< John 21 >

1 After these things, Jesus revealed himself again to the disciples at the sea of Tiberias. He revealed himself this way.
ತರುವಾಯ ಯೇಸು ತಿಬೇರಿಯ ಸಮುದ್ರದ ಬಳಿಯಲ್ಲಿ ಶಿಷ್ಯರಿಗೆ ಪುನಃ ಕಾಣಿಸಿಕೊಂಡನು:
2 Simon Peter, Thomas called Didymus, Nathanael of Cana in Galilee, and the sons of Zebedee, and two others of his disciples were together.
ಸೀಮೋನ್ ಪೇತ್ರನೂ, ದಿದುಮನೆಂಬ ತೋಮನೂ, ಗಲಿಲಾಯದ ಕಾನಾ ಊರಿನ ನತಾನಯೇಲನೂ, ಜೆಬೆದಾಯನ ಮಕ್ಕಳೂ ಮತ್ತು ಆತನ ಶಿಷ್ಯರಲ್ಲಿ ಇನ್ನಿಬ್ಬರೂ ಕೂಡಿಬಂದಿದ್ದರು.
3 Simon Peter said to them, “I’m going fishing.” They told him, “We are also coming with you.” They immediately went out and entered into the boat. That night, they caught nothing.
ಆಗ ಅವರಿಗೆ ಸೀಮೋನ ಪೇತ್ರನು, “ನಾನು ಮೀನು ಹಿಡಿಯಲು ಹೋಗುತ್ತೇನೆ” ಎಂದು ಹೇಳಲು ಅವರು ಅವನಿಗೆ, “ನಾವೂ ಸಹ ನಿನ್ನ ಜೊತೆಯಲ್ಲಿ ಬರುತ್ತೇವೆ” ಎಂದರು. ಅವರು ಹೊರಟು ದೋಣಿಯನ್ನು ಹತ್ತಿದರು. ಆದರೆ ಆ ರಾತ್ರಿ ಅವರಿಗೆ ಏನೂ ಸಿಗಲಿಲ್ಲ.
4 But when day had already come, Jesus stood on the beach; yet the disciples didn’t know that it was Jesus.
ಬೆಳಗಾಗುವಾಗ ಯೇಸು ದಡದಲ್ಲಿ ನಿಂತಿದ್ದನು. ಆದಾಗ್ಯೂ ಶಿಷ್ಯರು ಆತನನ್ನು ಯೇಸುವೇ ಎಂದು ಗುರುತಿಸಲಿಲ್ಲ.
5 Jesus therefore said to them, “Children, have you anything to eat?” They answered him, “No.”
ಆಗ ಯೇಸು ಅವರನ್ನು, “ಮಕ್ಕಳಿರಾ, ನಿಮ್ಮಲ್ಲಿ ಮೀನುಗಳು ಉಂಟೋ?” ಎಂದು ಕೇಳಲು, ಅವರು ಆತನಿಗೆ “ಇಲ್ಲ” ಎಂದು ಉತ್ತರಕೊಟ್ಟರು.
6 He said to them, “Cast the net on the right side of the boat, and you will find some.” They cast it therefore, and now they weren’t able to draw it in for the multitude of fish.
ಆತನು ಅವರಿಗೆ, “ನೀವು ದೋಣಿಯ ಬಲಗಡೆಯಲ್ಲಿ ಬಲೆಯನ್ನು ಬೀಸಿರಿ; ಆಗ ನಿಮಗೆ ಸಿಕ್ಕುತ್ತವೆ” ಎಂದು ಹೇಳಿದನು. ಅವರು ಬಲೆ ಬೀಸಿದಾಗ ಮೀನುಗಳು ರಾಶಿ ರಾಶಿಯಾಗಿ ಬಲೆಗೆ ಬಂದು ಸೇರಿದ್ದರಿಂದ, ಅವರಿಗೆ ಬಲೆಯನ್ನು ಎಳೆಯುವುದಕ್ಕೆ ಸಾಧ್ಯವಾಗದೆ ಹೋಯಿತು.
7 That disciple therefore whom Jesus loved said to Peter, “It’s the Lord!” So when Simon Peter heard that it was the Lord, he wrapped his coat around himself (for he was naked), and threw himself into the sea.
ಆಗ ಯೇಸುವಿಗೆ ಪ್ರಿಯನಾಗಿದ್ದ ಶಿಷ್ಯನು ಪೇತ್ರನಿಗೆ, “ಆತನು ಕರ್ತನೇ” ಎಂದು ಹೇಳಿದನು. ಸೀಮೋನ್ ಪೇತ್ರನು ಅದನ್ನು ಕೇಳಿ ತಾನು ತೆಗೆದು ಬಿಟ್ಟಿದ್ದ ತನ್ನ ಮೇಲಂಗಿಯನ್ನು ಸುತ್ತಿಕೊಂಡು ಸಮುದ್ರದೊಳಗೆ ಧುಮುಕಿದನು.
