< 撒母耳記下 18 >

1 大衛數點跟隨他的人,立千夫長、百夫長率領他們。
ತರುವಾಯ ಅರಸನಾದ ದಾವೀದನು ತನ್ನ ಬಳಿಯಲ್ಲಿ ಇದ್ದ ಸೈನಿಕರನ್ನು ಎಣಿಸಿ, ಅವರ ಮೇಲೆ ಸಹಸ್ರಾಧಿಪತಿಗಳನ್ನೂ ಮತ್ತು ಶತಾಧಿಪತಿಗಳನ್ನು ನೇಮಿಸಿದನು.
2 大衛打發軍兵出戰,分為三隊:一隊在約押手下,一隊在洗魯雅的兒子、約押兄弟亞比篩手下,一隊在迦特人以太手下。大衛對軍兵說:「我必與你們一同出戰。」
ಅವನು ಸೈನ್ಯವನ್ನು ಮೂರು ಭಾಗ ಮಾಡಿ, ಒಂದು ಭಾಗವನ್ನು ಯೋವಾಬನಿಗೂ, ಇನ್ನೊಂದನ್ನು ಚೆರೂಯಳ ಮಗನೂ ಯೋವಾಬನ ತಮ್ಮನೂ ಆದ ಅಬೀಷೈಗೂ, ಮತ್ತೊಂದನ್ನು ಗಿತ್ತೀಯನಾದ ಇತ್ತೈಗೂ ಒಪ್ಪಿಸಿ, “ನಾನು ನಿಮ್ಮೊಂದಿಗೆ ಬರುತ್ತೇನೆ” ಎಂದು ಹೇಳಿದನು.
3 軍兵卻說:「你不可出戰。若是我們逃跑,敵人必不介意;我們陣亡一半,敵人也不介意。因為你一人強似我們萬人,你不如在城裏預備幫助我們。」
ಆಗ ಸೈನ್ಯದವರು ಅವನಿಗೆ, “ನೀನು ಬರಬಾರದು. ನಾವು ಸೋತು ಓಡಿಹೋದರೆ ಶತ್ರುಗಳು ಅದನ್ನು ಗಮನಿಸುವುದಿಲ್ಲ. ನಮ್ಮಲ್ಲಿ ಅರ್ಧ ಜನರು ಸತ್ತುಹೋದರೂ ಅದು ಅವರಿಗೆ ದೊಡ್ಡ ಲಾಭವಲ್ಲ. ನಮ್ಮಂಥ ಹತ್ತು ಸಾವಿರ ಜನರಿಗಿರುವ ಬೆಲೆ ನಿನ್ನೊಬ್ಬನಿಗೆ ಉಂಟು. ನೀನು ಊರಲ್ಲಿದ್ದುಕೊಂಡು ಅಲ್ಲಿಂದಲೇ ನಮಗೆ ಬೇಕಾದ ಸಹಾಯ ಮಾಡಬಹುದು” ಎಂದನು.
4 王向他們說:「你們以為怎樣好,我就怎樣行。」於是王站在城門旁,軍兵或百或千地挨次出去了。
ಅರಸನು ಅವರಿಗೆ, “ನಿಮಗೆ ಸರಿಕಂಡ ಹಾಗೆ ಮಾಡುತ್ತೇನೆ” ಎಂದು ಹೇಳಿ ಊರಬಾಗಿಲಿನ ಒಂದು ಕಡೆಯಲ್ಲಿ ನಿಂತನು. ಸೈನಿಕರು ನೂರು ನೂರು ಮಂದಿಯಾಗಿಯೂ, ಸಾವಿರ ಸಾವಿರ ಮಂದಿಯಾಗಿಯೂ ಹೊರಟರು.
