< ಅರಸುಗಳು - ದ್ವಿತೀಯ ಭಾಗ 8 >

1 ಎಲೀಷನು ತಾನು ಬದುಕಿಸಿದ ಹುಡುಗನ ತಾಯಿಗೆ, “ಯೆಹೋವನು ಈ ದೇಶಕ್ಕೆ ಏಳು ವರ್ಷಗಳ ಕಾಲ ಕ್ಷಾಮವನ್ನು ಬರಮಾಡುವುದಕ್ಕಿದ್ದಾನೆ. ಆದುದರಿಂದ ನೀನು ನಿನ್ನ ಮನೆಯವರೊಡನೆ ಯಾವುದಾದರೊಂದು ಪರದೇಶಕ್ಕೆ ಹೋಗಿ ಅಲ್ಲಿ ವಾಸಿಸು” ಎಂದು ಹೇಳಿದನು.
וֶאֱלִישָׁ֡ע דִּבֶּ֣ר אֶל־הָאִשָּׁה֩ אֲשֶׁר־הֶחֱיָ֨ה אֶת־בְּנָ֜הּ לֵאמֹ֗ר ק֤וּמִי וּלְכִי֙ אתי וּבֵיתֵ֔ךְ וְג֖וּרִי בַּאֲשֶׁ֣ר תָּג֑וּרִי כִּֽי־קָרָ֤א יְהוָה֙ לָֽרָעָ֔ב וְגַם־בָּ֥א אֶל־הָאָ֖רֶץ שֶׁ֥בַע שָׁנִֽים׃
2 ಆಕೆಯು ದೇವರ ಮನುಷ್ಯನ ಅಪ್ಪಣೆಯಂತೆ ತನ್ನ ಮನೆಯವರೊಡನೆ ಸ್ವದೇಶವನ್ನು ಬಿಟ್ಟು ಹೋಗಿ ಫಿಲಿಷ್ಟಿಯರ ದೇಶದಲ್ಲಿ ಏಳು ವರ್ಷ ವಾಸವಾಗಿದ್ದಳು.
וַתָּ֙קָם֙ הָֽאִשָּׁ֔ה וַתַּ֕עַשׂ כִּדְבַ֖ר אִ֣ישׁ הָאֱלֹהִ֑ים וַתֵּ֤לֶךְ הִיא֙ וּבֵיתָ֔הּ וַתָּ֥גָר בְּאֶֽרֶץ־פְּלִשְׁתִּ֖ים שֶׁ֥בַע שָׁנִֽים׃
3 ಏಳು ವರ್ಷಗಳಾದ ನಂತರ ಆಕೆಯು ಫಿಲಿಷ್ಟಿಯರ ದೇಶದಿಂದ ಸ್ವದೇಶಕ್ಕೆ ಬಂದು, ಪರಾಧೀನವಾಗಿದ್ದ ತನ್ನ ಹೊಲಮನೆಗಳಿಗಾಗಿ ಮೊರೆಯಿಡುವುದಕ್ಕೋಸ್ಕರ ಅರಸನ ಬಳಿಗೆ ಹೋದಳು.
וַיְהִ֗י מִקְצֵה֙ שֶׁ֣בַע שָׁנִ֔ים וַתָּ֥שָׁב הָאִשָּׁ֖ה מֵאֶ֣רֶץ פְּלִשְׁתִּ֑ים וַתֵּצֵא֙ לִצְעֹ֣ק אֶל־הַמֶּ֔לֶךְ אֶל־בֵּיתָ֖הּ וְאֶל־שָׂדָֽהּ׃
4 ಆ ಸಮಯದಲ್ಲಿ ಅರಸನು ದೇವರ ಮನುಷ್ಯನ ಸೇವಕನಾದ ಗೇಹಜಿಯೊಂದಿಗೆ ಮಾತನಾಡುತ್ತಾ, “ಎಲೀಷನು ಮಾಡಿದ ಎಲ್ಲಾ ಮಹತ್ಕಾರ್ಯಗಳನ್ನು ನನಗೆ ವಿವರಿಸು” ಎಂದು ಆಜ್ಞಾಪಿಸಿದ್ದನು.
