< Genesis 32 >

1 When, Jacob, had gone on his way, there met him, messengers of God.
ಯಾಕೋಬನು ಮುಂದೆ ಪ್ರಯಾಣಮಾಡಲು ದೇವದೂತರು ಅವನೆದುರಿಗೆ ಬಂದರು.
2 And Jacob said, when he saw them, the camp of God, is this! So he called the name of that place, Mahanaim.
ಯಾಕೋಬನು ಅವರನ್ನು ನೋಡಿದಾಗ, “ಇದು ದೇವರ ಸೇನಾನಿವೇಶ” ಎಂದು ಹೇಳಿ ಆ ಸ್ಥಳಕ್ಕೆ “ಮಹನಯಿಮ್” ಎಂದು ಹೆಸರಿಟ್ಟನು.
3 Then did Jacob send messengers before him unto Esau his brother, to the land of Seir, the field of Edom.
ಬಳಿಕ ಯಾಕೋಬನು ತನಗಿಂತ ಮೊದಲು ಎದೋಮ್ಯರ ಪ್ರದೇಶವಾಗಿರುವ ಸೇಯೀರ್ ಸೀಮೆಗೆ ತನ್ನ ಅಣ್ಣನಾದ ಏಸಾವನ ಬಳಿಗೆ ಸೇವಕರನ್ನು ಕಳುಹಿಸಿದನು.
4 And he commanded them, saying, Thus, shall ye say to my lord to Esau, Thus, saith thy servant Jacob, With Laban, have I sojourned, and tarried until now:
ಕಳುಹಿಸುವಾಗ ಅವರಿಗೆ “ನೀವು ನನ್ನ ಪ್ರಭುವಾದ ಏಸಾವನ ಬಳಿಗೆ ಹೋಗಿ ಅವನಿಗೆ, ‘ನಿನ್ನ ಸೇವಕನಾದ ಯಾಕೋಬನು ಇಷ್ಟು ದಿನ ಲಾಬಾನನ ಬಳಿಯಲ್ಲಿ ವಾಸವಾಗಿದ್ದನು
5 And I have oxen and asses, flocks and men-servants, and maid-servants, So I must needs send to tell my lord, that I might find favour in thine eyes.
ಈಗ ಅವನಿಗೆ ಎತ್ತು, ಕತ್ತೆ ಮುಂತಾದ ಪಶುಗಳ ಹಿಂಡುಗಳೂ ದಾಸದಾಸಿಯರು ಇದ್ದಾರೆ. ಅವನು ತಮ್ಮ ದಯೆ ಆತನ ಮೇಲೆ ಇರಬೇಕೆಂದು ತಿಳಿಸುವುದಕ್ಕೆ ನಿಮ್ಮನ್ನು ಕಳುಹಿಸಿದ್ದಾನೆ’” ಎಂದು ಹೇಳಿರಿ ಅಂದನು.
6 And the messengers returned unto Jacob, saying, —We came in unto thy brother unto Esau, moreover also he is on his way to meet thee, and four hundred men with him.
ತರುವಾಯ ಆ ಸೇವಕರು ಯಾಕೋಬನ ಬಳಿಗೆ ಹಿಂತಿರುಗಿ ಬಂದು, “ನಾವು ನಿನ್ನ ಅಣ್ಣನಾದ ಏಸಾವನ ಹತ್ತಿರಕ್ಕೆ ಹೋಗಿ ಬಂದಿದ್ದೇವೆ, ಅವನು ನಾನೂರು ಜನರ ಸಮೇತ ನಿನ್ನನ್ನು ಎದುರುಗೊಳ್ಳುವುದಕ್ಕೆ ಬರುತ್ತಾನೆ” ಎಂದು ಹೇಳಿದಾಗ,
7 Then was Jacob greatly afraid, and in distress. So he divided the people that were with him and the flocks and the herds and the camels into two camps,
ಯಾಕೋಬನಿಗೆ ಬಹು ಭಯವೂ ಕಳವಳವೂ ಉಂಟಾದವು. ಅವನು ತನ್ನೊಂದಿಗಿದ್ದ ಜನರನ್ನು, ಕುರಿದನಗಳನ್ನು ಹಾಗೂ ಒಂಟೆಗಳನ್ನು ಎರಡು ಗುಂಪುಗಳಾಗಿ ವಿಭಾಗಿಸಿದನು.
