< ಪೂರ್ವಕಾಲವೃತ್ತಾಂತ ದ್ವಿತೀಯ ಭಾಗ 29 >

1 ಹಿಜ್ಕೀಯನು ಪಟ್ಟಕ್ಕೆ ಬಂದಾಗ ಅವನು ಇಪ್ಪತ್ತೈದು ವರ್ಷದವನಾಗಿದ್ದನು. ಅವನು ಯೆರೂಸಲೇಮಿನಲ್ಲಿ ಇಪ್ಪತ್ತೊಂಭತ್ತು ವರ್ಷ ಆಳಿದನು. ಜೆಕರ್ಯನ ಮಗಳಾದ ಅಬೀಯ ಎಂಬಾಕೆಯು ಅವನ ತಾಯಿ.
יְחִזְקִיָּ֣הוּ מָלַ֗ךְ בֶּן־עֶשְׂרִ֤ים וְחָמֵשׁ֙ שָׁנָ֔ה וְעֶשְׂרִ֤ים וָתֵ֙שַׁע֙ שָׁנָ֔ה מָלַ֖ךְ בִּירוּשָׁלִָ֑ם וְשֵׁ֣ם אִמּ֔וֹ אֲבִיָּ֖ה בַּת־זְכַרְיָֽהוּ׃
2 ಅವನು ಎಲ್ಲಾ ವಿಷಯಗಳಲ್ಲಿಯೂ ನೀತಿವಂತನಾಗಿ ತನ್ನ ಪೂರ್ವಿಕನಾದ ದಾವೀದನಂತೆ ಯೆಹೋವನ ಚಿತ್ತಾನುಸಾರವಾಗಿ ನಡೆದನು.
וַיַּ֥עַשׂ הַיָּשָׁ֖ר בְּעֵינֵ֣י יְהוָ֑ה כְּכֹ֥ל אֲשֶׁר־עָשָׂ֖ה דָּוִ֥יד אָבִֽיו׃
3 ಅವನು ತನ್ನ ಆಳ್ವಿಕೆಯ ಮೊದಲನೆಯ ವರ್ಷದ ಮೊದಲನೆಯ ತಿಂಗಳಲ್ಲಿ ಯೆಹೋವನ ಆಲಯದ ಬಾಗಿಲುಗಳನ್ನು ತೆರೆಯಿಸಿ ಅವುಗಳನ್ನು ಭದ್ರಪಡಿಸಿದನು.
ה֣וּא בַשָּׁנָה֩ הָרִאשׁוֹנָ֨ה לְמָלְכ֜וֹ בַּחֹ֣דֶשׁ הָרִאשׁ֗וֹן פָּתַ֛ח אֶת־דַּלְת֥וֹת בֵּית־יְהוָ֖ה וַֽיְחַזְּקֵֽם׃
4 ಆಮೇಲೆ ಯಾಜಕರನ್ನೂ ಮತ್ತು ಲೇವಿಯರನ್ನೂ ದೇವಾಲಯದ ಮೂಡಣದಿಕ್ಕಿನ ಬಯಲಿನಲ್ಲಿ ಸೇರಿಸಿ
וַיָּבֵ֥א אֶת־הַכֹּהֲנִ֖ים וְאֶת־הַלְוִיִּ֑ם וַיַּֽאַסְפֵ֖ם לִרְח֥וֹב הַמִּזְרָֽח׃
5 ಅವರಿಗೆ, “ಲೇವಿಯರೇ, ನನ್ನ ಮಾತನ್ನು ಕೇಳಿರಿ; ಈಗ ನಿಮ್ಮನ್ನು ಶುದ್ಧೀಕರಿಸಿಕೊಂಡು ನಿಮ್ಮ ಪೂರ್ವಿಕರ ದೇವರಾದ ಯೆಹೋವನ ಪವಿತ್ರಾಲಯದಲ್ಲಿರುವ ಹೊಲಸನ್ನೆಲ್ಲಾ ಹೊರಗೆ ಹಾಕಿ ಆಲಯವನ್ನು ಶುದ್ಧೀಕರಿಸಿರಿ.
וַיֹּ֥אמֶר לָהֶ֖ם שְׁמָע֣וּנִי הַלְוִיִּ֑ם עַתָּ֣ה הִֽתְקַדְּשׁ֗וּ וְקַדְּשׁוּ֙ אֶת־בֵּ֤ית יְהוָה֙ אֱלֹהֵ֣י אֲבֹתֵיכֶ֔ם וְהוֹצִ֥יאוּ אֶת־הַנִּדָּ֖ה מִן־הַקֹּֽדֶשׁ׃
6 ನಮ್ಮ ಪೂರ್ವಿಕರು ನಮ್ಮ ದೇವರಾದ ಯೆಹೋವನಿಗೆ ದ್ರೋಹಮಾಡಿ, ಆತನ ಚಿತ್ತಕ್ಕೆ ವಿರುದ್ಧವಾಗಿ ನಡೆದು ಆತನನ್ನು ತೊರೆದುಬಿಟ್ಟರು. ಅವರು ಆತನ ನಿವಾಸ ಸ್ಥಳವನ್ನು ತೊರೆದು ವಿಮುಖರಾದರು.