וְהַמֶּ֗לֶךְ מְדַבֵּר֙ אֶל־גֵּ֣חֲזִ֔י נַ֥עַר אִישׁ־הָאֱלֹהִ֖ים לֵאמֹ֑ר סַפְּרָה־נָּ֣א לִ֔י אֵ֥ת כָּל־הַגְּדֹל֖וֹת אֲשֶׁר־עָשָׂ֥ה אֱלִישָֽׁע׃
5 ಎಲೀಷನು ಸತ್ತ ಹುಡುಗನಿಗೆ ಜೀವದಾನಮಾಡಿದ ಸಂಗತಿಯನ್ನು ಗೇಹಜಿಯು ಅರಸನಿಗೆ ವಿವರಿಸುತ್ತಿರುವಾಗಲೇ ಜೀವದಾನಹೊಂದಿದ ಹುಡುಗನ ತಾಯಿಯು ತನ್ನ ಹೊಲಮನೆಗಳಿಗಾಗಿ ಮೊರೆಯಿಡುವುದಕ್ಕೋಸ್ಕರ ಅರಸನ ಬಳಿಗೆ ಬಂದಳು. ಕೂಡಲೇ ಗೇಹಜಿಯು, “ನನ್ನ ಒಡೆಯನೇ, ಎಲೀಷನು ಬದುಕಿಸಿದ ಹುಡುಗನು ಇವನೇ; ಈಕೆಯು ಇವನ ತಾಯಿ” ಎಂದು ಹೇಳಿದನು.
וַ֠יְהִי ה֥וּא מְסַפֵּ֣ר לַמֶּלֶךְ֮ אֵ֣ת אֲשֶׁר־הֶחֱיָ֣ה אֶת־הַמֵּת֒ וְהִנֵּ֨ה הָאִשָּׁ֜ה אֲשֶׁר־הֶחֱיָ֤ה אֶת־בְּנָהּ֙ צֹעֶ֣קֶת אֶל־הַמֶּ֔לֶךְ עַל־בֵּיתָ֖הּ וְעַל־שָׂדָ֑הּ וַיֹּ֤אמֶר גֵּֽחֲזִי֙ אֲדֹנִ֣י הַמֶּ֔לֶךְ זֹ֚את הָֽאִשָּׁ֔ה וְזֶה־בְּנָ֖הּ אֲשֶׁר־הֶחֱיָ֥ה אֱלִישָֽׁע׃
6 ಅರಸನು ಈ ವಿಷಯವಾಗಿ ಆ ಸ್ತ್ರೀಯನ್ನು ವಿಚಾರಿಸಲು ಆಕೆಯು ಅದರಂತೆಯೇ ಎಲೀಷನಿಂದಾದ ದೇವರ ಮಹಿಮೆಯ ವಿಷಯವನ್ನು ವಿವರವಾಗಿ ತಿಳಿಸಿದಳು. ಆಗ ಅರಸನು ಒಬ್ಬ ಕಂಚುಕಿಯನ್ನು ಕರೆದು ಅವನಿಗೆ, “ಈಕೆಯ ಹೊಲಮನೆಗಳನ್ನೂ, ಈಕೆಯು ದೇಶವನ್ನು ಬಿಟ್ಟ ದಿನದಿಂದ ಇಂದಿನವರೆಗೂ ಈಕೆಗೆ ಸಲ್ಲತಕ್ಕ ಹೊಲದ ಆದಾಯವನ್ನೂ ಅವಳಿಗೆ ಕೊಡಿಸು” ಎಂದು ಆಜ್ಞಾಪಿಸಿ, ಅವನನ್ನು ಆಕೆಯ ಜೊತೆಯಲ್ಲಿ ಕಳುಹಿಸಿದನು.
