< ಕೊರಿಂಥದವರಿಗೆ ಬರೆದ ಮೊದಲನೆಯ ಪತ್ರಿಕೆ 6 >

1 ನಿಮ್ಮಲ್ಲಿ ಒಬ್ಬನಿಗೆ ಮತ್ತೊಬ್ಬನ ಮೇಲೆ ಏನಾದರೂ ವಿವಾದವಿದ್ದರೆ ನ್ಯಾಯವಿಚಾರಣೆಗೆ ದೇವಜನರೆದುರು ತೆಗೆದುಕೊಂಡು ಹೋಗದೇ ಅನ್ಯಜನರ ಮುಂದೆ ತೆಗೆದುಕೊಂಡು ಹೋಗುವಿರೋ?
あなたがたの中には、仲間の者と争いを起こしたとき、それを聖徒たちに訴えないで、あえて、正しくない人たちに訴え出るような人がいるのでしょうか。
2 ದೇವಜನರು ಲೋಕಕ್ಕೆ ತೀರ್ಪುಮಾಡುವರೆಂಬುದು ನಿಮಗೆ ತಿಳಿಯದೋ? ಲೋಕವು ನಿಮ್ಮಿಂದ ತೀರ್ಪನ್ನು ಹೊಂದಬೇಕಾಗಿರುವಲ್ಲಿ ಅತ್ಯಲ್ಪವಾದ ಸಂಗತಿಗಳನ್ನು ಕುರಿತು ತೀರ್ಪುಮಾಡುವುದಕ್ಕೆ ನೀವು ಅನರ್ಹರಾಗಿದ್ದೀರೋ?
あなたがたは、聖徒が世界をさばくようになることを知らないのですか。世界があなたがたによってさばかれるはずなのに、あなたがたは、ごく小さな事件さえもさばく力がないのですか。
3 ನಾವು ದೇವದೂತರಿಗೂ ತೀರ್ಪುಮಾಡುವೆವೆಂಬುದು ನಿಮಗೆ ತಿಳಿಯದೋ? ಹಾಗಾದರೆ ಇಹಲೋಕ ಜೀವನದ ವಿಷಯಗಳ ಕುರಿತು ನಾವು ಎಷ್ಟೋ ಹೆಚ್ಚಾಗಿ ತೀರ್ಪುಮಾಡಬಹುದಲ್ಲವೇ?
私たちは御使いをもさばくべき者だ、ということを、知らないのですか。それならこの世のことは、言うまでもないではありませんか。
4 ಇಹಲೋಕ ಜೀವನಕ್ಕೆ ಸಂಬಂಧಪಟ್ಟ ವಿಷಯಗಳ ನ್ಯಾಯ ನಿರ್ಣಯಿಸುವುದಕ್ಕೆ ನಿಮ್ಮಲ್ಲಿದ್ದರೆ, ಇಂಥ ವಿಷಯಗಳನ್ನು ತೀರ್ಪು ಮಾಡುವುದಕ್ಕೆ ಸಭೆಯಲ್ಲಿ ಗಣನೆಗೆ ಬಾರದವರನ್ನು ಏಕೆ ನೇಮಿಸಿಕೊಳ್ಳುತ್ತೀರಿ?
それなのに、この世のことで争いが起こると、教会のうちでは無視される人たちを裁判官に選ぶのですか。
5 ನಿಮ್ಮನ್ನು ನಾಚಿಕೆಪಡಿಸುವುದಕ್ಕೆ ಇದನ್ನು ಹೇಳುತ್ತಿದ್ದೇನೆ. ತನ್ನ ಸಹೋದರರ ಮಧ್ಯದಲ್ಲಿ ನ್ಯಾಯವನ್ನು ಬಗೆಹರಿಸಬಲ್ಲವನಾದ ಬುದ್ಧಿವಂತನು ನಿಮ್ಮಲ್ಲಿ ಒಬ್ಬನಾದರೂ ಇಲ್ಲವೋ?
私はあなたがたをはずかしめるためにこう言っているのです。いったい、あなたがたの中には、兄弟の間の争いを仲裁することのできるような賢い者が、ひとりもいないのですか。
6 ಆದರೆ ಅದಕ್ಕೆ ಬದಲಾಗಿ ಒಬ್ಬ ವಿಶ್ವಾಸಿಯು ಮತ್ತೊಬ್ಬ ವಿಶ್ವಾಸಿಯ ವಿರುದ್ಧ ನ್ಯಾಯಾಲಯಕ್ಕೆ ಹೋಗುವುದು ಅಲ್ಲದೆ ಅದನ್ನು ಅವಿಶ್ವಾಸಿಯ ಮುಂದೆ ತೆಗೆದುಕೊಂಡು ಹೋಗುವುದು ಸರಿಯೋ?
