< エゼキエル書 19 >

1 あなたはイスラエルの君たちのために悲しみの歌をのべて
“ಇಸ್ರಾಯೇಲಿನ ರಾಜರ ವಿಷಯವಾಗಿ ಈ ಶೋಕ ಗೀತೆಯನ್ನು ಹಾಡು,
2 言え、あなたの母はししのうちにあって、どんな雌じしであったろう。彼女は若いししのうちに伏して子じしを養った。
‘ಆಹಾ, ನಿನ್ನ ತಾಯಿಯು ಸಿಂಹಗಳ ಮಧ್ಯೆ ಸಿಂಹಿಣಿ, ಸಾಕಿದಳು ತನ್ನ ಮರಿಗಳನ್ನು, ಯುವ ಸಿಂಹಗಳ ನಡುವೆ ವಾಸಿಸಿ.
3 彼女は子じしの一つを育てたが、それは若いししとなって、獲物をとることを学び、人を食べた。
ಅವಳು ಬೆಳೆಯಿಸಿದ ಒಂದು ಮರಿಯು ಪ್ರಾಯದ ಸಿಂಹವಾಗಿ, ಬೇಟೆಯನ್ನು ಕಲಿತು, ಮನುಷ್ಯರನ್ನು ನುಂಗಲಾರಂಭಿಸಿತು.
4 国々の人は彼に対して叫び声をあげ、落し穴でこれを捕え、かぎでこれをエジプトの地に引いて行った。
ಜನಾಂಗಗಳು ಈ ವಾರ್ತೆಯನ್ನು ಕೇಳಿ, ಅದಕ್ಕೆ ಗುಂಡಿ ತೋಡಲು ಅದು ಅಲ್ಲಿ ಸಿಕ್ಕಿಬಿದ್ದಿತು; ಅದನ್ನು ಸರಪಣಿಗಳಿಂದ ಬಿಗಿದು ಐಗುಪ್ತ ದೇಶಕ್ಕೆ ಒಯ್ದರು.
5 雌じしは自分の思いが破れ、その望みを失ったのを見たので、ほかの子じしをとって、これを若い子じしとした。
ಆ ಸಿಂಹಿಣಿಯು ತಾನು ಕಾದುಕೊಂಡಿದ್ದರೂ, ತನ್ನ ನಿರೀಕ್ಷೆಯು ಹಾಳಾಯಿತೆಂದು ತನ್ನ ಮರಿಗಳಲ್ಲಿ ಇನ್ನೊಂದನ್ನು ತೆಗೆದು ಸಾಕಿ, ಪ್ರಾಯಕ್ಕೆ ತಂದಳು.
6 彼はししのうちに行き来し、若いししとなって、獲物をとることを学び、人を食べた。
ಅದು ಪ್ರಾಯದ ಸಿಂಹವಾಗಿ, ಸಿಂಹಗಳ ನಡುವೆ ತಿರುಗುತ್ತಾ ಬೇಟೆಯನ್ನು ಕಲಿತು, ಮನುಷ್ಯರನ್ನು ನುಂಗಲಾರಂಭಿಸಿತು.
7 彼はその要害を荒し、その町々を滅ぼした。そのほえる声によって、その地とその中に満ちるものとは皆恐れた。
ಅದು ಪಟ್ಟಣಗಳನ್ನು ಹಾಳುಮಾಡಿ, ಬಹಳ ಮಂದಿ ವಿಧವೆಯರಾದವರನ್ನು ಕೆಡಿಸಿತು, ಅದರ ಗರ್ಜನೆಯ ಶಬ್ದಕ್ಕೆ ದೇಶವು ಮತ್ತು ಅದರಲ್ಲಿದ್ದದ್ದೆಲ್ಲವೂ ಕ್ಷೀಣವಾದವು.
8 そこで国々の人は彼に対して四方にわなを設け、彼に網を打ちかけ、落し穴で彼を捕えた。
ಆಗ ಜನಾಂಗಗಳು ಸುತ್ತಲಿನ ರಾಷ್ಟ್ರಗಳಿಂದ ಕೂಡಿ ಬಂದು, ಅದಕ್ಕೆ ವಿರುದ್ಧವಾಗಿ ನಿಂತು, ಬಲೆಯೊಡ್ಡಿ ಗುಂಡಿ ತೋಡಲು, ಅದು ಅಲ್ಲಿ ಸಿಕ್ಕಿಬಿದ್ದಿತು.
