< בראשית 38 >

וַֽיְהִי בָּעֵת הַהִוא וַיֵּרֶד יְהוּדָה מֵאֵת אֶחָיו וַיֵּט עַד־אִישׁ עֲדֻלָּמִי וּשְׁמוֹ חִירָֽה׃ 1
ಆ ಕಾಲದಲ್ಲಿ ಯೆಹೂದನು ತನ್ನ ಅಣ್ಣತಮ್ಮಂದಿರನ್ನು ಬಿಟ್ಟು ಗಟ್ಟಾ ಇಳಿದು ಅದುಲ್ಲಾಮಿನ ಊರಿನವನಾದ ಹೀರಾ ಎಂಬುವವನ ಹತ್ತಿರ ಉಳಿದುಕೊಂಡನು.
וַיַּרְא־שָׁם יְהוּדָה בַּת־אִישׁ כְּנַעֲנִי וּשְׁמוֹ שׁוּעַ וַיִּקָּחֶהָ וַיָּבֹא אֵלֶֽיהָ׃ 2
ಅಲ್ಲಿ ಯೆಹೂದನು ಕಾನಾನ್ಯನಾದ ಶೂಗನ ಮಗಳನ್ನು ಕಂಡು ಅವಳನ್ನು ಮದುವೆ ಮಾಡಿಕೊಂಡನು
וַתַּהַר וַתֵּלֶד בֵּן וַיִּקְרָא אֶת־שְׁמוֹ עֵֽר׃ 3
ಅವಳು ಬಸುರಾಗಿ ಗಂಡುಮಗುವನ್ನು ಹೆತ್ತಳು ಅದಕ್ಕೆ ಯೆಹೂದನು “ಏರ್” ಎಂದು ಹೆಸರಿಟ್ಟನು.
וַתַּהַר עוֹד וַתֵּלֶד בֵּן וַתִּקְרָא אֶת־שְׁמוֹ אוֹנָֽן׃ 4
ಅವಳು ಎರಡನೆಯ ಸಾರಿ ಬಸುರಾಗಿ ಗಂಡು ಮಗುವನ್ನು ಹೆತ್ತಾಗ ಅದಕ್ಕೆ “ಓನಾನ್” ಎಂದು ಹೆಸರಿಟ್ಟಳು.
וַתֹּסֶף עוֹד וַתֵּלֶד בֵּן וַתִּקְרָא אֶת־שְׁמוֹ שֵׁלָה וְהָיָה בִכְזִיב בְּלִדְתָּהּ אֹתֽוֹ׃ 5
ಅವಳು ಪುನಃ ಗರ್ಭಿಣಿಯಾಗಿ ಗಂಡು ಮಗುವನ್ನು ಹೆತ್ತಳು. ಅದಕ್ಕೆ “ಶೇಲಹ” ಎಂದು ಹೆಸರಿಟ್ಟಳು. ಅವಳು ಆ ಮಗುವನ್ನು ಹೆತ್ತಾಗ ಯೆಹೂದನು ಕಜೀಬೂರಿನಲ್ಲಿದ್ದನು.
וַיִּקַּח יְהוּדָה אִשָּׁה לְעֵר בְּכוֹרוֹ וּשְׁמָהּ תָּמָֽר׃ 6
ಯೆಹೂದನು ತನ್ನ ಚೊಚ್ಚಲು ಮಗನಾದ ಏರನಿಗೆ “ತಾಮಾರ್” ಎಂಬ ಹೆಣ್ಣನ್ನು ತಂದು ಮದುವೆ ಮಾಡಿಸಿದನು.
וַיְהִי עֵר בְּכוֹר יְהוּדָה רַע בְּעֵינֵי יְהוָה וַיְמִתֵהוּ יְהוָֽה׃ 7
ಆದರೆ ಯೆಹೂದನ ಚೊಚ್ಚಲ ಮಗನಾದ ಏರನು ಯೆಹೋವನ ದೃಷ್ಟಿಯಲ್ಲಿ ಕೆಟ್ಟವನಾಗಿದ್ದುದರಿಂದ ಯೆಹೋವನು ಅವನನ್ನು ಸಾಯುವಂತೆ ಮಾಡಿದನು.