וַיִּשְׁאַ֥ל הַמֶּ֛לֶךְ לָאִשָּׁ֖ה וַתְּסַפֶּר־ל֑וֹ וַיִּתֶּן־לָ֣הּ הַמֶּלֶךְ֩ סָרִ֨יס אֶחָ֜ד לֵאמֹ֗ר הָשֵׁ֤יב אֶת־כָּל־אֲשֶׁר־לָהּ֙ וְאֵת֙ כָּל־תְּבוּאֹ֣ת הַשָּׂדֶ֔ה מִיּ֛וֹם עָזְבָ֥ה אֶת־הָאָ֖רֶץ וְעַד־עָֽתָּה׃ פ
7 ಒಮ್ಮೆ ಎಲೀಷನು ದಮಸ್ಕಕ್ಕೆ ಹೋದನು. ಆಗ ಅರಾಮ್ಯರ ಅರಸನಾದ ಬೆನ್ಹದದನು ಅಸ್ವಸ್ಥನಾಗಿದ್ದನು. “ದೇವರ ಮನುಷ್ಯನು ಬಂದಿದ್ದಾನೆ” ಎಂಬ ವರ್ತಮಾನವನ್ನು ಅರಸನು ಕೇಳಿ,
וַיָּבֹ֤א אֱלִישָׁע֙ דַּמֶּ֔שֶׂק וּבֶן־הֲדַ֥ד מֶֽלֶךְ־אֲרָ֖ם חֹלֶ֑ה וַיֻּגַּד־ל֣וֹ לֵאמֹ֔ר בָּ֛א אִ֥ישׁ הָאֱלֹהִ֖ים עַד־הֵֽנָּה׃
8 ಅರಸನು ಹಜಾಯೇಲನಿಗೆ, “ನೀನು ಕಾಣಿಕೆಯನ್ನು ತೆಗೆದುಕೊಂಡು ದೇವರ ಮನುಷ್ಯನ ಬಳಿಗೆ ಹೋಗಿ ನನಗೆ ವಾಸಿಯಾಗುವುದೋ? ಇಲ್ಲವೋ ಎಂಬುದನ್ನು ಅವನ ಮುಖಾಂತರವಾಗಿ ಯೆಹೋವನ ಸನ್ನಿಧಿಯಲ್ಲಿ ವಿಚಾರಿಸು” ಎಂದು ಆಜ್ಞಾಪಿಸಿದನು.
וַיֹּ֨אמֶר הַמֶּ֜לֶךְ אֶל־חֲזָהאֵ֗ל קַ֤ח בְּיָֽדְךָ֙ מִנְחָ֔ה וְלֵ֕ךְ לִקְרַ֖את אִ֣ישׁ הָאֱלֹהִ֑ים וְדָרַשְׁתָּ֨ אֶת־יְהוָ֤ה מֵֽאוֹתוֹ֙ לֵאמֹ֔ר הַאֶחְיֶ֖ה מֵחֳלִ֥י זֶֽה׃
9 ಹಜಾಯೇಲನು ದಮಸ್ಕದ ಶ್ರೇಷ್ಠ ವಸ್ತುಗಳಲ್ಲಿ ನಲವತ್ತು ಒಂಟೆಗಳು ಹೊರುವಷ್ಟು ಕಾಣಿಕೆಗಳನ್ನು ತೆಗೆದುಕೊಂಡು ಎಲೀಷನ ಬಳಿಗೆ ಹೋಗಿ ಅವನ ಮುಂದೆ ನಿಂತು, “ನಿನ್ನ ಮಗನೂ ಅರಾಮ್ಯರ ಅರಸನೂ ಆದ ಬೆನ್ಹದದನು ತನಗೆ ಸ್ವಸ್ಥವಾಗುವದೋ, ಇಲ್ಲವೋ ಎಂಬುದನ್ನು ವಿಚಾರಿಸುವುದಕ್ಕಾಗಿ ನನ್ನನ್ನು ನಿನ್ನ ಬಳಿ ಕಳುಹಿಸಿದ್ದಾನೆ” ಎಂದು ಹೇಳಿದನು.
וַיֵּ֣לֶךְ חֲזָאֵל֮ לִקְרָאתוֹ֒ וַיִּקַּ֨ח מִנְחָ֤ה בְיָדוֹ֙ וְכָל־ט֣וּב דַּמֶּ֔שֶׂק מַשָּׂ֖א אַרְבָּעִ֣ים גָּמָ֑ל וַיָּבֹא֙ וַיַּעֲמֹ֣ד לְפָנָ֔יו וַיֹּ֗אמֶר בִּנְךָ֨ בֶן־הֲדַ֤ד מֶֽלֶךְ־אֲרָם֙ שְׁלָחַ֤נִי אֵלֶ֙יךָ֙ לֵאמֹ֔ר הַאֶחְיֶ֖ה מֵחֳלִ֥י זֶֽה׃
10 ೧೦ ಆಗ ದೇವರ ಮನುಷ್ಯನಾದ ಎಲೀಷನು ಅವನಿಗೆ, “ಹೇಗೂ ನಿನಗೆ ವಾಸಿಯಾಗುವುದು” ಎಂಬುದಾಗಿ ಬೆನ್ಹದದನಿಗೆ ಹೇಳು; ಆದರೂ, ಅವನು ಸತ್ತೇ ಹೋಗುವನೆಂದು ಯೆಹೋವನು ನನಗೆ ತಿಳಿಸಿದ್ದಾನೆ ಎಂದು ಹೇಳಿದನು.
