< תהילים 113 >

הַלְלוּ יָהּ ׀ הַלְלוּ עַבְדֵי יְהוָה הֽ͏ַלְלוּ אֶת־שֵׁם יְהוָֽה׃ 1
ಯೆಹೋವನಿಗೆ ಸ್ತೋತ್ರ! ಯೆಹೋವನ ಸೇವಕರೇ, ಸ್ತೋತ್ರಮಾಡಿರಿ; ಯೆಹೋವನ ನಾಮವನ್ನು ಸ್ತುತಿಸಿರಿ.
יְהִי שֵׁם יְהוָה מְבֹרָךְ מֵֽעַתָּה וְעַד־עוֹלָֽם׃ 2
ಈಗಿನಿಂದ ಯುಗಯುಗಕ್ಕೂ, ಯೆಹೋವನ ನಾಮವು ಕೀರ್ತಿಸಲ್ಪಡಲಿ.
מִמִּזְרַח־שֶׁמֶשׁ עַד־מְבוֹאוֹ מְהֻלָּל שֵׁם יְהוָֽה׃ 3
ಯೆಹೋವನ ನಾಮವು ಪೂರ್ವದಿಂದ, ಪಶ್ಚಿಮದವರೆಗೂ ಸ್ತುತಿಹೊಂದಲಿ.
רָם עַל־כָּל־גּוֹיִם ׀ יְהוָה עַל הַשָּׁמַיִם כְּבוֹדֽוֹ׃ 4
ಯೆಹೋವನು ಎಲ್ಲಾ ಜನಾಂಗಗಳಲ್ಲಿ ಮಹೋನ್ನತನು; ಆತನ ಪ್ರಭಾವವು ಮೇಲಣ ಲೋಕಕ್ಕಿಂತಲೂ ಉನ್ನತವಾಗಿದೆ.
מִי כַּיהוָה אֱלֹהֵינוּ הַֽמַּגְבִּיהִי לָשָֽׁבֶת׃ 5
ನಮ್ಮ ಯೆಹೋವ ದೇವರಿಗೆ ಸಮಾನರು ಯಾರು? ಆತನು ಉನ್ನತಲೋಕದಲ್ಲಿ ಆಸನಾರೂಢನಾಗಿ,
הַֽמַּשְׁפִּילִי לִרְאוֹת בַּשָּׁמַיִם וּבָאָֽרֶץ׃ 6
ಆಕಾಶವನ್ನೂ, ಭೂಮಿಯನ್ನೂ ನೋಡಲಿಕ್ಕೆ ಬಾಗುತ್ತಾನೆ.
מְקִֽימִי מֵעָפָר דָּל מֵֽאַשְׁפֹּת יָרִים אֶבְיֽוֹן׃ 7
ಆತನು ದೀನರನ್ನು ಧೂಳಿನಿಂದ ಎಬ್ಬಿಸಿ, ಬಡವರನ್ನು ತಿಪ್ಪೆಯಿಂದ ಎತ್ತುತ್ತಾನೆ.
לְהוֹשִׁיבִי עִם־נְדִיבִים עִם נְדִיבֵי עַמּֽוֹ׃ 8
ಪ್ರಭುಗಳ ಜೊತೆಯಲ್ಲಿ, ಅಂದರೆ ಅವರ ಜನಾಧಿಪತಿಗಳೊಡನೆ ಅವರನ್ನು ಕುಳ್ಳಿರಿಸುತ್ತಾನೆ.
מֽוֹשִׁיבִי ׀ עֲקֶרֶת הַבַּיִת אֵֽם־הַבָּנִים שְׂמֵחָה הַֽלְלוּ־יָֽהּ׃ 9
ಬಂಜೆಯು ಮಕ್ಕಳೊಂದಿಗೆ, ಸಂತೋಷದಿಂದ ಮನೆಯಲ್ಲಿ ವಾಸಿಸುವ ಹಾಗೆ ಮಾಡುತ್ತಾನೆ. ಯೆಹೋವನಿಗೆ ಸ್ತೋತ್ರ!

< תהילים 113 >