< 2 Chronicles 26 >

1 Then all the people of Judah took Uzziah, who was sixteen years old, and made him king in place of his father Amaziah.
ಆನಂತರ ಎಲ್ಲಾ ಯೆಹೂದ್ಯರು ಅಮಚ್ಯನ ಮಗನಾದ ಉಜ್ಜೀಯನನ್ನು ಅರಸನ್ನನ್ನಾಗಿ ಮಾಡಿದರು. ಉಜ್ಜೀಯನು ಅರಸನಾದಾಗ ಹದಿನಾರು ವರ್ಷದವನಾಗಿದ್ದ.
2 He was the builder of Eloth, which he got back for Judah after the death of the king.
ಇವನು ಏಲೋತ್ ಪಟ್ಟಣವನ್ನು ಪುನಃ ಯೆಹೂದ ರಾಜ್ಯಕ್ಕೆ ಸೇರಿಸಿಕೊಂಡು ಭದ್ರಪಡಿಸಿದನು.
3 Uzziah was sixteen years old when he became king, and he was ruling in Jerusalem for fifty-two years; his mother's name was Jechiliah of Jerusalem.
ಅವನು ಯೆರೂಸಲೇಮಿನಲ್ಲಿ ಐವತ್ತೆರಡು ವರ್ಷಗಳ ಕಾಲ ಆಳಿದನು. ಯೆರೂಸಲೇಮಿನವಳಾದ ಯೆಕೊಲ್ಯ ಎಂಬಾಕೆಯು ಅವನ ತಾಯಿ.
4 He did what was right in the eyes of the Lord, as his father Amaziah had done.
ಅವನು ತನ್ನ ತಂದೆಯಾದ ಅಮಚ್ಯನಂತೆ ಯೆಹೋವನ ಚಿತ್ತಾನುಸಾರವಾಗಿ ನಡೆದನು.
5 He gave himself to searching after God in the days of Zechariah, who made men wise in the fear of God; and as long as he was true to the Lord, God made things go well for him.
ದೈವಭಕ್ತಿಯನ್ನು ಬೋಧಿಸುತ್ತಿದ್ದ ಜೆಕರ್ಯನ ಜೀವಮಾನಕಾಲದಲ್ಲಿ ಅವನು ದೇವರನ್ನು ಅವಲಂಬಿಸಿಕೊಂಡಿದ್ದನು; ಹೀಗೆ ಅವನು ಯೆಹೋವನನ್ನು ಅವಲಂಬಿಸಿದ್ದ ಕಾಲದಲ್ಲೆಲ್ಲಾ ದೇವರಾದ ಯೆಹೋವನು ಅವನನ್ನು ಅಭಿವೃದ್ಧಿಗೆ ತಂದನು.
6 He went out and made war against the Philistines, pulling down the walls of Gath and Jabneh and Ashdod, and building towns in the country round Ashdod and among the Philistines.
ಅವನು ಫಿಲಿಷ್ಟಿಯರ ಮೇಲೆ ಯುದ್ಧಕ್ಕಾಗಿ ಹೊರಟು ಗತ್ ಊರು, ಯಬ್ನೆ, ಅಷ್ಡೋದ್ ಎಂಬ ಪಟ್ಟಣಗಳ ಗೋಡೆಗಳನ್ನು ಕೆಡವಿಬಿಟ್ಟು ಅಷ್ಡೋದಿನ ಮತ್ತು ಫಿಲಿಷ್ಟಿಯರ ಪ್ರಾಂತ್ಯಗಳಲ್ಲಿ ಪಟ್ಟಣಗಳನ್ನು ಕಟ್ಟಿಸಿದನು.
7 And God gave him help against the Philistines, and against the Arabians living in Gur-baal, and against the Meunim.
ಫಿಲಿಷ್ಟಿಯರೊಡನೆ ಗೂರ್ ಬಾಳಿನಲ್ಲಿರುವ ಅರಬಿಯರೊಡನೆ ಹಾಗು ಮೆಗೂನ್ಯರೊಡನೆ ಯುದ್ಧ ಮಾಡಿದಾಗ ಯೆಹೋವನು ಅವನಿಗೆ ಸಹಾಯ ಮಾಡಿದನು.
8 The Ammonites gave offerings to Uzziah: and news of him went out as far as the limit of Egypt; for he became very great in power.
ಅಮ್ಮೋನಿಯರೂ ಉಜ್ಜೀಯನಿಗೆ ಕಪ್ಪವನ್ನು ಕೊಡುತ್ತಿದ್ದರು. ಅವನು ಅಧಿಕಬಲವುಳ್ಳವನ್ನಾದುದರಿಂದ ಅವನ ಹೆಸರು ಐಗುಪ್ತದ ಮೇರೆಯವರೆಗೂ ಹಬ್ಬಿತು.
