< ಪೂರ್ವಕಾಲವೃತ್ತಾಂತ ದ್ವಿತೀಯ ಭಾಗ 22 >

1 ಯೆರೂಸಲೇಮಿನವರು ಯೆಹೋರಾಮನ ಮರಣದ ನಂತರ, ಅವನ ಕಿರಿಯ ಮಗನಾದ ಅಹಜ್ಯನನ್ನು ಅರಸನನ್ನಾಗಿ ಮಾಡಿದರು. ಅರಬಿಯರೊಡನೆ ಯೆಹೋರಾಮನ ಪಾಳೆಯಕ್ಕೆ ಬಂದ ಕೊಳ್ಳೆಗಾರರು ಅವನ ಹಿರಿಯ ಮಕ್ಕಳನ್ನೆಲ್ಲಾ ಕೊಂದುಬಿಟ್ಟಿದ್ದರು. ಆದುದರಿಂದ ಯೆಹೂದದ ಅರಸನಾದ ಯೆಹೋರಾಮನ ಮಗ ಅಹಜ್ಯನು ಅರಸನಾದನು.
А Јерусалимљани зацарише на његово место Охозију најмлађег сина његовог, јер старије све поби чета која дође с Арапима у логор; и тако Охозија, син Јорамов, поста цар Јудин.
2 ಅಹಜ್ಯನು ಪಟ್ಟಕ್ಕೆ ಬಂದಾಗ ಅವನಿಗೆ ನಲ್ವತ್ತೆರಡು ವರ್ಷವಾಗಿತ್ತು. ಅವನು ಯೆರೂಸಲೇಮಿನಲ್ಲಿ ಒಂದು ವರ್ಷ ಆಡಳಿತ ನಡೆಸಿದನು. ಒಮ್ರಿಯನ ಮೊಮ್ಮಗಳಾದ ಅತಲ್ಯ ಎಂಬಾಕೆಯು ಇವನ ತಾಯಿ.
Имаше Охозија четрдесет и две године кад поче царовати, и царова годину дана у Јерусалиму. Матери му беше име Готолија, кћи Амријева.
3 ತನ್ನ ತಾಯಿಯ ದುರ್ಬೋಧನೆಗೆ ಕಿವಿಗೊಟ್ಟು, ಇವನೂ ದುರಾಚಾರಿಯಾಗಿ ಅಹಾಬನ ಮನೆಯವರ ಮಾರ್ಗದಲ್ಲೇ ನಡೆದನು.
И он хођаше путевима дома Ахавовог, јер га мати наговараше на зла дела.
4 ಅವನ ತಂದೆ ತೀರಿಹೋದ ಮೇಲೆ ಅಹಾಬನ ಕುಟುಂಬದವರೇ, ಅವನಿಗೆ ತಪ್ಪಾದ ಸಲಹೆ ಕೊಡುವವರಾದರು. ಆದುದರಿಂದ ಅವನು ಯೆಹೋವನಿಗೆ ವಿರುದ್ಧವಾಗಿ ದ್ರೋಹಿಯಾಗಿ ನಡೆದನು.
И чињаше што је зло пред Господом као дом Ахавов; јер му они беху саветници по смрти оца његовог на погибао његову.
5 ಅವರ ಪ್ರೇರಣೆಯಿಂದಲೇ ಅವನು ಇಸ್ರಾಯೇಲರ ಅರಸನೂ ಅಹಾಬನ ಮಗನೂ ಆದ ಯೋರಾಮನ ಜೊತೆಯಲ್ಲಿ ಅರಾಮ್ಯರ ಅರಸನಾದ ಹಜಾಯೇಲನಿಗೆ ವಿರುದ್ಧವಾಗಿ ಯುದ್ಧಮಾಡುವುದಕ್ಕೆ, ರಾಮೋತ್ ಗಿಲ್ಯಾದಿಗೆ ಹೋದನು. ಅರಾಮ್ಯರು ಯೋರಾಮನನ್ನು ಯುದ್ಧದಲ್ಲಿ ಗಾಯಪಡಿಸಿದರು.