וַיֹּאמֶר יְהוּדָה לְאוֹנָן בֹּא אֶל־אֵשֶׁת אָחִיךָ וְיַבֵּם אֹתָהּ וְהָקֵם זֶרַע לְאָחִֽיךָ׃ 8
ಬಳಿಕ ಯೆಹೂದನು ಓನಾನನಿಗೆ, “ನೀನು ನಿನ್ನ ಅಣ್ಣನ ಹೆಂಡತಿಯನ್ನು ಮದುವೆಮಾಡಿಕೊಂಡು ಮೈದುನ ಧರ್ಮಕ್ಕೆ ಸರಿಯಾಗಿ ನಡೆದು ನಿನ್ನ ಅಣ್ಣನಿಗೆ ಸಂತತಿಯನ್ನು ಉಂಟು ಮಾಡು” ಎಂದನು.
וַיֵּדַע אוֹנָן כִּי לֹּא לוֹ יִהְיֶה הַזָּרַע וְהָיָה אִם־בָּא אֶל־אֵשֶׁת אָחִיו וְשִׁחֵת אַרְצָה לְבִלְתִּי נְתָן־זֶרַע לְאָחִֽיו׃ 9
ಆದರೆ ಓನಾನನು ಈ ರೀತಿ ಆಗುವ ಸಂತಾನವು ತನ್ನದಾಗುವುದಿಲ್ಲವೆಂದು ತಿಳಿದು ಅಣ್ಣನಿಗೆ ಸಂತತಿಯನ್ನು ಹುಟ್ಟಿಸಬಾರದೆಂದು ಯೋಚಿಸಿ ತನ್ನ ಅತ್ತಿಗೆಯೊಂದಿಗೆ ಸಂಗಮಿಸುವಾಗೆಲ್ಲಾ ಅವಳು ಗರ್ಭಧರಿಸದಂತೆ ತನ್ನ ವೀರ್ಯವನ್ನು ನೆಲದ ಮೇಲೆ ಸುರಿಸುತಿದ್ದನು.
וַיֵּרַע בְּעֵינֵי יְהוָה אֲשֶׁר עָשָׂה וַיָּמֶת גַּם־אֹתֽוֹ׃ 10
೧೦ಈ ನಡತೆ ಯೆಹೋವನ ದೃಷ್ಟಿಯಲ್ಲಿ ಕೆಟ್ಟದ್ದಾಗಿದ್ದುದರಿಂದ ಆತನು ಅವನನ್ನೂ ಸಾಯಿಸಿದನು.
וַיֹּאמֶר יְהוּדָה לְתָמָר כַּלָּתוֹ שְׁבִי אַלְמָנָה בֵית־אָבִיךְ עַד־יִגְדַּל שֵׁלָה בְנְי כִּי אָמַר פֶּן־יָמוּת גַּם־הוּא כְּאֶחָיו וַתֵּלֶךְ תָּמָר וַתֵּשֶׁב בֵּית אָבִֽיהָ׃ 11
೧೧ಆ ಮೇಲೆ ಯೆಹೂದನು ಒಂದು ವೇಳೆ ಶೇಲಹನು ತನ್ನ ಅಣ್ಣಂದಿರಂತೆಯೇ ಸತ್ತಾನೆಂದು ಯೋಚಿಸಿ ತನ್ನ ಸೊಸೆಯಾದ ತಾಮಾರಳಿಗೆ, “ನನ್ನ ಮಗನಾದ ಶೇಲಹನು ಪ್ರಾಯಸ್ಥನಾಗುವ ತನಕ ನೀನು ವಿಧವೆಯಾಗಿದ್ದು ನಿನ್ನ ತಂದೆಯ ಮನೆಯಲ್ಲಿರು” ಎಂದು ಹೇಳಿದನು. ಅವಳು ತಂದೆಯ ಮನೆಗೆ ಹೋಗಿ ಅಲ್ಲೇ ವಾಸಮಾಡಿದಳು.