כִּֽי־מָעֲל֣וּ אֲבֹתֵ֗ינוּ וְעָשׂ֥וּ הָרַ֛ע בְּעֵינֵ֥י יְהוָֽה־אֱלֹהֵ֖ינוּ וַיַּֽעַזְבֻ֑הוּ וַיַּסֵּ֧בּוּ פְנֵיהֶ֛ם מִמִּשְׁכַּ֥ן יְהוָ֖ה וַיִּתְּנוּ־עֹֽרֶף׃
7 ಅದರ ಮಂಟಪದ ಬಾಗಿಲುಗಳನ್ನು ಮುಚ್ಚಿ, ದೀಪಗಳನ್ನು ನಂದಿಸಿದರು. ಇಸ್ರಾಯೇಲ್ ದೇವರ ಪವಿತ್ರ ಸ್ಥಾನದಲ್ಲಿ ಧೂಪಹಾಕುವುದನ್ನೂ, ಸರ್ವಾಂಗಹೋಮ ಸಮರ್ಪಿಸುವುದನ್ನೂ ನಿಲ್ಲಿಸಿಬಿಟ್ಟರು.
גַּ֣ם סָֽגְר֞וּ דַּלְת֣וֹת הָאוּלָ֗ם וַיְכַבּוּ֙ אֶת־הַנֵּר֔וֹת וּקְטֹ֖רֶת לֹ֣א הִקְטִ֑ירוּ וְעֹלָה֙ לֹא־הֶעֱל֣וּ בַקֹּ֔דֶשׁ לֵאלֹהֵ֖י יִשְׂרָאֵֽל׃
8 ಆದುದರಿಂದ ಯೆಹೋವನು ಯೆಹೂದ ದೇಶದ ಮೇಲೆಯೂ ಯೆರೂಸಲೇಮಿನ ಮೇಲೆಯೂ, ಕೋಪವುಳ್ಳವನಾಗಿ ಅವುಗಳನ್ನು ಭಯಭೀತಿಗೂ ನಿಂದೆಗೂ, ಪರಿಹಾಸ್ಯಗಳಿಗೂ ಗುರಿಮಾಡಿದ್ದಾನೆ; ಇದಕ್ಕೆ ನೀವೇ ಸಾಕ್ಷಿಗಳು.
וַיְהִי֙ קֶ֣צֶף יְהוָ֔ה עַל־יְהוּדָ֖ה וִירוּשָׁלִָ֑ם וַיִּתְּנֵ֤ם לזועה לְשַׁמָּ֣ה וְלִשְׁרֵקָ֔ה כַּאֲשֶׁ֛ר אַתֶּ֥ם רֹאִ֖ים בְּעֵינֵיכֶֽם׃
9 ಅದೇ ಕಾರಣದಿಂದ ನಮ್ಮ ಹಿರಿಯರು ಕತ್ತಿಯಿಂದ ಹತರಾದರು; ನಮ್ಮ ಗಂಡು ಹೆಣ್ಣು ಮಕ್ಕಳೂ, ಹೆಂಡತಿಯರೂ ಸೆರೆಯವರಾಗಿ ಹೋಗಬೇಕಾಯಿತು.
וְהִנֵּ֛ה נָפְל֥וּ אֲבוֹתֵ֖ינוּ בֶּחָ֑רֶב וּבָנֵ֨ינוּ וּבְנוֹתֵ֧ינוּ וְנָשֵׁ֛ינוּ בַּשְּׁבִ֖י עַל־זֹֽאת׃
10 ೧೦ ಈಗ ನಮ್ಮ ಮೇಲಿರುವ ಆತನ ಕೋಪಾಗ್ನಿಯು ತೊಲಗಿ ಹೋಗುವಂತೆ ಇಸ್ರಾಯೇಲಿನ ದೇವರಾದ ಯೆಹೋವನೊಡನೆ ಒಡಂಬಡಿಕೆ ಮಾಡಿಕೊಳ್ಳುವುದಕ್ಕೆ ಮನಸ್ಸುಳ್ಳವನಾಗಿದ್ದೇನೆ.
עַתָּה֙ עִם־לְבָבִ֔י לִכְר֣וֹת בְּרִ֔ית לַיהוָ֖ה אֱלֹהֵ֣י יִשְׂרָאֵ֑ל וְיָשֹׁ֥ב מִמֶּ֖נּוּ חֲר֥וֹן אַפּֽוֹ׃
11 ೧೧ ಹೀಗಿರಲಾಗಿ ನನ್ನ ಮಕ್ಕಳೇ, ಉದಾಸೀನರಾಗಿರಬೇಡಿ; ಯೆಹೋವನು ತನ್ನನ್ನು ಆರಾಧಿಸುವುದಕ್ಕೂ ಧೂಪಹಾಕುವುದಕ್ಕೂ ನಿಮ್ಮನ್ನು ತನ್ನ ಸಾನ್ನಿಧ್ಯ ಸೇವಕರನ್ನಾಗಿ ಆರಿಸಿಕೊಂಡನಲ್ಲಾ” ಎಂದು ಹೇಳಿದನು.