И по њиховом савету ходећи изиђе с Јорамом сином Ахавовим, царем Израиљевим, на војску на Азаила, цара сирског, у Рамот галадски; и онде Сирци ранише Јорама.
6 ಅರಾಮ್ಯರು ಯೋರಾಮನಿಗೆ ರಾಮದಲ್ಲಿ ಮಾಡಿದ ಗಾಯಗಳಿಗೆ ಚಿಕಿತ್ಸೆ ಮಾಡಿಸಿಕೊಳ್ಳುವುದಕ್ಕಾಗಿ ಅವನು ಇಜ್ರೇಲಿಗೆ ಬಂದನು. ಯೋರಾಮನು ಅಸ್ವಸ್ಥನಾಗಿದ್ದುದರಿಂದ ಯೆಹೂದ್ಯರ ಅರಸನಾದ ಯೆಹೋರಾಮನ ಮಗನಾಗಿರುವ ಅಹಜ್ಯನು ಅವನನ್ನು ನೋಡುವುದಕ್ಕಾಗಿ ಅಲ್ಲಿಗೆ ಹೋದನು.
А он се врати да се лечи у Језраелу од рана које му задаше у Рами, кад се бише с Азаилом, царем сирским. А Азарија, син Јорамов цар Јудин, дође у Језраел да види Јорама, сина Ахавовог, јер беше болестан.
7 ಅಹಜ್ಯನು ಯೋರಾಮನ ಬಳಿಗೆ ಹೋದದ್ದು ದೈವಸಂಕಲ್ಪದಿಂದಲೇ. ಅವನು ಅಲ್ಲಿ ಮುಟ್ಟಿದ ಕೂಡಲೆ ಯೋರಾಮನ ಜೊತೆಯಲ್ಲಿ ನಿಂಷಿಯ ಮಗನಾದ ಯೇಹುವನ್ನು ಎದುರುಗೊಳ್ಳುವುದಕ್ಕೆ ಹೋದನು. ಯೆಹೋವನು ಅಹಾಬನ ಮನೆಯನ್ನು ನಿರ್ನಾಮ ಮಾಡುವುದಕ್ಕಾಗಿಯೇ ಯೇಹುವಿಗೆ ಪಟ್ಟಾಭಿಷೇಕ ಮಾಡಿಸಿದ್ದನು.
Али беше од Бога на пропаст Охозији што дође к Јораму; јер дошав отиде с Јорамом на Јуја, сина Нимсијиног, кога Господ помаза да истреби дом Ахавов.
8 ಯೇಹುವು, ಅಹಾಬನ ಮನೆಯವರ ಮೇಲೆ ಆ ನಿರ್ಣಯವನ್ನು ನೆರವೇರಿಸುತ್ತಿರುವಾಗ, ತನಗೆ ಸಿಕ್ಕಿದ ಯೆಹೂದ್ಯ ಪ್ರಧಾನರನ್ನೂ, ಅಹಜ್ಯನಿಗೆ ಸೇವೆಮಾಡುತ್ತಿದ್ದ, ಅವನ ಅಣ್ಣತಮ್ಮಂದಿರ ಮಕ್ಕಳನ್ನೂ ಕೊಲ್ಲಿಸಿದನು.
Јер кад Јуј извршаваше освету на дому Ахавовом, нађе кнезове Јудине и синове браће Охозијине, који служаху Охозији, и погуби их.