5 王囑咐約押、亞比篩、以太說:「你們要為我的緣故寬待那少年人押沙龍。」王為押沙龍囑咐眾將的話,兵都聽見了。
ಅರಸನು ಯೋವಾಬ, ಅಬೀಷೈ ಮತ್ತು ಇತ್ತೈ ಎಂಬುವರಿಗೆ, “ನನಗೋಸ್ಕರವಾಗಿ ಯೌವನಸ್ಥನಾದ ಅಬ್ಷಾಲೋಮನಿಗೆ ದಯೆ ತೋರಿಸಿರಿ” ಎಂದು ಆಜ್ಞಾಪಿಸಿದನು. ದಾವೀದನು ಸೇನಾಧಿಪತಿಗಳಿಗೆ ಕೊಟ್ಟ ಈ ಅಪ್ಪಣೆಯು ಸೈನ್ಯದವರಿಗೆಲ್ಲಾ ಕೇಳಿಸಿತು.
6 兵就出到田野迎着以色列人,在以法蓮樹林裏交戰。
ಅನಂತರ ಸೈನಿಕರು ಇಸ್ರಾಯೇಲರಿಗೆ ವಿರೋಧವಾಗಿ ಹೊರಟು ಬಯಲಿಗೆ ಬಂದರು. ಎಫ್ರಾಯೀಮಿನ ಕಾಡಿನಲ್ಲಿ ಯುದ್ಧವಾಯಿತು.
7 以色列人敗在大衛的僕人面前;那日陣亡的甚多,共有二萬人。
ಇಸ್ರಾಯೇಲರು ದಾವೀದನ ಸೈನಿಕರಿಂದ ಪೂರ್ಣವಾಗಿ ಸೋಲಿಸಲ್ಪಟ್ಟರು. ಆ ದಿನ ಇಪ್ಪತ್ತು ಸಾವಿರ ಜನರು ಹತರಾದರು.
8 因為在那裏四面打仗,死於樹林的比死於刀劍的更多。
ಯುದ್ಧವು ಸುತ್ತಣ ಪ್ರದೇಶಗಳಲ್ಲಿ ಹಬ್ಬಿಕೊಂಡಿತು. ಆ ದಿನ ಕತ್ತಿಯಿಂದ ಹತರಾದವರಿಗಿಂತ ಕಾಡಿನಲ್ಲಿ ಹತರಾದವರೇ ಹೆಚ್ಚಾಗಿದ್ದರು.
9 押沙龍偶然遇見大衛的僕人。押沙龍騎着騾子,從大橡樹密枝底下經過,他的頭髮被樹枝繞住,就懸掛起來,所騎的騾子便離他去了。
ಅಬ್ಷಾಲೋಮನು ದಾವೀದನ ಸೇವಕರ ಕೈಗೆ ಸಿಕ್ಕಿದನು. ಹೇಗೆಂದರೆ ಅವನು ಹತ್ತಿದ ಹೆಸರುಗತ್ತೆಯು ಒಂದು ದೊಡ್ಡ ದೇವದಾರು (ಕರ್ಪೂರತೈಲದ) ಮರದ ಕೆಳಗೆ ಹಾದುಹೋಗುವಾಗ ಅವನ ತಲೆಯ ಕೂದಲು ಒಂದು ದೊಡ್ಡದಾದ ಕೊಂಬೆಗೆ ಸಿಕ್ಕಿಕೊಂಡಿತು. ಹೇಸರಗತ್ತೆಯು ಅವನ ಕೆಳಗಿನಿಂದ ಓಡಿಹೋಯಿತು. ಅವನು ಭೂಮಿಗೂ ಆಕಾಶಕ್ಕೂ ಮಧ್ಯದಲ್ಲಿ ನೇತಾಡುತ್ತಿದ್ದನು.
10 有個人看見,就告訴約押說:「我看見押沙龍掛在橡樹上了。」
೧೦ಇದನ್ನು ನೋಡಿದ ಒಬ್ಬ ಮನುಷ್ಯನು ಯೋವಾಬನಿಗೆ, “ಅಗೋ, ಆ ದೇವದಾರು ಮರದಲ್ಲಿ ಅಬ್ಷಾಲೋಮನು ನೇತಾಡುತ್ತಿರುವುದನ್ನು ಕಂಡೆನು” ಎಂದು ಹೇಳಿದನು.
