< Habakkuk 1 >

1 The message seen by the prophet Habakkuk.
ಪ್ರವಾದಿಯಾದ ಹಬಕ್ಕೂಕನಿಗೆ ಕಂಡುಬಂದ ದೈವೋಕ್ತಿ.
2 How long, Lord, have I cried out and without you hearing me! I cry to you, ‘Violence!’ but you do not help.
ಯೆಹೋವನೇ, ನಾನು ಎಷ್ಟು ಕಾಲ ನಿನಗೆ ಸಹಾಯಕ್ಕಾಗಿ ಮೊರೆಯಿಡುತ್ತಿರಬೇಕು? ನೀನು ಎಷ್ಟು ಕಾಲ ಕೇಳದೇ ಇರುವಿ? ಹಿಂಸೆ, ಹಿಂಸೆ ಎಂದು ನಿನ್ನನ್ನು ಕೂಗಿಕೊಂಡರೂ ರಕ್ಷಿಸದೇ ಇರುವಿ.
3 Why do you make me look upon wickedness and behold trouble? Destruction and violence are before my eyes, and fighting and quarrelling.
ಕೇಡನ್ನೇ ನನ್ನ ಕಣ್ಣಿಗೆ ಏಕೆ ಕಾಣಿಸುವಂತೆ ಮಾಡಿದ್ದಿ? ಕಷ್ಟವನ್ನೇಕೆ ಅನುಭವಿಸುವಂತೆ ಮಾಡಿರುವೆ? ಹಿಂಸೆಬಾಧೆಗಳು ನನ್ನ ಕಣ್ಣೆದುರಿಗೆ ಇದ್ದೇ ಇವೆ; ಜಗಳವಾಗುತ್ತಿದೆ ವ್ಯಾಜ್ಯವೇಳುತ್ತಿದೆ.
4 Therefore the law is weak, and justice is never rendered; for the wicked surround the righteous, so that justice is perverted.
ಹೀಗಿರಲು ಧರ್ಮೋಪದೇಶವು ಜಡವಾಗಿದೆ, ನ್ಯಾಯವು ಎಂದಿಗೂ ಸಾಧ್ಯವಾಗುತ್ತಿಲ್ಲ; ದುಷ್ಟರು ಶಿಷ್ಟರನ್ನು ಆಕ್ರಮಿಸಿರುವುದರಿಂದ ದೊರೆಯುವ ನ್ಯಾಯವೂ ವಕ್ರವಾಗಿಯೇ ಇರುತ್ತದೆ.
5 Look at the nations, look well, be shocked and amazed. For I am about to do a work in your days; you will not believe it when it is told.
ಜನಾಂಗಗಳ ಮಧ್ಯೆ ನಡೆಯುವುದನ್ನು ದೃಷ್ಟಿಸಿ ನೋಡಿ. ಅದರಿಂದ ನೀವು ಬೆರಗಾಗಿ ಹೋಗುವಿರಿ; ನಿಮ್ಮ ಕಾಲದಲ್ಲೇ ನಾನು ಒಂದು ಕಾರ್ಯವನ್ನು ಮಾಡುವೆನು. ನಾನು ಆ ಕಾರ್ಯದ ಬಗ್ಗೆ ನಿಮಗೆ ಎಷ್ಟು ತಿಳಿಹೇಳಿದರೂ ನೀವು ನಂಬುವುದಿಲ್ಲ.
6 For I am about to raise up the Chaldeans, a nation grim and quick of action who sweep over the whole breadth of the earth to seize dwellings not their own.
ಇಗೋ, ನಾನು ಶಕ್ತಿಶಾಲಿಗಳೂ, ತೀಕ್ಷ್ಣಬುದ್ಧಿಯುಳ್ಳವರೂ ಆಗಿರುವ ಕಸ್ದೀಯ ಜನಾಂಗದವರನ್ನು ನಿಮ್ಮ ವಿರುದ್ಧ ಹುರಿದುಂಬಿಸಿ ಎಬ್ಬಿಸುತ್ತೇನೆ; ಆ ಜನರು ಭಯಂಕರರೂ, ಉಗ್ರರೂ ಆಗಿ ತಮ್ಮದಲ್ಲದ ಸಂಸ್ಥಾನವನ್ನು ವಶಮಾಡಿಕೊಳ್ಳುವರು ಮತ್ತು ಲೋಕದಲ್ಲೆಲ್ಲಾ ಸಂಚರಿಸುವರು.
