< ಪೂರ್ವಕಾಲವೃತ್ತಾಂತ ಪ್ರಥಮ ಭಾಗ 11 >

1 ಅನಂತರ ಇಸ್ರಾಯೇಲರೆಲ್ಲರೂ ಹೆಬ್ರೋನಿನಲ್ಲಿದ್ದ ದಾವೀದನ ಬಳಿಗೆ ಬಂದು ಅವನಿಗೆ, “ನಾವು ನಿನಗೆ ರಕ್ತಸಂಬಂಧಿಗಳಾಗಿದ್ದೇವೆ.
तब सब इस्राईली हबरून में दाऊद के पास जमा' होकर कहने लगे, देख हम तेरी ही हड्डी और तेरा ही गोश्त हैं।
2 ಸೌಲನ ಆಳ್ವಿಕೆಯಲ್ಲಿ ಇಸ್ರಾಯೇಲರ ದಳಾಧಿಪತಿಯಾಗಿ ಇದ್ದವನು ನೀನೇ. ನಿನ್ನ ಕುರಿತು ನಿನ್ನ ದೇವರಾದ ಯೆಹೋವನು, ‘ನೀನು ನನ್ನ ಪ್ರಜೆಗಳಾದ ಇಸ್ರಾಯೇಲರ ನಾಯಕನೂ, ಪಾಲಕನೂ ಆಗಿರುವಿ’ ಎಂದು ವಾಗ್ದಾನ ಮಾಡಿದ್ದಾನೆ.” ಎಂದು ಹೇಳಿದರು.
और गुज़रे ज़माने में उस वक़्त भी जब साऊल बादशाह था, तू ही ले जाने और ले आने में इस्राईलियों का रहबर था; और ख़ुदावन्द तेरे ख़ुदा ने तुझे फ़रमाया, “तू मेरी क़ौम इस्राईल की गल्लेबानी करेगा, और तू ही मेरी क़ौम इस्राईल का सरदार होगा।”
3 ಆಗ ಅರಸನಾದ ದಾವೀದನು ತನ್ನ ಜೊತೆಯಲ್ಲಿ ಹೆಬ್ರೋನಿಗೆ ಬಂದಿದ್ದ ಇಸ್ರಾಯೇಲರ ಹಿರಿಯರೆಲ್ಲರೊಡನೆ ಅಲ್ಲೇ ಯೆಹೋವನ ಸನ್ನಿಧಿಯಲ್ಲಿ ಒಡಂಬಡಿಕೆಮಾಡಿಕೊಂಡನು. ಅವರು ಸಮುವೇಲನಿಗೆ ಯೆಹೋವನ ವಾಕ್ಯಾನುಸಾರವಾಗಿ ದಾವೀದನನ್ನು ಅಭಿಷೇಕಿಸಿ, ಇಸ್ರಾಯೇಲರ ಅರಸನನ್ನಾಗಿ ಮಾಡಿದರು.
ग़रज़ इस्राईल के सब बुज़ुर्ग हबरून में बादशाह के पास आये, और दाऊद ने हबरून में उनके साथ ख़ुदावन्द के सामने 'अहद किया; और उन्होंने ख़ुदावन्द के कलाम के मुताबिक़ जो समुएल की ज़रिए' फ़रमाया था, दाऊद को मम्सूह किया ताकि इस्राईलियों का बादशाह हो।
4 ದಾವೀದನು ಇಸ್ರಾಯೇಲರನ್ನು ಕರೆದುಕೊಂಡು ಅಂದಿನಕಾಲದಲ್ಲಿ ಯೆಬೂಸೆನಿಸಿಕೊಂಡಿದ್ದ ಯೆರೂಸಲೇಮಿಗೆ ಮುತ್ತಿಗೆ ಹಾಕಲು ಹೊರಟನು. ಆ ಪ್ರಾಂತ್ಯದ ಮೂಲನಿವಾಸಿಗಳು ಯೆಬೂಸಿಯರು.