9 Uzziah made towers in Jerusalem, at the doorway in the angle and at the doorway in the valley and at the turn of the wall, arming them.
ಉಜ್ಜೀಯನು ಯೆರೂಸಲೇಮಿನಲ್ಲಿ ಮೂಲೆಬಾಗಿಲು, ತಗ್ಗಿನ ಬಾಗಿಲು, ಗೋಡೆ ತಿರುಗುವ ಭಾಗಗಳ ಮೇಲೆ ಗೋಪುರಗಳನ್ನು ಕಟ್ಟಿಸಿ ಭದ್ರಗೊಳಿಸಿದನು.
10 And he put up towers in the waste land and made places for storing water, for he had much cattle, in the low hills and in the table land; and he had farmers and vine-keepers in the mountains and in the fertile land, for he was a lover of farming.
೧೦ಅವನಿಗೆ ಇಳಿಜಾರಿನ ಪ್ರದೇಶದಲ್ಲಿಯೂ, ತಪ್ಪಲ ಸೀಮೆಯಲ್ಲಿಯೂ ಅಲ್ಲದೆ ಅಡವಿಯಲ್ಲಿಯೂ ಪಶುಗಳ ದೊಡ್ಡ ಮಂದೆಗಳು ಇದ್ದವು. ಆದುದರಿಂದ ಆ ಅಡವಿಯಲ್ಲಿ ಗೋಪುರಗಳನ್ನು ಕಟ್ಟಿಸಿ ಅನೇಕ ಬಾವಿಗಳನ್ನು ತೋಡಿಸಿದನು. ಅವನಿಗೆ ವ್ಯವಸಾಯದಲ್ಲಿ ಬಹಳ ಅಭಿರುಚಿ ಇದ್ದುದರಿಂದ ಗುಡ್ಡ, ಫಲವತ್ತಾದ ಬಯಲು, ಇವುಗಳಲ್ಲಿ ಹೊಲ ಹಾಗು ದ್ರಾಕ್ಷಿ ತೋಟಗಳಲ್ಲಿ ಕೆಲಸಗಾರರನ್ನು ನೇಮಿಸಿದನು.
11 In addition, Uzziah had an army of fighting-men who went out to war in bands, as they had been listed by Jeiel the scribe and Maaseiah the ruler, under the authority of Hananiah, one of the king's captains.
೧೧ಇದಲ್ಲದೆ, ಉಜ್ಜೀಯನಿಗೆ ಯುದ್ಧಕ್ಕೋಸ್ಕರ ಸೈನ್ಯವೂ ಇತ್ತು. ಲೇಖಕನಾದ ಯೆಗೀಯೇಲ್, ಅಧಿಕಾರಿಯಾದ ಮಾಸೇಯ ಇವರು ಹಾಕಿಕೊಟ್ಟ ಪಟ್ಟಿಯಕ್ರಮ ಪ್ರಕಾರ ಅರಸನ ಸರದಾರರಲ್ಲಿ ಒಬ್ಬನಾದ ಹನನ್ಯನ ಆಜ್ಞಾನುಸಾರವಾಗಿ. ಆಯಾ ಗುಂಪುಗಳು ಯುದ್ಧಕ್ಕೆ ಹೊರಡುತ್ತಿದ್ದವು.
12 The heads of families, the strong men of war, were two thousand, six hundred.
೧೨ಯುದ್ಧವೀರರೂ ಎಲ್ಲಾ ಗೋತ್ರಪ್ರಧಾನರ ಸಂಖ್ಯೆಯು ಎರಡು ಸಾವಿರದ ಆರು ನೂರು.
13 And under their orders was a trained army of three hundred and seven thousand, five hundred, of great strength in war, helping the king against any who came against him.
೧೩ಇವರ ಕೈಕೆಳಗಿದ್ದ ಭಟರ ಸಂಖ್ಯೆಯು ಮೂರು ಲಕ್ಷದ ಏಳು ಸಾವಿರದ ಐನೂರು; ಇವರು ಅರಸನ ಸೇವೆಯಲ್ಲಿದ್ದು ಅವನ ವೈರಿಗಳಿಗೆ ವಿರುದ್ಧವಾಗಿ ಪರಾಕ್ರಮದಿಂದ ಯುದ್ಧಮಾಡುತ್ತಿದ್ದರು.
14 And Uzziah had all these forces armed with body-covers and spears and head-covers and coats of metal and bows and stones for sending from leather bands.
