< ಅರಸುಗಳು - ದ್ವಿತೀಯ ಭಾಗ 4 >

1 ಒಂದು ದಿನ ಪ್ರವಾದಿ ಮಂಡಳಿಯಲ್ಲಿನ ಒಬ್ಬನ ಹೆಂಡತಿಯು ಎಲೀಷನ ಹತ್ತಿರ ಬಂದು ಅವನಿಗೆ, “ನಿನ್ನ ಸೇವಕನಾದ ನನ್ನ ಗಂಡನು ಮರಣಹೊಂದಿದನು. ಅವನು ಯೆಹೋವನಲ್ಲಿ ಭಯಭಕ್ತಿಯುಳ್ಳವನಾಗಿದ್ದನು ಎಂಬುದು ನಿನಗೆ ಗೊತ್ತಿದೆಯಲ್ಲಾ. ಸಾಲಕೊಟ್ಟವನು, ನನ್ನ ಇಬ್ಬರು ಮಕ್ಕಳನ್ನು ದಾಸರನ್ನಾಗಿ ಕರೆದುಕೊಂಡು ಹೋಗುವುದಕ್ಕೆ ಬಂದಿದ್ದಾನೆ” ಎಂದು ಮೊರೆಯಿಟ್ಟಳು.
А једна између жена синова пророчких повика к Јелисију говорећи: Слуга твој, муж мој, умре, и ти знаш да се слуга твој бојао Господа: па сада дође рукодавалац да ми узме два сина у робље.
2 ಎಲೀಷನು ಆಕೆಗೆ, “ನಾನು ನಿನಗೇನು ಮಾಡಬೇಕೆನ್ನುತ್ತೀ? ನಿನ್ನ ಮನೆಯಲ್ಲಿ ಏನಿರುತ್ತದೆ? ಹೇಳು ಎಂದನು.” ಅದಕ್ಕೆ ಆಕೆಯು, “ನಿನ್ನ ದಾಸಿಯ ಮನೆಯಲ್ಲಿ ಒಂದು ಮೊಗೆ ಎಣ್ಣೆ ಹೊರತಾಗಿ ಏನೂ ಇಲ್ಲ” ಎಂದು ಉತ್ತರ ಕೊಟ್ಟಳು.
А Јелисије јој рече: Шта ћу ти? Кажи ми шта имаш у кући? А она рече: Слушкиња твоја нема у кући ништа до судић уља.
3 ಆಗ ಎಲೀಷನು ಆಕೆಗೆ, “ಹೋಗಿ, ನಿನ್ನ ನೆರೆಯವರಿಂದ ಸಿಕ್ಕುವಷ್ಟು ಬರಿದಾದ ಪಾತ್ರೆಗಳನ್ನು ಕೇಳಿ ತೆಗೆದುಕೊಂಡು ಬಾ.
А он јој рече: Иди, ишти у наруч празних судова у свих суседа својих, немој мало да иштеш.
4 ಅನಂತರ, ನೀನು, ನಿನ್ನ ಮಕ್ಕಳನ್ನು ಒಳಗೆ ಕರೆದುಕೊಂಡು ಬಾಗಿಲನ್ನು ಮುಚ್ಚಿ, ಎಣ್ಣೆಯನ್ನು ಪಾತ್ರೆಗಳಲ್ಲಿ ಹೊಯ್ದು ತುಂಬಿದವುಗಳನ್ನೆಲ್ಲಾ ಒಂದು ಕಡೆಯಿಡು” ಎಂದು ಹೇಳಿದನು.
Па отиди, и затвори се у кућу са синовима својим, па онда наливај у све судове, и кад се који напуни, кажи нека уклоне.
5 ಆಕೆಯು ಹೋಗಿ ಮಕ್ಕಳನ್ನು ಒಳಗೆ ಕರೆದುಕೊಂಡು, ಬಾಗಿಲನ್ನು ಮುಚ್ಚಿ, ಅವರು ಮುಂದಿಟ್ಟ ಪಾತ್ರೆಗಳಲ್ಲೆಲ್ಲಾ ಎಣ್ಣೆ ಹೊಯ್ದಳು.
И она отиде од њега, и затвори се у кућу са синовима својим; они јој додаваху а она наливаше.