11 約押對報信的人說:「你既看見他,為甚麼不將他打死落在地上呢?你若打死他,我就賞你十舍客勒銀子,一條帶子。」
೧೧ಯೋವಾಬನು ಅವನಿಗೆ, “ನೀನು ಕಂಡ ಕೂಡಲೆ ಯಾಕೆ ಅವನನ್ನು ಕಡಿದು ನೆಲಕ್ಕುರುಳಿಸಲಿಲ್ಲ? ಹಾಗೆ ಮಾಡಿದ್ದರೆ ನಾನು ನಿನಗೆ ಹತ್ತು ತಲಾಂತು ಬೆಳ್ಳಿಯನ್ನು, ಒಂದು ನಡುಕಟ್ಟನ್ನೂ ಕೊಡುತ್ತಿದ್ದೆನು” ಎಂದನು.
12 那人對約押說:「我就是得你一千舍客勒銀子,我也不敢伸手害王的兒子;因為我們聽見王囑咐你和亞比篩並以太說:『你們要謹慎,不可害那少年人押沙龍。』
೧೨ಅದಕ್ಕೆ ಆ ಮನುಷ್ಯನು ಯೋವಾಬನಿಗೆ, “ನೀನು ನನ್ನ ಕೈಯಲ್ಲಿ ಸಾವಿರ ಬೆಳ್ಳಿ ನಾಣ್ಯಗಳನ್ನು ಕೊಟ್ಟರೂ ನಾನು ಅರಸನ ಮಗನಿಗೆ ವಿರೋಧವಾಗಿ ಕೈಯೆತ್ತುವುದಿಲ್ಲ. ಅರಸನು ನಮ್ಮೆಲ್ಲರಿಗೆ ಕೇಳಿಸುವಂತೆ ನಿನಗೂ, ಅಬೀಷೈಗೂ ಮತ್ತು ಇತ್ತೈಗೂ, ‘ಜಾಗರೂಕತೆಯಿಂದಿರಿ, ಯೌವನಸ್ಥನಾದ ಅಬ್ಷಾಲೋಮನನ್ನು ಯಾರೂ ಮುಟ್ಟಬಾರದು’ ಎಂದು ಆಜ್ಞಾಪಿಸಿದ್ದಾನಲ್ಲವೇ?
13 我若妄為害了他的性命,就是你自己也必與我為敵(原來,無論何事都瞞不過王。)」
೧೩ನಾನು ಅವನ ಪ್ರಾಣಕ್ಕೆ ಅಪಾಯವನ್ನುಂಟುಮಾಡಿದರೆ ಅದು ಅರಸನಿಗೆ ತಿಳಿಯದೆ ಇರುವುದಿಲ್ಲ. ಆಗ ನೀನೂ ನನ್ನನ್ನು ಕೈಬಿಟ್ಟು ದೂರ ನಿಲ್ಲುವಿ” ಎಂದು ಉತ್ತರ ಕೊಟ್ಟನು.
14 約押說:「我不能與你留連。」約押手拿三杆短槍,趁押沙龍在橡樹上還活着,就刺透他的心。
೧೪ಆಗ ಯೋವಾಬನು, “ಇಲ್ಲಿ ನಿಂತು ತಡಮಾಡುವುದೇಕೆ” ಎಂದು ಹೇಳಿ ಕೂಡಲೆ ಕೈಯಲ್ಲಿ ಮೂರು ಈಟಿಗಳನ್ನು ತೆಗೆದುಕೊಂಡು ಹೋಗಿ ಅಬ್ಷಾಲೋಮನ ಎದೆಗೆ ತಿವಿದನು. ಅವನು ಇನ್ನೂ ಜೀವದಿಂದ ಓಕ್ ಮರದಲ್ಲಿ ನೇತಾಡುತ್ತಿರುವಾಗಲೇ
15 給約押拿兵器的十個少年人圍繞押沙龍,將他殺死。
೧೫ಯೋವಾಬನ ಆಯುಧಗಳನ್ನು ಹೊರುವ ಹತ್ತು ಮಂದಿ ಯೌವನಸ್ಥರು ಬಂದು ಅವನನ್ನು ಕೊಂದು ಹಾಕಿದರು.
