< שמות 7 >

וַיֹּאמֶר יְהוָה אֶל־מֹשֶׁה רְאֵה נְתַתִּיךָ אֱלֹהִים לְפַרְעֹה וְאַהֲרֹן אָחִיךָ יִהְיֶה נְבִיאֶֽךָ׃ 1
ಆಗ ಯೆಹೋವನು ಮೋಶೆಗೆ ಇಂತೆಂದನು, “ನಿನ್ನನ್ನು ಫರೋಹನಿಗೆ ದೇವರಂತೆ ನೇಮಿಸಿದ್ದೇನೆ. ನೋಡು, ನಿನ್ನ ಅಣ್ಣನಾದ ಆರೋನನು ನಿನಗೋಸ್ಕರ ಪ್ರವಾದಿಯಾಗಿರುವನು.
אַתָּה תְדַבֵּר אֵת כָּל־אֲשֶׁר אֲצַוֶּךָּ וְאַהֲרֹן אָחִיךָ יְדַבֵּר אֶל־פַּרְעֹה וְשִׁלַּח אֶת־בְּנֵֽי־יִשְׂרָאֵל מֵאַרְצֽוֹ׃ 2
ನಾನು ನಿನಗೆ ಆಜ್ಞಾಪಿಸುವುದ್ದನ್ನೆಲ್ಲಾ ನೀನು ಹೇಳಬೇಕು. ಇಸ್ರಾಯೇಲರು ದೇಶದಿಂದ ಹೊರಟುಹೋಗುವುದಕ್ಕೆ ಅಪ್ಪಣೆಕೊಡಬೇಕೆಂಬುದಾಗಿ ನಿನ್ನ ಅಣ್ಣನಾದ ಆರೋನನೇ ಫರೋಹನ ಮುಂದೆ ಮಾತನಾಡಬೇಕು.
וַאֲנִי אַקְשֶׁה אֶת־לֵב פַּרְעֹה וְהִרְבֵּיתִי אֶת־אֹתֹתַי וְאֶת־מוֹפְתַי בְּאֶרֶץ מִצְרָֽיִם׃ 3
ಆದರೂ ನಾನು ಫರೋಹನ ಮನಸ್ಸಿನಲ್ಲಿ ಹಠವನ್ನು ಹುಟ್ಟಿಸಿ, ಐಗುಪ್ತದೇಶದಲ್ಲಿ ಅನೇಕ ಸೂಚಕಕಾರ್ಯಗಳನ್ನೂ ಮತ್ತು ಅದ್ಭುತಕಾರ್ಯಗಳನ್ನೂ ಮಾಡಿ ನನ್ನ ಶಕ್ತಿಯನ್ನು ತೋರಿಸುವೆನು.
וְלֹֽא־יִשְׁמַע אֲלֵכֶם פַּרְעֹה וְנָתַתִּי אֶת־יָדִי בְּמִצְרָיִם וְהוֹצֵאתִי אֶת־צִבְאֹתַי אֶת־עַמִּי בְנֵֽי־יִשְׂרָאֵל מֵאֶרֶץ מִצְרַיִם בִּשְׁפָטִים גְּדֹלִֽים׃ 4
ಫರೋಹನು ನಿಮ್ಮ ಮಾತನ್ನು ಕೇಳುವುದಿಲ್ಲ. ಆಗ ನಾನು ಐಗುಪ್ತದೇಶದವರನ್ನು ಬಾಧಿಸಿ, ಅವರಿಗೆ ಮಹಾಶಿಕ್ಷೆಗಳನ್ನು ವಿಧಿಸಿ, ನನ್ನ ಜನರಾಗಿರುವ ಇಸ್ರಾಯೇಲರ ಸೈನ್ಯವನ್ನೆಲ್ಲಾ ಐಗುಪ್ತದೇಶದಿಂದ ಹೊರತರುವೆನು.
וְיָדְעוּ מִצְרַיִם כִּֽי־אֲנִי יְהוָה בִּנְטֹתִי אֶת־יָדִי עַל־מִצְרָיִם וְהוֹצֵאתִי אֶת־בְּנֵֽי־יִשְׂרָאֵל מִתּוֹכָֽם׃ 5
ನಾನು ಐಗುಪ್ತ್ಯರಿಗೆ ವಿರೋಧವಾಗಿ ಕೈಚಾಚಿ ಅವರ ಮಧ್ಯದಿಂದ ಇಸ್ರಾಯೇಲರನ್ನು ಹೊರತಂದಾಗ ನಾನು ಯೆಹೋವನು ಎಂಬುವುದನ್ನು ಐಗುಪ್ತ್ಯರು ತಿಳಿದುಕೊಳ್ಳುವರು” ಅಂದನು.