6 ಪಾತ್ರೆಗಳೆಲ್ಲಾ ತುಂಬಿದಾಗ ಆಕೆಯು ಮಗನಿಗೆ, “ಇನ್ನೊಂದು ಪಾತ್ರೆಯನ್ನು ತಂದಿಡು” ಎನ್ನಲು ಅವನು, “ಪಾತ್ರೆಗಳೆಲ್ಲ ಮುಗಿದು ಹೋದವು” ಎಂದು ಉತ್ತರಕೊಟ್ಟನು. ಕೂಡಲೇ ಎಣ್ಣೆ ಉಕ್ಕುವುದು ನಿಂತುಹೋಯಿತು.
А кад се судови напунише, она рече сину свом: Дај још један суд. А он јој рече: Нема више. Тада стаде уље.
7 ತರುವಾಯ ಆಕೆಯು ದೇವರ ಮನುಷ್ಯನ ಹತ್ತಿರ ಬಂದು ನಡೆದದ್ದನ್ನೆಲ್ಲಾ ತಿಳಿಸಿದಳು. ಅವನು ಆಕೆಗೆ, “ಹೋಗಿ, ಎಣ್ಣೆಯನ್ನು ಮಾರಿ ಸಾಲತೀರಿಸು. ಉಳಿದ ಹಣದಿಂದ ನೀನೂ, ನಿನ್ನ ಮಕ್ಕಳು ಜೀವನಮಾಡಿರಿ” ಎಂದನು.
Потом она отиде и каза човеку Божијем; а он јој рече: Иди, продај уље, и одужи се; а шта претече, оним се храни са својим синовима.
8 ಒಂದು ಸಾರಿ ಎಲೀಷನು ಶೂನೇಮಿಗೆ ಹೋದನು. ಅಲ್ಲಿ ಒಬ್ಬ ಕುಲೀನ ಸ್ತ್ರೀಯು ಅವನನ್ನು ತನ್ನ ಮನೆಯಲ್ಲಿ ಊಟಮಾಡಬೇಕೆಂದು ಒತ್ತಾಯಪಡಿಸಿದಳು. ಅಂದಿನಿಂದ ಅವನು ಆ ಮಾರ್ಗದಿಂದ ಹೋಗುವಾಗೆಲ್ಲಾ ಆ ಮನೆಯಲ್ಲೇ ಊಟಮಾಡುತ್ತಿದ್ದನು.
После тога једном иђаше Јелисије кроз Сунам, а онде беше богата жена, која га устави да једе хлеба; и отада кад год пролажаше, навраћаше се к њој да једе хлеба.
9 ಆ ಸ್ತ್ರೀಯು ತನ್ನ ಗಂಡನಿಗೆ, “ಯಾವಾಗಲೂ ಈ ದಾರಿಯಲ್ಲಿ ಹೋಗುತ್ತಾ ಬರುತ್ತಾ ಇರುವ ಆ ಮನುಷ್ಯನು ಪರಿಶುದ್ಧನೂ, ದೇವರ ಮನುಷ್ಯನೂ ಆಗಿರುತ್ತಾನೆ ಎಂದು ನನಗೆ ಗೊತ್ತಾಯಿತು.
И она рече мужу свом: Гле, видим да је свет човек Божји овај што све пролази овуда.
10 ೧೦ ಆದುದರಿಂದ ನಾವು ಅವನಿಗಾಗಿ ಮಾಳಿಗೆಯ ಮೇಲೆ ಒಂದು ಸಣ್ಣ ಕೋಣೆಯನ್ನು ಕಟ್ಟಿಸಿ ಅದರಲ್ಲಿ ಒಂದು ಮಂಚ, ಮೇಜು, ಕುರ್ಚಿ, ದೀಪಸ್ತಂಭ ಇವುಗಳನ್ನು ಇಡೋಣ. ಅವನು ಇಲ್ಲಿ ಬಂದಾಗಲೆಲ್ಲಾ ಅದರಲ್ಲಿ ಹೋಗಿ ಉಳಿದುಕೊಳ್ಳಲಿ” ಎಂದು ಹೇಳಿದಳು.
Да начинимо малу клет, и да му наместимо постељу и сто и столицу и свећњак, па кад дође к нама, нека се ту склони.