16 約押吹角,攔阻眾人,他們就回來,不再追趕以色列人。
೧೬ಕೂಡಲೆ ಯೋವಾಬನು ತನ್ನ ಜನರನ್ನು ತಡೆಯುವುದಕ್ಕಾಗಿ ತುತ್ತೂರಿಯನ್ನು ಊದಿಸಲು ಸೈನ್ಯದವರೆಲ್ಲಾ ಇಸ್ರಾಯೇಲ್ಯರನ್ನು ಹಿಂದಟ್ಟುವುದನ್ನು ಬಿಟ್ಟು ಹಿಂದಿರುಗಿದರು.
17 他們將押沙龍丟在林中一個大坑裏,上頭堆起一大堆石頭。以色列眾人都逃跑,各回各家去了。
೧೭ಅವರು ಅಬ್ಷಾಲೋಮನ ಶವವನ್ನು ಆ ಕಾಡಿನಲ್ಲಿದ್ದ ಒಂದು ದೊಡ್ಡ ಗುಂಡಿಯೊಳಗೆ ಹಾಕಿ ಅದರ ಮೇಲೆ ದೊಡ್ಡದಾದ ಕಲ್ಲು ಕುಪ್ಪೆಯನ್ನು ಮಾಡಿದರು. ಇಸ್ರಾಯೇಲ್ಯರಾದರೋ ತಮ್ಮ ತಮ್ಮ ನಿವಾಸಗಳಿಗೆ ಓಡಿಹೋದರು.
18 押沙龍活着的時候,在王谷立了一根石柱,因他說:「我沒有兒子為我留名。」他就以自己的名稱那石柱叫押沙龍柱,直到今日。
೧೮ಅಬ್ಷಾಲೋಮನು ಜೀವದಿಂದ ಇದ್ದಾಗ ತನ್ನ ಹೆಸರನ್ನುಳಿಸಲು ಮಗನಿಲ್ಲದೆ ಇದ್ದುದರಿಂದ ಒಂದು ಕಲ್ಲಿನ ಕಂಬವನ್ನು ತರಿಸಿ, ಅದನ್ನು ಅರಸನ ತಗ್ಗಿನಲ್ಲಿ ತನ್ನ ಜ್ಞಾಪಕಾರ್ಥವಾಗಿ ನಿಲ್ಲಿಸಿ, ಅದಕ್ಕೆ ತನ್ನ ಹೆಸರನ್ನಿಟ್ಟಿದ್ದನು. ಅದು ಇಂದಿನ ವರೆಗೂ ಅಬ್ಷಾಲೋಮನ ಜ್ಞಾಪಕಸ್ತಂಭ ಎಂದು ಕರೆಯಲಾಗುತ್ತಿದೆ.
19 撒督的兒子亞希瑪斯說:「容我跑去,將耶和華向仇敵給王報仇的信息報與王知。」
೧೯ಚಾದೋಕನ ಮಗನಾದ ಅಹೀಮಾಚನು ಯೋವಾಬನಿಗೆ, “ಅಪ್ಪಣೆಯಾಗಲಿ ನಾನು ಅರಸನ ಬಳಿಗೆ ಓಡಿಹೋಗಿ ಯೆಹೋವನು ಅವನ ವೈರಿಗಳಿಗೆ ಮುಯ್ಯಿ ತೀರಿಸಿದ್ದಾನೆಂಬ ಶುಭ ವರ್ತಮಾನವನ್ನು ತಿಳಿಸುವೆನು” ಎಂದನು.