וַיַּעַשׂ מֹשֶׁה וְאַהֲרֹן כַּאֲשֶׁר צִוָּה יְהוָה אֹתָם כֵּן עָשֽׂוּ׃ 6
ಯೆಹೋವನ ಆಜ್ಞೆಯಂತೆಯೇ ಮೋಶೆ ಮತ್ತು ಆರೋನರು ಮಾಡಿದರು.
וּמֹשֶׁה בֶּן־שְׁמֹנִים שָׁנָה וְאֽ͏ַהֲרֹן בֶּן־שָׁלֹשׁ וּשְׁמֹנִים שָׁנָה בְּדַבְּרָם אֶל־פַּרְעֹֽה׃ 7
ಅವರು ಫರೋಹನ ಹತ್ತಿರ ಮಾತನಾಡಿದ ಕಾಲದಲ್ಲಿ ಮೋಶೆ ಎಂಬತ್ತು ವರ್ಷದವನೂ ಮತ್ತು ಆರೋನನು ಎಂಭತ್ತಮೂರು ವರ್ಷದವನೂ ಆಗಿದ್ದರು.
וַיֹּאמֶר יְהוָה אֶל־מֹשֶׁה וְאֶֽל־אַהֲרֹן לֵאמֹֽר׃ 8
ಯೆಹೋವನು ಮೋಶೆ ಹಾಗೂ ಆರೋನರ ಸಂಗಡ ಮಾತನಾಡಿ,
כִּי יְדַבֵּר אֲלֵכֶם פַּרְעֹה לֵאמֹר תְּנוּ לָכֶם מוֹפֵת וְאָמַרְתָּ אֶֽל־אַהֲרֹן קַח אֶֽת־מַטְּךָ וְהַשְׁלֵךְ לִפְנֵֽי־פַרְעֹה יְהִי לְתַנִּֽין׃ 9
“ಫರೋಹನು ನಿಮಗೆ ‘ನಾನು ನಿಮ್ಮ ಮಾತನ್ನು ನಂಬುವಂತೆ ನೀವು ಮಹತ್ಕಾರ್ಯವನ್ನು ನನ್ನ ಮುಂದೆ ಮಾಡಬೇಕು’ ಎಂದು ಹೇಳಿದರೆ ಮೋಶೆಯು ಆರೋನನಿಗೆ, ‘ನಿನ್ನ ಕೈಯಲ್ಲಿರುವ ಕೋಲನ್ನು ಫರೋಹನ ಮುಂದೆ ನೆಲದಲ್ಲಿ ಹಾಕು’ ಎಂದು ಹೇಳಬೇಕು. ಅದು ಸರ್ಪವಾಗುವುದು” ಎಂದು ಆಜ್ಞಾಪಿಸಿದನು.
וַיָּבֹא מֹשֶׁה וְאַהֲרֹן אֶל־פַּרְעֹה וַיַּעַשׂוּ כֵן כַּאֲשֶׁר צִוָּה יְהוָה וַיַּשְׁלֵךְ אַהֲרֹן אֶת־מַטֵּהוּ לִפְנֵי פַרְעֹה וְלִפְנֵי עֲבָדָיו וַיְהִי לְתַנִּֽין׃ 10
೧೦ಮೋಶೆ ಆರೋನರು ಫರೋಹನ ಬಳಿಗೆ ಹೋಗಿ ತಮಗೆ ಆಜ್ಞಾಪಿಸಿದಂತೆಯೇ ಮಾಡಿದರು. ಆರೋನನು ತನ್ನ ಕೋಲನ್ನು ಫರೋಹನ ಮತ್ತು ಅವನ ಪರಿವಾರದವರ ಮುಂದೆ ನೆಲದಲ್ಲಿ ಹಾಕಿದಾಗ ಅದು ಸರ್ಪವಾಯಿತು.
וַיִּקְרָא גַּם־פַּרְעֹה לֽ͏ַחֲכָמִים וְלַֽמְכַשְּׁפִים וַיַּֽעֲשׂוּ גַם־הֵם חַרְטֻמֵּי מִצְרַיִם בְּלַהֲטֵיהֶם כֵּֽן׃ 11
೧೧ಫರೋಹನು ಐಗುಪ್ತದೇಶದ ವಿದ್ವಾಂಸರನ್ನೂ ಮತ್ತು ಮಂತ್ರವಾದಿಗಳನ್ನೂ ಕರೆಯಿಸಿದಾಗ ಆ ಮಾಂತ್ರಿಕರು ತಮ್ಮ ಮಂತ್ರವಿದ್ಯೆಗಳಿಂದ ಅದೇ ರೀತಿಯಾಗಿ ಮಾಡಿದರು.
