< Isaïe 33 >

1 Malheur à ceux qui vous affligent! Que nul ne vous rende misérables; que celui qui vous méprise cesse de vous mépriser. Ceux qui vous comptent pour rien seront pris à leur tour; ils seront subjugués, ils deviendront aussi faibles que le ver sur un manteau.
ಸೂರೆಯಾಗದಿದ್ದರೂ ಸೂರೆಮಾಡಿದಿ! ಬಾಧೆಪಡದಿದ್ದರೂ ಬಾಧಿಸಿದಿ! ನಿನ್ನ ಗತಿಯನ್ನು ಏನು ಹೇಳಲಿ; ನೀನು ಸೂರೆಮಾಡಿ ಬಿಟ್ಟ ಮೇಲೆ ನೀನೂ ಸೂರೆಯಾಗುವಿ. ಬಾಧಿಸಿ ಬಿಟ್ಟ ಮೇಲೆ ನಿನ್ನನ್ನೂ ಬಾಧಿಸುವರು.
2 Seigneur, faites-nous miséricorde; car nous avons eu confiance en vous; la race des incrédules est allée à sa perte; notre salut viendra au temps de la tribulation.
ಯೆಹೋವನೇ, ನಮ್ಮನ್ನು ಕರುಣಿಸು! ನಿನ್ನನ್ನೇ ನಿರೀಕ್ಷಿಸಿಕೊಂಡಿದ್ದೇವೆ. ಪ್ರತಿಮುಂಜಾನೆಯೂ ನಮಗೆ ಭುಜಬಲವಾಗಿಯೂ, ಇಕ್ಕಟ್ಟಿನಲ್ಲಿ ನಮಗೆ ರಕ್ಷಣೆಯಾಗಿಯೂ ಇರು.
3 A votre voix redoutable, les peuples ont eu peur de vous, et ils ont été hors d'eux-mêmes, et les Gentils se sont dispersés.
ಭೋರ್ಗರೆಯುವ ಶಬ್ದಕ್ಕೆ ಜನಾಂಗಗಳು ಓಡುವವು; ನೀನು ಏಳುವಾಗ ರಾಜ್ಯಗಳು ದಿಕ್ಕಾಪಾಲಾಗುವವು.
4 Maintenant on recueillera vos dépouilles, celles du petit comme celles du grand; tel un homme ramasse des sauterelles, ainsi on se jouera de vous.
ನಿಮ್ಮ ಕೊಳ್ಳೆಯು ಮಿಡತೆಗಳು ಕೂಡಿಸುವ ಹಾಗೆ ಕೂಡಿಸಲ್ಪಡುವುದು, ಮಿಡತೆಗಳು ಓಡಾಡುವ ಹಾಗೆ ಮನುಷ್ಯರು ಅದರ ಮೇಲೆ ಓಡಾಡುವರು.
5 Le Saint, le Seigneur Dieu, qui réside au plus haut des cieux, a rempli Sion de justice et d'équité.
ಯೆಹೋವನು ಉನ್ನತೋನ್ನತನಾಗಿದ್ದಾನೆ. ಆತನು ಮೇಲಣ ಲೋಕದಲ್ಲಿ ವಾಸಿಸುತ್ತಾನೆ. ಚೀಯೋನನ್ನು ನೀತಿನ್ಯಾಯಗಳಿಂದ ತುಂಬಿಸಿದ್ದಾನೆ.
6 Ils se soumettront à la loi; notre salut est dans ses trésors; c'est là que la sagesse, la science et la piété sont auprès du Seigneur; ce sont là les trésors de la justice.
ಜ್ಞಾನವೂ, ತಿಳಿವಳಿಕೆಯೂ, ರಕ್ಷಣಾಕಾರ್ಯದ ಸಮೃದ್ಧಿಯೂ ಇರುವುದರಿಂದ ನಿನ್ನ ಕಾಲದಲ್ಲಿ ಸ್ಥೈರ್ಯವಿರುವುದು; ಯೆಹೋವನ ಮೇಲಣ ಭಯಭಕ್ತಿಯು ನಿನಗೆ ನಿಧಿಯಾಗುವುದು.