20 約押對他說:「你今日不可去報信,改日可以報信;因為今日王的兒子死了,所以你不可去報信。」
೨೦ಯೋವಾಬನು ಅವನಿಗೆ, “ಈ ಹೊತ್ತಿನ ಸುದ್ದಿಯನ್ನು ತೆಗೆದುಕೊಂಡು ಹೋಗತಕ್ಕವನು ನೀನಲ್ಲ. ಇನ್ನೊಂದು ಸಾರಿ ನಿನ್ನನ್ನು ಕಳುಹಿಸುತ್ತೇನೆ, ಈ ಹೊತ್ತು ಅರಸನ ಮಗನು ಸತ್ತಿರುವುದರಿಂದ ವರ್ತಮಾನವು ಶುಭವಾದುದಲ್ಲ” ಎಂದು ಹೇಳಿದನು.
21 約押對古示人說:「你去將你所看見的告訴王。」古示人在約押面前下拜,就跑去了。
೨೧ಯೋವಾಬನು ತನ್ನ ಬಳಿಯಲ್ಲಿದ್ದ ಒಬ್ಬ ಕೂಷ್ಯನನ್ನು ಕರೆದು ಅವನಿಗೆ, “ನೀನು ಹೋಗಿ ಕಂಡದ್ದನ್ನು ಅರಸನಿಗೆ ತಿಳಿಸು” ಎಂದು ಆಜ್ಞಾಪಿಸಿದನು. ಅವನು ಯೋವಾಬನಿಗೆ ನಮಸ್ಕರಿಸಿ ಹೊರಟುಹೋದನು.
22 撒督的兒子亞希瑪斯又對約押說:「無論怎樣,求你容我隨着古示人跑去。」約押說:「我兒,你報這信息,既不得賞賜,何必要跑去呢?」
೨೨ಚಾದೋಕನ ಮಗನಾದ ಅಹೀಮಾಚನು ಪುನಃ ಯೋವಾಬನಿಗೆ, “ಆಗಿದ್ದಾಗಲಿ, ದಯವಿಟ್ಟು ಆ ಕೂಷ್ಯನ ಹಿಂದೆ ಹೋಗುವುದಕ್ಕೆ ನನಗೆ ಅಪ್ಪಣೆ ಕೊಡು” ಎಂದು ಬೇಡಿಕೊಂಡನು. ಅದಕ್ಕೆ ಅವನು, “ಮಗನೇ ಯಾಕೆ ಹೋಗಬೇಕೆನ್ನುತ್ತೀ? ಅದಕ್ಕಾಗಿ ನಿನಗೆ ಬಹುಮಾನ ಸಿಕ್ಕುವುದಿಲ್ಲವಲ್ಲಾ” ಎಂದನು.
23 他又說:「無論怎樣,我要跑去。」約押說:「你跑去吧!」亞希瑪斯就從平原往前跑,跑過古示人去了。
೨೩ಆಗ ಅಹೀಮಾಚನು ಪುನಃ “ಚಿಂತೆಯಿಲ್ಲ ನನ್ನನ್ನು ಕಳುಹಿಸು” ಎಂದು ಒತ್ತಾಯಪಡಿಸಿದ್ದರಿಂದ ಯೋವಾಬನು “ಹೋಗು” ಎಂದು ಹೇಳಿದನು. ಆಗ ಅಹೀಮಾಚನು ಯೊರ್ದನ್ ತಗ್ಗಿನಲ್ಲಿರುವ ದಾರಿಯನ್ನು ಹಿಡಿದು ಆ ಕೂಷ್ಯನಿಗಿಂತ ಮುಂದಾಗಿ ಓಡಿದನು.
24 大衛正坐在城甕裏。守望的人上城門樓的頂上,舉目觀看,見有一個人獨自跑來。
೨೪ದಾವೀದನು ಒಳಗಣ ಮತ್ತು ಹೊರಗಣ ಬಾಗಿಲುಗಳ ಮಧ್ಯದಲ್ಲಿ ಕುಳಿತುಕೊಂಡಿದ್ದನು. ಅಷ್ಟರಲ್ಲಿ ಕಾವಲುಗಾರರು ಗೋಪುರದ ಮಾಳಿಗೆಯನ್ನು ಹತ್ತಿ ಪ್ರಾಕಾರದ ಗೋಡೆಯ ಬಳಿಯಲ್ಲಿ ನಿಂತು ನೋಡಲು ಒಬ್ಬಂಟಿಗನಾಗಿ ಬರುವ ಒಬ್ಬ ಮನುಷ್ಯನನ್ನು ಕಂಡರು.
