಲಿ.”
24 ᎯᎠᏃ ᏂᏚᏪᏎᎴᎢ, ᎢᏤᏯᏔᎮᏍᏗ ᏄᏍᏛ ᎢᏣᏛᎩᏍᎬᎢ; ᏄᏍᏛ ᎢᏣᏓᏟᎶᏒᎲ, ᎾᏍᎩᏯ ᎡᏣᎵᎾᎶᎡᏗ ᎨᏎᏍᏗ; ᏂᎯᏃ ᎢᏣᏛᎩᏍᎩ ᎡᏥᏁᏉᎡᏗ ᎡᏥᏁᏗ ᎨᏎᏍᏗ.
ಮತ್ತು ಯೇಸು ಅವರಿಗೆ, “ನೀವು ಕೇಳುವುದನ್ನು ಎಚ್ಚರಿಕೆಯಿಂದ ಗಮನಿಸಿರಿ; ನೀವು ಅಳೆಯುವ ಅಳತೆಯಿಂದಲೇ ನಿಮಗೂ ಅಳೆದುಕೊಡಲಾಗುವುದು; ಇನ್ನೂ ಹೆಚ್ಚಾಗಿ ಸೇರಿಸಿಕೊಡಲಾಗುವುದು.
25 ᎩᎶᏰᏃ ᎤᎮᏍᏗ, ᎾᏍᎩ ᎠᏥᏁᏗ ᎨᏎᏍᏗ; ᎩᎶᏃ ᏄᎲᎾ ᎨᏎᏍᏗ, ᎾᏍᎩ ᎠᏥᎩᏒᏗ ᎨᏎᏍᏗ ᎾᏍᏉ ᎤᎲᎢ.
ಇದ್ದವರಿಗೆ ಇನ್ನೂ ಹೆಚ್ಚಾಗಿ ಕೊಡಲಾಗುವುದು. ಇಲ್ಲದವರ ಕಡೆಯಿಂದ ಇದ್ದ ಅಲ್ಪವನ್ನೂ ತೆಗೆದುಕೊಳ್ಳಲಾಗುವುದು,” ಎಂದು ಹೇಳಿದರು.
26 ᎯᎠᏃ ᏄᏪᏎᎢ, ᎤᏁᎳᏅᎯ ᎤᎬᏫᏳᎯ ᎨᏒ ᎾᏍᎩᏯᏉ ᎩᎶ ᎠᏍᎦᏯ ᎤᎦᏔ ᏳᏫᏒ ᎦᏙᎯ;
ಯೇಸು, “ದೇವರ ರಾಜ್ಯವು ಹೀಗಿದೆ: ಒಬ್ಬನು ತನ್ನ ಹೊಲದಲ್ಲಿ ಬೀಜವನ್ನು ಬಿತ್ತಿದನು.
27 ᎠᎴ ᏳᎸᏅ, ᎠᎴ ᏯᏗᏗᎭ ᏗᎬᏩᎩᏨᏗ, ᎠᎴ ᎤᎦᏔ ᏳᎵᏰᏅ, ᎠᎴ ᏳᏛᏒ, ᏄᎵᏍᏙᏔᏅ ᏄᏙᎴᎰᏒᎾ.
ರಾತ್ರಿ ಅವನು ಮಲಗಿದ್ದರೂ ಹಗಲು ಎದ್ದಿದ್ದರೂ ಆ ಬೀಜವು ಅವನಿಗೆ ತಿಳಿಯದ ರೀತಿಯಲ್ಲಿ ಅಂಕುರಿಸಿ ಬೆಳೆಯುತ್ತದೆ.
28 ᎦᏙᎯᏰᏃ ᎤᏩᏒᏉ ᎦᎾᏄᎪᏫᏍᎪ ᎤᎦᏔᏔᏅᎯ; ᎢᎬᏱᏱ ᎨᏒ ᎤᎦᎶᎬ, ᎿᎭᏉᏃ ᎤᏍᎫᏓᏛᎢ, ᎣᏂᏃ ᎤᎧᎵᏨᎯ ᎤᎦᏔᏛ ᎤᏍᎫᏓᏛᎢ.