וַיֹּ֤אמֶר אֵלָיו֙ אֱלִישָׁ֔ע לֵ֥ךְ אֱמָר־לא חָיֹ֣ה תִחְיֶ֑ה וְהִרְאַ֥נִי יְהוָ֖ה כִּֽי־מ֥וֹת יָמֽוּת׃
11 ೧೧ ಸ್ಥಿರ ದೃಷ್ಟಿಯಿಂದ ಹಜಾಯೇಲನನ್ನು ದಿಟ್ಟಿಸಿ ನೋಡಿ ಅಳತೊಡಗಿದನು.
וַיַּעֲמֵ֥ד אֶת־פָּנָ֖יו וַיָּ֣שֶׂם עַד־בֹּ֑שׁ וַיֵּ֖בְךְּ אִ֥ישׁ הָאֱלֹהִֽים׃
12 ೧೨ ಹಜಾಯೇಲನು ಅವನನ್ನು, “ನನ್ನ ಒಡೆಯಾ, ಯಾಕೆ ಅಳುತ್ತಿ?” ಎಂದು ಕೇಳಿದನು. ಅದಕ್ಕೆ ಅವನು, “ನೀನು ಇಸ್ರಾಯೇಲರಿಗೆ ಎಷ್ಟು ಕೇಡು ಮಾಡುವಿ ಎಂಬುದು ನನಗೆ ಪ್ರಕಟವಾಯಿತು. ನೀನು ಅವರ ಕೋಟೆಗಳಿಗೆ ಬೆಂಕಿ ಹೊತ್ತಿಸುವಿ. ಯೌವನಸ್ಥರನ್ನು ಕತ್ತಿಯಿಂದ ಸಂಹರಿಸುವಿ. ಮಕ್ಕಳನ್ನು ಬಂಡೆಗೆ ಅಪ್ಪಳಿಸುವಿ. ಗರ್ಭಿಣಿಯರ ಹೊಟ್ಟೆಯನ್ನು ಸೀಳುವಿ” ಎಂದು ಉತ್ತರಕೊಟ್ಟನು.
וַיֹּ֣אמֶר חֲזָאֵ֔ל מַדּ֖וּעַ אֲדֹנִ֣י בֹכֶ֑ה וַיֹּ֡אמֶר כִּֽי־יָדַ֡עְתִּי אֵ֣ת אֲשֶׁר־תַּעֲשֶׂה֩ לִבְנֵ֨י יִשְׂרָאֵ֜ל רָעָ֗ה מִבְצְרֵיהֶ֞ם תְּשַׁלַּ֤ח בָּאֵשׁ֙ וּבַחֻֽרֵיהֶם֙ בַּחֶ֣רֶב תַּהֲרֹ֔ג וְעֹלְלֵיהֶ֣ם תְּרַטֵּ֔שׁ וְהָרֹתֵיהֶ֖ם תְּבַקֵּֽעַ׃
13 ೧೩ ಹಜಾಯೇಲನು ಎಲೀಷನಿಗೆ, “ನಿನ್ನ ಸೇವಕನಾದ ನಾನು ನಾಯಿಯಂತಿರುತ್ತೇನಷ್ಟೇ; ನನ್ನಿಂದ ಇಂಥಾ ಕ್ರೂರ ಕಾರ್ಯವಾಗುವುದು ಹೇಗೆ?” ಎಂದು ಕೇಳಲು ಅವನು, “ನೀನು ಅರಾಮ್ಯರ ಅರಸನಾಗುವಿಯೆಂದು ಯೆಹೋವನು ನನಗೆ ತಿಳಿಸಿದ್ದಾನೆ” ಎಂದನು.
