< 撒母耳記下 20 >

1 在那裏恰巧有一個匪徒,名叫示巴,是便雅憫人比基利的兒子。他吹角,說:「我們與大衛無分,與耶西的兒子無涉。以色列人哪,你們各回各家去吧!」
ಆಕಸ್ಮಾತ್ತಾಗಿ ಬೆನ್ಯಾಮೀನ ಕುಲದವನೂ, ಬಿಕ್ರೀಯ ಮಗನೂ ಆದ ಶೆಬನೆಂಬ ಒಬ್ಬ ದುಷ್ಟಮನುಷ್ಯನು ಅಲ್ಲಿ ಹೇಗೋ ಬಂದಿದ್ದನು. ಅವನು ಕಹಳೆಯನ್ನು ಊದಿ, “ಇಸ್ರಾಯೇಲರೇ, ದಾವೀದನಲ್ಲಿ ನಮಗೆ ಪಾಲಿಲ್ಲ. ಇಷಯನ ಮಗನಲ್ಲಿ ನಮಗೆ ಸ್ವತ್ತು ಇಲ್ಲ. ಪ್ರತಿಯೊಬ್ಬನೂ ನಮ್ಮ ನಮ್ಮ ನಿವಾಸಗಳಿಗೆ ಹೋಗೋಣ” ಎಂದನು.
2 於是以色列人都離開大衛,跟隨比基利的兒子示巴。但猶大人從約旦河直到耶路撒冷,都緊緊跟隨他們的王。
ಆಗ ಇಸ್ರಾಯೇಲರೆಲ್ಲರೂ ದಾವೀದನನ್ನು ಬಿಟ್ಟು, ಬಿಕ್ರೀಯ ಮಗನಾದ ಶೆಬನನ್ನು ಹಿಂಬಾಲಿಸಿದರು. ಆದರೆ ಯೆಹೂದ್ಯರು ತಮ್ಮ ಅರಸನನ್ನು ಅಂಟಿಕೊಂಡು ಯೊರ್ದನ್ ತಗ್ಗಿನಿಂದ ಯೆರೂಸಲೇಮಿನ ವರೆಗೂ ಅವನ ಜೊತೆಯಲ್ಲಿ ಹೋದರು.
3 大衛王來到耶路撒冷,進了宮殿,就把從前留下看守宮殿的十個妃嬪禁閉在冷宮,養活她們,不與她們親近。她們如同寡婦被禁,直到死的日子。
ಅರಸನಾದ ದಾವೀದನು ಯೆರೂಸಲೇಮಿಗೆ ಬಂದ ಮೇಲೆ ತಾನು ಅರಮನೆ ಕಾಯುವುದಕ್ಕೋಸ್ಕರ ಇಟ್ಟಿದ್ದ ತನ್ನ ಹತ್ತು ಮಂದಿ ಉಪಪತ್ನಿಯರನ್ನು ಪ್ರತ್ಯೇಕವಾಗಿ ಒಂದು ಮನೆಯಲ್ಲಿಟ್ಟು, ಅವರಿಗೆ ಅನ್ನವಸ್ತ್ರ ಕೊಡುತ್ತಿದ್ದನು. ಆದರೆ ಅವರನ್ನು ತಿರುಗಿ ಸಂಗಮಿಸಲಿಲ್ಲ. ಅವರು ಜೀವದಿಂದಿರುವವರೆಗೂ ವಿಧೆವೆಯರಂತಿದ್ದು ಕಾವಲಲ್ಲಿ ಇರಬೇಕಾಯಿತು.
4 王對亞瑪撒說:「你要在三日之內將猶大人招聚了來,你也回到這裏來。」
ಅನಂತರ ಅರಸನು ಅಮಾಸನಿಗೆ, “ನೀನು ಮೂರು ದಿನಗಳೊಳಗೆ ಯೆಹೂದ್ಯರನ್ನು ಕೂಡಿಸಿಕೊಂಡು ಇಲ್ಲಿ ಸಿದ್ಧವಾಗಿರು” ಎಂದು ಆಜ್ಞಾಪಿಸಿದನು.