8 But the other disciples came in the little boat (for they were not far from the land, but about two hundred cubits away), dragging the net full of fish.
ದಡವು ದೂರವಿರಲಿಲ್ಲ, ಹೆಚ್ಚು ಕಡಿಮೆ ಇನ್ನೂರು ಅಡಿ ದೂರವಿತ್ತು. ಉಳಿದ ಶಿಷ್ಯರು ಮೀನು ತುಂಬಿದ್ದ ಆ ಬಲೆಯನ್ನು ಎಳೆಯುತ್ತಾ ದೋಣಿಯಲ್ಲಿಯೇ ಬಂದರು.
9 So when they got out on the land, they saw a fire of coals there, with fish and bread laid on it.
ಅವರು ದಡಕ್ಕೆ ಬಂದು ಸೇರಿದಾಗ, ಕೆಂಡಗಳನ್ನೂ ಅವುಗಳ ಮೇಲೆ ಇಟ್ಟಿದ್ದ ಮೀನುಗಳನ್ನು ಮತ್ತು ರೊಟ್ಟಿಯನ್ನು ಕಂಡರು.
10 Jesus said to them, “Bring some of the fish which you have just caught.”
೧೦ಯೇಸು ಅವರಿಗೆ, “ನೀವು ಈಗ ಹಿಡಿದ ಮೀನುಗಳಲ್ಲಿ ಕೆಲವನ್ನು ತನ್ನಿರಿ” ಎಂದು ಹೇಳಲು,
11 Simon Peter went up, and drew the net to land, full of one hundred fifty-three great fish. Even though there were so many, the net wasn’t torn.
೧೧ಸೀಮೋನ್ ಪೇತ್ರನು ದೋಣಿಯನ್ನು ಹತ್ತಿ ಬಲೆಯನ್ನು ದಡಕ್ಕೆ ಎಳದುಕೊಂಡು ಬಂದನು. ಅದು ನೂರೈವತ್ಮೂರು ದೊಡ್ಡ ಮೀನುಗಳಿಂದ ತುಂಬಿತ್ತು. ಅಷ್ಟು ಮೀನುಗಳು ಇದ್ದರೂ ಬಲೆಯು ಹರಿದಿರಲಿಲ್ಲ.
12 Jesus said to them, “Come and eat breakfast!” None of the disciples dared inquire of him, “Who are you?” knowing that it was the Lord.
೧೨ಯೇಸು ಅವರಿಗೆ, “ಬಂದು ಊಟ ಮಾಡಿರಿ” ಎಂದು ಹೇಳಿದನು. ಶಿಷ್ಯರು ಆತನನ್ನು ಕರ್ತನೆಂದು ತಿಳಿದಿದ್ದರಿಂದ “ನೀನು ಯಾರು?” ಎಂದು ಕೇಳುವುದಕ್ಕೆ ಅವರಲ್ಲಿ ಒಬ್ಬರಿಗೂ ಧೈರ್ಯವಿರಲಿಲ್ಲ.
13 Then Jesus came and took the bread, gave it to them, and the fish likewise.
೧೩ಯೇಸು ಬಂದು ರೊಟ್ಟಿಯನ್ನು ತೆಗೆದುಕೊಂಡು ಅವರಿಗೆ ಕೊಟ್ಟನು. ಹಾಗೆಯೇ ಮೀನನ್ನೂ ಕೊಟ್ಟನು.
14 This is now the third time that Jesus was revealed to his disciples after he had risen from the dead.
೧೪ಯೇಸು ಸತ್ತವರೊಳಗಿಂದ ಜೀವಿತನಾಗಿ ಎದ್ದ ಮೇಲೆ, ತನ್ನ ಶಿಷ್ಯರಿಗೆ ಕಾಣಿಸಿಕೊಂಡದ್ದು ಇದು ಮೂರನೆಯ ಸಾರಿ.
15 So when they had eaten their breakfast, Jesus said to Simon Peter, “Simon, son of Jonah, do you love me more than these?” He said to him, “Yes, Lord; you know that I have affection for you.” He said to him, “Feed my lambs.”