וַיֹּ֣אמֶר חֲזָהאֵ֔ל כִּ֣י מָ֤ה עַבְדְּךָ֙ הַכֶּ֔לֶב כִּ֣י יַעֲשֶׂ֔ה הַדָּבָ֥ר הַגָּד֖וֹל הַזֶּ֑ה וַיֹּ֣אמֶר אֱלִישָׁ֔ע הִרְאַ֧נִי יְהוָ֛ה אֹתְךָ֖ מֶ֥לֶךְ עַל־אֲרָֽם׃
14 ೧೪ ಹಜಾಯೇಲನು ಎಲೀಷನನ್ನು ಬಿಟ್ಟು ತನ್ನ ಯಜಮಾನನ ಬಳಿಗೆ ಹೋದಾಗ ಅವನು ಇವನನ್ನು, “ಎಲೀಷನು ಏನು ಹೇಳಿದನು?” ಎಂದು ಕೇಳಿದನು. ಅದಕ್ಕೆ ಇವನು, “ನಿನಗೆ ಹೇಗೂ ಸ್ವಸ್ಥವಾಗುವುದು ಎಂದು ಹೇಳಿದನು” ಎಂಬುದಾಗಿ ಉತ್ತರಕೊಟ್ಟನು.
וַיֵּ֣לֶךְ ׀ מֵאֵ֣ת אֱלִישָׁ֗ע וַיָּבֹא֙ אֶל־אֲדֹנָ֔יו וַיֹּ֣אמֶר ל֔וֹ מָֽה־אָמַ֥ר לְךָ֖ אֱלִישָׁ֑ע וַיֹּ֕אמֶר אָ֥מַר לִ֖י חָיֹ֥ה תִחְיֶֽה׃
15 ೧೫ ಮರುದಿನ ಬೆಳಿಗ್ಗೆ ಇವನು ಕಂಬಳಿಯನ್ನು ತೆಗೆದುಕೊಂಡು ನೀರಿನಲ್ಲಿ ತೋಯಿಸಿ, ಅರಸನ ಮುಖದ ಮೇಲೆ ಹಾಕಿದ್ದರಿಂದ ಅವನು ಸತ್ತನು. ಹಜಾಯೇಲನು ಅವನಿಗೆ ಬದಲಾಗಿ ಅರಸನಾದನು.
וַיְהִ֣י מִֽמָּחֳרָ֗ת וַיִּקַּ֤ח הַמַּכְבֵּר֙ וַיִּטְבֹּ֣ל בַּמַּ֔יִם וַיִּפְרֹ֥שׂ עַל־פָּנָ֖יו וַיָּמֹ֑ת וַיִּמְלֹ֥ךְ חֲזָהאֵ֖ל תַּחְתָּֽיו׃ פ
16 ೧೬ ಅಹಾಬನ ಮಗನೂ ಇಸ್ರಾಯೇಲರ ಅರಸನೂ ಆದ ಯೋರಾಮನ ಆಳ್ವಿಕೆಯ ಐದನೆಯ ವರ್ಷದಲ್ಲಿ ಯೆಹೂದ ರಾಜನಾದ ಯೆಹೋಷಾಫಾಟನ ಮಗ ಯೆಹೋರಾಮನು ಆಳತೊಡಗಿದನು.
וּבִשְׁנַ֣ת חָמֵ֗שׁ לְיוֹרָ֤ם בֶּן־אַחְאָב֙ מֶ֣לֶךְ יִשְׂרָאֵ֔ל וִיהוֹשָׁפָ֖ט מֶ֣לֶךְ יְהוּדָ֑ה מָלַ֛ךְ יְהוֹרָ֥ם בֶּן־יְהוֹשָׁפָ֖ט מֶ֥לֶךְ יְהוּדָֽה׃
17 ೧೭ ಇವನು ಪಟ್ಟಕ್ಕೆ ಬಂದಾಗ ಮೂವತ್ತೆರಡು ವರ್ಷದವನಾಗಿದ್ದು ಯೆರೂಸಲೇಮಿನಲ್ಲಿ ಎಂಟು ವರ್ಷ ಆಳಿದನು.
בֶּן־שְׁלֹשִׁ֥ים וּשְׁתַּ֛יִם שָׁנָ֖ה הָיָ֣ה בְמָלְכ֑וֹ וּשְׁמֹנֶ֣ה שנה מָלַ֖ךְ בִּירוּשָׁלִָֽם׃
18 ೧೮ ಇವನು ಅಹಾಬನ ಮಗಳನ್ನು ಮದುವೆಮಾಡಿಕೊಂಡದ್ದರಿಂದ ಅಹಾಬನ ಕುಟುಂಬದವರಾದ ಇಸ್ರಾಯೇಲ್ ರಾಜರ ಮಾರ್ಗವನ್ನು ಅನುಸರಿಸಿ ಯೆಹೋವನ ದೃಷ್ಟಿಯಲ್ಲಿ ದ್ರೋಹಿಯಾದನು.