בָּנַ֕י עַתָּ֖ה אַל־תִּשָּׁל֑וּ כִּֽי־בָכֶ֞ם בָּחַ֣ר יְהוָ֗ה לַעֲמֹ֤ד לְפָנָיו֙ לְשָׁ֣רְת֔וֹ וְלִהְי֥וֹת ל֖וֹ מְשָׁרְתִ֥ים וּמַקְטִרִֽים׃ ס
12 ೧೨ ಕೂಡಲೆ ಲೇವಿಯರು ಮುಂದೆ ಬಂದರು: ಕೆಹಾತ್ಯರಲ್ಲಿ ಅಮಾಸೈಯ ಮಗನಾದ ಮಹತ್, ಅಜರ್ಯನ ಮಗನಾದ ಯೋವೇಲ್, ಮೆರಾರೀಯರಲ್ಲಿ ಅಬ್ದೀಯ ಮಗನಾದ ಕೀಷ್, ಯೆಹಲ್ಲೆಲೇಲನ ಮಗನಾದ ಅಜರ್ಯ, ಗೇರ್ಷೋನ್ಯರಲ್ಲಿ ಜಿಮ್ಮನ ಮಗನಾದ ಯೋವಾಹ, ಯೋವಾಹನ ಮಗನಾದ ಏದೆನ್,
וַיָּקֻ֣מוּ הַ֠לְוִיִּם מַ֣חַת בֶּן־עֲמָשַׂ֞י וְיוֹאֵ֣ל בֶּן־עֲזַרְיָהוּ֮ מִן־בְּנֵ֣י הַקְּהָתִי֒ וּמִן־בְּנֵ֣י מְרָרִ֔י קִ֚ישׁ בֶּן־עַבְדִּ֔י וַעֲזַרְיָ֖הוּ בֶּן־יְהַלֶּלְאֵ֑ל וּמִן־הַגֵּ֣רְשֻׁנִּ֔י יוֹאָח֙ בֶּן־זִמָּ֔ה וְעֵ֖דֶן בֶּן־יוֹאָֽח׃
13 ೧೩ ಎಲೀಚಾಫಾನ್ಯರಲ್ಲಿ ಶಿಮ್ರಾ, ಯೆಗೀಯೇಲ್, ಆಸಾಫ್ಯರಲ್ಲಿ ಜೆಕರ್ಯ ಮತ್ತು ಮತ್ತನ್ಯ,
וּמִן־בְּנֵי֙ אֱלִ֣יצָפָ֔ן שִׁמְרִ֖י ויעואל וּמִן־בְּנֵ֣י אָסָ֔ף זְכַרְיָ֖הוּ וּמַתַּנְיָֽהוּ׃ ס
14 ೧೪ ಹೇಮಾನ್ಯರಲ್ಲಿ ಯೆಹೀಯೇಲ್, ಶಿಮ್ಮೀ, ಯೆದೂತೂನ್ಯರಲ್ಲಿ ಶೆಮಾಯ ಹಾಗು ಉಜ್ಜೀಯೇಲ್,
וּמִן־בְּנֵ֥י הֵימָ֖ן יחואל וְשִׁמְעִ֑י ס וּמִן־בְּנֵ֣י יְדוּת֔וּן שְׁמַֽעְיָ֖ה וְעֻזִּיאֵֽל׃
15 ೧೫ ಎಂಬ ಲೇವಿಯರು ಎದ್ದು ತಮ್ಮ ಸಹೋದರರನ್ನು ಸೇರಿಕೊಂಡರು. ಅವರು ಅರಸನ ಆಜ್ಞಾನುಸಾರವಾಗಿ ಯೆಹೋವನ ಧರ್ಮಶಾಸ್ತ್ರ ವಿಧಿಯ ಮೇರೆಗೆ ತಮ್ಮನ್ನು ಶುದ್ಧೀಕರಿಸಿಕೊಂಡು ಯೆಹೋವನ ಆಲಯವನ್ನು ಶುದ್ಧೀಕರಿಸುವುದಕ್ಕೆ ಬಂದರು.
וַיַּֽאַסְפ֤וּ אֶת־אֲחֵיהֶם֙ וַיִּֽתְקַדְּשׁ֔וּ וַיָּבֹ֥אוּ כְמִצְוַת־הַמֶּ֖לֶךְ בְּדִבְרֵ֣י יְהוָ֑ה לְטַהֵ֖ר בֵּ֥ית יְהוָֽה׃
16 ೧೬ ಯಾಜಕರು ಯೆಹೋವನ ಆಲಯವನ್ನು ಶುದ್ಧಮಾಡುವುದಕ್ಕಾಗಿ ಒಳಗೆ ಹೋಗಿ ಪವಿತ್ರಸ್ಥಾನದಲ್ಲಿದ್ದ ಹೊಲಸನ್ನೆಲ್ಲಾ ತಂದು ಪ್ರಾಕಾರದಲ್ಲಿ ಹಾಕಿದರು. ಲೇವಿಯರು ಅದನ್ನು ಕೂಡಿಸಿ ಹೊರಗೆ ಒಯ್ದು ಕಿದ್ರೋನ್ ಹಳ್ಳದಲ್ಲಿ ಹಾಕಿದರು.