7 Voilà qu'ils vont avoir peur de vous, ceux que vous craigniez; ils crieront à cause de vous; des messagers seront envoyés, pleurant amèrement et implorant la paix.
ಇಗೋ, ಅವರ ಸಿಂಹವೀರರು ಹೊರಗೆ ಹಾಹಾಕಾರ ಮಾಡುತ್ತಿದ್ದಾರೆ, ಸಮಾಧಾನದ ರಾಯಭಾರಿಗಳು ಘೋರವಾಗಿ ಅಳುತ್ತಿದ್ದಾರೆ.
8 Car toutes leurs voies seront désertes; la crainte qu'inspiraient les Gentils est calmée: l'alliance avec eux est rompue; vous ne les compterez plus parmi les hommes.
ರಾಜಮಾರ್ಗಗಳು ಹಾಳಾಗಿವೆ. ಹಾದಿಯಲ್ಲಿ ಹೋಗುವವರು ಇಲ್ಲವೇ ಇಲ್ಲ; ಶತ್ರುವು ಒಪ್ಪಂದವನ್ನು ಮೀರಿದ್ದಾನೆ, ಪಟ್ಟಣಗಳನ್ನು ತಿರಸ್ಕರಿಸಿದ್ದಾನೆ, ಯಾವ ಮನುಷ್ಯರನ್ನೂ ಗಣನೆಗೆ ತಾರನು.
9 La terre est en deuil; le Liban est confondu; Saron est devenu un marécage; la Galilée et le Carmel sont à découvert.
ದೇಶವು ಪ್ರಲಾಪಿಸಿ ಕುಗ್ಗುತ್ತದೆ, ಲೆಬನೋನ್ ನಾಚಿಕೊಂಡು ಒಣಗುತ್ತದೆ, ಶಾರೋನ್ ಬೆಂಗಾಡಾಗಿದೆ, ಬಾಷಾನ್ ಮತ್ತು ಕರ್ಮೆಲ್ ಎಲೆಗಳನ್ನು ಉದುರಿಸಿಬಿಟ್ಟಿವೆ.
10 Alors je me lèverai, dit le Seigneur; alors je serai loué, je serai glorifié
೧೦ಯೆಹೋವನು ಹೀಗೆನ್ನುತ್ತಾನೆ, “ನಾನು ಈಗ ಏಳುವೆನು, ಈಗಲೇ ನನ್ನನ್ನು ಉನ್ನತಪಡಿಸಿಕೊಳ್ಳುವೆನು, ಈಗ ಉನ್ನತೋನ್ನತನಾಗುವೆನು.
11 Vous verrez alors, et vous comprendrez; votre force d'esprit sera vaine, et le feu vous dévorera.
೧೧ನೀವು ಹೊಟ್ಟನ್ನು ಗರ್ಭಧರಿಸಿ ಕೂಳೆಯನ್ನು ಹೆರುವಿರಿ. ನಿಮ್ಮ ಉಸಿರೇ ನಿಮ್ಮನ್ನು ನುಂಗುವ ಜ್ವಾಲೆಯಾಗುವುದು.
12 Et les nations seront consumées, comme les ronces d'un champ qu'on arrache et qu'on brûle.
೧೨ಜನಾಂಗಗಳು ಸುಟ್ಟ ಸುಣ್ಣದ ಹಾಗಿರುವವು. ಕತ್ತರಿಸಿದ ಮುಳ್ಳುಕೊಂಪೆಗೆ ಬೆಂಕಿಹಚ್ಚಿದಂತಾಗುವುದು.
13 Ceux qui demeurent au loin apprendront ce que j'aurai fait; ceux qui sont près de moi connaîtront ma force.
೧೩ದೂರದಲ್ಲಿರುವವರೇ, ನಾನು ಮಾಡಿದ್ದನ್ನು ಕೇಳಿರಿ. ಸಮೀಪದಲ್ಲಿರುವವರೇ, ನನ್ನ ಪರಾಕ್ರಮವನ್ನು ತಿಳಿದುಕೊಳ್ಳಿರಿ.
14 Les pécheurs sont partis de Sion, un tremblement a saisi les impies. Qui vous annoncera que le feu est allumé? Qui vous fera connaître le séjour éternel?