25 守望的人就大聲告訴王。王說:「他若獨自來,必是報口信的。」那人跑得漸漸近了。
೨೫ಅವನು ಕೂಡಲೆ ದಾವೀದನಿಗೆ ತಿಳಿಸಲು ದಾವೀದನು, “ಅವನು ಒಬ್ಬನಾಗಿ ಇದ್ದರೆ ಸಮಾಚಾರ ತರುವವನಾಗಿರಬಹುದು” ಎಂದನು. ಆ ಮನುಷ್ಯನು ಬರಬರುತ್ತಾ ಸಮೀಪವಾದನು.
26 守望的人又見一人跑來,就對守城門的人說:「又有一人獨自跑來。」王說:「這也必是報信的。」
೨೬ಅಷ್ಟರಲ್ಲಿ ಕಾವಲುಗಾರರು ಓಡುತ್ತಾ ಬರುವ ಇನ್ನೊಬ್ಬನನ್ನು ಕಂಡು ದ್ವಾರಪಾಲಕನ ಮುಖಾಂತರ, “ಇಗೋ, ಇನ್ನೊಬ್ಬನು ಒಬ್ಬಂಟಿಗನಾಗಿ ಬರುತ್ತಿದ್ದಾನೆ” ಎಂದು ಅರಸನಿಗೆ ತಿಳಿಸಿದನು. ಆಗ ಅರಸನು, “ಹಾಗಾದರೆ ಅವನೂ ಸಮಾಚಾರ ತರುವವನು” ಎಂದು ಹೇಳಿದನು.
27 守望的人說:「我看前頭人的跑法,好像撒督的兒子亞希瑪斯的跑法一樣。」王說:「他是個好人,必是報好信息。」
೨೭ಆಗ ಕಾವಲುಗಾರನು, “ಮುಂದಾಗಿ ಬರುತ್ತಿರುವವನ ಓಟವು ಚಾದೋಕನ ಮಗನಾದ ಅಹೀಮಾಚನ ಓಟದ ಹಾಗೆ ಕಾಣುತ್ತದೆ” ಎಂದನು. ಅದಕ್ಕೆ ಅರಸನು, “ಅವನು ಒಳ್ಳೆಯವನು, ಶುಭವರ್ತಮಾನ ತರುವವನು” ಎಂದನು.
28 亞希瑪斯向王呼叫說:「平安了!」就在王面前臉伏於地叩拜,說:「耶和華-你的上帝是應當稱頌的,因他已將那舉手攻擊我主我王的人交給王了。」
೨೮ಅಹೀಮಾಚನು ಹತ್ತಿರ ಬಂದು ಅರಸನಿಗೆ, “ಶುಭವಾಗಲಿ” ಎಂದು ಹೇಳಿ ಸಾಷ್ಟಾಂಗನಮಸ್ಕಾರ ಮಾಡಿ, “ಅರಸನಿಗೆ ವಿರೋಧವಾಗಿ ಕೈಯೆತ್ತಿದವರನ್ನು ಸ್ವಾಧೀನಪಡಿಸಿದ ನಿನ್ನ ದೇವರಾದ ಯೆಹೋವನಿಗೆ ಸ್ತೋತ್ರವಾಗಲಿ” ಎಂದನು.