8 And he said. Should Esau come upon the one camp, and smite it, yet shall the camp that is left escape.
ಏಕೆಂದರೆ, “ಏಸಾವನು ಒಂದು ಗುಂಪಿನ ಮೇಲೆ ಬಿದ್ದರೂ ಮತ್ತೊಂದು ಗುಂಪು ತಪ್ಪಿಸಿಕೊಂಡು ಹೋಗಬಹುದು” ಅಂದುಕೊಂಡನು.
9 And Jacob said, God of my father Abraham, and God of my father Isaac, —Yahweh, who wast saying unto me, —Return to thy land and to thy kindred that I may deal well with thee:
ಇದಲ್ಲದೆ ಯಾಕೋಬನು ದೇವರನ್ನು ಪ್ರಾರ್ಥಿಸಿ, “ಯೆಹೋವನೇ, ನನ್ನ ತಂದೆಯಾದ ಅಬ್ರಹಾಮನ ದೇವರೇ, ನನ್ನ ತಂದೆಯಾದ ಇಸಾಕನ ದೇವರೇ, ‘ನಿನ್ನ ಸ್ವದೇಶಕ್ಕೂ, ಬಂಧುಗಳ ಬಳಿಗೂ ತಿರುಗಿ ಹೋಗಬೇಕೆಂದು ನನಗೆ ಆಜ್ಞಾಪಿಸಿ ನಿನಗೆ ಒಳ್ಳೆಯದನ್ನು ಮಾಡುವೆನೆಂದು’ ನನಗೆ ವಾಗ್ದಾನ ಮಾಡಿದ ಯೆಹೋವನೇ,
10 I am too small for all the lovingkindnesses and for all the faithfulness, which thou hast done unto thy servant, —For with my staff, passed I over this Jordan, But, now, have I become two camps.
೧೦ನೀನು ನಿನ್ನ ದಾಸನಾದ ನನ್ನ ಮೇಲೆ ಎಷ್ಟೋ ನಂಬಿಕೆಯನ್ನಿಟ್ಟು ನಿನ್ನ ವಾಗ್ದಾನವನ್ನು ನೆರವೇರಿಸಿದ್ದೀಯಲ್ಲಾ. ನಾನು ಅದಕ್ಕೆ ಕೇವಲ ಅಯೋಗ್ಯನು. ನಾನು ಮೊದಲು ಈ ಯೊರ್ದನ್ ನದಿಯನ್ನು ದಾಟಿದಾಗ ನನ್ನ ಬಳಿಯಲ್ಲಿ ಒಂದು ಕೋಲು ಮಾತ್ರವೇ ಇತ್ತು. ಈಗ ಎರಡು ಗುಂಪುಗಳಿಗೆ ಒಡೆಯನಾಗಿದ್ದೇನೆ.
11 Deliver me I pray thee out of the hand of my brother out of the hand of Esau, for I, am afraid of him, lest he come in and smite mother as well as sons
೧೧ನನ್ನ ಅಣ್ಣನಾದ ಏಸಾವನು ಬಂದು ನನ್ನನ್ನೂ, ನನ್ನ ಮಕ್ಕಳನ್ನೂ, ಅವರ ತಾಯಿಯರನ್ನೂ ಕೊಂದುಹಾಕುವನೋ ಎಂದು ನನಗೆ ಭಯವಿದೆ. ಅವನ ಕೈಗೆ ಸಿಕ್ಕದಂತೆ ನಮ್ಮನ್ನು ಕಾಪಾಡಬೇಕೆಂದು ನಿನ್ನನ್ನು ಬೇಡಿಕೊಳ್ಳುತ್ತೇನೆ,
12 But, thou thyself, saidst, —I will deal well with thee. So will I make thy seed as the sand of the sea, which is not to be counted, for multitude.
೧೨‘ನಿನಗೆ ಖಂಡಿತವಾಗಿ ಒಳ್ಳೆಯದನ್ನು ಮಾಡಿ, ನಿನ್ನ ಸಂತತಿಯನ್ನು ಸಮುದ್ರದ ಉಸುಬಿನಂತೆ ಅಸಂಖ್ಯವಾಗಿ ಅಭಿವೃದ್ಧಿ ಮಾಡುವೆನೆಂದು ನೀನು ನನಗೆ ಹೇಳಿದ್ದೀಯಲ್ಲಾ?’” ಎಂದನು.