೧೪“ಚೀಯೋನಿನಲ್ಲಿರುವ ಪಾಪಿಗಳು ಹೆದರುತ್ತಾರೆ. ಆ ಭ್ರಷ್ಟರು ನಡುಕಕ್ಕೆ ಒಳಗಾಗಿ, ನಮ್ಮಲ್ಲಿ ಯಾರು ನುಂಗುವ ಅಗ್ನಿಯ ಸಂಗಡ ವಾಸಿಸಬಲ್ಲರು? ನಮ್ಮಲ್ಲಿ ಯಾರು ಸದಾ ಉರಿಯುವ ಜ್ವಾಲೆಗಳೊಡನೆ ತಂಗುವರು” ಎಂದುಕೊಳ್ಳುತ್ತಾರೆ.
15 Celui qui marche dans la justice, qui parle avec droiture, qui hait les transgressions et l'iniquité, qui de ses mains repousse les présents, qui fait la sourde oreille quand on excuse l'effusion du sang, qui ferme les yeux pour ne pas voir le mal.
೧೫ಸನ್ಮಾರ್ಗದಲ್ಲಿ ನಡೆದು, ಯಥಾರ್ಥವಾಗಿ ನುಡಿದು, ದೋಚಿಕೊಂಡ ಲಾಭ ಬೇಡವೆಂದು, ಲಂಚಮುಟ್ಟದಂತೆ ಕೈ ಒದರಿ, ಕೊಲೆಯ ಮಾತಿಗೆ ಕಿವಿಗೊಡದೆ, ಕೆಟ್ಟದ್ದನ್ನು ನೋಡದಂತೆ ಕಣ್ಣು ಮುಚ್ಚಿಕೊಳ್ಳುವವನೇ ಉನ್ನತಸನ್ನಿಧಾನದಲ್ಲಿ ವಾಸಿಸುವನು.
16 Celui-là résidera dans un grotte élevée en une roche inexpugnable. Là on lui donnera des vivres et de l'eau toujours fidèle à couler.
೧೬ಇವನಿಗೆ ಗಿರಿದುರ್ಗಗಳೇ, ಆಶ್ರಯ ಅನ್ನವು ಉಚಿತವಾಗಿ ಒದಗುವುದು, ನೀರು ನಿಸ್ಸಂದೇಹವಾಗಿ ದೊರಕುವುದು.
17 Vous verrez le roi dans sa gloire, vos yeux verront de loin la terre;
೧೭ನೀವು ಭೂಷಿತ ರಾಜನನ್ನು ಕಣ್ಣಾರೆ ದರ್ಶನ ಮಾಡುವಿರಿ. ಅತಿವಿಸ್ತಾರವಾದ ಸ್ವದೇಶವನ್ನು ನೀವು ಕಣ್ಣು ತುಂಬಾ ನೋಡುವಿರಿ.
18 Et votre âme s'occupera de l'objet de sa crainte. Où sont les scribes? Où sont les conseillers? Où est celui qui apprenait à compter les petits enfants?
೧೮ಆಗ ನೀವು ಹಿಂದಿನ ಭಯವನ್ನು ಮನಸ್ಸಿಗೆ ತಂದುಕೊಳ್ಳುತ್ತಾ, “ಕಪ್ಪವನ್ನು ಲೆಕ್ಕಿಸಿದವನು ಎಲ್ಲಿ? ತೂಕಮಾಡಿದವನು ಎಲ್ಲಿ? ಗೋಪುರಗಳನ್ನು ಎಣಿಸಿದವನು ಎಲ್ಲಿ?” ಎಂದುಕೊಳ್ಳುವಿರಿ.
19 On ne verra plus un peuple, grands et petits, sans sagesse, parlant une langue inconnue, qu'un peuple ne pourrait ni ouïr ni comprendre.
೧೯ನಿಮಗೆ ತಿಳಿಯದ ಅನ್ಯಭಾಷೆಯನ್ನೂ, ನೀವು ಗ್ರಹಿಸಲಾರದ ತೊದಲು ಮಾತುಗಳನ್ನೂ ಆಡುವ ಆ ಕ್ರೂರ ಜನರನ್ನು ಇನ್ನು ಮುಂದೆ ನೋಡುವುದಿಲ್ಲ.
