< 詩篇 120 >

1 上行(或譯登階,下同)之詩。 我在急難中求告耶和華, 他就應允我。
ಯಾತ್ರಾಗೀತೆ. ನನ್ನ ಇಕ್ಕಟ್ಟಿನಲ್ಲಿ ಯೆಹೋವನಿಗೆ ಮೊರೆಯಿಟ್ಟೆನು; ಆತನು ಸದುತ್ತರವನ್ನು ದಯಪಾಲಿಸಿದನು.
2 耶和華啊,求你救我脫離說謊的嘴唇和詭詐的舌頭!
ಯೆಹೋವನೇ, ಸುಳ್ಳು ಬಾಯಿಯೂ, ವಂಚಿಸುವ ನಾಲಿಗೆ ಉಳ್ಳವರಿಂದ ನನ್ನನ್ನು ಬಿಡಿಸು.
3 詭詐的舌頭啊,要給你甚麼呢? 要拿甚麼加給你呢?
ವಂಚಿಸುವ ನಾಲಿಗೆಯೇ, ದೇವರು ನಿನಗೇನು ಕೊಡಬೇಕು? ಯಾವ ಹೆಚ್ಚಿನ ಶಿಕ್ಷೆಯನ್ನು ಒದಗಿಸಬೇಕು?
4 就是勇士的利箭和羅騰木 的炭火。
ಶೂರನ ಹದವಾದ ಬಾಣಗಳನ್ನೂ, ಜಾಲಿಯ ಕೆಂಡಗಳನ್ನೂ ನಿನಗೆ ಕೊಡುವರು.
5 我寄居在米設, 住在基達帳棚之中,有禍了!
ಅಯ್ಯೋ, ನಾನು ಮೇಷೆಕಿನವರಲ್ಲಿ ತಂಗಬೇಕಲ್ಲಾ! ಕೇದಾರಿನವರ ಪಾಳೆಯಗಳಲ್ಲಿ ವಾಸಿಸಬೇಕಾಯಿತಲ್ಲಾ!
6 我與那恨惡和睦的人許久同住。
ಸಮಾಧಾನವನ್ನು ದ್ವೇಷಿಸುವವರೊಳಗೆ, ಇದ್ದು ಇದ್ದು ಸಾಕಾಯಿತು.
7 我願和睦, 但我發言,他們就要爭戰。
ನಾನು ಸಮಾಧಾನಪ್ರಿಯನು; ಅವರೋ, ನಾನು ಮಾತನಾಡಿದರೆ ಯುದ್ಧಕ್ಕೆ ಬರುತ್ತಾರೆ.

< 詩篇 120 >