और दाऊद और तमाम इस्राईली येरूशलेम को गए यबूस यही है, और उस मुल्क के बाशिंदे यबूसी वहाँ थे।
5 ಯೆಬೂಸಿಯರು ದಾವೀದನಿಗೆ, “ನೀನು ಒಳಗೆ ಬರಲು ಸಾಧ್ಯವಿಲ್ಲ” ಎಂದು ಹೇಳಿದರು. ಆದರೂ ಅವನು ದಾವೀದನಗರವೆನಿಸಿಕೊಳ್ಳುವ ಚೀಯೋನ್ ಕೋಟೆಯನ್ನು ಸ್ವಾಧೀನಮಾಡಿಕೊಂಡನು.
और यबूस के बाशिंदों ने दाऊद से कहा कि तू यहाँ आने न पाएगा तोभी दाऊद ने सिय्यून का क़िला' ले लिया, यही दाऊद का शहर है।
6 ಆ ದಿನ ದಾವೀದನು ತನ್ನೊಂದಿಗೆ ಬಂದಿದ್ದ ಇಸ್ರಾಯೇಲರನ್ನು ಕುರಿತು “ಯಾರು ಯೆಬೂಸಿಯರನ್ನು ಮೊದಲು ಸೋಲಿಸುವನೋ ಅವನು ದಳಾಧಿಪತಿ ಆಗುವನು” ಎಂದು ಹೇಳಿದನು. ಚೆರೂಯಳ ಮಗನಾದ ಯೋವಾಬನು ಮೊದಲು ದಾಳಿ ಮಾಡಿದ್ದರಿಂದ ಅವನೇ ದಳಾಧಿಪತಿ ಆದನು.
और दाऊद ने कहा, “जो कोई पहले यबूसियों को मारे वह सरदार और सिपहसालार होगा।” और योआब बिन ज़रोयाह पहले चढ़ गया और सरदार बना।
7 ದಾವೀದನು ಆ ಕೋಟೆಯನ್ನು ತನ್ನ ವಾಸಸ್ಥಾನವನ್ನಾಗಿ ಮಾಡಿಕೊಂಡಿದ್ದರಿಂದ ಅದಕ್ಕೆ ದಾವೀದನಗರ ಎಂದು ಹೆಸರಾಯಿತು.
और दाऊद क़िले' में रहने लगा, इसलिए उन्होंने उसका नाम दाऊद का शहर रख्खा।
8 ಅವನು ಮಿಲ್ಲೋವಿನಿಂದ ಪ್ರಾರಂಭಿಸಿ ಸುತ್ತಲೂ ಪಟ್ಟಣವನ್ನು ಭದ್ರಪಡಿಸಿದನು. ಯೋವಾಬನು ಪಟ್ಟಣದ ಉಳಿದ ಭಾಗವನ್ನು ಭದ್ರಪಡಿಸಿದನು.
और उसने शहर को चारों तरफ़ या'नी मिल्लो से लेकर चारों तरफ़ बनाया और योआब ने बाक़ी शहर की मरम्मत की।
9 ಸೇನಾಧೀಶ್ವರನಾದ ಯೆಹೋವನು ದಾವೀದನ ಸಂಗಡ ಇದ್ದುದರಿಂದ ಅವನು ಅಭಿವೃದ್ಧಿಯಾಗುತ್ತಾ ಹೋದನು.
और दाऊद तरक़्क़ी पर तरक़्क़ी करता गया, क्यूँकि रब्ब — उल — अफ़वाज उसके साथ था।
10 ೧೦ ರಾಜ್ಯಸಂಬಂಧವಾಗಿ ದಾವೀದನಿಗೆ ವಿಶೇಷ ಸಹಾಯಕರಾಗಿದ್ದು, ಯೆಹೋವನ ವಾಕ್ಯಾನುಸಾರವಾಗಿ ಇಸ್ರಾಯೇಲರೆಲ್ಲರೊಡನೆ ಅವನನ್ನು ಅರಸನನ್ನಾಗಿ ಮಾಡಿದ ಮುಖ್ಯಸ್ಥರನ್ನು ಕುರಿತದ್ದು.