11 ೧೧ ಒಂದು ದಿನ ಎಲೀಷನು ಅಲ್ಲಿಗೆ ಬಂದು ಆ ಕೋಣೆಯೊಳಗೆ ಪ್ರವೇಶಿಸಿ ದಣಿವಾರಿಸಿಕೊಂಡನು.
Потом он дође једном онамо, и ушавши у клет почину онде.
12 ೧೨ ಅನಂತರ, “ಆ ಶೂನೇಮ್ಯಳನ್ನು ಕರೆಯಿರಿ” ಎಂದು ತನ್ನ ಸೇವಕನಾದ ಗೇಹಜಿಗೆ ಆಜ್ಞಾಪಿಸಿದನು. ಅವನು ಹೋಗಿ ಆಕೆಯನ್ನು ಕರೆಯಲು, ಆಕೆಯು ಬಂದು ಅವನ ಮುಂದೆ ನಿಂತಳು.
И рече момку свом Гијезију: Зови Сунамку. Он је дозва; и она стаде пред њим.
13 ೧೩ ಆಗ ಎಲೀಷನು ಗೇಹಜಿಗೆ “ನೀನು ಆಕೆಗೆ ಹೇಳು, ‘ನೀನು ಕಷ್ಟಪಟ್ಟು ನಮಗೆ ಇಷ್ಟೆಲ್ಲಾ ಉಪಕಾರ ಮಾಡಿರುವೆ ನಾನು ನಿನಗೆ ಯಾವ ಪ್ರತ್ಯುಪಕಾರ ಮಾಡಲಿ? ನಿನಗೋಸ್ಕರ ಅರಸನ ಬಳಿ ಅಥವಾ ಸೇನಾಧಿಪತಿಯ ಬಳಿಯಾಗಲಿ ಮಾತನಾಡಬೇಕೋ’ ಎಂದು ಕೇಳಲು” ಆಕೆಯು, “ನಾನು ಸ್ವಕುಲದವರ ಮಧ್ಯದಲ್ಲಿ ವಾಸವಾಗಿದ್ದೇನೆ” ಎಂದು ಉತ್ತರಕೊಟ್ಟಳು.
И он рече Гијезију: Кажи јој: Ето стараш се за нас свакојако; шта хоћеш да ти учиним? Имаш ли шта да говорим цару или војводи? А она рече: Ја живим сред свог народа.
14 ೧೪ ಆ ಮೇಲೆ ಎಲೀಷನು ಗೇಹಜಿಗೆ, “ನಾವು ಆಕೆಗೆ ಯಾವ ಉಪಕಾರವನ್ನು ಮಾಡಬಹುದು” ಎಂದು ಕೇಳಲು ಅವನು, “ಆಕೆಗೆ ಮಗನಿಲ್ಲ, ಗಂಡನು ಮುದುಕನಾಗಿದ್ದಾನೆ” ಎಂದನು.
А он рече: Шта бих јој дакле учинио? А Гијезије рече: Ето нема сина, а муж јој је стар.
15 ೧೫ ಇದನ್ನು ಕೇಳಿ ಎಲೀಷನು, “ಆ ಸ್ತ್ರೀಯನ್ನು ಕರೆ” ಎಂದು ಆಜ್ಞಾಪಿಸಿದನು. ಅವನು ಹೋಗಿ ಕರೆಯಲು, ಆಕೆಯು ಬಂದು ಬಾಗಿಲಿನ ಹತ್ತಿರ ನಿಂತಳು.
А он рече: Зови је. И он је дозва, и она стаде на вратима.
16 ೧೬ ಎಲೀಷನು ಆಕೆಗೆ, “ನೀನು ಬರುವ ವರ್ಷ, ಇದೇ ಕಾಲದಲ್ಲಿ, ಒಬ್ಬ ಮಗನನ್ನು ನಿನ್ನ ಮಡಿಲಲ್ಲಿ ಹೊಂದಿರುವಿ” ಎಂದು ಹೇಳಿದನು. ಅದಕ್ಕೆ ಆಕೆಯು, “ದೇವರ ಮನುಷ್ಯನೇ, ಒಡೆಯನೇ, ಹೀಗೆ ನಿನ್ನ ದಾಸಿಗೆ ಸುಳ್ಳನ್ನು ಹೇಳಬೇಡ” ಎಂದು ನುಡಿದಳು.
А он рече: До године у ово доба грлићеш сина. А она рече: Немој господару мој, човече Божји, немој варати слушкиње своје.
