< ಸಮುವೇಲನು - ಪ್ರಥಮ ಭಾಗ 29 >

1 ಫಿಲಿಷ್ಟಿಯರು ತಮ್ಮ ಸೈನ್ಯವನ್ನು ಕೂಡಿಸಿಕೊಂಡು ಬಂದು ಅಫೇಕಿನಲ್ಲಿ ಪಾಳೆಯಮಾಡಿಕೊಂಡರು. ಇಸ್ರಾಯೇಲರು ಇಜ್ರೇಲಿನ ಬೈಲಿನಲ್ಲಿರುವ ಬುಗ್ಗೆಯ ಬಳಿಯಲ್ಲಿ ಇಳಿದುಕೊಂಡರು.
Filistejci skupiše sve svoje čete u Afeku, a Izraelci se utaboriše kod izvora u Jizreelu.
2 ಫಿಲಿಷ್ಟಿಯ ಪ್ರಭುಗಳ ಸೈನಿಕರು ನೂರು ನೂರು ಮಂದಿಯಾಗಿಯೂ, ಸಾವಿರ ಸಾವಿರ ಮಂದಿಯಾಗಿ, ಬರುತ್ತಿರುವಾಗ ದಾವೀದನು ಅವನ ಜನರ ಸಹಿತವಾಗಿ ಆಕೀಷನ ಸಂಗಡ ಹಿಂಬಾಲಿಸುತ್ತಿದ್ದನು.
Filistejski su knezovi prolazili sa svojim stotinama i tisućama, a David i njegovi ljudi išli su sasvim na kraju s Akišem.
3 ಆಗ ಫಿಲಿಷ್ಟಿಯ ಪ್ರಭುಗಳು, “ಈ ಇಬ್ರಿಯರು ಯಾಕೆ?” ಎಂದು ಆಕೀಷನನ್ನು ಕೇಳಿದರು. ಅವನು ಅವರಿಗೆ, “ಇವನು ಇಸ್ರಾಯೇಲರ ಅರಸನಾದ ಸೌಲನ ಸೇವಕ ದಾವೀದನಲ್ಲವೋ, ಇವನು ಇಷ್ಟು ವರ್ಷ, ಇಷ್ಟು ದಿನಗಳಿಂದ ನನ್ನ ಬಳಿಯಲ್ಲಿದ್ದಾನೆ. ಸೌಲನನ್ನು ಬಿಟ್ಟು ನನ್ನ ಹತ್ತಿರ ಬಂದ ದಿನ ಮೊದಲುಗೊಂಡು ಇಂದಿನವರೆಗೂ ನಾನು ಇವನಲ್ಲಿ ಯಾವ ಅಪರಾಧವನ್ನೂ ಕಾಣಲಿಲ್ಲ” ಎಂದು ಉತ್ತರಕೊಟ್ಟನು.
Filistejski knezovi zapitaše: “Što hoće ti Hebreji ovdje?” A Akiš odgovori filistejskim knezovima: “Pa ovo je David, sluga izraelskoga kralja Šaula! Već je godinu-dvije kod mene, ali nisam našao na njemu ništa sumnjivo od onoga dana kad je prebjegao k meni pa do današnjega dana.”
4 ಆದರೆ ಫಿಲಿಷ್ಟಿಯ ಪ್ರಭುಗಳು ಅವನ ಮೇಲೆ ಕೋಪಗೊಂಡು ಅವನಿಗೆ, “ಈ ಮನುಷ್ಯನನ್ನು ಕಳುಹಿಸಿಬಿಡು, ಇವನು ಹಿಂದಿರುಗಿ ಹೋಗಿ ನೀನು ನೇಮಿಸಿದ ಸ್ಥಳದಲ್ಲೇ ವಾಸಿಸಲಿ. ನಮ್ಮ ಜೊತೆಯಲ್ಲಿ ಯುದ್ಧಕ್ಕೆ ಬರಬಾರದು. ಬಂದರೆ ನಮಗೆ ಶತ್ರುವಾಗಿ ನಿಂತಾನು, ಫಿಲಿಷ್ಟಿಯರ ತಲೆಗಳನ್ನು ಕಡಿದಿದ್ದರಿಂದಲೇ ಇವನು ತನ್ನ ಯಜಮಾನನ ಮೆಚ್ಚಿಕೆಯನ್ನು ಪಡೆಯಬಹುದಲ್ಲವೇ?
Ali filistejski knezovi planuše na njega i rekoše mu: “Pošalji toga čovjeka natrag, neka se vrati na mjesto koje si mu označio. Neka ne ide s nama u boj, da se ne okrene protiv nas u boju! Čime bi se on opet umilio svome gospodaru ako ne glavama ovih naših ljudi?
5 ‘ಸೌಲನು ಸಾವಿರಾರು ಶತ್ರುಗಳನ್ನು ಕೊಂದನು. ದಾವೀದನು ಹತ್ತು ಸಾವಿರಾರು ಶತ್ರುಗಳನ್ನು ಕೊಂದನು’ ಎಂದು ಸ್ತ್ರೀಯರು ಕುಣಿಯುತ್ತಾ ಹಾಡಿದ್ದು ಈ ದಾವೀದನನ್ನು ಕುರಿತೇ ಅಲ್ಲವೇ?” ಅಂದರು.
To je onaj isti David o kome se pjevalo igrajući: 'Pobi Šaul svoje tisuće, David na desetke tisuća!'”