9 彼らはかぎをもって、これをかごに入れ、これをバビロンの王のもとに連れて行き、これをおりの中に入れて、再びその声をイスラエルの山々に聞えさせないようにした。
ಅದನ್ನು ಸರಪಣಿಗಳಿಂದ ಬಿಗಿದು, ಪಂಜರದಲ್ಲಿ ಹಾಕಿ, ಬಾಬೆಲಿನ ಅರಸನ ಬಳಿಗೆ ತಂದವು. ಅದರ ಧ್ವನಿಯು ಇಸ್ರಾಯೇಲಿನ ಪರ್ವತಗಳಲ್ಲಿ ಇನ್ನು ಕೇಳಿಸದಂತೆ ಅದನ್ನು ಕೋಟೆಯೊಳಗೆ ಸೇರಿಸಿ ಬಿಟ್ಟವು.
10 あなたの母は水のほとりに移し植えられたぶどう畑のぶどうの木のようで、水が多いために実りがよく、枝がはびこった。
೧೦“‘ನಿನ್ನ ಹೆತ್ತ ತಾಯಿ ನೀರಾವರಿಯಲ್ಲಿ ನಾಟಿಕೊಂಡಿದ್ದ ದ್ರಾಕ್ಷಾಲತೆಯಾಗಿದ್ದಳು, ಆ ಲತೆಯು ತುಂಬಾ ನೀರಾವರಿಯಿಂದ ಫಲವತ್ತಾಗಿಯೂ, ಪೊದೆಯಾಗಿಯೂ ಬೆಳೆದಿತ್ತು.
11 その強い幹は君たる者のつえとなった。それは茂みの中に高くそびえ、多くの枝をつけて高く見えた。
೧೧ಅದರಲ್ಲಿ ಆಳುವವರ ರಾಜದಂಡಗಳಿಗೆ ಯೋಗ್ಯವಾದ ಗಟ್ಟಿಕೊಂಬೆಗಳಿದ್ದವು, ಅವುಗಳ ಎತ್ತರವು ಉಳಿದ ರೆಂಬೆಗಳಿಗಿಂತ ಹೆಚ್ಚಾಗಿತ್ತು, ಬಹಳ ರೆಂಬೆಗಳ ಮಧ್ಯದಲ್ಲಿ ಉದ್ದುದ್ದವಾಗಿ ಕಾಣಿಸಿದವು.
12 しかしこのぶどうの木は憤りによって抜かれ、地に投げうたれ、東風がそれを枯らし、その実はもぎ取られ、その強い幹は枯れて、火に焼き滅ぼされた。
೧೨ಆದರೆ ಆ ಲತೆಯು ರೋಷದಲ್ಲಿ ಕೀಳಲ್ಪಟ್ಟು, ನೆಲದ ಮೇಲೆ ಬಿಸಾಡಲ್ಪಟ್ಟಿತು, ಮೂಡಣ ಗಾಳಿಯು ಅದರ ಫಲವನ್ನು ಬಾಡಿಸಿತು, ಅದರ ಗಟ್ಟಿ ಕೊಂಬೆಗಳು ಮುರಿದು ಒಣಗಿ ಹೋದವು, ಬೆಂಕಿಯು ಅವುಗಳನ್ನು ನುಂಗಿತು.
13 今これは荒野に、かわいた、水のない地に移し植えられ、
೧೩ಈಗ ಅದು ನೀರಿಲ್ಲದೆ ಬೆಂಗಾಡಿನಲ್ಲಿ ನಾಟಿಕೊಂಡಿದೆ.
14 火がその幹から出て、その枝と実とを滅ぼしたので、強い幹で、君たる者のつえとなるべきものはそこにない。これが悲しみの言葉、また悲しみの歌となった。
೧೪ಬೆಂಕಿಯು ಅದರ ಕೊಂಬೆಗಳಿಂದ ಹೊರಟು ಅದರ ಫಲವನ್ನು ನುಂಗಿ ಬಿಟ್ಟಿದೆ. ಆದುದರಿಂದ ರಾಜದಂಡಕ್ಕೆ ಯೋಗ್ಯವಾದ ಯಾವ ಗಟ್ಟಿ ಕೊಂಬೆಯೂ ಅದರಲ್ಲಿ ಉಳಿದಿಲ್ಲ.’ ಇದು ಶೋಕ ಗೀತೆ, ಶೋಕ ಗೀತೆಯಾಗಿ ವಾಡಿಕೆಯಲ್ಲಿದೆ.”

< エゼキエル書 19 >