それで、兄弟は兄弟を告訴し、しかもそれを不信者の前でするのですか。
7 ನಿಮ್ಮಲ್ಲಿ ವಿವಾದಗಳಿರುವುದಾದರೆ ನೀವು ಸೋತವರೆಂಬುದಕ್ಕೆ ಇದೇ ಗುರುತಾಗಿದೆ, ಅದಕ್ಕಿಂತ ಅನ್ಯಾಯವನ್ನು ಸಹಿಸುವುದೇ ಮೇಲು; ಮೋಸವನ್ನು ಅದರಿಂದಾದ ನಷ್ಟವನ್ನು ಯಾಕೆ ತಾಳಬಾರದು?
そもそも、互いに訴え合うことが、すでにあなたがたの敗北です。なぜ、むしろ不正をも甘んじて受けないのですか。なぜ、むしろだまされていないのですか。
8 ಆದರೆ ನೀವು ನಿಮ್ಮ ಸ್ವಂತ ಸಹೋದರರಿಗೆ ಅನ್ಯಾಯವನ್ನು ಮತ್ತು ಮೋಸವನ್ನು ಮಾಡಿದ್ದೀರಿ.
ところが、それどころか、あなたがたは、不正を行なう、だまし取る、しかもそのようなことを兄弟に対してしているのです。
9 ಅನೀತಿವಂತರು ದೇವರ ರಾಜ್ಯಕ್ಕೆ ಬಾಧ್ಯರಾಗುವುದಿಲ್ಲವೆಂಬುದು ನಿಮಗೆ ತಿಳಿಯದೋ? ಸುಳ್ಳನ್ನು ನಂಬಬೇಡಿರಿ. ಜಾರರು, ವಿಗ್ರಹಾರಾಧಕರು, ವ್ಯಭಿಚಾರಿಗಳು, ಪುರುಷಗಾಮಿಗಳು, ಕಳ್ಳರು,
あなたがたは、正しくない者は神の国を相続できないことを、知らないのですか。だまされてはいけません。不品行な者、偶像を礼拝する者、姦淫をする者、男娼となる者、男色をする者、
10 ೧೦ ಲೋಭಿಗಳು, ಕುಡುಕರು, ಜಗಳಮಾಡುವವರು, ಸುಲುಕೊಳ್ಳುವವರು ಇವರೊಳಗೆ ಒಬ್ಬರಾದರೂ ದೇವರ ರಾಜ್ಯಕ್ಕೆ ಬಾಧ್ಯರಾಗುವುದಿಲ್ಲ.
盗む者、貪欲な者、酒に酔う者、そしる者、略奪する者はみな、神の国を相続することができません。
11 ೧೧ ನಿಮ್ಮಲ್ಲಿ ಕೆಲವರು ಅಂಥವರಾಗಿದ್ದೀರಿ. ಆದರೆ ನೀವು ಕರ್ತನಾದ ಯೇಸು ಕ್ರಿಸ್ತನ ಹೆಸರಿನಿಂದಲೂ ಮತ್ತು ನಮ್ಮ ದೇವರ ಆತ್ಮದಿಂದಲೂ ತೊಳೆಯಲ್ಪಟ್ಟು, ಶುದ್ಧೀಕರಿಸಲ್ಪಟ್ಟಿದ್ದೀರಿ, ದೇವರಿಂದ ನೀತಿವಂತರೆಂಬ ನಿರ್ಣಯವನ್ನು ಹೊಂದಿದ್ದೀರಿ.
あなたがたの中のある人たちは以前はそのような者でした。しかし、主イエス・キリストの御名と私たちの神の御霊によって、あなたがたは洗われ、きよい者とされ、義と認められたのです。
12 ೧೨ “ಎಲ್ಲಾ ಕಾರ್ಯಗಳನ್ನು ಮಾಡುವುದಕ್ಕೆ ನನಗೆ ಹಕ್ಕುವುಂಟು,” ಆದರೆ ಎಲ್ಲವು ಪ್ರಯೋಜನಕರವಲ್ಲ. “ಎಲ್ಲಾ ಕಾರ್ಯಗಳನ್ನು ಮಾಡುವುದಕ್ಕೆ ನನಗೆ ಹಕ್ಕುವುಂಟು” ಆದರೆ ನಾನು ಯಾವುದಕ್ಕೂ ಅಧೀನನಲ್ಲ.
すべてのことが私には許されたことです。しかし、すべてが益になるわけではありません。私にはすべてのことが許されています。しかし、私はどんなことにも支配されはしません。
13 ೧೩ “ಭೋಜನ ಪದಾರ್ಥಗಳು ಹೊಟ್ಟೆಗಾಗಿಯೂ ಮತ್ತು ಹೊಟ್ಟೆಯು ಭೋಜನಪದಾರ್ಥಗಳಿಗಾಗಿಯೂ” ಇವೆ. ದೇವರು ಇವೆರಡನ್ನೂ ನಾಶಮಾಡುವನು. ಆದರೆ ದೇಹವು ಜಾರತ್ವಕೋಸ್ಕರ ಇರುವಂಥದಲ್ಲ. ಕರ್ತನಿಗೋಸ್ಕರ ಇರುವುದಾಗಿದೆ. ಕರ್ತನು ದೇಹಕೋಸ್ಕರ ಒದಗಿಸಿಕೊಡುತ್ತಾನೆ.