5 亞瑪撒就去招聚猶大人,卻耽延過了王所限的日期。
ಅಮಾಸನು ಹೋಗಿ ಯೆಹೂದ್ಯರನ್ನು ಕೂಡಿಸಿದನು. ಆದರೆ ಅವನು ನೇಮಕವಾದ ಸಮಯಕ್ಕೆ ಬಾರದೆ ತಡಮಾಡಿದ್ದರಿಂದ
6 大衛對亞比篩說:「現在恐怕比基利的兒子示巴加害於我們比押沙龍更甚。你要帶領你主的僕人追趕他,免得他得了堅固城,躲避我們。」
ಅರಸನು ಅಬೀಷೈಗೆ, “ಅಬ್ಷಾಲೋಮನಿಗಿಂತ ಬಿಕ್ರೀಯ ಮಗನಾದ ಶೆಬನು ನಮಗೆ ಹೆಚ್ಚಿನ ಕೇಡು ಮಾಡುವಂತಿದೆ. ಆದುದರಿಂದ ನೀನು ನನ್ನ ಸ್ವಂತ ಆಳುಗಳನ್ನು ಕರೆದುಕೊಂಡು ಹೋಗಿ ಅವನನ್ನು ಬೆನ್ನಟ್ಟಿಜಡಿಸು. ಇಲ್ಲವಾದರೆ ಅವನು ನಮ್ಮ ಕಣ್ಣಿಗೆ ಮರೆಯಾಗಿ ಹೋಗಿ ಕೋಟೆಕೊತ್ತಲುಗಳುಳ್ಳ ಪಟ್ಟಣಗಳನ್ನು ಸೇರಿಕೊಂಡಾನು” ಎಂದನು.
7 約押的人和基利提人、比利提人,並所有的勇士,都跟着亞比篩,從耶路撒冷出去追趕比基利的兒子示巴。
ಆಗ ಅವನು ಯೋವಾಬನ ಸೈನಿಕರನ್ನೂ, ಕೆರೇತ್ಯ ಮತ್ತು ಪೆಲೇತ್ಯ ಎಂಬ ಕಾವಲು ದಂಡುಗಳನ್ನೂ ಎಲ್ಲಾ ಶೂರರನ್ನೂ ಕರೆದುಕೊಂಡು ಬಿಕ್ರೀಯ ಮಗನಾದ ಶೆಬನನ್ನು ಬೆನ್ನಟ್ಟುವುದಕ್ಕೋಸ್ಕರ ಯೆರೂಸಲೇಮಿನಿಂದ ಹೊರಟರು.
8 他們到了基遍的大磐石那裏,亞瑪撒來迎接他們。那時約押穿着戰衣,腰束佩刀的帶子,刀在鞘內;約押前行,刀從鞘內掉出來。
ಅವರು ಗಿಬ್ಯೋನಿನಲ್ಲಿದ್ದ ದೊಡ್ಡ ಕಲ್ಲನ್ನು ಸಮೀಪಿಸಿದಾಗ ಅಮಾಸನು ಅವನೆದುರು ಬಂದನು. ಯುದ್ಧವಸ್ತ್ರಗಳನ್ನು ಧರಿಸಿಕೊಂಡಿದ್ದ ಯೋವಾಬನೂ ಅವನನ್ನು ವಧಿಸುವುದಕ್ಕೆ ಹೋಗುತ್ತಿರುವಾಗ ಅವನ ಸೊಂಟಕ್ಕೆ ಕಟ್ಟಿದ ಕತ್ತಿಯೂ ಒರೆಯಿಂದ ಕೆಳಗೆ ಬಿದ್ದಿತು.