13 And he tarried there that night, and took of that which came to his hand a present for Esau his brother:
೧೩ಯಾಕೋಬನು ಆ ರಾತ್ರಿ ಅಲ್ಲೇ ತಂಗಿದನು. ತಾನು ತಂದದ್ದರಲ್ಲಿ ಕೆಲವನ್ನು ಸಹೋದರನಾದ ಏಸಾವನಿಗೆ ಕಾಣಿಕೆಯಾಗಿ ತೆಗೆದುಕೊಂಡನು.
14 She-goats, two hundred; And he-goats, twenty; Ewes, two hundred; And rams, twenty;
೧೪ಇನ್ನೂರು ಆಡುಕುರಿ, ಇಪ್ಪತ್ತು ಹೋತ, ಇಪ್ಪತ್ತು ಟಗರು, ಮರಿಯೊಡನೆ ಹಾಲು ಕರೆಯುವ
15 Milch camels, with their colts, thirty; Cows, forty; And bulls, ten; She-asses, twenty; And young he asses ten.
೧೫ಮೂವತ್ತು ಒಂಟೆ, ನಲ್ವತ್ತು ಆಕಳು, ಹತ್ತು ಹೋರಿ ಇಪ್ಪತ್ತು ಹೆಣ್ಣುಕತ್ತೆ, ಹತ್ತು ಗಂಡುಕತ್ತೆ ಇವುಗಳನ್ನು ತೆಗೆದುಕೊಂಡನು.
16 And he gave them into the hand of his Servants, each drove by itself, and said unto his servants—Pass over before me, and, a breathing-space, shall ye put betwixt drove and drove.
೧೬ಇವುಗಳಲ್ಲಿ ಪ್ರತಿಯೊಂದು ಹಿಂಡನ್ನು ತನ್ನ ಸೇವಕನಿಗೆ ಒಪ್ಪಿಸಿ, “ನೀವು ನನಗಿಂತ ಮುಂಚಿತವಾಗಿ ನದಿಯನ್ನು ದಾಟಿ ಹೋಗಿರಿ ಮತ್ತು ಪ್ರತಿ ಹಿಂಡು ಹಿಂಡಿಗೂ ಮಧ್ಯದಲ್ಲಿ ಅಂತರವಿರಲಿ” ಎಂದನು.
17 And he commanded the first one saying: When Esau my brother shall fall in with thee, and shall ask thee, saying Whose art thou? and whither wouldst thou go? and to whom belong these before thee?
೧೭ಮೊದಲನೆಯ ಹಿಂಡಿನ ಮೇಲ್ವಿಚಾರಕನಿಗೆ, “ನನ್ನ ಅಣ್ಣನಾದ ಏಸಾವನು ನಿನ್ನೆದುರಿಗೆ ಬಂದು, ‘ನೀನು ಯಾರ ಸೇವಕನು? ಎಲ್ಲಿಗೆ ಹೋಗುತ್ತೀ? ನಿನ್ನ ಮುಂದೆ ಇರುವ ಇವೆಲ್ಲಾ ಯಾರದು?’” ಎಂದು ಕೇಳಿದರೆ,
18 then shalt thou say, To thy servant Jacob: It is, a present, sent to my lord, to Esau; And behold he himself also is behind us,
೧೮ಆಗ ನೀನು, “ಇವು ನಿಮ್ಮ ಸೇವಕನಾದ ಯಾಕೋಬನದು. ತನ್ನ ಪ್ರಭುಗಳಾದ ನಿಮಗೆ ಇವುಗಳನ್ನು ಕಾಣಿಕೆಯಾಗಿ ಕಳುಹಿಸಿಕೊಟ್ಟಿದ್ದಾನೆ. ಅವನೂ ನಮ್ಮ ಹಿಂದೆ ಬರುತ್ತಿದ್ದಾನೆ” ಎಂದು ಉತ್ತರಕೊಡಬೇಕು ಎಂಬುದಾಗಿ ಅಪ್ಪಣೆಕೊಟ್ಟನು.
19 And he commanded the second also, and the third yea all that were going on behind the droves, saying, —According to this word, shall ye speak unto Esau, when ye find him.