וַיִּרְבּוּ הַיָּמִים וַתָּמָת בַּת־שׁוּעַ אֵֽשֶׁת־יְהוּדָה וַיִּנָּחֶם יְהוּדָה וַיַּעַל עַל־גֹּֽזֲזֵי צֹאנוֹ הוּא וְחִירָה רֵעֵהוּ הָעֲדֻלָּמִי תִּמְנָֽתָה׃ 12
೧೨ಬಹಳ ದಿನಗಳಾದ ಮೇಲೆ ಯೆಹೂದನ ಹೆಂಡತಿಯಾಗಿದ್ದ ಶೂಗನ ಮಗಳು ತೀರಿಕೊಂಡಳು. ಯೆಹೂದನು ತನಗೆ ದುಃಖಶಮನವಾದ ಮೇಲೆ ತನ್ನ ಕುರಿಗಳ ಉಣ್ಣೆ ಕತ್ತರಿಸುವವರ ಬಳಿಗೆ ತನ್ನ ಸ್ನೇಹಿತನಾದ ಹೀರಾ ಎಂಬ ಅದುಲ್ಲಾಮ್ಯನ ಜೊತೆಯಲ್ಲಿ ಗಟ್ಟಾ ಹತ್ತಿ ತಿಮ್ನಾ ಊರಿಗೆ ಹೋದನು.
וַיֻּגַּד לְתָמָר לֵאמֹר הִנֵּה חָמִיךְ עֹלֶה תִמְנָתָה לָגֹז צֹאנֽוֹ׃ 13
೧೩ಆಗ ತಾಮಾರಳಿಗೆ, “ಮಾವನು ತನ್ನ ಕುರಿಗಳ ಉಣ್ಣೇ ಕತ್ತರಿಸುವುದಕ್ಕೋಸ್ಕರ ತಿಮ್ನಾ ಊರಿಗೆ ಹೋಗುತ್ತಿದ್ದಾನೆ” ಎಂದು ತಿಳಿದು ಬಂದಿತು
וַתָּסַר בִּגְדֵי אַלְמְנוּתָהּ מֵֽעָלֶיהָ וַתְּכַס בַּצָּעִיף וַתִּתְעַלָּף וַתֵּשֶׁב בְּפֶתַח עֵינַיִם אֲשֶׁר עַל־דֶּרֶךְ תִּמְנָתָה כִּי רָאֲתָה כִּֽי־גָדַל שֵׁלָה וְהִוא לֹֽא־נִתְּנָה לוֹ לְאִשָּֽׁה׃ 14
೧೪ಆಗ ಆಕೆಯು ಶೇಲಹನು ಪ್ರಾಯಸ್ಥನಾದಾಗ್ಯೂ ನನ್ನನ್ನು ಅವನಿಗೆ ಮದುವೆ ಮಾಡಿಸಲಿಲ್ಲವಲ್ಲಾ ಅಂದುಕೊಂಡು ತನ್ನ ವಿಧವಾ ವಸ್ತ್ರವನ್ನು ತೆಗೆದಿಟ್ಟು ಮುಸುಕನ್ನು ಹಾಕಿಕೊಂಡು ವೇಶ್ಯಾಸ್ತ್ರೀಯಂತೆ ಅಲಂಕೃತಳಾಗಿ ತಿಮ್ನಾ ಊರಿನ ದಾರಿಯಲ್ಲಿರುವ ಏನಯಿಮ್ ಊರಿನ ಬಾಗಿಲ ಬಳಿಯಲ್ಲಿ ಕುಳಿತುಕೊಂಡಳು.
וַיִּרְאֶהָ יְהוּדָה וֽ͏ַיַּחְשְׁבֶהָ לְזוֹנָה כִּי כִסְּתָה פָּנֶֽיהָ׃ 15
೧೫ಯೆಹೂದನು ಆಕೆಯನ್ನು ಕಂಡಾಗ ಮುಖದ ಮೇಲೆ ಮುಸುಕು ಇದ್ದದರಿಂದ ಸೊಸೆ ಎಂದು ತಿಳಿಯದೆ ವೇಶ್ಯಾಸ್ತ್ರೀಯೆಂದು ಭಾವಿಸಿದನು.
וַיֵּט אֵלֶיהָ אֶל־הַדֶּרֶךְ וַיֹּאמֶר הָֽבָה־נָּא אָבוֹא אֵלַיִךְ כִּי לֹא יָדַע כִּי כַלָּתוֹ הִוא וַתֹּאמֶר מַה־תִּתֶּן־לִּי כִּי תָבוֹא אֵלָֽי׃ 16
೧೬ಮಾರ್ಗದಿಂದ ಓರೆಯಾಗಿ ಆಕೆಯ ಬಳಿಗೆ ಹೋಗಿ, “ನಾನು ನಿನ್ನ ಬಳಿಗೆ ಬರಲೇ ಎಂದು ಕೇಳಿದನು” ಆಕೆ, “ನೀನು ನನ್ನಲ್ಲಿ ಬರಬೇಕಾದರೆ, ನನಗೆ ಏನು ಕೊಡುತ್ತೀ?” ಎಂದು ಕೇಳಿದಳು.