29 王問說:「少年人押沙龍平安不平安?」亞希瑪斯回答說:「約押打發王的僕人,那時僕人聽見眾民大聲喧嘩,卻不知道是甚麼事。」
೨೯ಆಗ ಅರಸನು ಅವನನ್ನು, “ಯೌವನಸ್ಥನಾದ ಅಬ್ಷಾಲೋಮನು ಸುರಕ್ಷಿತವಾಗಿದ್ದಾನೋ” ಎಂದು ಕೇಳಿದನು. ಅದಕ್ಕೆ ಅಹೀಮಾಚನು, “ಯೋವಾಬನು ಒಡೆಯರ ಸೇವಕನಾದ ನನ್ನನ್ನು ಕಳುಹಿಸುವಾಗ ನಾನು ಒಂದು ದೊಡ್ಡ ದೊಂಬಿಯನ್ನು ಕಂಡೆನು, ಆದರೆ ಸಂಗತಿ ಏನೆಂಬುದು ನನಗೆ ಗೊತ್ತಾಗಲಿಲ್ಲ” ಎಂದು ಉತ್ತರಕೊಟ್ಟನು.
30 王說:「你退去,站在旁邊。」他就退去,站在旁邊。
೩೦ಆಗ ಅರಸನು ಅವನಿಗೆ, “ನೀನು ಇತ್ತ ನಿಲ್ಲು” ಎಂದು ಆಜ್ಞಾಪಿಸಿದನು. ಅವನು ನಿಂತನು.
31 古示人也來到,說:「有信息報給我主我王!耶和華今日向一切興起攻擊你的人給你報仇了。」
೩೧ಅಷ್ಟರಲ್ಲಿ ಕೂಷ್ಯನು ಬಂದು, “ನನ್ನ ಒಡೆಯನಾದ ಅರಸನಿಗೆ ಶುಭವರ್ತಮಾನ ತಂದಿದ್ದೇನೆ. ಯೆಹೋವನು ನಿನಗೆ ವಿರೋಧವಾಗಿ ಎದ್ದವರೆಲ್ಲರಿಗೂ ಮುಯ್ಯಿತೀರಿಸಿದ್ದಾನೆ” ಎಂದನು.
32 王問古示人說:「少年人押沙龍平安不平安?」古示人回答說:「願我主我王的仇敵,和一切興起要殺害你的人,都與那少年人一樣。」
೩೨ಅರಸನು ಅವನನ್ನು, “ಯೌವನಸ್ಥನಾದ ಅಬ್ಷಾಲೋಮನು ಸುರಕ್ಷಿತನಾಗಿದ್ದಾನೋ?” ಎಂದು ಕೇಳಲು ಅವನು, “ನನ್ನ ಒಡೆಯನಾದ ಅರಸನ ಶತ್ರುಗಳಿಗೂ, ಅವನಿಗೆ ಕೇಡು ಮಾಡುವುದಕ್ಕೆ ಎದ್ದು ನಿಂತವರೆಲ್ಲರಿಗೂ ಆ ಯೌವನಸ್ಥನಿಗಾದ ಗತಿಯೇ ಆಗಲಿ” ಎಂದು ಉತ್ತರ ಕೊಟ್ಟನು.
33 王就心裏傷慟,上城門樓去哀哭,一面走一面說:「我兒押沙龍啊!我兒,我兒押沙龍啊!我恨不得替你死,押沙龍啊,我兒!我兒!」
೩೩ಇದನ್ನು ಕೇಳಿ ಅರಸನು ಎದೆಯೊಡದವನಾಗಿ, “ನನ್ನ ಮಗನೇ, ಅಬ್ಷಾಲೋಮನೇ, ನಿನಗೆ ಬದಲಾಗಿ ನಾನು ಸತ್ತಿದ್ದರೆ ಎಷ್ಟೋ ಒಳ್ಳೆಯದಾಗುತ್ತಿತ್ತು. ಅಬ್ಷಾಲೋಮನೇ! ನನ್ನ ಮಗನೇ, ನನ್ನ ಮಗನೇ!” ಎಂದು ಕೂಗಿ ಅಳುತ್ತಾ ಪಟ್ಟಣದ ಹೆಬ್ಬಾಗಿಲಿನ ಮೇಲಿರುವ ಕೋಣೆಗೆ ಹೋದನು.

< 撒母耳記下 18 >