೧೪ಉಜ್ಜೀಯನು ಈ ಎಲ್ಲಾ ಸೈನ್ಯದವರಿಗೆ ಬೇಕಾದ ಗುರಾಣಿ, ಬರ್ಜಿ, ಶಿರಸ್ತ್ರಾಣ, ಕವಚ, ಬಿಲ್ಲು, ಕವಣೆಯಕಲ್ಲು ಇವುಗಳನ್ನು ಒದಗಿಸಿ ಕೊಟ್ಟನು.
15 And in Jerusalem he made machines, the invention of expert men, to be placed on the towers and angles of the walls for sending arrows and great stones. And his name was honoured far and wide; for he was greatly helped till he was strong.
೧೫ಇದಲ್ಲದೆ, ಅವನು ಬಾಣಗಳನ್ನೂ, ದೊಡ್ಡ ಕಲ್ಲುಗಳನ್ನು ಬಳಸುವುದಕ್ಕಾಗಿ, ತಜ್ಞರ ಆಜ್ಞೆಯ ಮೇರೆಗೆ ಯಂತ್ರಗಳನ್ನೂ ಮಾಡಿಸಿ, ಅವುಗಳನ್ನು ಯೆರೂಸಲೇಮಿನ ಗೋಪುರಗಳ ಮೇಲೆಯೂ, ಕೋಟೆಕೊತ್ತಲಗಳನ್ನು ಮೇಲೆಯೂ ಇಡಿಸಿದ್ದನು. ಅವನು ಬಲಿಷ್ಠನಾಗುವ ಹಾಗೆ ದೇವರ ಅತಿಶಯವಾದ ಸಹಾಯವು ಆಶ್ಚರ್ಯವಾದ ರೀತಿಯಲ್ಲಿ ಅವನಿಗೆ ದೊರೆಯುತ್ತಿದ್ದುದರಿಂದ; ಅವನ ಕೀರ್ತಿಯೂ ಬಹು ದೂರದ ಮೇರೆಯವರೆಗೂ ಹಬ್ಬಿತು.
16 But when he had become strong, his heart was lifted up in pride, causing his destruction; and he did evil against the Lord his God; for he went into the Temple of the Lord for the purpose of burning perfumes on the altar of perfumes.
೧೬ಆದರೆ ಅವನು ಬಲಿಷ್ಠನಾದ ಮೇಲೆ ಅವನ ಅವನತಿಗಾಗಿ ಗರ್ವಿಷ್ಠನಾಗಿ ಭ್ರಷ್ಟನಾದನು; ತನ್ನ ದೇವರಾದ ಯೆಹೋವನಿಗೆ ದ್ರೋಹಿಯಾಗಿ ಧೂಪವೇದಿಯ ಮೇಲೆ ತಾನೇ ಧೂಪ ಹಾಕಬೇಕೆಂದು ಯೆಹೋವನ ಆಲಯದೊಳಗೆ ಪ್ರವೇಶಿಸಿದನು.
17 And Azariah the priest went in after him, with eighty of the Lord's priests, who were strong men;
೧೭ಆಗ ಮಹಾಯಾಜಕನಾದ ಅಜರ್ಯನೂ ಹಾಗು ಧೈರ್ಯಶಾಲಿಗಳಾದ ಯೆಹೋವನ ಎಂಭತ್ತು ಮಂದಿ ಇತರ ಯಾಜಕರೂ ಅರಸನಾದ ಉಜ್ಜೀಯನ ಹಿಂದೆಯೇ ಹೋಗಿ
18 And they made protests to Uzziah the king, and said to him, The burning of perfumes, Uzziah, is not your business but that of the priests, the sons of Aaron, who have been made holy for this work: go out of the holy place, for you have done wrong, and it will not be to your honour before God.
೧೮ಅರಸನ ಎದುರಿಗೆ ನಿಂತು ಅವನಿಗೆ, “ಉಜ್ಜೀಯನೇ, ಯೆಹೋವನಿಗೋಸ್ಕರ ಧೂಪ ಹಾಕುವುದು ನಿನ್ನ ಕೆಲಸವಲ್ಲ; ಅದಕ್ಕೋಸ್ಕರ ಆರೋನನ ಸಂತಾನದವರಾದ ಯಾಜಕರು ಪ್ರತಿಷ್ಠಿತರಾಗಿದ್ದಾರೆ. ಪವಿತ್ರಾಲಯವನ್ನು ಬಿಟ್ಟುಹೋಗು; ನೀನು ಮಾಡುತ್ತಿರುವುದು ದ್ರೋಹ. ಇದಕ್ಕೆ ದೇವರಾದ ಯೆಹೋವನಿಂದ ನಿನಗೆ ಗೌರವ ದೊರಕಲಾರದು” ಎಂದರು.
19 Then Uzziah was angry; and he had in his hand a vessel for burning perfume; and while his wrath was bitter against the priests, the mark of the leper's disease came out on his brow, before the eyes of the priests in the house of the Lord by the altar of perfumes.