और दाऊद के सूर्माओं के सरदार यह हैं, जिन्होंने उसकी हुकूमत में सारे इस्राईल के साथ उसे मज़बूती दी ताकि जैसा ख़ुदावन्द ने इस्राईल के हक़ में कहा था उसे बादशाह बनाएँ।
11 ೧೧ ದಾವೀದನ ಯುದ್ಧವೀರರ ಪಟ್ಟಿ: ಹಕ್ಮೋನಿಯನಾದ ಯಾಷೊಬ್ಬಾಮನು ಮೂವತ್ತು ಶೂರರಲ್ಲಿ ಮುಖ್ಯಸ್ಥನು. ಇವನು ತನ್ನ ಬರ್ಜಿಯನ್ನು ಬೀಸುತ್ತಾ ಹೋಗಿ ಒಂದೇ ಸಾರಿ ಮುನ್ನೂರು ಜನರನ್ನು ಕೊಂದನು.
दाऊद के सूर्माओं का शुमार यह है: यसुबि'आम बिन हकमूनी जो तीसों का सरदार था। उने तीन सौ पर अपना भाला चलाया और उनको एक ही वक़्त में क़त्ल किया।
12 ೧೨ ಎರಡನೆಯವನು ಅಹೋಹ್ಯನಾದ ದೋದೋ ಎಂಬುವವನ ಮಗನಾಗಿರುವ ಎಲ್ಲಾಜಾರನು. ಇವನೂ ಆ ಮೂವರು ಶೂರರಲ್ಲಿ ಒಬ್ಬನು.
उसके बाद अखूही दोदो का बेटा एलियाज़र था जो उन तीनों सूर्माओं में से एक था।
13 ೧೩ ಫಿಲಿಷ್ಟಿಯರು ಪಸ್ದಮ್ಮೀಮಿನಲ್ಲಿ ಯುದ್ಧಕ್ಕೆ ಬಂದಾಗ ಇವನು ದಾವೀದನ ಜೊತೆಯಲ್ಲಿದ್ದನು. ಅಲ್ಲಿ ಒಂದು ಜವೆಗೋದಿಯ ಹೊಲವಿತ್ತು. ಇಸ್ರಾಯೇಲರು ಫಿಲಿಷ್ಟಿಯರಿಗೆ ಹೆದರಿ ಓಡಿಹೋಗಲು ಪ್ರಯತ್ನಿಸಿದಾಗ,
वह दाऊद के साथ फ़सदम्मीम में था जहाँ फ़िलिस्ती जंग करने को जमा' हुए थे। वहाँ ज़मीन का टुकड़ा जौ से भरा हुआ था, और लोग फ़िलिस्तियों के आगे से भागे।
14 ೧೪ ಆ ವೀರರು ಹೊಲದ ಮಧ್ಯದಲ್ಲೇ ನಿಂತುಕೊಂಡು, ಫಿಲಿಷ್ಟಿಯರನ್ನು ಕೊಂದು, ಹೊಲವನ್ನು ಕಾಪಾಡಿದರು. ಹೀಗೆ ಯೆಹೋವನು ಅವನಿಗೆ ಮಹಾ ಜಯವನ್ನುಂಟುಮಾಡಿದನು.
तब उन्होंने उस ज़मीन क्व टुकड़े के बीच में खड़े हो कर उसे बचाया और फ़िलिस्तियों को क़त्ल किया और ख़ुदावन्द ने बड़ी फ़तह देकर उनको रिहा बख़्शी।
15 ೧೫ ದಾವೀದನು ಅದುಲ್ಲಾಮ್ ಗಿರಿಯ ಗವಿಯಲ್ಲಿದ್ದಾಗ ಅವನ ಮೂವತ್ತು ಜನ ಪ್ರಸಿದ್ಧಶೂರರಲ್ಲಿ ಮೂವರು ಅವನ ಬಳಿಗೆ ಬಂದರು. ಫಿಲಿಷ್ಟಿಯರು ದಂಡೆತ್ತಿ ಬಂದು ರೆಫಾಯೀಮ್ ತಗ್ಗಿನಲ್ಲಿ ಪಾಳೆಯಮಾಡಿಕೊಂಡಿರುವುದನ್ನು ಕಂಡರು.