೧೫ಅವರ ಊಟವಾದ ಮೇಲೆ ಯೇಸು ಸೀಮೋನ್ ಪೇತ್ರನಿಗೆ, “ಯೋಹಾನನ ಮಗನಾದ ಸೀಮೋನನೇ, ನೀನು ಇವರಿಗಿಂತ ಹೆಚ್ಚಾಗಿ ನನ್ನನ್ನು ಪ್ರೀತಿಸುತ್ತಿಯೋ?” ಎಂದು ಕೇಳಲು ಅವನು “ಹೌದು, ಕರ್ತನೇ, ನಾನು ನಿನ್ನ ಮೇಲೆ ಮಮತೆ ಇಟ್ಟಿದ್ದೇನೆಂದು ನೀನೇ ಬಲ್ಲೆ” ಎಂದನು. ಆತನು ಅವನಿಗೆ, “ನನ್ನ ಕುರಿಮರಿಗಳನ್ನು ಮೇಯಿಸು” ಎಂದು ಹೇಳಿದನು.
16 He said to him again a second time, “Simon, son of Jonah, do you love me?” He said to him, “Yes, Lord; you know that I have affection for you.” He said to him, “Tend my sheep.”
೧೬ಆತನು ತಿರುಗಿ ಎರಡನೆಯ ಸಾರಿ ಅವನಿಗೆ, “ಯೋಹಾನನ ಮಗನಾದ ಸೀಮೋನನೇ, ನೀನು ನನ್ನನ್ನು ಪ್ರೀತಿಸುತ್ತೀಯೋ?” ಎಂದು ಕೇಳಲು, ಅವನು ಹೌದು ಕರ್ತನೇ, ನಾನು ನಿನ್ನ ಮೇಲೆ ಮಮತೆ ಇಟ್ಟಿದ್ದೇನೆಂದು ನೀನೇ ಬಲ್ಲೆ ಎಂದನು. ಆತನು ಅವನಿಗೆ “ನನ್ನ ಕುರಿಗಳನ್ನು ಪಾಲಿಸು” ಎಂದು ಹೇಳಿದನು.
17 He said to him the third time, “Simon, son of Jonah, do you have affection for me?” Peter was grieved because he asked him the third time, “Do you have affection for me?” He said to him, “Lord, you know everything. You know that I have affection for you.” Jesus said to him, “Feed my sheep.
೧೭ಯೇಸು ಮೂರನೆಯ ಸಾರಿ, “ಯೋಹಾನನ ಮಗನಾದ ಸೀಮೋನನೇ ನೀನು ನನ್ನ ಮೇಲೆ ಮಮತೆ ಇಟ್ಟಿದ್ದಿಯೋ?” ಎಂದು ಕೇಳಿದನು, ಮೂರನೆಯ ಸಾರಿ ಆತನು, “ನನ್ನ ಮೇಲೆ ಮಮತೆ ಇಟ್ಟಿದ್ದೀಯೋ?” ಎಂದು ತನ್ನನ್ನು ಕೇಳಿದ್ದಕ್ಕೆ ಪೇತ್ರನು ದುಃಖಪಟ್ಟು, “ಕರ್ತನೇ, ನಿನಗೆ ಎಲ್ಲವೂ ತಿಳಿದಿದೆ. ನಾನು ನಿನ್ನ ಮೇಲೆ ಮಮತೆ ಇಟ್ಟೀದ್ದೇನೆಂದು ನಿನಗೆ ತಿಳಿದಿದೆ” ಎಂದನು. ಆಗ ಅವನಿಗೆ ಯೇಸು “ನನ್ನ ಕುರಿಗಳನ್ನು ಮೇಯಿಸು” ಎಂದನು.
18 Most certainly I tell you, when you were young, you dressed yourself and walked where you wanted to. But when you are old, you will stretch out your hands, and another will dress you and carry you where you don’t want to go.”
೧೮“ನಾನು ನಿನಗೆ ನಿಜನಿಜವಾಗಿ ಹೇಳುತ್ತೇನೆ, ನೀನು ಯುವಕನಾಗಿದ್ದಾಗ ನೀನೇ ನಿನ್ನ ಉಡುಪನ್ನು ಧರಿಸಿಕೊಂಡು ಇಷ್ಟಬಂದ ಕಡೆಗೆ ತಿರುಗಾಡುತ್ತಿದ್ದೀ. ಆದರೆ ನೀನು ಮುದುಕನಾದಾಗ ನಿನ್ನ ಕೈಗಳನ್ನು ಚಾಚುವಿ, ಆಗ ಮತ್ತೊಬ್ಬನು ನಿನ್ನ ನಡುವನ್ನು ಕಟ್ಟಿ ನಿನಗೆ ಇಷ್ಟವಿಲ್ಲದ ಕಡೆಗೆ ನಿನ್ನನ್ನು ಹೊತ್ತುಕೊಂಡು ಹೋಗುವನು” ಎಂದು ಹೇಳಿದನು.
19 Now he said this, signifying by what kind of death he would glorify God. When he had said this, he said to him, “Follow me.”