וַיֵּ֜לֶךְ בְּדֶ֣רֶךְ ׀ מַלְכֵ֣י יִשְׂרָאֵ֗ל כַּאֲשֶׁ֤ר עָשׂוּ֙ בֵּ֣ית אַחְאָ֔ב כִּ֚י בַּת־אַחְאָ֔ב הָֽיְתָה־לּ֖וֹ לְאִשָּׁ֑ה וַיַּ֥עַשׂ הָרַ֖ע בְּעֵינֵ֥י יְהוָֽה׃
19 ೧೯ ಆದರೂ, ಯೆಹೋವನು ಯೆಹೂದ ರಾಜ್ಯವನ್ನು ನಾಶಮಾಡಲಿಲ್ಲ. ನಿನ್ನ ಮತ್ತು ನಿನ್ನ ಸಂತಾನದವರ ದೀಪವನ್ನು ಎಂದೂ ನಂದಿಸುವುದಿಲ್ಲ ಎಂಬುದಾಗಿ ತನ್ನ ಸೇವಕನಾದ ದಾವೀದನಿಗೆ ಮಾಡಿದ ವಾಗ್ದಾನವನ್ನು ಸ್ಮರಿಸಿ ಅದನ್ನು ಉಳಿಸಿದನು.
וְלֹֽא־אָבָ֤ה יְהוָה֙ לְהַשְׁחִ֣ית אֶת־יְהוּדָ֔ה לְמַ֖עַן דָּוִ֣ד עַבְדּ֑וֹ כַּאֲשֶׁ֣ר אָֽמַר־ל֗וֹ לָתֵ֨ת ל֥וֹ נִ֛יר לְבָנָ֖יו כָּל־הַיָּמִֽים׃
20 ೨೦ ಇವನ ಕಾಲದಲ್ಲಿ ಎದೋಮ್ಯರು ಯೆಹೂದ್ಯರಿಗೆ ವಿರುದ್ಧವಾಗಿ ತಿರುಗಿಬಿದ್ದು ಸ್ವತಂತ್ರರಾಗಿ ತಮಗೆ ಒಬ್ಬ ಅರಸನನ್ನು ನೇಮಿಸಿಕೊಂಡರು.
בְּיָמָיו֙ פָּשַׁ֣ע אֱד֔וֹם מִתַּ֖חַת יַד־יְהוּדָ֑ה וַיַּמְלִ֥כוּ עֲלֵיהֶ֖ם מֶֽלֶךְ׃
21 ೨೧ ಆಗ ಯೆಹೋರಾಮನು ತನ್ನ ಎಲ್ಲಾ ರಥಬಲಸಹಿತವಾಗಿ ಯೊರ್ದನ್ ನದಿಯನ್ನು ದಾಟಿ ಚಾಯೀರಿಮಿಗೆ ಹೋದನು. ಎದೋಮ್ಯರು ಬಂದು ಅವನನ್ನು ಸುತ್ತಿಕೊಳ್ಳಲು ಅವನು ರಾತ್ರಿಯಲ್ಲಿ ಎದ್ದು ಅವರನ್ನು ಅವರ ರಥಬಲದ ಅಧಿಪತಿಗಳನ್ನು ಸೋಲಿಸಿ ಪಾರಾದನು. ಅವನ ಸೈನ್ಯದವರು ತಮ್ಮ ತಮ್ಮ ನಿವಾಸಗಳಿಗೆ ಓಡಿಹೋದರು.
וַיַּעֲבֹ֤ר יוֹרָם֙ צָעִ֔ירָה וְכָל־הָרֶ֖כֶב עִמּ֑וֹ וַֽיְהִי־ה֞וּא קָ֣ם לַ֗יְלָה וַיַּכֶּ֨ה אֶת־אֱד֜וֹם הַסֹּבֵ֤יב אֵלָיו֙ וְאֵת֙ שָׂרֵ֣י הָרֶ֔כֶב וַיָּ֥נָס הָעָ֖ם לְאֹהָלָֽיו׃
22 ೨೨ ಹೀಗೆ ಎದೋಮ್ಯರು ಯೆಹೂದ್ಯರಿಗೆ ವಿರೋಧವಾಗಿ ತಿರುಗಿ ಬಿದ್ದರು. ಅವರು ಅಂದಿನಿಂದ ಇಂದಿನವರೆಗೂ ಸ್ವತಂತ್ರರಾಗಿರುತ್ತಾರೆ. ಅದೇ ಕಾಲದಲ್ಲಿ ಲಿಬ್ನದವರು ಸ್ವತಂತ್ರರಾದರು.