और उन तीसों सरदारों में से तीन, दाऊद के साथ थे उस चट्टान पर या'नी 'अदूल्लाम के मुग़ारे में उतर गए, और फ़िलिस्तियों की फ़ौज रिफ़ाईम की वादी में ख़ेमाज़न थी।
16 ೧೬ ಫಿಲಿಷ್ಟಿಯರು ಬೇತ್ಲೆಹೇಮಿನಲ್ಲಿ ಒಂದು ಕಾವಲು ದಂಡನ್ನು ಇಟ್ಟಿದ್ದರು. ಆಗ ದಾವೀದನು ದುರ್ಗದಲ್ಲಿದ್ದನು.
और दाऊद उस वक़्त गढ़ी में था और फ़िलिस्तियों की चौकी उस वक़्त बैतलहम में थी।
17 ೧೭ ದಾವೀದನು ಲವಲವಿಕೆಯಿಂದ, “ಬೇತ್ಲೆಹೇಮ್ ಊರಿನ ಬಾಗಿಲ ಬಳಿಯಲ್ಲಿರುವ ಬಾವಿಯ ನೀರನ್ನು ಯಾರಾದರೂ ನನಗೆ ತಂದು ಕೊಡುವುದಾದರೆ ಎಷ್ಟೋ ಒಳ್ಳೆಯದು” ಎಂದು ಹೇಳಿದನು.
और दाऊद ने तरस कर कहा, “ऐ काश कोई बैतलहम के उस कुँए का पानी जो फाटक के क़रीब है, मुझे पीने को देता!”
18 ೧೮ ಕೂಡಲೆ ಆ ಮೂವರು ವೀರರು ಫಿಲಿಷ್ಟಿಯರ ದಂಡಿನೊಳಗೆ ನುಗ್ಗಿ ಹೋಗಿ, ಬೇತ್ಲೆಹೇಮ್ ಬಾಗಿಲ ಬಳಿಯಲ್ಲಿರುವ ಬಾವಿಯ ನೀರನ್ನು ಸೇದಿ, ದಾವೀದನಿಗೆ ತಂದು ಕೊಟ್ಟರು.
तब वह तीनों फ़िलिस्तियों की सफ़ तोड़ कर निकल गए और बैतलहम के उस कुँए में से जो फाटक के क़रीब है पानी भर लिया और उसे दाऊद के पास लाये लेकिन दाऊद ने न चाहा कि उसे पिए बल्कि उसे ख़ुदावन्द के लिए तपाया।
19 ೧೯ ಆದರೆ ದಾವೀದನು “ತಮ್ಮ ಜೀವವನ್ನು ಪರಿಗಣಿಸದೆ ಪರಾಕ್ರಮದಿಂದ ಈ ನೀರನ್ನು ತಂದು ಕೊಟ್ಟಿದ್ದಾರೆ. ಈ ನೀರನ್ನು ಕುಡಿದರೆ ಈ ಪರಾಕ್ರಮಶಾಲಿ ವೀರರ ರಕ್ತವನ್ನು ಕುಡಿದಂತೆ ಆಗುವುದು. ಇಂತಹ ಕಾರ್ಯವನ್ನು ನನ್ನಿಂದ ಆಗದಂತೆ ನನ್ನ ದೇವರು ತಡೆಯಲಿ” ಎಂದು ಹೇಳುತ್ತಾ, ಆ ನೀರನ್ನು ದೇವರಿಗೆ ಸಮರ್ಪಿಸುವಂತೆ ನೆಲದ ಮೇಲೆ ಸುರಿದನು.
और कहने लगा कि ख़ुदा न करे कि मैं ऐसा करूँ। क्या मैं इन लोगों का ख़ून पियूँ जो अपनी जानों पर खेले हैं? क्यूँकि वह जानबाज़ी कर के उसको लाये हैं। तब उसने न पिया। वह तीनों सूर्मा ऐसे ऐसे काम करते थे।
20 ೨೦ ಯೋವಾಬನ ತಮ್ಮನಾದ ಅಬ್ಷೈಯು ಬೇರೆ ಮೂರು ಜನರಲ್ಲಿ ಮುಖ್ಯಸ್ಥನು. ಇವನು ತನ್ನ ಬರ್ಜಿಯನ್ನು ಬೀಸುತ್ತಾ ಹೋಗಿ ಮುನ್ನೂರು ಜನರನ್ನು ಕೊಂದದ್ದರಿಂದ ಈ ಮೂವರಲ್ಲಿ ಕೀರ್ತಿಗೊಂಡನು.