9 約押左手拾起刀來,對亞瑪撒說:「我兄弟,你好啊!」就用右手抓住亞瑪撒的鬍子,要與他親嘴。
ಅವನು ಅಮಾಸನನ್ನು, “ಸಹೋದರನೇ ಕ್ಷೇಮವೋ” ಎಂದು ಕೇಳಿ ಮುದ್ದಿಡುವುದಕ್ಕೋಸ್ಕರವೋ ಎಂಬಂತೆ ಬಲಗೈಯಿಂದ ಅವನ ಗಡ್ಡವನ್ನು ಹಿಡಿದು,
10 亞瑪撒沒有防備約押手裏所拿的刀;約押用刀刺入他的肚腹,他的腸子流在地上,沒有再刺他,就死了。 約押和他兄弟亞比篩往前追趕比基利的兒子示巴。
೧೦ಕೈಯಲ್ಲಿದ್ದ ಕತ್ತಿಯನ್ನು ಗಮನಿಸದಿದ್ದ ಅಮಾಸನ ಹೊಟ್ಟೆಯೊಳಗೆ ತಿವಿದನು. ಅದರಿಂದ ಅವನ ಕರಳುಗಳೆಲ್ಲಾ ಹೊರಗೆ ಬಂದವು. ಎರಡನೆಯ ಸಾರಿ ತಿವಿಯಲಿಲ್ಲ. ಅಷ್ಟಕ್ಕೆ ಅವನು ಸತ್ತನು. ಯೋವಾಬನೂ ಅವನ ತಮ್ಮನಾದ ಅಬೀಷೈಯೂ ಮತ್ತು ಬಿಕ್ರೀಯ ಮಗನಾದ ಶೆಬನನ್ನು ಹಿಂದಟ್ಟುವುದಕ್ಕೋಸ್ಕರ ಮುಂದೆ ನಡೆದಾಗ,
11 有約押的一個少年人站在亞瑪撒屍身旁邊,對眾人說:「誰喜悅約押,誰歸順大衛,就當跟隨約押去。」
೧೧ಯೋವಾಬನ ಆಳುಗಳಲ್ಲೊಬ್ಬನು ಅಮಾಸನ ಹತ್ತಿರ ನಿಂತು, “ದಾವೀದ ಹಾಗೂ ಯೋವಾಬರ ಕಡೆಯವರು ಯೋವಾಬನನ್ನು ಹಿಂಬಾಲಿಸಲಿ” ಎಂದು ಕೂಗಿದನು
12 亞瑪撒在道路上滾在自己的血裏。那人見眾民經過都站住,就把亞瑪撒的屍身從路上挪到田間,用衣服遮蓋。
೧೨ಮಾರ್ಗದ ಮಧ್ಯದಲ್ಲಿ ರಕ್ತದಲ್ಲಿ ಹೊರಳಾಡುತ್ತಿದ್ದ ಅಮಾಸನನ್ನು ನೋಡುತ್ತಾ ಎಲ್ಲಾ ಜನರು ನಿಂತರು. ಬಂದವರೆಲ್ಲರೂ ಅಲ್ಲೇ ನಿಲ್ಲುವುದನ್ನು ಕಂಡ ಆ ಆಳು ಅಮಾಸನ ಶವವನ್ನು ದಾರಿಯಿಂದ ಎಳೆದು, ಹೊಲದಲ್ಲಿ ಹಾಕಿ, ಅದನ್ನು ಬಟ್ಟೆಯಿಂದ ಮುಚ್ಚಿದನು.
13 屍身從路上挪移之後,眾民就都跟隨約押去追趕比基利的兒子示巴。
೧೩ಶವವನ್ನು ಆಚೆ ಹಾಕಿದ ನಂತರ ಜನರೆಲ್ಲರೂ ಬಿಕ್ರೀಯ ಮಗನಾದ ಶೆಬನನ್ನು ಹಿಂದಟ್ಟುವುದಕ್ಕೊಸ್ಕರ ಯೋವಾಬನನ್ನು ಹಿಂಬಾಲಿಸಿದರು.
14 他走遍以色列各支派,直到伯‧瑪迦的亞比拉,並比利人的全地;那些地方的人也都聚集跟隨他。
೧೪ಶೆಬನು ಇಸ್ರಾಯೇಲರ ಪ್ರಾಂತ್ಯಗಳಲ್ಲಿ ಸಂಚರಿಸುತ್ತಾ ಆಬೇಲ್, ಬೇತ್ಮಾಕಾಕ್ಕೂ ಬಂದನು. ಬೇರಿಯರೆಲ್ಲರೂ ಸೇರಿಕೊಂಡು ಅವನೊಡನೆ ಆ ಊರನ್ನು ಸೇರಿದರು.