ಭೂಮಿಯು ಮೊದಲು ಸಸಿಯನ್ನು ಆಮೇಲೆ ಹೊಡೆಯನ್ನು ಅನಂತರ ತೆನೆಯ ತುಂಬಾ ಕಾಳನ್ನು ತನ್ನಷ್ಟಕ್ಕೆ ತಾನೇ ಬೆಳೆಸುತ್ತದೆ.
29 ᎿᎭᏉᏃ ᎠᎦᏛᎾᎩ ᎩᎳᏉ ᎢᏴᏛ ᎠᏍᎫᏕᏍᎪᎢ, ᎠᏍᎫᏕᏍᏗᏱᏰᏃ ᎤᎵᏰᎢᎶᎶᎢ.
ಬೆಳೆಯು ಮಾಗಿದ ಕೂಡಲೇ, ಅವನು ಕುಡುಗೋಲನ್ನು ಉಪಯೋಗಿಸುತ್ತಾನೆ. ಏಕೆಂದರೆ ಸುಗ್ಗಿಯು ಬಂದಿದೆ,” ಎಂದರು.
30 ᎯᎠᏃ ᏄᏪᏎᎢ, ᎦᏙ ᏙᏓᏓᏤᎳᏍᏔᏂ ᎤᏁᎳᏅᎯ ᎤᎬᏫᏳᎯ ᎨᏒᎢ? ᎦᏙᎨ ᏓᏟᎶᏍᏛ ᏙᏓᏓᏟᎶᏍᏔᏂ?
ಯೇಸು ಮುಂದುವರಿಸಿ, “ದೇವರ ರಾಜ್ಯವನ್ನು ಯಾವುದಕ್ಕೆ ಹೋಲಿಸೋಣ ಅಥವಾ ಅದನ್ನು ವಿವರಿಸಲು ಯಾವ ಸಾಮ್ಯವನ್ನು ಉಪಯೋಗಿಸೋಣ?
31 ᎠᏥᎸ-ᎤᎦᏔ ᎾᏍᎩᏯᎢ, ᎾᏍᎩ ᎦᏙᎯ ᏣᏫᏐᎢ, ᏥᏭᏓᎪᎾᏛᏗ ᎤᏍᏗᎩᏳ ᎡᏍᎦᏉ ᏂᎦᎥ ᎤᎦᏔ ᎦᏙᎯ ᏓᎭᏛᎢ.
ಅದು ಭೂಮಿಯ ಎಲ್ಲಾ ಬೀಜಗಳಿಗಿಂತ ಅತಿ ಚಿಕ್ಕದಾದ ಸಾಸಿವೆ ಕಾಳಿನಂತಿದೆ.
32 ᎠᏎᏃ ᎠᏫᏒᎯ ᏥᎨᏐᎢ, ᏗᏛᏍᎪᎢ, ᎠᎴ ᎤᏟ ᎡᏉᎯᏳ ᏂᎦᎵᏍᏗᏍᎪ ᎡᏍᎦᏉ ᏂᎦᎥ ᎤᏰᎿᎭᎥᎢ, ᎠᎴ ᏤᏉᎯᏳ ᏓᏱᏢᏍᎪᎢ; ᎠᎴ ᏥᏍᏆ ᎤᏜᏓᏅᏛ ᎠᏂᏃᎯᎵᏙᎯ ᏰᎵᏉ ᎤᏓᏩᏗᏍᏛ ᎭᏫᏂᏗᏢ ᎠᎾᎭᏗᏍᎪᎢ.
ಅದನ್ನು ಬಿತ್ತಿದ ಮೇಲೆ, ಅದು ಬೆಳೆದು ತೋಟದ ಎಲ್ಲಾ ಸಸ್ಯಗಳಿಗಿಂತಲೂ ದೊಡ್ಡ ರೆಂಬೆಗಳುಳ್ಳ ಮರವಾಗಿ ಬೆಳೆಯುತ್ತದೆ. ಆಕಾಶದ ಪಕ್ಷಿಗಳು ಬಂದು ಅದರ ನೆರಳಿನಲ್ಲಿ ಗೂಡು ಕಟ್ಟಿ ವಾಸಿಸುತ್ತವೆ,” ಎಂದು ಹೇಳಿದರು.