17 ೧೭ ಆದರೆ ಆ ಸ್ತ್ರೀಯು ಗರ್ಭಿಣಿಯಾಗಿ ಎಲೀಷನು ಹೇಳಿದಂತೆ, ಮುಂದಿನ ವರ್ಷ ಅದೇ ಕಾಲದಲ್ಲಿ, ಒಬ್ಬ ಮಗನನ್ನು ಹೆತ್ತಳು.
И затрудне жена, и роди сина друге године у исто доба, као што јој рече Јелисије.
18 ೧೮ ಹುಡುಗನು ದೊಡ್ಡವನಾದ ಮೇಲೆ ಒಂದು ದಿನ, ಹೊಲದಲ್ಲಿ ಬೆಳೆ ಕೊಯ್ಯುವವರ ಸಂಗಡ ಇದ್ದ ತನ್ನ ತಂದೆಯ ಬಳಿಗೆ ಹೋದನು.
И дете одрасте. И једном изађе к оцу свом к жетеоцима;
19 ೧೯ ಅಲ್ಲಿದ್ದಾಗ ಅವನು ಪಕ್ಕನೆ, “ಅಪ್ಪಾ, ನನ್ನ ತಲೆ, ನನ್ನ ತಲೆ” ಎಂದು ಕೂಗಲು, ತಂದೆಯು ಒಬ್ಬ ಸೇವಕನನ್ನು ಕರೆದು ಅವನಿಗೆ, “ಇವನನ್ನು ತಾಯಿಯ ಹತ್ತಿರ ಕರೆದುಕೊಂಡು ಹೋಗು” ಎಂದು ಆಜ್ಞಾಪಿಸಿದನು.
И рече оцу свом: Јаох глава, јаох глава! А он рече момку: Носи га матери.
20 ೨೦ ಸೇವಕನು ಹುಡುಗನನ್ನು ಅವನ ತಾಯಿಗೆ ತಂದು ಒಪ್ಪಿಸಿದನು. ಹುಡುಗನು ಮಧ್ಯಾಹ್ನದವರೆಗೂ ತಾಯಿಯ ತೊಡೆಯ ಮೇಲೆಯೇ ಇದ್ದು ಅನಂತರ ಸತ್ತನು.
И он га узе и однесе матери његовој, и лежа на крилу њеном до подне, па умре.
21 ೨೧ ಕೂಡಲೆ ಆಕೆಯು ಅವನನ್ನು ದೇವರ ಮನುಷ್ಯನ ಕೋಣೆಗೆ ತೆಗೆದುಕೊಂಡು ಹೋಗಿ ಅವನ ಮಂಚದ ಮೇಲೆ ಮಗನನ್ನು ಮಲಗಿಸಿ ಬಾಗಿಲು ಮುಚ್ಚಿದಳು.
Тада отиде она горе, и намести га у постељу човека Божјег, и затворивши га изађе.
22 ೨೨ ಗಂಡನನ್ನು ಕರೆಯಿಸಿ ಅವನಿಗೆ, “ದಯವಿಟ್ಟು, ನನಗೋಸ್ಕರ ಒಬ್ಬ ಸೇವಕನನ್ನೂ, ಒಂದು ಕತ್ತೆಯನ್ನೂ ಕಳುಹಿಸು. ನಾನು ಬೇಗನೆ ದೇವರ ಮನುಷ್ಯನ ಬಳಿಗೆ ಹೋಗಿಬರುತ್ತೇನೆ” ಎಂದು ಹೇಳಿದಳು.
Потом викну мужа свог и рече му: Пошљи ми једног момка и једну магарицу да отрчим до човека Божјег и да се вратим.
23 ೨೩ ಅದಕ್ಕೆ ಅವನು, “ಇದು ಅಮಾವಾಸ್ಯೆಯಲ್ಲ, ಸಬ್ಬತ್ತಲ್ಲ. ಈ ಹೊತ್ತು ಯಾಕೆ ಹೋಗುತ್ತೀ?” ಎಂದನು. ಅದಕ್ಕೆ ಆಕೆಯು, “ಎಲ್ಲವು ಸರಿಯೇ” ಎಂದು ಹೇಳಿದಳು.
А он рече: Зашто данас хоћеш да идеш к њему? Нити је младина ни субота. А она рече: Не брини се.