और योआब का भाई अबीशै तीनों का सरदार था। उसने तीन सौ पर भाला चलाया और उनको मार डाला। वह इन तीनों में मशहूर था।
21 ೨೧ ಉಳಿದ ಇಬ್ಬರಿಗಿಂತ ಇವನೇ ಘನತೆಯುಳ್ಳವನಾಗಿದ್ದು ಅವರ ನಾಯಕನಾದನು. ಆದರೂ ಇವನು ಮೊದಲಿನ ಮೂರು ಜನರಿಗೆ ಸಮಾನನಾಗಿರಲಿಲ್ಲ.
यह तीनों में उन दोनों से ज़्यादा ख़ास था और उनका सरदार बना, लेकिन उन पहले तीनों के दर्जे को न पहुँचा।
22 ೨೨ ಅನೇಕ ಶೂರಕೃತ್ಯಗಳನ್ನು ನಡಿಸಿದ ಕಬ್ಜಯೇಲನವನಾದ ಪರಾಕ್ರಮಶಾಲಿಯ ಮೊಮ್ಮಗನೂ, ಯೆಹೋಯಾದನ ಮಗನೂ ಆದ ಬೆನಾಯನು ಇನ್ನೊಬ್ಬನು. ಇವನು ಒಂದು ಸಾರಿ ಮೋವಾಬ್ಯನಾದ ಅರೀಯೇಲನ ಇನ್ನೂರು ಮಕ್ಕಳನ್ನು ಕೊಂದನು. ಇನ್ನೊಮ್ಮೆ ಹಿಮಕಾಲದಲ್ಲಿ ಒಂದು ಸಿಂಹವು ಗುಂಡಿಯಲ್ಲಿ ಬಿದ್ದಿರಲು, ಇವನು ಆ ಗುಂಡಿಗೆ ಇಳಿದು ಹೋಗಿ ಅದನ್ನು ಕೊಂದನು.
और बिनायाह बिन यहूयदा' एक क़बज़िएली सूर्मा था जिसने बड़ी बहादुरी के काम किये थे; उसने मोआब के अरिएल के दोनों बेटों को क़त्ल किया, और जाकर बर्फ़ के मौसम में एक गढ़े के बीच एक शेर को मारा।
23 ೨೩ ಮತ್ತೊಮ್ಮೆ ಏಳುವರೆ ಅಡಿ ಎತ್ತರದ ಅತಿ ಬಲವಾದ ಈಟಿಯನ್ನು ಹೊಂದಿದ್ದ ಒಬ್ಬ ಐಗುಪ್ತ್ಯನನ್ನು ಕೊಂದನು. ಆ ಐಗುಪ್ತ್ಯನ ಕೈಯಲ್ಲಿದ್ದ ಈಟಿಯು ನೇಕಾರರ ಕುಂಟೆಯಂತಿತ್ತು. ಆದರೆ ಇವನ ಕೈಯಲ್ಲಿ ಒಂದು ಕೋಲನ್ನು ಮಾತ್ರ ಹಿಡಿದುಕೊಂಡು ಹೋಗಿ ಅವನ ಕೈಯಲ್ಲಿದ್ದ ಈಟಿಯನ್ನು ಕಿತ್ತುಕೊಂಡು ಅದರಿಂದ ಅವನನ್ನು ಕೊಂದನು.
और उसने पाँच हाथ के एक क़दआवर मिस्री को क़त्ल किया हालाँकि उस मिस्री के हाथ में जुलाहे के शहतीर के बराबर एक भाला था, लेकिन वह एक लाठी लिए हुए उसके पास गया और भाले को उस मिस्री के हाथ से छीन कर उसी के भाले से उसको क़त्ल किया।
24 ೨೪ ಈ ಪರಾಕ್ರಮ ಕೃತ್ಯದಿಂದ ಯೆಹೋಯಾದನ ಮಗನಾದ ಬೆನಾಯನು ಈ ಮೂವರಲ್ಲಿ ಹೆಸರುವಾಸಿಯಾದನು.