וַיַּשְׁלִיכוּ אִישׁ מַטֵּהוּ וַיִּהְיוּ לְתַנִּינִם וַיִּבְלַע מַטֵּֽה־אַהֲרֹן אֶת־מַטֹּתָֽם׃ 12
೧೨ಅವರು ತಮ್ಮ ತಮ್ಮ ಕೋಲುಗಳನ್ನು ನೆಲಕ್ಕೆ ಹಾಕಲು ಅವು ಸರ್ಪಗಳಾದವು. ಆದರೆ ಆರೋನನ ಕೋಲು ಅವರ ಕೋಲುಗಳನ್ನು ನುಂಗಿಬಿಟ್ಟಿತು.
וַיֶּחֱזַק לֵב פַּרְעֹה וְלֹא שָׁמַע אֲלֵהֶם כַּאֲשֶׁר דִּבֶּר יְהוָֽה׃ 13
೧೩ಯೆಹೋವನು ಮೊದಲು ಹೇಳಿದಂತೆಯೇ ಫರೋಹನ ಹೃದಯವು ಕಠಿಣವಾಯಿತು. ಅವನು ಅವರ ಮಾತಿಗೆ ಕಿವಿಗೊಡದೆ ಹೋದನು.
וַיֹּאמֶר יְהוָה אֶל־מֹשֶׁה כָּבֵד לֵב פַּרְעֹה מֵאֵן לְשַׁלַּח הָעָֽם׃ 14
೧೪ಆಗ ಯೆಹೋವನು ಮೋಶೆಗೆ, “ಫರೋಹನ ಹೃದಯವು ಕಠಿಣವಾಗಿದೆ, ತಾನು ಜನರಿಗೆ ಹೋಗುವುದಕ್ಕೆ ಅಪ್ಪಣೆಕೊಡುವುದಿಲ್ಲ ಎನ್ನುತ್ತಾನೆ.
לֵךְ אֶל־פַּרְעֹה בַּבֹּקֶר הִנֵּה יֹצֵא הַמַּיְמָה וְנִצַּבְתָּ לִקְרָאתוֹ עַל־שְׂפַת הַיְאֹר וְהַמַּטֶּה אֲשֶׁר־נֶהְפַּךְ לְנָחָשׁ תִּקַּח בְּיָדֶֽךָ׃ 15
೧೫ನೀನು ಬೆಳಿಗ್ಗೆ ಫರೋಹನ ಬಳಿಗೆ ಹೋಗು, ಅವನು ನೀರಿನ ಬಳಿಗೆ ಇಳಿದು ಬರುತ್ತಾನಲ್ಲಾ. ಸರ್ಪವಾಗಿ ಮಾರ್ಪಾಟುಮಾಡಿದ ಆ ಕೋಲನ್ನು ನಿನ್ನ ಕೈಯಲ್ಲಿ ತೆಗೆದುಕೊಂಡು ಅವನನ್ನು ಎದುರುಗೊಳ್ಳುವುದಕ್ಕೆ ನೈಲ್ ನದಿ ತೀರದಲ್ಲಿ ನಿಂತುಕೊಂಡು ಅವನಿಗೆ ಹೀಗನ್ನಬೇಕು,
וְאָמַרְתָּ אֵלָיו יְהוָה אֱלֹהֵי הָעִבְרִים שְׁלָחַנִי אֵלֶיךָ לֵאמֹר שַׁלַּח אֶת־עַמִּי וְיַֽעַבְדֻנִי בַּמִּדְבָּר וְהִנֵּה לֹא־שָׁמַעְתָּ עַד־כֹּֽה׃ 16
೧೬‘ಇಬ್ರಿಯರ ದೇವರಾದ ಯೆಹೋವನು ನನ್ನನ್ನು ನಿನ್ನ ಬಳಿಗೆ ಕಳುಹಿಸಿ, ಅರಣ್ಯದಲ್ಲಿ ತನ್ನನ್ನು ಆರಾಧಿಸುವಂತೆ ತನ್ನ ಜನರಿಗೆ ಅಪ್ಪಣೆಕೊಡಬೇಕೆಂದು ನಿನಗೆ ಆಜ್ಞಾಪಿಸಿದ್ದಾನಷ್ಟೇ. ಈ ವರೆಗೂ ನೀನು ಅದನ್ನು ಲಕ್ಷ್ಯಕ್ಕೆ ತರಲಿಲ್ಲ.