24 ೨೪ ನಂತರ ಆಕೆಯು ಕತ್ತೆಗೆ ತಡಿ ಹಾಕಿಸಿ, ಅದರ ಮೇಲೆ ಕುಳಿತುಕೊಂಡು ಸೇವಕನಿಗೆ, “ಬೇಗ ಓಡಿಸು, ನಾನು ಅಪ್ಪಣೆಕೊಡುವವರೆಗೆ ನಿಲ್ಲಿಸಬೇಡ” ಎಂದು ಆಜ್ಞಾಪಿಸಿದಳು.
И она осамаривши магарицу рече момку свом: Води и иди и немој застајати мене ради на путу докле ти не кажем.
25 ೨೫ ಹೀಗೆ ಆಕೆಯು ಪ್ರಯಾಣ ಮಾಡಿ ಕರ್ಮೆಲ್ ಬೆಟ್ಟದ ಮೇಲಿದ್ದ ದೇವರ ಮನುಷ್ಯನ ಬಳಿಗೆ ಬಂದಳು. ದೇವರ ಮನುಷ್ಯನು ಆಕೆಯನ್ನು ದೂರದಿಂದಲೇ ಕಂಡು ತನ್ನ ಸೇವಕನಾದ ಗೇಹಜಿಗೆ, “ಅಗೋ, ಅಲ್ಲಿ ಶೂನೇಮ್ಯಳು ಬರುತ್ತಿದ್ದಾಳೆ”
Тако пошавши дође човеку Божјем на гору кармилску. А кад је човек Божји угледа где иде к њему, рече Гијезију слузи свом: Ево Сунамке.
26 ೨೬ ನೀನು, ದಯವಿಟ್ಟು ಓಡಿಹೋಗಿ ಆಕೆಯನ್ನು ಎದುರುಗೊಂಡು, “ನಿನಗೂ, ನಿನ್ನ ಗಂಡನಿಗೂ, ಮಗನಿಗೂ ಕ್ಷೇಮವೋ?” ಎಂದು ವಿಚಾರಿಸು ಎಂಬುದಾಗಿ ಆಜ್ಞಾಪಿಸಿ ಕಳುಹಿಸಿದನು. ಆಕೆಯು ಆ ಸೇವಕನಿಗೆ, “ಕ್ಷೇಮ” ಎಂದು ಉತ್ತರ ಕೊಟ್ಟು,
Трчи сад пред њу и реци јој: Јеси ли здраво? Је ли здраво муж твој? Је ли здраво син твој? А она рече: Здраво смо.
27 ೨೭ ಬೆಟ್ಟದ ಮೇಲಿದ್ದ ದೇವರ ಮನುಷ್ಯನ ಬಳಿಗೆ ಬಂದು, ಅವನ ಪಾದಗಳನ್ನು ಹಿಡಿದಳು. ಗೇಹಜಿಯು ಆಕೆಯನ್ನು ದೂರ ಮಾಡುವುದಕ್ಕಾಗಿ ಹತ್ತಿರ ಬರಲು, ದೇವರ ಮನುಷ್ಯನು ಅವನಿಗೆ, “ಬಿಡು, ಆಕೆಯ ಮನಸ್ಸಿನಲ್ಲಿ ಬಹು ದುಃಖವಿರುವ ಹಾಗೆ ತೋರುತ್ತದೆ. ಯೆಹೋವನು ಆಕೆಯ ದುಃಖವನ್ನು ನನಗೆ ಪ್ರಕಟಿಸದೆ, ಮರೆಮಾಡಿದ್ದಾನೆ” ಎಂದು ಹೇಳಿದನು.
А кад дође к човеку Божјем на гору, загрли му ноге, а Гијезије приступи да је отера; али човек Божји рече: Остави је, јер јој је душа у јаду, а Господ сакри од мене и не јави ми.
28 ೨೮ ಆಕೆಯು ದೇವರ ಮನುಷ್ಯನಿಗೆ, “ನನಗೆ ಮಗನು ಬೇಕೆಂದು ಸ್ವಾಮಿಯಾದ ನಿನ್ನನ್ನು ನಾನು ಬೇಡಿಕೊಂಡೆನೇ? ‘ವಂಚಿಸಬಾರದೆಂದು’ ಮೊರೆಯಿಟ್ಟೆನಲ್ಲವೇ?” ಎಂದಳು.