यहुयदा के बेटे बिनायाह ने ऐसे ऐसे काम किये और वह उन तीनों सूर्माओं में नामी था।
25 ೨೫ ಮೂವತ್ತು ಜನರಲ್ಲಿ ಇವನು ವಿಶೇಷ ಕೀರ್ತಿಯನ್ನು ಹೊಂದಿದರೂ ಮೊದಲಿನ ಮೂವರಿಗೆ ಸಮಾನನಾಗಿರಲಿಲ್ಲ. ದಾವೀದನು ಇವನನ್ನು ತನ್ನ ಕಾವಲುದಂಡಿನ ಮುಖ್ಯಸ್ಥನನ್ನಾಗಿ ಮಾಡಿದನು.
वह उन तीसों से मु'अज़्ज़िज़ था, लेकिन पहले तीनों के दर्जे को न पहुँचा। और दाऊद ने उसे मुहाफ़िज़ सिपाहियों का सरदार बनाया।
26 ೨೬ ಯುದ್ಧವೀರರ ಇನ್ನೊಂದು ಪಟ್ಟಿ: ಯೋವಾಬನ ತಮ್ಮನಾದ ಅಸಾಹೇಲನು, ಬೇತ್ಲೆಹೇಮಿನ ದೋದೋವಿನ ಮಗನಾದ ಎಲ್ಖಾನಾನ್,
और लश्करों में सूर्मा यह थे: योआब का भाई 'असाहेल और बैतलहमी दोदो का बेटा इल्हनान,
27 ೨೭ ಹರೋರಿನವನಾದ ಶಮ್ಮೋತ್, ಪೆಲೋನ್ಯನಾದ ಹೆಲೆಚ್,
और सम्मोत हरूरी, ख़लिसफ़लूनी,
28 ೨೮ ತೆಕೋವದ ಇಕ್ಕೇಷನ ಮಗನಾದ ಈರ, ಅನತೋತಿನವನಾದ ಅಬೀಯೆಜೆರ,
तक़ू'अ, 'इक़्क़ीस, का बेटा 'ईरा, अबी'अज़र 'अन्तोती,
29 ೨೯ ಹುಷ ಊರಿನವನಾದ ಸಿಬ್ಬೆಕೈ, ಅಹೋಹಿನವನಾದ ಈಲೈ,
सिब्बकी हुसाती, 'एली अखूही,
30 ೩೦ ನೆಟೋಫದವನಾದ ಮಹರೈ ಮತ್ತು ಬಾಣನ ಮಗನಾದ ಹೇಲೆದ್,
महरी नतूफ़ाती, हलिद बिन बा'ना नतूफ़ाती,
31 ೩೧ ಬೆನ್ಯಾಮೀನ ದೇಶದ ಗಿಬೆಯ ಊರಿನ ರೀಬೈ ಎಂಬುವನ ಮಗನಾದ ಈತೈ. ಪಿರಾತೋನ್ಯನಾದ ಬೆನಾಯ,
बनी बिनयमीन के जिब'आ के रीबी का बेटा इत्ती, बिनायाह फ़िर'आतोनी,
32 ೩೨ ಹಲೇಗಾಷಿನವನಾದ ಹೂರೈ, ಅರಾಬಾ ತಗ್ಗಿನವನಾದ ಅಬೀಯೇಲ್,
जा'स की नदियों का बाशिंदा हूरी, अबीएल 'अरबाती,
33 ೩೩ ಬಹರೂಮ್ಯನಾದ ಅಜ್ಮಾವೆತ್, ಶಾಲ್ಬೋನ್ಯನಾದ ಎಲೆಯಖ್ಬ.
