< ಪೂರ್ವಕಾಲವೃತ್ತಾಂತ ದ್ವಿತೀಯ ಭಾಗ 27 >

1 ಯೋತಾಮನು ಪಟ್ಟಕ್ಕೆ ಬಂದಾಗ ಅವನು ಇಪ್ಪತ್ತೈದು ವರ್ಷದವನಾಗಿದ್ದನು. ಅವನು ಯೆರೂಸಲೇಮಿನಲ್ಲಿ ಹದಿನಾರು ವರ್ಷಗಳ ಕಾಲ ಆಳಿದನು. ಚಾದೋಕನ ಮಗಳಾದ ಯೆರೂಷ ಎಂಬಾಕೆಯು ಇವನ ತಾಯಿ.
Двадесет и пет година беше Јотаму кад поче царовати, и царова шеснаест година у Јерусалиму; матери му беше име Јеруса, кћи Садокова.
2 ಅವನು ತನ್ನ ತಂದೆಯಾದ ಉಜ್ಜೀಯನಂತೆ ಯೆಹೋವನ ಚಿತ್ತಾನುಸಾರವಾಗಿ ನಡೆದನು. ಆದರೆ ಅವನಂತೆ ಯೆಹೋವನ ಆಲಯವನ್ನು ಪ್ರವೇಶಿಸಲಿಲ್ಲ. ಪ್ರಜೆಗಳಾದರೋ ದುರಾಚಾರಿಗಳಾಗಿಯೇ ಇದ್ದರು.
Он чињаше што је право пред Господом сасвим како је чинио Озија отац његов, само што не уђе у цркву Господњу; али народ још беше покварен.
3 ಯೆಹೋವನ ಆಲಯಕ್ಕೆ ಮೇಲಣ ಹೆಬ್ಬಾಗಿಲನ್ನು ಇಡಿಸಿ, ಓಫೇಲ್ ಗೋಡೆಯ ಹೆಚ್ಚಿನ ಭಾಗವನ್ನು ಕಟ್ಟಿಸಿದವನು ಇವನೇ.
Он начини висока врата на дому Господњем, и на зиду Офилу много назида.
4 ಇದಲ್ಲದೆ, ಇವನು ಯೆಹೂದ ಪರ್ವತ ಪ್ರದೇಶದಲ್ಲಿ ಪಟ್ಟಣಗಳನ್ನೂ, ಕಾಡುಗಳಲ್ಲಿ ದುರ್ಗಗಳನ್ನೂ, ಗೋಪುರಗಳನ್ನೂ ಕಟ್ಟಿಸಿದನು.
Још сазида и градове у гори Јудиној, и у шумама погради дворове и куле.
5 ಅಮ್ಮೋನಿಯರ ಅರಸರೊಡನೆ ಯುದ್ಧ ಮಾಡಿ ಅವರನ್ನು ಗೆದ್ದನು. ಅಮ್ಮೋನಿಯರು ಆ ವರ್ಷದಲ್ಲಿ ಇವನಿಗೆ ನೂರು ತಲಾಂತು ಬೆಳ್ಳಿ, ಹತ್ತು ಸಾವಿರ ಕೋರ್ (ಸಾವಿರ ಮೆಟ್ರಿಕ್ ಟನ್) ಗೋದಿ, ಹತ್ತು ಸಾವಿರ ಕೋರ್ ಜವೆಗೋದಿ ಇವುಗಳನ್ನು ಕೊಡಬೇಕಾಯಿತು. ಅಮ್ಮೋನಿಯರು ಅವನಿಗೆ ಎರಡನೆಯ ಮತ್ತು ಮೂರನೆಯ ವರ್ಷಗಳಲ್ಲಿಯೂ ಹೀಗೆಯೇ ಕೊಟ್ಟರು.
И војева с царем синова Амонових и савлада их; и дадоше му синови Амонови оне године сто таланата сребра и десет хиљада кора пшенице и јечма десет хиљада. Толико му дадоше синови Амонови и друге и треће године.
6 ಯೋತಾಮನು ತನ್ನ ದೇವರಾದ ಯೆಹೋವನ ಚಿತ್ತಾನುಸಾರವಾಗಿ ನಡೆದುಕೊಂಡದ್ದರಿಂದ ಬಲವುಳ್ಳವನಾದನು.
И тако осили Јотам, јер управи путеве своје пред Господом Богом својим.
7 ಯೋತಾಮನ ಉಳಿದ ಚರಿತ್ರೆಯೂ, ಅವನು ನಡೆಸಿದ ಯುದ್ಧಗಳು ಹಾಗೂ ಕಾರ್ಯ ಚಟುವಟಿಕೆಗಳು ಇಸ್ರಾಯೇಲರ ಮತ್ತು ಯೆಹೂದ್ಯರ ರಾಜ ಗ್ರಂಥಗಳಲ್ಲಿ ಬರೆಯಲ್ಪಟ್ಟಿದೆ.
А остала дела Јотамова и ратови сви његови и путеви његови, ено су записани у књизи о царевима Израиљевим и Јудиним.
8 ಅವನು ತನ್ನ ಇಪ್ಪತ್ತೈದನೆಯ ವರ್ಷದಲ್ಲಿ ಪಟ್ಟಕ್ಕೆ ಬಂದು ಯೆರೂಸಲೇಮಿನಲ್ಲಿ ಹದಿನಾರು ವರ್ಷ ಆಳ್ವಿಕೆ ನಡೆಸಿದನು.
Двадесет и пет година беше му кад поче царовати, и царова шеснаест година у Јерусалиму.
9 ಯೋತಾಮನು ತನ್ನ ಪೂರ್ವಿಕರ ಬಳಿಗೆ ಸೇರಲು ಅವನ ಶವವನ್ನು ದಾವೀದನಗರದಲ್ಲಿ ಸಮಾಧಿಮಾಡಿದರು. ಅವನ ನಂತರ ಅವನ ಮಗನಾದ ಆಹಾಜನು ಅರಸನಾದನು.
И почину Јотам код отаца својих, и погребоше га у граду Давидовом; а на његово се место зацари Ахаз, син његов.

< ಪೂರ್ವಕಾಲವೃತ್ತಾಂತ ದ್ವಿತೀಯ ಭಾಗ 27 >