А она рече: Јесам ли искала сина од господара свог? Нисам ли казала: Немој ме варати?
29 ೨೯ ಆಗ ಎಲೀಷನು ಗೇಹಜಿಗೆ, “ನೀನು ನಡುಕಟ್ಟಿಕೊಂಡು, ನನ್ನ ಕೋಲನ್ನು ತೆಗೆದುಕೊಂಡು ಹೋಗಿ ಹುಡುಗನ ಮುಖದ ಮೇಲಿಡು, ಹೋಗುವಾಗ ದಾರಿಯಲ್ಲಿ ಯಾರನ್ನೂ ವಂದಿಸಬೇಡ, ಯಾರ ಅವರ ವಂದನೆಯನ್ನು ಸ್ವೀಕರಿಸಬೇಡ” ಎಂದು ಹೇಳಿ ಕಳುಹಿಸಿದನು.
А он рече Гијезију: Опаши се и узми штап мој у руку, па иди; ако сретнеш кога, немој га поздрављати, и ако те ко поздрави, немој му одговарати, и метни мој штап на лице детету.
30 ೩೦ ಆದರೂ ಹುಡುಗನ ತಾಯಿ, “ಯೆಹೋವನಾಣೆ, ನಿನ್ನ ಜೀವದಾಣೆ, ನಾನು ನಿನ್ನನ್ನು ಬಿಟ್ಟುಹೋಗುವುದಿಲ್ಲ” ಎಂದು ಹೇಳಿದ್ದರಿಂದ ಎಲೀಷನು ಆಕೆಯ ಜೊತೆಯಲ್ಲಿ ಹೊರಟನು.
А мати детиња рече: Тако да је жив Господ и тако да је жива душа твоја, нећу те се оставити. Тада он уста и пође за њом.
31 ೩೧ ಅವರ ಮುಂದಾಗಿ ಹೋದ ಗೇಹಜಿಯು ಕೋಲನ್ನು ಹುಡುಗನ ಮುಖದ ಮೇಲಿಟ್ಟರೂ ಹುಡುಗನು ಮಾತನಾಡಲಿಲ್ಲ, ಎಚ್ಚರಗೊಳ್ಳಲೂ ಇಲ್ಲ. ಆದುದರಿಂದ ಅವನು ಹಿಂದಿರುಗಿ ಹೋಗಿ ಎಲೀಷನನ್ನು ಎದುರುಗೊಂಡು ಅವನಿಗೆ, “ಹುಡುಗನು ಎಚ್ಚರವಾಗಲಿಲ್ಲ” ಎಂದನು.
А Гијезије отиде напред и метну штап на лице детету, али не би гласа ни осећаја. Тада се врати преда њ, и јави му говорећи: Не пробуди се дете.
32 ೩೨ ಎಲೀಷನು ಆ ಮನೆಯನ್ನು ತಲುಪಿದಾಗ, ಸತ್ತ ಹುಡುಗನನ್ನು ತನ್ನ ಮಂಚದ ಮೇಲೆ ಮಲಗಿಸಿರುವುದನ್ನು ಕಂಡನು.
И Јелисије уђе у кућу, и гле, дете мртво лежи на његовој постељи.
33 ೩೩ ಎಲೀಷನು ಒಳಗೆ ಹೋಗಿ ಕೋಣೆಯ ಬಾಗಿಲನ್ನು ಮುಚ್ಚಿಕೊಂಡು ಯೆಹೋವನನ್ನು ಪ್ರಾರ್ಥಿಸಿದನು.
И ушавши затвори се с дететом, и помоли се Господу.
34 ೩೪ ಅನಂತರ ಹುಡುಗನ ಮೇಲೆ ಬೋರಲುಬಿದ್ದು ತನ್ನ ಬಾಯಿ, ಕಣ್ಣು, ಕೈಗಳನ್ನು ಅವನ ಬಾಯಿ, ಕಣ್ಣು, ಕೈಗಳಿಗೆ ಮುಟ್ಟಿಸಿದ್ದರಿಂದ ಹುಡುಗನ ದೇಹವು ಬೆಚ್ಚಗಾಯಿತು.
Потом стаде на постељу и леже на дете метнув уста своја на уста детету, и очи своје на очи његове, и дланове своје на његове дланове, и пружи се над њим, те се загреја тело детету.
