< 民数记 33 >

1 以色列人按着军队,在摩西、亚伦的手下出埃及地所行的路程记在下面。
ಮೋಶೆ ಮತ್ತು ಆರೋನರ ಕೈಕೆಳಗೆ ಐಗುಪ್ತ ದೇಶದೊಳಗಿಂದ ಸೈನ್ಯಸೈನ್ಯವಾಗಿ ಹೊರಟ ಇಸ್ರಾಯೇಲರ ಪ್ರಯಾಣಗಳ ವಿವರ:
2 摩西遵着耶和华的吩咐记载他们所行的路程,其路程乃是这样:
ಮೋಶೆ ಯೆಹೋವನ ಅಪ್ಪಣೆಯ ಪ್ರಕಾರ ಇಸ್ರಾಯೇಲರ ಪ್ರಯಾಣಗಳ ವಿವರಗಳನ್ನು ಬರೆದನು.
3 正月十五日,就是逾越节的次日,以色列人从兰塞起行,在一切埃及人眼前昂然无惧地出去。
ಮೊದಲನೆಯ ತಿಂಗಳಿನ ಹದಿನೈದನೆಯ ದಿನದಲ್ಲಿ ಪಸ್ಕಹಬ್ಬದ ಮರುದಿನದಲ್ಲಿ ಇಸ್ರಾಯೇಲರು ಐಗುಪ್ತ್ಯರ ಎದುರಿನಲ್ಲೇ ರಮ್ಸೇಸಿನಿಂದ ಹೊರಟರು.
4 那时,埃及人正葬埋他们的长子,就是耶和华在他们中间所击杀的;耶和华也败坏他们的神。
ಆ ಕಾಲದಲ್ಲಿ ಯೆಹೋವನು ಐಗುಪ್ತ್ಯರ ದೇವತೆಗಳನ್ನು ಶಿಕ್ಷಿಸಿ, ಐಗುಪ್ತ್ಯರ ಚೊಚ್ಚಲಮಕ್ಕಳನ್ನು ಸಂಹರಿಸಿದ್ದರಿಂದ ಅವರು ಆ ಮಕ್ಕಳ ಶವಗಳನ್ನು ಸಮಾಧಿಮಾಡುತ್ತಿದ್ದರು.
5 以色列人从兰塞起行,安营在疏割。
ಇಸ್ರಾಯೇಲರು ರಮ್ಸೇಸಿನಿಂದ ಹೊರಟು ಸುಕ್ಕೋತಿನಲ್ಲಿ ಇಳಿದುಕೊಂಡರು.
6 从疏割起行,安营在旷野边的以倘。
ಸುಕ್ಕೋತಿನಿಂದ ಹೊರಟು ಅರಣ್ಯದ ಅಂಚಿನಲ್ಲಿರುವ ಏತಾಮಿನಲ್ಲಿ ಇಳಿದುಕೊಂಡರು.
7 从以倘起行,转到比哈·希录,是在巴力·洗分对面,就在密夺安营。
ಏತಾಮಿನಿಂದ ಹೊರಟು ಬಾಳ್ಚೆಫೋನಿಗೆ ಎದುರಾಗಿರುವ ಪೀಹಹೀರೋತಿಗೆ ತಿರುಗಿಕೊಂಡು ಮಿಗ್ದೋಲಿನ ಪೂರ್ವದಲ್ಲಿ ಇಳಿದುಕೊಂಡರು.
8 从比哈·希录对面起行,经过海中到了 书珥旷野,又在伊坦的旷野走了三天的路程,就安营在玛拉。
ಪೀಹಹೀರೋತಿನಿಂದ ಹೊರಟು ಸಮುದ್ರದ ಮಧ್ಯದಲ್ಲೇ ನಡೆದು ಅರಣ್ಯಕ್ಕೆ ಬಂದರು. ಏತಾಮಿನ ಅರಣ್ಯದಲ್ಲಿ ಮೂರು ದಿನ ಪ್ರಯಾಣಮಾಡಿ ಮಾರಾ ಎಂಬ ಸ್ಥಳದಲ್ಲಿ ಇಳಿದುಕೊಂಡರು.
9 从玛拉起行,来到以琳(以琳有十二股水泉,七十棵棕树),就在那里安营。
ಮಾರಾದಿಂದ ಹೊರಟು ಏಲೀಮಿಗೆ ಬಂದರು. ಅಲ್ಲಿ ಹನ್ನೆರಡು ನೀರಿನ ಒರತೆಗಳೂ, ಎಪ್ಪತ್ತು ಖರ್ಜೂರದ ಮರಗಳೂ ಇದ್ದುದರಿಂದ ಅಲ್ಲಿಯೇ ಇಳಿದುಕೊಂಡರು.