וַיֹּאמֶר אָנֹכִי אֲשַׁלַּח גְּדִֽי־עִזִּים מִן־הַצֹּאן וַתֹּאמֶר אִם־תִּתֵּן עֵרָבוֹן עַד שָׁלְחֶֽךָ׃ 17
೧೭ಅವನು, “ಹಿಂಡಿನಿಂದ ಒಂದು ಹೋತಮರಿಯನ್ನು ಕಳುಹಿಸುತ್ತೇನೆ” ಅಂದಾಗ ಆಕೆ, “ನೀನು ಆದನ್ನು ಕೊಡುವ ತನಕ ನನ್ನಲ್ಲಿ ಏನಾದರೂ ಒತ್ತೆಯಿಡಬೇಕು” ಎಂದು ಹೇಳಿದ್ದಕ್ಕೆ,
וַיֹּאמֶר מָה הֽ͏ָעֵרָבוֹן אֲשֶׁר אֶתֶּן־לָּךְ וַתֹּאמֶר חֹתָֽמְךָ וּפְתִילֶךָ וּמַטְּךָ אֲשֶׁר בְּיָדֶךָ וַיִּתֶּן־לָּהּ וַיָּבֹא אֵלֶיהָ וַתַּהַר לֽוֹ׃ 18
೧೮ಅವನು, “ಏನು ಒತ್ತೇ ಇಡಲಿ” ಎಂದು ಕೇಳಿದನು. ಆಗ ಆಕೆಯು “ನಿನ್ನ ಮುದ್ರೆ, ನಿನ್ನ ದಾರ, ನಿನ್ನ ಕೈಕೋಲು ಈ ಮೂರನ್ನು ಒತ್ತೆಯಾಗಿ ಇಡು” ಅಂದಳು. ಅವನು ಅವುಗಳನ್ನು ಕೊಟ್ಟು ಆಕೆಯನ್ನು ಸಂಗಮಿಸಲು ಆಕೆಯು ಅವನಿಗೆ ಗರ್ಭಿಣಿಯಾದಳು.
וַתָּקָם וַתֵּלֶךְ וַתָּסַר צְעִיפָהּ מֵעָלֶיהָ וַתִּלְבַּשׁ בִּגְדֵי אַלְמְנוּתָֽהּ׃ 19
೧೯ತರುವಾಯ ಆಕೆ ತಾನು ಹಾಕಿಕೊಂಡಿದ್ದ ಮುಸುಕನ್ನು ತೆಗೆದಿಟ್ಟು ತಿರುಗಿ ವಿಧವೆಯ ವಸ್ತ್ರಗಳನ್ನು ಉಟ್ಟುಕೊಂಡಳು.
וַיִּשְׁלַח יְהוּדָה אֶת־גְּדִי הָֽעִזִּים בְּיַד רֵעֵהוּ הָֽעֲדֻלָּמִי לָקַחַת הָעֵרָבוֹן מִיַּד הָאִשָּׁה וְלֹא מְצָאָֽהּ׃ 20
೨೦ಯೆಹೂದನು ತಾನು ಇಟ್ಟಿದ್ದ ಒತ್ತೆಯನ್ನು ಆ ಹೆಂಗಸಿನ ಕೈಯಿಂದ ಬಿಡಿಸಿಕೊಳ್ಳುವುದಕ್ಕೊಸ್ಕರ ತನ್ನ ಸ್ನೇಹಿತನಾದ ಅದುಲ್ಲಾಮ್ಯನ ಕೈಯಲ್ಲಿ ಹೋತಮರಿಯನ್ನು ಕಳುಹಿಸಿದಾಗ ಆಕೆಯು ಅವನಿಗೆ ಸಿಗಲಿಲ್ಲ.