'अज़मावत बहरूमी, इलीयाब सा'लबूनी,
34 ೩೪ ಗೀಜೋನ್ಯನಾದ ಹಾಷೇಮನ ಮಕ್ಕಳು, ಹರಾರ್ಯನಾದ ಶಾಗೇಯನ ಮಗ, ಯೋನಾತಾನ,
बनी हशीम जिज़ूनी, हरारी शजी का बेटा यूनतन,
35 ೩೫ ಹರಾರ್ಯನಾದ ಶಾಕಾರನ ಮಗ ಅಹೀಯಾಮ್, ಊರನ ಮಗನಾದ ಎಲೀಫಲ್,
और हरारी सक्कार का बेटा अख़ीआम, इलिफ़ाल बिन ऊर,
36 ೩೬ ಮೆಕೆರಾತ್ಯನಾದ ಹೇಫೆರ್, ಪೆಲೋನ್ಯನಾದ ಅಹೀಯ,
हिफ़्र मकीराती, अखि़याह फ़लूनी,
37 ೩೭ ಕರ್ಮೆಲ್ಯನಾದ ಹಚ್ರೋ, ಎಜ್ಬೈಯ ಮಗನಾದ ನಾರೈ,
हसरू कर्मिली, नग़री बिन अज़बी,
38 ೩೮ ನಾತಾನನ ತಮ್ಮನಾದ ಯೋವೇಲ್, ಹಗ್ರೀಯನ ಮಗನಾದ ಮಿಬ್ಹಾರ,
नातन कला भाई यूएल, मिबख़ार बिन हाजिरी,
39 ೩೯ ಅಮ್ಮೋನಿಯನಾದ ಚೆಲೆಕ್ ಬೇರೋತ್ಯನೂ ಚೆರೂಯಳ ಮಗನಾದ ಯೋವಾಬನೂ ಆಯುಧ ಹೊರುವವನು ಆಗಿದ್ದ ನಹರೈ,
सिलक़ 'अम्मूनी, नहरी बैरोती जो योआब बिन ज़रोयाह का सिलाहबरदार था,
40 ೪೦ ಇತ್ರೀಯರಾದ ಈರ, ಗಾರೇಬರು,
'ईरा ईत्री, जरीब इतरी,
41 ೪೧ ಹಿತ್ತಿಯನಾದ ಊರೀಯ, ಅಹ್ಲೈಯ ಮಗನಾದ ಜಾಬಾದ್,
ऊरिय्याह हित्ती, ज़बद बिन अख़ली,
42 ೪೨ ರೂಬೇನ್ಯನೂ ತನ್ನ ಜೊತೆಯಲ್ಲಿ ಬಂದ ಮೂವತ್ತು ಜನರು. ರೂಬೇನ್ಯರ ಮುಖ್ಯಸ್ಥನೂ ಶೀಜನ ಮಗನೂ ಆದ ಅದೀನ
सीज़ा रुबीनी का बेटा 'अदीना रूबीनियों का एक सरदार जिसके साथ तीस जवान थे,
43 ೪೩ ಮಾಕನ ಮಗನಾದ ಹಾನಾನ್, ಮೆತೆನ ಊರಿನವನಾದ ಯೋಷಾಫಾಟ್,
हनान बिन मा'का, यहूसफ़त मितनी,
44 ೪೪ ಅಷ್ಟೆರಾತ್ಯನಾದ ಉಜ್ಜೀಯ, ಅರೋಯೇರಿನ ಹೋತಾಮನ ಮಕ್ಕಳಾದ ಶಾಮಾ ಯೆಗೀಯೇಲರು,
'उज़्ज़ियाह 'इस्ताराती, ख़ूताम 'अरो'ईरी के बेटे समा'अ और य'ईएल,
45 ೪೫ ಶಿಮ್ರಿಯ ಮಗನಾದ ಎದೀಗಯೇಲ್, ಎದೀಗೇಲನ ತಮ್ಮನೂ ತೀಚೀಯನೂ ಆದ ಯೋಹ,
यदी'एलबिन सिमरी और उसका भाई यूख़ा तीसी,
46 ೪೬ ಎಲ್ನಾಮನ ಮಕ್ಕಳಾದ ಮಹವೀಯನಾದ ಎಲೀಯೇಲ್, ಯೆರೀಬೈ ಮತ್ತು ಯೋಷವ್ಯರು. ಮೋವಾಬ್ಯನಾದ ಇತ್ಮ,
इलीएल महावी, और इलनाम के बेटे यरीबी और यूसावियाह, और यितमा मोआबी,
47 ೪೭ ಎಲೀಯೇಲ್ ಓಬೇದರು, ಮೆಚೋಬಾಯದವನಾದ ಯಾಸೀಯೇಲನು ಇವರೇ.
इलीएल, और 'ओबेद, और या'सीएल मज़ूबाई।

< ಪೂರ್ವಕಾಲವೃತ್ತಾಂತ ಪ್ರಥಮ ಭಾಗ 11 >