וַיִּפְשַׁ֣ע אֱד֗וֹם מִתַּ֙חַת֙ יַד־יְהוּדָ֔ה עַ֖ד הַיּ֣וֹם הַזֶּ֑ה אָ֛ז תִּפְשַׁ֥ע לִבְנָ֖ה בָּעֵ֥ת הַהִֽיא׃
23 ೨೩ ಯೆಹೋರಾಮನ ಉಳಿದ ಚರಿತ್ರೆಯೂ, ಅವನ ಕೃತ್ಯಗಳೂ, ಯೆಹೂದ ರಾಜಕಾಲವೃತ್ತಾಂತ ಎಂಬ ಗ್ರಂಥದಲ್ಲಿ ಬರೆದಿರುತ್ತದೆ.
וְיֶ֛תֶר דִּבְרֵ֥י יוֹרָ֖ם וְכָל־אֲשֶׁ֣ר עָשָׂ֑ה הֲלֽוֹא־הֵ֣ם כְּתוּבִ֗ים עַל־סֵ֛פֶר דִּבְרֵ֥י הַיָּמִ֖ים לְמַלְכֵ֥י יְהוּדָֽה׃
24 ೨೪ ಯೆಹೋರಾಮನು ಪೂರ್ವಿಕರ ಬಳಿಗೆ ಸೇರಲು ಅವನ ಶವವನ್ನು ದಾವೀದ ನಗರದೊಳಗೆ ಕುಟುಂಬ ಸ್ಮಶಾನಭೂಮಿಯಲ್ಲಿ ಸಮಾಧಿಮಾಡಿದರು. ಅವನ ನಂತರ ಅವನ ಮಗನಾದ ಅಹಜ್ಯನು ಅರಸನಾದನು.
וַיִּשְׁכַּ֤ב יוֹרָם֙ עִם־אֲבֹתָ֔יו וַיִּקָּבֵ֥ר עִם־אֲבֹתָ֖יו בְּעִ֣יר דָּוִ֑ד וַיִּמְלֹ֛ךְ אֲחַזְיָ֥הוּ בְנ֖וֹ תַּחְתָּֽיו׃ פ
25 ೨೫ ಅಹಾಬನ ಮಗನೂ, ಇಸ್ರಾಯೇಲರ ಅರಸನೂ ಆದ ಯೋರಾಮನ ಆಳ್ವಿಕೆಯ ಹನ್ನೆರಡನೆಯ ವರ್ಷದಲ್ಲಿ ಯೆಹೂದದ ಅರಸನಾದ ಯೆಹೋರಾಮನ ಮಗ ಅಹಜ್ಯನು ಅರಸನಾದನು.
בִּשְׁנַת֙ שְׁתֵּים־עֶשְׂרֵ֣ה שָׁנָ֔ה לְיוֹרָ֥ם בֶּן־אַחְאָ֖ב מֶ֣לֶךְ יִשְׂרָאֵ֑ל מָלַ֛ךְ אֲחַזְיָ֥הוּ בֶן־יְהוֹרָ֖ם מֶ֥לֶךְ יְהוּדָֽה׃
26 ೨೬ ಅಹಜ್ಯನು ಪಟ್ಟಕ್ಕೆ ಬಂದಾಗ ಇಪ್ಪತ್ತೆರಡು ವರ್ಷದವನಾಗಿದ್ದು, ಯೆರೂಸಲೇಮಿನಲ್ಲಿ ಒಂದು ವರ್ಷ ಆಳಿದನು. ಇಸ್ರಾಯೇಲರ ಅರಸನಾದ ಒಮ್ರಿಯ ಮೊಮ್ಮಗಳಾದ ಅತಲ್ಯ ಎಂಬಾಕೆಯು ಇವನ ತಾಯಿ.