10 从以琳起行,安营在红海边。
೧೦ಏಲೀಮಿನಿಂದ ಹೊರಟು ಕೆಂಪು ಸಮುದ್ರದ ದಡದಲ್ಲಿ ಇಳಿದುಕೊಂಡರು.
11 从红海边起行,安营在汛的旷野。
೧೧ಕೆಂಪು ಸಮುದ್ರದಿಂದ ಹೊರಟು ಸೀನ್ ಮರುಭೂಮಿಯಲ್ಲಿ ಇಳಿದುಕೊಂಡರು.
12 从汛的旷野起行,安营在脱加。
೧೨ಸೀನ್ ಮರುಭೂಮಿಯಿಂದ ಹೊರಟು ದೊಪ್ಕದಲ್ಲಿ ಇಳಿದುಕೊಂಡರು.
13 从脱加起行,安营在亚录。
೧೩ದೊಪ್ಕದಿಂದ ಹೊರಟು ಆಲೂಷಿನಲ್ಲಿ ಇಳಿದುಕೊಂಡರು.
14 从亚录起行,安营在利非订;在那里,百姓没有水喝。
೧೪ಆಲೂಷಿನಿಂದ ಹೊರಟು ರೆಫೀದೀಮಿನಲ್ಲಿ ಇಳಿದುಕೊಂಡರು. ಅಲ್ಲಿ ಜನರಿಗೆ ಕುಡಿಯುವುದಕ್ಕೆ ನೀರು ಸಿಕ್ಕಲಿಲ್ಲ.
15 从利非订起行,安营在西奈的旷野。
೧೫ರೆಫೀದೀಮಿನಿಂದ ಹೊರಟು ಸೀನಾಯಿ ಮರುಭೂಮಿಯಲ್ಲಿ ಇಳಿದುಕೊಂಡರು.
16 从西奈的旷野起行,安营在基博罗·哈他瓦。
೧೬ಸೀನಾಯಿ ಮರುಭೂಮಿಯಿಂದ ಹೊರಟು ಕಿಬ್ರೋತ್ ಹತಾವದಲ್ಲಿ ಇಳಿದುಕೊಂಡರು.
17 从基博罗·哈他瓦起行,安营在哈洗录。
೧೭ಕಿಬ್ರೋತ್ ಹತಾವದಿಂದ ಹೊರಟು ಹಚೇರೋತಿನಲ್ಲಿ ಇಳಿದುಕೊಂಡರು.
18 从哈洗录起行,安营在利提玛。
೧೮ಹಚೇರೋತಿನಿಂದ ಹೊರಟು ರಿತ್ಮದಲ್ಲಿ ಇಳಿದುಕೊಂಡರು.
19 从利提玛起行,安营在临门·帕烈。
೧೯ರಿತ್ಮದಿಂದ ಹೊರಟು ರಿಮ್ಮೋನ್ ಪೆರೆಚಿನಲ್ಲಿ ಇಳಿದುಕೊಂಡರು.
20 从临门·帕烈起行,安营在立拿。
೨೦ರಿಮ್ಮೋನ್ ಪೆರೆಚಿನಿಂದ ಹೊರಟು ಲಿಬ್ನದಲ್ಲಿ ಇಳಿದುಕೊಂಡರು.
21 从立拿起行,安营在勒撒。
೨೧ಲಿಬ್ನದಿಂದ ಹೊರಟು ರಿಸ್ಸದಲ್ಲಿ ಇಳಿದುಕೊಂಡರು.
22 从勒撒起行,安营在基希拉他。
೨೨ರಿಸ್ಸದಿಂದ ಹೊರಟು ಕೆಹೇಲಾತದಲ್ಲಿ ಇಳಿದುಕೊಂಡರು.
23 从基希拉他起行,安营在沙斐山。
೨೩ಕೆಹೇಲಾತದಿಂದ ಹೊರಟು ಶೆಫೆರ್ ಬೆಟ್ಟದಲ್ಲಿ ಇಳಿದುಕೊಂಡರು.
24 从沙斐山起行,安营在哈拉大。
೨೪ಶೆಫೆರ್ ಬೆಟ್ಟದಿಂದ ಹೊರಟು ಹರಾದದಲ್ಲಿ ಇಳಿದುಕೊಂಡರು.
25 从哈拉大起行,安营在玛吉希录。
೨೫ಹರಾದದಿಂದ ಹೊರಟು ಮಖೇಲೋತಿನಲ್ಲಿ ಇಳಿದುಕೊಂಡರು.