33 ᎾᏍᎩ ᏄᏪᏎ ᎤᏣᏖ ᏚᏟᎶᏍᏓᏁᎴᎢ, ᎧᏃᎮᏛ ᏚᎵᏥᏙᏁᎴᎢ, ᎾᏍᎩ ᏰᎵ ᎬᏩᎾᏛᎪᏗ ᏂᎦᎵᏍᏗᏍᎬᎢ.
ಈ ರೀತಿಯ ಅನೇಕ ಸಾಮ್ಯಗಳಿಂದ ಅವರ ಗ್ರಹಿಕೆಗೆ ತಕ್ಕ ಹಾಗೆ ಯೇಸು ಅವರಿಗೆ ವಾಕ್ಯವನ್ನು ಉಪದೇಶಿಸುತ್ತಿದ್ದರು.
34 ᏂᏓᏟᎶᏍᏓᏁᎲᎾᏍᎩᏂ ᎥᏝ ᏱᏚᏬᏁᏔᏁᎢ; ᎤᏅᏒᏃ ᎨᏎᎢ, ᏂᎦᏛ ᎾᏍᎩ ᏚᏬᏏᏌᏁᎴ ᎬᏩᏍᏓᏩᏗᏙᎯ.
ಸಾಮ್ಯವಿಲ್ಲದೆ ಯೇಸು ಅವರಿಗೆ ಏನೂ ಹೇಳುತ್ತಿರಲಿಲ್ಲ. ಆದರೆ ಯೇಸು ತಮ್ಮ ಶಿಷ್ಯರೊಡನೆ ಏಕಾಂತವಾಗಿದ್ದಾಗ ಮಾತ್ರ ಅವರಿಗೆ ಎಲ್ಲವನ್ನು ವಿವರಿಸಿ ಹೇಳುತ್ತಿದ್ದರು.
35 ᎾᎯᏳᏉᏃ ᎢᎦ, ᎤᏒ ᏄᎵᏍᏔᏅ, ᎯᎠ ᏂᏚᏪᏎᎴᎢ, ᏗᏗᏐᎩ ᏍᎪᎾ ᏫᏗᎶᎯ.
ಆ ದಿನ ಸಂಜೆಯಾದಾಗ ಯೇಸು ತಮ್ಮ ಶಿಷ್ಯರಿಗೆ, “ನಾವು ಆಚೆದಡಕ್ಕೆ ಹೋಗೋಣ,” ಎಂದು ಹೇಳಿದರು.
36 ᏚᏂᏰᎵᎯᏍᏔᏅᏃ ᎤᏂᏣᏘ ᏅᏩᏛᏁᏉ ᏥᏳᎯ ᎤᏣᎥ ᎬᏩᏘᎾᏫᏛᎮᎢ; ᎠᎴ ᎾᏍᏉ ᏂᏗᎬᏩᏓᎴ ᏧᏍᏗ ᏥᏳ ᎤᎾᎵᎪᏩᏗᏎᎢ.
ಅವರು ಜನರ ಗುಂಪನ್ನು ಬಿಟ್ಟು, ಯೇಸುವನ್ನು ಇದ್ದ ಹಾಗೆಯೇ ದೋಣಿಯಲ್ಲಿ ಕರೆದುಕೊಂಡು ಹೋದರು. ಯೇಸುವಿನ ಸಂಗಡ ಬೇರೆ ದೋಣಿಗಳೂ ಇದ್ದವು.
37 ᎤᏣᏘᏃ ᎤᏱᎶᎴ ᎤᏃᎴ, ᎠᎴ ᏓᎵᏍᏗᎳᏁᎬ ᏥᏳᎯ ᎠᏟᎨᎢ, ᎠᎴ ᎿᎭᏉ ᎠᎧᎵᏬᎯ ᎨᏎᎢ.
ಇದ್ದಕ್ಕಿದ್ದ ಹಾಗೆ ದೊಡ್ಡ ಬಿರುಗಾಳಿಯು ರಭಸವಾಗಿ ಬೀಸಿದ್ದರಿಂದ ಅಲೆಗಳು ದೋಣಿಗೆ ಅಪ್ಪಳಿಸಿದವು. ಆಗ ದೋಣಿಯೊಳಗೆ ನೀರು ನುಗ್ಗಿ ಅದು ಮುಳುಗಿ ಹೋಗುವುದರಲ್ಲಿತ್ತು.