בֶּן־עֶשְׂרִ֨ים וּשְׁתַּ֤יִם שָׁנָה֙ אֲחַזְיָ֣הוּ בְמָלְכ֔וֹ וְשָׁנָ֣ה אַחַ֔ת מָלַ֖ךְ בִּירוּשָׁלִָ֑ם וְשֵׁ֤ם אִמּוֹ֙ עֲתַלְיָ֔הוּ בַּת־עָמְרִ֖י מֶ֥לֶךְ יִשְׂרָאֵֽל׃
27 ೨೭ ಅಹಜ್ಯನಿಗೆ ಅಹಾಬನ ಕುಟುಂಬದವರೊಂದಿಗೆ ಸಂಬಂಧವಿದ್ದುದ್ದರಿಂದ ಅವನು ಅವರ ಮಾರ್ಗದಲ್ಲೆ ನಡೆದು ಯೆಹೋವನ ದೃಷ್ಟಿಯಲ್ಲಿ ದ್ರೋಹಿಯಾದನು.
וַיֵּ֗לֶךְ בְּדֶ֙רֶךְ֙ בֵּ֣ית אַחְאָ֔ב וַיַּ֧עַשׂ הָרַ֛ע בְּעֵינֵ֥י יְהוָ֖ה כְּבֵ֣ית אַחְאָ֑ב כִּ֛י חֲתַ֥ן בֵּית־אַחְאָ֖ב הֽוּא׃
28 ೨೮ ಇದಲ್ಲದೆ ಅಹಜ್ಯನು ಅರಾಮ್ಯರ ಅರಸನಾದ ಹಜಾಯೇಲನೊಡನೆ ಯುದ್ಧಮಾಡುವುದಕ್ಕಾಗಿ ಅಹಾಬನ ಮಗನಾದ ಯೋರಾಮನ ಜೊತೆಯಲ್ಲಿ ರಾಮೋತ್ ಗಿಲ್ಯಾದಿಗೆ ಹೋದನು.
וַיֵּ֜לֶךְ אֶת־יוֹרָ֣ם בֶּן־אַחְאָ֗ב לַמִּלְחָמָ֛ה עִם־חֲזָהאֵ֥ל מֶֽלֶךְ־אֲרָ֖ם בְּרָמֹ֣ת גִּלְעָ֑ד וַיַּכּ֥וּ אֲרַמִּ֖ים אֶת־יוֹרָֽם׃
29 ೨೯ ಅರಾಮ್ಯರು ಯೋರಾಮನನ್ನು ಯುದ್ಧದಲ್ಲಿ ಗಾಯಪಡಿಸಲು ಅವನಿಗೆ ರಾಮದಲ್ಲಿ ಆದ ಗಾಯಗಳನ್ನು ಗುಣಪಡಿಸಿಕೊಳ್ಳುವುದಕ್ಕಾಗಿ ಇಜ್ರೇಲಿಗೆ ಬಂದನು. ಹಜಾಯೇಲನು ಅಸ್ವಸ್ಥನಾಗಿದ್ದುದರಿಂದ ಯೆಹೂದ್ಯರ ಅರಸನಾದ ಯೆಹೋರಾಮನ ಮಗ ಅಹಜ್ಯನು ಅಹಾಬನ ಮಗನಾದ ಯೋರಾಮನನ್ನು ನೋಡುವುದಕ್ಕಾಗಿ ಅಲ್ಲಿಗೆ ಹೋದನು.
וַיָּשָׁב֩ יוֹרָ֨ם הַמֶּ֜לֶךְ לְהִתְרַפֵּ֣א בְיִזְרְעֶ֗אל מִן־הַמַּכִּים֙ אֲשֶׁ֨ר יַכֻּ֤הוּ אֲרַמִּים֙ בָּֽרָמָ֔ה בְּהִלָּ֣חֲמ֔וֹ אֶת־חֲזָהאֵ֖ל מֶ֣לֶךְ אֲרָ֑ם וַאֲחַזְיָ֨הוּ בֶן־יְהוֹרָ֜ם מֶ֣לֶךְ יְהוּדָ֗ה יָרַ֡ד לִרְא֞וֹת אֶת־יוֹרָ֧ם בֶּן־אַחְאָ֛ב בְּיִזְרְעֶ֖אל כִּֽי־חֹלֶ֥ה הֽוּא׃ פ

< ಅರಸುಗಳು - ದ್ವಿತೀಯ ಭಾಗ 8 >