כֹּה אָמַר יְהוָה בְּזֹאת תֵּדַע כִּי אֲנִי יְהוָה הִנֵּה אָנֹכִי מַכֶּה ׀ בַּמַּטֶּה אֲשֶׁר־בְּיָדִי עַל־הַמַּיִם אֲשֶׁר בַּיְאֹר וְנֶהֶפְכוּ לְדָֽם׃ 17
೧೭ಆದುದರಿಂದ ಯೆಹೋವನು ಹೇಳುವುದೇನೆಂದರೆ, ನೀನು ನನ್ನನ್ನು ಯೆಹೋವನೆಂದು ತಿಳಿದುಕೊಳ್ಳುವುದಕ್ಕಾಗಿ ನನ್ನ ಸೇವಕನ ಕೈಯಲ್ಲಿರುವ ಕೋಲಿನಿಂದ ನೈಲ್ ನದಿಯ ನೀರನ್ನು ಹೊಡೆಸುವೆನು. ಆಗ ಅದು ರಕ್ತವಾಗುವುದು.
וְהַדָּגָה אֲשֶׁר־בַּיְאֹר תָּמוּת וּבָאַשׁ הַיְאֹר וְנִלְאוּ מִצְרַיִם לִשְׁתּוֹת מַיִם מִן־הַיְאֹֽר׃ 18
೧೮ನದಿಯಲ್ಲಿರುವ ಮೀನುಗಳು ಸಾಯುವವು. ನದಿಯು ಹೊಲಸಾಗಿ ನಾರುವುದು. ಅದನ್ನು ಕುಡಿಯುವುದಕ್ಕೆ ಐಗುಪ್ತರಿಗೆ ಹೇಸಿಗೆಯಾಗುವುದು’ ಎಂದು ಹೇಳಬೇಕು” ಅಂದನು.
וַיֹּאמֶר יְהוָה אֶל־מֹשֶׁה אֱמֹר אֶֽל־אַהֲרֹן קַח מַטְּךָ וּנְטֵֽה־יָדְךָ עַל־מֵימֵי מִצְרַיִם עַֽל־נַהֲרֹתָם ׀ עַל־יְאֹרֵיהֶם וְעַל־אַגְמֵיהֶם וְעַל כָּל־מִקְוֵה מֵימֵיהֶם וְיִֽהְיוּ־דָם וְהָיָה דָם בְּכָל־אֶרֶץ מִצְרַיִם וּבָעֵצִים וּבָאֲבָנִֽים׃ 19
೧೯ಯೆಹೋವನು ಮೋಶೆಯ ಸಂಗಡ ಮಾತನಾಡಿ, “ನೀನು ಆರೋನನಿಗೆ ‘ನಿನ್ನ ಕೋಲನ್ನು ತೆಗೆದುಕೊಂಡು ಐಗುಪ್ತದೇಶದಲ್ಲಿರುವ ಹೊಳೆ, ಕಾಲುವೆ, ಕೆರೆ, ಕೊಳ ಮೊದಲಾದ ನೀರಿರುವ ಎಲ್ಲಾ ಸ್ಥಳಗಳ ಮೇಲೆ ಅದನ್ನು ಚಾಚು’ ಎಂದು ಹೇಳಬೇಕು. ಅವನು ಚಾಚುವಾಗ ಆ ನೀರೆಲ್ಲಾ ರಕ್ತವಾಗುವುದು. ಐಗುಪ್ತದೇಶದಲ್ಲೆಲ್ಲಾ ಮರದ ಪಾತ್ರೆಗಳಲ್ಲಿಯೂ, ಕಲ್ಲಿನ ಪಾತ್ರೆಗಳಲ್ಲಿಯೂ ಇರುವ ನೀರು ರಕ್ತವಾಗುವುದು” ಅಂದನು.