೧೯ಆಗ ಧೂಪ ಹಾಕಬೇಕೆಂದು ಕೈಯಲ್ಲಿ ಧೂಪಾರತಿಯನ್ನು ಹಿಡಿದುಕೊಂಡಿದ್ದ ಉಜ್ಜೀಯನು ಕೋಪಗೊಂಡನು. ಅವನು ಯೆಹೋವನ ಆಲಯದ ಧೂಪವೇದಿಯ ಬಳಿಯಲ್ಲಿ ನಿಂತು, ಯಾಜಕರೊಡನೆ ಸಿಟ್ಟಿನಿಂದ ಮಾತನಾಡುತ್ತಿರುವಾಗಲೆ ಯಾಜಕರ ಸಮಕ್ಷಮದಲ್ಲೇ, ಅವನ ಹಣೆಯ ಮೇಲೆ ಕುಷ್ಠವು ಕಾಣಿಸಿಕೊಂಡಿತು.
20 And Azariah, the chief priest, and all the priests, looking at him, saw the mark of the leper on his brow, and they sent him out quickly and he himself went out straight away, for the Lord's punishment had come on him.
೨೦ಮಹಾಯಾಜಕನಾದ ಅಜರ್ಯನೂ ಎಲ್ಲಾ ಯಾಜಕರೂ ಅವನನ್ನು ದೃಷ್ಟಿಸಿ ನೋಡಿದಾಗ, ಅವನ ಹಣೆಯಲ್ಲಿ ಕುಷ್ಠವು ಕಂಡುಬಂದ ಕಾರಣ, ಅವನನ್ನು ಶೀಘ್ರವಾಗಿ ಅಲ್ಲಿಂದ ಹೊರಡಿಸಿದರು. ಯೆಹೋವನು ತನ್ನನ್ನು ಬಾಧಿಸಿದ್ದಾನೆಂದು ಅವನಿಗೆ ತಿಳಿಯಿತು. ಅವನೂ ಶೀಘ್ರವಾಗಿ ಹೊರಗೆ ಹೋಗಲು ಆತುರಪಟ್ಟನು.
21 So King Uzziah was a leper till the day of his death, living separately in his private house; for he was cut off from the house of God; and Jotham his son was ruling over his house, judging the people of the land.
೨೧ಉಜ್ಜೀಯನು ಜೀವದಿಂದಿರುವ ವರೆಗೂ ಕುಷ್ಠರೋಗಿಯಾಗಿದ್ದು, ಯೆಹೋವನ ಆಲಯಕ್ಕೆ ಬಾರದಂತೆ ಬಹಿಷ್ಕೃತನಾದನು. ಅವನು ಕುಷ್ಠದ ದೆಸೆಯಿಂದ ಪ್ರತ್ಯೇಕವಾದ ಮನೆಯಲ್ಲಿ ವಾಸಮಾಡಬೇಕಾಯಿತು. ರಾಜಗೃಹಾದಿಪತ್ಯವನ್ನೂ ಮತ್ತು ಪ್ರಜಾಪಾಲನೆಯನ್ನೂ ಅವನ ಮಗನಾದ ಯೋತಾಮನು ನೋಡಿಕೊಳ್ಳುತ್ತಿದ್ದನು.
22 Now the rest of the acts of Uzziah, first and last, were recorded by Isaiah the prophet, the son of Amoz.
೨೨ಉಜ್ಜೀಯನ ಉಳಿದ ಪೂರ್ವೋತ್ತರ ಚರಿತ್ರೆಯನ್ನು ಆಮೋಚನ ಮಗನಾದ ಯೆಶಾಯನೆಂಬ ಪ್ರವಾದಿಯು ಬರೆದಿದ್ದಾನೆ.
23 So Uzziah went to rest with his fathers; and they put his body into the earth in the field used for the resting-place of the kings, for they said, He is a leper: and Jotham his son became king in his place.
೨೩ಉಜ್ಜೀಯನು ತನ್ನ ಪೂರ್ವಿಕರ ಬಳಿಗೆ ಸೇರಲು ಅವನ ಶವವನ್ನು ಕುಷ್ಠ ರೋಗಿಯದೆಂದು ಬಗೆದು, ರಾಜ ಕುಟುಂಬದ ಸ್ಮಶಾನವಿದ್ದ ಹೊಲದಲ್ಲಿ ಸಮಾಧಿ ಮಾಡಿದರು. ಅವನಿಗೆ ಬದಲಾಗಿ ಅವನ ಮಗನಾದ ಯೋತಾಮನು ಅರಸನಾದನು.

< 2 Chronicles 26 >