וַיָּבֹ֣אוּ הַ֠כֹּהֲנִים לִפְנִ֣ימָה בֵית־יְהוָה֮ לְטַהֵר֒ וַיּוֹצִ֗יאוּ אֵ֤ת כָּל־הַטֻּמְאָה֙ אֲשֶׁ֤ר מָֽצְאוּ֙ בְּהֵיכַ֣ל יְהוָ֔ה לַחֲצַ֖ר בֵּ֣ית יְהוָ֑ה וַֽיְקַבְּלוּ֙ הַלְוִיִּ֔ם לְהוֹצִ֥יא לְנַֽחַל־קִדְר֖וֹן חֽוּצָה׃
17 ೧೭ ಮೊದಲನೆಯ ತಿಂಗಳಿನ ಮೊದಲನೆಯ ದಿನದಲ್ಲಿ ಶುದ್ಧೀಕರಣ ಕಾರ್ಯವನ್ನು ಪ್ರಾರಂಭಿಸಿದರು. ಎಂಟನೆಯ ದಿನದಲ್ಲಿ ಯೆಹೋವನ ಆಲಯದ ಮಂಟಪಕ್ಕೆ ಕೈಹಾಕಿದರು. ಹೀಗೆ ಯೆಹೋವನ ಆಲಯವನ್ನು ಪರಿಶುದ್ಧಪಡಿಸುವುದರಲ್ಲಿ ಎಂಟು ದಿನಗಳು ಕಳೆದು ಹೋದವು. ಮೊದಲನೆಯ ತಿಂಗಳಿನ ಹದಿನಾರನೆಯ ದಿನದಲ್ಲಿ ಕೆಲಸವೆಲ್ಲಾ ಮುಗಿಯಿತು.
וַ֠יָּחֵלּוּ בְּאֶחָ֞ד לַחֹ֣דֶשׁ הָרִאשׁוֹן֮ לְקַדֵּשׁ֒ וּבְי֧וֹם שְׁמוֹנָ֣ה לַחֹ֗דֶשׁ בָּ֚אוּ לְאוּלָ֣ם יְהוָ֔ה וַיְקַדְּשׁ֥וּ אֶת־בֵּית־יְהוָ֖ה לְיָמִ֣ים שְׁמוֹנָ֑ה וּבְי֨וֹם שִׁשָּׁ֥ה עָשָׂ֛ר לַחֹ֥דֶשׁ הָרִאשׁ֖וֹן כִּלּֽוּ׃ ס
18 ೧೮ ಆಮೇಲೆ ಅವರು ಅರಮನೆಯೊಳಗೆ ಹೋಗಿ, ಅರಸನಾದ ಹಿಜ್ಕೀಯನಿಗೆ, “ನಾವು ಯೆಹೋವನ ಸಮಸ್ತಾಲಯವನ್ನೂ, ಯಜ್ಞವೇದಿಯನ್ನೂ, ಅದರ ಉಪಕರಣಗಳನ್ನೂ, ನೈವೇದ್ಯ ರೊಟ್ಟಿಗಳನ್ನಿಡತಕ್ಕ ಮೇಜನ್ನೂ ಹಾಗು ಅದರ ಸಾಮಾನುಗಳನ್ನೂ ಶುದ್ಧಿಮಾಡಿದೆವು.
וַיָּב֤וֹאוּ פְנִ֙ימָה֙ אֶל־חִזְקִיָּ֣הוּ הַמֶּ֔לֶךְ וַיֹּ֣אמְר֔וּ טִהַ֖רְנוּ אֶת־כָּל־בֵּ֣ית יְהוָ֑ה אֶת־מִזְבַּ֤ח הָעוֹלָה֙ וְאֶת־כָּל־כֵּלָ֔יו וְאֶת־שֻׁלְחַ֥ן הַֽמַּעֲרֶ֖כֶת וְאֶת־כָּל־ כֵּלָֽיו׃
19 ೧೯ ಅರಸನಾದ ಆಹಾಜನು ತನ್ನ ಆಳ್ವಿಕೆಯಲ್ಲಿ ದೈವದ್ರೋಹಿಯಾಗಿ ತಳ್ಳಿಬಿಟ್ಟಿದ್ದ ಪಾತ್ರೆಗಳನ್ನು ತಿರುಗಿ ತಂದಿಟ್ಟು ಪ್ರತಿಷ್ಠಿಸಿದ್ದೇವೆ; ಅವು ಈಗ ಯೆಹೋವನ ಯಜ್ಞವೇದಿಯ ಮುಂದಿರುತ್ತವೆ” ಎಂದರು.
וְאֵ֣ת כָּל־הַכֵּלִ֗ים אֲשֶׁ֣ר הִזְנִיחַ֩ הַמֶּ֨לֶךְ אָחָ֧ז בְּמַלְכוּת֛וֹ בְּמַעֲל֖וֹ הֵכַ֣נּוּ וְהִקְדָּ֑שְׁנוּ וְהִנָּ֕ם לִפְנֵ֖י מִזְבַּ֥ח יְהוָֽה׃ ס
20 ೨೦ ಅರಸನಾದ ಹಿಜ್ಕೀಯನು ಮರುದಿನ ಬೆಳಗಿನ ಜಾವದಲ್ಲೆದ್ದು ಪಟ್ಟಣದ ಅಧಿಕಾರಿಗಳನ್ನು ಕರೆಸಿ ಅವರೊಡನೆ ಯೆಹೋವನ ಆಲಯಕ್ಕೆ ಹೋದನು.