೧೯ಹಾಗೆಯೇ ಎರಡನೆಯವನಿಗೂ ಮೂರನೆಯವನಿಗೂ ಹಿಂಡುಗಳ ಹಿಂದೆ ಹೋದವರೆಲ್ಲರಿಗೂ, “ನೀವು ಏಸಾವನನ್ನು ನೋಡುವಾಗ ಇದೇ ರೀತಿಯಾಗಿ ಹೇಳಬೇಕು. ನಿನ್ನ ಸೇವಕನಾದ ಯಾಕೋಬನೇ ನಮ್ಮ ಹಿಂದೆ ಬರುತ್ತಿದ್ದಾನೆ ಎನ್ನಿರಿ” ಎಂದು ಅಪ್ಪಣೆಕೊಟ್ಟನು.
20 Then shall ye say, Also, lo! thy servant Jacob is behind us. For he said: I must pacify him with the present that goeth on before me. And, after that, will I see his face: Peradventure he will accept me.
೨೦ಯಾಕೋಬನು ತನ್ನೊಳಗೆ, “ನನ್ನ ಮುಂದೆ ಹೋಗುವ ಈ ಕಾಣಿಕೆಯಿಂದ ಏಸಾವನನ್ನು ಸಮಾಧಾನಪಡಿಸುವೆನು. ಆಮೇಲೆ ಅವನನ್ನು ಸಂಧಿಸುವಾಗ, ಒಂದು ವೇಳೆ ನನ್ನನ್ನು ಪ್ರೀತಿಯಿಂದ ಸ್ವೀಕರಿಸುವನೇನೋ” ಎಂದುಕೊಂಡನು.
21 So the present passed over before him, —whereas he himself tarried that night in the camp.
೨೧ಹೀಗೆ ಆ ಕಾಣಿಕೆಯು ಅವನ ಮುಂದಾಗಿ ಹೊರಟು ಹೋಯಿತು. ತಾನು ಆ ರಾತ್ರಿ ತನ್ನ ಪಾಳೆಯದಲ್ಲೇ ಉಳಿದುಕೊಂಡನು.
22 And he arose in that night and took his two wives, and his two handmaids, and his eleven sons, —and passed over the ford of Jabbok.
೨೨ಆ ರಾತ್ರಿ ಅವನು ತನ್ನ ಇಬ್ಬರು ಹೆಂಡತಿಯರನ್ನು, ಇಬ್ಬರು ದಾಸಿಯರನ್ನು ಹಾಗೂ ಹನ್ನೊಂದು ಮಂದಿ ಮಕ್ಕಳನ್ನು ಕರೆದುಕೊಂಡು ಯಬ್ಬೋಕ್ ಹೊಳೆಯನ್ನು ದಾಟಿದನು.
23 So he took them, and sent them over the brook, —and sent over that which he had.
೨೩ಅವರನ್ನೂ, ತನ್ನ ಆಸ್ತಿಯೆಲ್ಲವನ್ನೂ ದಾಟಿಸಿದ ಮೇಲೆ
24 And Jacob was left alone, —and there wrestled a man with him, until the uprisings of the dawn.
೨೪ಯಾಕೋಬನು ಒಂಟಿಯಾಗಿ ಹಿಂದೆ ನಿಂತಿರಲು ಯಾರೋ ಒಬ್ಬ ಪುರುಷನು ಬೆಳಗಾಗುವ ತನಕ ಅವನ ಸಂಗಡ ಹೋರಾಡಿದನು.
25 And when he saw, that he prevailed not against him, he touched the hollow of his thigh, —and the hollow of Jacob’s thigh was put out of joint, as he wrestled with him.
೨೫ಆ ಪುರುಷನು ತಾನು ಗೆಲ್ಲದೆ ಇರುವುದನ್ನು ಕಂಡು ಯಾಕೋಬನ ತೊಡೆಯ ಕೀಲನ್ನು ಮುಟ್ಟಿದ್ದರಿಂದ ಯಾಕೋಬನು ಅವನ ಸಂಗಡ ಹೋರಾಡುತ್ತಿರುವಾಗಲೇ ಅವನ ತೊಡೆಯ ಕೀಲು ತಪ್ಪಿತು.