15 約押和跟隨的人到了伯‧瑪迦的亞比拉,圍困示巴,就對着城築壘;跟隨約押的眾民用錘撞城,要使城塌陷。
೧೫ಯೋವಾಬನ ಕಡೆಯವರು ಆಬೇಲ್ ಬೇತ್ಮಾಕಾಕ್ಕೆ ಊರಿಗೆ ಮುತ್ತಿಗೆ ಹಾಕಿ ಅದಕ್ಕೆ ಎದುರಾಗಿ ಊರು ಗೋಡೆಗೆ ಹತ್ತಿರ ಒಂದು ಮಣ್ಣಿನ ದಿಬ್ಬವನ್ನು ಮಾಡಿ, ಗೋಡೆಯನ್ನು ಕೆಡವಿಬಿಡುವುದಕ್ಕೆ ಪ್ರಯತ್ನಿಸಿದರು.
16 有一個聰明婦人從城上呼叫說:「聽啊,聽啊,請約押近前來,我好與他說話。」
೧೬ಆಗ ಆ ಊರಿನ ಬುದ್ಧಿವಂತೆಯಾದ ಒಬ್ಬಳು ಹೆಂಗಸು ಅವರಿಗೆ, “ಕೇಳಿರಿ, ದಯವಿಟ್ಟು ಕೇಳಿರಿ. ಯೋವಾಬನೊಂದಿಗೆ ನಾನು ಮಾತನಾಡುವುದಕ್ಕಾಗಿ ನನ್ನ ಬಳಿಗೆ ಬರಬೇಕೆಂದು ಹೇಳಿ” ಎಂದು ಕೂಗಿದಳು.
17 約押就近前來,婦人問他說:「你是約押不是?」他說:「我是。」婦人說:「求你聽婢女的話。」約押說:「我聽。」
೧೭ಯೋವಾಬನು ಬರಲು ಆ ಸ್ತ್ರೀಯು, “ನೀನು ಯೋವಾಬನೋ?” ಎಂದು ಅವನನ್ನು ಕೇಳಲು ಅವನು “ಹೌದು ನಾನೇ” ಎಂದು ಉತ್ತರ ಕೊಟ್ಟನು. ಆಕೆಯು, “ನಿನ್ನ ದಾಸಿಯ ಮಾತನ್ನು ಕೇಳು” ಅನ್ನಲು ಅವನು, “ಕೇಳುತ್ತೇನೆ” ಎಂದನು.
18 婦人說:「古時有話說,當先在亞比拉求問,然後事就定妥。
೧೮ಆಗ ಆಕೆಯು, “ಪೂರ್ವಕಾಲದಲ್ಲಿ ಜನರು ಆಬೇಲಿನವರ ಆಲೋಚನೆಯನ್ನು ಕೇಳೋಣ ಅಂದುಕೊಂಡು ಅವರ ಆಲೋಚನೆಯ ಮೇರೆಗೆ ತೀರ್ಮಾನವನ್ನು ತೆಗೆದುಕೊಳ್ಳುತ್ತಿದ್ದರು.
19 我們這城的人在以色列人中是和平、忠厚的。你為何要毀壞以色列中的大城,吞滅耶和華的產業呢?」
೧೯ನಮ್ಮ ಪಟ್ಟಣವು ಇಸ್ರಾಯೇಲರಲ್ಲಿ ಸಮಾಧಾನವುಳ್ಳದ್ದೂ, ರಾಜನಿಷ್ಠೆಯುಳ್ಳದ್ದೂ ಆಗಿದೆ. ನೀನು ಇಸ್ರಾಯೇಲರ ಪಟ್ಟಣಗಳಲ್ಲಿ ತಾಯಿಯೆಂದು ಹೆಸರುಗೊಂಡ ಈ ಪಟ್ಟಣವನ್ನು ಹಾಳುಮಾಡಬೇಕೆಂದಿರುವೆ. ನೀನು ಯೆಹೋವನ ಸ್ವತ್ತನ್ನು ನುಂಗಿಬಿಡುವುದೇಕೆ?” ಎಂದಳು.
20 約押回答說:「我決不吞滅毀壞,
೨೦ಅದಕ್ಕೆ ಯೋವಾಬನು, “ನುಂಗಿಬಿಡುವುದಾಗಲಿ, ಹಾಳುಮಾಡುವುದಾಗಲಿ ನನಗೆ ದೂರವಾಗಿರಲಿ ಅಂಥದ್ದು ಬೇಡವೇ ಬೇಡ.