וַיַּשְׁכֵּם֙ יְחִזְקִיָּ֣הוּ הַמֶּ֔לֶךְ וַיֶּאֱסֹ֕ף אֵ֖ת שָׂרֵ֣י הָעִ֑יר וַיַּ֖עַל בֵּ֥ית יְהוָֽה׃
21 ೨೧ ಅವರು ರಾಜ್ಯಾಡಳಿತ ದೇವಾಲಯ, ಯೆಹೂದ ಪ್ರಜೆಗಳು ಇವುಗಳಿಗೋಸ್ಕರ ದೋಷಪರಿಹಾರಕ ಯಜ್ಞಮಾಡುವುದಕ್ಕಾಗಿ ಹೋರಿ, ಟಗರು, ಕುರಿಮರಿ, ಆಡು ಇವುಗಳಲ್ಲಿ ಏಳೇಳನ್ನು ತಂದರು. ಅರಸನು ಯಾಜಕರಾದ ಆರೋನನ ಸಂತಾನದವರಿಗೆ ಯೆಹೋವನ ಯಜ್ಞವೇದಿಯ ಮೇಲೆ ಸರ್ವಾಂಗಹೋಮ ಮಾಡಬೇಕೆಂದು ಆಜ್ಞಾಪಿಸಿದನು.
וַיָּבִ֣יאוּ פָרִים־שִׁבְעָה֩ וְאֵילִ֨ים שִׁבְעָ֜ה וּכְבָשִׂ֣ים שִׁבְעָ֗ה וּצְפִירֵ֨י עִזִּ֤ים שִׁבְעָה֙ לְחַטָּ֔את עַל־הַמַּמְלָכָ֥ה וְעַל־הַמִּקְדָּ֖שׁ וְעַל־יְהוּדָ֑ה וַיֹּ֗אמֶר לִבְנֵ֤י אַהֲרֹן֙ הַכֹּ֣הֲנִ֔ים לְהַעֲל֖וֹת עַל־מִזְבַּ֥ח יְהוָֽה׃
22 ೨೨ ಹೋರಿಗಳನ್ನು ವಧಿಸಿದ ಮೇಲೆ ಯಾಜಕರು ಅವುಗಳ ರಕ್ತವನ್ನು ಕೂಡಿಸಿ ಯಜ್ಞವೇದಿಗೆ ಪ್ರೋಕ್ಷಿಸಿದರು. ಅನಂತರ ಟಗರುಗಳನ್ನು ವಧಿಸಿದ ಮೇಲೆ ಯಾಜಕರು, ರಕ್ತವನ್ನು ಕೂಡಿಸಿ ಯಜ್ಞವೇದಿಗೆ ಅನಂತರ ಟಗರುಗಳನ್ನು ವಧಿಸಿ ಅವುಗಳ ರಕ್ತವನ್ನು ಯಜ್ಞವೇದಿಗೆ ಪ್ರೋಕ್ಷಿಸಿದರು. ಆ ಮೇಲೆ ಕುರಿಮರಿಗಳನ್ನು ವಧಿಸಿ ಅವುಗಳ ರಕ್ತವನ್ನೂ ಯಜ್ಞವೇದಿಗೆ ಪ್ರೋಕ್ಷಿಸಿದರು.
וַֽיִּשְׁחֲטוּ֙ הַבָּקָ֔ר וַיְקַבְּל֤וּ הַכֹּֽהֲנִים֙ אֶת־הַדָּ֔ם וַֽיִּזְרְק֖וּ הַמִּזְבֵּ֑חָה וַיִּשְׁחֲט֣וּ הָאֵלִ֗ים וַיִּזְרְק֤וּ הַדָּם֙ הַמִּזְבֵּ֔חָה וַֽיִּשְׁחֲטוּ֙ הַכְּבָשִׂ֔ים וַיִּזְרְק֥וּ הַדָּ֖ם הַמִּזְבֵּֽחָה׃
23 ೨೩ ಕಡೆಯಲ್ಲಿ ದೋಷಪರಿಹಾರಕ ಯಜ್ಞಕ್ಕಾಗಿ ತಂದ ಹೋತಗಳನ್ನು ಅರಸನ ಮುಂದೆಯೂ ಮತ್ತು ಸಮೂಹದವರ ಮುಂದೆಯೂ ನಿಲ್ಲಿಸಿದರು. ಅವರು ಅವುಗಳ ಮೇಲೆ ತಮ್ಮ ಕೈಗಳನ್ನಿಟ್ಟರು.