35 ೩೫ ಆಮೇಲೆ ಹುಡುಗನನ್ನು ಬಿಟ್ಟು ಎದ್ದು ಮನೆಯಲ್ಲಿ ತುಸುಹೊತ್ತು ಅತ್ತಿತ್ತ ಅಡ್ಡಾಡಿ ತಿರುಗಿ ಅವನ ಮೇಲೆ ಬೋರಲು ಬೀಳಲು ಹುಡುಗನು ಏಳು ಸಾರಿ ಸೀನಿ ಕಣ್ದೆರೆದನು.
Потом уста, и пређе по кући једном тамо и једном амо, потом отиде опет и пружи се над дететом. И кихну дете седам пута, и отвори дете очи своје.
36 ೩೬ ಆಗ ಎಲೀಷನು ಗೇಹಜಿಗೆ, “ಶೂನೇಮ್ಯಳನ್ನು ಕರೆ” ಎಂದು ಆಜ್ಞಾಪಿಸಲು ಅವನು ಆಕೆಯನ್ನು ಕರೆದನು. ಆಕೆಯು ಬಂದಾಗ, ಎಲೀಷನು ಆಕೆಗೆ, “ನಿನ್ನ ಮಗನನ್ನು ತೆಗೆದುಕೋ” ಎಂದು ಹೇಳಿದನು.
Тада дозва Гијезија и рече му: Зови Сунамку. И он је дозва, те дође к њему. И он јој рече: Узми сина свог.
37 ೩೭ ಆಕೆಯು ಹತ್ತಿರ ಬಂದು, ಅವನ ಪಾದಗಳಿಗೆ ಬಿದ್ದು ಸಾಷ್ಟಾಂಗನಮಸ್ಕಾರ ಮಾಡಿ, ಮಗನನ್ನು ಕರೆದುಕೊಂಡು ಹೋದಳು.
И она ушавши паде к ногама његовим, и поклони му се до земље, и узевши сина свог отиде.
38 ೩೮ ಎಲೀಷನು ತಿರುಗಿ ಗಿಲ್ಗಾಲಿಗೆ ಹೋದನು. ಆಗ ದೇಶದಲ್ಲಿ ಬರವಿದ್ದಿತು. ಪ್ರವಾದಿಮಂಡಳಿಯವರು ತನ್ನ ಮುಂದೆ ಒಟ್ಟಿಗೆ ಸೇರಿ ಬರಲು ಅವನು ತನ್ನ ಸೇವಕನಿಗೆ, “ದೊಡ್ಡ ಪಾತ್ರೆಯನ್ನು ತೆಗೆದುಕೊಂಡು ಇವರಿಗೋಸ್ಕರ ಅಡಿಗೆ ಮಾಡು” ಎಂದು ಆಜ್ಞಾಪಿಸಿದನು.
Потом врати се Јелисије у Галгал. А беше глад у оној земљи, и синови пророчки сеђаху пред њим; а он рече момку свом: Пристави велики лонац и скувај зеља синовима пророчким.
39 ೩೯ ಒಬ್ಬನು ಯಾವುದಾದರೊಂದು ತರಕಾರಿ ಸಿಕ್ಕೀತೆಂದು ಕಾಡಿಗೆ ಹೋಗಿ ಅಲ್ಲಿ ಒಂದು ಕಾಡುಬಳ್ಳಿಯನ್ನು ಕಂಡು ಅದನ್ನು ಕಿತ್ತು ಉಡಿಯಲ್ಲಿ ತುಂಬಿಕೊಂಡು, ಅದರ ಕಾಯಿಗಳನ್ನು ಕಿತ್ತುಕೊಂಡು ಬಂದು ತುಂಡು ತುಂಡು ಮಾಡಿ ಆ ಪಾತ್ರೆಯೊಳಗೆ ಹಾಕಿದನು. ಅದು ಎಂಥ ಕಾಯಿಯೆಂಬುದು ಯಾರಿಗೂ ಗೊತ್ತಿರಲಿಲ್ಲ.
А један отиде у поље да набере зеља, и нађе дивљу лозу и набра с ње дивљих тиквица пун плашт, и дошавши сасече их у лонац где беше зеље, јер их не познаваху.