೧೯ಅವನು ಎಂಥಾ ಮರಣದಿಂದ ದೇವರನ್ನು ಮಹಿಮೆಪಡಿಸುವನು ಎಂಬುದನ್ನು ಯೇಸು ಈ ಮಾತಿನಿಂದ ಸೂಚಿಸಿದನು. ಆತನು ಇದನ್ನು ಹೇಳಿ ಪೇತ್ರನಿಗೆ “ನನ್ನನ್ನು ಹಿಂಬಾಲಿಸು” ಎಂದು ಹೇಳಿದನು.
20 Then Peter, turning around, saw a disciple following. This was the disciple whom Jesus loved, the one who had also leaned on Jesus’ breast at the supper and asked, “Lord, who is going to betray you?”
೨೦ಪೇತ್ರನು ಹಿಂತಿರುಗಿ ನೋಡಿದಾಗ, ಯೇಸುವಿಗೆ ಪ್ರಿಯನಾಗಿದ್ದ ಶಿಷ್ಯನು ಹಿಂದೆ ಬರುವುದನ್ನು ಕಂಡನು. ಆ ಶಿಷ್ಯನು ಊಟದ ಸಮಯದಲ್ಲಿ ಯೇಸುವಿನ ಎದೆಗೆ ಒರಗಿಕೊಂಡು, “ಕರ್ತನೇ, ನಿನ್ನನ್ನು ಹಿಡಿದುಕೊಡುವವನು ಯಾರು?” ಎಂದು ಕೇಳಿದವನೇ.
21 Peter, seeing him, said to Jesus, “Lord, what about this man?”
೨೧ಇವನನ್ನು ಪೇತ್ರನು ನೋಡಿ ಯೇಸುವಿಗೆ, “ಕರ್ತನೇ, ಇವನ ಬಗ್ಗೆ ಏನು ಹೇಳುತ್ತೀಯಾ?” ಎಂದು ಕೇಳಲು,
22 Jesus said to him, “If I desire that he stay until I come, what is that to you? You follow me.”
೨೨ಯೇಸು ಅವನಿಗೆ “ನಾನು ಬರುವ ತನಕ ಇವನು ಉಳಿದಿರಬೇಕೆಂಬುದು ನನಗೆ ಮನಸ್ಸಾಗಿದ್ದರೆ ಅದರಿಂದ ನಿನಗೇನು? ನೀನು ನನ್ನನ್ನು ಹಿಂಬಾಲಿಸು” ಎಂದು ಹೇಳಿದನು.
23 This saying therefore went out among the brothers that this disciple wouldn’t die. Yet Jesus didn’t say to him that he wouldn’t die, but, “If I desire that he stay until I come, what is that to you?”
೨೩ಆದುದರಿಂದ ಆ ಶಿಷ್ಯನು ಸಾಯುವುದಿಲ್ಲವೆಂಬ ಮಾತು ಸಹೋದರರಲ್ಲಿ ಹಬ್ಬಿತು. ಆದರೆ ಅವನು ಸಾಯುವುದಿಲ್ಲವೆಂದು ಯೇಸು ಅವನಿಗೆ ಹೇಳಲಿಲ್ಲ. “ನಾನು ಬರುವ ತನಕ ಅವನು ಉಳಿದಿರಬೇಕೆಂದು ನನಗೆ ಮನಸ್ಸಿದ್ದರೆ ಅದು ನಿನಗೇನು?” ಎಂದು ಮಾತ್ರ ಹೇಳಿದನು.
24 This is the disciple who testifies about these things, and wrote these things. We know that his witness is true.
೨೪ಈ ವಿಷಯವಾಗಿ ಸಾಕ್ಷಿಕೊಟ್ಟು, ಇವುಗಳನ್ನು ಬರೆದ ಶಿಷ್ಯನು ಇವನೇ. ಇವನ ಸಾಕ್ಷಿಯು ಸತ್ಯವೆಂದು ನಾವು ಬಲ್ಲೆವು.
25 There are also many other things which Jesus did, which if they would all be written, I suppose that even the world itself wouldn’t have room for the books that would be written.
೨೫ಇದಲ್ಲದೆ ಯೇಸುವು ಮಾಡಿದ ಇನ್ನೂ ಬೇರೆ ಅನೇಕ ಸಂಗತಿಗಳು ಸಹ ಇವೆ. ಅವುಗಳನ್ನೆಲ್ಲಾ ಒಂದೊಂದಾಗಿ ಬರೆಯುವುದಾದರೆ, ಆ ಪುಸ್ತಕಗಳು ಲೋಕವೇ ಹಿಡಿಸಲಾರದಷ್ಟಾಗುವುದು ಎಂದು ನಾನು ಭಾವಿಸುತ್ತೇನೆ.

< John 21 >