26 从玛吉希录起行,安营在他哈。
೨೬ಮಖೇಲೋತಿನಿಂದ ಹೊರಟು ತಹತಿನಲ್ಲಿ ಇಳಿದುಕೊಂಡರು.
27 从他哈起行,安营在他拉。
೨೭ತಹತಿನಿಂದ ಹೊರಟು ತೆರಹದಲ್ಲಿ ಇಳಿದುಕೊಂಡರು.
28 从他拉起行,安营在密加。
೨೮ತೆರಹದಿಂದ ಹೊರಟು ಮಿತ್ಕದಲ್ಲಿ ಇಳಿದುಕೊಂಡರು.
29 从密加起行,安营在哈摩拿。
೨೯ಮಿತ್ಕದಿಂದ ಹೊರಟು ಹಷ್ಮೋನದಲ್ಲಿ ಇಳಿದುಕೊಂಡರು.
30 从哈摩拿起行,安营在摩西录。
೩೦ಹಷ್ಮೋನದಿಂದ ಹೊರಟು ಮೋಸೇರೋತಿನಲ್ಲಿ ಇಳಿದುಕೊಂಡರು.
31 从摩西录起行,安营在比尼·亚干。
೩೧ಮೋಸೇರೋತಿನಿಂದ ಹೊರಟು ಬೆನೇಯಾಕಾನಿನಲ್ಲಿ ಇಳಿದುಕೊಂಡರು.
32 从比尼·亚干起行,安营在曷·哈及甲。
೩೨ಬೆನೇಯಾಕಾನಿನಿಂದ ಹೊರಟು ಹೋರ್ಹಗಿದ್ಗಾದಿನಲ್ಲಿ ಇಳಿದುಕೊಂಡರು.
33 从曷·哈及甲起行,安营在约巴他。
೩೩ಹೋರ್ಹಗಿದ್ಗಾದಿನಿಂದ ಹೊರಟು ಯೊಟ್ಬಾತದಲ್ಲಿ ಇಳಿದುಕೊಂಡರು.
34 从约巴他起行,安营在阿博拿。
೩೪ಯೊಟ್ಬಾತದಿಂದ ಹೊರಟು ಅಬ್ರೋನದಲ್ಲಿ ಇಳಿದುಕೊಂಡರು.
35 从阿博拿起行,安营在以旬·迦别。
೩೫ಅಬ್ರೋನದಿಂದ ಹೊರಟು ಎಚ್ಯೋನ್ ಗೆಬೆರಿನಲ್ಲಿ ಇಳಿದುಕೊಂಡರು.
36 从以旬·迦别起行,安营在寻的旷野,就是加低斯。
೩೬ಎಚ್ಯೋನ್ ಗೆಬೆರಿನಿಂದ ಹೊರಟು ಕಾದೇಶೆಂಬ ಚಿನ್ ಮರುಭೂಮಿಯಲ್ಲಿ ಇಳಿದುಕೊಂಡರು.
37 从加低斯起行,安营在何珥山,以东地的边界。
೩೭ಕಾದೇಶಿನಿಂದ ಹೊರಟು ಎದೋಮ್ಯರ ದೇಶದ ಅಂಚಿನಲ್ಲಿರುವ ಹೋರ್ ಬೆಟ್ಟದ ಬಳಿಯಲ್ಲಿ ಇಳಿದುಕೊಂಡರು.
38 以色列人出了埃及地后四十年,五月初一日,祭司亚伦遵着耶和华的吩咐上何珥山,就死在那里。
೩೮ಮಹಾಯಾಜಕನಾದ ಆರೋನನು ಯೆಹೋವನಿಂದ ಅಪ್ಪಣೆಯನ್ನು ಹೊಂದಿ ಹೋರ್ ಬೆಟ್ಟವನ್ನು ಹತ್ತಿ, ಇಸ್ರಾಯೇಲರು ಐಗುಪ್ತ ದೇಶದಿಂದ ಹೊರಟ ನಲ್ವತ್ತನೆಯ ವರ್ಷದ ಐದನೆಯ ತಿಂಗಳಿನ ಮೊದಲನೆಯ ದಿನದಲ್ಲಿ ಅಲ್ಲೇ ಪ್ರಾಣಬಿಟ್ಟನು.
39 亚伦死在何珥山的时候年一百二十三岁。
೩೯ಆರೋನನು ಹೋರ್ ಬೆಟ್ಟದಲ್ಲಿ ಸತ್ತಾಗ ಅವನು ನೂರ ಇಪ್ಪತ್ತಮೂರು ವರ್ಷದವನಾಗಿದ್ದನು.