וַיַּגִּ֙ישׁוּ֙ אֶת־שְׂעִירֵ֣י הַֽחַטָּ֔את לִפְנֵ֥י הַמֶּ֖לֶךְ וְהַקָּהָ֑ל וַיִּסְמְכ֥וּ יְדֵיהֶ֖ם עֲלֵיהֶֽם׃
24 ೨೪ ನಂತರ ಯಾಜಕರು ಅವುಗಳನ್ನು ವಧಿಸಿ ಅವುಗಳ ರಕ್ತವನ್ನು ಸಮಸ್ತ ಇಸ್ರಾಯೇಲರ ದೋಷ ಪರಿಹಾರಕ್ಕಾಗಿ ಯಜ್ಞವೇದಿಯ ಮೇಲೆ ಸುರಿದರು. ಆ ಸರ್ವಾಂಗಹೋಮಗಳೂ, ದೋಷಪರಿಹಾರಕ ಯಜ್ಞಗಳೂ ಎಲ್ಲಾ ಇಸ್ರಾಯೇಲರಿಗಾಗಿ ಇರಬೇಕೆಂದು ಅರಸನು ಆಜ್ಞಾಪಿಸಿದ್ದನು.
וַיִּשְׁחָטוּם֙ הַכֹּ֣הֲנִ֔ים וַֽיְחַטְּא֤וּ אֶת־דָּמָם֙ הַמִּזְבֵּ֔חָה לְכַפֵּ֖ר עַל־כָּל־יִשְׂרָאֵ֑ל כִּ֤י לְכָל־יִשְׂרָאֵל֙ אָמַ֣ר הַמֶּ֔לֶךְ הָעוֹלָ֖ה וְהַחַטָּֽאת׃
25 ೨೫ ಇದಲ್ಲದೆ, ಅವನು ತಾಳ, ಸ್ವರಮಂಡಲ, ಕಿನ್ನರಿ ಇವುಗಳಿಂದ ಭಜಿಸುವುದಕ್ಕೋಸ್ಕರ ಲೇವಿಯರನ್ನು, ದಾವೀದನ ರಾಜದರ್ಶಿಯಾದ ಗಾದ್ ಹಾಗು ಪ್ರವಾದಿಯಾದ ನಾತಾನ್ ಇವರ ಆಜ್ಞಾನುಸಾರವಾಗಿ ಯೆಹೋವನ ಆಲಯದಲ್ಲಿ ನಿಲ್ಲಿಸಿದನು. ಯೆಹೋವನು ತಾನೇ ಪ್ರವಾದಿಗಳ ಮುಖಾಂತರ ಹೀಗೆ ಆಜ್ಞಾಪಿಸಿದ್ದನು.
וַיַּֽעֲמֵ֨ד אֶת־הַלְוִיִּ֜ם בֵּ֣ית יְהוָ֗ה בִּמְצִלְתַּ֙יִם֙ בִּנְבָלִ֣ים וּבְכִנֹּר֔וֹת בְּמִצְוַ֥ת דָּוִ֛יד וְגָ֥ד חֹזֵֽה־הַמֶּ֖לֶךְ וְנָתָ֣ן הַנָּבִ֑יא כִּ֧י בְיַד־יְהוָ֛ה הַמִּצְוָ֖ה בְּיַד־נְבִיאָֽיו ׃ ס
26 ೨೬ ಆ ಲೇವಿಯರು ದಾವೀದನ ವಾದ್ಯಗಳನ್ನೂ, ಯಾಜಕರೂ ತುತ್ತೂರಿಗಳನ್ನೂ ಹಿಡಿದು ನಿಂತಿದ್ದರು.
וַיַּֽעַמְד֤וּ הַלְוִיִּם֙ בִּכְלֵ֣י דָוִ֔יד וְהַכֹּהֲנִ֖ים בַּחֲצֹצְרֽוֹת׃ ס
27 ೨೭ ಆಗ ಹಿಜ್ಕೀಯನು ಯಜ್ಞವೇದಿಯ ಮೇಲೆ ಸರ್ವಾಂಗಹೋಮವನ್ನು ಸಮರ್ಪಿಸುವುದಕ್ಕೆ ಆಜ್ಞಾಪಿಸಿದನು. ಹೀಗೆ ಸರ್ವಾಂಗಹೋಮ ಸಮರ್ಪಣೆ ಪ್ರಾರಂಭಿಸಿದೊಡನೆ ಇಸ್ರಾಯೇಲ್ ರಾಜನಾದ ದಾವೀದನ ವಾದ್ಯಗಳಿಂದ ಯೆಹೋವನನ್ನು ಭಜಿಸುವುದೂ, ತುತ್ತೂರಿ ಊದುವುದೂ ಆರಂಭವಾಯಿತು.
וַיֹּ֙אמֶר֙ חִזְקִיָּ֔הוּ לְהַעֲל֥וֹת הָעֹלָ֖ה לְהַמִּזְבֵּ֑חַ וּבְעֵ֞ת הֵחֵ֣ל הָֽעוֹלָ֗ה הֵחֵ֤ל שִׁיר־יְהוָה֙ וְהַחֲצֹ֣צְר֔וֹת וְעַ֨ל־יְדֵ֔י כְּלֵ֖י דָּוִ֥יד מֶֽלֶךְ־יִשְׂרָאֵֽל׃
28 ೨೮ ಸರ್ವಾಂಗಹೋಮ ಸಮರ್ಪಣೆಯು ಮುಗಿಯುವವರೆಗೆ ಸರ್ವಸಮೂಹದವರು ಸಾಷ್ಟಾಂಗ ನಮಸ್ಕಾರ ಮಾಡುತ್ತಲೂ, ಗಾಯಕರೂ ಗಾನಮಾಡುತ್ತಲೂ, ತುತ್ತೂರಿ ಊದುವವರು ತುತ್ತೂರಿ ಊದುತ್ತಲೂ ಇದ್ದರು.
