< 詩篇 26 >

1 上主求你替我主持正義,因我行動無辜,我曾毫不猶豫地全心依賴了上主。
ದಾವೀದನ ಕೀರ್ತನೆ. ಯೆಹೋವನೇ, ನನಗೋಸ್ಕರ ನ್ಯಾಯವನ್ನು ನಿರ್ಣಯಿಸು. ನಾನಾದರೋ ನಿರ್ದೋಷಿಯಾಗಿಯೇ ನಡೆದುಕೊಂಡಿದ್ದೇನೆ. ನಾನು ಕದಲದೆ ಯೆಹೋವನಲ್ಲೇ ಭರವಸವಿಟ್ಟಿದ್ದೇನೆ.
2 上主,你儘管對我試驗,對我查考,你儘管對我的五內和心臟探討;
ಯೆಹೋವನೇ, ನನ್ನನ್ನು ಪರೀಕ್ಷಿಸು, ಪರಿಶೀಲಿಸು; ನನ್ನ ಅಂತರಿಂದ್ರಿಯವನ್ನೂ, ಹೃದಯವನ್ನೂ ಪರಿಶೋಧಿಸು.
3 原來你的受常擺在我眼前,我常遵照你的真理行走盤桓。
ನಿನ್ನ ಶಾಶ್ವತವಾದ ಪ್ರೀತಿಯನ್ನು ನನ್ನ ದೃಷ್ಟಿಯಲ್ಲೇ ಇಟ್ಟುಕೊಂಡಿದ್ದೇನೆ; ನಿನಗೆ ನಂಬಿಗಸ್ತನಾಗಿ ನಡೆದುಕೊಂಡಿದ್ದೇನೆ.
4 我決不與虛偽的人同坐,也決不與欺詐的人合作;
ನಾನು ಮೋಸಗಾರರ ಸಹವಾಸ ಮಾಡುವವನಲ್ಲ; ಕಪಟಿಗಳನ್ನು ಸೇರುವವನಲ್ಲ.
5 我常痛恨敗類的集會,我也決不與惡人同席。
ನನಗೆ ದುರ್ಜನರ ಕೂಟವು ಅಸಹ್ಯ; ದುಷ್ಟರ ಸಂಗವು ಬೇಕಿಲ್ಲ.
6 上主我要洗手表明無罪,我要走在你的祭壇周圍,
ಯೆಹೋವನೇ, ನಾನು ನಿರ್ದೋಷಿ ಎಂದು, ಕೈಗಳನ್ನು ತೊಳೆದುಕೊಂಡವನಾಗಿ,
7 為能高聲向你稱揚讚頌,傳述你的一切奇妙化工。
ನಿನ್ನ ಅದ್ಭುತಕೃತ್ಯಗಳ ವರ್ಣನೆಯ ಸ್ತೋತ್ರ ಮಾಡುತ್ತಾ, ನಿನ್ನ ಯಜ್ಞವೇದಿಯನ್ನು ಪ್ರದಕ್ಷಿಣೆಮಾಡುವೆನು.
8 上主,我喜愛你所住的殿堂,就是你那榮耀寄居的地方。
ಯೆಹೋವನೇ, ನಿನ್ನ ನಿವಾಸವು ನನಗೆ ಎಷ್ಟೋ ಪ್ರಿಯ; ನಿನ್ನ ಪ್ರಭಾವ ಸ್ಥಾನವು ನನಗೆ ಇಷ್ಟ.
9 求你不要把我的靈魂和罪人們一起收去;求你不要把我的生命與流血者一起剷除。
ಪಾಪಿಷ್ಠರ ಪ್ರಾಣದ ಸಂಗಡ ನನ್ನ ಪ್ರಾಣವನ್ನೂ ತೆಗೆಯಬೇಡ; ಕೊಲೆಪಾತಕರ ಜೀವದೊಂದಿಗೆ ನನ್ನ ಜೀವವನ್ನೂ ತೆಗೆಯಬೇಡ.
10 因為他們的手中盡是罪污,他們的右手滿是賄賂;
೧೦ಅವರ ಕೈಗಳು ಬಲಾತ್ಕಾರ ನಡೆಸುತ್ತವೆ; ಅವರ ಬಲಗೈ ಲಂಚದಿಂದ ತುಂಬಿದೆ.
11 我卻一向行動無辜,求你救我,求你憐恤。
೧೧ನಾನಾದರೋ ನಿರ್ದೋಷಿಯಾಗಿಯೇ ನಡೆದುಕೊಳ್ಳುವವನು; ಯೆಹೋವನೇ, ಅವರಿಂದ ನನ್ನನ್ನು ವಿಮೋಚಿಸಿ ಪ್ರಸನ್ನನಾಗಿರು.
12 我的腳站立於平坦大路,在集會中我要讚頌上主。
೧೨ನನ್ನ ಪಾದವು ಸಮಭೂಮಿಯಲ್ಲಿ ನಿಂತಿದೆ; ಕೂಡಿದ ಸಭೆಯಲ್ಲಿ ಯೆಹೋವನನ್ನು ಕೊಂಡಾಡುವೆನು.

< 詩篇 26 >