40 ೪೦ ಜನರಿಗೆ ಅದನ್ನೇ ಊಟಕ್ಕೆ ಬಡಿಸಿದರು. ಅವರು ಅದನ್ನು ಬಾಯೊಳಗೆ ಹಾಕಿದ ಕೂಡಲೆ ತಿನ್ನಲಾರದೆ, “ದೇವರ ಮನುಷ್ಯನೇ ಪಾತ್ರೆಯಲ್ಲಿ ವಿಷ” ಎಂದು ಕೂಗಿದರು. ಅದನ್ನು ತಿನ್ನಲಾರದೆ ಹೋದರು.
И усуше људима да једу; а кад стадоше јести оног зеља, повикаше говорећи: Смрт је у лонцу, човече Божји! И не могаху јести.
41 ೪೧ ಆಗ ಎಲೀಷನು, “ಹಿಟ್ಟನ್ನು ತಂದು ಕೊಡಿರಿ” ಎಂದು ಹೇಳಿದನು. ಅವರು ತಂದಾಗ, ಅದನ್ನು ಆ ಪಾತ್ರೆಯೊಳಗೆ ಹಾಕಿ, “ಈಗ ಇದನ್ನು ಬಡಿಸಬಹುದು. ಜನರು ಇದನ್ನು ಊಟಮಾಡಲಿ” ಎಂದನು. ಕೂಡಲೇ ಪಾತ್ರೆಯಲ್ಲಿದ್ದ ವಿಷವೆಲ್ಲಾ ಹೋಯಿತು.
А он рече: Донесите брашна. И сасу брашно у лонац, и рече: Успи људима нека једу. И не би више никаквог зла у лонцу.
42 ೪೨ ಒಂದು ದಿನ ಬಾಳ್ ಷಾಲಿಷಾ ಊರಿನ ಒಬ್ಬ ಮನುಷ್ಯನು ಇಪ್ಪತ್ತು ಜವೆಗೋದಿಯ ರೊಟ್ಟಿಗಳನ್ನೂ, ಒಂದು ಚೀಲದ ತುಂಬಾ ಹಸೀ ತೆನೆಗಳನ್ನೂ, ಪ್ರಥಮಫಲದ ಕಾಣಿಕೆಯಾಗಿ ತೆಗೆದುಕೊಂಡು ಬಂದು ದೇವರ ಮನುಷ್ಯನಿಗೆ ಸಮರ್ಪಿಸಿದನು. ಎಲೀಷನು ತನ್ನ ಸೇವಕನಿಗೆ, “ಇದನ್ನು ಜನರಿಗೆ ಕೊಡು ಅವರು ಊಟಮಾಡಲಿ” ಎಂದು ಹೇಳಿದನು.
А дође неко из Вал-Салисе, и донесе човеку Божјем хлеба од првина, двадесет хлебова јечмених, и нових зрна у класу. А он рече: Постави народу, нека једу.
43 ೪೩ ಅದಕ್ಕೆ ಅವನು, “ಇಷ್ಟನ್ನು ನೂರು ಮಂದಿಗೆ ಹೇಗೆ ಬಡಿಸಲಿ” ಎಂದನು. ಎಲೀಷನು ಅವನಿಗೆ, “ಇರಲಿ, ಕೊಡು. ಅವರು ಊಟಮಾಡಲಿ. ಅವರು ಅದನ್ನು ಊಟಮಾಡಿ ತೃಪ್ತರಾಗಿ ಇನ್ನೂ ಉಳಿಸಿಕೊಳ್ಳುವರೆಂದು ಯೆಹೋವನು ಎನ್ನುತ್ತಾನೆ” ಎಂದು ಹೇಳಿದನು.
А слуга му рече: Како ћу то поставити пред сто људи? Опет рече: Постави народу, нека једу; јер је тако казао Господ: Јешће, и претећи ће.
44 ೪೪ ಸೇವಕರು ಬಡಿಸಲು, ಯೆಹೋವನ ಮಾತಿನಂತೆ ಜನರು ಊಟಮಾಡಿ, ತೃಪ್ತರಾಗಿ, ಇನ್ನೂ ಉಳಿಸಿಕೊಂಡರು.
А он им постави, те једоше; и претече по речи Господњој.

< ಅರಸುಗಳು - ದ್ವಿತೀಯ ಭಾಗ 4 >