40 住在迦南南地的迦南人亚拉得王听说以色列人来了。
೪೦ಇಸ್ರಾಯೇಲರು ಬರುತ್ತಾರೆಂಬ ವರ್ತಮಾನವನ್ನು ಕಾನಾನ್ ದೇಶದ ದಕ್ಷಿಣ ಪ್ರಾಂತ್ಯದಲ್ಲಿ ವಾಸವಾಗಿದ್ದ ಕಾನಾನ್ಯನಾದ ಅರಾದ್ ಪಟ್ಟಣದ ಅರಸನು ಕೇಳಿದನು.
41 以色列人从何珥山起行,安营在撒摩拿。
೪೧ಇಸ್ರಾಯೇಲರು ಹೋರ್ ಬೆಟ್ಟದಿಂದ ಹೊರಟು ಚಲ್ಮೋನದಲ್ಲಿ ಇಳಿದುಕೊಂಡರು.
42 从撒摩拿起行,安营在普嫩。
೪೨ಚಲ್ಮೋನದಿಂದ ಹೊರಟು ಪೂನೋನಿನಲ್ಲಿ ಇಳಿದುಕೊಂಡರು.
43 从普嫩起行,安营在阿伯。
೪೩ಪೂನೋನಿನಿಂದ ಹೊರಟು ಓಬೋತಿನಲ್ಲಿ ಇಳಿದುಕೊಂಡರು.
44 从阿伯起行,安营在以耶·亚巴琳,摩押的边界。
೪೪ಓಬೋತಿನಿಂದ ಹೊರಟು ಮೋವಾಬ್ಯರ ಗಡಿಯಲ್ಲಿರುವ ಯೊರ್ದನ್ ನದಿಯ ಆಚೆಯಿರುವ ಇಯ್ಯೀಮಿನಲ್ಲಿ ಇಳಿದುಕೊಂಡರು.
45 从以耶·亚巴琳起行,安营在底本·迦得。
೪೫ಇಯ್ಯೀಮಿನಿಂದ ಹೊರಟು ದೀಬೋನ್ ಗಾದಿನಲ್ಲಿ ಇಳಿದುಕೊಂಡರು.
46 从底本·迦得起行,安营在亚门·低比拉太音。
೪೬ದೀಬೋನ್ ಗಾದಿನಿಂದ ಹೊರಟು ಅಲ್ಮೋನ್ ದಿಬ್ಲಾತಯಿಮಿನಲ್ಲಿ ಇಳಿದುಕೊಂಡರು.
47 从亚门·低比拉太音起行,安营在尼波对面的亚巴琳山里。
೪೭ಅಲ್ಮೋನ್ ದಿಬ್ಲಾತಯಿಮಿನಿಂದ ಹೊರಟು ಅಬಾರೀಮ್ ಬೆಟ್ಟಗಳಲ್ಲಿರುವ ನೇಬೋವಿನ ಪೂರ್ವದಲ್ಲಿ ಇಳಿದುಕೊಂಡರು.
48 从亚巴琳山起行,安营在摩押平原—约旦河边、耶利哥对面。
೪೮ಅಬಾರೀಮ್ ಬೆಟ್ಟಗಳಿಂದ ಹೊರಟು ಯೆರಿಕೋ ಪಟ್ಟಣದ ಹತ್ತಿರ ಯೊರ್ದನ್ ನದಿಯ ತೀರದಲ್ಲಿ ಮೋವಾಬ್ಯರ ಮೈದಾನದಲ್ಲಿ ಇಳಿದುಕೊಂಡರು.
49 他们在摩押平原沿约旦河边安营,从伯·耶施末直到亚伯·什亭。
೪೯ಅವರು ಮೋವಾಬ್ಯರ ಮೈದಾನದಲ್ಲಿ ಬೇತ್ ಯೆಷೀಮೋತಿನಿಂದ ಆಬೇಲ್ ಶಿಟ್ಟೀಮಿನವರೆಗೂ ಯೊರ್ದನ್ ನದಿಯ ತೀರದಲ್ಲಿ ಇಳಿದುಕೊಂಡರು.