6 ಆಗ ಆಕೀಷನು ದಾವೀದನನ್ನು ಕರೆದು ಅವನಿಗೆ, “ಯೆಹೋವನಾಣೆ ನೀನು ಯಥಾರ್ಥನು. ನೀನು ನನ್ನ ಸಂಗಡ ಪಾಳೆಯದಲ್ಲಿದ್ದುಕೊಂಡು ಯುದ್ಧಕ್ಕೆ ಹೋಗುತ್ತಾ ಬರುತ್ತಾ ಇರುವುದು ಯುಕ್ತವೆಂದು ನನಗೆ ತೋರಿತು. ನೀನು ಬಂದಂದಿನಿಂದ ಇಂದಿನವರೆಗೂ ನಾನು ನಿನ್ನಲ್ಲಿ ಯಾವ ದೋಷವನ್ನೂ ಕಾಣಲಿಲ್ಲ.
Tada Akiš dozva Davida i reče mu: “Živoga mi Jahve, ti si pošten i meni bi drago bilo da me pratiš u pokretima moje vojske, jer nisam našao nikakva zla na tebi od onoga dana kad si došao k meni pa do današnjega dana. Ali nisi drag u očima knezova.
7 ಆದರೆ ಪ್ರಭುಗಳು ನಿನ್ನನ್ನು ಮೆಚ್ಚುವುದಿಲ್ಲ. ಆದ್ದರಿಂದ ನೀನು ಸಮಾಧಾನದಿಂದ ಹಿಂದಿರುಗಿ ಹೋಗು ಅವರನ್ನು ಸಿಟ್ಟುಗೊಳಿಸಬಾರದು” ಎಂದು ಹೇಳಿದನು.
Zato se sada vrati i otiđi s mirom kući da ne ozlovoljiš filistejske knezove!”
8 ದಾವೀದನು ಆಕೀಷನಿಗೆ, “ನಾನೇನು ಮಾಡಿದೆನು? ನಿನ್ನ ದಾಸನಾದ ನಾನು ನಿನ್ನ ಬಳಿಗೆ ಬಂದ ದಿನದಿಂದ ಇಂದಿನವರೆಗೂ ನನ್ನಲ್ಲಿ ಯಾವ ಅಪರಾಧವನ್ನು ಕಂಡಿ? ಅರಸನಾದ ನನ್ನ ಒಡೆಯನ ಜೊತೆಯಲ್ಲಿ ಹೋಗಿ, ಅವನ ಶತ್ರುಗಳೊಡನೆ ನಾನೇಕೆ ಯುದ್ಧ ಮಾಡಬಾರದು?” ಅಂದನು.
David odvrati Akišu: “Ta što sam učinio i što si zamjerio svome sluzi od onoga dana kad sam stupio u tvoju službu pa do današnjega dana da ne mogu ići da se bijem s neprijateljima svoga gospodara kralja?”
9 ಆಗ ಆಕೀಷನು ದಾವೀದನಿಗೆ, “ನೀನು ಒಳ್ಳೆಯವನೆಂದು ನನಗೆ ಗೊತ್ತದೆ, ನನ್ನ ದೃಷ್ಟಿಯಲ್ಲಿ ನೀನು ದೇವದೂತನಂತಿರುತ್ತೀ. ಆದರೆ ಫಿಲಿಷ್ಟಿಯ ಪ್ರಭುಗಳು, ‘ಇವನು ನಮ್ಮ ಜೊತೆಯಲ್ಲಿ ಯುದ್ಧಕ್ಕೆ ಹೊರಡಬಾರದು’ ಎಂದು ಹೇಳುತ್ತಾರಲ್ಲಾ.
A Akiš odgovori Davidu: “Ti znaš da si mi drag kao Božji anđeo, ali su filistejski knezovi rekli: 'Neka ne ide s nama u boj!'
10 ೧೦ ಆದುದ್ದರಿಂದ ನೀನೂ, ನಿನ್ನ ಸಂಗಡ ಬಂದ ನಿನ್ನ ಒಡೆಯನ ಸೇವಕರೂ, ನಾಳೆ ಬೆಳಿಗ್ಗೆ ಎದ್ದು ಹೊತ್ತು ಮೂಡಿದ ಕೂಡಲೆ ಹಿಂದಿರುಗಿ ಹೋಗಿರಿ” ಎಂದು ಹೇಳಿದನು.
Zato ustanite rano ujutro, ti i sluge tvoga gospodara koji su došli s tobom, i otiđite na mjesto koje sam vam označio. I nemoj gajiti u svom srcu nikakve mržnje jer si mi mio. Ustat ćete, dakle, u rano jutro, čim svane, i otići ćete!”
11 ೧೧ ದಾವೀದನು ತನ್ನ ಜನರೊಡನೆ ಬೆಳಿಗ್ಗೆ ಎದ್ದು ಹಿಂದಿರುಗಿ ಫಿಲಿಷ್ಟಿಯರ ದೇಶಕ್ಕೆ ಹೊರಟನು. ಫಿಲಿಷ್ಟಿಯರು ಇಜ್ರೇಲಿಗೆ ಹೋದರು.
Tako David sa svojim ljudima ustade rano i krenu odmah ujutro i vrati se u filistejsku zemlju, a Filistejci odoše u Jizreel.

< ಸಮುವೇಲನು - ಪ್ರಥಮ ಭಾಗ 29 >