7 They bring fear and terror. They write their own rules.
ಅವರ ಅಧಿಕಾರವನ್ನೂ ತಮ್ಮದೇ ಆದ ನ್ಯಾಯ ನೀತಿಯನ್ನೂ ರೂಪಿಸಿಕೊಂಡು; ಅವರ ಸ್ವ ಸಾಮರ್ಥ್ಯ, ಸ್ವ ಗೌರವಕ್ಕೆ ಪ್ರಾಮುಖ್ಯತೆ ನೀಡುವರು.
8 Their horses are swifter than leopards, quicker than wolves hunting at dusk. From afar they come swooping down, like an eagle attacking its prey.
ಅವರ ಕುದುರೆಗಳು ಚಿರತೆಗಳಿಗಿಂತ ವೇಗವಾಗಿ ಓಡಬಲ್ಲವು, ಸಂಜೆಯ ತೋಳಗಳಿಗಿಂತ ಚುರುಕಾಗಿವೆ; ಅದರ ಸವಾರರು ರಭಸದಿಂದ ಹಾರಿಬರುವರು, ಬೇಟೆಯನ್ನು ಕಬಳಿಸಲು ಹಾರಿ ಬರುವ ರಣಹದ್ದಿನಂತೆ ದೂರದಿಂದ ಹಾರಿಬರುವರು.
9 They all come to do violence, a horde like a desert wind, they gather up captives like sand.
ಹಿಂಸೆ, ಬಾಧೆಯನ್ನು ಗುರಿಯಾಗಿಟ್ಟುಕೊಂಡೆ ಮುನ್ನುಗ್ಗಿ ಬರುವರು. ಜನರನ್ನು ಮರಳಿನಂತೆ ಲೆಕ್ಕವಿಲ್ಲದಷ್ಟು ಸೆರೆಹಿಡಿದು ಗುಂಪು ಕೂಡಿಸುವರು.
10 At kings they scoff, and princes are sport to them. They laugh at every fortress, and heap up earth to take it.
೧೦ಅವರು ಅರಸರನ್ನು ಧಿಕ್ಕರಿಸಿ ಅಪಹಾಸ್ಯ ಮಾಡುವರು. ಸರದಾರರು ಅಧಿಪತಿಗಳು ಅವರ ಪರಿಹಾಸ್ಯಕ್ಕೆ ಗುರಿಯಾಗುವರು. ಒಂದೊಂದು ಕೋಟೆಯನ್ನೂ ಆಕ್ರಮಿಸಿ ಧೂಳಿಪಟ ಮಾಡುವರು.
11 Then they sweep on like the wind, Their strength is their god.
೧೧ಬಿರುಗಾಳಿಯಂತೆ ಬಂದು ಮಾಯವಾಗುವರು. ತಮ್ಮ ಸ್ವಂತ ಬಲವೇ ದೇವರು ಎಂದು ಭಾವಿಸಿ ಅಹಂಕಾರದಿಂದ ದೇವರನ್ನು ತಾತ್ಸಾರಮಾಡಿ ಅಪರಾಧಿಗಳಾಗಿ ದೈವಕೋಪಕ್ಕೆ ಗುರಿಯಾಗುವರು.
12 Are you not eternal, Lord, my holy one, who does not die? Lord you have appointed them to execute judgment, my rock, you have established them to punish.