וְכָל־הַקָּהָל֙ מִֽשְׁתַּחֲוִ֔ים וְהַשִּׁ֣יר מְשׁוֹרֵ֔ר וְהַחֲצֹצְר֖וֹת מחצצרים הַכֹּ֕ל עַ֖ד לִכְל֥וֹת הָעֹלָֽה׃
29 ೨೯ ಸರ್ವಾಂಗಹೋಮ ಸಮರ್ಪಣೆಯು ಮುಗಿದ ಮೇಲೆ ಅರಸನೂ ಅವನ ಜೊತೆಯಲ್ಲಿದ್ದವರೆಲ್ಲರೂ ಸಾಷ್ಟಾಂಗ ನಮಸ್ಕಾರ ಮಾಡಿದರು.
וּכְכַלּ֖וֹת לְהַעֲל֑וֹת כָּרְע֗וּ הַמֶּ֛לֶךְ וְכָֽל־הַנִּמְצְאִ֥ים אִתּ֖וֹ וַיִּֽשְׁתַּחֲוֽוּ׃
30 ೩೦ ಅರಸನಾದ ಹಿಜ್ಕೀಯನೂ, ಪ್ರಭುಗಳೂ ದಾವೀದನ ಮತ್ತು ದರ್ಶಿಯಾದ ಆಸಾಫನ ಕೀರ್ತನೆಗಳಿಂದ ಯೆಹೋವನನ್ನು ಸ್ತುತಿಸಬೇಕೆಂದು ಲೇವಿಯರಿಗೆ ಆಜ್ಞಾಪಿಸಲು, ಅವರು ಉತ್ಸಾಹದಿಂದ ಸ್ತುತಿಸುತ್ತಾ ತಲೆಬಾಗಿ ನಮಸ್ಕರಿಸಿದರು.
וַ֠יֹּאמֶר יְחִזְקִיָּ֨הוּ הַמֶּ֤לֶךְ וְהַשָּׂרִים֙ לַלְוִיִּ֔ם לְהַלֵּל֙ לַֽיהוָ֔ה בְּדִבְרֵ֥י דָוִ֖יד וְאָסָ֣ף הַחֹזֶ֑ה וַֽיְהַלְלוּ֙ עַד־לְשִׂמְחָ֔ה וַֽיִּקְּד֖וּ וַיִּֽשְׁתַּחֲוֽוּ׃ פ
31 ೩೧ ಆಮೇಲೆ ಹಿಜ್ಕೀಯನು ಸಮೂಹದವರಿಗೆ, “ನೀವು ಈಗ ಯೆಹೋವನಿಗೋಸ್ಕರ ನಿಮ್ಮನ್ನು ಪ್ರತಿಷ್ಠಿಸಿಕೊಂಡಿರುವಿಯಲ್ಲಾ; ಹತ್ತಿರ ಬಂದು ಯೆಹೋವನಿಗೆ ಸ್ತೋತ್ರಮಾಡಿ ಆತನ ಆಲಯಕ್ಕೋಸ್ಕರ ಸಮಾಧಾನ ಯಜ್ಞಗಳನ್ನೂ ಕೃತಜ್ಞತಾಯಜ್ಞಗಳನ್ನೂ ಸಮರ್ಪಿಸಿರಿ” ಎನ್ನಲು ಸಮೂಹದವರು ಸಮಾಧಾನಯಜ್ಞಗಳನ್ನೂ ಕೃತಜ್ಞತಾಯಜ್ಞಗಳನ್ನೂ ಸಮರ್ಪಿಸಿದ್ದಲ್ಲದೆ, ಅನೇಕರು ಸ್ವ ಇಚ್ಛೆಯಿಂದ ಸರ್ವಾಂಗಹೋಮಗಳನ್ನೂ ಸಮರ್ಪಿಸಿದರು.
וַיַּ֨עַן יְחִזְקִיָּ֜הוּ וַיֹּ֗אמֶר עַתָּ֨ה מִלֵּאתֶ֤ם יֶדְכֶם֙ לַיהוָ֔ה גֹּ֧שׁוּ וְהָבִ֛יאוּ זְבָחִ֥ים וְתוֹד֖וֹת לְבֵ֣ית יְהוָ֑ה וַיָּבִ֤יאוּ הַקָּהָל֙ זְבָחִ֣ים וְתוֹד֔וֹת וְכָל־נְדִ֥יב לֵ֖ב עֹלֽוֹת׃
32 ೩೨ ಸಮೂಹದವರು ಸರ್ವಾಂಗಹೋಮಕ್ಕೋಸ್ಕರ ತಂದೊಪ್ಪಿಸಿದ ಹೋರಿಗಳು ಎಪ್ಪತ್ತು, ಟಗರುಗಳು ನೂರು, ಕುರಿಮರಿಗಳು ಇನ್ನೂರು. ಇವೆಲ್ಲವು ಯೆಹೋವನಿಗೆ ಸರ್ವಾಂಗಹೋಮ ಸಮರ್ಪಣೆಗಾಗಿಯೇ ಮೀಸಲಾದವು.