38 ᏥᏳᎯᏃ ᎣᏂᏗᏢ ᎤᏣᎡ ᎦᎵᎮᎢ, ᎠᎫᏍᏙ ᎤᎫᏍᏓᎡᎢ; ᎬᏩᏰᏍᏔᏁᏃ, ᎠᎴ ᎯᎠ ᏂᎬᏩᏪᏎᎴᎢ, ᏔᏕᏲᎲᏍᎩ, ᏝᏍᎪ ᎪᎱᏍᏗ ᏰᎵᎭ ᏨᏓᏲᏣᏗᏒᏂ?
ಯೇಸು ದೋಣಿಯ ಹಿಂಭಾಗದಲ್ಲಿ ದಿಂಬಿನ ಮೇಲೆ ಒರಗಿ ನಿದ್ದೆಮಾಡುತ್ತಿದ್ದರು. ಶಿಷ್ಯರು ಯೇಸುವನ್ನು ಎಬ್ಬಿಸಿ, “ಗುರುವೇ, ನಾವು ಮುಳುಗಿ ಸಾಯುತ್ತಿದ್ದೇವೆ. ನಿಮಗೆ ಚಿಂತೆಯಿಲ್ಲವೇ?” ಎಂದು ಕೇಳಿದರು.
39 ᏚᎴᏁᏃ, ᎤᏃᎴ ᎤᏍᎦᏤᎢ, ᎠᎴ ᎯᎠ ᏄᏪᏎᎴ ᎥᏓᎵ, ᏙᏉ; ᎤᏓᏥᎾᏍᏛᎯ ᎿᎭᎵᏍᏓ. ᎦᏃᎸᎥᏍᎬᏃ ᎤᏑᎵᎪᏤᎢ, ᎠᎴ ᎤᏣᏘ ᎤᏓᏥᎾᏍᏛᎯ ᏄᎵᏍᏔᏁᎢ.
ಯೇಸು ಎದ್ದು ಬಿರುಗಾಳಿಯನ್ನು ಗದರಿಸಿದರು ಮತ್ತು ಅಲೆಗಳಿಗೆ, “ಸುಮ್ಮನಿರು, ಶಾಂತವಾಗು!” ಎಂದು ಆಜ್ಞಾಪಿಸಿದರು. ಆಗ ಬಿರುಗಾಳಿಯು ನಿಂತು ಹೋಗಿ ಎಲ್ಲವೂ ಪ್ರಶಾಂತವಾಯಿತು.
40 ᎯᎠᏃ ᏂᏚᏪᏎᎴᎢ, ᎦᏙᏃ ᏂᏥᏍᎦᏒᎾ? ᎦᏙ ᏗᎦᎵᏍᏙᏗ ᏂᏦᎯᏳᏒᎾ ᎢᎩ?
ಯೇಸು ತಮ್ಮ ಶಿಷ್ಯರಿಗೆ, “ನೀವು ಏಕೆ ಭಯಪಡುತ್ತೀರಿ? ನಿಮಗೆ ಇನ್ನೂ ನಂಬಿಕೆಯಿಲ್ಲವೇ?” ಎಂದರು.
41 ᎤᏣᏘᏃ ᎤᏂᏍᎦᎴᎢ, ᎠᎴ ᎯᎠ ᏂᏚᎾᏓᏪᏎᎴᎢ, ᎦᏙ ᎤᏍᏗ ᎯᎠ ᎠᏍᎦᏯ, ᎾᏍᏉᏰᏃ ᎤᏃᎴ ᎠᎴ ᎥᏓᎵ ᎢᎬᏬᎯᏳᎲᏍᎦ.
ಶಿಷ್ಯರು ಭಯಭೀತರಾಗಿ, “ಇವರು ಯಾರಿರಬಹುದು? ಗಾಳಿಯೂ ಸರೋವರವೂ ಸಹ ಇವರ ಮಾತುಗಳನ್ನು ಕೇಳುತ್ತವಲ್ಲಾ!” ಎಂದು ಒಬ್ಬರಿಗೊಬ್ಬರು ಮಾತನಾಡಿಕೊಂಡರು.

< ᎣᏍᏛ ᎧᏃᎮᏛ ᎹᎦ ᎤᏬᏪᎳᏅᎯ 4 >