וַיִּשְׁאַל אֶת־אַנְשֵׁי מְקֹמָהּ לֵאמֹר אַיֵּה הַקְּדֵשָׁה הִוא בָעֵינַיִם עַל־הַדָּרֶךְ וַיֹּאמְרוּ לֹא־הָיְתָה בָזֶה קְדֵשָֽׁה׃ 21
೨೧ಅವನು ಅವಳ ಊರಿನವರನ್ನು, “ಏನಯಿಮಿನ ದಾರಿಯ ಬಳಿಯಲ್ಲಿ ಕುಳಿತಿದ್ದ ವೇಶ್ಯಾಸ್ತ್ರೀ ಎಲ್ಲಿರುವಳು” ಎಂದು ಕೇಳಿದ್ದಕ್ಕೆ ಅವರು, “ಇಲ್ಲಿ ಯಾವ ವೇಶ್ಯಾಸ್ತ್ರೀಯೂ ಇಲ್ಲ” ಎಂದರು.
וַיָּשָׁב אֶל־יְהוּדָה וַיֹּאמֶר לֹא מְצָאתִיהָ וְגַם אַנְשֵׁי הַמָּקוֹם אָֽמְרוּ לֹא־הָיְתָה בָזֶה קְדֵשָֽׁה׃ 22
೨೨ಅವನು ಯೆಹೂದನ ಬಳಿಗೆ ಹಿಂದಿರುಗಿ ಬಂದು, “ನಾನು ಅವಳನ್ನು ಕಾಣಲಿಲ್ಲ ಮತ್ತು ಅಲ್ಲಿ ವಿಚಾರಿಸಿದಾಗ ಆ ಊರಿನವರು ಅಲ್ಲಿ ಯಾವ ವೇಶ್ಯಾಸ್ತ್ರೀಯೂ ಇಲ್ಲವೆಂದರು” ಎಂದು ತಿಳಿಸಿದನು.
וַיֹּאמֶר יְהוּדָה תִּֽקַּֽח־לָהּ פֶּן נִהְיֶה לָבוּז הִנֵּה שָׁלַחְתִּי הַגְּדִי הַזֶּה וְאַתָּה לֹא מְצָאתָֽהּ׃ 23
೨೩ಅದಕ್ಕೆ ಯೆಹೂದನು, “ನಾವು ಅಪಹಾಸ್ಯಕ್ಕೆ ಒಳಗಾಗದ ಹಾಗೆ ಆ ವಸ್ತುಗಳನ್ನು ಅವಳೇ ಇಟ್ಟುಕೊಳ್ಳಲಿ. ನಾನಂತೂ ಹೋತಮರಿಯನ್ನು ಕಳುಹಿಸಿಕೊಟ್ಟೆನು. ಅವಳು ನಿನಗೆ ಸಿಕ್ಕಲಿಲ್ಲ” ಎಂದನು.
וַיְהִי ׀ כְּמִשְׁלֹשׁ חֳדָשִׁים וַיֻּגַּד לִֽיהוּדָה לֽ͏ֵאמֹר זָֽנְתָה תָּמָר כַּלָּתֶךָ וְגַם הִנֵּה הָרָה לִזְנוּנִים וַיֹּאמֶר יְהוּדָה הוֹצִיאוּהָ וְתִשָּׂרֵֽף׃ 24
೨೪ಸುಮಾರು ಮೂರು ತಿಂಗಳಾದ ಮೇಲೆ ಯೆಹೂದನಿಗೆ, “ನಿನ್ನ ಸೊಸೆಯಾದ ತಾಮಾರಳು ವ್ಯಭಿಚಾರದಿಂದ ಬಸುರಾಗಿದ್ದಾಳೆ” ಎಂಬ ವರ್ತಮಾನವನ್ನು ತಿಳಿಸಿದರು. ಆಗ ಯೆಹೂದನು, “ಆಕೆಯನ್ನು ಹೊರಗೆ ಕರತನ್ನಿರಿ, ಆಕೆಯನ್ನು ಸುಡಬೇಕು” ಎಂದು ಹೇಳಿದನು.
הִוא מוּצֵאת וְהִיא שָׁלְחָה אֶל־חָמִיהָ לֵאמֹר לְאִישׁ אֲשֶׁר־אֵלֶּה לּוֹ אָנֹכִי הָרָה וַתֹּאמֶר הַכֶּר־נָא לְמִי הַחֹתֶמֶת וְהַפְּתִילִים וְהַמַּטֶּה הָאֵֽלֶּה׃ 25
೨೫ಆಕೆಯನ್ನು ಹೊರಕ್ಕೆ ತಂದಾಗ, ಆಕೆಯು ತನ್ನ ಮಾವನಿಗೆ, “ಈ ಸಾಮಾನುಗಳನ್ನು ಕಳುಹಿಸಿ, ಇವು ಯಾವ ಮನುಷ್ಯನದೋ, ಅವನಿಂದಲೇ ನಾನು ಗರ್ಭಿಣಿಯಾಗಿದ್ದೇನೆ. ಮುದ್ರೆ, ದಾರ, ಕೋಲು ಇವುಗಳ ಗುರುತನ್ನು ತಿಳಿಯಬಹುದು” ಎಂದು ಕೇಳಿಕೊಂಡಳು.