21 乃因以法蓮山地的一個人-比基利的兒子示巴-舉手攻擊大衛王,你們若將他一人交出來,我便離城而去。」婦人對約押說:「那人的首級必從城牆上丟給你。」
೨೧ಎಫ್ರಾಯೀಮಿನ ಪರ್ವತಪ್ರದೇಶದ ಬಿಕ್ರೀಯ ಮಗನಾದ ಶೆಬನೆಂಬುವವನು ಅರಸನಾದ ದಾವೀದನಿಗೆ ವಿರೋಧವಾಗಿ ಕೈಯೆತ್ತಿದ್ದಾನೆ. ಅವನ್ನನ್ನೇ ಒಪ್ಪಿಸಿರಿ, ನಾನು ಊರನ್ನು ಬಿಟ್ಟು ಹೋಗುತ್ತೇನೆ” ಎಂದು ಹೇಳಿದನು. ಆ ಸ್ತ್ರೀಯು ಯೋವಾಬನಿಗೆ, “ನೋಡು ಈಗಲೇ ಅವನ ತಲೆಯು ಗೋಡೆಯ ಕಿಂಡಿಯಿಂದ ನಿನ್ನ ಕಡೆಗೆ ಒಗೆಯಲ್ಪಡುವುದು” ಎಂದು ಉತ್ತರ ಕೊಟ್ಟು,
22 婦人就憑她的智慧去勸眾人。他們便割下比基利的兒子示巴的首級,丟給約押。約押吹角,眾人就離城而散,各歸各家去了。約押回耶路撒冷,到王那裏。
೨೨ತನ್ನ ಜನರ ಬಳಿಗೆ ಹೋಗಿ ಅವರಿಗೆ ವಿವೇಕದೊಡನೆ ಈ ಸಂಗತಿಯನ್ನು ತಿಳಿಸಿದಳು. ಅವರು ಬಿಕ್ರೀಯ ಮಗನಾದ ಶೆಬನ ತಲೆಯನ್ನು ಕತ್ತರಿಸಿ ಯೋವಾಬನಿದ್ದಲ್ಲಿಗೆ ಎಸೆದರು. ಕೂಡಲೆ ಅವನು ಕಹಳೆಯನ್ನು ಊದಿಸಿದನು. ಜನರು ಆ ಪಟ್ಟಣವನ್ನು ಬಿಟ್ಟು ತಮ್ಮ ತಮ್ಮ ನಿವಾಸಗಳಿಗೆ ಹೋದರು. ಯೋವಾಬನು ಹಿಂದಿರುಗಿ ಯೆರೂಸಲೇಮಿನಲ್ಲಿದ್ದ ಅರಸನ ಬಳಿಗೆ ಹೋದನು.
23 約押作以色列全軍的元帥;耶何耶大的兒子比拿雅統轄基利提人和比利提人;
೨೩ಯೋವಾಬನು ಇಸ್ರಾಯೇಲರ ಮುಖ್ಯ ಸೇನಾಧಿಪತಿ. ಯೆಹೋಯಾದಾವನ ಮಗನಾದ ಬೆನಾಯನು ಕೆರೇತ್ಯ ಮತ್ತು ಪೆಲೇತ್ಯ ಎಂಬ ಕಾವಲುದಂಡುಗಳ ಅಧಿಪತಿ.
24 亞多蘭掌管服苦的人;亞希律的兒子約沙法作史官;
೨೪ಅದೋರಾಮನು ಬಿಟ್ಟೀಕೆಲಸ ಮಾಡಿಸುವವನು. ಅಹೀಲೂದನ ಮಗನಾದ ಯೆಹೋಷಾಫಾಟನು ಮುಖ್ಯ ದಾಖಲೆಮಾಡುವ ಲೇಖಕ.
25 示法作書記;撒督和亞比亞他作祭司長;
೨೫ಶೆವನು ಕಾರ್ಯದರ್ಶಿ, ಚಾದೋಕ್ ಮತ್ತು ಎಬ್ಯಾತಾರರು ಯಾಜಕರು.
26 睚珥人以拉作大衛的宰相。
೨೬ಯಾಯೀರಿನವನಾದ ಈರನೂ ದಾವೀದನ ಯಾಜಕನು.

< 撒母耳記下 20 >