20 Voici la ville de Sion, notre salut; tes yeux verront Jérusalem, riche cité; ses tabernacles ne chancelleront pas; les pieux de son tabernacle demeureront inébranlables dans les siècles des siècles, et ses cordages ne se rompront jamais;
೨೦ನಮ್ಮ ಉತ್ಸವಗಳು ನಡೆಯುವ ಚೀಯೋನ್ ಪಟ್ಟಣವನ್ನು ದೃಷ್ಟಿಸಿರಿ, ಯೆರೂಸಲೇಮ್ ನೆಮ್ಮದಿಯ ನಿವಾಸವಾಗಿಯೂ, ಗೂಟಕೀಳದ, ಹಗ್ಗಹರಿಯದ ಒಂದೇ ಕಡೆ ಇರುವ ಗುಡಾರವಾಗಿಯೂ ಇರುವುದನ್ನು ನೀವು ಕಣ್ಣಾರೆ ಕಾಣುವಿರಿ.
21 Parce que le nom du Seigneur est grand pour vous: pour vous il y aura une contrée, des fleuves et des canaux larges et spacieux. Mais toi, tu ne prendras pas cette voie; le navire que poussent tes rameurs ne la prendra point.
೨೧ಅಲ್ಲಿ ಯೆಹೋವನು ಘನಹೊಂದಿದವನಾಗಿ ನದಿಸರೋವರಗಳಂತೆ ನಮ್ಮೊಂದಿಗಿರುವನು. ಹುಟ್ಟುಗೋಲಿನ ದೋಣಿಯಾಗಲಿ, ದೊಡ್ಡ ಹಡಗಾಗಲಿ ಅದನ್ನು ದಾಟುವುದಿಲ್ಲ.
22 Car mon Dieu est grand; le Seigneur mon juge ne me dédaignera pas; le Seigneur est notre roi, le Seigneur est notre prince: c'est le Seigneur qui nous sauvera.
೨೨ಏಕೆಂದರೆ ಯೆಹೋವನು ನಮ್ಮ ನ್ಯಾಯಾಧಿಪತಿ, ಯೆಹೋವನು ನಮಗೆ ಆಜ್ಞೆಕೊಡುವಾತನು, ಯೆಹೋವನು ನಮ್ಮ ರಾಜನು, ಆತನೇ ನಮ್ಮನ್ನು ರಕ್ಷಿಸುವನು.
23 Tes cordages sont rompus, parce qu'ils n'avaient pas de force; ton mât penche, il ne fera pas descendre les voiles; il n'élèvera pas le signal, jusqu'à ce que le navire soit livré au pillage. Et beaucoup de boiteux même y feront du butin.
೨೩ನಿನ್ನ ಹಗ್ಗಗಳು ಸಡಿಲವಾಗಿ ಸ್ತಂಭದ ಪಾದವನ್ನು ಸ್ಥಿರಪಡಿಸಿಕೊಳ್ಳಲಾರದೆ ಹೋದವು, ಹಾಯಿಯನ್ನು ಮುದುರದಂತೆ ಹಿಡಿದಿರಲಿಕ್ಕೂ ಆಗಲಿಲ್ಲ. ಆಗ ದೊಡ್ಡ ಸೂರೆಯು ಕೊಳ್ಳೆಯಾಗಿ ಹಂಚುವುದಕ್ಕೆ ಆಸ್ಪದವಾಯಿತು. ಕುಂಟರೂ ಸುಲಿಗೆ ಮಾಡಿದರು.
24 Et l'on ne dira pas parmi le peuple qui y demeure: Je suis trop las; car leur péché leur a été remis.
೨೪ಚೀಯೋನಿನ ಯಾವ ನಿವಾಸಿಯೂ “ನಾನು ಅಸ್ವಸ್ಥನು” ಎಂದು ಹೇಳುವುದಿಲ್ಲ. ಅಲ್ಲಿಯ ಜನರ ಪಾಪವು ಪರಿಹಾರವಾಗುವುದು.

< Isaïe 33 >