וַיְהִ֞י מִסְפַּ֣ר הָעֹלָה֮ אֲשֶׁ֣ר הֵבִ֣יאוּ הַקָּהָל֒ בָּקָ֣ר שִׁבְעִ֔ים אֵילִ֥ים מֵאָ֖ה כְּבָשִׂ֣ים מָאתָ֑יִם לְעֹלָ֥ה לַיהוָ֖ה כָּל־אֵֽלֶּה׃
33 ೩೩ ದೇವರಿಗೆ ಕಾಣಿಕೆಯಾಗಿ ಕೊಡಲ್ಪಟ್ಟ ಹಿಂಡುಗಳಲ್ಲಿ ಹೋರಿಗಳು ಆರುನೂರು, ಕುರಿಗಳು ಮೂರು ಸಾವಿರ.
וְֽהַקֳּדָשִׁ֑ים בָּקָר֙ שֵׁ֣שׁ מֵא֔וֹת וְצֹ֖אן שְׁלֹ֥שֶׁת אֲלָפִֽים׃
34 ೩೪ ಯಾಜಕರು ಕೆಲವು ಮಂದಿಯಾದುದ್ದರಿಂದ ಸರ್ವಾಂಗಹೋಮದ ಪ್ರಾಣಿಗಳ ಚರ್ಮವನ್ನು ಸುಲಿಯುವುದು ಅವರಿಂದ ಆಗದೆ ಹೋಯಿತು. ಆದುದರಿಂದ ಮಿಕ್ಕ ಯಾಜಕರೂ ತಮ್ಮನ್ನು ಶುದ್ಧಿಪಡಿಸಿಕೊಳ್ಳುವವರೆಗೂ ಆ ಕೆಲಸವು ಮುಗಿಯುವ ತನಕ, ಅವರ ಬಂಧುಗಳಾದ ಲೇವಿಯರು ಅವರಿಗೆ ಸಹಾಯಮಾಡುತ್ತಿದ್ದರು. ತಮ್ಮನ್ನು ಶುದ್ಧಿಪಡಿಸಿಕೊಳ್ಳುವುದರಲ್ಲಿ ಯಾಜಕರಿಗಿಂತ ಲೇವಿಯರೇ ಹೆಚ್ಚು ಶ್ರದ್ಧೆಯುಳ್ಳವರಾಗಿದ್ದರು.
רַ֤ק הַכֹּֽהֲנִים֙ הָי֣וּ לִמְעָ֔ט וְלֹ֣א יָֽכְל֔וּ לְהַפְשִׁ֖יט אֶת־כָּל־הָעֹל֑וֹת וַֽיְּחַזְּק֞וּם אֲחֵיהֶ֣ם הַלְוִיִּ֗ם עַד־כְּל֤וֹת הַמְּלָאכָה֙ וְעַ֣ד יִתְקַדְּשׁ֣וּ הַכֹּֽהֲנִ֔ים כִּ֤י הַלְוִיִּם֙ יִשְׁרֵ֣י לֵבָ֔ב לְהִתְקַדֵּ֖שׁ מֵֽהַכֹּהֲנִֽים׃
35 ೩೫ ಇದಲ್ಲದೆ ಯಾಜಕರೂ ಯೆಹೋವನಿಗೆ ಸಮರ್ಪಿಸಬೇಕಾಗಿದ್ದ ಸರ್ವಾಂಗಹೋಮ, ಸಮಾಧಾನ ಯಜ್ಞಗಳ ಕೊಬ್ಬು ಹಾಗು ಸರ್ವಾಂಗಹೋಮ ಸಂಬಂಧವಾದ ಪಾನದ್ರವ್ಯ ಇವು ಅಪಾರವಾಗಿದ್ದವು.
וְגַם־עֹלָ֨ה לָרֹ֜ב בְּחֶלְבֵ֧י הַשְּׁלָמִ֛ים וּבַנְּסָכִ֖ים לָעֹלָ֑ה וַתִּכּ֖וֹן עֲבוֹדַ֥ת בֵּית־יְהוָֽה׃
36 ೩೬ ಹೀಗೆ ಯೆಹೋವನ ಆಲಯದ ಸೇವಾಕ್ರಮವು ಪುನಃ ಸ್ಥಾಪಿತವಾಯಿತು. ದೇವರು ತಾನೇ ತನ್ನ ಪ್ರಜೆಗಳಿಗಾಗಿ ಈ ಕಾರ್ಯವನ್ನು ನೆರವೇರಿಸಿದ್ದರಿಂದ, ಹಿಜ್ಕೀಯನೂ ಮತ್ತು ಎಲ್ಲಾ ಜನರೂ ಸಂತೋಷಿಸಿದರು.
וַיִּשְׂמַ֤ח יְחִזְקִיָּ֙הוּ֙ וְכָל־הָעָ֔ם עַ֛ל הַהֵכִ֥ין הָאֱלֹהִ֖ים לָעָ֑ם כִּ֥י בְּפִתְאֹ֖ם הָיָ֥ה הַדָּבָֽר׃ פ

< ಪೂರ್ವಕಾಲವೃತ್ತಾಂತ ದ್ವಿತೀಯ ಭಾಗ 29 >