וַיַּֽעֲשׂוּ־כֵן מֹשֶׁה וְאַהֲרֹן כַּאֲשֶׁר ׀ צִוָּה יְהוָה וַיָּרֶם בַּמַּטֶּה וַיַּךְ אֶת־הַמַּיִם אֲשֶׁר בַּיְאֹר לְעֵינֵי פַרְעֹה וּלְעֵינֵי עֲבָדָיו וַיֵּהָֽפְכוּ כָּל־הַמַּיִם אֲשֶׁר־בַּיְאֹר לְדָֽם׃ 20
೨೦ಮೋಶೆ ಮತ್ತು ಆರೋನರು ಯೆಹೋವನು ತಮಗೆ ಆಜ್ಞಾಪಿಸಿದಂತೆಯೇ ಮಾಡಿದರು. ಆರೋನನು ಫರೋಹನ ಮತ್ತು ಅವನ ಪರಿವಾರದ ಮುಂದೆ ಕೋಲನ್ನು ಎತ್ತಿ, ನೈಲ್ ನದಿಯಲ್ಲಿರುವ ನೀರನ್ನು ಹೊಡೆಯಲು ಅದೆಲ್ಲಾ ರಕ್ತವಾಯಿತು.
וְהַדָּגָה אֲשֶׁר־בַּיְאֹר מֵתָה וַיִּבְאַשׁ הַיְאֹר וְלֹא־יָכְלוּ מִצְרַיִם לִשְׁתּוֹת מַיִם מִן־הַיְאֹר וַיְהִי הַדָּם בְּכָל־אֶרֶץ מִצְרָֽיִם׃ 21
೨೧ಅದರಲ್ಲಿದ್ದ ಮೀನುಗಳು ಸತ್ತುಹೋದವು. ನದಿಯು ದುರ್ವಾಸನೆಗೊಂಡಿದ್ದರಿಂದ ಐಗುಪ್ತರು ನೈಲ್ ನದಿಯ ನೀರನ್ನು ಕುಡಿಯಲಾರದೆ ಹೋದರು. ಐಗುಪ್ತ ದೇಶದಲ್ಲೆಲ್ಲಾ ರಕ್ತವೇ ಕಾಣುತಿತ್ತು.
וַיַּֽעֲשׂוּ־כֵן חַרְטֻמֵּי מִצְרַיִם בְּלָטֵיהֶם וַיֶּחֱזַק לֵב־פַּרְעֹה וְלֹא־שָׁמַע אֲלֵהֶם כַּאֲשֶׁר דִּבֶּר יְהוָֽה׃ 22
೨೨ಆದರೆ ಐಗುಪ್ತ್ಯ ದೇಶದ ಮಾಂತ್ರಿಕರು ತಮ್ಮ ಮಂತ್ರವಿದ್ಯೆಗಳಿಂದ ಅದೇ ರೀತಿಯಾಗಿ ಮಾಡಿದ್ದರಿಂದ ಫರೋಹನ ಹೃದಯವು ಇನ್ನೂ ಕಠಿಣವಾಯಿತು. ಯೆಹೋವನು ಹೇಳಿದಂತೆಯೇ ಅವನು ಮೋಶೆ ಮತ್ತು ಆರೋನರ ಮಾತನ್ನು ಕೇಳದೆ ಹೋದನು.
וַיִּפֶן פַּרְעֹה וַיָּבֹא אֶל־בֵּיתוֹ וְלֹא־שָׁת לִבּוֹ גַּם־לָזֹֽאת׃ 23
೨೩ಫರೋಹನು ಆ ಮಹತ್ಕಾರ್ಯವನ್ನು ಲಕ್ಷ್ಯಕ್ಕೆ ತೆಗೆದುಕೊಳ್ಳದೆ ತನ್ನ ಮನೆಗೆ ಹೊರಟುಹೋದನು.
וַיַּחְפְּרוּ כָל־מִצְרַיִם סְבִיבֹת הַיְאֹר מַיִם לִשְׁתּוֹת כִּי לֹא יָֽכְלוּ לִשְׁתֹּת מִמֵּימֵי הַיְאֹֽר׃ 24
೨೪ಐಗುಪ್ತ್ಯರೆಲ್ಲರೂ ನದಿಯ ನೀರನ್ನು ಕುಡಿಯಲಾರದೆ ಕುಡಿಯುವ ನೀರಿಗಾಗಿ ನದಿಯ ಸುತ್ತಲೂ ಗುಂಡಿಗಳನ್ನು ತೆಗೆದರು.
וַיִּמָּלֵא שִׁבְעַת יָמִים אַחֲרֵי הַכּוֹת־יְהוָה אֶת־הַיְאֹֽר׃ 25
೨೫ಯೆಹೋವನು ನೈಲ್ ನದಿಯನ್ನು ಹೊಡೆದ ಮೇಲೆ ಏಳು ದಿನಗಳು ತುಂಬಿದವು.

< שמות 7 >