וַיַּכֵּר יְהוּדָה וַיֹּאמֶר צָֽדְקָה מִמֶּנִּי כִּֽי־עַל־כֵּן לֹא־נְתַתִּיהָ לְשֵׁלָה בְנִי וְלֹֽא־יָסַף עוֹד לְדַעְתָּֽה׃ 26
೨೬ಯೆಹೂದನು ಅವುಗಳ ಗುರುತನ್ನು ತಿಳಿದು, “ನಾನು, ನನ್ನ ಮಗನಾದ ಶೇಲಹನನ್ನು ಆಕೆಗೆ ಮದುವೆ ಮಾಡಿಸಲಿಲ್ಲ. ಆದುದರಿಂದ ಆಕೆಯು ನನಗಿಂತಲೂ ನೀತಿವಂತಳು” ಎಂದು ಹೇಳಿದನು. ಅವನು ಪುನಃ ಆಕೆಯ ಸಹವಾಸ ಮಾಡಲಿಲ್ಲ.
וַיְהִי בְּעֵת לִדְתָּהּ וְהִנֵּה תְאוֹמִים בְּבִטְנָֽהּ׃ 27
೨೭ತಾಮಾರಳಿಗೆ ಹೆರಿಗೆ ಕಾಲ ಬಂದಾಗ ಆಕೆಯ ಗರ್ಭದಲ್ಲಿ ಅವಳಿ ಮಕ್ಕಳಿರುವುದು ಕಂಡುಬಂದಿತು.
וַיְהִי בְלִדְתָּהּ וַיִּתֶּן־יָד וַתִּקַּח הַמְיַלֶּדֶת וַתִּקְשֹׁר עַל־יָדוֹ שָׁנִי לֵאמֹר זֶה יָצָא רִאשֹׁנָֽה׃ 28
೨೮ಆಕೆಯು ಹೆರುವಾಗ ಒಂದು ಮಗುವು ಮುಂದಕ್ಕೆ ಕೈಚಾಚಲು ಸೂಲಗಿತ್ತಿಯು, “ಇದು ಮೊದಲು ಹೊರಗೆ ಬಂದದ್ದು” ಎಂದು ಹೇಳಿ ಅದರ ಕೈಗೆ ಕೆಂಪು ದಾರವನ್ನು ಕಟ್ಟಿದಳು.
וַיְהִי ׀ כְּמֵשִׁיב יָדוֹ וְהִנֵּה יָצָא אָחִיו וַתֹּאמֶר מַה־פָּרַצְתָּ עָלֶיךָ פָּרֶץ וַיִּקְרָא שְׁמוֹ פָּֽרֶץ׃ 29
೨೯ಅದು ಕೈಯನ್ನು ಹಿಂದಕ್ಕೆ ತೆಗೆಯಲು, ಅದರೊಡನೆ ಇದ್ದ ಮತ್ತೊಂದು ಶಿಶುವು ಹೊರಗೆ ಬಂದಿತು. ಸೂಲಗಿತ್ತಿಯು ಇದನ್ನು ಕಂಡು, “ನೀನು ಛೇದಿಸಿಕೊಂಡು ಬಂದೆಯಾ?” ಎಂದು ಹೇಳಿ, ಅದಕ್ಕೆ “ಪೆರೆಚ್” ಎಂದು ಹೆಸರಾಯಿತು.
וְאַחַר יָצָא אָחִיו אֲשֶׁר עַל־יָדוֹ הַשָּׁנִי וַיִּקְרָא שְׁמוֹ זָֽרַח׃ 30
೩೦ತರುವಾಯ ಕೈಗೆ ಕೆಂಪು ನೂಲು ಕಟ್ಟಿಸಿಕೊಂಡ ಶಿಶುವು ಹೊರಗೆ ಬಂದಿತು. ಅದಕ್ಕೆ “ಜೆರಹ” ಎಂದು ಹೆಸರಾಯಿತು.

< בראשית 38 >