೧೨ನನ್ನ ದೇವರಾದ ಯೆಹೋವನೇ, ನನ್ನ ಸದಮಲಸ್ವಾಮಿಯೇ, ನೀನು ಅನಾದಿಯಿಂದಿದ್ದೀಯಲ್ಲಾ, ನಾವು ಖಂಡಿತ ಸಾಯುವುದಿಲ್ಲ. ಯೆಹೋವನೇ ನಮ್ಮ ನ್ಯಾಯತೀರ್ಪಿಗಾಗಿ ಅವರನ್ನು ನೇಮಿಸಿರುವೆ; ಶರಣನೇ, ನಮ್ಮನ್ನು ಶಿಕ್ಷಿಸುವುದಕ್ಕಾಗಿ ಅವರನ್ನು ನಮ್ಮ ಮುಂದೆ ನಿಲ್ಲಿಸಿರುವೆ.
13 Your eyes are too pure to look at evil, you cannot condone iniquity. So why do you regard the treacherous in silence, while the wicked swallows the upright?
೧೩ನೀನು ಕೇಡನ್ನು ಬಯಸುವಂತಹ ದೇವರಲ್ಲ, ಪವಿತ್ರ ದೃಷ್ಟಿಯಿಂದ ನೋಡುವ ನಿನ್ನ ಕಣ್ಣಿನ ರಕ್ಷಣೆ ನಮ್ಮೊಂದಿಗಿದೆ. ಆದರೆ ನಮಗಾಗುತ್ತಿರುವ ಕೇಡನ್ನು ನೋಡಿಯೂ ಏಕೆ ಸುಮ್ಮನಿರುವೆ? ದುಷ್ಟರು ತಮಗಿಂತ ಯೋಗ್ಯನನ್ನು ಕಬಳಿಸುತ್ತಿರುವುದನ್ನು ನೋಡಿ ಏಕೆ ಸುಮ್ಮನಿರುವೇ?
14 You have made people like the fish of the sea, like reptiles that have no ruler.
೧೪ಮನುಷ್ಯರನ್ನು ಸಮುದ್ರದ ಮೀನುಗಳ ಸ್ಥಿತಿಗೆ ಏಕೆ ತಂದಿದ್ದೀ, ಆಳುವವನಿಲ್ಲದ ಕ್ರಿಮಿಕೀಟಗಳ ಗತಿಗೆ ಏಕೆ ಬರಮಾಡಿದ್ದೀ?
15 The wicked sweep them all into their nets, and gather them into their drag-nets, and rejoice and celebrate.
೧೫ನಲಿದಾಡುತ್ತಾ ಶತ್ರುಗಳು ನಮ್ಮನ್ನು ಗಾಳಗಳಿಂದ ಹಿಡಿದು ತಮ್ಮ ಬಲೆಗಳಲ್ಲಿ ರಾಶಿ ರಾಶಿಯಾಗಿ ಬಾಚಿಕೊಂಡು ಹೋಗಬೇಕೋ?
16 Therefore they sacrifice to their net, and burn offerings to their drag-net; for by their nets are their portions generous, and their food is rich.
೧೬ತಮ್ಮ ಬಲೆಗಳಿಗೆ ಆರಾಧನೆ ಮಾಡುತ್ತಾ ಬಲಿ ಕೊಡುತ್ತಾರೆ, ತಮ್ಮ ಜಾಲಗಳ ಎದುರು ಧೂಪಹಾಕುತ್ತಾರೆ; ಅವುಗಳ ಮೂಲಕವೇ ಅವರ ಭೋಜನವು ಪುಷ್ಟಿಯಾಯಿತು, ಅವರ ಆಹಾರವು ರುಚಿ ಎಂದು ಹೇಳುತ್ತಾರೆ.
17 Will they empty their nets continually, slaughter nations unpityingly?
೧೭ಹೀಗಿರಲು, ತಮ್ಮ ಬಲೆಗೆ ಸಿಕ್ಕಿದ್ದನ್ನು ಅವರು ನಿತ್ಯವೂ ಸುರಿಯುತ್ತಿರಲೋ, ಜನಾಂಗಗಳನ್ನು ಕರುಣಿಸದೆ ಸದಾ ಸಂಹರಿಸುತ್ತಿರಬೇಕೋ?

< Habakkuk 1 >