食物は腹のためにあり、腹は食物のためにあります。ところが神は、そのどちらをも滅ぼされます。からだは不品行のためにあるのではなく、主のためであり、主はからだのためです。
14 ೧೪ ದೇವರು ಕರ್ತನನ್ನು ತನ್ನ ಶಕ್ತಿಯಿಂದ ಪುನರುತ್ಥಾನಗೊಳಿಸಿದ ಹಾಗೆಯೇ ನಮ್ಮನ್ನೂ ತನ್ನ ಶಕ್ತಿಯಿಂದ ಎಬ್ಬಿಸುವನು.
神は主をよみがえらせましたが、その御力によって私たちをもよみがえらせてくださいます。
15 ೧೫ ನಿಮ್ಮ ದೇಹಗಳು ಕ್ರಿಸ್ತನ ಅಂಗಗಳಾಗಿವೆ ಎಂಬುದು ನಿಮಗೆ ತಿಳಿಯದೋ? ಹೀಗಿರಲಾಗಿ ಕ್ರಿಸ್ತನ ಅಂಗಗಳಾಗಿರುವಂಥವುಗಳನ್ನು ತೆಗೆದು ವೇಶ್ಯೆಯ ಅಂಗಗಳೊಡನೆ ಸೇರಿಸುವುದು ಸರಿಯೋ? ಎಂದಿಗೂ ಹಾಗೆ ಮಾಡಬಾರದು
あなたがたのからだはキリストのからだの一部であることを、知らないのですか。キリストのからだを取って遊女のからだとするのですか。そんなことは絶対に許されません。
16 ೧೬ ವೇಶ್ಯೆಯೊಂದಿಗೆ ಸೇರಿಕೊಂಡವನು ಅವಳೊಂದಿಗೆ ಒಂದೇ ದೇಹವಾಗಿದ್ದಾನೆಂಬುದು ನಿಮಗೆ ತಿಳಿಯದೋ? “ಇಬ್ಬರು ಒಂದೇ ಶರೀರವಾಗಿರುವರೆಂದು” ದೇವರವಾಕ್ಯ ಹೇಳುತ್ತದಲ್ಲಾ.
遊女と交われば、一つからだになることを知らないのですか。「ふたりの者は一心同体となる。」と言われているからです。
17 ೧೭ ಆದರೆ ಕರ್ತನೊಂದಿಗೆ ಸೇರಿಕೊಂಡವನು ಆತನೊಂದಿಗೆ ಒಂದೇ ಆತ್ಮವಾಗಿದ್ದಾನೆ.
しかし、主と交われば、一つ霊となるのです。
18 ೧೮ ಜಾರತ್ವವನ್ನು ಬಿಟ್ಟು ದೂರ ಓಡಿಹೋಗಿರಿ. “ಮನುಷ್ಯರು ಮಾಡುವ ಇತರ ಪಾಪಕೃತ್ಯಗಳು ದೇಹದ ಹೊರಗಿವೆ”, ಆದರೆ ಜಾರತ್ವ ಮಾಡುವವನು ತನ್ನ ಸ್ವಂತ ದೇಹಕ್ಕೆ ವಿರೋಧವಾಗಿ ಪಾಪ ಮಾಡುತ್ತಾನೆ.
不品行を避けなさい。人が犯す罪はすべて、からだの外のものです。しかし、不品行を行なう者は、自分のからだに対して罪を犯すのです。
19 ೧೯ ನೀವು ನಿಮ್ಮ ಸ್ವಂತ ಸೊತ್ತಲ್ಲವೆಂದು ಮತ್ತು ದೇವರಿಂದ ದಾನವಾಗಿ ಲಭಿಸಿದ ಪವಿತ್ರಾತ್ಮನು ನಿಮ್ಮೊಳಗೆ ನೆಲೆಗೊಂಡಿರುವುದರಿಂದ ನಿಮ್ಮ ದೇಹವು ದೇವರ ಪವಿತ್ರಾಲಯವಾಗಿದೆಂಬುದು ನಿಮಗೆ ತಿಳಿಯದೋ?
あなたがたのからだは、あなたがたのうちに住まれる、神から受けた聖霊の宮であり、あなたがたは、もはや自分自身のものではないことを、知らないのですか。
20 ೨೦ ನೀವು ಕ್ರಯಕ್ಕೆ ಕೊಳ್ಳಲ್ಪಟ್ಟವರು ಆದಕಾರಣ ನಿಮ್ಮ ದೇಹದ ಮೂಲಕ ದೇವರನ್ನು ಮಹಿಮೆಪಡಿಸಿರಿ.
あなたがたは、代価を払って買い取られたのです。ですから自分のからだをもって、神の栄光を現わしなさい。

< ಕೊರಿಂಥದವರಿಗೆ ಬರೆದ ಮೊದಲನೆಯ ಪತ್ರಿಕೆ 6 >