26 Then said he—Let me go, for uprisen hath the dawn. And he said: I will not let thee go, except thou have blessed me
೨೬ಆ ಪುರುಷನು, “ನನ್ನನ್ನು ಬಿಡು, ಬೆಳಗಾಗುತ್ತಿದೆ” ಎನ್ನಲು, ಯಾಕೋಬನು, “ನೀನು ನನ್ನನ್ನು ಆಶೀರ್ವದಿಸದ ಹೊರತು ನಾನು ನಿನ್ನನ್ನು ಬಿಡುವುದಿಲ್ಲ” ಎಂದನು.
27 Then he said unto him—What is thy name? And he said—Jacob.
೨೭ಆ ಪುರುಷನು, “ನಿನ್ನ ಹೆಸರೇನು?” ಎಂದು ಕೇಳಿದ್ದಕ್ಕೆ ಅವನು, “ಯಾಕೋಬನು” ಎಂದಾಗ,
28 Then he said—Not Jacob, shall thy name be called any more, but Israel, —For thou hast contended with God and with men and hast prevailed.
೨೮ಅವನು ಯಾಕೋಬನಿಗೆ, “ಇನ್ನು ಮೇಲೆ ನೀನು ಯಾಕೋಬನೆಂದು ಕರೆಯಲ್ಪಡುವುದಿಲ್ಲ; ನೀನು ದೇವರ ಸಂಗಡಲೂ, ಮನುಷ್ಯರ ಸಂಗಡಲೂ ಹೋರಾಡಿ ಗೆದ್ದವನಾದುದರಿಂದ ನಿನಗೆ ‘ಇಸ್ರಾಯೇಲ್’ ಎಂದು ಹೆಸರಾಗುವುದು” ಎಂದು ಹೇಳಿದನು.
29 Then asked Jacob and said, Do, I pray thee, tell me thy name! And he said—Wherefore now, shouldest thou ask for my name? And he blessed him there,
೨೯ಯಾಕೋಬನು, “ನೀನು ನಿನ್ನ ಹೆಸರನ್ನು ನನಗೆ ತಿಳಿಸಬೇಕು” ಎಂದು ಅವನನ್ನು ಕೇಳಿಕೊಂಡಾಗ ಆತನು, “ನನ್ನ ಹೆಸರನ್ನು ವಿಚಾರಿಸುವುದೇಕೆ?” ಎಂದು ಹೇಳಿ ಅಲ್ಲಿ ಅವನನ್ನು ಆಶೀರ್ವದಿಸಿದನು.
30 So Jacob called the name of the place Peniel; For I saw God face to face; and my soul was delivered,
೩೦ಆಗ ಯಾಕೋಬನು, “ನಾನು ದೇವರನ್ನು ಪ್ರತ್ಯಕ್ಷವಾಗಿ ನೋಡಿದೆನಲ್ಲಾ; ಆದರೂ ನನ್ನ ಪ್ರಾಣ ಉಳಿದಿದೆ” ಎಂದು ಹೇಳಿ ಆ ಸ್ಥಳಕ್ಕೆ ಪೆನೀಯೇಲ್ ಎಂದು ಹೆಸರಿಟ್ಟನು,
31 And the sun rose on him as soon as he had passed over Penuel, —he, moreover was halting upon his thigh,
೩೧ಅವನು, ಪೆನೂವೇಲನ್ನು ದಾಟುತ್ತಿರುವಾಗ ಸೂರ್ಯೋದಯವಾಯಿತು. ಆದರೆ ಯಾಕೋಬನು ತೊಡೆಯ ನೋವಿನ ನಿಮಿತ್ತ ಕುಂಟುತ್ತಾ ನಡೆದನು.
32 For this cause, the sons of Israel eat not of the nerve of the large hip-sinew, which is by the hollow of the thigh, until this day, —because he touched the hollow of the thigh of Jacob, in the nerve of the hip-sinew.
೩೨ಆ ಪುರುಷನು ಯಾಕೋಬನ ತೊಡೆಯ ಕೀಲನ್ನು ಮುಟ್ಟಿದ್ದರಿಂದ ಇಸ್ರಾಯೇಲ್ಯರು ಇಂದಿನ ವರೆಗೂ ತೊಡೆಯ ಕೀಲಿನ ಮೇಲಿರುವ ಸೊಂಟದ ಮಾಂಸವನ್ನು ತಿನ್ನುವುದಿಲ್ಲ.

< Genesis 32 >