50 耶和华在摩押平原—约旦河边、耶利哥对面晓谕摩西说:
೫೦ಯೊರ್ದನ್ ನದಿಯ ತೀರದಲ್ಲಿ ಯೆರಿಕೋ ಪಟ್ಟಣದ ಹತ್ತಿರವಿರುವ ಮೋವಾಬ್ಯರ ಮೈದಾನದಲ್ಲಿ ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ,
51 “你吩咐以色列人说:你们过约旦河进迦南地的时候,
೫೧“ನೀನು ಇಸ್ರಾಯೇಲರಿಗೆ ಹೀಗೆ ಆಜ್ಞಾಪಿಸು, ‘ನೀವು ಯೊರ್ದನ್ ನದಿಯನ್ನು ದಾಟಿ ಕಾನಾನ್ ದೇಶವನ್ನು ಸೇರಿದಾಗ,
52 就要从你们面前赶出那里所有的居民,毁灭他们一切錾成的石像和他们一切铸成的偶像,又拆毁他们一切的邱坛。
೫೨ಆ ದೇಶದ ನಿವಾಸಿಗಳನ್ನೆಲ್ಲಾ ಹೊರಡಿಸಿಬಿಟ್ಟು ಅವರ ವಿಚಿತ್ರವಾದ ಕಲ್ಲುಗಳನ್ನೂ, ಲೋಹವಿಗ್ರಹಗಳನ್ನೂ ನಾಶಮಾಡಿ ಅವರ ಪೂಜಾಸ್ಥಳಗಳನ್ನು ಹಾಳುಮಾಡಬೇಕು.
53 你们要夺那地,住在其中,因我把那地赐给你们为业。
೫೩ನಾನು ನಿಮಗೆ ಆ ದೇಶವನ್ನು ಸ್ವದೇಶವಾಗುವುದಕ್ಕೆ ಕೊಟ್ಟದರಿಂದ ನೀವು ಅದನ್ನು ಸ್ವಾಧೀನಮಾಡಿಕೊಂಡು ಅದರಲ್ಲಿ ವಾಸಿಸಬೇಕು.
54 你们要按家室拈阄,承受那地;人多的,要把产业多分给他们;人少的,要把产业少分给他们。拈出何地给何人,就要归何人。你们要按宗族的支派承受。
೫೪ನೀವು ಚೀಟುಹಾಕಿ ಆ ದೇಶವನ್ನು ನಿಮ್ಮನಿಮ್ಮ ಕುಟುಂಬಗಳಿಗೆ ಹಂಚಿಕೊಳ್ಳಬೇಕು. ಹೆಚ್ಚು ಮಂದಿಯುಳ್ಳ ಕುಟುಂಬಕ್ಕೆ ಹೆಚ್ಚಾಗಿಯೂ, ಕಡಿಮೆಯಾದ ಕುಟುಂಬಕ್ಕೆ ಕಡಿಮೆಯಾಗಿಯೂ ಸ್ವತ್ತು ದೊರಕಬೇಕು. ಒಂದೊಂದು ಕುಟುಂಬದ ಚೀಟು ಯಾವ ಯಾವ ಸ್ಥಳವನ್ನು ಸೂಚಿಸುವುದೋ ಆ ಸ್ಥಳದಲ್ಲಿಯೇ ಆ ಕುಟುಂಬದ ಸ್ವಾಸ್ತ್ಯವಿರಬೇಕು. ಒಂದೊಂದು ಕುಲದ ಕುಟುಂಬಗಳು ಒಂದೇ ಪ್ರದೇಶದಲ್ಲಿರಬೇಕು.
55 倘若你们不赶出那地的居民,所容留的居民就必作你们眼中的刺,肋下的荆棘,也必在你们所住的地上扰害你们。
೫೫ನೀವು ದೇಶದ ನಿವಾಸಿಗಳನ್ನು ಹೊರಡಿಸಿಬಿಡದೆ ಹೋದರೆ ಅವರಲ್ಲಿ ನೀವು ಉಳಿಸಿದವರು ನಿಮಗೆ ಕಣ್ಣುಚುಚ್ಚುವ ಮುಳ್ಳುಗಳಂತೆಯೂ, ಪಕ್ಕೆತಿವಿಯುವ ಶೂಲಗಳಂತೆಯೂ, ಆಗಿ ನೀವು ವಾಸಿಸುವ ದೇಶದಲ್ಲಿ ನಿಮಗೆ ಕಂಟಕರಾಗಿರುವರು.
56 而且我素常有意怎样待他们,也必照样待你们。”
೫೬ಅದಲ್ಲದೆ ನಾನು ಅವರಿಗೆ ಏನು ಮಾಡಬೇಕೆಂದು ಯೋಚಿಸಿದೇನೋ ಹಾಗೆ ನಿಮಗೂ ಮಾಡುವೆನು.’”

< 民数记 33 >