9 ಆಮೇಲೆ ಅಹಜ್ಯನನ್ನು ಹುಡುಕಿಸಿದನು; ಅವನು ಸಮಾರ್ಯದಲ್ಲಿ ಅಡಗಿಕೊಂಡಿದ್ದನು. ಜನರು ಅವನನ್ನು ಯೇಹುವಿನ ಬಳಿಗೆ ಹಿಡಿದು ತಂದು ಕೊಂದರು, “ಇವನು ಪೂರ್ಣಹೃದಯದಿಂದ ಯೆಹೋವನನ್ನು ಹುಡುಕಿದ, ಯಥಾರ್ಥಭಕ್ತನಾದ ಯೆಹೋಷಾಫಾಟನ ಮೊಮ್ಮಗನಲ್ಲವೇ” ಎಂದುಕೊಂಡು ಅವನನ್ನು ಸಮಾಧಿಮಾಡಿದರು. ರಾಜ್ಯಾಧಿಕಾರವನ್ನು ವಹಿಸಿಕೊಳ್ಳುವುದಕ್ಕೆ ಅಹಜ್ಯನ ಮನೆಯವರಲ್ಲಿ ಸಮರ್ಥರಾರೂ ಉಳಿಯಲಿಲ್ಲ.
Потом потражи Охозију, и ухватише га кад се сакриваше у Самарији, и доведавши га к Јују погубише га, и погребоше га; јер рекоше: Син је Јосафата који је тражио Господа свим срцем својим. И тако не би никога од дома Охозијиног који би могао бити цар.
10 ೧೦ ಅಹಜ್ಯನು ಮರಣ ಹೊಂದಿದನೆಂದು ಅವನ ತಾಯಿಯಾದ ಅತಲ್ಯಳು ಕೇಳಿದ ಕೂಡಲೆ ಯೆಹೂದ ರಾಜ ಸಂತಾನದವರನ್ನೆಲ್ಲಾ ಸಂಹರಿಸಿಬಿಟ್ಟಳು.
Зато Готолија, мати Охозијина, видевши да јој син погибе, уста и поби све царско семе дома Јудиног.
11 ೧೧ ಆದರೆ ರಾಜಪುತ್ರಿಯಾದ ಯೆಹೋಷಬತ್ ಎಂಬಾಕೆಯು, ಹತರಾಗುತ್ತಿದ್ದ ರಾಜಪುತ್ರರ ಮಧ್ಯದಿಂದ ಅಹಜ್ಯನ ಮಗನಾದ ಯೆಹೋವಾಷನನ್ನು, ಯಾರಿಗೂ ತಿಳಿಯದಂತೆ ಅವನ ದಾದಿಯೊಡನೆ ತೆಗೆದುಕೊಂಡು ಹೋಗಿ ಮಲಗುವ ಕೋಣೆಯಲ್ಲಿ ಅಡಗಿಸಿಟ್ಟಳು. ಅರಸನಾದ ಯೆಹೋರಾಮನ ಮಗಳೂ, ಅಹಜ್ಯನ ಸಹೋದರಿಯೂ, ಯಾಜಕನಾದ ಯೆಹೋಯಾದನ ಹೆಂಡತಿಯೂ, ಆಗಿದ್ದ ಯೆಹೋಷಬತಳು ಹೀಗೆ ಅವನನ್ನು ಅತಲ್ಯಳಿಂದ ಹತನಾಗದಂತೆ ರಕ್ಷಿಸಿದಳು.
Али Јосавеја, кћи царева, узе Јоаса, сина Охозијиног и украде га између синова царевих, које убијаху; и сакри га с дојкињом његовом у ложницу. И тако Јосавеја, кћи цара Јорама, жена Јодаја свештеника, сакри га од Готолије, јер беше сестра Охозијина, те га не уби.
12 ೧೨ ಅವನು ಆರು ವರ್ಷಗಳವರೆಗೂ ಅವರೊಡನೆ ಗುಪ್ತವಾಗಿ ದೇವಾಲಯದಲ್ಲಿ ಇದ್ದನು. ಆಗ ಅತಲ್ಯಳೇ ದೇಶವನ್ನಾಳುತ್ತಿದ್ದಳು.
И беше с њима сакривен у дому Божијем шест година; а Готолија цароваше у земљи.

< ಪೂರ್ವಕಾಲವೃತ್ತಾಂತ ದ್ವಿತೀಯ ಭಾಗ 22 >